Breaking News

ರಾಜಕೀಯ

ಹುಲಿ ಸಾವಿನಲ್ಲಿ ಅಧಿಕಾರಿಗಳ ನಿರ್ಲಕ್ಷ್ಯವಿದ್ದಲ್ಲಿ ಶಿಸ್ತುಕ್ರಮ :ಈಶ್ವರ ಖಂಡ್ರೆ

ಚಾಮರಾಜನಗರ: ಹೂಗ್ಯಂ ವಲಯದಲ್ಲಿ 5 ಹುಲಿಗಳ ಅಸಹಜ ಸಾವು ಪ್ರಕರಣದಲ್ಲಿ ಯಾವುದೇ ಅಧಿಕಾರಿಯ ನಿರ್ಲಕ್ಷ್ಯ ಕಂಡುಬಂದಲ್ಲಿ, ಶಿಸ್ತುಕ್ರಮ ಜರುಗಿಸಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ತಿಳಿಸಿದರು. ವಿಕಾಸಸೌಧದಲ್ಲಿ ಇಂದು ಮಾತನಾಡಿದ ಅವರು, ಆರೋಪಿಗಳನ್ನು ಈಗಾಗಲೇ ಬಂಧಿಸಲಾಗಿದ್ದು, ಕಾನೂನು ರೀತ್ಯಾ ಕ್ರಮ ಆಗುತ್ತಿದೆ. ಪ್ರಕರಣದಲ್ಲಿ ಯಾವುದೇ ಅಧಿಕಾರಿಯ ನಿರ್ಲಕ್ಷ್ಯ ಕಂಡುಬಂದಲ್ಲಿ ಶಿಸ್ತುಕ್ರಮ ಜರುಗಿಸಲಾಗುವುದು ಎಂದರು. ಕಾಡುಗೋಡಿ ಪ್ಲಾಂಟೇಷನ್​ನ 120 ಎಕರೆ ಅರಣ್ಯ ಭೂಮಿ ಮರುವಶಪಡಿಸಿಕೊಂಡಿರುವ ಹಿನ್ನೆಲೆಯಲ್ಲಿ ಬಿಜೆಪಿ …

Read More »

ಖಾಲಿ ಗ್ಯಾಸ್ ಸಿಲಿಂಡರ್ ದಾಸ್ತಾನು ಅಡ್ಡೆ ಮೇಲೆ ದಾಳಿ ನಡೆಸಿರುವ ಪೊಲೀಸರು 409 ಗ್ಯಾಸ್​ ಸಿಲಿಂಡರ್​ಗಳನ್ನು ಜಪ್ತಿ ಮಾಡಿದ್ದಾರೆ.

ಹುಬ್ಬಳ್ಳಿ: ಗ್ರಾಮೀಣ ಭಾಗದಲ್ಲಿ ನಡೆಯುತ್ತಿದ್ದ ಅಕ್ರಮ ರಿಫಿಲಿಂಗ್ ನಗರಕ್ಕೂ ವ್ಯಾಪಿಸಿದ್ದು, ಇದೀಗ ಖಚಿತ ಮಾಹಿತಿ ಮೇರೆಗೆ ಹಳೇ ಹುಬ್ಬಳ್ಳಿ ಠಾಣೆಯ ಪೊಲೀಸರು ಹಾಗೂ ಆಹಾರ ಇಲಾಖೆಯ ಅಧಿಕಾರಿಗಳು ಅಕ್ರಮವಾಗಿ ದಾಸ್ತಾನು ಮಾಡಲಾಗಿದ್ದ ಗ್ಯಾಸ್ ಸಿಲಿಂಡರ್ ಅಡ್ಡೆಯ ಮೇಲೆ ದಾಳಿ ಮಾಡಿ ಅಪಾರ ಪ್ರಮಾಣದ ಖಾಲಿ ಗ್ಯಾಸ್ ಸಿಲಿಂಡರ್​​ಗಳನ್ನು ವಶಪಡಿಸಿಕೊಂಡಿದ್ದಾರೆ. ಕಾರವಾರ ರಸ್ತೆಯ ಕೆಂಪಗೇರಿ ಹತ್ತಿರದ ಗೋಡೌನ್​​ನಲ್ಲಿ ಅಕ್ರಮವಾಗಿ ಕರ್ಮಷಿಯಲ್ ಖಾಲಿ ಸಿಲಿಂಡರ್ ಸಂಗ್ರಹ ಮಾಡಿದ್ದ ಖಚಿತ ಮಾಹಿತಿ ಮೇರೆಗೆ ಅಧಿಕಾರಿಗಳು ಜಂಟಿಯಾಗಿ …

Read More »

ಮೈಸೂರು ದಸರಾ 2025: ಜಂಬೂಸವಾರಿ ಮೆರವಣಿಗೆಗೆ ಗಜಪಡೆ ಆಯ್ಕೆ ಪ್ರಕ್ರಿಯೆ ಆರಂಭ

ಮೈಸೂರು: ಈ ಬಾರಿ ಸಂಭ್ರಮ ಹಾಗೂ ಅದ್ಧೂರಿ ದಸರಾ ಆಚರಿಸಲು ಜಂಬೂಸವಾರಿ ಮೆರವಣಿಗೆಗೆ ಗಜಪಡೆ ಆಯ್ಕೆ ಪ್ರಕ್ರಿಯೆ ಆರಂಭಿಸಲಾಗಿದ್ದು, ಅರಣ್ಯ ಇಲಾಖೆ ಅಧಿಕಾರಿಗಳ ತಂಡ ಎಂಟು ಆನೆ ಶಿಬಿರಗಳಿಗೆ ಭೇಟಿ ನೀಡಿ ಸುಮಾರು 25 ಗಂಡು ಮತ್ತು ಹೆಣ್ಣು ಆನೆಗಳ ಆರೋಗ್ಯ ಪರಿಶೀಲನೆ ನಡೆಸಿದೆ. ನಾಡಹಬ್ಬ ದಸರಾದ ಪ್ರಮುಖ ಆಕರ್ಷಣೆಯೇ ಗಜಪಡೆ. ಈ ಗಜಪಡೆಯ ಪ್ರಮುಖ ಕೇಂದ್ರಬಿಂದುವಾಗಿ ಇಟ್ಟುಕೊಂಡು ನಡೆಯುವುದು ಮೈಸೂರು ದಸರಾದ ಜಂಬೂಸವಾರಿ. ಇಂತಹ ಜಂಬೂಸವಾರಿಯಲ್ಲಿ ಭಾಗವಹಿಸುವ ಗಜಪಡೆಗಳನ್ನು ಆಯ್ಕೆ …

Read More »

5 ಹುಲಿಗಳು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಅರಣ್ಯಾಧಿಕಾರಿಗಳಿಗೆ ಕಡ್ಡಾಯ ರಜೆ ನೀಡಿ ಪಿಸಿಸಿಎಫ್ ಆದೇಶಿಸಿದ್ದಾರೆ.

ಚಾಮರಾಜನಗರ: ಮಲೆಮಹದೇಶ್ವರ ವನ್ಯಜೀವಿಧಾಮದ ಮೀಣ್ಯಂ ಅರಣ್ಯದಲ್ಲಿ 5 ಹುಲಿಗಳು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಅರಣ್ಯಾಧಿಕಾರಿಗಳಿಗೆ ಕಡ್ಡಾಯ ರಜೆ ನೀಡಿ ಪಿಸಿಸಿಎಫ್ ಆದೇಶ ಹೊರಡಿಸಿದ್ದಾರೆ. ಅರಣ್ಯ ಸಚಿವ ಈಶ್ವರ್ ಖಂಡ್ರೆ ಉಲ್ಲೇಖಿಸಿದ ಟಿಪ್ಪಣಿ ಮೇರೆಗೆ ಮಲೆಮಹದೇಶ್ವರ ವನ್ಯಜೀವಿಧಾಮದ ಡಿಸಿಎಫ್ ಚಕ್ರಪಾಣಿ, ಎಸಿಎಫ್ ಗಜಾನನ ಹೆಗಡೆ ಹಾಗೂ ಹೂಗ್ಯಂ ವಲಯ ಅರಣ್ಯಾಧಿಕಾರಿ ಮಾದೇಶ್ ಅವರಿಗೆ ಮುಂದಿನ ಆದೇಶದ ತನಕ ಕಡ್ಡಾಯ ರಜೆ ಮೇಲೆ ತೆರಳಲು ಆದೇಶಿಸಲಾಗಿದೆ. ಐದು ಹುಲಿಗಳು ರಸ್ತೆಯಿಂದ ಕೇವಲ …

Read More »

ದೂಧ್‌ಸಾಗರ್ ಜಲಪಾತದ ಸೂಕ್ಷ್ಮ ಪ್ರದೇಶದಲ್ಲಿ ಅತಿಕ್ರಮ ಪ್ರವೇಶ: 21 ಪ್ರವಾಸಿಗರ ಬಂಧನ, ಬಿಡುಗಡೆ

ಹುಬ್ಬಳ್ಳಿ: ಕರ್ನಾಟಕದ ಗಡಿಭಾಗದ ಸಮೀಪವಿರುವ ಗೋವಾ ರಾಜ್ಯದ ದೂಧ್​ಸಾಗರ್​ ಜಲಪಾತ ಈಗ ಮೈದುಂಬಿ ಹರಿಯುತ್ತಿದ್ದು, ಪ್ರವಾಸಿಗರನ್ನು ಕೈಬೀಸಿ ಕರೆಯತ್ತಿದೆ. ಅದ್ರೆ ಪ್ರವಾಸಕ್ಕೆ ಹೋದವರು ಅಲ್ಲಿನ ಕೆಲ ಸೂಕ್ಷ್ಮ ಪ್ರದೇಶದಲ್ಲಿ ನಿಯಮ ಉಲ್ಲಂಘಿಸಿ ಸಂಕಷ್ಟಕ್ಕೆ ಸಿಲುಕಿದ್ದಾರೆ. ಹೌದು, ಮಳೆಗಾಲದ ಸಂದರ್ಭದಲ್ಲಿ ದೂಧ್‌ಸಾಗರ್ ನೋಡಲು ಪ್ರವಾಸಿಗರ ದಂಡೇ ಆಗಮಿಸುತ್ತದೆ. ಆದ್ರೆ ಕ್ಯಾಸಲ್‌ರಾಕ್-ದೂಧ್‌ಸಾಗರ್ ಅತ್ಯಂತ ಸೂಕ್ಷ್ಮ ಹಾಗೂ ಅಪಾಯಕಾರಿ ಪ್ರದೇಶವಾಗಿರುವುದರಿಂದ ಸುರಂಗಗಳು, ಕಡಿದಾದ ಕಂದರಗಳು ಮತ್ತು ಕಾಡು ಪ್ರಾಣಿಗಳ ಅಪಾಯದಿಂದಾಗಿ ಚಾರಣ ನಿಷೇಧಿಸಲಾಗಿದೆ. ಕ್ಯಾಸಲ್‌ರಾಕ್‌ನ ರೈಲ್ವೆ …

Read More »

KRS ಡ್ಯಾಂಗೆ ಭಾಗಿನ ಅರ್ಪಣೆ ಮಾಡಿದ ಸಿಎಂ

ಮಂಡ್ಯ: ರೈತರ ಜೀವನಾಡಿ ಕನ್ನಂಬಾಡಿ ಅಣೆಕಟ್ಟು ಸಂಪೂರ್ಣ ಭರ್ತಿಯಾಗಿದೆ. ಈ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಕೆ.ಆರ್.ಎಸ್. ಜಲಾಶಯಕ್ಕೆ ಸಿಎಂ ಸಿದ್ದರಾಮಯ್ಯ ಅಂಡ್ ಟೀಮ್ ಕಾವೇರಿ ಮಾತೆಗೆ ಪೂಜೆ ಸಲ್ಲಿಸಿ ಭಾಗಿನ ಅರ್ಪಿಸಿದರು. ಕಾರ್ಯಕ್ರಮವನ್ನು ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ನಮ್ಮ ಸರ್ಕಾರ ಅಸ್ತಿತ್ವಕ್ಕೆ ಬಂದ ನಂತರ 25 ಸಾವಿರ ಕೋಟಿ ಅನುದಾನ ನೀರಾವರಿ ಇಲಾಖೆಗೆ ನೀಡಿದೆ. ಹಿಂದಿನ ಯಾವ ಸರ್ಕಾರವೂ ಈ ಮಟ್ಟದ ಅನುದಾನ ನೀಡಿಲ್ಲ …

Read More »

ನೂತನವಾಗಿ ನಿರ್ಮಿಸಲಾಗುತ್ತಿರುವ ತಾಲೂಕಾ ಮಟ್ಟದ ಸಾರ್ವಜನಿಕ ಆರೋಗ್ಯ ಪ್ರಯೋಗಾಲಯ ನೂತನ ಕಟ್ಟಡ ಕಾಮಗಾರಿಗೆ ಚಾಲನೆ ನೀಡಿದ ರಮೇಶ ಜಾರಕಿಹೊಳಿ

ಗೋಕಾಕ ತಾಲೂಕಾ ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ನೂತನವಾಗಿ ನಿರ್ಮಿಸಲಾಗುತ್ತಿರುವ ತಾಲೂಕಾ ಮಟ್ಟದ ಸಾರ್ವಜನಿಕ ಆರೋಗ್ಯ ಪ್ರಯೋಗಾಲಯ ನೂತನ ಕಟ್ಟಡ ಗುದ್ದಲಿ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಗೋಕಾಕ ಮತಕ್ಷೇತ್ರದ ಜನಪ್ರಿಯ ಶಾಸಕರಾದ ಶ್ರೀ ರಮೇಶ ಜಾರಕಿಹೊಳಿ ಅವರು ಭಾಗವಹಿಸಿ ಗುದ್ದಲಿ ಪೂಜೆ ನೆರವೇರಿಸಿ ಕಟ್ಟಡ ಕಾಮಗಾರಿಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಬೀಮ್ಸ ನಿರ್ದೇಶಕರಾದ ಡಾ.ಅಶೋಕ ಶೆಟ್ಟಿ, ಮುಖ್ಯ ವೈದ್ಯಾಧಿಕಾರಿಗಳಾದ ಡಾ.ರವೀಂದ್ರ ಆಂಟೀನ,ಟಿ.ಎಚ್.ಓ ಮುತ್ತಣ್ಣ ಕೋಪ್ಪದ, ಭೀಮನಗೌಡ ಪೊಲೀಸಗೌಡರ,ಟಿ.ಆರ್ ಕಾಗಲ,ಡಾ.ಕಿರಣ,ಡಾ.ಕಡ್ಲೇಪ್ಪಗೋಳ,ಡಾ.ಶಾಂತಕುಮಾರ ಸೇರಿದಂತೆ …

Read More »

ಬರಗೂರು ರಾಮಚಂದ್ರಪ್ಪನವರ ವ್ಯಕ್ತಿತ್ವ ಎಲ್ಲರಿಗೂ ಮಾದರಿ; ಎಸ್.ಐ. ಬಿರಾದಾರ

ಬರಗೂರು ರಾಮಚಂದ್ರಪ್ಪನವರ ವ್ಯಕ್ತಿತ್ವ ಎಲ್ಲರಿಗೂ ಮಾದರಿ; ಎಸ್.ಐ. ಬಿರಾದಾರ ಬಸವರಾಜ ಕಟ್ಟಿಮನಿ ಕಾದಂಬರಿ ಪ್ರಶಸ್ತಿ ಪ್ರದಾನ ಸಮಾರಂಭ ಮತ್ತು ನಾಡೋಜ ಬರಗೂರು ರಾಮಚಂದ್ರಪ್ಪ ಕುರಿತು ವಿಚಾರ ಸಂಕಿರಣ ಅನ್ಯರ ಪ್ರತಿ ಪ್ರೀತಿ ವಾತ್ಸಲ್ಯವನ್ನು ತೋರಿ ಬದುಕನ್ನು ಅನುಭವಿಸಬೇಕು. ಇಂತಹ ವ್ಯಕ್ತಿತ್ವವನ್ನು ನಾಡೋಜ್ ಬರಗೂರು ರಾಮಚಂದ್ರಪ್ಪನವರು ಹೊಂದಿದ್ದಾರೆಂದು ಕನ್ನಡ ಅಧ್ಯಾಪಕರ ಪರಿಷತ್ತಿನ ಅಧ್ಯಕ್ಷರಾದ ಡಾ. ಎಸ್‌.ಐ. ಬಿರಾದಾರ ಹೇಳಿದರು. ಬೆಳಗಾವಿಯ ಸಂಗೊಳ್ಳಿರಾಯಣ್ಣ ಪ್ರಥಮ ದರ್ಜೆ ಘಟಕ ಮಹಾವಿದ್ಯಾಲಯದಲ್ಲಿ ಬಸವರಾಜ ಕಟ್ಟಿಮನಿ ಪ್ರತಿಷ್ಠಾನ, …

Read More »

ಗೋಡಚಿನಮಲ್ಕಿ ನಿಸರ್ಗ ಜಲಪಾತಕ್ಕೆ ಪ್ರವಾಸಿಗರ ದಂಡು

ಹುಕ್ಕೇರಿ : ಗೋಕಾಕ ತಾಲೂಕಿನ ಗೋಡಚಿನಮಲ್ಕಿ ನಿಸರ್ಗ ಜಲಪಾತಕ್ಕೆ ಪ್ರವಾಸಿಗರ ದಂಡು ಪಶ್ಚಿಮಘಟ್ಟ ಪ್ರದೇಶಗಳಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು, ಸಪ್ತನದಿಗಳ ನಾಡು ಬೆಳಗಾವಿ ಜಿಲ್ಲೆಯಲ್ಲಿ ಒಂದೆಡೆ ಪ್ರವಾಹ ಸೃಷ್ಟಿಯಾಗುತ್ತದೆ, ಮತ್ತೊಂದೆಡೆ ಮಾರ್ಕಂಡೇಯ ನದಿ ಉಕ್ಕಿ ಹರಿಯುತ್ತಿರುವದರಿಂದ ಹುಕ್ಕೇರಿ ತಾಲೂಕಿನ ಶಿರೂರ ಜಲಾಶಯದಿಂದ ನೀರು ಹೋರಕ್ಕೆ ಬಿಟ್ಟಿದ್ದರಿಂದ ಗೋಕಾಕ ತಾಲೂಕಿನ ಗೊಡಚಿನಮಲ್ಕಿ ಜಲಪಾತದ ರುದ್ರರಮಣೀಯ ದೃಶ್ಯವನ್ನು ಕಣ್ತುಂಬಿಕೊಳ್ಳಲು ಪ್ರವಾಸಿಗರು ಮುಗಿಬೀಳುತ್ತಿದ್ದಾರೆ. ಗೋಕಾಕ್​ನಿಂದ 18 ಕಿ‌.ಮೀ ದೂರದಲ್ಲಿರುವ ಗೊಡಚಿನಮಲ್ಕಿ ಗ್ರಾಮದಿಂದ ಸುಮಾರು 2.5 …

Read More »

ಬಿಜೆಪಿ ಮುಖಂಡನ ಪುತ್ರನ ವಿರುದ್ಧ ಅತ್ಯಾಚಾರ ಕೇಸ್: ಮಗುವಿನ ಜನ್ಮ ನೀಡಿದ ಸಂತ್ರಸ್ತೆ

ಮಂಗಳೂರು, ): ಪುತ್ತೂರು ಬಿಜೆಪಿ ಮುಖಂಡನ ಪುತ್ರನ (Puttur BJP leader Son )ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಸಂತ್ರಸ್ತೆ ಯುವತಿ ಮಗುವಿಗೆ ಜನ್ಮ ನೀಡಿದ್ದಾಳೆ. ಕೃಷ್ಣ ಜೆ ರಾವ್ ಎನ್ನುವಾತ ಮದುವೆಯಾಗುವುದಾಗಿ ಯುವತಿಗೆ ನಂಬಿಸಿ ಆಕೆಯನ್ನು ಲೈಂಗಿಕವಾಗಿ ಬಳಸಿಕೊಂಡಿದ್ದಾನೆ. ಬಳಿಕ ಯುವತಿ ಗರ್ಭಿಣಿಯಾಗಿರುವುದು ಗೊತ್ತಾಗುತ್ತಿದ್ದಂತೆಯೇ ಕೈಕೊಟ್ಟಿದ್ದಾನೆ. ಈ ಸಂಬಂಧ ಯುವತಿ ಪೊಲೀಸ್ ಠಾಣೆ ಮೆಟ್ಟಿಲೇರುತ್ತಿದ್ದಂತೆಯೇ ಕೃಷ್ಣ ನಾಪತ್ತೆಯಾಗಿದ್ದು, ಇದೀಗ ಗರ್ಭಿಣಿ ಯುವತಿ ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ಗಂಡು ಮಗುವಿಗೆ …

Read More »