ಮೂಡಲಗಿ (ಪ್ರೊ. ಕೆ.ಜಿ.ಕುಂದಣಗಾರ ಪ್ರಧಾನ ವೇದಿಕೆ): ಮೂಡಲಗಿ ಪಟ್ಟಣದ ಆರ್‍ಡಿಎಸ್ ಶಿಕ್ಷಣ ಸಂಸ್ಥೆ ಆವರಣದ ಪ್ರೊ. ಕೆ.ಜಿ. ಕುಂದಣಗಾರ ವೇದಿಕೆಯಲ್ಲಿ ಆರಂಭವಾದ ಬೆಳಗಾವಿ ಜಿಲ್ಲಾ 16ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕನ್ನಡಾಭಿಮಾನಿಗಳ ಸಮ್ಮುಖದಲ್ಲಿ ವಿದ್ಯುಕ್ತವಾಗಿ ಚಾಲನೆ ದೊರೆಯಿತು. ಪ್ರೊ. ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ ಪ್ರೊ. ಚಂದ್ರಶೇಖರ ಅಕ್ಕಿ ಮಾತನಾಡಿ, ಯಾವುದೇ ಒಂದು ಭಾಷೆಯ ಅಳಿವು-ಉಳಿವಿನ ಮೂಲ ಸಮಸ್ಯೆ ಶಿಕ್ಷಣ ಮಾಧ್ಯಮದಲ್ಲಿಯೇ ಇರುತ್ತದೆ. ಇಂಗ್ಲಿಷ್ ಭಾಷೆಗೆ ಈಗಾಗಲೇ ಜಗತ್ತಿನ ಬಹಳಷ್ಟು ಭಾಷೆಗಳು …
Read More »ಮೂಡಲಗಿ: ಅಕ್ಷರ ಜಾತ್ರೆಗೆ ಭರದ ಸಿದ್ಧತೆ
ಮೂಡಲಗಿ: ಇಲ್ಲಿನ ಆರ್‌ಡಿಎಸ್ ಸಂಸ್ಥೆಯ ಮೈದಾನದಲ್ಲಿ ನ. 23 ಮತ್ತು 24ರಂದು ಜರುಗಲಿರುವ ಬೆಳಗಾವಿ ಜಿಲ್ಲಾ 16ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸಿದ್ದತೆ ಭರದಿಂದ ಸಾಗಿದೆ. ಸಮ್ಮೇಳನಾಧ್ಯಕ್ಷರ ನೇತೃತ್ವದಲ್ಲಿ ಭುವನೇಶ್ವರಿಯ ಮೆರವಣಿಗೆಯು ಸ್ಥಳೀಯ ಸರ್ಕಾರಿ ಪ್ರಾಥಮಿಕ ಶಾಲೆಯಿಂದ ಕಲ್ಮೇಶ್ವರ ವೃತ್ತದ ಮೂಲಕ, ಆರ್‌ಡಿಎಸ್ ಕಾಲೇಜು ವರೆಗಿನ ರಸ್ತೆ ದುರಸ್ತಿ ಕಾಮಗಾರಿ ಭರದಿಂದ ಸಾಗಿದೆ. ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಸಲುವಾಗಿ ಪುರಸಭೆಯ ವಿವಿಧ ಅನುದಾನದ …
Read More »ಮಕ್ಕಳಿಗೆ ‘ರಾಷ್ಟ್ರಪ್ರೇಮ’ದ ಪಾಠ
ಮೂಡಲಗಿ: ತಾಲ್ಲೂಕಿನ ಯಾದವಾಡದ ಸುಧೀಂದ್ರ ಇಟ್ನಾಳ ಭಾರತೀಯ ಸೇನೆಯಲ್ಲಿ 34 ವರ್ಷ ಸೇವೆ ಸಲ್ಲಿಸಿ, ಬ್ರಿಗೇಡಿಯರ್ ಆಗಿ ನಿವೃತ್ತಿ ಹೊಂದಿದ್ದಾರೆ. ಆದರೆ, ನಿವೃತ್ತಿ ನಂತರ ಮನೆಯಲ್ಲಿ ಕೈಕಟ್ಟಿ ಕುಳಿತಿಲ್ಲ. ಬದಲಿಗೆ ಸ್ವಯಂ ಪ್ರೇರಣೆಯಿಂದ ಶಾಲೆ-ಕಾಲೇಜುಗಳಿಗೆ ಹೋಗಿ, ಶಿಕ್ಷಕರು ಹಾಗೂ ವಿದ್ಯಾರ್ಥಿಗಳಿಗೆ ಪಾಠ ಮಾಡುತ್ತಿದ್ದಾರೆ. ರಾಷ್ಟ್ರಾಭಿಮಾನ ಮತ್ತು ಬದುಕಿನಲ್ಲಿ ಶಿಸ್ತು ಮೂಡಿಸುವ ಕಾಯಕದಲ್ಲಿ ನಿರತರಾಗಿದ್ದಾರೆ. ಇದಕ್ಕಾಗಿ ಯಾವುದೇ ಶುಲ್ಕ ಪಡೆಯುತ್ತಿಲ್ಲ. ನಿಸ್ವಾರ್ಥ ಮನೋಭಾವದಿಂದ ಉಚಿತವಾಗಿ ಇಂಥದ್ದೊಂದು ಸೇವೆಯಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಕರ್ನಾಟಕ ಮಾತ್ರವಲ್ಲದೆ; …
Read More »ಭಿವೃದ್ಧಿ ಕಾರ್ಯಗಳಲ್ಲಿ ಎಂದಿಗೂ ಪಕ್ಷಪಾತ ಮಾಡಬೇಡಿ:ಬಾಲಚಂದ್ರ ಜಾರಕಿಹೊಳಿ
ಮೂಡಲಗಿ: ಅಭಿವೃದ್ಧಿ ಕಾರ್ಯಗಳಲ್ಲಿ ಎಂದಿಗೂ ಪಕ್ಷಪಾತ ಮಾಡಬೇಡಿ. ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಪಟ್ಟಣದ ಸಮಗ್ರ ಅಭಿವೃದ್ಧಿಗೆ ಶ್ರಮಿಸಿ ಮಾದರಿಯನ್ನಾಗಿ ಮಾಡುವ ಸಂಕಲ್ಪ ಮಾಡುವಂತೆ ಅರಭಾವಿ ಶಾಸಕ ಮತ್ತು ಬೆಮ್ಯುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಪಪಂ ನೂತನ ಆಧ್ಯಕ್ಷ- ಉಪಾಧ್ಯಕ್ಷರಿಗೆ ಕಿವಿ ಮಾತು ಹೇಳಿದರು. ಕಲ್ಲೊಳ್ಳಿ ಪಟ್ಟಣ ಪಂಚಾಯತಿಗೆ ನೂತನವಾಗಿ ಆಯ್ಕೆಗೊಂಡ ಅಧ್ಯಕ್ಷ- ಉಪಾಧ್ಯಕ್ಷರನ್ನು ಅಭಿನಂದಿಸಿ ಮಾತನಾಡಿದ ಅವರು, ನಾಗರಿಕರಿಗೆ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಿಕೊಡುವ ನಿಟ್ಟಿನಲ್ಲಿ ಪಂಚಾಯತಿ ಕಮೀಟಿಯವರು ಶ್ರಮಿಸುವಂತೆ …
Read More »ತುಂಗಭದ್ರೆಯ ಚೆಲುವಿಗೆ ಮನಸೋತ ಪ್ರವಾಸಿಗರು
ಮುನಿರಾಬಾದ್: ಇಲ್ಲಿನ ತುಂಗಭದ್ರಾ ಜಲಾಶಯವು ನಿರಂತರ ಮಳೆಯಿಂದ ಭರ್ತಿಯಾಗಿದ್ದು, ಹೆಚ್ಚುವರಿ ನೀರು ನದಿಗೆ ಹರಿಸಲಾಗುತ್ತಿದೆ. ಜಲಾಶಯದಿಂದ ಧುಮ್ಮಿಕ್ಕುವ ನೀರು ಮತ್ತು ನೊರೆಯ ದೃಶ್ಯವನ್ನು ಕಣ್ತುಂಬಿಕೊಳ್ಳಲು ಸಾವಿರಾರು ಪ್ರವಾಸಿಗರು ಬರುತ್ತಿದ್ದಾರೆ. ಜಲಾಶಯ ಹಿನ್ನೀರಿನ ಲೇಕ್ ವ್ಯೂ ಪ್ರವಾಸಿ ಮಂದಿರದ ಬಳಿ ಅತ್ಯಂತ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಕಂಡುಬಂದರು. ತೆರೆ ಬರುವ ವೇಳೆ ಮತ್ತು ಗಾಳಿಯ ಪರಿಣಾಮ ಸಿಡಿಯುವ ನೀರ ಸಿಂಚನಕ್ಕೆ ಮೈವೊಡ್ಡಿ ಮಕ್ಕಳು ಸಮೇತ ಪ್ರವಾಸಿಗರು ಪುಳಕಗೊಂಡರು. ಅಲ್ಲಿನ ಸಿಬ್ಬಂದಿಯ ಎಚ್ಚರಿಕೆ …
Read More »ಮೂಡಲಗಿ | ಚಿರತೆ ಸುದ್ದಿ: ಆತಂಕ ಸೃಷ್ಟಿ
ಮೂಡಲಗಿ : ‘ತಾಲ್ಲೂಕಿನ ನಾಗನೂರ ಗ್ರಾಮದ ಅರಣ್ಯಸಿದ್ದೇಶ್ವರ ತೋಟದ ಸಿದ್ದಪ್ಪ ಜಾವಲಿ ಎಂಬುವವರ ಗದ್ದೆಯಲ್ಲಿ ಮಂಗಳವಾರ ಮಧ್ಯಾಹ್ನ ಚಿರತೆ ಪ್ರತ್ಯಕ್ಷವಾಗಿದೆ’ ಎಂದು ಸಾಮಾಜಿಕ ಜಾಲತಾಣದಲ್ಲಿ ವಿಡಿಯೊ ವೈರಲ್ ಆದ ಹಿನ್ನೆಲೆ ಸ್ಥಳಕ್ಕೆ ಧಾವಿಸಿದ ಅರಣ್ಯ ಅಧಿಕಾರಿ ಸಂಜು ಸವಸುದ್ದಿ ಪರಿಶೀಲನೆ ನಡೆಸಿ ಅದು ಚಿರತೆ ಅಲ್ಲ ಕಾಡು ಬೆಕ್ಕು ಎಂದು ತಿಳಿಸಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿದ ತಹಶೀಲ್ದಾರ್ ಮಹಾದೇವ ಸನ್ನಮುರಿ, ಸಾರ್ವಜನಿಕರ ಹಿತ ದೃಷ್ಟಿಯಿಂದ ರಾತ್ರಿ ವೇಳೆ ಒಬ್ಬೊಬ್ಬರಾಗಿ ತಿರುಗಾಡದಂತೆ ಹಾಗೂ …
Read More »ಶ್ರೀ ಕ್ಷೇತ್ರ ಕೋಟುರ ಪರಮಾನಂದ ದೇವಸ್ಥಾನದ ನವಗ್ರಹ ಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ಯುವ ನಾಯಕ ಸಂತೋಷ ಜಾರಕಿಹೊಳಿ ಅವರು ಭಾಗಿ
ಶ್ರೀ ಕ್ಷೇತ್ರ ಕೋಟುರ ಪರಮಾನಂದ ದೇವಸ್ಥಾನದ ನವಗ್ರಹ ಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ಯುವ ನಾಯಕ ಸಂತೋಷ ಜಾರಕಿಹೊಳಿ ಅವರು ಭಾಗಿ. ಯರಗಟ್ಟಿ : ಕೋಟೂರು ಶಿವಾಪೂರ ಗ್ರಾಮದಲ್ಲಿ ಶ್ರೀ ಕ್ಷೇತ್ರ ಕೋಟುರ ಪರಮಾನಂದ ದೇವಸ್ಥಾನದ ನವಗ್ರಹ ಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ಯುವ ನಾಯಕ ಸಂತೋಷ ಜಾರಕಿಹೊಳಿ ಅವರು ಭಾಗವಹಿಸಿದ್ದರು. ಸೋಮವಾರ ದಿನಾಂಕ 19-02-2024 ರಂದು ಜರುಗಿದ ಕಾರ್ಯಕ್ರಮದಲ್ಲಿ ಯುವ ನಾಯಕ ಹಾಗೂ ಸೌಭಾಗ್ಯ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ …
Read More »ಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ: ಬಾಲಚಂದ್ರ ಜಾರಕಿಹೊಳಿ
ಮೂಡಲಗಿ: ಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ ಬರಲು ಕಾರ್ಯಕರ್ತರು ಪ್ರತಿ ಮತಗಟ್ಟೆಗಳಲ್ಲಿ ಸರ್ಕಾರದ ಯೋಜನೆಗಳನ್ನು ಮತದಾರರಿಗೆ ಮನವರಿಕೆ ಮಾಡಿಕೊಡುವ ಕಾರ್ಯವನ್ನು ಅತಿ ಶಿಸ್ತಿನಿಂದ ಮಾಡುವಂತೆ ಶಾಸಕ ಮತ್ತು ಕ.ಹಾ.ಮ. ನಿರ್ದೇಶಕ ಬಾಲಚಂದ್ರ ಜಾರಕಿಹೊಳಿ ಅವರು ಕಾರ್ಯಕರ್ತರಿಗೆ ಕರೆ ನೀಡಿದರು. ಶನಿವಾರದಂದು ತಾಲೂಕಿನ ತುಕ್ಕಾನಟ್ಟಿ ಗ್ರಾಮದಲ್ಲಿ ಬಿಜೆಪಿ ಅರಭಾವಿ ಮಂಡಲ ಏರ್ಪಡಿಸಿದ್ದ “ಗಾಂವ-ಚಲೋ ಅಭಿಯಾನ”ದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಕೇಂದ್ರ ಸರ್ಕಾರದ ಜನರಿಗೆ ಹತ್ತಿರವಾಗುವ ಯೋಜನೆಗಳನ್ನು ಜನರ ಮನೆ …
Read More »ವೃತ್ತಿ ಧರ್ಮ ಕಾಯ್ದುಕೊಂಡರೆ ನೆಮ್ಮದಿ ಪ್ರಾಪ್ತಿ: ಗಜಾನನ ಮನ್ನಿಕೇರಿ
ಮೂಡಲಗಿ: ‘ಶಿಕ್ಷಕ ವೃತ್ತಿ ಪವಿತ್ರವಾದದ್ದು, ಶ್ರದ್ಧೆ, ಪ್ರಮಾಣಿಕತೆಯಿಂದ ವೃತ್ತಿ ಧರ್ಮ ಕಾಯ್ದುಕೊಂಡು ಕರ್ತವ್ಯ ನಿರ್ವಹಿಸಿದಾಗ ಮಾತ್ರ ಸಾರ್ವಜನಿಕ ಬದುಕಿನಲ್ಲಿ ನೆಮ್ಮದಿಯ ವಾತಾವರಣ ದೊರೆಯುತ್ತದೆ’ ಎಂದು ಧಾರವಾಡದ ಹೆಚ್ಚುವರಿ ಆಯುಕ್ತರ ಕಚೇರಿಯ ನಿವೃತ್ತ ಸಹಾಯಕ ನಿರ್ದೇಶಕ ಗಜಾನನ ಮನ್ನಿಕೇರಿ ಹೇಳಿದರು. ಸಮೀಪದ ತಿಗಡಿಯ ಸರ್ಕಾರಿ ಪ್ರೌಢ ಶಾಲೆಯಲ್ಲಿ ಹಮ್ಮಿಕೊಂಡ ಸುಣಧೋಳಿ ಸಮೂಹ ವ್ಯಾಪ್ತಿಯ ಶಿಕ್ಷಕರ ವತಿಯಿಂದ ಹಮ್ಮಿಕೊಂಡಿದ್ದ ಸತ್ಕಾರ ಹಾಗೂ ಅಭಿನಂದನಾ ಸಮಾರಂಭದಲ್ಲಿ ಸತ್ಕಾರ ಸ್ವೀಕರಿಸಿ ಮಾತನಾಡಿದರು. ಮಕ್ಕಳಲ್ಲಿ ಆದರ್ಶಪ್ರಾಯವಾದ ನೈತಿಕ …
Read More »ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ
ಮೂಡಲಗಿ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಮೂಡಲಗಿ ತಾಲೂಕಿನ ತೋಕರಟ್ಟಿ ಗ್ರಾಮದಲ್ಲಿ ಶ್ರೀ ಹನುಮಾನ್ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ …
Read More »