ಬೆಳಗಾವಿ : ಈ ಬಾರಿ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಲಿಂಗಾಯತ ಪಂಚಮಸಾಲಿ ಸಮಾಜ ಸಂಪೂರ್ಣ ಬೆಂಬಲ ನೀಡಿದ್ದು. ನಮ್ಮ ಸಮಾಜಕ್ಕೆ ಒಂದು ಉಪಮುಖ್ಯಮಂತ್ರಿ ಸ್ಥಾನ ನೀಡುವಂತೆ ಮಾಜಿ ಸಚಿವ ಶಶಿಕಾಂತ ನಾಯಿಕ ಕಾಂಗ್ರೆಸ್ ನಾಯಕರಿಗೆ ಒತ್ತಾಯಿಸಿದರು. ಇಂದು ನಗರದಲ್ಲಿ ಮಾಧ್ಯಮಗೋಷ್ಟಿ ನಡೆಸಿ ಮಾತನಾಡಿದರು. 2023ರ ಚುನಾವಣೆಯಲ್ಲಿ ಕರ್ನಾಟಕ ಜನ ಬದಲಾವಣೆ ಬಯಸಿದ ಹಿನ್ನೆಲೆ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಬಹುಮತದಿಂದ ಸರ್ಕಾರ ರಚಿಸುತ್ತಿದೆ. ಇದರಿಂದ ನಮಗೂ ಬಹಳಷ್ಟು ಖುಷಿಯಾಗಿದೆ. ಬಿಜೆಪಿಯಲ್ಲಿ ಬಹಳ …
Read More »ಮುಧೋಳದಲ್ಲಿ ದಾಖಲೆ ಇಲ್ಲದ 5 ಕೋಟಿ ಹಣ ಜಪ್ತಿ
ಬಾಗಲಕೋಟೆ : ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಅಕ್ರಮ ತಡೆಗೆ ಚುನಾವಣೆ ಆಯೋಗದಿಂದ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದ್ದರೂ ಹಲವೆಡೆ ಇದುವರೆಗೂ ನೂರಾರು ಕೋಟಿ ಹಣ ಜಪ್ತಿ ಮಾಡಿಕೊಳ್ಳಲಾಗಿದೆ. ಅಂತೆಯೇ ಜಿಲ್ಲೆಯ ಮುಧೋಳ ಮತಕ್ಷೇತ್ರದ ಲಕ್ಷಾನಟ್ಟಿ ಚೆಕ್ಪೋಸ್ಟ್ ಬಳಿ ಅಧಿಕಾರಿಗಳು ಶನಿವಾರ ವಾಹನದಲ್ಲಿ ಸಾಗಿಸುತ್ತಿದ್ದ ದಾಖಲೆ ಇಲ್ಲದ 5 ಕೋಟಿ ರೂಪಾಯಿ ನಗದು ಜಪ್ತಿ ಮಾಡಿದ್ದಾರೆ. ಹುಬ್ಬಳ್ಳಿಯಿಂದ ಮುಧೋಳಕ್ಕೆ ತೆರಳುತ್ತಿದ್ದ ವಾಹನವನ್ನು ಎಸ್ಎಸ್ಟಿ ತಂಡ ಪರಿಶೀಲನೆ ನಡೆಸಿದಾಗ ವಾಹನದಲ್ಲಿದ್ದ ವ್ಯಕ್ತಿಯು ಹಣವು ಯುನಿಯನ್ …
Read More »ಅರಭಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಶಾಸಕ ಬಾಲಚಂದ್ರ ಜಾರಕಿಹೊಳಿ ನಾಮಪತ್ರ ಸಲ್ಲಿಕೆ
ಮೂಡಲಗಿ: ಅರಭಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಇಂದು ಚುನಾವಣಾಧಿಕಾರಿಗಳಿಗೆ ತಮ್ಮ ನಾಮಪತ್ರ ಸಲ್ಲಿಸಿದರು. ಬುಧವಾರದಂದು ಇಲ್ಲಿನ ತಹಶೀಲ್ದಾರ ಕಛೇರಿಗೆ ತೆರಳಿದ ಬಾಲಚಂದ್ರ ಜಾರಕಿಹೊಳಿ ಅವರು ಚುನಾವಣಾಧಿಕಾರಿಯಾಗಿರುವ ಉಪವಿಭಾಗಾಧಿಕಾರಿ ಪ್ರಭಾವತಿ ಫಕೀರಪೂರ ಅವರಿಗೆ ಬಿಜೆಪಿ ಅಧಿಕೃತ ಅಭ್ಯರ್ಥಿಯಾಗಿ ಉಮೇದುವಾರಿಕೆ ಸಲ್ಲಿಸಿದರು. ಬುಧವಾರ ಮುಂಜಾನೆ 11 ಗಂಟೆಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಅತ್ಯಂತ ಸರಳವಾಗಿ ತಮ್ಮ ನಾಲ್ವರು ಸೂಚಕರೊಂದಿಗೆ ಒಂದು ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ …
Read More »‘ಮೋದಿ ಬ್ಯಾನರ್’ ಹಾಕಿದವರೇ ಕಿತ್ತೆಸೆಯುತ್ತಿದ್ದಾರೆ, ಇದಲ್ಲವೇ ‘ಅಚ್ಛೆ ದಿನ್’: ‘ಟ್ವಿಟ್’ನಲ್ಲಿ ‘ಕಾಂಗ್ರೆಸ್’ ಕುಟುಕು
ಬೆಂಗಳೂರು: ಮೋದಿ ಬ್ಯಾನರ್ ( Modi Banner ) ಹಾಕಿದವರೇ ಮೋದಿಯನ್ನು ಕಿತ್ತೆಸೆಯುತ್ತಿದ್ದಾರೆ. ಇದಲ್ಲವೇ ಅಚ್ಛೆ ದಿನ್, ಇದಲ್ಲವೇ ಅಮೃತಕಾಲ್ ಬಿಜೆಪಿ ? ಮೋದಿ ಮುಖ ನೋಡಿ ಮತ ಕೊಡಿ ಎನ್ನುವ ಕಾಲ ಹೋಗಿದೆ, ಬಿಜೆಪಿ ಕಾರ್ಯಕರ್ತರಿಗೆ ( BJP Worker ) ಈಗ ಮೋದಿಯೇ ಅಪಥ್ಯ! ಕಾಲಚಕ್ರ ತಿರುಗುತ್ತದೆ, ತಲೆ ಮೇಲೆ ಬಿದ್ದ ನೀರು ಕಾಲಬುಡಕ್ಕೆ ಬರಲೇಬೇಕು ಎಂಬುದಾಗಿ ಕರ್ನಾಟಕ ಕಾಂಗ್ರೆಸ್ ( Karnataka Congress ), ಬಿಜೆಪಿಯನ್ನು …
Read More »ಕೈತಪ್ಪಿದ ಟಿಕೆಟ್, ಕಾರ್ಯಕರ್ತರೊಂದಿಗೆ ಚರ್ಚಿಸಿ ನಿರ್ಧಾರ: ಸರನೋಬತ್
ಖಾನಾಪುರ: ‘ಬಿಜೆಪಿ ಟಿಕೆಟ್ ಸಿಗುತ್ತದೆ ಎಂಬ ಭರವಸೆಯಲ್ಲಿದ್ದ ನನಗೆ ತುಂಬ ಆಘಾತವಾಗಿದೆ. ನನ್ನೊಂದಿಗೆ ಇಷ್ಟು ದಿನ ಇದ್ದ ಕಾರ್ಯಕರ್ತರೊಂದಿಗೆ ಚರ್ಚಿಸಿದ ಬಳಿಕ ಮುಂದಿನ ಹೆಜ್ಜೆ ಇಡುತ್ತೇನೆ’ ಎಂದು ಬಿಜೆಪಿ ನಾಯಕಿ ಡಾ.ಸೋನಾಲಿ ಸರನೋಬತ್ ಹೇಳಿದರು. ಪಟ್ಟಣದಲ್ಲಿ ಬುಧವಾರ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ‘ಕಳೆದ ಹಲವು ತಿಂಗಳಿಂದ ಖಾನಾಪುರ ಕ್ಷೇತ್ರದ ಉದ್ದಗಲ ಸಂಚರಿಸಿ ಪಕ್ಷ ಸಂಘಟನೆಯಲ್ಲಿ ತೊಡಗಿದ್ದ ನನಗೆ ಇಲ್ಲಿಯ ಜನರೊಂದಿಗೆ ಭಾವನಾತ್ಮಕ ಸಂಬಂಧವಿದೆ. ಇಲ್ಲಿಯ ಕಾಂಗ್ರೆಸ್ ಅಭ್ಯರ್ಥಿ …
Read More »ಬಾಲಚಂದ್ರ ಜಾರಕಿಹೊಳಿ ಅವರನ್ನು ಲಕ್ಷ ಮತಗಳಿಂದ ಆಯ್ಕೆ ಮಾಡಿ.-ಸರ್ವೋತ್ತಮ ಜಾರಕಿಹೊಳಿ
ಗೋಕಾಕ: ಕಳೆದ ಎರಡು ದಶಕದಿಂದ ಅರಭಾವಿ ಕ್ಷೇತ್ರದ ಶಾಸಕರಾಗಿ, ಆ ಭಾಗದ ಜನರ ಆಶೋತ್ತರಗಳಿಗೆ ಸದಾ ಸ್ಪಂದಿಸುತ್ತಿರುವ ಬಾಲಚಂದ್ರ ಜಾರಕಿಹೊಳಿ ಅವರನ್ನು ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಗೆಲ್ಲಿಸಿಕೊಡುವ ಸಂಕಲ್ಪವನ್ನು ಕಾರ್ಯಕರ್ತರು ಮಾಡುವಂತೆ ಯುವ ಧುರೀಣ ಸರ್ವೋತ್ತಮ ಜಾರಕಿಹೊಳಿ ಹೇಳಿದರು. ಅವರು, ಅರಭಾವಿ ಕ್ಷೇತ್ರದ ಹಳ್ಳೂರ, ಮೆಳವಂಕಿ, ಕೌಜಲಗಿ ಮತ್ತು ವಡೇರಹಟ್ಟಿ ಜಿಲ್ಲಾ ಪಂಚಾಯತ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಜರುಗಿದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿ ಬಾಲಚಂದ್ರ ಜಾರಕಿಹೊಳಿ ಅವರ ಜನಪರ …
Read More »ವಿರೋಧಿಗಳ ಸುಳ್ಳು ವದಂತಿಗಳನ್ನು ನಂಬಬೇಡಿ, ಅತ್ಯಧಿಕ ಮತಗಳ “ಲೀಡ್” ನೀಡಿ ಆಯ್ಕೆ ಮಾಡಿ : ಶಾಸಕ ಬಾಲಚಂದ್ರ ಜಾರಕಿಹೊಳಿ
ಕಳೆದ ಸೋಮವಾರದಂದು ನಡೆದ ತುಕ್ಕಾನಟ್ಟಿ ಜಿಪಂ ವ್ಯಾಪ್ತಿಯ ಪ್ರಮುಖರ ಸಭೆಯಲ್ಲಿ ಮಾತನಾಡಿದ ಬಾಲಚಂದ್ರ ಜಾರಕಿಹೊಳಿ ತುಕ್ಕಾನಟ್ಟಿ(ತಾ:ಮೂಡಲಗಿ) : ಘಟಪ್ರಭಾ ಎಡದಂಡೆ ಮತ್ತು ಬಲದಂಡೆ ಕಾಲುವೆಗಳ ಕೊನೆಯ ಭಾಗದ ರೈತರಿಗೆ ಕಾಲುವೆಗಳಿಂದ ಸಮರ್ಪಕವಾಗಿ ನೀರನ್ನು ಪೂರೈಕೆ ಮಾಡಲಾಗುತ್ತಿದೆ. ಬೇಸಿಗೆಯನ್ನು ಗಮನದಲ್ಲಿಟ್ಟುಕೊಂಡು ಜನರಿಗೆ ಕುಡಿಯುವ ನೀರಿನ ಸಮಸ್ಯೆಗಳು ತಲೆದೋರದಂತೆ ಕೆಲಸ ಮಾಡುತ್ತಿರುವುದಾಗಿ ಅರಭಾವಿ ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಕಳೆದ ದಿ. 27 ರಂದು ಮೂಡಲಗಿ ತಾಲೂಕಿನ ತುಕ್ಕಾನಟ್ಟಿ ಗ್ರಾಮದ …
Read More »ವಿದ್ಯಾರ್ಥಿಗಳಿಂದ ತಾಯಂದಿರ ಪಾದಪೂಜೆ-
ಮೂಡಲಗಿ: ವಿದ್ಯಾರ್ಥಿಗಳು ಪಠ್ಯಕ್ರಮದ ಅಭ್ಯಾಸದೊಂದಿಗೆ ಉತ್ತಮ ಸಂಸ್ಕೃತಿ, ಸಂಸ್ಕಾರ ಬೆಳೆಸಿಕೊಂಡು ಭವಿಷ್ಯ ಕಟ್ಟಿಕೊಳ್ಳಬೇಕು. ಅಕ್ಷರದೊಂದಿಗೆ ಉತ್ತಮ ಸಂಸ್ಕಾರವೂ ದೊರೆಯಬೇಕು ಎಂದು ಮುಖ್ಯಾಧ್ಯಾಪಕ ಎ.ವಿ. ಗಿರೆಣ್ಣವರ ಹೇಳಿದರು. ತುಕ್ಕಾನಟ್ಟಿ ಸರ್ಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶುಕ್ರವಾರ ನಡೆದ ತಾಯಂದಿರ ಸಭೆ ಹಾಗೂ ತಾಯಂದಿರ ಪಾದ ಪೂಜೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಪಾಲಕರು ಮಕ್ಕಳನ್ನೇ ಆಸ್ತಿಯನ್ನಾಗಿ ಮಾಡಿಕೊಂಡು ಅವರಿಗೆ ಉತ್ತಮ ಶಿಕ್ಷಣ ಕೊಡಿಸಬೇಕು. ಮಕ್ಕಳ ಶಿಕ್ಷಣಕ್ಕೆ ಬಡತನ ಅಡ್ಡಿಯಾಗಬಾರದು ಎಂದು ಸಲಹೆ ನೀಡಿದರು. …
Read More »ಸಾರ್ವತ್ರಿಕ ಚುನಾವಣೆಗೆ ಸಜ್ಜಾಗಿ: ಕಾರ್ಯಕರ್ತರಿಗೆ ಬಾಲಚಂದ್ರ ಜಾರಕಿಹೊಳಿ ಕರೆ
ಮೂಡಲಗಿ : ಎರಡು ತಿಂಗಳೊಳಗೆ ಸಾರ್ವತ್ರಿಕ ಚುನಾವಣೆ ನಡೆಯಲಿದ್ದು, ಈಗಿನಿಂದಲೇ ಚುನಾವಣೆಗೆ ಬೇಕಾದ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು. ಪ್ರತಿ ಮತಗಟ್ಟೆಗಳ ಮೂಲಕ ಕಾರ್ಯಕರ್ತರ ಪಡೆಯನ್ನು ಸಂಘಟಿಸಿ ಅರಭಾವಿ ಕ್ಷೇತ್ರದಲ್ಲಿ ಮತ್ತೊಮ್ಮೆ ಕಮಲ ಅರಳಲು ಕಾರ್ಯಕರ್ತರು ಶ್ರಮಿಸುವಂತೆ ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಶುಕ್ರವಾರ ಸಂಜೆ ತಾಲೂಕಿನ ಸುಣಧೋಳಿ ಗ್ರಾಮದ ಜಡಿಸಿದ್ಧೇಶ್ವರ ದೇವಸ್ಥಾನದ ಆವರಣದಲ್ಲಿ ಜರುಗಿದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಬಿಜೆಪಿ ಅಭ್ಯರ್ಥಿಯಾಗಿ ಅರಭಾವಿ ಕ್ಷೇತ್ರದಿಂದಲೇ ಕಣಕ್ಕಿಳಿಯುವುದಾಗಿ …
Read More »ಜಾರಕಿಹೊಳಿ ಸಾಮ್ರಾಜ್ಯ ನಿರ್ಮಿಸುವಲ್ಲಿ ಕಲಾಲ ಸಮಾಜದ ಕೊಡುಗೆ ಅಪಾರ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ
ಮೂಡಲಗಿ : ಕಳೆದ ಐದು ದಶಕಗಳ ಹಿಂದೆ ನಮ್ಮ ಕುಟುಂಬ ಸ್ಥಾಪಿಸಿರುವ ಸಾಮ್ರಾಜ್ಯದಲ್ಲಿ ಕಲಾಲ ಸಮಾಜದವರ ಪರಿಶ್ರಮ ಅಪಾರವಾಗಿದೆ ಎಂದು ಕೆಎಂಎಫ್ ಅಧ್ಯಕ್ಷ, ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಶನಿವಾರದಂದು ತಾಲೂಕಿನ ಕಲ್ಲೋಳಿ ಪಟ್ಟಣದ ನಿಯೋಜಿತ ಬಲಭೀಮ ದೇವರ ಕಲ್ಯಾಣ ಮಂಟಪದಲ್ಲಿ ಮೂಡಲಗಿ ಮತ್ತು ಗೋಕಾಕ ತಾಲೂಕುಗಳ ಸೂರ್ಯವಂಶ ಕ್ಷತ್ರೀಯ ಕಲಾಲ ಸಮಾಜದ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಅವರು, ಕಲಾಲ ಸಮಾಜದವರು ತಮ್ಮ ಕುಟುಂಬದೊಂದಿಗೆ ಅವಿನಾಭಾವ ಸಂಬಂಧ ಹೊಂದಿದ್ದಾರೆ …
Read More »