Breaking News
Home / ರಾಜಕೀಯ (page 1159)

ರಾಜಕೀಯ

ಕೊಪ್ಪಳ ಜಿಲ್ಲೆಯ ಅಂಜನಾದ್ರಿಯೇ ಹನುಮ ಹುಟ್ಟಿದ ಸ್ಥಳ. ಶೀಘ್ರವೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧಿಕೃತ ಘೋಷಣೆ ಮಾಡಲಿದ್ದಾರೆ: ಜೊಲ್ಲೆ

ಹೊಸಪೇಟೆ: ಕೊಪ್ಪಳ ಜಿಲ್ಲೆಯ ಅಂಜನಾದ್ರಿಯೇ ಹನುಮ ಹುಟ್ಟಿದ ಸ್ಥಳ. ಶೀಘ್ರವೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧಿಕೃತ ಘೋಷಣೆ ಮಾಡಲಿದ್ದಾರೆ ಎಂದು ಮುಜರಾಯಿ ಮತ್ತು ವಕ್ಫ್ ಸಚಿವೆ ಸಚಿವೆ ಶಶಿಕಲಾ ಜೊಲ್ಲೆ ಹೇಳಿದ್ದಾರೆ. ಮುಜರಾಯಿ ಇಲಾಖೆಯಿಂದ ದಾಖಲೆ, ಪುರಾವೆ ಸಂಗ್ರಹಿಸಲಾಗುತ್ತಿದೆ. ರಾಮಾಯಣದಲ್ಲಿ ಇಲ್ಲಿನ ಕಿಷ್ಕಿಂಧೆ ಬಗ್ಗೆ ಉಲ್ಲೇಖವಿದೆ. ಆದರೆ, ತಿರುಪತಿಯಲ್ಲಿ ಹನುಮನ ಜನ್ಮಸ್ಥಳವಿದೆ ಎನ್ನಲು ಐತಿಹಾಸಿಕ ಪುರಾವಿಯಿಲ್ಲ ಎಂದು ಭಾನುವಾರ ನಗರದಲ್ಲಿ ಸುದ್ದಿಗಾರರಿಗೆ ತಿಳಿಸಿದರು. ಅಯೋಧ್ಯೆಯ ಶ್ರೀರಾಮ ಮಂದಿರ ಮಾದರಿಯಲ್ಲಿ ಅಂಜನಾದ್ರಿ ಬೆಟ್ಟ …

Read More »

ಈಶ್ವರಪ್ಪ ರಾಜೀನಾಮೆಗೆ ಪಟ್ಟು : 5ನೇ ದಿನವೂ ಸದನದಲ್ಲಿ ಕೈ ನಾಯಕರ ಅಹೋರಾತ್ರಿ ಧರಣಿ

ಬೆಂಗಳೂರು: ಭವಿಷ್ಯದಲ್ಲಿ ಕೆಂಪುಕೋಟೆ ಮೇಲೆ ಕೇಸರಿ ಧ್ವಜ ಹಾರಾಡಬಹುದು ಎಂಬುದಾಗಿ ವಿವಾದಾತ್ಮಕ ಹೇಳಿಕೆ ನೀಡುವ ಮೂಲಕ, ರಾಷ್ಟ್ರಧ್ವಜಕ್ಕೆ ( National Flag) ಅವಮಾನ ಮಾಡಿದಂತ ಸಚಿವ ಈಶ್ವರಪ್ಪ ( Minister K S Eshwarappa) ಅವರನ್ನು ಸಂಪುಟದಿಂದ ಕೈ ಬಿಡುವಂತೆ ಒತ್ತಾಯಿಸಿ, ಕಾಂಗ್ರೆಸ್‌ ನಾಯಕರ ಅಹೋರಾತ್ರಿ ಧರಣಿ ಮುಂದುವರೆಸಿದ್ದಾರೆ.   ರಾಷ್ಟ್ರಧ್ವಜ ಕುರಿತು ಸಚಿವ ಕೆ.ಎಸ್.ಈಶ್ವರಪ್ಪ ಅವರ ವಿವಾದಾತ್ಮಕ ಹೇಳಿಕೆ ಹಿನ್ನೆಲೆಯಲ್ಲಿ ಸಚಿವ ಸ್ಥಾನಕ್ಕೆ ಈಶ್ವರಪ್ಪ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್ …

Read More »

ಚನ್ನಪಟ್ಟಣದ 50ಕ್ಕೂ ಹೆಚ್ಚು ಜೆಡಿಎಸ್ ಮುಖಂಡರು ಇಂದು ಬಿಜೆಪಿ ಸೇರ್ಪಡೆ; ಎಚ್‌ಡಿಕೆಗೆ ಸಿಪಿವೈ ಟಕ್ಕರ್

ರಾಮನಗರ, ಫೆಬ್ರವರಿ 21: ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಸ್ವಕ್ಷೇತ್ರ ಚನ್ನಪಟ್ಟಣದಲ್ಲಿ ಪಕ್ಷಾಂತರ ಪರ್ವ ಆರಂಭಗೊಂಡಿದೆ. ಚುನಾವಣೆಗೆ ವರ್ಷ ಇರುವಾಗಲೇ ಪಕ್ಷಾಂತರ ಜಿಗಿತ ಬಲು ಜೋರಾಗಿದೆ. ತೆನೆ ಇಳಿಸಿ ನೂರಾರು ಮುಖಂಡರು ಕಮಲ ಹಿಡಿಯುತ್ತಿದ್ದಾರೆ. ಇಷ್ಟಾದರೂ ದಳಪತಿ ಎಚ್‌ಡಿಕೆ ಮಾತ್ರ ಕೂಲ್ ಆಗಿದ್ದಾರೆ.   ರೇಷ್ಮೆ ನಗರಿ ರಾಮನಗರ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ತನ್ನದೇ ಆದ ನೆಲೆ ಉಳಿಸಿಕೊಂಡಿದೆ. ರಾಮನಗರ, ಚನ್ನಪಟ್ಟಣ ಹಾಗೂ ಮಾಗಡಿ ತಾಲೂಕಿನಲ್ಲಿ ಜೆಡಿಎಸ್ ಜೆಡಿಎಸ್ ಶಾಸಕರಿದ್ದಾರೆ. …

Read More »

ನಷ್ಟದ ಭೀತಿ ತಪ್ಪಿಸಲು ಕೆಎಂಎಫ್​ನಿಂದ ಹೊಸ ಪ್ಲಾನ್; ರಾಬಕೋ ಒಕ್ಕೂಟದಿಂದ ಸಿಬ್ಬಂದಿಗಳಿಗೆ ತುಪ್ಪದ ಟಾರ್ಗೆಟ್

ಬಳ್ಳಾರಿ:  ಪ್ರಮುಖ ಜಿಲ್ಲೆಗಳಾದ ಬಳ್ಳಾರಿ, ರಾಯಚೂರು, ಕೊಪ್ಪಳದ ಹಾಲು ಒಕ್ಕೂಟ ನಷ್ಟದತ್ತ ಸಾಗಿದೆ. ಸದ್ಯ ನಾಲ್ಕೂವರೆ ಕೋಟಿ ರೂಪಾಯಿ ನಷ್ಟದಲ್ಲಿರುವ ರಾಬಕೋ ಸಂಸ್ಥೆ ನಷ್ಟದಿಂದ ಹೊರಬರಲು ಹೊಸ ಯೋಜನೆಯೊಂದನ್ನು ಮಾಡಿದೆ. ತುಪ್ಪ ಮಾರಾಟ ಹೆಚ್ಚಳ ಮಾಡಲು ಸಿಬ್ಬಂದಿಗಳಿಗೆ ಹೊಸ ಟಾರ್ಗೆಟ್ ನೀಡಲಾಗಿದೆ. ಆದರೆ ಹೆಚ್ಚು ಹೆಚ್ಚು ತುಪ್ಪ(Ghee) ಮಾರಿ ಸಂಸ್ಥೆಗೆ ಲಾಭ ತರಬೇಕಾದ ಸಿಬ್ಬಂದಿಗಳಿಗೆ ಇದೀಗ ಕಡಿಮೆ ದರಕ್ಕೆ ಹೆಚ್ಚು ತುಪ್ಪ ಸಿಗುತ್ತಿರುವುದು ಅನುಮಾನಕ್ಕೆ ಎಡೆ ಮಾಡಿ ಕೊಟ್ಟಿದೆ ಕೆಎಂಎಫ್​ನ(KMF) …

Read More »

ಉಂಡು ಗೊರಕೆ ಹೊಡೆದ್ರು ಎಂದ ಅಶೋಕ್​ ವಿರುದ್ಧ ಕಾಂಗ್ರೆಸ್​​​ ಕಿಡಿ.. ಊಟದ ವೆಚ್ಚ ವಾಪಸ್​​ಗೆ ನಿರ್ಧಾರ

ಬೆಂಗಳೂರು: ಕಾಂಗ್ರೆಸ್ ನಾಯಕರು ವಿಧಾನಸಭೆಯಲ್ಲಿ ಉಂಡು ಗೊರಕೆ ಹೊಡೆಯುತ್ತಿದ್ದಾರೆ ಎಂದು ಸಚಿವ ಆರ್ ಅಶೋಕ್ ನೀಡಿದ್ದ ಹೇಳಿಕೆಯೀಗ ರಾಜ್ಯ ಕಾಂಗ್ರೆಸ್ಸಿಗರ ಆಕ್ರೋಶಕ್ಕೆ ಕಾರಣವಾಗಿದೆ. ವಿಧಾನಸೌಧದಲ್ಲಿ ಧರಣಿ ವೇಳೆ ಊಟದ ವೆಚ್ಚವನ್ನ ಸ್ವತಃ ಭರಿಸಲು ಕಾಂಗ್ರೆಸ್​ ನಾಯಕರು ನಿರ್ಧರಿಸಿದ್ದಾರೆ. ಈ ಬಗ್ಗೆ ವಿಧಾನಸಭೆ ಮೊಗಸಾಲೆಯಲ್ಲಿ ಸಿದ್ದರಾಮಯ್ಯ ಜೊತೆ ಕಾಂಗ್ರೆಸ್ ಶಾಸಕರಾದ ಡಾ. ರಂಗನಾಥ್, ರಾಜಶೇಖರ ಪಾಟೀಲ್, ಬಿ.ಕೆ. ಸಂಗಮೇಶ್ವರ್, ಪ್ರಕಾಶ್ ರಾಥೋಡ್, ಯಶವಂತರಾಯ ಹಾಗೂ ವೆಂಕಟರಮಣಯ್ಯ ಚರ್ಚೆ ನಡೆಸಿದ್ದಾರೆ. ಮಾನ ಮರ್ಯಾದೆ ಇದೆಯಾ …

Read More »

ಸಿದ್ದರಾಮಯ್ಯ, ಡಿಕೆಶಿ ಅವಹೇಳನ ಆರೋಪ.. ಸಚಿವ ಸೋಮಣ್ಣ ವಿರುದ್ಧ ಕಾಂಗ್ರೆಸ್​ ಪ್ರತಿಭಟನೆ

ಬೆಂಗಳೂರು: ಪ್ರತಿಪಕ್ಷ ನಾಯಕ ಸಿದ್ದರಾಮಯ್ಯರನ್ನು ವಸತಿ ಸಚಿವ ವಿ ಸೋಮಣ್ಣ ಸುಡುಗಾಡು ಸಿದ್ಧ ಎಂದು ಸಂಬೋಧಿಸಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ನಾಯಕರು ಇಂದು ಪ್ರತಿಭಟನೆ ನಡೆಸಿದರು. ಮಾಗಡಿರಸ್ತೆಯ ಟೋಲ್​ಗೇಟ್​ ವೃತ್ತದ ಶನೇಶ್ವರ ದೇವಸ್ಥಾನ ಮುಂಭಾಗ ಕಾಂಗ್ರೆಸ್ ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸಿ ಸಚಿವ ಸೋಮಣ್ಣ ಪ್ರತಿಕೃತಿ ದಹಿಸಿದ್ದಾರೆ. ಫೆ.12ರಂದು ಮೈಸೂರಿನಲ್ಲಿ ಸಂಸದ ನಿವಾಸ್ ಪ್ರಸಾದ್ ಅವರ ಮನೆಗೆ ಭೇಟಿ ನೀಡಿದಾಗ ಸೋಮಣ್ಣ ಅವರು ಸಿದ್ದರಾಮಯ್ಯ ಅವರನ್ನು ಸುಡುಗಾಡು ಸಿದ್ಧ ಎಂಬ ಹೇಳಿಕೆ ನೀಡಿದ್ದರು ಎನ್ನಲಾಗ್ತಿದೆ. …

Read More »

ಅಪ್ಪುವಿನಂತೆ ಸಾವಿನಲ್ಲೂ ಸಾರ್ಥಕತೆ ಮೆರೆದ ಮಾವ ರೇವನಾಥ್

ಬೆಂಗಳೂರು: ಹೃದಯಾಘಾತದಿಂದ ನಿಧನರಾದ ಅಶ್ವಿನಿ ಪುನೀತ್ ರಾಜ್‍ಕುಮಾರ್ ಅವರ ತಂದೆ ರೇವನಾಥ್ ಅವರ ಕಣ್ಣುಗಳನ್ನು ದಾನ ಮಾಡಲಾಗಿದೆ. ರೇವನಾಥ್ (78) ಅವರು ಪುನೀತ್ ಅವರ ನಿಧನ ನಂತರ ತೀವ್ರ ಒತ್ತಡಕ್ಕೆ ಒಳಗಾಗಿದ್ದರು. ಇಂದು ಹೃದರ್ಯಾಘಾತದಿಂದ ಸಾವನ್ನಪಿದ್ದಾರೆ. ಬೆಂಗಳೂರಿನ ಎಂ.ಎಸ್ ರಾಮಯ್ಯ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ರೇವಾನಾಥ್ ನಿಧನ ಹಿನ್ನೆಲೆ ಕುಟುಂಬಸ್ಥರು ಅವರ ಕಣ್ಣುಗಳನ್ನು ದಾನ ಮಾಡಿದ್ಧಾರೆ. ರೇವನಾಥ್ ಕಣ್ಣು ದಾನ ಪಡೆದು ತೆರಳಿದ ರಾಜ್‍ಕುಮಾರ್ ನೇತ್ರದಾನ ಕೇಂದ್ರದ ಸಿಬ್ಬಂದಿ. ನಾರಾಯಣ್ ನೇತ್ರಾಲಯಕ್ಕೆ ಕಣ್ಣುಗಳನ್ನು …

Read More »

ಕಟಾವಿಗೆ ಬಂದಿದ್ದ ಮೆಕ್ಕೆಜೋಳ ಸುಟ್ಟು ಭಸ್ಮ

ಹಾವೇರಿ: ವಿದ್ಯುತ್ ಟ್ರಾನ್ಸ್‌ಫಾರ್ಮರ್ ಬ್ಲಾಸ್ಟ್ ಆಗಿ ಕಟಾವಿಗೆ ಬಂದಿದ್ದ ಮೆಕ್ಕೆಜೋಳ ಸುಟ್ಟು ಭಸ್ಮವಾದ ಘಟನೆ ಜಿಲ್ಲೆಯ ಬ್ಯಾಡಗಿ ತಾಲೂಕಿನ ಹೊಸಶಿಡೇನೂರ ಗ್ರಾಮದಲ್ಲಿ ನಡೆದಿದೆ. ಗ್ರಾಮದ ರೈತ ಪರಮೇಶಪ್ಪ ನಂದೀಹಳ್ಳಿ ಎಂಬವರಿಗೆ ಸೇರಿದ್ದ ಜಮೀನಿನಲ್ಲಿ ಬೆಳೆದಿದ್ದ ಮೆಕ್ಕೆಜೋಳ ಸಂಪೂರ್ಣ ಸುಟ್ಟು ಭಸ್ಮವಾಗಿದೆ.  ಪರಮೇಶಪ್ಪ ಅವರು ತಮ್ಮ ನಾಲ್ಕು ಎಕರೆ ಜಮೀನಿನಲ್ಲಿ ಬೆಳೆದಿದ್ದು, ಸುಮಾರು ಎರಡೂವರೆ ಲಕ್ಷ ರೂಪಾಯಿ ಮೌಲ್ಯದ ಮೆಕ್ಕೆಜೋಳ ಸುಟ್ಟು ಕರಕಲಾಗಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ …

Read More »

ಮಹಾ ಶಿವರಾತ್ರಿ: ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ಭಕ್ತರಿಗಾಗಿ ಹೊಸ ಆ್ಯಪ್ ಬಿಡುಗಡೆ

ಲಕ್ನೋ: ಕಾಶಿ ವಿಶ್ವನಾಥ ದೇವಸ್ಥಾನಕ್ಕೆ ಭೇಟಿ ನೀಡುವ ಭಕ್ತರಿಗಾಗಿ ಶ್ರೀ ಕಾಶಿ ವಿಶ್ವನಾಥ ದೇವಸ್ಥಾನ ಟ್ರಸ್ಟ್ ನಿಂದ ಹೊಸ ಅಪ್ಲಿಕೇಶನ್ ಬಿಡುಗಡೆ ಮಾಡಲಾಗಿದೆ. ಮಹಾ ಶಿವರಾತ್ರಿಯ ಸಂದರ್ಭದಲ್ಲಿ ಕಾಶಿ ವಿಶ್ವನಾಥನ ದರ್ಶನ ಪಡೆಯಲು ಹಲವು ಭಕ್ತಾದಿಗಳು ತುಂಬಾ ದಿನದಿಂದ ಕಾಯುತ್ತಿರುತ್ತಾರೆ. ಭಕ್ತರಿಗಾಗಿ ದೇವಸ್ಥಾನ ಟ್ರಸ್ಟ್ ಒಂದು ಹೊಸ ಅಪ್ಲಿಕೇಶನ್ ಬಿಟ್ಟಿದೆ. ಈ ಅಪ್ಲಿಕೇಶನ್ ನಲ್ಲಿ ಭಕ್ತರು ನೋಂದಾಯಿಸಿಕೊಳ್ಳುವ ಮೂಲಕ ದರ್ಶನವನ್ನು ಪಡೆಯಬಹುದು. ಈ ಆ್ಯಪ್ ಮೂಲಕ ಯಾವ ವೇಳೆ ಕಾಶಿ ದರ್ಶನ …

Read More »

ಜಲಜೀವನ ಮಿಷನ್ ಯೋಜನೆ ಕಳಪೆಯಾದರೆ ಕ್ರಿಮಿನಲ್‌ ಮೊಕದ್ದಮೆ

ಶಿವಮೊಗ್ಗ: ‘ ಗ್ರಾಮೀಣ ಭಾಗದಲ್ಲಿ ಪ್ರತಿ ಮನೆಗೆ ಶುದ್ಧ ಕುಡಿಯುವ ನೀರು ಒದಗಿಸುವ ಈ ಯೋಜನೆಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು. ಕಳಪೆ ಗುಣಮಟ್ಟದ ಕಾಮಗಾರಿ ಕಂಡುಬಂದರೆ ಅಧಿಕಾರಿಗಳನ್ನೇ ನೇರ ಹೊಣೆ ಮಾಡಲಾಗುವುದು. ಗುತ್ತಿಗೆದಾರರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು’ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಎಚ್ಚರಿಸಿದರು. ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಶನಿವಾರ ಹಮ್ಮಿಕೊಂಡಿದ್ದ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಅವರು ಮಾತನಾಡಿದರು. ಜಲಜೀವನ ಮಿಷನ್ ಯೋಜನೆ ಅನುಷ್ಠಾನದಲ್ಲಿ ಕರ್ನಾಟಕ ದೇಶದಲ್ಲಿ 14ನೇ ಸ್ಥಾನದಲ್ಲಿದೆ. ಜಿಲ್ಲೆಯಲ್ಲಿ …

Read More »