Breaking News

ರಾಜಕೀಯ

ಕೃಷ್ಣಾ, ತುಂಗಭದ್ರಾ ನದಿಗಳಲ್ಲಿ ಮೊಸಳೆ ಸಂತತಿ: ಜನರಲ್ಲಿ ಆತಂಕ

ರಾಯಚೂರು: ಜಿಲ್ಲೆಯ ಕೃಷ್ಣಾ ಹಾಗೂ ತುಂಗಭದ್ರಾ ನದಿಗಳು ವಿಶಾಲ ಪ್ರದೇಶದಲ್ಲಿ ಹರಿಯುತ್ತಿವೆ. ನದಿಗಳ ಎರಡೂ ತೀರಗಳ ಸಮೀಪದಲ್ಲಿ ರೈತರು ವ್ಯವಸಾಯ ಮಾಡುತ್ತಿದ್ದಾರೆ. ಈ ನದಿಗಳಲ್ಲಿ ಮೊಸಳೆಗಳ ಸಂತತಿ ಹೆಚ್ಚಾಗುತ್ತಿದೆ. ಜನರನ್ನು ಮೊಸಳೆ ಕಾಟದ ಭಯ ಆವರಿಸಿದೆ. ಜಿಲ್ಲೆಯ ಬಲಭಾಗದಲ್ಲಿ ಕೃಷ್ಣಾ ಹಾಗೂ ಎಡ ಭಾಗದಲ್ಲಿ ತುಂಗಭದ್ರಾ ನದಿಗಳು ಹರಿಯುತ್ತವೆ. ಕೃಷ್ಣಾ ನೂರಕ್ಕೂ ಹೆಚ್ಚು ಕಿಲೋ‌ ಮೀಟರ್ ಮತ್ತು ತುಂಗಭದ್ರಾ 80 ಕಿಲೋ ಮೀಟರ್​ಗಳವರೆಗೆ ಜಿಲ್ಲೆಯಲ್ಲಿ ಹರಿಯುತ್ತದೆ. ಈಗ ನದಿಯಲ್ಲಿ ನೀರಿನ ಪ್ರಮಾಣ …

Read More »

ಮೈಸೂರು ವಿವಿ ಕುಲಪತಿ ಲೋಕನಾಥ್​ ನೇಮಕಾತಿ ರದ್ದುಪಡಿಸಿದ ಹೈಕೋರ್ಟ್

ಬೆಂಗಳೂರು: ಮೈಸೂರು ವಿಶ್ವವಿದ್ಯಾಲಯ ಕುಲಪತಿಯಾಗಿ ಪ್ರೊ. ಎನ್ ಕೆ ಲೋಕನಾಥ್ ನೇಮಕ ಮಾಡಿ ರಾಜ್ಯಪಾಲರು ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್ ರದ್ದುಪಡಿಸಿದೆ. ಮೈಸೂರು ವಿವಿ ಕುಲಪತಿ ಹುದ್ದೆಗೆ ಲೋಕನಾಥ್‌ ಅವರನ್ನು ನೇಮಿಸಿ 2023ರ ಮಾರ್ಚ್ 23ರಂದು ರಾಜ್ಯಪಾಲರು ಹೊರಡಿಸಿದ್ದ ಆದೇಶ ರದ್ದುಪಡಿಸುವಂತೆ ಕೋರಿ ಪ್ರೊ. ಶರತ್ ಅನಂತಮೂರ್ತಿ ಮತ್ತು ಡಾ. ಜಿ ವೆಂಕಟೇಶ್‌ ಕುಮಾರ್‌ ಹೈಕೋರ್ಟ್​​ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎನ್‌ ಎಸ್‌ ಸಂಜಯ್‌ ಗೌಡ ಅವರ …

Read More »

20ರ ಪ್ರಾಯದಲ್ಲಿ ಎಮ್ಮೆ ಕದ್ದು ತಲೆಮರೆಸಿಕೊಂಡಿದ್ದ ಆರೋಪಿ.. 78ನೇ ವಯಸ್ಸಿನಲ್ಲಿ ಬಂಧನ!

ಬೀದರ್: ಎಮ್ಮೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಬರೋಬ್ಬರಿ 58 ವರ್ಷಗಳ ಬಳಿಕ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. 1965ರಲ್ಲಿ ಮೇಹಕರ್‍ನಲ್ಲಿ ನಡೆದ ಎರಡು ಎಮ್ಮೆ, ಒಂದು ಕರು ಕಳುವಾದ ಕುರಿತು ಮುರಳೀಧರರಾವ್ ಕುಲಕರ್ಣಿ ಎನ್ನುವವರು ಮೇಹಕರ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಘಟನೆ ನಂತರ ಮಹಾರಾಷ್ಟ್ರದ ಉದಗೀರ್ ಮೂಲದ ಕಿಶನ್ ಚಂದರ್ (30) ಹಾಗೂ ಗಣಪತಿ ವಾಗ್ಮೋರೆ (20) ಅವರನ್ನು ಬಂಧಿಸಲಾಗಿತ್ತು. ಆದರೆ, ಜಾಮೀನು ಪಡೆದ ಬಳಿಕ ಈ ಆರೋಪಿಗಳು ನ್ಯಾಯಾಲಯಕ್ಕೆ ಬರದೇ ತಲೆ …

Read More »

ಬಿಜೆಪಿ – ಜೆಡಿಎಸ್ ಮೈತ್ರಿ ಮಾತುಕತೆ: ಸೆ.20 ರೊಳಗೆ ಅಂತಿಮ?

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿರುವ ಬಿಜೆಪಿ-ಜೆಡಿಎಸ್ ಮೈತ್ರಿ ಮಾತುಕತೆ ಈ ತಿಂಗಳ 19 ಅಥವಾ 20 ರಂದು ಫೈನಲ್ ಆಗಲಿದೆ. ಮುಂದಿನ ವಾರ ನಡೆಯಲಿರುವ ಸಂಸತ್ತಿನ ವಿಶೇಷ ಅಧಿವೇಶನದ ಸಂದರ್ಭದಲ್ಲಿ ಮೈತ್ರಿ ಮಾತುಕತೆಯನ್ನು ಪೂರ್ಣಗೊಳಿಸಲು ನಿರ್ಧರಿಸಲಾಗಿದೆ. ಈ ಹಿನ್ನೆಲೆಯಲ್ಲಿ ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಮತ್ತು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ದೆಹಲಿಗೆ ತೆರಳಲಿದ್ದು, ಸೆ.19 ಇಲ್ಲವೇ 20 ರಂದು ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ …

Read More »

ತಮಿಳುನಾಡಿಗೆ ನೀರು ಬಿಡುಗಡೆಗೆ ಸೂಚನೆ: ಇಂದು ಸಿಎಂ ನೇತೃತ್ವದಲ್ಲಿ ತುರ್ತು ಸರ್ವಪಕ್ಷ ಸಭೆ

ಬೆಂಗಳೂರು: ಕಾವೇರಿ ನದಿ ನೀರು ಬಿಡುಗಡೆಗೆ ಸೂಚಿಸಿರುವ ಹಿನ್ನೆಲೆ ಇಂದು (ಬುಧವಾರ) ರಾಜ್ಯ ಸರ್ಕಾರ ತುರ್ತು ಸರ್ವಪಕ್ಷ ಸಭೆ ಕರೆದಿದೆ. ತಮಿಳುನಾಡಿಗೆ 5 ಸಾವಿರ ಕ್ಯೂಸೆಕ್​​ ನೀರನ್ನು ಬಿಡುವಂತೆ ಕಾವೇರಿ ನದಿ ನೀರು ನಿಯಂತ್ರಣಾ ಸಮಿತಿ ಸೂಚಿಸಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಮಧ್ಯಾಹ್ನ 12:30ಕ್ಕೆ ವಿಶೇಷ ತುರ್ತು ಸಭೆ ನಡೆಯಲಿದೆ. ಕಾವೇರಿ ಜಲಾನಯನ ಪ್ರದೇಶದ ವ್ಯಾಪ್ತಿಯ ಸಚಿವರು, ಎಲ್ಲಾ ಪಕ್ಷಗಳ ಮಾಜಿ ಮುಖ್ಯಮಂತ್ರಿಗಳು, ರಾಜ್ಯ ಸಚಿವ …

Read More »

ಪಿಒಪಿ ಗಣೇಶ ಮೂರ್ತಿ ತಯಾರಕರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಿ:ಈಶ್ವರ್ ಖಂಡ್ರೆ

ಬೆಂಗಳೂರು : ಪರಿಸರಕ್ಕೆ ಮಾರಕವಾದ ಪ್ಲಾಸ್ಟರ್ ಆಫ್‌ ಪ್ಯಾರಿಸ್ (ಪಿಒಪಿ) ಗಣೇಶ ಮೂರ್ತಿ ತಯಾರಕರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡುವಂತೆ ಸಚಿವ ಈಶ್ವರ ಖಂಡ್ರೆ ಸೂಚಿಸಿದರು. ಮುಂಬರುವ ಗಣೇಶ ಚತುರ್ಥಿ ಹಿನ್ನೆಲೆಯಲ್ಲಿ ಪರಿಸರಸ್ನೇಹಿ ಗಣಪತಿ ಹಬ್ಬದ ಆಚರಣೆಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಸಚಿವರು ತಮ್ಮ ಕಚೇರಿಯಲ್ಲಿ ಮಂಗಳವಾರ, ಮಾಲಿನ್ಯ ನಿಯಂತ್ರಣ ಮಂಡಳಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ರಾಸಾಯನಿಕಲೇಪಿತ ಪಿಒಪಿ ಗಣಪತಿ ತಯಾರಕರಿಗೆ ಮಂಡಳಿ ನೊಟೀಸ್ ನೀಡಿದ್ದರೂ ಅವರು ಮತ್ತೆ ತಯಾರಿಕೆಯಲ್ಲಿ ತೊಡಗಿದ್ದರೆ …

Read More »

ಸಂಸತ್ ಸಿಬ್ಬಂದಿಗೆ ಹೊಸ ಡ್ರೆಸ್ ಕೋಡ್: ರಾಜಕೀಯ ಕೆಸರೆರಚಾಟಕ್ಕೆ ನಾಂದಿ

ನವದೆಹಲಿ: ದೇಶದ ನೂತನ ಸಂಸತ್​ ಭವನ ಸಿದ್ಧವಾಗಿದೆ. ಇದು ನವ ಭಾರತದ ಸಂಕೇತ ಎಂದು ಬಣ್ಣಿಸಲಾಗುತ್ತಿದೆ. ಇದರೊಂದಿಗೆ ಹೊಸ ಕಟ್ಟಡದಲ್ಲಿ ಕೆಲಸ ಮಾಡುವ ನೌಕರರ ಡ್ರೆಸ್ ಕೂಡ ಬದಲಿಸಲು ನಿರ್ಧರಿಸಲಾಗಿದೆ. ಹೊಸ ಉಡುಗೆಯು ಸಂಪೂರ್ಣವಾಗಿ ಭಾರತೀಯ ಸಾಂಪ್ರದಾಯಿಕ ಶೈಲಿಯಲ್ಲಿರಲಿದೆ. ಇದೀಗ ನೂತನ ಡ್ರೆಸ್ ಕೋಡ್ ರಾಜಕೀಯ ಗದ್ದಲಕ್ಕೆ ನಾಂದಿ ಹಾಡಿದೆ. “ಆಡಳಿತ ಪಕ್ಷದ ಚುನಾವಣಾ ಚಿಹ್ನೆಯನ್ನು ಪ್ರಚಾರ ಮಾಡಲಾಗುತ್ತಿದೆ, ಇದು ತೀರಾ ಕೆಳಮಟ್ಟದ ರಾಜಕೀಯ ತಂತ್ರಗಾರಿಕೆ” ಎಂದು ಕಾಂಗ್ರೆಸ್ ಟೀಕಿಸಿದೆ. ಲೋಕಸಭೆಯ …

Read More »

ಸಚಿವ ಡಿ ಸುಧಾಕರ್ ವಜಾ ಮಾಡಲು ಮಾಜಿ ಸಿಎಂ ಕುಮಾರಸ್ವಾಮಿ ಆಗ್ರಹ

ಬೆಂಗಳೂರು: ದಲಿತರಿಗೆ ಧಮ್ಕಿ ಹಾಕಿ ದೌರ್ಜನ್ಯ ಎಸಗಿಸಿದ ಆರೋಪ ಎದುರಿಸುತ್ತಿರುವ ಯೋಜನೆ ಹಾಗೂ ಸಾಂಖ್ಯಿಕ ಖಾತೆ ಸಚಿವ ಡಿ ಸುಧಾಕರ್ ಅವರನ್ನು ಕೂಡಲೇ ಸಂಪುಟದಿಂದ ವಜಾ ಮಾಡಬೇಕು ಹಾಗೂ ಅವರನ್ನು ಬಂಧಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಒತ್ತಾಯ ಮಾಡಿದರು. ಜೆಪಿ ನಗರದ ತಮ್ಮ ನಿವಾಸದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ದಲಿತರ ರಕ್ಷಣೆ ಮಾಡುತ್ತೇವೆ ಎಂದು ಹೇಳಿಕೊಂಡು ಅಧಿಕಾರಕ್ಕೆ ಬಂದ ಈ ಸರ್ಕಾರದಲ್ಲಿ ಏನಾಗುತ್ತಿದೆ? ಸಚಿವರೇ ದಲಿತರ ಮೇಲೆ …

Read More »

ಬಿ ಕೆ ಹರಿಪ್ರಸಾದ್​​ಗೆ ಶೋಕಾಸ್ ನೊಟೀಸ್

ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧ ಪರೋಕ್ಷವಾಗಿ ಗುಡುಗಿದ್ದ ಎಂಎಲ್‌ಸಿ ಬಿ.ಕೆ.ಹರಿಪ್ರಸಾದ್​​ಗೆ ಎಐಸಿಸಿ ಶೋಕಾಸ್ ನೊಟೀಸ್ ಜಾರಿ ಮಾಡಿದೆ. ಎಐಸಿಸಿ ಶಿಸ್ತು ಸಮಿತಿ ನೋಟಿಸ್ ಜಾರಿ ಮಾಡಿದ್ದು, ಹತ್ತು ದಿನಗಳೊಳಗೆ ಉತ್ತರಿಸುವಂತೆ ತಿಳಿಸಿದೆ. ಕಳೆದ ಶನಿವಾರ ಅತಿ‌ ಹಿಂದುಳಿದ ವರ್ಗಗಳ ಸಮಾವೇಶದಲ್ಲಿ ಸಿಎಂ ವಿರುದ್ಧ ಬಿ.ಕೆ.ಹರಿಪ್ರಸಾದ್ ಅವರು ಪರೋಕ್ಷವಾಗಿ ವಾಗ್ದಾಳಿ ನಡೆಸಿದ್ದರು. ಇದು ಸಿಎಂ‌ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಪಕ್ಷವನ್ನು ತೀವ್ರ ಮುಜುಗರಕ್ಕೀಡು ಮಾಡಿತ್ತು. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಕೂಡ ಎಐಸಿಸಿ …

Read More »

ಅಪರೂಪದ ಕಾಯಿಲೆಯಿಂದ ಬಳಲುತ್ತಿರುವ ಮಗುವನ್ನು ದೆಹಲಿಯ ಸಿಎಂ ಅರವಿಂದ್​ ಕೇಜ್ರಿವಾಲ್​ ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.

ನವದೆಹಲಿ: ಅಪರೂಪದಲ್ಲಿ ಅಪರೂಪ ಕಾಯಿಲೆಯಿಂದ ಬಳಲುತ್ತಿರುವ ದೆಹಲಿಯ ಬಾಲಕನನ್ನು ಸಿಎಂ ಅರವಿಂದ್​ ಕೇಜ್ರಿವಾಲ್​ ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು. ಆನುವಂಶಿಕ ಕಾಯಿಲೆಯಾದ ಸ್ಪೈನಲ್ ಮಸ್ಕ್ಯುಲರ್ ಅಟ್ರೋಫಿ (ಎಸ್‌ಎಂಎ) ಚಿಕಿತ್ಸೆಗೆ ಕೋಟ್ಯಂತರ ರೂಪಾಯಿ ಬೇಕಾಗಿದ್ದು, ನೆರವಿಗೆ ಕುಟುಂಬಸ್ಥರು ಮನವಿ ಮಾಡಿದ್ದರು. ಹೀಗಾಗಿ ಸಿಎಂ ಅವರು ಖುದ್ದು ಭೇಟಿ ನೀಡಿ, ಮಾತುಕತೆ ನಡೆಸಿದರು. ಎಸ್​ಎಂಎ ಕಾಯಿಲೆಯು ಅಪಾಯಕಾರಿಯಾಗಿದ್ದು, ಅದು ತೀರಾ ಅಪರೂಪವಾಗಿದೆ. ಇದಕ್ಕೆ ತಕ್ಷಣವೇ ಚಿಕಿತ್ಸೆ ಕೊಡಿಸದಿದ್ದರೆ ಪ್ರಾಣಕ್ಕೆ ಕುತ್ತು ತರಲಿದೆ. ಇಂತಹ ರೋಗ …

Read More »