Breaking News
Home / ರಾಜಕೀಯ (page 11)

ರಾಜಕೀಯ

ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು ಉಡುಪಿ: ಟಿಪ್ಪರ್ ಮತ್ತು ಬೈಕ್ ನಡುವೆ ಭೀಕರ ಅಪಘಾತ ನಡೆದು ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಉಡುಪಿಯಲ್ಲಿ ಶುಕ್ರವಾರ ನಡೆದಿದೆ. ಅಂಬಾಗಿಲು – ಉಡುಪಿ ಮುಖ್ಯ ರಸ್ತೆಯಲ್ಲಿ ಘಟನೆ ನಡೆದಿದ್ದು, ಅಪಘಾತದ ರಭಸಕ್ಕೆ ಟಿಪ್ಪರ್ ನ ಅಡಿ ಭಾಗಕ್ಕೆ ಬೈಕ್ ಬಿದ್ದಿದೆ.   ಮೃತ ಬೈಕ್ ಸವಾರನನ್ನು ಬ್ರಹ್ಮಾವರದ ಮಟಪಾಡಿ ಮೂಲದ ಪ್ರಭಾಕರ ಆಚಾರಿ …

Read More »

ಮತದಾನದ ವೇಳೆ ಕಲ್ಲು ತೂರಾಟ. ಬಿಜೆಪಿ ನಾಯಕನಿಗೆ ಗಾಯ

ಪಶ್ಚಿಮ ಬಂಗಾಳ: 21 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಒಟ್ಟು 102 ಕ್ಷೇತ್ರಗಳಿಗೆ ಇಂದು (ಶುಕ್ರವಾರ) ಮೊದಲ ಹಂತದಲ್ಲಿ ಮತದಾನ ನಡೆಯುತ್ತಿದ್ದು ಈ ನಡುವೆ ಪಶ್ಚಿಮ ಬಂಗಾಳದಲ್ಲಿ ಹಿಂಸಾಚಾರ ನಡೆದ ವರದಿಯಾಗಿದೆ. ಪಶ್ಚಿಮ ಬಂಗಾಳದ ಕೂಚ್ ಬೆಹಾರ್‌ನಲ್ಲಿ ಬೆಳಿಗ್ಗೆ ಮತದಾನ ಪ್ರಕ್ರಿಯೆ ನಡೆದ ಕೆಲ ಹೊತ್ತಿನಲ್ಲೇ ಹಿಂಸಾಚಾರ ಭುಗಿಲೆದ್ದಿದ್ದು, ಚಂದಮಾರಿಯ ಮತಗಟ್ಟೆಯೊಂದರ ಬಳಿ ಕಲ್ಲು ತೂರಾಟದ ವರದಿಗಳು ಹೊರಹೊಮ್ಮಿವೆ. ಈ ವೇಳೆ ಬಿಜೆಪಿ ಬೂತ್ ಅಧ್ಯಕ್ಷರು ಗಾಯಗೊಂಡಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ …

Read More »

ಮಗಳ ಹತ್ಯೆ ಬಗ್ಗೆ ತಂದೆ ನಿರಂಜನ್ ಹಿರೇಮಠ ಪ್ರತಿಕ್ರಿಯೆ

ಬೆಂಗಳೂರು, ಏಪ್ರಿಲ್ 19: ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಸದಸ್ಯ ನಿರಂಜನ್ ಹಿರೇಮಠ ಅವರ ಮಗಳು ನೇಹಾ ಹಿರೇಮಠರನ್ನು ಮುಸ್ಲಿಂ ಸಮುದಾಯದ ವ್ಯಕ್ತಿ ಚಾಕುವಿನಿಂದ ಚುಚ್ಚಿ ಕೊಲೆ ಮಾಡಿದ್ದಾನೆ. ಈ ಕುರಿತು ಸ್ವತಃ ಮೃತಳ ತಂದೆ ಪ್ರತಿಕ್ರಿಯಿಸಿದ್ದಾರೆ. ಮಗಳು ಕಳೆದುಕೊಂಡ ತಂದೆಯ ಆಕ್ರಂದನ ಮುಗಿಲು ಮುಟ್ಟಿದೆ. ಈ ನೋವಿನಲ್ಲೇ ಮಗಳ ಕುರಿತು ಮಾತನಾಡಿರುವ ಅವರು, ನನ್ನ ಮಗಳ ಕೊಲೆ ಹಿಂದೆ ಲಬ್ ಜಿಹಾದ್ ಇದೆ. ಕೊಲೆಗಾರನ ಜೊತೆಗೆ ನಾಲ್ಲೈದು ಅದೇ …

Read More »

ಬಾಗಲಕೋಟೆ ಲೋಕಸಭಾ ಕ್ಷೇತ್ರ: ಮೊದಲ ಬಾರಿಗೆ ಅರಳಿದ್ದ ಕಮಲ

ಬಾಗಲಕೋಟೆ: ಕೆಲವೊಮ್ಮೆ ಸ್ವತಂತ್ರವಾಗಿ, ಕೆಲವೊಮ್ಮೆ ಜನಸಂಘಕ್ಕೆ ಬೆಂಬಲ ಕೊಟ್ಟು ಬಂದಿದ್ದ ಬಿಜೆಪಿ ಬಾಗಲಕೋಟೆ ಲೋಕಸಭಾ ಕ್ಷೇತ್ರದಲ್ಲಿ ಚುನಾವಣೆಗಳ ಆರಂಭದ 54 ವರ್ಷಗಳ ನಂತರ ಮೊದಲ ಬಾರಿಗೆ ಖಾತೆ ತೆರೆಯುವಲ್ಲಿ ಯಶಸ್ವಿಯಾಯಿತು. ರಾಜ್ಯದಲ್ಲಿ ಸಂಘಟನೆ ಆರಂಭವಾಗಿ ಹಲವು ದಶಕಗಳೇ ಕಳೆದಿದ್ದವು. ವಿಧಾನಸಭೆಗೆ ಹಲವರು ಆಯ್ಕೆ ಕೂಡ ಆಗಿದ್ದರು. ಲೋಕಸಭೆಗೆ ಆಯ್ಕೆಯಾಗಿರಲಿಲ್ಲ. ಕಾಂಗ್ರೆಸ್‌ ಹಾಗೂ ಜನತಾ ಪರಿವಾರದ ನಡುವಿನ ಪೈಪೋಟಿ ಎಂದೇ ಪರಿಗಣಿಸಲಾಗುತ್ತಿತ್ತು. ಮೊದಲ ಬಾರಿಗೆ ಗೆದ್ದ ಬಿಜೆಪಿ ಅಭ್ಯರ್ಥಿ ಹಿಂದಿನ ಚುನಾವಣೆಗಳಲ್ಲಿಗಿಂತ ಹೆಚ್ಚಿನ …

Read More »

ನೇಹಾ ಹತ್ಯೆ ಪ್ರಕರಣವನ್ನು ಎಸ್‍ಐಟಿ ತನಿಖೆ ನಡೆಸುವಂತೆ ಬೊಮ್ಮಾಯಿ ಆಗ್ರಹ

ನೇಹಾ ಹತ್ಯೆ ಪ್ರಕರಣವನ್ನು ಎಸ್‍ಐಟಿ ತನಿಖೆ ನಡೆಸುವಂತೆ ಬೊಮ್ಮಾಯಿ ಆಗ್ರಹ ಹುಬ್ಬಳ್ಳಿ,ಏ.19- ಹಾಡಹಗಲೇ ಕಾಲೇಜು ಕ್ಯಾಂಪಸ್‍ನಲ್ಲಿ ಯುವತಿಯ ಹತ್ಯೆ ಮಾಡಿರುವುದು ಅತ್ಯಂತ ಆಘಾತಕಾರಿ, ಸಮಾಜಘಾತುಕ ಶಕ್ತಿಗಳಿಗೆ ಪೊಲೀಸ್ ಠಾಣೆಗಳಲ್ಲಿ ರಾಜ ಮರ್ಯಾದೆ ಸಿಗುತ್ತಿರುವುದರಿಂದ ರಾಜಾರೋಷವಾಗಿ ಕಾನೂನುಬಾಹಿರ ಚಟುವಟಿಕೆಗಳು ನಡೆಯುತ್ತಿವೆ. ರಾಜ್ಯ ಸರ್ಕಾರ ಪ್ರಕರಣವನ್ನು ಎಸ್‍ಐಟಿಗೆ ವಹಿಸಿ ತನಿಖೆ ನಡೆಸಬೇಕೆಂದು ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ. ಹುಬ್ಬಳ್ಳಿಯಲ್ಲಿಂದು ನೇಹಾ ಪಾರ್ಥಿವ ಶರೀರ ಇರುವ ಕಿಮ್ಸ್‍ಗೆ ಭೇಟಿ ನೀಡಿ, …

Read More »

ಡಿ.ಕೆ ಶಿವಕುಮಾರ್‌ ಪರಮನೀಚ: ಮಾಜಿ ಸಿಎಂ H.D.K.

ಡಿ.ಕೆ ಶಿವಕುಮಾರ್‌ ಪರಮನೀಚ: ಮಾಜಿ ಸಿಎಂ ಹೆಚ್‌ ಡಿ ಕುಮಾರಸ್ವಾಮಿ ಬೆಂಗಳೂರು: ಖಾಸಗಿ ಕಾರ್ಯಕ್ರಮವೊಂದರಲ್ಲಿ ಡಿಸಿಎಂ ಶಿವಕುಮಾರ್‌ ಅವರು ಹೇಳಿದ್ದ ಹೇಳಿಕೆಗೆ ಸಂಬಂಧಪಟ್ಟತೆ ಹೇಳಿರುವ ಹೇಳಿಕೆಗೆ ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ ವ್ಯಾಪಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅವರು ಇಂದು ನಗರದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡುತ್ತ ತಾಯಿಯ ಮೇಲೆ ಕಣ್ಣಿಡಬೇಕು ಅಂಥ ಹೇಳಿರುವ ಪರಮನೀಚನ ಬಗ್ಗೆ ನಾನು ಯಾಕೆ ಚರ್ಚೆ ಮಾಡಬೇಕು ಅಂತ ಹೇಳಿದರು. ಖಾಸಗಿ ವಾಹಿನಿಯೊಂದರಲ್ಲಿ ಭಾಗವಹಿಸಿದ್ದ ಮಾತನಾಡಿದ್ದ ಡಿಸಿಎಂ …

Read More »

ಹರ್ಷಿಕಾ ಪೂಣಚ್ಚ ದಂಪತಿ ಮೇಲೆ ಅನ್ಯಕೋಮಿನ ಗುಂಪಿನಿಂದ ಹಲ್ಲೆ; ಸ್ಥಳದಲ್ಲಿದ್ದರು ಸಹಾಯಕ್ಕೆ ಬಾರದ ಪೊಲೀಸರು

ಬೆಂಗಳೂರು: ಸ್ಯಾಂಡಲ್​ವುಡ್​ನ ಸ್ಟಾರ್​ ಕಪಲ್​ ಎಂದೇ ಖ್ಯಾತಿ ಪಡೆದಿರುವ ನಟಿ ಹರ್ಷಿಕಾ ಪೂಣಚ್ಚ ಹಾಗೂ ಆಕೆಯ ಪತಿ ಭುವನ್ ಪೊನ್ನಣ್ಣ ಮೇಲೆ ಅನ್ಯಕೋಮಿನ ಪುಂಡರ ಗುಂಪೊಂದು ಹಲ್ಲೆ ಮಾಡಿ ಅಟ್ಟಹಾಸ ಮೆರೆದಿರುವ ಘಟನೆ ನಡೆದಿದೆ. ಈ ಕುರಿತು ನಟಿ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದು, ನಮ್ಮ ಬೆಂಗಳೂರಿನಲ್ಲಿ ನಾವು ಸ್ಥಳೀಯರು ಎಷ್ಟು ಸುರಕ್ಷಿತ ಎಂದು ಪ್ರಶ್ನಿಸಿದ್ದಾರೆ ಗೆಳೆಯರೇ ,ನಮ್ಮ ಬೆಂಗಳೂರಿನಲ್ಲಿ ನಾವು ಸ್ಥಳೀಯರು ಎಷ್ಟು ಸುರಕ್ಷಿತ ಎಂಬ ಪ್ರಶ್ನೆ ನನಗೆ ಮೂಡಿದೆ. ಒಂದಷ್ಟು …

Read More »

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

ದಾವಣಗೆರೆ: ಯಡಿಯೂರಪ್ಪ ಬಳಿಕ ರಾಜ್ಯದ ಮುಖ್ಯ ಮಂತ್ರಿ ಆಗುವ ಎಲ್ಲ ಅರ್ಹತೆ ಗಳಿದ್ದರೂ ಬಸನಗೌಡ ಪಾಟೀಲ್‌ ಯತ್ನಾಳ್‌ ಅವರಿಗೆ ಅವಕಾಶ ವಂಚಿಸಲಾಯಿತು. ಪಂಚಮಸಾಲಿ ಸಮು ದಾಯದವರೆಂಬ ಕಾರಣಕ್ಕಾ ಗಿಯೇ ಅವರಿಗೆ ಅವಕಾಶ ನೀಡದೆ ಮಲತಾಯಿ ಧೋರಣೆ ತೋರಲಾ ಯಿತು ಎಂದು ಹರಿಹರ ಪಂಚಮಸಾಲಿ ಗುರುಪೀಠದ ವಚನಾನಂದ ಸ್ವಾಮೀಜಿ ಆರೋಪಿಸಿದ್ದಾರೆ. ಈ ಕುರಿತು ಮಾಧ್ಯಮಗಳಿಗೆ ಲಿಖಿತ ಹೇಳಿಕೆ ನೀಡಿರುವ ಅವರು, ಪಂಚಮಸಾಲಿ ಸಮುದಾಯಕ್ಕೆ ಅನ್ಯಾಯವಾಗಿದೆ ಎನ್ನುವ ತಮ್ಮ ಧ್ವನಿಯ ಹಿಂದೆ ಯತ್ನಾಳ್‌ ಅವರೂ …

Read More »

ಯದುವೀರ್ ಸಿಕ್ತಿಲ್ಲ ಒಕ್ಕಲಿಗರ ಸಪೋರ್ಟ್

ಮೈಸೂರು: ಈ ಬಾರಿ ಪ್ರತಾಪ್ ಸಿಂಹಗೆ ಟಿಕೆಟ್ ಮಿಸ್ ಮಾಡಿರುವ ಬಿಜೆಪಿ ರಾಜ ವಂಶಸ್ಥರಿಗೆ ಟಿಕೆಟ್ ನೀಡಿದೆ. ಆದರೆ ಪ್ರತಾಪ್ ಸಿಂಹಗೆ ಟಿಕೆಟ್ ಸಿಗದ ಕಾರಣ, ಒಕ್ಕಲಿಗರು ಕಾಂಗ್ರೆಸ್ ಗೆ ಬೆಂಬಲ ಘೋಷಿಸಿದ್ದಾರೆ. ಈ ಬಾರಿ ನಾವೂ ಕಾಂಗ್ರೆಸ್ ಅಭ್ಯರ್ಥಿ ಲಕ್ಷ್ಮಣ್ ಅವರನ್ನು ಬೆಂಬಲಿಸುತ್ತೇವೆ ಎಂದು ಒಕ್ಕಲಿಗರ ಸಂಘದ ಅಧ್ಯಕ್ಷ ಮರಿಸ್ವಾಮಿ ಹೇಳಿದ್ದಾರೆ. ಒಕ್ಕಲಿಗರು ಎಂಬ ಕಾರಣಕ್ಕೆ ಮೈಸೂರಿನಲ್ಲಿ ಪ್ರತಾಪ್ ಸಿಂಹ ಅವರಿಗೆ ಟಿಕೆಟ್ ಕೈತಪ್ಪಿದೆ. ಲಕ್ಷ್ಮಣ್ ಅವರು ಒಕ್ಕಲಿಗರಲ್ಲ ಎಂದು …

Read More »

ಕಾಂಗ್ರೆಸ್ ಅಭ್ಯರ್ಥಿಗಳು ಸೋತಲ್ಲಿ ಸಿದ್ದರಾಮಯ್ಯ ಸ್ಥಾನಕ್ಕೆ ತೊಂದರೆ: ಸಚಿವ ಬೈರತಿ ಸುರೇಶ್

ಕೋಲಾರ: ಕಾಂಗ್ರೆಸ್ ಅಭ್ಯರ್ಥಿಗಳು ಸೋತಲ್ಲಿ ಸಿದ್ದರಾಮಯ್ಯ ಸ್ಥಾನಕ್ಕೆ ತೊಂದರೆಯಾಗುತ್ತದೆ. ಹಾಗಾಗಿ ಕುರುಬ ಸಮುದಾಯದವರು ಸಿದ್ದರಾಮಯ್ಯನವರ ಕೈ ಬಲಪಡಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಹೇಳಿದ್ದಾರೆ. ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಕೋಲಾರದ ಹಾಲಿಸ್ಟರ್ ಭವನದಲ್ಲಿ ಆಯೋಜಿಸಿದ್ದ ಕುರುಬ ಸಮುದಾಯದವರ ಸಭೆಯಲ್ಲಿ ಅವರು ಮಾತನಾಡಿ, ಕಾಂಗ್ರೆಸ್ ಅಭ್ಯರ್ಥಿಗಳು ಸೋತರೆ ಸಿದ್ದರಾಮಯ್ಯ ಅವರ ಸ್ಥಾನಕ್ಕೆ ತೊಂದರೆಯಾಗುವುದರಿಂದ ಅವರ ಕೈ ಬಲಪಡಿಸಬೇಕು.ಕೋಲಾರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕೆ.ವಿ. ಗೌತಮ್ ಅವರನ್ನು ಗೆಲ್ಲಿಸಲು ಸಹಕಾರ ನೀಡಬೇಕು …

Read More »