Home / ಬಳ್ಳಾರಿ (page 4)

ಬಳ್ಳಾರಿ

ಅರಸೀಕೆರೆ ಪೊಲೀಸ್ ಠಾಣೆಯಲ್ಲಿ ಸೇವೆಯಲ್ಲಿದ್ದ ಮುಖ್ಯ ಪೇದೆಯ ಸಾವು ಆರೋಗ್ಯ ಇಲಾಖೆಗೆ ದೊಡ್ಡ ತಲೆನೋವು

ಬಳ್ಳಾರಿ: ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಅರಸೀಕೆರೆ ಪೊಲೀಸ್ ಠಾಣೆಯಲ್ಲಿ ಸೇವೆಯಲ್ಲಿದ್ದ ಮುಖ್ಯ ಪೇದೆಯ ಸಾವು ಆರೋಗ್ಯ ಇಲಾಖೆಗೆ ದೊಡ್ಡ ತಲೆನೋವು ತಂದಿದೆ. ಹರಪನಹಳ್ಳಿ ತಾಲೂಕಿನ ಅರಸೀಕೆರೆ ಪೊಲೀಸ್ ಠಾಣೆ ಮುಖ್ಯ ಪೇದೆ ಗೌರಿಹಳ್ಳಿ ರವಿ (44) ಇಂದು ಮುಂಜಾನೆ ತೀವ್ರ ಉಸಿರಾಟದ ತೊಂದರೆಯಿಂದ ಬಳಲಿ ಸಾವನ್ನಪ್ಪಿದ್ದಾರೆ. ಆದರೆ ರವಿ ಅವರಿಗೆ ಕೆಲ ದಿನಗಳ ಹಿಂದೆ ಕೊರೊನಾ ಸೋಂಕು ಕಂಡ ಬಂದ ಹಿನ್ನೆಲೆಯಲ್ಲಿ ಬಳ್ಳಾರಿಯ ಕೋವಿಡ್ ಸೆಂಟರ್ ನಲ್ಲಿ 14 ದಿನಗಳ …

Read More »

ಅರಣ್ಯ ಸಚಿವ ಆನಂದ್ ಸಿಂಗ್ ಕಾರು ಚಾಲಕನಿಗೆ ಕೊರೊನಾ ಸೋಂಕು

ಬಳ್ಳಾರಿ: ಅರಣ್ಯ ಸಚಿವ ಆನಂದ್ ಸಿಂಗ್ ಕಾರು ಚಾಲಕನಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಚಾಲಕನಿಗೆ ಕೊರೊನಾ ದೃಢಪಟ್ಟ ಹಿನ್ನೆಲೆ ಹೊಸಪೇಟೆ ನಗರದ ರಾಣಿಪೇಟೆಯ ಕಚೇರಿಯನ್ನು ಇಂದು ಸೀಲ್‍ಡೌನ್ ಮಾಡಲಾಗಿದೆ. ಸಚಿವ ಆನಂದ್ ಸಿಂಗ್ ಅವರ ಕಾರು ಚಾಲಕರ ಪ್ರಾಥಮಿಕ ಸಂಪರ್ಕದಲ್ಲಿದ್ದವರನ್ನು ಸ್ವಯಂ ಕ್ವಾರಂಟೈನ್‍ನಲ್ಲಿರುವಂತೆ ಸೂಚಿಸಲಾಗಿದೆ. ಸೋಂಕು ತಗುಲಿದ ವಾಹನ ಚಾಲಕನನ್ನು ಹೊಸಪೇಟೆ ನಗರದ ಕೋವಿಡ್ -19 ಆಸ್ಪತ್ರೆಗೆ ದಾಖಲಿಸಲಾಗಿದೆ.ಕಾರು ಚಾಲಕನ ಕುಟುಂಬ ಸದಸ್ಯರನ್ನು ಸಹ ಕ್ವಾರಂಟೈನ್ ಮಾಡಲಾಗಿದೆ. ಅಲ್ಲದೆ ಸಚಿವ …

Read More »

ಬಳ್ಳಾರಿ ಜಿಲ್ಲೆಯಲ್ಲಿಜಿಲ್ಲಾಧಿಕಾರಿ ಕಚೇರಿಗೆ ಸಾರ್ವಜನಿಕ ಪ್ರವೇಶ ಬಂದ್

ಬಳ್ಳಾರಿ: ಗಣಿ ನಾಡು ಬಳ್ಳಾರಿ ಜಿಲ್ಲೆಯಲ್ಲಿ ಕೊರೊನಾ ಮಹಾಮಾರಿ ವ್ಯಾಪಕವಾಗಿ ಹಬ್ಬುತ್ತಿದೆ. ಲಾಕ್‍ಡೌನ್ ಮಾಡಬೇಕೆ, ಬೇಡವೆ ಎಂಬ ಚರ್ಚೆಗಳೂ ನಡೆಯುತ್ತಿವೆ. ಇದರ ಮಧ್ಯೆ ಇದೀಗ ಜಿಲ್ಲಾಧಿಕಾರಿ ಕಚೇರಿಗೆ ಸಾರ್ವಜನಿಕ ಪ್ರವೇಶ ಬಂದ್ ಮಾಡಿ ಬಳ್ಳಾರಿ ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಆದೇಶ ಹೊರಡಿಸಿದ್ದಾರೆ. ತಕ್ಷಣದಿಂದ ಜಾರಿಯಾಗುವಂತೆ ಮುಂದಿನ ಆದೇಶದವರೆಗೆ ಜಿಲ್ಲಾಧಿಕಾರಿ ಕಾರ್ಯಾಲಯ ಸಂಪರ್ಕಿಸುವ ಕಚೇರಿಯನ್ನು ಸಾರ್ವಜನಿಕ ಪ್ರವೇಶದಿಂದ ಹೊರಗಿಡಲಾಗಿದೆ. ಜಿಲ್ಲಾಧಿಕಾರಿ ಕಚೇರಿಯ ಬಹುತೇಕ ಸಿಬ್ಬಂದಿ ಕೋವಿಡ್-19 ನಿರ್ವಹಣೆಯ ಒಂದಿಲ್ಲೊಂದು ತಂಡಗಳಲ್ಲಿ ನೇರವಾಗಿ ಕಾರ್ಯ …

Read More »

ಬಳ್ಳಾರಿ: ಜಿಲ್ಲೆಯಲ್ಲಿ ಒಂದೇ ದಿನ 139 ಮಂದಿಗೆ ಮಹಾಮಾರಿ ಕೊರೊನಾ ಸೋಂಕು..

ಬಳ್ಳಾರಿ: ಜಿಲ್ಲೆಯಲ್ಲಿ ಹೊಸದಾಗಿ 139 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಇದರಿಂದ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 1307ಕ್ಕೆ ಏರಿಕೆಯಾಗಿದೆ.   ಜಿಲ್ಲೆಯಲ್ಲಿ ಇಂದು ಒಂದೇ ದಿನ 139 ಮಂದಿಗೆ ಮಹಾಮಾರಿ ಕೊರೊನಾ ಸೋಂಕು ತಗುಲಿರುವುದು ಪತ್ತೆಯಾಗಿದ್ದು, ಕೇವಲ ಜಿಂದಾಲ್ ಒಂದರಲ್ಲೇ ಈವರೆಗೆ ಅಂದಾಜು 479 ಮಂದಿ ಜಿಂದಾಲ್ ಸಮೂಹ ಸಂಸ್ಥೆಯ ಉಕ್ಕು ಕಾರ್ಖಾನೆ ನೌಕರರಿಗೆ ಕೊರೊನಾ ದೃಢಪಟ್ಟಿದೆ. ಹೀಗಾಗಿ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1307ಕ್ಕೆ ಏರಿಕೆಯಾಗಿದ್ದು, 580 ಮಂದಿ …

Read More »

ಕಂಪ್ಲಿ ಪಟ್ಟಣದ ಪೊಲೀಸ್ ಠಾಣೆಯ 51 ವರ್ಷದ ಸಿಪಿಐಗೆ ಕೊರೊನಾ ಸೋಂಕಿರುವುದು ದೃಢ

ಬಳ್ಳಾರಿ: ಜಿಲ್ಲೆಯ ಕಂಪ್ಲಿ ಪಟ್ಟಣದ ಪೊಲೀಸ್ ಠಾಣೆಯ 51 ವರ್ಷದ ಸಿಪಿಐಗೆ ಕೊರೊನಾ ಸೋಂಕಿರುವುದು ದೃಢಪಟ್ಟಿದೆ. ಸೋಂಕಿತ ಸಿಪಿಐ ಅವರನ್ನು ಕೋವಿಡ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಕಳೆದ ಒಂದು ವಾರದ ಹಿಂದೆ ಕಂಪ್ಲಿ ಪೊಲೀಸ್ ಠಾಣೆ ಪಿಎಸ್‍ಐ ಅವರಿಗೆ ಗಂಡು ಮಗು ಜನಿಸಿತ್ತು. ಹೀಗಾಗಿ ನಗರದ ಹೊರ ವಲಯದ ಸಮುದಾಯ ಭವನದಲ್ಲಿ ಭರ್ಜರಿ ಪಾರ್ಟಿ ಕೊಟ್ಟಿದ್ದರು. ಅದೇ ಪಾರ್ಟಿಯಲ್ಲಿ ಭಾಗಿಯಾಗಿದ್ದ ಕಂಪ್ಲಿ ಪೊಲೀಸ್ ಠಾಣೆಯ ಪೇದೆಗೆ ಕೊರೊನಾ ಪಾಸಿಟಿವ್ ಬಂದಿತ್ತು. …

Read More »

ಕೊರೋನಾಗೆ ಬಲಿಯಾದವರನ್ನು ಅಮಾನವೀಯವಾಗಿ ಅಂತ್ಯಕ್ರಿಯೆ ಮಾಡಿದ ಸಿಬ್ಬಂದಿ ಸಸ್ಪೆಂಡ್..!

ಬೆಂಗಳೂರು-ಕೊರೋನಾ ಸೋಂಕು ದೃಡಪಟ್ಟು ಮೃತಪಟ್ಟವರನ್ನು ಅತ್ಯಂತ ಅಮಾನವೀಯವಾಗಿ ಅಂತ್ಯ ಸಂಸ್ಕಾರ ನಡೆಸಿದ್ದ ಬಳ್ಳಾರಿ ಜಿಲ್ಲೆಯ ಸಿಬ್ಬಂದಿಯನ್ನು ರಾಜ್ಯ ಸರ್ಕಾರ ಸೇವೆಯಿಂದ ಅಮಾನತು ಪಡಿಸಿದೆ. ಸಾಮಾಜಿಕ ಜಾಲತಾಣ ಹಾಗೂ ಸಾರ್ವಜನಿಕ ವಲಯದಲ್ಲಿ ಈ ಬಗ್ಗೆ ಭಾರೀ ಆಕ್ರೋಶ ವ್ಯಕ್ತವಾಗಿ ಸರ್ಕಾರಕ್ಕೆ ಹಿಡಿಶಾಪ ಹಾಕಿದ್ದರು.ಇದರಿಂದ ತಕ್ಷಣವೇ ಎಚ್ಚೆತ್ತುಕೊಂಡಿರುವ ರಾಜ್ಯ ಸರ್ಕಾರ ಅಂತ್ಯಸಂಸ್ಕಾರ ಮಾಡಿದ ಆರೋಗ್ಯ ಇಲಾಖೆಯ ಸಿಬ್ಬಂದಿಯನ್ನು ತಕ್ಷಣದಿಂದಲೇ ಜಾರಿಯಾಗುವಂತೆ ಸೇವೆಯಿಂದ ಅಮಾನತು ಪಡಿಸಿದೆ. ಇ ಸಂಬಂಧ ಆರೋಗ್ಯ ಮತ್ತು ಕುಟುಂಬ ಕಲ್ಯಾಣ …

Read More »

ಜಿಂದಾಲ್ ಕಾರ್ಖಾನೆ ಲಾಕ್‍ಡೌನ್ ಮಾಡೋಕೆ ಆಗಲ್ಲ: ಜಿಲ್ಲಾಧಿಕಾರಿ ನಕುಲ್……

ಬಳ್ಳಾರಿ: ಲಾಕ್‍ಡೌನ್ ಸಡಿಲಿಕೆಯಾದ ಹಿನ್ನೆಲೆ ಜಿಲ್ಲೆಯ ಜಿಂದಾಲ್ ಸಮೂಹ ಸಂಸ್ಥೆಯನ್ನು ಸಂಪೂರ್ಣ ಲಾಕ್‍ಡೌನ್ ಮಾಡಲು ಆಗಲ್ಲವೆಂದು ಜಿಲ್ಲಾಧಿಕಾರಿ ಎಸ್.ಎಸ್. ನಕುಲ್ ತಿಳಿಸಿದ್ದಾರೆ. ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮೈಸೂರಿನ ಜುಬಿಲೆಂಟ್ ಕಾರ್ಖಾನೆ ಸಣ್ಣ ಪ್ರಮಾಣದ ಉತ್ಪಾದನೆ ಹೊಂದಿದೆ. ಅಲ್ಲದೇ ಅದು ಕೇವಲ 1 ಸಾವಿರ ನೌಕರರನ್ನ ಮಾತ್ರ ಹೊಂದಿದೆ. ಹೀಗಾಗಿ, ಕಾರ್ಖಾನೆಯನ್ನು ಲಾಕ್‍ಡೌನ್ ಮಾಡಿ ಕೊರೊನಾ ಸೋಂಕಿತರ ಸಂಖ್ಯೆಯನ್ನು ಸೊನ್ನೆಗೆ ತರಲಾಯಿತು. ಆದರೆ, ಜಿಂದಾಲ್ ಸಮೂಹ ಸಂಸ್ಥೆಯ ಉಕ್ಕು ಕಾರ್ಖಾನೆ ಸುಮಾರು …

Read More »

ಕೋವಿಡ್ ಸೋಂಕು ಮತ್ತು ಬಹು ಅಂಗಾಂಗ ವೈಫಲ್ಯದಿಂದ ಆದೋನಿ ಮೂಲದ ವ್ಯಕ್ತಿಯೊಬ್ಬರು ಸೋಮವಾರ ಬೆಳಗಿನ ಜಾವ ಮೃತಪಟ್ಟರು…

ಬಳ್ಳಾರಿ: ಕೋವಿಡ್ ಸೋಂಕು ಮತ್ತು ಬಹು ಅಂಗಾಂಗ ವೈಫಲ್ಯದಿಂದ ಆದೋನಿ ಮೂಲದ ವ್ಯಕ್ತಿಯೊಬ್ಬರು ಸೋಮವಾರ ಬೆಳಗಿನ ಜಾವ ಮೃತಪಟ್ಟರು. ವಿಮ್ಸ್‌ಗೆ ದಾಖಲಾಗಿದ್ದ ಅವರನ್ನು, ಸೋಂಕು ದೃಢಪಟ್ಟ ಬಳಿಕ ಜೂನ್ 17 ರಂದು‌ ಜಿಲ್ಲಾ ಕೋವಿಡ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಅನಿಯಂತ್ರಿತ ಮಧುಮೇಹ, ಸೋಂಕು ತಗುಲಿದೆ ಎಂಬ ಆಘಾತ ಹಾಗೂ ಅಂಗಾಂಗ ವೈಫ್ಯಲ್ಯಕ್ಕೆ‌ ಒಳಗಾಗಿದ್ದ ಅವರಿಗೆ ವೆಂಟಿಲೇಟರ್ ಸೌಕರ್ಯದೊಂದಿಗೆ‌ ಚಿಕಿತ್ಸೆ ಮುಂದುವರಿಸಲಾಗಿತ್ತು‌. ಆದರೂ ಅವರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟರು ಎಂದು …

Read More »

ಜಿಂದಾಲ್ ಕಾರ್ಖಾನೆಯಲ್ಲಿ ಕೊರೊನಾ ರಣಕೇಕೆ – ಸೋಂಕು ತಡೆಗೆ ಸಪ್ತ ಸೂತ್ರ………

ಬಳ್ಳಾರಿ: ಜಿಂದಾಲ್ ಉಕ್ಕು ಕಾರ್ಖಾನೆ ಈಗ ಕೊರೊನಾ ಕಾರ್ಖಾನೆಯಾಗಿ ಮಾರ್ಪಾಡಾಗ್ತಿದೆ. ಜಿಂದಾಲ್‍ನಲ್ಲಿ ಕೊರೊನಾ ರಣಕೇಕೆ ಮುಂದುವರೆದಿದೆ. ಗ್ರಾಮಗಳಲ್ಲೂ ಪರಿಸ್ಥಿತಿ ಮತ್ತಷ್ಟು ಗಂಭೀರವಾಗುತ್ತಿದ್ದು, ಜಿಂದಾಲ್ ಕಾರ್ಖಾನೆ ಹೋದ್ರೆ 5,000 ರೂ. ದಂಡ ವಿಧಿಸೋದಾಗಿ ಡಂಗೂರ ಸಾರಿ ಎಚ್ಚರಿಸಲಾಗುತ್ತಿದೆ. ಆದರೆ ಜಿಂದಾಲ್ ಅಧಿಕಾರಿಗಳು ಮಾತ್ರ ಕೆಲಸಕ್ಕೆ ಬರೆದಿದ್ರೆ ಚೆನ್ನಾಗಿ ಇರಲ್ಲಾ ಎಂದು ಆವಾಜ್ ಹಾಕುತ್ತಿದ್ದಾರೆ ಎಂಬ ಆರೋಪಗಳು ಕೇಳಿ ಬಂದಿವೆ. ಬುಧವಾರ ಒಂದೇ ದಿನ ಜಿಂದಾಲ್ ವ್ಯಾಪ್ತಿಯಲ್ಲೇ 34 ಹೊಸ ಸೋಂಕಿತರು ಪತ್ತೆಯಾಗಿದ್ದಾರೆ. …

Read More »

ಗಣಿನಾಡಿನಲ್ಲಿ ಕೋವಿಡ್-19 ಗೆದ್ದ ಕೊರೊನಾ ವಾರಿಯರ್ ಸೇರಿ ಮೂವರು ಡಿಸ್ಚಾರ್ಜ್

ಬಳ್ಳಾರಿ: ಗಣಿನಾಡು ಬಳ್ಳಾರಿ ಜಿಲ್ಲೆಯಲ್ಲಿಂದು ಮಹಾಮಾರಿ ಕೊರೊನಾ ಸೋಂಕಿನಿಂದ ಗುಣಮುಖರಾದ ಮೂವರನ್ನು ಜಿಲ್ಲಾಸ್ಪತ್ರೆಯಿಂದ ಬಿಡುಗಡೆಗೊಳಿಸಲಾಯಿತು. ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಎನ್.ಬಸರೆಡ್ಡಿ ಅವರ ಸಮಕ್ಷಮದಲ್ಲಿ ಕೊರೊನಾ ಸೋಂಕಿನಿಂದ ಗುಣಮುಖರಾದ ಆ ಮೂವರನ್ನ ಚಪ್ಪಾಳೆ ತಟ್ಟುವ ಮೂಲಕ ಜಿಲ್ಲಾಸ್ಪತ್ರೆಯ ಸಿಬ್ಬಂದಿ ಆತ್ಮೀಯವಾಗಿ ಬಿಡುಗಡೆಗೊಳಿಸಿದರು.   ಜಿಲ್ಲಾಸ್ಪತ್ರೆಯಿಂದ ಗುಣಮುಖರಾಗಿ ಬಿಡುಗಡೆಯಾಗಿದ್ದು, 34 ವರ್ಷದ ಪುರುಷ, ರೋಗಿ ಸಂಖ್ಯೆ-2308 ಅವರು ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ಸ್ಟಾಫ್ ನರ್ಸ್ ಆಗಿ ಕಾರ್ಯನಿರ್ವಹಿಸುತ್ತಿದ್ದರು. 44 ವರ್ಷದ, ರೋಗಿ ಸಂಖ್ಯೆ-2781 ಮಥುರಾದಿಂದ …

Read More »