Home / ರಾಜಕೀಯ (page 10)

ರಾಜಕೀಯ

ಬೆಂಗಳೂರಿನ ಸಾರಕ್ಕಿ ಪಾರ್ಕ್ ನಲ್ಲಿ ಡಬಲ್ ಮರ್ಡರ್

ಬೆಂಗಳೂರು: ರಾಜಧಾನಿ ಬೆಂಗಳೂರಿನ ಜನನಿಬಿಡ ಪಾರ್ಕ್ ಒಂದರಲ್ಲಿ ಹಾಡಹಗಲೇ ಜೋಡಿ ಕೊಲೆ ನಡೆದಿದೆ. ಬೆಂಗಳೂರಿನ ಸಾರಕ್ಕಿ ಬಳಿಯಿರುವ ಪಾರ್ಕ್ ನಲ್ಲಿ ಸುರೇಶ್ ಹಾಗೂ ಅನುಷಾ ಎಂಬುವವರನ್ನು ಬರ್ಬರವಾಗಿ ಹತ್ಯೆಗೈದು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಇಂದು ಸಂಜೆ 4:15ರ ಸುಮಾರಿಗೆ ಸುರೇಶ್ ಹಾಗೂ ಅನುಷಾ ಎಂಬುವವರ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ ಮಾಡಲಾಗಿದೆ. ವಿಷಯ ತಿಳಿಯುತ್ತಿದ್ದಂತೆ ಜೆ.ಪಿ.ನಗರ ಪೊಲೀಸರು ಘಟನಾ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

Read More »

ಕನಕಗಿರಿಯಲ್ಲಿ ಕರಡಿ ದಾಳಿಗೆ ವೃದ್ಧ ಬಲಿ

ಕನಕಗಿರಿ (ಕೊಪ್ಪಳ ಜಿಲ್ಲೆ): ತಾಲ್ಲೂಕಿನ ರಾಂಪುರ ಗ್ರಾಮದ ಕೆರೆ ಪರಿಸರದಲ್ಲಿ ಗುರುವಾರ ವೃದ್ದರೊಬ್ಬರ ಮೇಲೆ ಕರಡಿ ದಾಳಿ ಮಾಡಿದ್ದು ಅವರು ಮೃತಪಟ್ಟಿದ್ದಾರೆ. ಹುಡೇಜಾಲಿ ಗ್ರಾಮದ ಚೆನ್ನಪ್ಪ ಮಡಿವಾಳ (74) ಮೃತಪಟ್ಟವರು. ಕರಡಿ ವೃದ್ದನ ಕುತ್ತಿಗೆಗೆ ಬಾಯಿ ಹಾಕಿದ್ದರಿಂದ ದೇಹವೆಲ್ಲ ರಕ್ತಸಿಕ್ತವಾಗಿತ್ತುತೀವ್ರ ಗಾಯಗೊಂಡಿದ್ದ ಚೆನ್ನಪ್ಪ ಅವರನ್ನು ಕೊಪ್ಪಳದ ಜಿಲ್ಲಾಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲು ಮಾಡಿದ್ದು ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಡಿಸೆಂಬರ್‌ನಲ್ಲಿ ಗ್ರಾಮದ ಆಂಜನೇಯ ದೇವಸ್ಥಾ‌ನಕ್ಕೆ ರಾತ್ರಿ ವೇಳೆಯಲ್ಲಿ ಬಂದು ಭಕ್ತರು ಮೂರ್ತಿಗೆ ಹಾಕಿದ್ದ ಎಣ್ಣೆ ನೆಕ್ಕಿತ್ತು.

Read More »

ಬಸ್ ಎಲ್ಲಾ ಫುಲ್ಲು..ವೋಟ್ ಹಾಕಲು ಊರಿಗೆ ಹೋಗೋದು ಹೇಗಪ್ಪಾ.!

ಬೆಂಗಳೂರು: ಲೋಕಸಭೆ ಚುನಾವಣೆ ಕರ್ನಾಟಕದಲ್ಲಿ ಎರಡು ಹಂತಗಳಲ್ಲಿ ನಡೆಯಲಿದೆ. ಏಪ್ರಿಲ್ 26 ರಂದು ಕರ್ನಾಟಕದ ಬಹುತೇಕ ಕಡೆ ಮತ್ತು ಕೇರಳದಲ್ಲಿ ಚುನಾವಣೆ ನಡೆಯಲಿದೆ. ಇದೀಗ ಚುನಾವಣೆ ಸಂದರ್ಭದಲ್ಲಿ ಮತದಾನ ಮಾಡಲು ರಾಜಧಾನಿ ಬೆಂಗಳೂರಿನಿಂದ ತಮ್ಮ ತಮ್ಮ ಊರಿನ ಕಡೆ ತೆರಳುವವರ ಸಂಖ್ಯೆ ಹೆಚ್ಚಾಗಿದೆ.ಹೀಗಾಗಿ ಬಸ್ ಗಳು, ರೈಲುಗಳು ಎಲ್ಲವೂ ಫುಲ್ ರಶ್!.. ಯಾವ ಬಸ್, ರೈಲು ನೋಡಿದರೂ ಸೋಲ್ಡ್ ಔಟ್ ಎಂದು ತೋರಿಸುತ್ತಿವೆ. ಬೆಂಗಳೂರಿನಿಂದ ರಾಜ್ಯದ ವಿವಿಧ ಭಾಗಗಳಿಗೆ ಹೊರಡುವ ಕೆಎಸ್ …

Read More »

ಬೆಂಗಳೂರಿನಲ್ಲಿ ಕೃತಕ ನೀರಿನ ಕೊರತೆ: ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಬೆಲ್ಲದ್ ಆರೋಪ

ಹುಬ್ಬಳ್ಳಿ, ಏಪ್ರಿಲ್ 18: ಬೆಂಗಳೂರಿನಲ್ಲಿ ನೀರಿಗೆ ಹಾಹಾಕಾರ ಸೃಷ್ಟಿಯಾಗಿದೆ. ಇದೇ ವಿಚಾರವಾಗಿ ರಾಜಕೀಯ ಪಕ್ಷಗಳು ಕೆಸರೆರಚಾಟ ಮುಂದುವರೆಸಿವೆ. ಇದೀಗ ಬೆಂಗಳೂರಿನಲ್ಲಿ ಕೃತಕ ನೀರಿನ ಕೊರತೆ ಸೃಷ್ಟಿ ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ ನಡೆಯುತ್ತಿದೆ ಎಂದು ಬಿಜೆಪಿ ಶಾಸಕ ಅರವಿಂದ್ ಬೆಲ್ಲದ್ ಆರೋಪಿಸಿದರು. ಹುಬ್ಬಳ್ಳಿಯಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಕೃತಕ ನೀರಿನ ಅಭಾವ ಸೃಷ್ಟಿಸಿ ದುಬಾರಿ ಬೆಲೆಗೆ ಟ್ಯಾಂಕರ್ ಮೂಲಕ ನೀರು ಪೂರೈಕೆ ಮಾಡುತ್ತಿದ್ದಾರೆ. ಇದು ಕಾಂಗ್ರೆಸ್ ಸರ್ಕಾರ …

Read More »

ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

ಹೊಸದಿಲ್ಲಿ: 2024ರ ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನವು ಎ. 19ರಂದು(ಶುಕ್ರವಾರ) ನಡೆಯಲಿದ್ದು, ಬುಧವಾರ ಸಂಜೆ ಬಹಿರಂಗ ಪ್ರಚಾರಕ್ಕೆ ತೆರೆ ಬಿದ್ದಿದೆ. ಒಟ್ಟು 21 ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳ 102 ಲೋಕಸಭೆ ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. ಜತೆಗೆ, ಅರುಣಾಚಲ ಮತ್ತು ಸಿಕ್ಕಿಂ ರಾಜ್ಯಗಳ ವಿಧಾನಸಭೆಗೂ ಮತದಾನ ನಡೆಯಲಿದೆ.   ಮೊದಲ ಹಂತದಲ್ಲಿ 8 ಕೇಂದ್ರ ಸಚಿವರು, ಇಬ್ಬರು ಮಾಜಿ ಮುಖ್ಯಮಂತ್ರಿಗಳು, ಒಬ್ಬರು ಮಾಜಿ ರಾಜ್ಯಪಾಲರ ಅದೃಷ್ಟ ಪರೀಕ್ಷೆ ನಡೆಯಲಿದೆ. ಮೊದಲ …

Read More »

ಬೈಕ್ ಗೆ ‌ಕಾಡು ಹಂದಿ ‌ಡಿಕ್ಕಿಯಾಗಿ ಸವಾರ ಸಾವು

ಪಾವಗಡ: ಬೈಕ್ ಗೆ ‌ಕಾಡು ಹಂದಿ ‌ಡಿಕ್ಕಿಯಾಗಿ ಸವಾರ ಮೃತಪಟ್ಟ ಘಟನೆ ಮದ್ರೇನಹಳ್ಳಿ ‌ಅರಣ್ಯ ಪ್ರದೆಶದ ಬಳಿ ನಡೆದಿದೆ. ತಾಲೂಕಿನ ಬೆಳ್ಳಿಬಟ್ಟಲ ಗ್ರಾಮದ ಗ್ರಾ.ಪಂ.ಸದಸ್ಯ ಕೃಷ್ಣಪ್ಪ ಮೃತಪಟ್ಟವರು. ಕೃಷ್ಣಪ್ಪ ಹಾಗೂ ಹೆಂಡತಿ ಗುಂಡಮ್ಮ ಏ.17 ಬುಧವಾರ ರಾತ್ರಿ 9 ಗಂಟೆಗೆ ತಾಲೂಕಿನ ಅಚ್ಚಮ್ಮನಹಳ್ಳಿ ಗ್ರಾಮದಿಂದ ತಮ್ಮ ಸ್ವಗ್ರಾಮ ಬೆಳ್ಳಿ ಬಟ್ಟಲುಗೆ ಹೋಗುವಾಗ ಶೈಲಾಪುರ ಮತ್ತು‌ಕೊಟಗುಡ್ಡ ಗ್ರಾಮಗಳ ‌ಮಧ್ಯೆ ಮದ್ರೇನಹಳ್ಳಿ ಎಂಬ ‌ಅರಣ್ಯ ಪ್ರದೆಶದ ಬಳಿ‌ ಆಕಸ್ಮಿಕವಾಗಿ ಬೈಕ್ ಗೆ ಕಾಡು ಹಂದಿಗಳು …

Read More »

ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿ

ಬೆಂಗಳೂರು: ನಿರೀಕ್ಷೆಯಂತೆ ಬಿಜೆಪಿ ಮಾಜಿ ಸಂಸದ ಕರಡಿ ಸಂಗಣ್ಣ ಸೇರಿದಂತೆ ನಿವೃತ್ತ ಐಎಎಸ್ ಅಧಿಕಾರಿ ಎ.ಎಸ್. ಪುಟ್ಟಸ್ವಾಮಿ, ದಾಸರಹಳ್ಳಿ ಕೃಷ್ಣಮೂರ್ತಿ ‘ಕೈ’ ಸೇರಿದರು. ಕೆಪಿಸಿಸಿ ಕಚೇರಿಯಲ್ಲಿ ಬುಧವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸಮ್ಮುಖದಲ್ಲಿ ಕಾಂಗ್ರೆಸ್ ಸೇರುವ ಮೂಲಕ ಮೈತ್ರಿಕೂಟಕ್ಕೆ ಮತ್ತೊಂದು ಆಘಾತ ನೀಡಿದರು. ಈ ವೇಳೆ ಮಾತನಾಡಿದ ಕರಡಿ ಸಂಗಣ್ಣ, ನಾವೆಲ್ಲರೂ ಈ ಚುನಾವಣೆಯನ್ನು ಸವಾಲಾಗಿ ಸ್ವೀಕರಿಸಿದ್ದು, ಶತಾಯಗತಾಯ ಕೊಪ್ಪಳದಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಾಘವೇಂದ್ರ ಹಿಟ್ನಾಳ್ …

Read More »

ರಾಜ್ಯದಲ್ಲಿ ನಾವು 18 -20 ಸೀಟ್‌ ಗೆಲ್ಲುತ್ತೇವೆ; ಸಚಿವ ಶಿವಾನಂದ ಪಾಟೀಲ

ಹಾವೇರಿ: ರಾಜ್ಯದಲ್ಲಿ ಕಾಂಗ್ರೆಸ್ ಕನಿಷ್ಠ 18 ರಿಂದ 20 ಸೀಟ್ ಗೆಲ್ಲುತ್ತೇವೆ. ಉತ್ತರ ಕರ್ನಾಟಕದಲ್ಲಿ ಅತಿ ಹೆಚ್ಚು ಸ್ಥಾನ ಗೆಲ್ಲುವ ಸಾಧ್ಯತೆ ಹೆಚ್ಚಾಗಿದೆ ಎಂದು ಸಚಿವ ಶಿವಾನಂದ ಪಾಟೀಲ ಹೇಳಿದರು. ನಗರದಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯನವರು ಮುಂದುವರೆಯುತ್ತಾರೆ. ಡಿಸಿಎಂ ಆಗಿ ಡಿಕೆಶಿಯವರು ಮುಂದುವರೆಯುತ್ತಾರೆ. ಅವರವರ ಎರಡು ಖುರ್ಚಿಗಳು ಫುಲ್ಲಾಗಿದೆ ಎಂದರು. ಈಶ್ವರಪ್ಪ ನವರು ಎಲ್ಲಾ ತಯಾರಿ ಮಾಡಿದ್ದರು, ಬೊಮ್ಮಾಯಿಯವರು ಅವರಿಗೆ ಹೇಳದೆ ಬಂದರು. ಈಶ್ವರಪ್ಪ ನವರ ಗತಿ ಏನಾಯ್ತು.ಬೊಮ್ಮಾಯಿ ಒಬ್ಬ ಮುಖ್ಯಮಂತ್ರಿ …

Read More »

ರಾಜ್ಯದಲ್ಲಿ ಇಂದು, ನಾಳೆ ಸಿಇಟಿ; ದಾಖಲೆಯ ಮೂರೂವರೆ ಲಕ್ಷ ವಿದ್ಯಾರ್ಥಿಗಳ ನೋಂದಣಿ

ರಾಜ್ಯದಲ್ಲಿ ಇಂದು, ನಾಳೆ ಸಿಇಟಿ; ದಾಖಲೆಯ ಮೂರೂವರೆ ಲಕ್ಷ ವಿದ್ಯಾರ್ಥಿಗಳ ನೋಂದಣಿ ಬೆಂಗಳೂರು: ರಾಜ್ಯದಲ್ಲಿ ವೃತ್ತಿಪರ ಕೋರ್ಸ್‌ಗಳ ಪ್ರವೇಶ ಪರೀಕ್ಷೆ ಸಿಇಟಿ ಗುರುವಾರದಿಂದ ಆರಂಭಗೊಳ್ಳಲಿದ್ದು ದಾಖಲೆಯ 3.49 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ನೋಂದಾಯಿಸಿಕೊಂಡಿದ್ದಾರೆ. ರಾಜ್ಯಾದ್ಯಂತ 737 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಕಳೆದ ವರ್ಷ 2.60 ಲಕ್ಷ ವಿದ್ಯಾರ್ಥಿಗಳು ಸಿಇಟಿ ಪರೀಕ್ಷೆ ಬರೆದಿದ್ದು ಈವರೆಗಿನ ದಾಖಲೆಯಾಗಿತ್ತು. ಆದರೆ ಈ ವರ್ಷ ಸುಮಾರು ಮೂರೂವರೆ ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ನೋಂದಾಯಿಸಿಕೊಂಡಿದ್ದು ಹೊಸ …

Read More »

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು ಬೆಂಗಳೂರು: ಮೊದಲ ಹಂತದಲ್ಲಿ ಮತದಾನ ನಡೆಯುವ ರಾಜ್ಯದ 14 ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಏ.20ರಿಂದ 24ರವರೆಗೆ ಭರ್ಜರಿ ಮತಬೇಟೆಗೆ ಬಿಜೆಪಿ ಸಿದ್ಧತೆ ನಡೆಸಿದ್ದು, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಬಿಜೆಪಿಯ ರಾಷ್ಟ್ರೀಯ ನಾಯಕರು ಪ್ರಚಾರ ನಡೆಸಲಿದ್ದಾರೆ.   ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್‌ ಶಾ, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ, ಬಿಜೆಪಿ ರಾಷ್ಟ್ರೀಯ …

Read More »