ನಾಳೆ ನಡೆಯುವ ಬೆಂಗಳೂರು ಬಂದ್‌ಗೆ 150ಕ್ಕೂ ಹೆಚ್ಚು ಸಂಘಟನೆಗಳು ಬೆಂಬಲ ಸೂಚಿಸಿವೆ. ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸಿರುವುದನ್ನು ಖಂಡಿಸಿ ವಿವಿಧ ಸಂಘಟನೆಗಳು ಕರೆ ಕೊಟ್ಟಿರುವ ಮಂಗಳವಾರದ ಬೆಂಗಳೂರು ಬಂದ್‌ಗೆ ರಾಜ್ಯ ರಾಜಧಾನಿ ಬಹುತೇಕ ಸ್ತಬ್ಧವಾಗಲಿದೆ. ಬೆಳಗ್ಗೆ 6 ರಿಂದ ಸಂಜೆ 6ರ ವರೆಗೆ ಬೆಂಗಳೂರು ಬಂದ್ ಆಗಲಿದೆ. ಶಾಲಾ ಕಾಲೇಜುಗಳಿಗೂ ರಜೆ ಇರಲಿದೆ. ಸಿನಿಮಾ, ಟ್ಯಾಕ್ಸಿ, ಐಟಿ-ಬಿಟಿ, ಹೋಟೆಲ್ ಮಾಲೀಕರು ಸ್ವಯಂಪ್ರೇರಿತವಾಗಿ ಬಂದ್ ಮಾಡಿ ಬೆಂಬಲ ವ್ಯಕ್ತಪಡಿಸಬೇಕೆಂದು ಸಂಘಟನೆಗಳು ಕೋರಿವೆ. …
Read More »ಬೆಳಗಾವಿ ನಗರ ವ್ಯಾಪ್ತಿಯಲ್ಲಿ ಉರುಳುವ ಹಂತದಲ್ಲಿರುವ ಬೃಹತ್ ಮರಗಳು : ತೆರವುಗೊಳಿಸಲು ಸಾರ್ವಜನಿಕರ ಒತ್ತಾಯ
ಬೆಳಗಾವಿ : ನಗರ ವ್ಯಾಪ್ತಿಯಲ್ಲಿ ಹಲವು ಬೃಹತ್ ಮರಗಳು ಉರುಳುವ ಹಂತ ತಲುಪಿದ್ದು, ಈ ಮರಗಳನ್ನು ತೆರವುಗೊಳಿಸುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ. ಈ ಹಿಂದೆ ಬಿರುಗಾಳಿ ಸಹಿತ ಭಾರಿ ಮಳೆಗೆ ನಗರ ವ್ಯಾಪ್ತಿಯಲ್ಲಿ ಹಲವು ಕಡೆ ಮರಗಳು ಉರುಳಿ ಜೀವಹಾನಿ ಸಂಭವಿಸಿತ್ತು. ಆದರೂ ಅರಣ್ಯ ಇಲಾಖೆ ಮತ್ತು ಪಾಲಿಕೆ ಅಧಿಕಾರಿಗಳು ಯಾವುದೇ ಕ್ರಮಕೈಗೊಂಡಿಲ್ಲ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ. ಕಳೆದ 2022ರ ಸೆಪ್ಟೆಂಬರ್ನಲ್ಲಿ ಬೆಳಗಾವಿ ನಗರದಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗಿತ್ತು. ಸೆಪ್ಟೆಂಬರ್ 13ರಂದು …
Read More »ಹೆಚ್ ಡಿ ಕುಮಾರಣ್ಣ ಅವರು ಬಿಸಿಲು ಬಂದಾಗ ಛತ್ರಿ ಹಿಡಿಯುತ್ತಾರೆ ಎಂದು ಶಾಸಕ ಲಕ್ಷ್ಮಣ್ ಸವದಿ
ಬೆಳಗಾವಿ : ಹೆಚ್ ಡಿ ಕುಮಾರಣ್ಣ ಅವರು ಬಿಸಿಲು ಬಂದಾಗ ಛತ್ರಿ ಹಿಡಿಯುತ್ತಾರೆ ಎಂದು ಶಾಸಕ ಲಕ್ಷ್ಮಣ್ ಸವದಿ ಅವರು ಮಾಜಿ ಸಿಎಂ ಕುಮಾರಸ್ವಾಮಿ ಕುರಿತು ವ್ಯಂಗ್ಯವಾಡಿದರು. ಐಎನ್ಡಿಐಎ ಒಕ್ಕೂಟದ ಓಲೈಕೆಗೆ ರಾಜ್ಯ ಸರ್ಕಾರವು ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿದೆ ಎಂಬ ಹೆಚ್ಡಿಕೆ ಹೇಳಿಕೆ ವಿಚಾರವಾಗಿ ಸವದಿ ಅವರು ಅಥಣಿ ಪಟ್ಟಣದಲ್ಲಿ ಮಾಧ್ಯಮಗಳ ಜೊತೆ ಮಾತನಾಡುತ್ತಾ, ಕುಮಾರಣ್ಣ ಬಿಸಿಲು ಬಂದಾಗ ಛತ್ರಿ ಹಿಡಿಯುತ್ತಾರೆ. “ಹೆಂಗೆಂಗ್ ಬಿಸಿಲು ಬರ್ತದೆ, ಹಂಗಂಗ್ ಕೊಡೆ …
Read More »ಬೆಳಿಗ್ಗೆ 11 ಗಂಟೆಗೆ ಬೆಳಗಾವಿಯಲ್ಲಿ ಜನತಾ ದರ್ಶನ… :ಸತೀಶ್ ಜಾರಕಿಹೊಳಿ
ಮಂಗಳವಾರ ಬೆಳಗಾವಿಯಲ್ಲಿ ಜನತಾ ದರ್ಶನ…ಜನರ ಸಮಸ್ಯೆಗಳನ್ನು ಆಲಿಸಿ ಸ್ಥಳೀಯವಾಗಿ ಪರಿಹರಿಸಲು ಮಾನ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿಅವರು ಮಂಗಳವಾರ(ಸೆ.26) ಬೆಳಿಗ್ಗೆ 11 ಗಂಟೆಗೆ ಬೆಳಗಾವಿಯ ನೆಹರೂ ನಗರದಲ್ಲಿರುವ ಕೆಪಿಟಿಸಿಎಲ್ ಭವನದಲ್ಲಿ “ಜನತಾ ದರ್ಶನ” ನಡೆಸಲಿದ್ದಾರೆ.
Read More »ಬೆಳಗಾವಿ ಮತ್ತು ಖಾನಾಪುರವನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸಿ ಅನ್ನದಾತರ ಪ್ರತಿಭಟನೆ
ಬೆಳಗಾವಿ: ರಾಜ್ಯದಲ್ಲಿ ಮುಂಗಾರು ಮಳೆ ಕೈ ಕೊಟ್ಟಿದ್ದರಿಂದ ಅನ್ನದಾತರು ಸಂಕಷ್ಟದಲ್ಲಿದ್ದಾರೆ. ಮಳೆ ಅಭಾವದಿಂದ ಸಾಲ ಸೂಲ ಮಾಡಿ ಬೆಳೆ ಬಿತ್ತಿದ್ದ ರೈತರು ಕಂಗಾಲಾಗಿದ್ದಾರೆ. ಇನ್ನು ಬರಪೀಡಿತ ತಾಲೂಕುಗಳ ಪಟ್ಟಿಯಿಂದ ಕೈ ಬಿಟ್ಟಿರುವ ಬೆಳಗಾವಿ ಮತ್ತು ಖಾನಾಪುರವನ್ನು ಪಟ್ಟಿಗೆ ಸೇರಿಸಿ, ಬೆಳೆ ಹಾನಿಗೆ ಸೂಕ್ತ ಪರಿಹಾರ ಘೋಷಿಸುವಂತೆ ಆಗ್ರಹಿಸಿ ನೇಗಿಲಯೋಗಿ ರೈತ ಸೇವಾ ಸಂಘದಿಂದ ಪ್ರತಿಭಟನೆ ನಡೆಯಿತು. ಹಾಳಾದ ಭತ್ತ, ಆಲೂಗಡ್ಡೆ, ಗೆಣಸು ಸೇರಿ ಇನ್ನಿತರ ಬೆಳೆಗಳನ್ನು ಕೈಯಲ್ಲಿ ಹಿಡಿದುಕೊಂಡು ಮೆರವಣಿಗೆ ಮೂಲಕ …
Read More »ಹೆಚ್ ಡಿ ಕುಮಾರಸ್ವಾಮಿ ಅಸ್ತಿತ್ವ ಉಳಿಸಿಕೊಳ್ಳಲು ದೆಹಲಿಗೆ ತೆರಳಿ ಕಾಲಿಗೆ ಬಿದ್ದು ಬಂದಿದ್ದಾರೆ: ಸಚಿವ ಪ್ರಿಯಾಂಕ್ ಖರ್ಗೆ
ಕಲಬುರಗಿ : ಮಾಜಿ ಮುಖ್ಯಮಂತ್ರಿಹೆಚ್ ಡಿಕುಮಾರಸ್ವಾಮಿ ಅವರು ಅಸ್ತಿತ್ವ ಉಳಿಸಿಕೊಳ್ಳಲು ದೆಹಲಿಗೆ ಹೋಗಿ ಬಿಜೆಪಿಯ ಎಲ್ಲಾ ಮುಖಂಡರಿಗೆ ಕಾಲಿಗೆ ಬಿದ್ದು ಬಂದಿದ್ದಾರೆ ಎಂದು ಚಿಂಚೋಳಿ ಜನಸ್ಪಂದನ ಕಾರ್ಯಕ್ರಮದಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಟೀಕೆ ಮಾಡಿದ್ದಾರೆ. ರಾಜ್ಯದ ಹಿತದೃಷ್ಠಿಯಿಂದಲ್ಲ, ಪ್ರಧಾನಿ ಬಳಿ ಅವರ ಅಸ್ತಿತ್ವ ಉಳಿಸಿಕೊಳ್ಳಲು ಹೋಗಿದ್ದಾರಾ? ಅಥವಾ ಅವರು ಕಾವೇರಿ ವಿಚಾರ ಚರ್ಚೆ ಮಾಡಿದ್ರಾ? ಎಂದು ಪ್ರಶ್ನಿಸಿದರು. ಹೋಮ್ ಮಿನಿಸ್ಟರ್ ಹತ್ತಿರ ಹೋದ್ರು. ಜೆ ಪಿ ನಡ್ಡಾ ಅವರ ಹತ್ತಿರ ಹೋದ್ರು. …
Read More »ಕಾವೇರಿ ಕಿಚ್ಚು: ಎರಡು ಬಣಗಳ ನಡುವೆ ಮೂಡದ ಒಮ್ಮತ… ನಾಳೆ ಬೆಂಗಳೂರು, ಸೆ.29ಕ್ಕೆ ಕರ್ನಾಟಕ ಬಂದ್
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನ ಖಂಡಿಸಿ ನಾಳಿನ ಬೆಂಗಳೂರು ಬಂದ್ ಜೊತೆ ಸೆ.29ರಂದು ಕರ್ನಾಟಕ ಬಂದ್ ನಡೆಯಲಿದೆ. ಈ ಮೂಲಕ ಕನ್ನಡ ಹಾಗೂ ರೈತಪರ ಸಂಘಟನೆಗಳು ಸೇರಿ ವಿವಿಧ ಸಂಘ ಸಂಸ್ಥೆಗಳು ಒಂದೇ ವಾರದಲ್ಲಿ ಎರಡು ಬಂದ್ ಮೂಲಕ ರಾಜ್ಯ ಸರ್ಕಾರದ ಮೇಲೆ ಒತ್ತಡ ಹೇರಲಿವೆ. ಕಾವೇರಿ ಕಣಿವೆಯಲ್ಲಿ ಮಳೆ ಕೊರತೆ ಹಿನ್ನೆಲೆಯಲ್ಲಿ ಕೆಆರ್ಎಸ್ ಜಲಾಶಯ ಸೇರಿ ವಿವಿಧ ಡ್ಯಾಂಗಳಲ್ಲಿ ನೀರು ಬರಿದಾಗಿದೆ. ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ತಮಿಳುನಾಡಿಗೆ ನೀರು …
Read More »ಬೆಂಗಳೂರಿನ ಜಲಸಂಕಷ್ಟ ತಪ್ಪಿಸಲು ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಬಿಜೆಪಿ ಆಗ್ರಹ
ಬೆಂಗಳೂರು : ಬೆಂಗಳೂರು ಮಹಾನಗರದ ಭವಿಷ್ಯದ ಜಲಸಂಕಷ್ಟ ತಪ್ಪಿಸಲು ಮೇಕೆದಾಟು ಯೋಜನೆ ಜಾರಿ ಮಾಡಲು ಬಿಜೆಪಿ ಆಗ್ರಹಿಸಿದೆ. ಈ ಸಂಬಂಧ ಇಂದು ಬಿಜೆಪಿ ನಿಯೋಗವು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಚೇರ್ಮನ್ ಅವರಿಗೆ ಮನವಿ ಸಲ್ಲಿಸುವ ಮೂಲಕ ಒತ್ತಾಯಿಸಿತು. ಕೆ ಜಿ ರಸ್ತೆಯಲ್ಲಿರುವ ಕಾವೇರಿ ಭವನದಲ್ಲಿ ಜಲ ಮಂಡಳಿ ಎದುರು ಬಿಜೆಪಿ ಪ್ರತಿಭಟನೆ ನಡೆಸಿತು. ನಂತರ ಅಧ್ಯಕ್ಷರನ್ನು ಭೇಟಿಯಾದ ಬಿಜೆಪಿ ನಿಯೋಗ, ಮುಂಬರುವ ದಿನಗಳಲ್ಲಿ ಬೆಂಗಳೂರು ಮಹಾನಗರಕ್ಕೆ …
Read More »ಪಿಎಸ್‌ಐ ನೇಮಕಾತಿ ಹಗರಣ: ಐಪಿಎಸ್ ಅಧಿಕಾರಿ ಅಮೃತ್ ಪಾಲ್ಗೆ ಷರತ್ತು ಬದ್ದ ಜಾಮೀನು
ಪಿಎಸ್‌ಐ ನೇಮಕಾತಿ ಹಗರಣ ಸಂಬಂಧ ಹಿರಿಯ ಐಪಿಎಸ್ ಅಧಿಕಾರಿ ಅಮೃತ್ ಪಾಲ್ ಅವರಿಗೆ ಕರ್ನಾಟಕ ಹೈಕೋರ್ಟ್ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ. ಬೆಂಗಳೂರು: ಪಿಎಸ್‌ಐ ನೇಮಕಾತಿ ಹಗರಣ ಸಂಬಂಧ ಹಿರಿಯ ಐಪಿಎಸ್ ಅಧಿಕಾರಿ ಅಮೃತ್ ಪಾಲ್ ಅವರಿಗೆ ಕರ್ನಾಟಕ ಹೈಕೋರ್ಟ್ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ. ಕೋರ್ಟ್ ಆನುಮತಿಯಿಲ್ಲದೇ ವಿದೇಶಕ್ಕೆ ಪ್ರಯಾಣಿಸುವಂತಿಲ್ಲ, ಸಾಕ್ಷಿಗಳ ಮೇಲೆ ಪ್ರಭಾವ ಬೀರಬಾರದು. 5 ಲಕ್ಷ ಮೌಲ್ಯದ ಬಾಂಡ್ ಇಬ್ಬರು ಶ್ಯೂರಿಟಿ ಒದಗಿಸುವಂತೆ …
Read More »ಗೌರವಯುತ ಜೀವನ ನಡೆಸಲು ನೆರವಿಗೆ ಬಾರದ ಪದಕ; ತಿನ್ನಲು ಕೂಳಿಲ್ಲದಿದ್ದರೂ ಕುಂದದ ಕುಸ್ತಿ ಪ್ರೇಮ; ಪೈಲ್ವಾನ್ ಗೆ ಬೇಕಿದೆ ಸಹಾಯ ಹಸ್ತ!
ಗೌರವಯುತ ಜೀವನ ಮಾಡಬೇಕೆಂದು ಬಯಸಿದ ಕುಸ್ತಿ ಪಟುವೊಬ್ಬರಿಗೆ ಯಾವುದೇ ನೆರವು ಸಿಗದ ಕಾರಣ, ಹೊಟ್ಟೆಪಾಡಿಗೆ ಹಮಾಲಿ ಮಾಡಿಕೊಂಡು ಜೀವನ ನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಬಾಗಲಕೋಟೆ: ಗೌರವಯುತ ಜೀವನ ಮಾಡಬೇಕೆಂದು ಬಯಸಿದ ಕುಸ್ತಿ ಪಟುವೊಬ್ಬರಿಗೆ ಯಾವುದೇ ನೆರವು ಸಿಗದ ಕಾರಣ, ಹೊಟ್ಟೆಪಾಡಿಗೆ ಹಮಾಲಿ ಮಾಡಿಕೊಂಡು ಜೀವನ ನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಇದು ಜಮಖಂಡಿ ತಾಲೂಕಿನ ಕುಂಬಾರಹಳ್ಳ ಗ್ರಾಮದ ಅಪ್ಪಾಸಿ ತೇರದಾಳ ಅವರ ಕಥೆ. 42 ವರ್ಷದ ಅಪ್ಪಾಸಿ ರಾಜ್ಯ, ರಾಷ್ಟ್ರಮಟ್ಟದ ಕುಸ್ತಿ …
Read More »
Laxmi News 24×7