Breaking News

ರಾಜಕೀಯ

ಭೀಮಾತೀರದ ನದಿಯಲ್ಲಿ ವ್ಯಕ್ತಿಯ ಶವ ಪತ್ತೆ

ಭೀಮಾತೀರದ ನದಿಯಲ್ಲಿ ವ್ಯಕ್ತಿಯ ಶವ ಪತ್ತೆಯಾಗಿರುವ ಘಟನೆ ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ಧೂಳಖೇಡ ಗ್ರಾಮದ ಬಳಿಯ ನದಿಯಲ್ಲಿ ನಡೆದಿದೆ. ಕಪನಿಂಬರಗಿ ಗ್ರಾಮದ ಶಾಂತಯ್ಯ ಹಿರೇಮಠ ಮೃತಪಟ್ಟಿರುವ ದುರ್ದೈವಿಯಾಗಿದ್ದು, ಇದು ಕೊಲೆಯೋ ಅಥವಾ ಆತ್ಮಹತ್ಯೆಯೋ ಎಂಬುದು ಪೊಲೀಸ ತನಿಖೆ ಬಳಿಕ ತಿಳಿದುಬರಬೇಕಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಝಳಕಿ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ..

Read More »

ಬೆಳಗಾವಿ ಜಿಲ್ಲೆ ಮೂಡಲಗಿ ತಾಲೂಕಿನ ನಾಗನೂರಲ್ಲಿ ನಡೆಯುತ್ತಿರುವ ಜಕನೆಮ್ಮ ದೇವಿ ಜಾತ್ರೆ ಹೆಸರಲ್ಲಿ ರಸ್ತೆ ಹಾಳು

ಬೆಳಗಾವಿ ಜಿಲ್ಲೆ ಮೂಡಲಗಿ ತಾಲೂಕಿನ ನಾಗನೂರಲ್ಲಿ ನಡೆಯುತ್ತಿರುವ ಜಕನೆಮ್ಮ ದೇವಿ ಜಾತ್ರೆ ಹೆಸರಲ್ಲಿ ರಸ್ತೆ ಹಾಳುಮಾಡಲಾಗುತ್ತಿದೆ ಟೈಯರ ಸವೆದು ಹೋದ ವಾಹನಗಳಿಗೆ ಮಾತ್ರ ಸ್ಪರ್ದೆಯಲ್ಲಿ ಅವಕಾಶ ಇರುವ ನಿಯಮ ಹಿನ್ನೆಲೆ ನಾಗನೂರ ಹಳ್ಳದ ಸೇತುವೆ ರಸ್ತೆ ಮೇಲೆ ಟ್ರ್ಯಾಕ್ಟರನಿಂದ ಡಾಂಬರಿ ರಸ್ತೆ ಅಗೆಯುತ್ತಿರುವ ವಾಹನ ಮಾಲಿಕರು ರಸ್ತೆ ಹಾಳು ಮಾಡುತಿದ್ದರೂ ನೋಡುತ್ತ ನಿಂತ ಮುಖಂಡರು ರಸ್ತೆ ಹಾಳು ಮಾಡಿದ ಸದಸ್ಯರ ಮೇಲೆ ಕ್ರಮಕ್ಕಾಗಿ ಬುದ್ದಿಜೀವಿಗಳ ಒತ್ತಾಯಿಸಿದರು

Read More »

ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನ ಗೆಲ್ಲಬೇಕಾದರೆ ಜೆಡಿಎಸ್​ನೊಂದಿಗೆ ಮೈತ್ರಿ ಅಗತ್ಯ: ಸಿ ಪಿ ಯೋಗೇಶ್ವರ್

ರಾಮನಗರ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನ ಗೆಲ್ಲಬೇಕಾದರೆ ಜೆಡಿಎಸ್​ನೊಂದಿಗೆ ಮೈತ್ರಿ ಅಗತ್ಯವಿದೆ ಎಂದು ಮಾಜಿ ಸಚಿವ ಸಿ.ಪಿ. ಯೋಗೇಶ್ವರ್ ಪ್ರತಿಪಾದಿಸಿದರು. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರಕ್ಕೆ 9 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಇಂದು ರಾಮನಗರ ಜಿಲ್ಲಾ ಬಿಜೆಪಿ ವತಿಯಿಂದ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಜೆಡಿಎಸ್​ನೊಂದಿಗೆ ಬಿಜೆಪಿ ಮೈತ್ರಿ ಮಾಡಿಕೊಂಡರೆ 25 ಸ್ಥಾನಗಳನ್ನು ಗೆಲ್ಲಬಹುದು ಎನ್ನುವುದು ನನ್ನ ವೈಯುಕ್ತಿಕ ಅಭಿಪ್ರಾಯ. ಆದರೆ, ಇದರ ಬಗ್ಗೆ ನಮ್ಮ ಪಕ್ಷದ …

Read More »

ಮೂಕಪ್ಪ ಶ್ರೀಗಳಿಗೆ ಶ್ರಾವಣ ಮಾಸದ ವಿಶೇಷ ಪೂಜೆ ಸಲ್ಲಿಸಿದ ಭಕ್ತರು

ಹಾವೇರಿ: ಶ್ರಾವಣ ಮಾಸ ಪವಿತ್ರವಾದ ಮಾಸವಾಗಿದೆ. ಶ್ರಾವಣ ಮಾಸದಲ್ಲಿ ಹಲವು ಆಚರಣೆಗಳನ್ನು ಮಾಡಲಾಗುತ್ತದೆ. ಶ್ರಾವಣ ಮಾಸದಲ್ಲಿ ಪುಣ್ಯ ಕ್ಷೇತ್ರಗಳಿಗೆ ಭೇಟಿ ನೀಡಿ ಪೂಜೆ ಸಲ್ಲಿಸಲಾಗುತ್ತದೆ. ಮನೆದೇವರು ಸೇರಿದಂತೆ ವಿವಿಧ ಮಠಗಳಿಗೆ ತೆರಳಿ ಮಠಾಧೀಶರನ್ನು ದರ್ಶಿಸಿ ಆಶೀರ್ವಾದ ಪಡೆಯಲಾಗುತ್ತದೆ. ಈ ರೀತಿ ಮಾಡುವುದರಿಂದ ಪುಣ್ಯ ಪ್ರಾಪ್ತಿಯಾಗುತ್ತದೆ ಎಂಬ ನಂಬಿಕೆ ಭಕ್ತರಲ್ಲಿದೆ. ಕೆಲವು ಭಕ್ತರು ಮಠಾಧೀಶರನ್ನು ತಮ್ಮ ಮನೆಗೆ ಕರೆಸಿಕೊಂಡು ಪಾದಪೂಜೆ ಅಭಿಷೇಕ ಸೇರಿದಂತೆ ವಿವಿಧ ಪೂಜೆಗಳನ್ನು ನೆರವೇರಿಸುತ್ತಾರೆ. ಶ್ರಾವಣ ಮಾಸದಲ್ಲಿ ಭಕ್ತರ ಮನೆಗೆ …

Read More »

ಬೆಂಗಳೂರು: ಇನ್ಸ್​ಪೆಕ್ಟರ್​​​ ವಿರುದ್ಧವೇ ದೂರು ನೀಡಿದ ಪತ್ನಿ

ಬೆಂಗಳೂರು : ಸಿಐಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಇನ್​ಸ್ಪೆಕ್ಟರ್ ಮಲ್ಲಿಕಾರ್ಜುನ್ ವಿರುದ್ಧ ಪತ್ನಿಯೇ ಯಶವಂತಪುರ‌ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪತ್ನಿ ನೀಡಿದ ದೂರಿನ ಮೇರೆಗೆ ಇನ್​ಸ್ಪೆಕ್ಟರ್ ಮಲ್ಲಿಕಾರ್ಜುನ ಸೇರಿ ಒಟ್ಟು ನಾಲ್ವರ ವಿರುದ್ಧ ವಂಚನೆ ಹಾಗೂ ವರದಕ್ಷಿಣೆಯಡಿ ಪ್ರಕರಣ ದಾಖಲಾಗಿದೆ.   ದೂರಿನಲ್ಲಿ ಇರುವುದೇನು?: ದೂರುದಾರ ಮಹಿಳೆ ದೂರಿನಲ್ಲಿ ಹೇಳಿರುವ ಪ್ರಕಾರ, ನಾನು ಹಾಗೂ ಮಲ್ಲಿಕಾರ್ಜುನ್ ಇಬ್ಬರು 2012ರಲ್ಲಿ ಮದುವೆ ಮಾಡಿಕೊಂಡಿದ್ದೆವು. ವಿವಾಹದ ವೇಳೆ 8 ಲಕ್ಷ‌ ನಗದು, 250 ಗ್ರಾಂ ಚಿನ್ನ ಹಾಗೂ …

Read More »

ಧರ್ಮದ ಹೆಸರಿನಲ್ಲಿ ಮನುಷ್ಯರನ್ನು ದ್ವೇಷಿಸುವುದು ಅಧರ್ಮ ಎಂದು ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಧರ್ಮಕ್ಕೋಸ್ಕರ ಮನುಷ್ಯ ಅಲ್ಲ. ಮನುಷ್ಯನಿಗಾಗಿ ಧರ್ಮ ಇದೆ. ಮಾನವನಾಗಿ ಹುಟ್ಟಿದ ಕೃಷ್ಣ ಯಾವತ್ತೂ ಕೈಯಲ್ಲಿ ಶಸ್ತ್ರ ಹಿಡಿಯದೇ ದೈವತ್ವಕ್ಕೆ ಏರಿದ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ರವೀಂದ್ರ ಕಲಾ ಕ್ಷೇತ್ರದಲ್ಲಿ ಇಂದು ಸಂಜೆ ಹಮ್ಮಿಕೊಂಡಿದ್ದ ಶ್ರೀಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಮನುಷ್ಯ ಮನುಷ್ಯನನ್ನು ಪ್ರೀತಿಸುವುದೇ ಧರ್ಮ. ಧರ್ಮದ ಹೆಸರಿನಲ್ಲಿ ಮನುಷ್ಯರನ್ನು ದ್ವೇಷಿಸುವುದು ಅಧರ್ಮ. ಮನುಷ್ಯ ದ್ವೇಷ- ಅಧರ್ಮದ ವಿರುದ್ಧವೇ ಕೃಷ್ಣ ಕೈಯಲ್ಲಿ …

Read More »

ಬಿಎಂಟಿಸಿ ಪ್ರಯಾಣಿಕರಿಗೆ ಗುಡ್ ನ್ಯೂಸ್.. ಇಂದಿನಿಂದ ರಾತ್ರಿ ಸೇವೆಗೆ ಹೆಚ್ಚುವರಿ ದರ ಸ್ಥಗಿತ, ಹಗಲಿನ ದರವೇ ನಿಗದಿ

ಬೆಂಗಳೂರು : ರಜತ ಮಹೋತ್ಸವದ ಸಂಭ್ರಮದಲ್ಲಿರುವ ಬಿಎಂಟಿಸಿ ತನ್ನ ಪ್ರಯಾಣಿಕರಿಗೆ ಸಿಹಿ ಸುದ್ದಿ ನೀಡಿದೆ. ಇಂದಿನಿಂದಲೇ ಜಾರಿಗೆ ಬರುವಂತೆ ರಾತ್ರಿ ಪಾಳೆ ಸೇವೆಗೆ ಪಡೆಯುತ್ತಿದ್ದ ಒಂದೂವರೆ ಪಟ್ಟು ಹೆಚ್ಚು ಟಿಕೆಟ್ ದರವನ್ನು ರದ್ದುಪಡಿಸಿ ಹಗಲಿನಲ್ಲಿ ಪಡೆಯುವ ದರವನ್ನೇ ನಿಗದಿಪಡಿಸಿ ಆದೇಶ ಹೊರಡಿಸಿದೆ. ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ಪ್ರಯಾಣಿಕರಿಗೆ ಉತ್ತಮ ಗುಣಮಟ್ಟದ ಸಮರ್ಪಕ ಸುರಕ್ಷಿತ ಸಾರಿಗೆ ಸೇವೆಯನ್ನು ಮಿತವ್ಯಯ ದರದಲ್ಲಿ ಒದಗಿಸುತ್ತಿದೆ. ಬೆಂಗಳೂರು ನಗರದಲ್ಲಿ ತಡರಾತ್ರಿ ಹಾಗೂ ಮುಂಜಾನೆ ಪ್ರಯಾಣಿಸುವ ಸಾರ್ವಜನಿಕರ …

Read More »

ಬ್ರಿಜ್ ಭೂಷಣ್ ಸಿಂಗ್ ವಿರುದ್ಧದ ಪೋಕ್ಸೋ ಕೇಸ್​: ಅಕ್ಟೋಬರ್​ 6ಕ್ಕೆ ತೀರ್ಪು

ನವದೆಹಲಿ: ಭಾರತೀಯ ಕುಸ್ತಿ ಸಂಸ್ಥೆಯ ನಿರ್ಗಮಿತ ಅಧ್ಯಕ್ಷ ಮತ್ತು ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಅಪ್ರಾಪ್ತ ಮಹಿಳಾ ಕುಸ್ತಿಪಟು ದಾಖಲಿಸಿದ್ದ ಪೋಕ್ಸೊ ಪ್ರಕರಣವನ್ನು ವಜಾ ಮಾಡಬೇಕೇ ಬೇಡವೇ ಎಂಬುದರ ತೀರ್ಪನ್ನು ಪಟಿಯಾಲ ಹೌಸ್ ಕೋರ್ಟ್ ಅಕ್ಟೋಬರ್ 6ಕ್ಕೆ ಮುಂದೂಡಿದೆ. ದೂರು ನೀಡಿದ್ದ ಮಹಿಳಾ ಕುಸ್ತಿಪಟು ಕೇಸ್​ ವಾಪಸ್​ ಪಡೆದಿದ್ದು, ಪ್ರಕರಣವನ್ನು ಅಂತ್ಯಗೊಳಿಸಲು ದೆಹಲಿ ಪೊಲೀಸರು ಜೂನ್ 15 ರಂದು ನ್ಯಾಯಾಲಯಕ್ಕೆ ವರದಿ ಸಲ್ಲಿಸಿದ್ದಾರೆ. ಪ್ರಕರಣವನ್ನು ಮುಕ್ತಾಯಗೊಳಿಸುವ ಬಗ್ಗೆ …

Read More »

ವಿಶ್ವಕಪ್​ ತಂಡದಿಂದ ಚಹಾಲ್​ ಕೈಬಿಡಲು ಕಾರಣ ಏನು?

Why Yuzvendra Singh Chahal Missing From World Cup Team :ಭಾರತ ತಂಡದಲ್ಲಿ ಈ ಹಿಂದೆ ಸ್ಟಾರ್​ ಸ್ಪಿನ್ನರ್​ ಆಗಿದ್ದ ಯಜುವೇಂದ್ರ ಚಹಾಲ್​ಗೆ ಈ ವರ್ಷದ ವಿಶ್ವಕಪ್​ನಲ್ಲಿ ಆಡುವ ಅವಕಾಶ ಸಿಕ್ಕಿಲ್ಲ. ಅವರು ತೆರೆಮರೆಗೆ ಸರಿಯಲು ಕಾರಣ ಏನು ಎಂಬುದಕ್ಕೆ ಇಲ್ಲಿದೆ ಕಾರಣ..   ನವದೆಹಲಿ: ಭಾರತ ಕ್ರಿಕೆಟ್ ತಂಡದಲ್ಲಿ ಲೆಗ್ ಬ್ರೇಕ್ ಮತ್ತು ಗೂಗ್ಲಿ ಸ್ಪೆಷಲಿಸ್ಟ್ ಯಜುವೇಂದ್ರ ಚಹಾಲ್ ಅವರನ್ನು ವಿಶ್ವಕಪ್​ಗೆ ಏಕೆ ಆಯ್ಕೆ ಮಾಡಿಲ್ಲ ಎಂಬುದರ ಬಗ್ಗೆ …

Read More »

ಕುಲಗೋಡಕ್ಕೆ ನಾಡ ಕಛೇರಿ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ

ಮೂಡಲಗಿ : ಕುಲಗೋಡ ಗ್ರಾಮಸ್ಥರ ಪ್ರಮುಖ ಬೇಡಿಕೆಯಾಗಿರುವ ನಾಡ ಕಛೇರಿಯನ್ನು ಕುಲಗೋಡದಲ್ಲಿ ಆರಂಭಿಸಲು ಪ್ರಯತ್ನಿಸುತ್ತೇನೆ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಗ್ರಾಮಸ್ಥರಿಗೆ ಭರವಸೆ ನೀಡಿದರು. ಕುಲಗೋಡ ಗ್ರಾಮದ ಬಲಭೀಮ ದೇವಸ್ಥಾನದಲ್ಲಿ ಗ್ರಾಮಸ್ಥರ ಸತ್ಕಾರ ಸ್ವೀಕರಿಸಿ ಮಾತನಾಡಿದ ಅವರು, ಕುಲಗೋಡ ಗ್ರಾಮವು ಈಗಾಗಲೇ ಅರಭಾವಿ ನಾಡ ಕಛೇರಿಗೆ ಒಳಪಟ್ಟಿದ್ದರಿಂದ ಇಲ್ಲಿನ ಸಾರ್ವಜನಿಕರಿಗೆ ಅರಭಾವಿ ದೂರವಾಗುತ್ತಿರುವುದರಿಂದ ಕುಲಗೋಡದಲ್ಲಿಯೇ ಈ ಕಛೇರಿಯನ್ನು ಆರಂಭಿಸಲಿಕ್ಕೆ ಕಂದಾಯ ಇಲಾಖಾಧಿಕಾರಿಗಳಿಗೆ ನಿರ್ದೇಶನ ನೀಡುವುದಾಗಿ ತಿಳಿಸಿದರು. ರಾಜ್ಯದಲ್ಲಿ ಕಾಂಗ್ರೇಸ್ …

Read More »