Breaking News

ರಾಜಕೀಯ

ಬಿಜೆಪಿ – ಜೆಡಿಎಸ್ ಮೈತ್ರಿ ಇನ್ನೂ ಫೈನಲ್ ಆಗಿಲ್ಲ: ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ

ಹುಬ್ಬಳ್ಳಿ: ಬಿಜೆಪಿ – ಜೆಡಿಎಸ್ ಮೈತ್ರಿ ಇನ್ನೂ ಫೈನಲ್ ಆಗಿಲ್ಲ. ಅದರ ಬಗ್ಗೆ ನನಗೆ ಸಂಪೂರ್ಣವಾದ ಮಾಹಿತಿ ಇಲ್ಲ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್‌ ಜೋಶಿ ಹೇಳಿದರು. ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಮೈತ್ರಿ ಅನಿವಾರ್ಯ ಎಂದು ಸ್ಥಳೀಯವಾಗಿ ಹೇಳಿರಬಹುದು. ನಾನು ಕೇಂದ್ರದಲ್ಲಿ ಮಂತ್ರಿಯಾಗಿ ಮೈತ್ರಿ ವಿಚಾರವಾಗಿ ನಮ್ಮ ಪಕ್ಷದ ವರಿಷ್ಠರು ಹೇಳುವವರೆಗೆ ಈ ಬಗ್ಗೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ ಎಂದರು. …

Read More »

ವ್ಯಕ್ತಿಯನ್ನು ಅಪಹರಿಸಿ ಹಣಕ್ಕೆ ಬೇಡಿಕೆ ಇಟ್ಟಿದ್ದ ಕುಖ್ಯಾತ ರೌಡಿ ವಿಶಾಲ್ ಸಿಂಗ್ ಎಂಬಾತನನ್ನು ಬೆಳಗಾವಿ ನಗರ ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ.

ಬೆಳಗಾವಿ : ವ್ಯಕ್ತಿಯನ್ನು ಅಪಹರಿಸಿ ಹಣಕ್ಕೆ ಬೇಡಿಕೆ ಇಟ್ಟಿದ್ದ ಕುಖ್ಯಾತ ರೌಡಿ ವಿಶಾಲ್ ಸಿಂಗ್ ಎಂಬಾತನನ್ನು ಬೆಳಗಾವಿ ನಗರ ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ.   ಕಳೆದ ಸಪ್ಟೆಂಬರ್ 1 ರಂದು ಪ್ಲ್ಯಾಟ್ ತೋರಿಸುವುದಾಗಿ ನಂಬಿಸಿ ರಿಯಲ್ ಎಸ್ಟೇಟ್ ಉದ್ಯಮಿ ಒಬ್ಬರನ್ನು ಆತನ ಕಾರಿನಲ್ಲಿ ಅಪಹರಿಸಿದ್ದಲ್ಲದೆ ಹಣಕ್ಕೆ ಬೇಡಿಕೆ ಇಟ್ಟಿದ್ದ ಬೆಳಗಾವಿ ಮೂಲದ ಕುಖ್ಯಾತ ರೌಡಿ ವಿಶಾಲಸಿಂಗ್ ಚೌಹಾನ್ ( 25 ) ಬಂಧಿಸಲಾಗಿದೆ,   ತಿಲಕವಾಡಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ …

Read More »

ಗಣೇಶೋತ್ಸವ ವಿಸರ್ಜನಾ ಹೊಂಡಗಳನ್ನು ಸ್ವಚ್ಛಗೊಳಿಸುವ ಕಾರ್ಯಕ್ಕೆ ಮುಂದಾದ ಮಹಾನಗರ ಪಾಲಿಕೆ

ಗಣೇಶೋತ್ಸವಕ್ಕೆ ಇನ್ನೇನು ಕೆಲವೇ ದಿನಗಳು ಬಾಕಿ ಇರುವ ಹಿನ್ನೆಲೆಯಲ್ಲಿ ಬೆಳಗಾವಿ ಮಹಾನಗರ ಪಾಲಿಕೆ ಆಡಳಿತವು ನಗರದ ಗಣೇಶೋತ್ಸವ ವಿಸರ್ಜನಾ ಹೊಂಡಗಳನ್ನು ಸ್ವಚ್ಛಗೊಳಿಸುವ ಕಾರ್ಯಕ್ಕೆ ಮುಂದಾಗಿದೆ ಬೆಳಗಾವಿ ಮಹಾನಗರ ಪಾಲಿಕೆ ವತಿಯಿಂದ ನಗರದ ಇಂದ್ರಪ್ರಸ್ಥನಗರದಲ್ಲಿರುವ ಜಕ್ಕಿನಹೊಂಡ ಕೆರೆಯನ್ನು ಸ್ವಚ್ಛಗೊಳಿಸಲಾಯಿತು. ನಗರದಲ್ಲಿ ಸಾರ್ವಜನಿಕ ಗಣೇಶ ಮೂರ್ತಿ ವಿಸರ್ಜನೆಯನ್ನು ಕಪಿಲೇಶ್ವರ ಕೆರೆ, ಜಕ್ಕಿನಹೊಂಡ ಕೆರೆ, ಅಂಗೋಲ್ ಕೆರೆ ಮುಂತಾದೆಡೆ ಮಾಡಲಾಗುತ್ತದೆ. ಈ ಎಲ್ಲ ಕೆರೆಗಳ ಸ್ವಚ್ಛತೆ, ಸಣ್ಣಪುಟ್ಟ ದುರಸ್ತಿ, ಬಣ್ಣ ಬಳಿಯುವುದು ಇತ್ಯಾದಿ ಕಾರ್ಯ …

Read More »

ನೈಜ ಘಟನೆಯ ‘ದೈಜಿ’ ಚಿತ್ರದಲ್ಲಿ ಬಹುಭಾಷಾ ನಟ ರಮೇಶ್ ಅರವಿಂದ್

ಕನ್ನಡ ಸೇರಿ ತಮಿಳು, ತೆಲುಗು, ಮಲಯಾಳಂನಲ್ಲೂ ನಟಿಸಿರುವ ಬಹುಭಾಷಾ ನಟ ರಮೇಶ್ ಅರವಿಂದ್ ಅವರು ದೈಜಿ ಚಿತ್ರದಲ್ಲಿ ವಿಭಿನ್ನ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಕನ್ನಡ ಚಿತ್ರರಂಗದಲ್ಲಿ ಶಿವಾಜಿ ಸುರತ್ಕಲ್ ಭಾಗ 1 ಮತ್ತು 2 ಸಿನಿಮಾಗಳ ಯಶಸ್ಸಿನ ಬೆನ್ನಲ್ಲೇ ಮತ್ತೊಂದು ಚಿತ್ರಕ್ಕೆ ನಟ ರಮೇಶ್ ಅರವಿಂದ್ ಮತ್ತು ನಿರ್ದೇಶಕ ಆಕಾಶ್ ಶ್ರೀವತ್ಸ ಕೈಜೋಡಿಸುತ್ತಿದ್ದಾರೆ. ಚಿತ್ರದ ಶೀರ್ಷಿಕೆಯನ್ನು ‘ದೈಜಿ’ ಎಂದು ಇಡಲಾಗಿದ್ದು, ಇದಕ್ಕೆ ಬೇರೆ ಬೇರೆ ಭಾಷೆಗಳಲ್ಲಿ ಬೇರೆ ಬೇರೆ ಅರ್ಥಗಳಿವೆ. ಕೊಂಕಣಿಯಲಿ …

Read More »

JDS ಮೈತ್ರಿ ಮಾಡಿಕೊಳ್ಳುವ ಬಗ್ಗೆ ಸುದೀರ್ಘವಾದ ಚರ್ಚೆ ಆಗಬೇಕು ಎಂದ ಬೊಮ್ಮಾಯಿ

ಬಳ್ಳಾರಿ: ಕರ್ನಾಟಕದಲ್ಲಿ 4 ತಿಂಗಳ ಆಡಳಿತ ನೋಡಿದಾಗ ಎಲ್ಲರೂ ಸೇರಿ ಜನರ ಪರವಾಗಿ ಮತ್ತು ರಾಜಕೀಯವಾಗಿ ಸರ್ಕಾರವನ್ನು ವಿರೋಧ ಮಾಡುವ ಅವಶ್ಯಕತೆ ಇದೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು. ನಗರದಲ್ಲಿ ಭಾನುವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮೈತ್ರಿ ಕುರಿತಂತೆ ಮಾಜಿ ಸಿಎಂ ಬಿ ಎಸ್​ ಯಡಿಯೂರಪ್ಪ ಏನು ಹೇಳಿಕೆ ನೀಡಿದ್ದಾರೆ ಅನ್ನೋದು ನನಗೆ ಗೊತ್ತಿಲ್ಲ. ಮೈತ್ರಿ ಮಾಡಿಕೊಳ್ಳುವ ಬಗ್ಗೆ ಸುದೀರ್ಘವಾದ ಚರ್ಚೆ ಎಲ್ಲಾ ಹಂತದಲ್ಲೂ ಆಗಬೇಕು ಎಂದರು. ಶನಿವಾರ …

Read More »

ವಿಶ್ವ ನಾಯಕರ ಭೋಜನಕ್ಕೆ ಚಿನ್ನ , ಬೆಳ್ಳಿ ಲೇಪಿತ ಪಾತ್ರೆಗಳ ಬಳಕೆ: ಶರದ್ ಪವಾರ್

ಮುಂಬೈ (ಮಹಾರಾಷ್ಟ್ರ): ಸೆಪ್ಟೆಂಬರ್ 9 ಮತ್ತು 10ರಂದು ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಡೆದ ಜಿ20 ಶೃಂಗಸಭೆಯಲ್ಲಿ ವಿಶ್ವ ನಾಯಕರಿಗೆ ಏರ್ಪಡಿಸಲಾದ ಔತಣಕೂಟದಲ್ಲಿ ಬೆಳ್ಳಿ ಮತ್ತು ಚಿನ್ನಲೇಪಿತ ಪಾತ್ರೆಗಳ ಬಳಕೆಯ ಬಗ್ಗೆ ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ಮುಖ್ಯಸ್ಥ ಶರದ್ ಪವಾರ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ.   ಭಾನುವಾರ ದಕ್ಷಿಣ ಮುಂಬೈನಲ್ಲಿ ನಡೆದ ತಮ್ಮ ಪಕ್ಷದ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಪವಾರ್, “ಇಂತಹ ಕಾರ್ಯಕ್ರಮಗಳು (ಜಿ20) ಈ ಹಿಂದೆ ಭಾರತದಲ್ಲಿ ಎರಡು ಬಾರಿ …

Read More »

ಕೇಂದ್ರದಲ್ಲಿ ಮತ್ತೊಮ್ಮೆ ಬಿಜೆಪಿ ಅಧಿಕಾರಕ್ಕೆ ಬರಲು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶಕ್ತಿ ತುಂಬಿ : ಶಾಸಕ ಬಾಲಚಂದ್ರ ಜಾರಕಿಹೊಳಿ

ಕೇಂದ್ರದಲ್ಲಿ ಮತ್ತೊಮ್ಮೆ ಬಿಜೆಪಿ ಅಧಿಕಾರಕ್ಕೆ ಬರಲು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶಕ್ತಿ ತುಂಬಿ : ಶಾಸಕ ಬಾಲಚಂದ್ರ ಜಾರಕಿಹೊಳಿ ಅರಭಾವಿ ಪಟ್ಟಣದಲ್ಲಿ ನನ್ನ ಮಣ್ಣು ನನ್ನ ದೇಶ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಬಾಲಚಂದ್ರ ಜಾರಕಿಹೊಳಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರಿಗೆ ಸಾಥ್ ನೀಡಿದ ಸಂಸದೆ ಮಂಗಲಾ ಅಂಗಡಿ   ಮೂಡಲಗಿ : ಪ್ರಧಾನಿ ನರೇಂದ್ರ ಮೋದಿ ಅವರು ನಮ್ಮ ದೇಶದ ಅಧಿಕಾರದ ಚುಕ್ಕಾಣಿ ಹಿಡಿದ ಮೇಲೆ ಇಡೀ …

Read More »

ಯುವನಾಯಕ ಸರ್ವೋತ್ತಮ ಜಾರಕಿಹೊಳಿ ಅವರಿಗೆ ಬ್ಯುಸಿನೆಸ್ ಎಕ್ಸೆಲೆನ್ಸ್ ಅವಾರ್ಡ್

ಬೆಳಗಾವಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಗೋಕಾಕ ತಾಲೂಕು ಗೌರವಾಧ್ಯಕ್ಷರು & ಲಕ್ಷ್ಮೀ ಎಜುಕೇಶನ್ ಟ್ರಸ್ಟ್ ನ ನಿರ್ದೇಶಕ ಹಾಗೂ ಯುವ ನಾಯಕ ಸರ್ವೋತ್ತಮ ಜಾರಕಿಹೊಳಿ ಅವರಿಗೆ ಡಿಕೆ ಮೋಟೀವ್ ಅಸೋಸಿಯೇಷನ್ ವತಿಯಿಂದ ಇತ್ತೀಚೆಗೆ ಬೆಳಗಾವಿಯಲ್ಲಿ ನಡೆದ ಸಮಾರಂಭದಲ್ಲಿ ಬ್ಯುಸಿನೆಸ್ ಎಕ್ಸೆಲೆನ್ಸ್ ಅರ್ವಾಡ್ಸ್ 2023 ಪ್ರಶಸ್ತಿ ನೀಡಿ ಗೌರವಿಸಿದರು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ ಸಂಜಯ ಗೊಡಾವತ ಹಾಗೂ ಡಿಕೆ ಮೋಟೀವ್ ನ ಮುಖ್ಯಸ್ಥ ದಿಲೀಪ ಕುರಂದವಾಡೆ ಪ್ರಶಸ್ತಿ ನೀಡಿ …

Read More »

ಸೋಮವಾರ ಖಾಸಗಿ ಸಾರಿಗೆ ಬಂದ್

ಬೆಂಗಳೂರು: ಇಂದು ಮಧ್ಯರಾತ್ರಿಯಿಂದ ಖಾಸಗಿ ಪ್ರಯಾಣಿಕ ವಾಹನಗಳ ಮುಷ್ಕರ ನಡೆಯಲಿದೆ. ಬಹುತೇಕ ಆಟೋ, ಕ್ಯಾಬ್, ಬಸ್ ಸೇರಿದಂತೆ ಎಲ್ಲ ವಾಹನಗಳ ಸಂಚಾರ ಸ್ಥಗಿತವಾಗುವ ಸಾಧ್ಯತೆ ಇದೆ. ಶಾಲಾ ಮಕ್ಕಳ ವಾಹನ ಕೂಡಾ ಸಂಚಾ ಸ್ಥಗಿತವಾಗಲಿದೆ ಎಂದು ಖಾಸಗಿ ಸಾರಿಗೆ ಚಾಲಕರು ಮತ್ತು ಮಾಲೀಕರು ಹೇಳುತ್ತಿದ್ದಾರೆ. ಆದರೆ ಖಾಸಗಿ ಶಾಲಾ ಒಕ್ಕೂಟಗಳು ಈವರೆಗೆ ಸ್ಪಷ್ಟವಾದ ನಿರ್ಧಾರ ಕೈಗೊಳ್ಳದಿರುವುದು ವಿದ್ಯಾರ್ಥಿಗಳು ಹಾಗೂ ಪೋಷಕರ ಗೊಂದಲಕ್ಕೆ ಕಾರಣವಾಗಿದೆ. ಕೆಲವು ಖಾಸಗಿ ಶಾಲೆಗಳು ತಮ್ಮದೇ ವಾಹನ ವ್ಯವಸ್ಥೆಯನ್ನು …

Read More »

ಸೋಮವಾರ ಬೆಂಗಳೂರು ಬಂದ್ ಹಿನ್ನೆಲೆಯಲ್ಲಿ ಪ್ರಯಾಣಿಕರ ಅನುಕೂಲತೆಗಾಗಿ ಬಿಎಂಟಿಸಿಯಿಂದ ಹೆಚ್ಚುವರಿ ಬಸ್ ಸೌಲಭ್ಯ

ಬೆಂಗಳೂರು: ರಾಜ್ಯ ಸರ್ಕಾರದಿಂದ ಜಾರಿಯಾಗಿರುವ ಮಹಿಳೆಯರಿಗೆ ಉಚಿತ ಸರ್ಕಾರಿ ಬಸ್​ ಪ್ರಯಾಣದಶಕ್ತಿ ಯೋಜನೆಯನ್ನು ಖಾಸಗಿ ಬಸ್​ಗಳಿಗೂ ವಿಸ್ತರಣೆ ಮಾಡಬೇಕು ಹಾಗೂ ರಸ್ತೆ ತೆರಿಗೆ ರದ್ದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಖಾಸಗಿ ಸಾರಿಗೆಗಳ ಒಕ್ಕೂಟ ಸೋಮವಾರ ಬೆಂಗಳೂರು ಬಂದ್ ಕರೆ ನೀಡಿದೆ. ಈ ನಿಟ್ಟಿನಲ್ಲಿ ಪ್ರಯಾಣಿಕರಿಗೆ ತೊಂದರೆಯಾಗದಂತೆ ಕ್ರಮ ಕೈಗೊಂಡಿರುವ ಬಿಎಂಟಿಸಿ ಹೆಚ್ಚುವರಿ ಬಸ್​​ಗಳ ಜೊತೆಗೆ ಟ್ರಿಪ್​ ಸಂಖ್ಯೆಯಲ್ಲೂ ಏರಿಕೆ ಮಾಡಲು ಸಿದ್ಧತೆ ನಡೆಸಿದೆ. ನಾಳೆ ನಡೆಯುತ್ತಿರುವ ಬೆಂಗಳೂರು ಬಂದ್​​ಗೆ …

Read More »