Breaking News
Home / ರಾಜಕೀಯ (page 1142)

ರಾಜಕೀಯ

ತಂದೆ ಕೊಲೆಗೈದವನನ್ನು ಕಲ್ಲು ಎತ್ತಾಕಿ ಕೊಂದ ಮಗ!

ಚಿಕ್ಕೋಡಿ(ಬೆಳಗಾವಿ): ತಂದೆಯ ಕೊಲೆ ಮಾಡಿರುವ ವೈಷಮ್ಯದಿಂದ ವ್ಯಕ್ತಿಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿ ಮಗ ಸೇಡು ತೀರಿಸಿಕೊಂಡ ಘಟನೆ  ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಬೆಂಡವಾಡ ಗ್ರಾಮದಲ್ಲಿ ನಡೆದಿದೆ. ವಿಠ್ಠಲ ಕಮತೆ(35) ಹಾಗೂ ಸುರೇಶ ಡಂಗೇರ್(30) ಕೊಲೆ ಮಾಡಿ ಪೊಲೀಸರ ಬಲೆಗೆ ಬಿದ್ದ ಆರೋಪಿಗಳು. ಶೌಕತ್ ನದಾಫ್(45) ಭೀಮಪ್ಪನ ಮಗ ವಿಠ್ಠಲನಿಂದ ಕೊಲೆಯಾದವನು. 10 ವರ್ಷದ ಹಿಂದೆ ಜೈಲಿನಲ್ಲಿದ್ದ ಬೆಂಡವಾಡ ಗ್ರಾಮದ ಭೀಮಪ್ಪ ಕಮತೆಯನ್ನು ಕೊಲೆ ಮಾಡಿರುವ …

Read More »

ಡಿಕೆಶಿ, ಸಿದ್ದರಾಮಯ್ಯ ಸಿಎಂ ಆಗೋ ಕನಸಿನ ಲೋಕದಲ್ಲಿದ್ದಾರೆ: ಕೆ.ಎಸ್ ಈಶ್ವರಪ್ಪ

ರಾಯಚೂರು: ಹಿಜಬ್ ವಿವಾದದಿಂದ ಕಾಂಗ್ರೆಸ್‍ನವರು ಮುಸ್ಲಿಂ ಓಟು ಪಡೆಯುವ ಭ್ರಮೆಯಲ್ಲಿದ್ದಾರೆ. ಸಿದ್ದರಾಮಯ್ಯ ಹಿಜಬ್ ಪರ ಮಾತನಾಡುತ್ತಾರೆ. ಅವರಲ್ಲೇ ಎರಡು ಗುಂಪು ಗಳಾಗಿವೆ. ಡಿ.ಕೆ.ಶಿವಕುಮಾರ್, ಸಿದ್ದರಾಮಯ್ಯ ಸಿಎಂ ಆಗುವ ಕನಸಿನ ಲೋಕದಲ್ಲಿದ್ದಾರೆ ಅಂತ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಕೆ.ಎಸ್ ಈಶ್ವರಪ್ಪ ಹೇಳಿದ್ದಾರೆ. ರಾಯಚೂರಿನಲ್ಲಿ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆ ಪ್ರಗತಿ ಪರಿಶೀಲನೆ ಸಭೆ ನಡೆಸಿ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಯು.ಟಿ.ಖಾದರ್ ಮತ್ತು ಕೆಲವು ಶಾಸಕರು ಹಿಜಬ್ ವಿವಾದದ …

Read More »

ಅಧಿವೇಶನವನ್ನು ಹಳ್ಳ ಹಿಡಿಸಿದ್ದಕ್ಕೂ ಈ ಎಲ್ಲಾ ಪ್ರತಿಗಾಮಿ ಘಟನೆಗಳಿಗೆ ಸಂಬಂಧ ಇದೆ

ಬೆಂಗಳೂರು : ಶಿವಮೊಗ್ಗ ಘಟನೆ ಮತ್ತು ಹಿಜಬ್‌ ಪ್ರಕರಣದ ವಿಚಾರಕ್ಕೆ ಕೂಡಲೇ ರಾಜ್ಯಪಾಲ ಮಧ್ಯೆ ಪ್ರವೇಶ ಮಾಡಬೇಕು ಎಂದು ಮಾಜಿ ಸಿಎಂ ಹೆಚ್‌.ಡಿ ಕುಮಾರಸ್ವಾಮಿ ಆಗ್ರಹಿಸಿ ಸರಣಿ ಟ್ವೀಟ್ ಮಾಡಿದ್ದಾರೆ. ರಾಜ್ಯಪಾಲರು ಮಧ್ಯೆ ಪ್ರವೇಶ ಮಾಡುವಂತೆ ಒತ್ತಾಯ ಮಾಡಿದ್ದಾರೆ. ರಾಜ್ಯದಲ್ಲಿ ಶಾಂತಿ-ಭದ್ರತೆಗೆ ಅಪಾಯ ಎದುರಾಗಿದೆ. ಅಭಿವೃದ್ಧಿ, ಆವಿಷ್ಕಾರ, ಸೃಜನಶೀಲ, ವಿಜ್ಞಾನ-ತಂತ್ರಜ್ಞಾನಕ್ಕೆ ಹೆಸರಾದ ಕರ್ನಾಟಕ ಈಗ ವಿರುದ್ಧ ದಿಕ್ಕಿನಲ್ಲಿ ಜಗತ್ತಿನ ಗಮನ ಸೆಳೆದು ಕೃತಾರ್ಥವಾಗುತ್ತಿದೆ. ರಾಷ್ಟ್ರೀಯ ಪಕ್ಷಗಳೆರಡೂ ಕರ್ನಾಟಕದ ಪ್ರತಿಷ್ಠೆಗೆ ಕೊಳ್ಳಿ ಇಟ್ಟು …

Read More »

ಹಿಜಬ್ ದ್ವೇಷದಿಂದ ನಮಗೆ ಪರೀಕ್ಷೆ ಬರೆಯಲು ಆಗಿಲ್ಲ: ವಿದ್ಯಾರ್ಥಿನಿ

ಉಡುಪಿ: ಇಂದು ನಮಗೆ ಅಂತಿಮ ಪ್ರಾಕ್ಟಿಕಲ್ ಪರೀಕ್ಷೆ ಇತ್ತು. ಆದರೆ ಹಿಜಬ್ ಕುರಿತಾದ ದ್ವೇಷದಿಂದ ನಮಗೆ ಪರೀಕ್ಷೆ ಬರೆಯಲು ಆಗಲಿಲ್ಲ ಎಂದು ಉಡುಪಿಯ ಹಿಜಬ್ ಹೋರಾಟಗಾರ್ತಿ ಅಲ್ಮಾಸ್ ಆಕ್ರೋಶ ವ್ಯಕ್ತಪಡಿಸಿದಳು. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಇಂದು ನಮಗೆ ಅಂತಿಮ ಪ್ರಾಕ್ಟಿಕಲ್ ಪರೀಕ್ಷೆ ಇತ್ತು. ನಾವು ವಿಜ್ಞಾನದ ರೆಕಾರ್ಡ್ ಬುಕ್ ಪೂರ್ಣಗೊಳಿಸಿದ್ದೇನೆ. ಅಪಾರ ನಿರೀಕ್ಷೆಯೊಂದಿಗೆ ನಾವು ಪರೀಕ್ಷೆ ಬರೆಯಲು ಕಾಲೇಜಿಗೆ ಹೋಗಿದ್ದೆವು. ನಮ್ಮ ಪ್ರಾಂಶುಪಾಲರು ನಮಗೆ ಪರೀಕ್ಷೆ ಬರೆಯುವ ಅವಕಾಶ …

Read More »

ಪ್ರಮೋದ್ ಮುತಾಲಿಕ್, ಚೈತ್ರಾಗೆ ಜಿಲ್ಲೆ ಪ್ರವೇಶಿಸದಂತೆ ನಿರ್ಬಂಧ ಹೇರಿ ಡಿಸಿ ಆದೇಶ

ಕಲಬುರಗಿ: ಜಿಲ್ಲೆಯಲ್ಲಿ ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಫೆ.27 ರಿಂದ ಮಾ.3ರ ವರೆಗೆ ಶ್ರೀರಾಮ ಸೇನೆಯ ರಾಜ್ಯಾಧ್ಯಕ್ಷ ಪ್ರಮೋದ ತಂದೆ ಹಣಮಂತರಾವ ಮುತಾಲಿಕ, ಕುಂದಾಪುರದ ಚೈತ್ರಾ ತಂ. ಬಾಲಕೃಷ್ಣ ನಾಯಕ್ ಅವರನ್ನು ಕಲಬುರಗಿ ಜಿಲ್ಲೆ ಪ್ರವೇಶಿಸದಂತೆ ಸಿ.ಆರ್.ಪಿ.ಸಿ ಕಾಯ್ದೆ-1973ರ ಕಲಂ-132, 143, 144 ಹಾಗೂ 144ಎ ರನ್ವಯ ನಿರ್ಬಂಧ ಹೇರಿ ಜಿಲ್ಲಾಧಿಕಾರಿ ಯಶವಂತ ವಿ. ಗುರುಕರ್ ಅವರು ಆದೇಶ ಹೊರಡಿಸಿದ್ದಾರೆ.   ಇದಲ್ಲದೆ ಜೇವರ್ಗಿ ತಾಲೂಕಿನ ಆಂದೋಲದ ಕರುಣೇಶ್ವರ …

Read More »

ಐಪಿಎಲ್ 2022 – ಧೋನಿಯ ಹೊಸ ಮೀಸೆ ಲುಕ್ ವೈರಲ್

ಚೆನ್ನೈ: ಐಪಿಎಲ್ 2022ಕ್ಕೂ ಮುನ್ನ ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಎಮ್ ಎಸ್ ಧೋನಿಯ ಹೊಸ ಮೀಸೆ ನೋಟವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಚೆನ್ನೈ ಸೂಪರ್ ಕಿಂಗ್ಸ್ ತಂಡದ ಅಭಿಮಾನಿಗಳು ಧೋನಿಯ ಈ ಹೊಸ ಲುಕ್‍ಗೆ ‘ತಲೈವರ್ ಸೂಪರ್ ಸ್ಟಾರ್’ ನಂತೆ ಕಾಣುತ್ತೀರಾ ಎಂದು ಬರೆದುಕೊಂಡಿದ್ದಾರೆ. ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಧೋನಿಯವರು ತಮ್ಮ ನಾಯಕತ್ವ ಮತ್ತು ವಿಕೆಟ್ ಕೀಪಿಂಗ್ ಕೌಶಲ್ಯಗಳಿಂದಲೇ ಹೆಸರುವಾಸಿಯಾದವರು. ಆದರೆ ಅವರು ಪ್ರತೀ …

Read More »

ನಮ್ಮ ತ್ರಿವರ್ಣ ಧ್ವಜ ಇದ್ದ ಬಸ್‌ಗಳನ್ನು ನೋಡಿದಾಗ ಮತ್ತೆ ಬದುಕಿದಂತಾಯ್ತು: ವಿದ್ಯಾರ್ಥಿನಿ

ಬೆಂಗಳೂರು: ಉಕ್ರೇನ್ ಮತ್ತು ರಷ್ಯಾ ನಡುವಿನ ಸಂಘರ್ಷ ಇಂದು 5ನೇ ದಿನಕ್ಕೆ ಕಾಲಿಟ್ಟಿದೆ. ರಷ್ಯಾ ದಾಳಿಯಿಂದ ಪುಟ್ಟ ರಾಷ್ಟ್ರ ಉಕ್ರೇನ್ ಕಂಗೆಟ್ಟಿದ್ದು, ವಿದ್ಯಾಭ್ಯಾಸಕ್ಕಾಗಿ ಭಾರತದಿಂದ ತೆರಳಿದ ವಿದ್ಯಾರ್ಥಿಗಳು ಜೀವ ಭಯದಲ್ಲಿದ್ದಾರೆ. ಎಲ್ಲಾ ವಿದ್ಯಾರ್ಥಿಗಳನ್ನು ತಮ್ಮ ತಾಯ್ನಾಡಿಗೆ ಕರೆದುಕೊಂಡು ಬರುವಲ್ಲಿ ಸತತ ಪ್ರಯತ್ನ ನqಯುತ್ತಿದ್ದು, ಈಗಾಗಲೇ ಹಲವಾರು ಮಂದಿ ವಾಪಸ್ಸಾಗಿದ್ದು, ತಮ್ಮ ತಮ್ಮ ಅನುಭವಗಳನ್ನು ಹಂಚಿಕೊಳ್ಳುತ್ತಿದ್ದಾರೆ. ಅಂತೆಯೇ ವಿದ್ಯಾರ್ಥಿನಿಯೊಬ್ಬಳು ತಮ್ಮ ದೇಶದ ಧ್ವಜ ಇರುವ ಬಸ್ ಕಂಡಾಗ ಆದ ಸಂತಸವನ್ನು ಶೇರ್ ಮಾಡಿಕೊಂಡಿದ್ದಾಳೆ. …

Read More »

ಮತ್ತೆ ‘ಬಿಬಿಎಂಪಿ ಕಚೇರಿ’ಗಳ ಮೇಲೆ ‘ಎಸಿಬಿ ದಾಳಿ’ |

ಬೆಂಗಳೂರು: ಈಗಾಗಲೇ ಎರಡು ದಿನಗಳ ಹಿಂದಷ್ಟೇ ದೊಡ್ಡ ಪ್ರಮಾಣದ ಭ್ರಷ್ಟಾಚಾರ ಆರೋಪ ಕೇಳಿ ಬಂದಿತ್ತು. ಈ ಹಿನ್ನಲೆ ಎಸಿಬಿ ಅಧಿಕಾರಿಗಳು ( ACB Officer ) ಬಿಬಿಎಂಪಿ ಕೇಂದ್ರ ಕಚೇರಿ ಸೇರಿದಂತೆ 27 ವಿಭಾಗೀಯ ಕಚೇರಿಗಳ ಮೇಲೆ ದಾಳಿ ( ACB Raid ) ನಡೆಸಿ, ಮಹತ್ವದ ದಾಖಲೆಗಳನ್ನು ಕಲೆ ಹಾಕಿದ್ದರು. ಇದೀಗ ಇಂದು ಮತ್ತೆ ಎಸಿಬಿ ಅಧಿಕಾರಿಗಳು ಬಿಬಿಎಂಪಿ ಕಚೇರಿಗಳ ( BBMP Office ) ಮೇಲೆ ದಾಳಿ …

Read More »

KPSC ನೇಮಕಾತಿ: ಕಲ್ಯಾಣ ಕರ್ನಾಟಕದ 59 ಸೇರಿ 188 ಎಂಜಿನಿಯರ್ ಹುದ್ದೆಗೆ ಇಂದಿನಿಂದ ಅರ್ಜಿ ಸಲ್ಲಿಕೆ

ಬೆಂಗಳೂರು: ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ 188 ಸಹಾಯಕ ಅಭಿಯಂತರರು ಹುದ್ದೆಗಳ ನೇಮಕಾತಿಗೆ ಇಂದಿನಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭಿಸಲಾಗುತ್ತದೆ. ಕರ್ನಾಟಕ ಲೋಕಸೇವಾ ಆಯೋಗ ಫೆಬ್ರವರಿ 21 ರಂದು ನೇಮಕಾತಿಗೆ ಸಂಬಂಧಿಸಿದಂತೆ ಅಧಿಸೂಚನೆ ಪ್ರಕಟಿಸಿದೆ. ಉಳಿಕೆ ಮೂಲ ವೃಂದ 129, ಕಲ್ಯಾಣ ಕರ್ನಾಟಕಕ್ಕೆ ಮೀಸಲಾದ 59 ಹುದ್ದೆಗಳು ಸೇರಿದಂತೆ ಒಟ್ಟು 188 ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುವುದು. ಮಾರ್ಚ್ 30 ಅರ್ಜಿ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಮಾರ್ಚ್ 31 ಅರ್ಜಿ …

Read More »

ಸಾವಿನ ರಸ್ತೆ ಎಂದು ಖ್ಯಾತಿ ಪಡೆದಿರುವ ಹುಬ್ಬಳ್ಳಿ -ಧಾರವಾಡ ಬೈಪಾಸ್ ರಸ್ತೆ ಅಗಲೀಕರಣಕ್ಕೆ ಸೋಮವಾರ ಚಾಲನೆ

ಧಾರವಾಡ, ಫೆಬ್ರವರಿ 28; ಸಾವಿನ ರಸ್ತೆ ಎಂದು ಖ್ಯಾತಿ ಪಡೆದಿರುವ ಹುಬ್ಬಳ್ಳಿ -ಧಾರವಾಡ ಬೈಪಾಸ್ ರಸ್ತೆ ಅಗಲೀಕರಣಕ್ಕೆ ಸೋಮವಾರ ಚಾಲನೆ ಸಿಗಲಿದೆ. 1014.79 ಕೋಟಿ ರೂ. ವೆಚ್ಚದಲ್ಲಿ 6 ಪಥದ ರಸ್ತೆ ನಿರ್ಮಾಣವಾಗಲಿದೆ. ಕೇಂದ್ರ ಸಚಿವ ನಿತಿನ್ ಗಡ್ಕರಿ ಹುಬ್ಬಳ್ಳಿ-ಧಾರವಾಡ ಬೈಪಾಸ್ ರಸ್ತೆ ಅಗಲೀಕರಣ ಕಾಮಗಾರಿಗೆ ಸೋಮವಾರ ಚಾಲನೆ ನೀಡಲಿದ್ದಾರೆ. ಸುಮಾರು 30.6 ಕಿ. ಮೀ. ರಸ್ತೆಯ ಅಗಲೀಕರಣ ಕಾಮಗಾರಿ 2 ವರ್ಷಗಳಲ್ಲಿ ಪೂರ್ಣಗೊಳ್ಳಲಿದೆ. ಸಾವಿನ ರಸ್ತೆ ಕುಖ್ಯಾತಿಯ ಹುಬ್ಬಳ್ಳಿ-ಧಾರವಾಡ …

Read More »