ಬೆಂಗಳೂರು: ಗೃಹ ಸಚಿವರ ನಿವಾಸದ ಬಳಿ ಪ್ರತಿಭಟನೆ ನಡೆಸಿದ್ದ ಬಿಜೆಪಿ ಯುವ ಮೋರ್ಚಾದ 14 ಮಂದಿ ಕಾರ್ಯಕರ್ತರ ವಿರುದ್ಧ ಐಪಿಸಿ ಸೆಕ್ಷನ್ 143, 149 (ಕಾನೂನು ಬಾಹಿರವಾಗಿ ಒಗ್ಗೂಡುವಿಕೆ) ಆರೋಪದಡಿ ಸದಾಶಿವನಗರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪ್ರಕರಣದ ಹಿನ್ನೆಲೆ: ಡಿ.ಜೆ ಹಳ್ಳಿ, ಕೆ.ಜಿ ಹಳ್ಳಿ ಗಲಭೆಯ ಕೆಲವು ಆರೋಪಿಗಳ ಕುರಿತ ಹಾಗೂ ಉಡುಪಿ ಕಾಲೇಜಿನಲ್ಲಿ ವಿಡಿಯೋ ಚಿತ್ರೀಕರಣ ಪ್ರಕರಣದ ಬಗ್ಗೆ ನೀಡಿರುವ ಹೇಳಿಕೆಯನ್ನು ಗೃಹ ಸಚಿವ ಜಿ.ಪರಮೇಶ್ವರ್ ಅವರು ಹಿಂಪಡೆಯಬೇಕೆಂದು …
Read More »ಸುಲಿಗೆ ಪ್ರಕರಣದಲ್ಲಿ 23 ವರ್ಷ ತಲೆಮರೆಸಿಕೊಂಡಿದ್ದ ಆರೋಪಿ ಕೊನೆಗೂ ಬಂಧನ
ಮಂಗಳೂರು (ದಕ್ಷಿಣ ಕನ್ನಡ): ಸುಲಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ 23 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಕೊನೆಗೂ ಮಂಗಳೂರು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಶೀರ್ ಬಂಧಿತ ಆರೋಪಿ. ಜುಲೈ 26ರಂದು ಆರೋಪಿಯನ್ನು ಬಂಧಿಸಲಾಗಿದ್ದು, ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಪ್ರಕರಣವೇನು? : 2000ರ ಡಿಸೆಂಬರ್ 17ರಂದು ರಾತ್ರಿ 8:45ರ ಹೊತ್ತಿಗೆ ಮಹಿಳೆಯೊಬ್ಬರನ್ನು ಅಡ್ಡಗಟ್ಟಿ ಆರೋಪಿಗಳು ಚಾಕು ತೋರಿಸಿ ಕುತ್ತಿಗೆಯಲ್ಲಿದ್ದ ಕರಿಮಣಿ ಸರ ಕಿತ್ತುಕೊಂಡು ಪರಾರಿಯಾಗಿದ್ದರು. ಘಟನೆಗೆ ಸಂಬಂಧಿಸಿದಂತೆ ಉರ್ವಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಹುಸೇನ್ ಯಾನೆ …
Read More »ತ್ಯಾಂಶ ನೋಡಿ ಕಾನೂನಾತ್ಮಕ ಅವಕಾಶಗಳಿದ್ದರೆ ಕೇಸ್ ವಾಪಸ್: ಜಿ.ಪರಮೇಶ್ವರ್
ಬೆಂಗಳೂರು : ಡಿ.ಜೆ ಹಳ್ಳಿ, ಕೆ.ಜೆ ಹಳ್ಳಿ ಪ್ರಕರಣದಲ್ಲಿ ಆರೋಪಿಗಳ ಕೇಸ್ ವಾಪಸ್ ವಿಚಾರವಾಗಿ ಬಿಜೆಪಿ ನಾಯಕರ ಆರೋಪಕ್ಕೆ ಪ್ರತಿಕ್ರಿಯಿಸಿದ ಗೃಹ ಸಚಿವ ಜಿ.ಪರಮೇಶ್ವರ್, ಬಹಳ ಜನ ಶಾಸಕರು ಬೇರೆ ಬೇರೆ ಸಂಸ್ಥೆಗಳ ಕೇಸ್ಗಳನ್ನು ವಾಪಸ್ ತೆಗೆದುಕೊಳ್ಳಿ ಎಂದು ಪತ್ರ ಕೊಡ್ತಿದ್ದಾರೆ. ಕೇಸ್ ವಾಪಸ್ ತಗೊಳ್ಳಿ ಅಂದಾಕ್ಷಣ ವಾಪಸ್ ತೆಗೆದುಕೊಳ್ಳಲು ಆಗುವುದಿಲ್ಲ. ಅದಕ್ಕೊಂದು ಪದ್ದತಿ ಇದೆ. ಕ್ಯಾಬಿನೆಟ್ ಸಬ್ ಕಮಿಟಿ ಮುಂದೆ ವಿಷಯ ಮಂಡಿಸಬೇಕಾಗುತ್ತದೆ. ಸಬ್ ಕಮಿಟಿ ಸಾಧಕ-ಬಾಧಕದ ಬಗ್ಗೆ ಚರ್ಚಿಸಿ …
Read More »ಧಾರವಾಡದಲ್ಲಿ ನಿರಂತರ ಮಳೆ; 198 ಮನೆಗಳಿಗೆ ಹಾನಿ
ಧಾರವಾಡ: ಕಳೆದ ಕೆಲವು ದಿನಗಳಿಂದ ರಾಜ್ಯದ ಬಹುತೇಕ ಪ್ರದೇಶಗಳಲ್ಲಿ ಧಾರಾಕಾರ ಮಳೆ ಸುರಿದಿದ್ದು, ಸದ್ಯ ಅಬ್ಬರ ಕೊಂಚ ಕಡಿಮೆಯಾಗಿದೆ. ಹಲವೆಡೆ ಮಳೆಯಿಂದಾಗಿ ಅಪಾರ ಆಸ್ತಿಪಾಸ್ತಿ ಹಾನಿ, ಸಾವು-ನೋವು ಸಂಭವಿಸಿದೆ. ಧಾರವಾಡ ಜಿಲ್ಲೆಯಲ್ಲಿ ಜುಲೈ 26ರ ಬೆಳಿಗ್ಗೆ 8 ಗಂಟೆಯಿಂದ 27ರ ಬೆಳಿಗ್ಗೆ 8 ಗಂಟೆಯವರೆಗೆ ವಿವಿಧ ತಾಲೂಕುಗಳಲ್ಲಿ ಸುಮಾರು 198 ಮನೆಗಳಿಗೆ ಹಾನಿಯಾಗಿದೆ. 8 ತಾಲೂಕುಗಳಲ್ಲಿ 198 ಮನೆಗಳಿಗೆ ಹಾನಿ: ನಿರಂತರ ಮಳೆ ಹಿನ್ನೆಲೆಯಲ್ಲಿ ಧಾರವಾಡ ತಾಲೂಕಿನಲ್ಲಿ 87 ಮನೆಗಳು, ಅಳ್ನಾವರ …
Read More »ಮಹಾ ಸಿಎಂ ಶಿಂಧೆ ಉಸ್ತುವಾರಿ ಜಿಲ್ಲೆಯಲ್ಲಿ ಹಳ್ಳಿಗರ ಬದುಕು ದುಸ್ತರ: ಪ್ರಾಣವನ್ನೇ ಪಣಕ್ಕಿಡುವ ಪರಿಸ್ಥಿತಿ
ಥಾಣೆ (ಮಹಾರಾಷ್ಟ್ರ): ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂಧೆ ಅವರು ಕಳೆದ ಏಳೂವರೆ ವರ್ಷಗಳಿಂದ ಥಾಣೆ ಜಿಲ್ಲಾ ಉಸ್ತುವಾರಿ ಸಚಿವರಾಗಿ ಹಾಗೂ ಒಂದು ವರ್ಷದಿಂದ ರಾಜ್ಯದ ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಆದರೆ, ಇಲ್ಲಿನ ಲೋಖಂಡೇವಾಡಿಯ ವಿದ್ಯಾರ್ಥಿಗಳು, ರೋಗಿಗಳು ಸೇರಿ ಇಡೀ ಗ್ರಾಮಸ್ಥರು ಮಳೆಗಾಲದಲ್ಲಿ ಪ್ರಾಣವನ್ನೇ ಪಣಕ್ಕಿಟ್ಟು ಸಂಚರಿಸುತ್ತಿರುವ ಪರಿಸ್ಥಿತಿ ಇದೆ. ಮಹಾ ಸಿಎಂ ಶಿಂಧೆ ಉಸ್ತುವಾರಿ ಜಿಲ್ಲೆಯಲ್ಲಿ ಹಳ್ಳಿಗರ ಬದುಕು ದುಸ್ತರ: ಪ್ರಾಣವನ್ನೇ ಪಣಕ್ಕಿಡುವ ಪರಿಸ್ಥಿತಿಮೂರು ವರ್ಷಗಳ ಹಿಂದೆ ಏಕನಾಥ್ ಶಿಂಧೆ ಅವರ ಲೋಕೋಪಯೋಗಿ …
Read More »ಬಸವಸಾಗರ ಜಲಾಶಯದಿಂದ ಕೃಷ್ಣಾ ನದಿಗೆ ನೀರು ಬಿಡುಗಡೆ
ಮಹಾರಾಷ್ಟ ಸೇರಿ ಪಶ್ಚಿಮ ಘಟ್ಟ ಪ್ರದೇಶದಲ್ಲಿ ಧಾರಾಕಾರ ಮಳೆ ಬೀಳುತ್ತಿರುವ ಹಿನ್ನೆಲೆ ಜಿಲ್ಲೆಯ ಹುಣಸಗಿ ತಾಲೂಕಿನಲ್ಲಿರುವ ನಾರಾಯಣಪುರದ ಬಸವಸಾಗರ ಜಲಾಶಯಕ್ಕೆ ನೀರಿನ ಒಳ ಹರಿವು ಹೆಚ್ಚಾಗಿದೆ. ಬಸವಸಾಗರ ಜಲಾಶಯದಿಂದ 1 ಮೀಟರ್ ಎತ್ತರದಲ್ಲಿ 21 ಕ್ರಸ್ಟ್ ಗೇಟ್ ಗಳ ಮೂಲಕ 1.50 ಲಕ್ಷ ಕ್ಯೂಸೆಕ್ ನೀರನ್ನು ಕೃಷ್ಣಾ ನದಿಗೆ ಹರಿಬಿಡಲಾಗಿದೆ. ಬಸವಸಾಗರ ಜಲಾಶಯವು ಒಟ್ಟು ನೀರಿನ ಸಂಗ್ರಹ ಸಾಮರ್ಥ್ಯ 33.31 ಟಿ ಎಂ ಸಿ ಇದ್ದು, ಅದರಲ್ಲಿ 26.42 ಟಿಎಂಸಿ …
Read More »ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ನಂದಿನಿ ಹಾಲಿನ ದರ ಏರಿಕೆಗೆ ಒಪ್ಪಿಗೆ
ಬೆಂಗಳೂರು: ನಂದಿನಿ ಹಾಲಿನ ದರ ಏರಿಕೆಗೆ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ. ನಂದಿನಿ ಹಾಲಿಗೆ 3 ರೂ. ಹೆಚ್ಚಳಕ್ಕೆ ಸಂಪುಟ ಸಭೆ ತೀರ್ಮಾನಿಸಿದೆ. ಕಳೆದ ವಾರ ಕೆಎಂಎಫ್ ಜೊತೆ ಸಿಎಂ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಹಾಲಿನ ದರ 3 ರೂ. ಹೆಚ್ಚಿಸಲು ನಿರ್ಧರಿಸಲಾಗಿತ್ತು. ಈ ಸಂಬಂಧ ಸಂಪುಟ ಸಭೆಯಲ್ಲಿ ಅಂತಿಮ ತೀರ್ಮಾನಿಸುವುದಾಗಿ ಸಿಎಂ ಸಿದ್ದರಾಮಯ್ಯ ಹೇಳಿದ್ದರು. ಅದರಂತೆ ಇದೀಗ ಸಚಿವ ಸಂಪುಟ ಸಭೆಯಲ್ಲಿ ದರ ಏರಿಕೆಗೆ ತೀರ್ಮಾನಿಸಲಾಗಿದೆ. ಆ ಮೂಲಕ …
Read More »ವಡೋದರಾದಲ್ಲಿ ಪ್ರತಿದಿನ 2 ಸಾವಿರ ಕಾಂಜಂಕ್ಟಿವಿಟಿಸ್ ಸೋಂಕು ಪ್ರಕರಣ
ವಡೋದರ (ಗುಜರಾತ್): ದೇಶದ ಹಲವೆಡೆ ಕಾಂಜಂಕ್ಟಿವಿಟಿಸ್ ಸೋಂಕು ಪ್ರಕರಣಗಳು ಹೆಚ್ಚಾಗಿವೆ. ಗುಜರಾತ್ನ ವಡೋದರಾದಲ್ಲಿ ಪ್ರತಿದಿನ 2 ಸಾವಿರ ಜನರಿಗೆ ಹೆಚ್ಚು ಕಾಂಜಂಕ್ಟಿವಿಟಿಸ್ ಸೋಂಕು ಪತ್ತೆಯಾಗುತ್ತಿದೆ. ಇದರಿಂದ ಕಳೆದ 15 ದಿನಗಳಿಂದ ಐ ಡ್ರಾಪ್ ಬಾಟಲ್ ಸೇರಿದಂತೆ ಔಷಧಗಳ ಮಾರಾಟದಲ್ಲಿ ಹೆಚ್ಚಳವಾಗಿದೆ. ನಿರಂತರ ಮಳೆಯಿಂದ ಕಾಂಜಂಕ್ಟಿವಿಟಿಸ್ ಸೋಂಕು ವ್ಯಾಪಕವಾಗಿ ಹರಡುತ್ತಿದೆ. ಮಕ್ಕಳಲ್ಲಿ ಈ ಸಮಸ್ಯೆ ಅತಿಯಾಗಿ ಕಾಡುತ್ತಿದೆ. ಕಣ್ಣಿನ ಹೊರಗಿನ ಚರ್ಮದ ಸೋಂಕಿನಿಂದ ಕಣ್ಣಿನ ಸೋಂಕು ಉಂಟಾಗುತ್ತದೆ. ಅದಕ್ಕಾಗಿಯೇ ಕಾಂಜಂಕ್ಟಿವಿಟಿಸ್ ಸೋಂಕು ಎಂದು …
Read More »ವಿಕಲಚೇತನ ವ್ಯಕ್ತಿಗೆ ಮನಬಂದಂತೆ ಥಳಿತ ಸ್ಪಷ್ಟನೆ ನೀಡಿದಪೊಲೀಸ್ ಆಯುಕ್ತ ಎಸ್ ಎನ್ ಸಿದ್ದರಾಮಪ್ಪ
ಬೆಳಗಾವಿ : ನಗರದ ಉದ್ಯಮಬಾಗ ಪೊಲೀಸರು ವ್ಯಕ್ತಿಯೊಬ್ಬನಿಗೆ ಥಳಿಸಿರುವ ಕುರಿತು ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್ ಆಗಿದೆ. ಅದರಲ್ಲಿ ವಿಕಲಚೇತನ ವ್ಯಕ್ತಿಗೆ ಮನಬಂದಂತೆ ಪೊಲೀಸರು ಹೊಡೆದಿರುವುದು, ಸದ್ಯ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ನಿರಂಜನ ಚೌಗುಲೆ ವಿಕಲಚೇತನ ವ್ಯಕ್ತಿ ಪೊಲೀಸರಿಂದ ಹಲ್ಲೆಗೆ ಒಳಗಾಗಿದ್ದೇನೆ ಎಂದು ಅಳಲು ತೋಡಿಕೊಂಡಿದ್ದಾರೆ. ಘಟನೆ ಕುರಿತು ಇಂದು ಮಾಧ್ಯಮಗಳ ಜೊತೆಗೆ ಮಾತನಾಡಿರುವ ನಿರಂಜನ್, ನಾನು ಊಟವನ್ನು ಪಾರ್ಸಲ್ ತೆಗೆದುಕೊಳ್ಳಲು ಹೊಟೇಲ್ಗೆ ಹೋಗಿದ್ದೆ. ಊಟ ಕಟ್ಟಿಸಿಕೊಂಡು ಹೊರಡುವಾಗ ಪೊಲೀಸರು ಬಂದು …
Read More »ಕಲ್ಯಾಣ ಕರ್ನಾಟಕ ಪ್ರದೇಶಗಳ ಅಭಿವೃದ್ಧಿ ಸಂಬಂಧ ಕಾರ್ಯಕ್ರಮಸಭೆ:
ಬೆಂಗಳೂರು: ಕಲ್ಯಾಣ ಕರ್ನಾಟಕ ಪ್ರದೇಶಗಳ ಅಭಿವೃದ್ಧಿ ಸಂಬಂಧ ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ ಸುಧಾಕರ್ ಅವರ ನೇತೃತ್ವದಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ (ಕೆಕೆಆರ್ ಡಿಬಿ) ಸಭೆ ನಡೆಯಿತು. ಸಭೆಯಲ್ಲಿ ಕಾಮಗಾರಿಗಳ ಮಂಜೂರಾತಿ ಸ್ಥಿತಿಗತಿ ಬಗ್ಗೆ ಸಮಾಲೋಚನೆ ನಡೆಸಲಾಯಿತು. ವಿಕಾಸಸೌಧದಲ್ಲಿ ನಡೆದ ಸಭೆಯಲ್ಲಿ ಆ ಭಾಗದ ಸಚಿವ ಶರಣಪ್ರಕಾಶ್ ಪಾಟೀಲ್, ಈಶ್ವರ್ ಖಂಡ್ರೆ, ಪ್ರಿಯಾಂಕ್ ಖರ್ಗೆ, ಶರಣಬಸಪ್ಪ ದರ್ಶನಾಪೂರ, ರಹೀಂಖಾನ್, ಶಿವರಾಜ ತಂಗಡಗಿ, ಬಿ.ನಾಗೇಂದ್ರ ಪಾಲ್ಗೊಂಡಿದ್ದರು. …
Read More »
Laxmi News 24×7