Breaking News

ಮೂಡಲಗಿ

ಮೂಡಲಗಿ ವಲಯಕ್ಕೆ ಮತ್ತೆರಡು ಸರಕಾರಿ ಪ್ರೌಢ ಶಾಲೆಗಳ ಮಂಜೂರು : ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಮಾಹಿತಿ

  ಗೋಕಾಕ : ಮೂಡಲಗಿ ವಲಯದ ತಪಸಿ ಮತ್ತು ಗೋಸಬಾಳ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗಳನ್ನು ಪ್ರೌಢ ಶಾಲೆಗಳನ್ನಾಗಿ ಉನ್ನತೀಕರಿಸಿ ರಾಜ್ಯ ಸರ್ಕಾರದ ಆದೇಶ ಹೊರಡಿಸಿದೆ ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ತಪಸಿ ಮತ್ತು ಗೋಸಬಾಳ ಗ್ರಾಮಸ್ಥರ ಒತ್ತಾಸೆಯಂತೆ ಎರಡೂ ಹಿರಿಯ ಪ್ರಾಥಮಿಕ ಶಾಲೆಗಳನ್ನು ಉನ್ನತೀಕರಿಸಿ ಪ್ರೌಢ ಶಾಲೆಗಳನ್ನಾಗಿ ಮಂಜೂರು ಮಾಡುವಂತೆ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದು, ತಮ್ಮ ಮನವಿಯ ಮೇರೆಗೆ ಮೂಡಲಗಿ ವಲಯದಲ್ಲಿರುವ ತಪಸಿ …

Read More »

ವಡೇರಹಟ್ಟಿ ಗ್ರಾಮದಲ್ಲಿ ಶ್ರೀ ಚಂದ್ರಮ್ಮ ದೇವಿ ಸಮುದಾಯ ಭವನವನ್ನು ಯುವ ನಾಯಕ ಸರ್ವೋತ್ತಮ ಜಾರಕಿಹೊಳಿ

ಮೂಡಲಗಿ: ವಡೇರಹಟ್ಟಿ ಗ್ರಾಮದಲ್ಲಿ ಶ್ರೀ ಚಂದ್ರಮ್ಮ ದೇವಿ ಸಮುದಾಯ ಭವನವನ್ನು ಯುವ ನಾಯಕ ಸರ್ವೋತ್ತಮ ಜಾರಕಿಹೊಳಿ ಅವರು ಉದ್ಘಾಟಿಸಿದರು.       ನಂತರ ಮಾತನಾಡಿದ ಅವರು ಶಾಸಕರ ವಿಶೇಷ ಅನುದಾನ ಅಡಿಯಲ್ಲಿ ನಿರ್ಮಿಸಲಾದ ನೂತನ ಸಮುದಾಯ ಭವನವನ್ನು ಎಲ್ಲರೂ ಸದುಪಯೋಗ ಪಡೆದುಕೊಳ್ಳಿ ಎಂದರು.ನಾವು ಸದಾ ನಿಮ್ಮ ಸೇವೆಗೆ ಸಿದ್ಧ, ನಾವು ನಿಮ್ಮ ಕುಟುಂಬದವರೇ ಕ್ಷೇತ್ರದಲ್ಲಿ ಯಾವುದೇ ಕಾರ್ಯ ಇದ್ದರೂ ನಿಮ್ಮೊಂದಿಗೆ ಇರುತ್ತೇವೆ ಎಂದರು.ನಂತರ ಗ್ರಾಮದ ಹಿರಿಯರು ಯುವ ನಾಯಕ …

Read More »

ಹಡಪದ ಅಪ್ಪಣ್ಣ ಜಯಂತಿ ಅಂಗವಾಗಿ ಜರುಗಿದ ಮೆರವಣಿಗೆ ಜಾಥಾಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಚಾಲನೆ ನೀಡಿದರು.

ಮೂಡಲಗಿ : ಹಡಪದ ಅಪ್ಪಣ್ಣನವರು 12ನೇ ಶತಮಾನದಲ್ಲಿ ಬಸವಣ್ಣನವರ ಅನುಯಾಯಿಯಾಗಿ ಸಮಾಜ ಸುಧಾರಣೆಗೆ ಶ್ರಮಿಸಿದ ಮಹಾನ್ ಪುರುಷರಾಗಿದ್ದರು ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದರು. ಪಟ್ಟಣದಲ್ಲಿ ಮೂಡಲಗಿ ತಾಲೂಕಾ ಹಡಪದ ಅಪ್ಪಣ್ಣ ಸಮಾಜ ಸಮಗ್ರ ಅಭಿವೃದ್ಧಿ ಸಂಘವು ಏರ್ಪಡಿಸಿದ್ದ ಹಡಪದ ಅಪ್ಪಣ್ಣನವರ ಜಯಂತಿ ಉತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಹಡಪದ ಅಪ್ಪಣ್ಣನವರ ವಚನಗಳು ಇಂದಿಗೂ ಪ್ರಸ್ತುತವಾಗಿವೆ ಎಂದು ಹೇಳಿದರು. ಹಡಪದ ಅಪ್ಪಣ್ಣನವರು …

Read More »

ರೈತರಿಗೆ ಮೇವು ಕತ್ತರಿಸುವ ಯಂತ್ರ ಹಾಗೂ ಮ್ಯಾಟ್‍ಗಳನ್ನು ವಿತರಿಸಿದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

  ಗೋಕಾಕ: ಕೆಎಂಎಫ್‍ನಿಂದ ರೈತ ಸಮುದಾಯಕ್ಕೆ ಸಾಕಷ್ಟು ಯೋಜನೆಗಳನ್ನು ಅನುಷ್ಠಾನಗೊಳಿಸಿದ್ದು, ಅವುಗಳನ್ನು ಸದ್ಬಳಕೆ ಮಾಡಿಕೊಳ್ಳುವಂತೆ ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ರೈತ ವೃಂದಕ್ಕೆ ಕರೆ ನೀಡಿದರು. ಇಲ್ಲಿಯ ಎನ್‍ಎಸ್‍ಎಫ್ ಅತಿಥಿ ಗೃಹದಲ್ಲಿ ಜಿಲ್ಲಾ ಹಾಲು ಒಕ್ಕೂಟದಿಂದ ನಡೆದ ರಾಸು ವಿಮೆಗಳ ಚೆಕ್ ವಿತರಿಸಿ ಮಾತನಾಡಿದ ಅವರು, ರೈತರ ಆರ್ಥಿಕ ಅಭಿವೃದ್ಧಿಗಾಗಿಯೇ ಕೆಎಂಎಫ್ ಬದ್ಧವಿದ್ದು ರೈತರಿಗೆ ಬೇಕಾಗಿರುವ ಎಲ್ಲ ಸೌಲತ್ತುಗಳನ್ನು ನೀಡುತ್ತಿದೆ ಎಂದು ಹೇಳಿದರು. ರೈತರಿಗೆ …

Read More »

ವಿದ್ಯುತ್ ಟಿಸಿ ದುರಸ್ಥಿ ವೇಳೆ ವಿದ್ಯುತ್ ಪ್ರವಹಿಸಿ ಲೈನ್ ಮ್ಯಾನ್ ಸಾವು

ಮೂಡಲಗಿ: ತಾಲೂಕಿನ ತಿಗಡಿ ಗ್ರಾಮದಲ್ಲಿನ ವಿದ್ಯುತ್ ಟ್ರಾನ್ಸ್ ಫಾರ್ಮರ್‌ನಲ್ಲಿ ದುರಸ್ಥಿ ಮಾಡುವ ಸಂದರ್ಭದಲ್ಲಿ ಆಕಸ್ಮಿಕ ವಿದ್ಯುತ್ ಪ್ರವಹಿಸಿ ಲೈನ್ ಮ್ಯಾನ್ ಸಾವನ್ನಪ್ಪಿರುವ ಘಟನೆ ಗುರುವಾರ ಸಂಜೆ ನಡೆದಿದೆ. ತಿಗಡಿ ಗ್ರಾಮದ ಹತ್ತಿರ ಗ್ರಾಮದಲ್ಲಿ ವಿದ್ಯುತ್ ಟ್ರಾನ್ಸ್ ಫಾರ್ಮರ್‌ (ಟಿ.ಸಿ) ದುರಸ್ಥಿ ವೇಳೆಯಲ್ಲಿ ತಿಗಡಿ ಹೆಸ್ಕಾಂ ಶಾಖೆಯ ಸಿಬ್ಬಂದಿ ನಿಂಗಪ್ಪ ಕರಿಗೌಡರ್ (38) ಟ್ರಾನ್ಸ್ ಫಾರ್ಮರ್‌ ಮೇಲೆಯೇ ಸಾವನ್ನಪಿದು.   ಎಲ್ಲವನ್ನೂ ಸರಿಯಾಗಿ ಚಕ್ ಮಾಡಿಕೊಂಡೆ ಕೆಲಸ ಶುರು ಮಾಡಿದ್ದ ಲೈನ್ ಮ್ಯಾನ್, …

Read More »

ಗೋಕಾಕದಲ್ಲಿಂದು ಗೋಕಾಕ ಮತ್ತು ಮೂಡಲಗಿ ತಾಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಸಿದ ಬಾಲಚಂದ್ರ ಜಾರಕಿಹೊಳಿ

  *ಗೋಕಾಕ*: ಪ್ರಸಕ್ತ ಸನ್ನಿವೇಶದಲ್ಲಿ ಪ್ರವಾಹ ಭೀತಿ ಇಲ್ಲದಿದ್ದರೂ ಪಶ್ಚಿಮ ಘಟ್ಟದಲ್ಲಿ ಸುರಿಯುತ್ತಿರುವ ಸತತ ಮಳೆಯಿಂದಾಗಿ ಪ್ರವಾಹ ಎದುರಾದರೂ ಅದನ್ನು ಸಮರ್ಥವಾಗಿ ಎದುರಿಸಲು ಈಗಿನಿಂದಲೇ ಅಧಿಕಾರಿಗಳು ಮುಂಜಾಗ್ರತಾ ಕ್ರಮವಾಗಿ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುವಂತೆ ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಇಲ್ಲಿಯ ಪ್ರವಾಸಿ ಮಂದಿರದಲ್ಲಿ ಮಂಗಳವಾರ ಸಂಜೆ ಜರುಗಿದ ಗೋಕಾಕ ಮತ್ತು ಮೂಡಲಗಿ ತಾಲೂಕು ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, …

Read More »

ಇಂದು ಪಂಜಾಬ್​ ಸಿಎಂ ಮದುವೆ: ವಧು ಗುರುಪ್ರೀತ್​ ಕೌರ್​ ವಯಸ್ಸೆಷ್ಟು? ಇಲ್ಲಿದೆ ಅವರ ಸಂಪೂರ್ಣ ಪರಿಚಯ​

ಚಂಡೀಗಢ: ಇಂದು ಪಂಜಾಬ್ ಜನರ​ ಪಾಲಿಗೆ ವಿಶೇಷ ದಿನ. ಏಕೆಂದರೆ, ಇಡೀ ರಾಜ್ಯವನ್ನು ಪ್ರತಿನಿಧಿಸುವ ಹಾಗೂ ಆಡಳಿತದ ಚುಕ್ಕಾಣಿ ಹಿಡಿದಿರುವ ಮುಖ್ಯಮಂತ್ರಿ ಭಗವಂತ್​ ಮಾನ್​ ಅವರ ವಿವಾಹದ ದಿನ. ಅಂದಹಾಗೆ ಪಂಜಾಬ್​ ಸಿಎಂಗೆ ಇದು ಎರಡನೇ ಮದುವೆ. ಇಷ್ಟು ಕೇಳಿದ ಮೇಲೆ ನಿಮ್ಮ ಮನಸ್ಸಿನಲ್ಲಿ ವಧು ಯಾರು? ಮತ್ತು ವಧುವಿನ ವಯಸ್ಸೆಷ್ಟು? ಎಂಬಿತ್ಯಾದಿ ಪ್ರಶ್ನೆಗಳು ಮೂಡುವುದು ಸಹಜ. ನಿಮ್ಮ ಪ್ರಶ್ನೆಗಳಿಗೆ ಸಂಪೂರ್ಣ ಉತ್ತರವನ್ನು ನಾವು ಕೊಡುತ್ತೇವೆ. ಹೀಗಾಗಿ ಓದುವುದನ್ನು ಮುಂದುವರಿಸಿ… 48 …

Read More »

ಶರದ್ ಪವಾರ್ ಗೆ ಬಂತು ಲವ್ ಲೆಟರ್…!

ಮುಂಬೈ: ನೂತನ ಮುಖ್ಯಮಂತ್ರಿ ಏಕನಾಥ್ ಶಿಂಧೆ ಮತ್ತು ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಪ್ರಮಾಣ ವಚನ ಸ್ವೀಕರಿಸಿದ ದಿನದಂದು, ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ ಮುಖ್ಯಸ್ಥ ಶರದ್ ಪವಾರ್ ಅವರು 2004, 2009, 2014 2020 ರ ಚುನಾವಣೆ ಅವಧಿಯಲ್ಲಿ ಸಲ್ಲಿಸಿದ ಅಫಿಡವಿಟ್‌ಗಳಿಗೆ ಸಂಬಂಧಿಸಿದಂತೆ ಆದಾಯ ತೆರಿಗೆಯಿಂದ ನೋಟಿಸ್ ಸ್ವೀಕರಿಸಿರುವುದಾಗಿ ಹೇಳಿದ್ದಾರೆ. ಈ ನೋಟಿಸ್ ಗಳನ್ನು ಅವರು ಪ್ರೇಮ ಪತ್ರಗಳು ಎಂದು ವ್ಯಂಗವಾಡಿದ್ದಾರೆ. ಈ ಕುರಿತಾಗಿ ಮರಾಠಿಯಲ್ಲಿ ಟ್ವೀಟ್ ಮಾಡಿರುವ ಅವರು “ಇಂದಿನ ದಿನಗಳಲ್ಲಿ …

Read More »

ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಪ್ರಯತ್ನದಿಂದ ಹೊನಕುಪ್ಪಿ ರಸ್ತೆ 2.50 ಕೋಟಿ ರೂ. ಅನುದಾನ ಬಿಡುಗಡೆ

  ಮೂಡಲಗಿ : ತಾಲೂಕಿನ ಹೊನಕುಪ್ಪಿಯಿಂದ ಲಕ್ಷ್ಮೇಶ್ವರವರೆಗಿನ ರಸ್ತೆ ಕಾಮಗಾರಿಗೆ ಮಂಗಳವಾರದಂದು ಗುದ್ದಲಿ ಪೂಜೆ ನಡೆಯಿತು. ಸುಣಧೋಳಿ ಗ್ರಾಪಂ ಅಧ್ಯಕ್ಷೆ ಜಮೇಲಾ ಮೋಮಿನ ಮತ್ತು ಉಪಾಧ್ಯಕ್ಷ ಬಸಪ್ಪ ಹೆಗಡೆ ಅವರು 2.50 ಕೋಟಿ ರೂ. ವೆಚ್ಚದ ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದರು.   ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ವಿಶೇಷ ಕಾಳಜಿಯಿಂದಾಗಿ ಹೊನಕುಪ್ಪಿ ರಸ್ತೆ ಸುಧಾರಣೆಗೆ ಅನುದಾನ ಬಿಡುಗಡೆಯಾಗಿದೆ. ಇದರಿಂದ ಸಾರ್ವಜನಿಕರ ಸಂಚಾರಕ್ಕೆ ಅನುಕೂಲವಾಗಲಿದೆ …

Read More »

ಬಂಟ್ವಾಳ: ಪೊಲೀಸರಿಗೆ ದೂರು ನೀಡಿದ್ದಕ್ಕೆ ಸಿಟ್ಟು… ಹಾಡಹಗಲೇ ಮಹಿಳೆಗೆ ಇರಿದು ಕೊಂದ

ಬಂಟ್ವಾಳ(ದಕ್ಷಿಣ ಕನ್ನಡ): ತಾಲೂಕಿನ ನೆಟ್ಲ ಮುಡ್ನೂರು ಗ್ರಾಮದ ಕೊಡಾಜೆ ಗಣೇಶ್ ನಗರದಲ್ಲಿ ಹಾಡಹಗಲೇ ಮಹಿಳೆಯೊಬ್ಬರನ್ನು ಚೂರಿಯಿಂದ ಇರಿದು ಹತ್ಯೆ ಮಾಡಿರುವ ಘಟನೆ ಸೋಮವಾರ ನಡೆದಿದೆ. ಶಕುಂತಳಾ ಮೃತ ಮಹಿಳೆಯಾಗಿದ್ದು, ಆರೋಪಿ ಶ್ರೀಧರ್​ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಶಕುಂತಳಾ ಸುಮಾರು 5 ವರ್ಷಗಳಿಂದ ಪುತ್ತೂರಿನ ಕೊಂಬೆಟ್ಟುವಿನಲ್ಲಿ ಕ್ಯಾಂಟೀನ್ ನಡೆಸುತ್ತಿದ್ದರು. ಕಳೆದ ಒಂದು ವರ್ಷದಿಂದ ಸ್ಕೂಟರ್​​ನಲ್ಲಿ ಪುತ್ತೂರಿಗೆ ಹೋಗಿ ಬರುತ್ತಿದ್ದರು. ಕೆಲ ತಿಂಗಳುಗಳ ಹಿಂದೆ ಯಮನಾಜೆ ಎಂಬಲ್ಲಿನ ನಿವಾಸಿ ಶ್ರೀಧರ್​ ಮಹಿಳೆಯ ಮನೆ ಬಳಿ …

Read More »