ಬೆಳಗಾವಿ : ಬೆಳಗಾವಿಯಲ್ಲಿಂದು ಪ್ರವಾದಿ ಮೊಹಮ್ಮದ್ ಪೈಗಂಬರ್ ಅವರ ಜನ್ಮದಿನ ನಿಮಿತ್ತ ಆಯೋಜಿಸಿದ್ದ ಈದ್-ಮಿಲಾದ್ ಮೆರವಣಿಗೆ ವಿಜೃಂಭಣೆಯಿಂದ ಜರುಗಿದ್ದು, ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳ ಮುಖಂಡರೂ ಕೂಡ ಸಾಥ್ ನೀಡುವ ಮೂಲಕ ಭಾವೈಕ್ಯತೆ ಮೆರೆದರು. ಪ್ರತಿ ವರ್ಷ ಈದ್-ಮಿಲಾದ್ ದಿನವೇ ಮೆರವಣಿಗೆ ನಡೆಯುತ್ತಿತ್ತು. ಈ ಬಾರಿಯೂ ಸೆಪ್ಟೆಂಬರ್ 28ರಂದು ಹಬ್ಬದ ದಿನವೇ ಮೆರವಣಿಗೆಗೆ ಎಲ್ಲ ರೀತಿ ಸಿದ್ಧತೆಯನ್ನು ಮುಸ್ಲಿಂ ಸಮುದಾಯದವರು ಮಾಡಿಕೊಂಡಿದ್ದರು. ಆದರೆ, ಅದೇ ದಿನ ಸಾರ್ವಜನಿಕ ಗಣೇಶ ಮೂರ್ತಿಗಳ ನಿಮಜ್ಜನೆ …
Read More »ನಿಮಗೆ ಕಾಂಗ್ರೆಸ್‌ನಲ್ಲಿ 7 ಮಂತ್ರಿ ಸ್ಥಾನ ಕೊಟ್ಟಿದ್ದಾರೆ. ಇನ್ನೆಷ್ಟುಬೇಕಿತ್ತು?ಶಾಮನೂರು ಶಿವಶಂಕರಪ್ಪನವರು ಒಂದು ಜಾತಿಯ ಪಕ್ಷದ ಪ್ರತಿನಿಧಿಯಂತೆ ಮಾತನಾಡುತ್ತಿರುವುದನ್ನು ನಾನು ಖಂಡಿಸುತ್ತೇನೆ
ಬೆಳಗಾವಿ: ಜಾತ್ಯತೀತ ತತ್ವದ ಮೇಲೆ ನಂಬಿಕೆ ಇಟ್ಟಿರುವ ಕಾಂಗ್ರೆಸ್ ಪಕ್ಷದ ಪ್ರತಿನಿಧಿಯಾದ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪನವರು ಒಂದು ಜಾತಿಯ ಪಕ್ಷದ ಪ್ರತಿನಿಧಿಯಂತೆ ಮಾತನಾಡುತ್ತಿರುವುದನ್ನು ನಾನು ಖಂಡಿಸುತ್ತೇನೆ ಎಂದು ವಿಧಾನ ಪರಿಷತ್ ಸದಸ್ಯ, ಮಾಜಿ ಸಚಿವ ಹೆಚ್.ವಿಶ್ವನಾಥ್ ಹೇಳಿದರು. “ನಿಮಗೆ ಕಾಂಗ್ರೆಸ್‌ನಲ್ಲಿ ಅವಕಾಶಗಳು ಸಿಕ್ಕಿವೆ. 33 ಸಚಿವರಲ್ಲಿ ಏಳು ಮಂತ್ರಿ ಸ್ಥಾನ ಕೊಟ್ಟಿದ್ದಾರೆ. ಇನ್ನೆಷ್ಟು ಸ್ಥಾನ ಬೇಕಿತ್ತು” ಎಂದು ಅವರು ಪ್ರಶ್ನಿಸಿದರು. ಅಖಿತ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಅಧ್ಯಕ್ಷರೂ ಆದ …
Read More »ಸಿಎಂ ಸ್ಥಾನದ ಬಯಕೆ ಹೊಂದಿದ್ದ ಹೆಚ್.ಡಿ.ಕುಮಾರಸ್ವಾಮಿ ಹತಾಶರಾಗಿದ್ದಾರೆ: ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹತಾಶರಾಗಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ವಿಶೇಷಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ನಿರ್ದೇಶನಾಲಯದ ವತಿಯಿಂದ ರವೀಂದ್ರ ಕಲಾಕ್ಷೇತ್ರದಲ್ಲಿ ಇಂದು ಹಮ್ಮಿಕೊಂಡಿದ್ದ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಆರು ತಿಂಗಳಲ್ಲಿ ಸರ್ಕಾರ ಬೀಳಲಿದೆ ಎಂಬ ಹೆಚ್.ಡಿ.ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯಿಸಿ, ಅವರು ಹತಾಶರಾಗಿದ್ದಾರೆ. ಸಮ್ಮಿಶ್ರ ಸರ್ಕಾರ ಬರುತ್ತದೆ, ನಾನೇ ಮುಖ್ಯಮಂತ್ರಿಯಾಗುತ್ತೇನೆ ಎಂದುಕೊಂಡಿದ್ದರು. ಈಗ ಭ್ರಮನಿರಸನಗೊಂಡಿದ್ದಾರೆ. ಹಾಗಾಗಿ ಈ ರೀತಿ …
Read More »ಭದ್ರಾವತಿ ಬಳಿ ಲಾರಿ ಓವರ್ಟೇಕ್ ವೇಳೆ ಭೀಕರ ಅಪಘಾತ: ಬೈಕ್ನಲ್ಲಿದ್ದ ಮೂವರು ಬಾಲಕರ ದುರ್ಮರಣ
ಶಿವಮೊಗ್ಗ: ಲಾರಿ ಹಾಗೂ ಎರಡು ಬೈಕ್ಗಳ ನಡುವೆ ಡಿಕ್ಕಿ ಸಂಭವಿಸಿ ಸ್ಥಳದಲ್ಲಿಯೇ ಮೂವರು ಸಾವನ್ನಪ್ಪಿ, ಓರ್ವ ಗಾಯಗೊಂಡಿರುವ ಘಟನೆ ಭದ್ರಾವತಿ ತಾಲೂಕು ಕಲ್ಲಿಹಾಳ್ ಹಾಗೂ ಅರಹತೊಳಲು ಗ್ರಾಮದ ನಡುವೆ ಕಳೆದ ರಾತ್ರಿ ನಡೆದಿದೆ. ಮರದ ತುಂಡು ತುಂಬಿಕೊಂಡು ಹೊರಟಿದ್ದ ಲಾರಿಗೆ ಬೈಕ್ಗಳು ಮಧ್ಯದಿಂದ ಬಂದು ಡಿಕ್ಕಿ ಹೊಡೆದಿವೆ ಎಂದು ತಿಳಿದುಬಂದಿದೆ. ಒಂದು ಬೈಕ್ನಲ್ಲಿದ್ದ ಮೂವರು ಅಪ್ರಾಪ್ತರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಮೃತರನ್ನು ಭದ್ರಾವತಿ ತಾಲೂಕು ಜಂಬರಘಟ್ಟ ಗ್ರಾಮದ ಶಶಾಂಕ್(17), ಯಶವಂತ್(17) ಹಾಗೂ ವಿಕಾಸ್(17) …
Read More »ವಾಣಿಜ್ಯ ಸಿಲಿಂಡರ್ ಬೆಲೆ 209 ರೂ ಏರಿಕೆ.. ಹೋಟೆಲ್ ಉದ್ಯಮಿಗಳಿಗೆ ಶಾಕ್
ನವದೆಹಲಿ : ವಾಣಿಜ್ಯ ಅಡುಗೆ ಅನಿಲ (ಎಲ್‌ಪಿಜಿ) ದರ 19 ಕೆಜಿ ಸಿಲಿಂಡರ್‌ಗೆ 209 ರೂ. ಗಳಷ್ಟು ಹೆಚ್ಚಿಸಲಾಗಿದೆ. ಇದರಿಂದ ಹೋಟೆಲ್ ಆಹಾರ ಪದಾರ್ಥಗಳ ಬೆಲೆ ಏರಿಕೆಯಾಗುವ ಸಾಧ್ಯತೆ ಇದ್ದು, ಗ್ರಾಹಕರ ಜೇಬಿಗೆ ಕತ್ತರಿ ಬೀಳಲಿದೆ. ಸದ್ಯ ಗೃಹಬಳಕೆಯ ಎಲ್‌ಪಿಜಿಯ ಬೆಲೆ ಪ್ರತಿ 14.2 ಕೆಜಿ ಸಿಲಿಂಡರ್‌ಗೆ ರೂ. 903 ರಷ್ಟಿದೆ. ಇದೇ ವೇಳೆ ವಿಮಾನಯಾನ ಇಂಧನದ ಬೆಲೆಯನ್ನು ಹೆಚ್ಚಿಸಲಾಗಿದೆ. ಕೆಲವೇ ದಿನಗಳಲ್ಲಿ ದೇಶದಲ್ಲಿ ದಸರಾ, ದೀಪಾವಳಿ ಸೇರಿದಂತೆ ಹಬ್ಬದ ಸೀಸನ್ …
Read More »ಇನ್ಫೊಸಿಸ್ ಫೌಂಡೇಶನ್ ಅಧ್ಯಕ್ಷೆ ಸುಧಾ ಮೂರ್ತಿಯವರಿಗೆ ‘ಗ್ಲೋಬಲ್ ಇಂಡಿಯನ್ ಪ್ರಶಸ್ತಿ’ ಪ್ರದಾನ
ಟೊರೊಂಟೊ : ಖ್ಯಾತ ಲೇಖಕಿ, ಸಮಾಜ ಸೇವಕಿ, ಇನ್ಫೊಸಿಸ್ ಫೌಂಡೇಶನ್ ಮುಖ್ಯಸ್ಥೆ ಮತ್ತು ಇನ್ಫೋಸಿಸ್ ಸಹ ಸಂಸ್ಥಾಪಕ ಎನ್.ಆರ್.ನಾರಾಯಣ ಮೂರ್ತಿ ಅವರ ಪತ್ನಿ ಸುಧಾ ಮೂರ್ತಿ ಅವರಿಗೆ ಕೆನಡಾ ಇಂಡಿಯಾ ಫೌಂಡೇಶನ್ ‘ಗ್ಲೋಬಲ್ ಇಂಡಿಯನ್ ಪ್ರಶಸ್ತಿ’ ನೀಡಿ ಗೌರವಿಸಿದೆ. 50,000 ಡಾಲರ್ ಮೌಲ್ಯದ ಗ್ಲೋಬಲ್ ಇಂಡಿಯನ್ ಪ್ರಶಸ್ತಿಯನ್ನು ಪ್ರತಿ ವರ್ಷ ತಾವು ಆಯ್ಕೆ ಮಾಡಿದ ಕ್ಷೇತ್ರದಲ್ಲಿ ಪ್ರಮುಖ ಛಾಪು ಮೂಡಿಸಿದ ಭಾರತೀಯರಿಗೆ ನೀಡಲಾಗುತ್ತದೆ. “ಸುಧಾ ಮೂರ್ತಿ ಅವರಿಗೆ ಗ್ಲೋಬಲ್ ಇಂಡಿಯನ್ ಪ್ರಶಸ್ತಿ …
Read More »ಸಿಎಂ ಸ್ಥಾನದ ಬಯಕೆ ಹೊಂದಿದ್ದ ಹೆಚ್.ಡಿ.ಕುಮಾರಸ್ವಾಮಿ ಹತಾಶರಾಗಿದ್ದಾರೆ:ಸಿದ್ದರಾಮಯ್ಯ
ಬೆಂಗಳೂರು: ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹತಾಶರಾಗಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ವಿಶೇಷಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ನಿರ್ದೇಶನಾಲಯದ ವತಿಯಿಂದ ರವೀಂದ್ರ ಕಲಾಕ್ಷೇತ್ರದಲ್ಲಿ ಇಂದು ಹಮ್ಮಿಕೊಂಡಿದ್ದ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಆರು ತಿಂಗಳಲ್ಲಿ ಸರ್ಕಾರ ಬೀಳಲಿದೆ ಎಂಬ ಹೆಚ್.ಡಿ.ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯಿಸಿ, ಅವರು ಹತಾಶರಾಗಿದ್ದಾರೆ. ಸಮ್ಮಿಶ್ರ ಸರ್ಕಾರ ಬರುತ್ತದೆ, ನಾನೇ ಮುಖ್ಯಮಂತ್ರಿಯಾಗುತ್ತೇನೆ ಎಂದುಕೊಂಡಿದ್ದರು. ಈಗ ಭ್ರಮನಿರಸನಗೊಂಡಿದ್ದಾರೆ. ಹಾಗಾಗಿ ಈ ರೀತಿ …
Read More »ನಟ ನಾಗಭೂಷಣ್ ಅವರ ಕಾರು ಅಪಘಾತಕ್ಕೊಳಗಾಗಿ, ಓರ್ವ ಮಹಿಳೆ ಕೊನೆಯುಸಿರೆಳೆದಿದ್ದಾರೆ.
ಬೆಂಗಳೂರು: ಕನ್ನಡ ಚಿತ್ರರಂಗದಲ್ಲಿ ಗುರುತಿಸಿಕೊಂಡಿರುವ ನಟ ನಾಗಭೂಷಣ್ ಅವರ ಕಾರು ಅಪಘಾತಕ್ಕೊಳಗಾಗಿ, ಓರ್ವ ಮಹಿಳೆ ಕೊನೆಯುಸಿರೆಳೆದಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ. ಉತ್ತರಹಳ್ಳಿಯಿಂದ ಕೋಣನಕುಂಟೆ ಕ್ರಾಸ್ ದಾರಿ ಮಧ್ಯೆ ಶನಿವಾರ ತಡರಾತ್ರಿ 9:45ರ ಸುಮಾರಿಗೆ ಈ ಘಟನೆ ನಡೆದಿದೆ. ಸ್ನೇಹಿತರನ್ನು ಭೇಟಿಯಾಗಿ ಜೆ.ಪಿ ನಗರದ ತಮ್ಮ ಮನೆಗೆ ನಟ ನಾಗಭೂಷಣ್ ತೆರಳುತ್ತಿದ್ದರು. ಫುಟ್ ಪಾತ್ ಮೇಲೆ ವಾಕಿಂಗ್ ಮಾಡುತ್ತಿದ್ದ ದಂಪತಿ ರಸ್ತೆಗಿಳಿದ ಪರಿಣಾಮ ಕಾರು ಡಿಕ್ಕಿ ಹೊಡೆದಿದೆ …
Read More »ಪರೀಕ್ಷೆ ಬರೆಯುತ್ತಿದ್ದ ವೇಳೆ ವಿದ್ಯಾರ್ಥಿ ಹೃದಯಾಘಾತದಿಂದ ಸಾವು
ಬಾಗಲಕೋಟೆ: ಪರೀಕ್ಷೆ ಬರೆಯುತ್ತಿದ್ದ ವೇಳೆಯೇ ವಿದ್ಯಾರ್ಥಿಯೊಬ್ಬ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಜಿಲ್ಲೆಯ ಜಮಖಂಡಿ ತಾಲೂಕಿನ ಹುಲ್ಯಾಳ ಗ್ರಾಮದಲ್ಲಿ ನಡೆದಿದೆ. 9ನೇ ತರಗತಿಯಲ್ಲಿ ಅಧ್ಯಯನ ಮಾಡುತ್ತಿದ್ದ ಬಾಲಕ ಅರ್ಧ ವಾರ್ಷಿಕ ಪರೀಕ್ಷೆ ಬರೆಯಲು ಶಾಲೆಗೆ ಹೋದ ವೇಳೆ ಈ ಘಟನೆ ಸಂಭವಿಸಿದೆ. ರಾಹುಲ್ ಕೋಲಕಾರ (15) ಮೃತ ವಿದ್ಯಾರ್ಥಿ. ಅರ್ಧ ವಾರ್ಷಿಕ ಪರೀಕ್ಷೆ ಬರೆಯುತ್ತಿದ್ದ ವೇಳೆ ಬಾಲಕನಿಗೆ ಎದೆ ನೋವು ಕಾಣಿಸಿಕೊಂಡಿದೆ. ತೀವ್ರವಾಗಿ ತೊಂದರೆ ಉಂಟಾದಾಗ ಶಿಕ್ಷಕರು ಹಾಗೂ ಇತರ ಶಾಲಾ ಸಿಬ್ಬಂದಿ …
Read More »ಸವದತ್ತಿ ತಾಲೂಕಿನ ಉಗರಗೋಳ ಸಮೀಪದ ಯಲ್ಲಮ್ಮ ದೇವಿ ದೇವಸ್ಥಾನದಲ್ಲಿ 1.03 ಕೋಟಿ ರೂ. ಮೌಲ್ಯದ ಕಾಣಿಕೆ ಸಂಗ್ರಹವಾಗಿದೆ
ಬೆಳಗಾವಿ: ಯಲ್ಲಮ್ಮದೇವಿ ಉತ್ತರ ಕರ್ನಾಟಕದ ಆರಾಧ್ಯ ದೇವಿ. ಲಕ್ಷಾಂತರ ಸಂಖ್ಯೆಯ ಭಕ್ತರು ಭೇಟಿ ಕೊಡುವ ಸವದತ್ತಿ ತಾಲೂಕಿನ ಉಗರಗೋಳ ಸಮೀಪದ ಯಲ್ಲಮ್ಮನಗುಡ್ಡದಲ್ಲಿ ಶನಿವಾರ ಹುಂಡಿ ಎಣಿಕೆ ಕಾರ್ಯ ನಡೆಯಿತು. 40 ದಿನಗಳ ಅವಧಿಯಲ್ಲಿ ಬರೋಬ್ಬರಿ 1.03 ಕೋಟಿ ರೂ. ಮೌಲ್ಯದ ಕಾಣಿಕೆ ಸಂಗ್ರಹವಾಗಿದೆ. ಎರಡು ಹಂತದಲ್ಲಿ ಹುಂಡಿ ಎಣಿಕೆ ಕಾರ್ಯ: ಏಳುಕೊಳ್ಳದ ಯಲ್ಲಮ್ಮ ದೇವಿಯ ದರ್ಶನಕ್ಕೆ ಕರ್ನಾಟಕ ಅಷ್ಟೇ ಅಲ್ಲದೇ, ನೆರೆಯ ಮಹಾರಾಷ್ಟ್ರ, ಗೋವಾ, ತಮಿಳುನಾಡು, ಆಂಧ್ರಪ್ರದೇಶ ರಾಜ್ಯಗಳಿಂದಲೂ ಲಕ್ಷಾಂತರ ಭಕ್ತರು …
Read More »
Laxmi News 24×7