Breaking News
Home / ರಾಜಕೀಯ (page 1165)

ರಾಜಕೀಯ

ಪದ್ಮಶ್ರೀ ಪುರಸ್ಕೃತ ಸೂಫಿಸಂತ ಇಬ್ರಾಹಿಂ ಸುತಾರ ನಿಧನ ಸಂತಾಪ ಸೂಚಿಸಿದ ಸಂತೋಷ್ ಜಾರಕಿಹೊಳಿ

ಬಾಗಲಕೋಟೆ: ಪದ್ಮಶ್ರೀ ಪುರಸ್ಕೃತ ಆಧುನಿಕ ಸೂಫಿಸಂತ ಇಬ್ರಾಹಿಂ ಸುತಾರ್(Ibrahim Sutar) ಇಂದು ಬೆಳಿಗ್ಗೆ 6.30ಕ್ಕೆ ಹೃದಯಾಘಾತದಿಂದ(Heart attack) ಮೃತಪಟ್ಟಿದ್ದಾರೆ. ಬಾಗಲಕೋಟೆ ರಬಕವಿಬನಹಟ್ಟಿ ತಾಲೂಕಿನ ಮಹಾಲಿಂಗಪುರ ಪಟ್ಟಣದಲ್ಲಿ ಹೃದಯಾಘಾತದಿಂದ ಪದ್ಮಶ್ರೀ(padma shri) ಪುರಸ್ಕೃತ ಆಧುನಿಕ ಸೂಫಿಸಂತ ಇಬ್ರಾಹಿಂ ಸುತಾರ್(76) ನಿಧನರಾಗಿದ್ದಾರೆ. ಇಬ್ರಾಹಿಂ ಸುತಾರ್ ಹಿಂದೂ-ಮುಸ್ಲಿಂ ಭಾವೈಕ್ಯತೆಯ ಮೂರ್ತಿಯಾಗಿದ್ದರು. ಪ್ರವಚನಕ್ಕೆ ಹೆಸರಾಗಿದ್ದರು. ಅಲ್ಲದೇ ಬಣವಣ್ಣನವರ ಅನುಯಾಯಿಗಳಾಗಿದ್ದು, ಬಸವಣ್ಣನವರ ವಚನಗಳನ್ನು ಹೇಳುತ್ತಿದ್ದರು. ಇಂದು ಬೆಳಿಗ್ಗೆ ಆರೋಗ್ಯದಲ್ಲಿ ಏರುಪೇರಾಗಿದ್ದು, ಆಸ್ಪತ್ರೆಗೆ ತಲುಪಿಸುವ ಮಾರ್ಗದಲ್ಲಿ ಸೂಫಿಸಂತ ಇಬ್ರಾಹಿಂ …

Read More »

ರವಿ ಚೇನ್ನನ್ನವರ ಆಸ್ತಿ ವಿವಾದ ತಂದೆ ತಾಯಿ ಮಾಧ್ಯಮಕ್ಕೆ ಹೇಳಿದ್ದೇನು

ಬೆಂಗಳೂರು: ಕಳೆದ ಕೆಲವು ದಿನಗಳಿಂದ ಐಪಿಎಸ್ ಅಧಿಕಾರಿ ರವಿ ಡಿ. ಚನ್ನಣ್ಣವರ್ ವಿರುದ್ಧ ಕೇಳಿಬಂದಿರುವ ಭ್ರಷ್ಟಾಚಾರ ಆರೋಪ ಪ್ರಕರಣ ಭಾರಿ ಸದ್ದು ಮಾಡುತ್ತಿದ್ದು, ಇದೀಗ ಅವರ ತಾಯಿ-ತಂದೆ ಕೂಡ ಸುದ್ದಿಗೋಷ್ಠಿ ಕರೆದು ಮಾತನಾಡಿದ್ದಾರೆ. ಐಪಿಎಸ್ ಅಧಿಕಾರಿ ರವಿ ಡಿ. ಚನ್ನಣ್ಣವರ್ ಅಕ್ರಮವಾಗಿ ಆದಾಯಕ್ಕೂ ಮೀರಿ ಆಸ್ತಿ ಹೊಂದಿದ್ದಾರೆ ಎಂಬುದಾಗಿ ಕೆಲವರು ಆರೋಪಿಸಿದ್ದು, ಆ ಬಗ್ಗೆ ಪರ-ವಿರೋಧ ಪ್ರತಿಕ್ರಿಯೆಗಳು ಕೂಡ ಕೇಳಿ ಬರುತ್ತಿವೆ. ಈ ಮಧ್ಯೆ ಆರೋಪದ ವಿರುದ್ಧ ನ್ಯಾಯಾಲಯದ ಮೆಟ್ಟಿಲೇರಿರುವ ರವಿ …

Read More »

ರಾಜ್ಯದಲ್ಲಿ ಕೋವಿಡ್ ಸೋಂಕು ಪ್ರಮಾಣ ಇಳಿಕೆಯಾಗುತ್ತಿರುವ ಹಿನ್ನೆಲೆ ಹೈಕೋರ್ಟ್ ಕಲಾಪಗಳಿಗೆ ವಿಧಿಸಿದ್ದ ನಿರ್ಬಂಧಗಳು ಸಡಿಲ

ರಾಜ್ಯದಲ್ಲಿ ಕೋವಿಡ್ ಸೋಂಕು ಪ್ರಮಾಣ ಇಳಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಹೈಕೋರ್ಟ್ ಕಲಾಪಗಳಿಗೆ ವಿಧಿಸಿದ್ದ ನಿರ್ಬಂಧಗಳನ್ನು ಸಡಿಲಿಸಲಾಗಿದ್ದು, ಸೋಮವಾರದಿಂದ ಜಾರಿಗೆ ಬರುವಂತೆ ಹೊಸ ಎಸ್‌ಒಪಿ ಹೊರಡಿಸಲಾಗಿದೆ. ಹೈಕೋರ್ಟ್ ಕಲಾಪಗಳಿಗೆ ಸಂಬಂಧಿಸಿದಂತೆ ನೂತನ ಎಸ್‌ಒಪಿ ಪ್ರಕಟಿಸಿ ರಿಜಿಸ್ಟ್ರಾರ್ ಜನರಲ್ ಟಿ.ಜಿ.ಶಿವಶಂಕರೇಗೌಡ ಆದೇಶ ಹೊರಡಿಸಿದ್ದು, ಬೆಂಗಳೂರು ಪ್ರಧಾನ ಪೀಠದಲ್ಲಿ ಭೌತಿಕ ಕಲಾಪಗಳಿಗೆ ವಿಧಿಸಿದ್ದ ನಿರ್ಬಂಧ ತೆರವುಗೊಳಿಸಲಾಗಿದೆ. ಬೆಂಗಳೂರು, ಧಾರವಾಡ ಹಾಗೂ ಕಲಬುರಗಿ ಪೀಠಗಳಿಗೆ ಅನ್ವಯವಾಗುವಂತೆ ಹೊರಡಿಸಲಾಗಿರುವ ನೂತನ ಮಾರ್ಗಸೂಚಿಗಳು ಫೆ.7ರಿಂದ ಮುಂದಿನ ಆದೇಶದವರೆಗೆ ಜಾರಿಯಲ್ಲಿರಲಿವೆ ಎಂದು …

Read More »

ರೈತರಿಗೆ ಹದ್ದುಬಸ್ತು ಶುಲ್ಕದ ಹೊರೆ; ಪೋಡಿ ಫೀಸ್ ಹೆಚ್ಚಳ ಬೆನ್ನಲ್ಲೇ ಫೆ.1ರಿಂದ ಹೊಸ ನಿಯಮ ಜಾರಿ

ಕೃಷಿ ಭೂಮಿ ಪೋಡಿ ಶುಲ್ಕ ಹೆಚ್ಚಿಸಿದ ಬೆನ್ನಲ್ಲೇ ರಾಜ್ಯ ಸರ್ಕಾರ ಹದ್ದುಬಸ್ತು ಶುಲ್ಕವನ್ನೂ ಹೆಚ್ಚಳ ಮಾಡಿ ಆದೇಶ ಹೊರಡಿಸಿದೆ. ಫೆ.1ರಿಂದಲೇ ಹೊಸ ಶುಲ್ಕ ಜಾರಿಗೆ ಬಂದಿದೆ. ಆದರೆ, ಭೂ ಮಾಪನ ಮತ್ತು ಭೂ ದಾಖಲೆಗಳ ಇಲಾಖೆಯಲ್ಲಿ ಈಗಾಗಲೇ ಅಳತೆಗಾಗಿ ಸಲ್ಲಿಕೆಯಾಗಿರುವ ಬಾಕಿ ಅರ್ಜಿಗಳಿಗೆ ಈ ನಿಯಮ ಅನ್ವಯಿಸುವುದಿಲ್ಲ ಎಂದು ಸ್ಪಷ್ಟಪಡಿಸಿದೆ.   ಶುಲ್ಕ ಎಷ್ಟು ಹೆಚ್ಚಳ: ಗ್ರಾಮೀಣ ಪ್ರದೇಶದಲ್ಲಿ 2 ಎಕರೆವರೆಗೆ ಪ್ರತಿ ಸರ್ವೆ ನಂಬರ್​ಗೆ ಈ ಹಿಂದೆ 35 ರೂ.ಇದ್ದ …

Read More »

ನ್ಯಾಯಾಲಯಗಳಲ್ಲಿ ಬಿ.ಆರ್.ಅಂಬೇಡ್ಕರ್ ಭಾವಚಿತ್ರಕ್ಕೆ ನಿರ್ಣಯ

ಬೆಂಗಳೂರು: ಹೈಕೋರ್ಟ್ ಸೇರಿ ರಾಜ್ಯದ ಎಲ್ಲ ಜಿಲ್ಲಾ ಮತ್ತು ತಾಲೂಕು ನ್ಯಾಯಾಲಯಗಳಲ್ಲಿ ಸ್ವಾತಂತ್ರ್ಯ ದಿನಾಚರಣೆ, ಗಣ ರಾಜ್ಯೋತ್ಸವ ಹಾಗೂ ನ.26ರ ಸಂವಿಧಾನ ದಿನದಂದು ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರ ಇರಿಸಲು ತೀರ್ಮಾನ ಮಾಡಲಾಗಿದೆ.   ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ನೇತೃತ್ವದಲ್ಲಿ ಶುಕ್ರವಾರ ನಡೆದ ಆಡಳಿತಾತ್ಮಕ ಪೂರ್ಣಪೀಠ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ. ಹೈಕೋರ್ಟ್ ಆದೇಶದ ಮೇರೆಗೆ ರಿಜಿಸ್ಟ್ರಾರ್ ಜನರಲ್ ಟಿ.ಜಿ.ಶಿವಶಂಕರೇಗೌಡ ಸುತ್ತೋಲೆ ಹೊರಡಿಸಿ ಆಯಾ …

Read More »

ಮದ್ಯದ ಬೆಲೆ ಏರಿಸಲು ತಯಾರಿ: ಅಬಕಾರಿ ಇಲಾಖೆಗೆ 27 ಸಾವಿರ ಕೋಟಿ ರೂ. ಟಾರ್ಗೆಟ್;

ಬೆಂಗಳೂರು :ಕರೊನಾದಿಂದ ಪಾತಾಳಕ್ಕೆ ಕುಸಿದಿರುವ ಆರ್ಥಿಕತೆ ಪುನಶ್ಚೇತನಕ್ಕೆ ರಾಜ್ಯ ಸರ್ಕಾರ ಮುಂಬರುವ ಬಜೆಟ್​ನಲ್ಲಿ ಮದ್ಯದ ಬೆಲೆ ಹೆಚ್ಚಿಸಲು ಚಿಂತನೆ ನಡೆಸಿದೆ. ಇಂಡಿಯನ್ ಮೇಡ್ ಲಿಕ್ಕರ್ (ಐಎಂಎಲ್) ಹಾಗೂ ಬಿಯರ್ ಮೇಲೆ ಶೇ.5ರಿಂದ 10ರವರೆಗೆ ಅಬಕಾರಿ ಸುಂಕ ವಿಧಿಸಲು ಆಲೋಚಿಸಿದ್ದು, ಫೆ.25ಕ್ಕೆ ನಡೆಯುವ ಸಭೆಯಲ್ಲಿ ಆರ್ಥಿಕ ಇಲಾಖೆ ಅಧಿಕಾರಿಗಳ ಜತೆ ರ್ಚಚಿಸಿ ಅಂತಿಮ ನಿರ್ಧಾರ ಕೈಗೊಳ್ಳಲಾಗುತ್ತದೆ.   2019-20ರಲ್ಲಿ ಬಿಯರ್ ಮೇಲಿನ ಹೆಚ್ಚುವರಿ ಅಬಕಾರಿ ಸುಂಕವನ್ನು ಶೇ.150ರಿಂದ ಶೇ.175ಕ್ಕೆ ಹೆಚ್ಚಿಸಲಾಗಿತ್ತು. ಡ್ರಾಟ್ …

Read More »

ಅನ್​​ ಮ್ಯಾರೀಡ್​ ಹುಡುಗಿಯರ ಟಾರ್ಗೆಟ್ ಮಾಡುತ್ತೆ ಈ ಟೀಂ..! ಡೇಟಿಂಗ್​ಗೆ ಹೋದ್ರೆ ಖಾಸಗಿ ಫೋಟೋ ತೆಗೆದು

ಇದು ಬ್ಯಾಚುಲರ್​ ಬೆಡಗಿಯರೇ ಎಚ್ಚರ, ನಾನು ಬ್ಯಾಚುಲರ್​ ಅಂತಾ ಎಲ್ಲೂ ಶೇರ್​ ಮಾಡ್ಲೇ ಬೇಡಿ.ಸೋಷಿಯಲ್​​​ ಪ್ಲಾಟ್​ಫಾರಂನಲ್ಲಿ ಚಾಟ್ ಮಾಡ ಬೇಡಿ, ಅನ್​​ ಮ್ಯಾರೀಡ್​ ಹುಡುಗಿಯರ ಟಾರ್ಗೆಟ್ ಮಾಡೋ ಟೀಂ ಬೆಂಗಳೂರಿಗೆ ಎಂಟ್ರಿ ಕೊಟ್ಟಿದೆ. ನಿಮ್ಮನ್ನು ಪರಿಚಯ ಮಾಡಿಕೊಂಡು ಡೇಟಿಂಗ್​​ ಕರಿಯುತ್ತಾರೆ, ಡೇಟಿಂಗ್​ಗೆ ಹೋದ್ರೆ ಖಾಸಗಿ ಫೋಟೋ ತೆಗೆದು ವೈರಲ್​ ಮಾಡ್ತಾರೆ. ಟಿಂಡರ್​ ಆಯಪ್​​ನಲ್ಲಿ ವಂಚನೆ ಗೋಲ್​​ಮಾಲ್​​​ ನಡೆಯುತ್ತಿದ್ದು, ಕೋಡಿಗೆಹಳ್ಳಿ ಪೊಲೀಸರ ಕೈಗೆ ವಂಚನೆ ಗ್ಯಾಂಗ್ ಸಿಕ್ಕಿಬಿದ್ದಿದ್ದು, ​​​ಅಭಿಷೇಕ್​​​ @ ಸುಶಾಂತ್ …

Read More »

ಗೋರಖನಾಥ್​ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ, ಗೋರಖ್​ಪುರದಿಂದ ನಾಮಪತ್ರ ಸಲ್ಲಿಸಿದ ಯೋಗಿ

ಗೋರಖ್​ಪುರ(ಉತ್ತರ ಪ್ರದೇಶ): ಉತ್ತರ ಪ್ರದೇಶ 403 ವಿಧಾನಸಭೆ ಕ್ಷೇತ್ರಗಳ ಚುನಾವಣೆಗೆ ಈಗಾಗಲೇ ದಿನಾಂಕ ಘೋಷಣೆಯಾಗಿದೆ. ಇದೇ ತಿಂಗಳ 10ರಂದು ಮೊದಲ ಹಂತದ ಮತದಾನ ನಡೆಯಲಿದೆ. ಹೀಗಾಗಿ ಅನೇಕ ಪಕ್ಷಗಳು ನಾಮಪತ್ರ ಸಲ್ಲಿಕೆ ಮಾಡ್ತಿದ್ದು, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕೂಡ​ ತಮ್ಮ ಉಮೇದುವಾರಿಕೆ ಸಲ್ಲಿಸಿದ್ದಾರೆ. ಉತ್ತರ ಪ್ರದೇಶದ ಗೋರಖ್​ಪುರ ಕ್ಷೇತ್ರದಿಂದ ಯೋಗಿ ಆದಿತ್ಯನಾಥ ನಾಮಪತ್ರ ಸಲ್ಲಿಕೆ ಮಾಡಿದ್ದು, ಈ ಮೂಲಕ ಮೊದಲ ಸಲ ವಿಧಾನಸಭೆ ಚುನಾವಣಾ ಕಣಕ್ಕಿಳಿದಿದ್ದಾರೆ. ಈಗಾಗಲೇ ಗೋರಖ್​ಪುರ ಸಂಸದೀಯ ಕ್ಷೇತ್ರದಿಂದ …

Read More »

ಜ್ಞಾನ ಪಡೆಯುವ ಕಾಲದಲ್ಲಿ ಧರ್ಮ,ಜಾತಿ ಸಮಸ್ಯೆ ಆಗಬಾರದು.. ಅದು ಇಲ್ಲಿಗೇ ನಿಲ್ಲಬೇಕು.. ಸತೀಶ್ ‌ಜಾರಕಿಹೊಳಿ

ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ‌ಅವರು, ಅವರವರ ಜಾತಿ-ಧರ್ಮ ಅವರ ಜೊತೆಯೇ ಇರುತ್ತದೆ. ಆದ್ರೆ, ಶಾಲಾ ಕಾಲೇಜುಗಳಲ್ಲಿ ಜಾತಿ-ಧರ್ಮ ತರುವುದು ಸರಿಯಲ್ಲ. ಸರ್ಕಾರ ಈ ಹಿಜಾಬ್, ಕೇಸರಿ ಶಾಲು ವಿವಾದ ತಡೆಯಲು ಮುಂದಾಗಬೇಕು. ಎಲ್ಲ ಕಡೆ ಸ್ಪ್ರೆಡ್ ಆದ್ರೆ ಬಹಳ ದೊಡ್ಡ ಸಮಸ್ಯೆ ಆಗುತ್ತದೆ ಎಂದರು. ರಾಮದುರ್ಗದಲ್ಲಿ ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿರುವುದು ಸರಿಯಲ್ಲ.‌ ಆ ರೀತಿ ಎಲ್ಲೂ ನಡೆಯಬಾರದು ಎಂಬುದು ನಮ್ಮ ಕಳಕಳಿಯ ಮನವಿ. ಇಲ್ಲಿ ರಾಜಕಾರಣ ಇಲ್ಲ. ಆದರೆ, …

Read More »

ಕಾರವಾರದ ಎಸಿ ಕಚೇರಿಯ ಗ್ರಾಮ ಲೆಕ್ಕಾಧಿಕಾರಿ ಡೆತ್​ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕಾರವಾರ(ಉತ್ತರಕನ್ನಡ) : ನಗರದ ಖಾಸಗಿ ಹೋಟೆಲ್​ನಲ್ಲಿ ಕಂದಾಯ ಇಲಾಖೆ ಉದ್ಯೋಗಿಯೋರ್ವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗುರುವಾರ ಬೆಳಕಿಗೆ ಬಂದಿದೆ. ಹೊನ್ನಾವರ ಮೂಲದ ಕಾರವಾರದ ಎಸಿ ಕಚೇರಿಯಲ್ಲಿ ಗ್ರಾಮ ಲೆಕ್ಕಾಧಿಕಾರಿಯಾಗಿದ್ದ ಈಶ್ವರ ಭಟ್ (38) ಮೃತ ವ್ಯಕ್ತಿ. ಗ್ರಾಮ ಲೆಕ್ಕಾಧಿಕಾರಿ ಈಶ್ವರ ಭಟ್ನಗರದ ಖಾಸಗಿ ಹೋಟೆಲ್​ನಲ್ಲಿ ರೂಮ್ ಪಡೆದಿದ್ದ ಈಶ್ವರ ಅನಾರೋಗ್ಯದ ಕಾರಣದಿಂದ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಹೇಳಿ ಪತ್ನಿ ಹಾಗೂ ಪೊಲೀಸರಿಗೆ ಡೆತ್​ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

Read More »