Breaking News

ರಾಜಕೀಯ

ಶಿವಮೊಗ್ಗ ಜಿಲ್ಲೆಯಲ್ಲಿ ರಾಜ್ಯದಲ್ಲೇ ಅತ್ಯಧಿಕ 22 ಎಂಎಂ‌ ಮಳೆಯಾಗಿದೆ.

ಶಿವಮೊಗ್ಗ: ಕಳೆದ ಮೂರು ದಿನಗಳಿಂದ ಶಿವಮೊಗ್ಗ ಜಿಲ್ಲೆ ಸೇರಿದಂತೆ, ಅಕ್ಕಪಕ್ಕದ ಜಿಲ್ಲೆಗಳಲ್ಲಿ ನಿರಂತರ ವರ್ಷಧಾರೆಯಾಗುತ್ತಿದೆ. ಮಳೆ ಎಡಬಿಡದೇ ಸುರಿದ ಪರಿಣಾಮ, ಎಲ್ಲಾ ನದಿಗಳು ಉಕ್ಕಿ ಹರಿಯುತ್ತಿವೆ. ಅದರಂತೆ, ತುಂಗಾ ಜಲಾನಯದ ಪ್ರದೇಶಗಳಾದ ಶೃಂಗೇರಿ, ಕೊಪ್ಪ, ಆಗುಂಬೆ ಭಾಗದಲ್ಲಿ ಧಾರಾಕಾರವಾಗಿ ಮಳೆಯಾಗುತ್ತಿರುವುದರಿಂದ ತುಂಗಾ ನದಿ ಅಪಾಯ ಮಟ್ಟದಲ್ಲಿ ಹರಿಯುತ್ತಿದೆ. ತುಂಗಾ ಡ್ಯಾಂ ಸಂಪೂರ್ಣವಾಗಿ ತುಂಬಿದ್ದು, ಜಲಾಶಯದಿಂದ ಹೆಚ್ಚುವರಿ ನೀರನ್ನು ಹೊರಬಿಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ನಗರದ ಕೋರ್ಪಳಯ್ಯನ ಛತ್ರದ ಬಳಿಯ ಮಂಟಪ ಮುಳುಗುವ ಹಂತ …

Read More »

ಮದ್ಯಕ್ಕೆ ಹಣ ಹೊಂದಿಸಲು ಆರು ತಿಂಗಳ ಮಗು ಮಾರಾಟ..

ಕೋಲ್ಕತ್ತಾ (ಪಶ್ಚಿಮ ಬಂಗಾಳ): ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ಮದ್ಯ ಸೇವಿಸಲು ಹಣ ಹೊಂದಿಸುವ ಉದ್ದೇಶದಿಂದ ಆರು ತಿಂಗಳ ಮಗುವನ್ನು ಮಾರಾಟ ಮಾಡಿದ ಆರೋಪದ ಮೇಲೆ ಮೂವರನ್ನು ಭಾನುವಾರ ಬಂಧಿಸಲಾಗಿದೆ. ಈ ಬಂಧಿತ ಆರೋಪಿಗಳು ಮಗುವಿನ ಅಪ್ಪ, ಅಮ್ಮ ಹಾಗೂ ಅಜ್ಜನೇ ಆಗಿದ್ದಾರೆ. ಬಂಧಿತರನ್ನು ಜೈದೇಬ್ ಚೌಧರಿ (ತಂದೆ), ಸತಿ ಚೌಧರಿ (ತಾಯಿ) ಮತ್ತು ಕನೈ ಚೌಧರಿ (ಅಜ್ಜ) ಎಂದು ಗುರುತಿಸಲಾಗಿದೆ. ಈ …

Read More »

BJP ಕಚೇರಿಗೆ ಕುಮಾರಸ್ವಾಮಿ‌ ಹೋಗಿದ್ದಾರೆ. ಅಂದ್ರೆ ದೇವೇಗೌಡರ‌ ಮಾತಿಗೆ ಕಿಮ್ಮತ್ತಿಲ್ಲ ಎಂದು ಅರ್ಥ:ಚಲುವರಾಯಸ್ವಾಮಿ

ಮಂಡ್ಯ: ಬಿಜೆಪಿಯವರ ಕಚೇರಿಗೆ ಕುಮಾರಸ್ವಾಮಿ‌ ಹೋಗಿದ್ದಾರೆ. ಅಂದ್ರೆ ದೇವೇಗೌಡರ‌ ಮಾತಿಗೆ ಕಿಮ್ಮತ್ತಿಲ್ಲ ಎಂದು ಅರ್ಥ. ಹೊಂದಾಣಿಕೆ ಸಂಬಂಧ ದೇವೇಗೌಡರು ಹಾಗೂ ಕುಮಾರಸ್ವಾಮಿ ದ್ವಂದ್ವ ನಿಲುವಿನ ವಿಚಾರದ ಬಗ್ಗೆ ಮಂಡ್ಯದಲ್ಲಿ ಕೃಷಿ ಸಚಿವ ಚಲುವರಾಯಸ್ವಾಮಿ ವ್ಯಂಗ್ಯವಾಡಿದ್ದಾರೆ. ”ಜೆಡಿಎಸ್​ ಪಕ್ಷದಲ್ಲಿ ದೇವೇಗೌಡರ ಮಾತಿಗೆ ಕಿಮ್ಮತ್ತಿಲ್ಲ. ದೇವೇಗೌಡರು ಈವರೆಗೂ ಪಕ್ಷವನ್ನ ಇನ್ನೊಂದು ಪಕ್ಷದೊಂದಿಗೆ ವಿಲೀನ ಮಾಡುವ ನಿರ್ಧಾರ ತಗೆದುಕೊಂಡಿಲ್ಲ. ಎಷ್ಟೇ ಸ್ಥಾನಗಳನ್ನ ಗೆಲ್ಲಲಿ ಹೋರಾಟ ಮಾಡ್ಕೊಂಡು ಬಂದಿದ್ದಾರೆ. ಇವತ್ತು ದೇವೇಗೌಡರು ಕಟ್ಟಿಬೆಳೆಸಿದ ಪಕ್ಷವನ್ನು ಬೇರೆ ಪಕ್ಷದೊಂದಿಗೆ …

Read More »

ರಾಜಕಾರಣದಲ್ಲಿ ಎಲ್ಲರೂ ಸಮಾನರು, ಸಮುದಾಯವನ್ನು ತುಳಿಯುವ ಕೆಲಸ ಕಾಂಗ್ರೆಸ್ ಮಾಡುವುದಿಲ್ಲ: ಡಿ.ಕೆ.ಶಿ

ಬೆಂಗಳೂರು : “ರಾಜಕಾರಣದಲ್ಲಿ ಎಲ್ಲರೂ ಸಮಾನರು, ಯಾವ ಅಸಮಾಧಾನವೂ ಇಲ್ಲ. ಯಾವ ಸಮುದಾಯವನ್ನೂ ತುಳಿಯುವ ಕೆಲಸವನ್ನು ಕಾಂಗ್ರೆಸ್ ಪಕ್ಷ ಎಂದಿಗೂ ಮಾಡುವುದಿಲ್ಲ. ಬಿ.ಕೆ.ಹರಿಪ್ರಸಾದ್ ಅವರು ಏನು ಹೇಳಿದ್ದಾರೆ ಎಂಬುದು ನನಗೆ ಸರಿಯಾಗಿ ಗೊತ್ತಿಲ್ಲ. ಹೀಗಾಗಿ, ಆ ಬಗ್ಗೆ ನಾನು ಮಾತನಾಡಲು ಹೋಗುವುದಿಲ್ಲ. ಆ ಬಗ್ಗೆ ವಿಚಾರಿಸಿ ಮಾತನಾಡುತ್ತೇನೆ” ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.   ನಗರದಲ್ಲಿ ಶನಿವಾರ ಮಾಧ್ಯಮಗಳೊಂದಿಗೆ ಸಚಿವರು ಮಾತನಾಡಿದರು. ಇದೇ ವೇಳೆ ಹಾಲಿನ ಬೆಲೆ ಏರಿಕೆ ಕುರಿತಾದ ಪ್ರಶ್ನೆಗೆ …

Read More »

ಬೆಳಗಾವಿಯಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಮಳೆಗೆ ಮನೆ ಕುಸಿದು ಬಿದ್ದು 13 ಮಂದಿ ಗಾಯ

ಬೆಳಗಾವಿ : ರಾಜ್ಯದ ಹಲವೆಡೆ ಧಾರಾಕಾರ ಮಳೆಯಾಗುತ್ತಿದೆ. ಭಾರಿ ಮಳೆಗೆ ಜನಜೀವನ ಅಸ್ತವ್ಯಸ್ತಗೊಂಡಿದ್ದು, ಹಲವು ಅವಾಂತರಗಳನ್ನು ಸೃಷ್ಟಿಸಿದೆ. ಭಾರಿ ಮಳೆಗೆ ಮನೆ ಕುಸಿದು ಬಿದ್ದು ಒಂದೇ ಕುಟುಂಬದ 13 ಮಂದಿ ಗಾಯಗೊಂಡಿರುವ ಘಟನೆ ಜಿಲ್ಲೆಯ ಬೈಲಹೊಂಗಲ ತಾಲ್ಲೂಕಿನ ಬುಡರಕಟ್ಟಿ ಗ್ರಾಮದಲ್ಲಿ ನಡೆದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಶುಕ್ರವಾರ ಮನೆಯ ಸದಸ್ಯರೆಲ್ಲ ಮನೆಯಲ್ಲಿ ಟಿವಿ ನೋಡುತ್ತ ಕುಳಿತಿದ್ದರು. ಈ ವೇಳೆ ಏಕಾಏಕಿ ಮನೆಯ ಮೇಲ್ಛಾವಣಿ ಕುಸಿದು ಬಿದ್ದಿದೆ. ಸದ್ದು ಕೇಳಿ …

Read More »

ಬೆಳಗಾವಿ ಜಿಲ್ಲೆಯ ನದಿಗಳಲ್ಲಿ ನೀರು ಹರಿಯುವ ಪ್ರಮಾಣ ಹೆಚ್ಚಳ 16 ಸೇತುವೆಗಳು ಜಲಾವೃತ

ಚಿಕ್ಕೋಡಿ: ಮಹಾರಾಷ್ಟ್ರ ಪಶ್ಚಿಮ ಘಟ್ಟದಲ್ಲಿ ನಿರಂತರ ಸುರಿಯುತ್ತಿರುವ ಮಳೆಯಿಂದ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯಲ್ಲಿ ಹರಿಯುತ್ತಿರುವ ನದಿಗಳಲ್ಲಿ ನೀರಿನ ಒಳಹರಿವು ಪ್ರಮಾಣ ಹೆಚ್ಚಾಗಿದ್ದು, ಬಂಗಾಲಿ ಬಾಬಾ ದರ್ಗಾ ಜಲದಿಗ್ಭಂಧನಕ್ಕೆ ಒಳಗಾಗಿದೆ. ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕು ಕಾರದಗಾ ಗ್ರಾಮದ ಆರಾಧ್ಯ ದೈವ ಬಂಗಾಲಿ ಬಾಬಾ ದರ್ಗಾ ಜಲದಿಗ್ಭಂಧನಕ್ಕೆ ಒಳಗಾಗಿದ್ದು, ಸದ್ಯ ಬಾಬಾನ ದರ್ಶನಕ್ಕೆ ದೂದಗಂಗಾ ನದಿ ನೀರು ತಡೆಯನ್ನು ಒಡ್ಡಿದೆ. ದೂಧಗಂಗಾ ನದಿಯ ಒಳಹರಿವು ಹೆಚ್ಚಳಗೊಂಡ ಹಿನ್ನೆಲೆ ದರ್ಗಾದ ಮುಂದೆ ಎರಡು ಅಡಿಯಷ್ಟು …

Read More »

ಟೊಮೆಟೋ ತುಂಬಿದ್ದ ಗೂಡ್ಸ್ ವಾಹನ‌ ಕದ್ದೊಯ್ದಿದ್ದ ದಂಪತಿ ಬಂಧನ

ಬೆಂಗಳೂರು : ಮಾರುಕಟ್ಟೆಯಲ್ಲಿ ದರ ಗಗನಕ್ಕೇರಿರುವ ಸಂದರ್ಭದಲ್ಲಿ ಟೊಮೆಟೋ ತುಂಬಿದ್ದ ಗೂಡ್ಸ್ ವಾಹನವನ್ನೇ ಕಳ್ಳತನ ಮಾಡಿದ್ದ ದಂಪತಿಯನ್ನು ಆರ್​ಎಂಸಿ ಯಾರ್ಡ್ ಠಾಣಾ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಭಾಸ್ಕರ್ ಹಾಗೂ ಆತನ ಪತ್ನಿ ಸಿಂಧುಜಾ ಎಂದು ಗುರುತಿಸಲಾಗಿದೆ. ರಾಕಿ, ಕುಮಾರ್, ಮಹೇಶ್ ಎಂಬ ಆರೋಪಿಗಳು ತಲೆಮರೆಸಿಕೊಂಡಿದ್ದು ಪೊಲೀಸರು ಶೋಧ ಕಾರ್ಯ ಮುಂದುವರೆಸಿದ್ದಾರೆ. ಘಟನೆ ಹಿನ್ನೆಲೆ : ಜುಲೈ 8ರಂದು ಹಿರಿಯೂರಿನ ರೈತನೋರ್ವ ತನ್ನ ಜಮೀನಿನಲ್ಲಿ ಬೆಳೆದಿದ್ದ 250ಕ್ಕೂ ಹೆಚ್ಚು ಕೆಜಿಯಷ್ಟು ಟೊಮೆಟೋವನ್ನು ಕೋಲಾರಕ್ಕೆ ಕೊಂಡೊಯ್ಯುತ್ತಿದ್ದರು. …

Read More »

ನಾಗರಹೊಳೆ ಅರಣ್ಯ ಪ್ರದೇಶದ ವ್ಯಾಪ್ತಿಯಲ್ಲಿ ಜಿಂಕೆ ಬೇಟೆ: ಮಾಂಸ ಜೋಳದ ಹೊಲದಲ್ಲಿ ಪತ್ತೆ.. ಇಬ್ಬರ ಬಂಧನ

ಮೈಸೂರು: ನಾಗರಹೊಳೆ ಉದ್ಯಾನದಲ್ಲಿ ಜಿಂಕೆ ಬೇಟೆಯಾಡಿ, ಆರೋಪಿಗಳು ಜೋಳದ ಹೊಲದಲ್ಲಿ ಮಾಂಸವನ್ನು ಬಚ್ಚಿಟ್ಟಿದ್ದರು. ಈ ಸಂಬಂಧ ಇಬ್ಬರು ಆರೋಪಿಗಳನ್ನು ಹಾಗೂ ಕೃತ್ಯಕ್ಕೆ ಬಳಸಿದ್ದ ಪರಿಕರವನ್ನು ವಶಪಡಿಸಿಕೊಂಡಿರುವ ಅರಣ್ಯ ಇಲಾಖೆ ಅಧಿಕಾರಿಗಳು ತಪ್ಪಿಸಿಕೊಂಡ ನಾಲ್ವರ ಬಂಧನಕ್ಕೆ ಬಲೆ ಬೀಸಿದ್ದಾರೆ.   ಘಟನೆ ವಿವರ: ನಾಗರಹೊಳೆ ಅಭಯಾರಣ್ಯ ವ್ಯಾಪ್ತಿಯ, ಹಾಗು ಹುಣಸೂರು ವನ್ಯಜೀವಿ ವಲಯ ವ್ಯಾಪ್ತಿಯ ನೇಗತ್ತೂರಿನ ಜೋಳದ ಹೊಲದಲ್ಲಿ, ಅಕ್ರಮವಾಗಿ ಕಾಡು ಪ್ರಾಣಿ ಮಾಂಸ ಸಂಗ್ರಹಿಸಿಟ್ಟಿದ್ದಾರೆಂದು ಖಚಿತ ಮಾಹಿತಿ ಬಂದಿತ್ತು. ಈ ಮೇರೆಗೆ ಅರಣ್ಯ …

Read More »

ಆಗಸ್ಟ್ 1ರಿಂದ ಪ್ರತಿ ಲೀಟರ್ ನಂದಿನಿ ಹಾಲಿನ ದರ 3 ರೂ. ಹೆಚ್ಚಳ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ರಾಜ್ಯದಲ್ಲಿನ ಎಲ್ಲ ಹಾಲು ಒಕ್ಕೂಟಗಳು ಹಾಗೂ ಕೆಎಂಎಫ್‌ ಅಧ್ಯಕ್ಷರ ಸಭೆ ನಡೆಸಿದರು. ಪ್ರತಿ ಲೀಟರ್ ಹಾಲಿಗೆ ಕನಿಷ್ಠ ಮೂರು ರೂ. ಹೆಚ್ಚಳ ಮಾಡಲು ತೀರ್ಮಾನಿಸಲಾಗಿದೆ. ಆಗಸ್ಟ್ ಒಂದರಿಂದ ಜಾರಿಯಾಗುವಂತೆ ಹಾಲಿನ ದರ ಹೆಚ್ಚಳ ಮಾಡಲು ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಹಾಲು ಒಕ್ಕೂಟಗಳು ಹಾಗೂ ಕೆಎಂಎಫ್‌ ಅಧ್ಯಕ್ಷರ ಜೊತೆ ಸಿಎಂ ಸಭೆಕಳೆದ ತಿಂಗಳು ಕೆಎಂಎಫ್ ಅಧ್ಯಕ್ಷರಾಗಿ ಶಾಸಕ ಭೀಮಾ ನಾಯಕ್ ಆಯ್ಕೆಯಾಗಿದ್ದು, ಅಂದೇ …

Read More »

ಪ್ರಯಾಣಿಕರ ಅನುಕೂಲಕ್ಕಾಗಿ ಹುಬ್ಬಳ್ಳಿ – ಗದಗ ನಡುವೆ ವೋಲ್ವೊ ಬಸ್

ಹುಬ್ಬಳ್ಳಿ: ಹುಬ್ಬಳ್ಳಿ ಹಾಗೂ ಗದಗ ನಡುವೆ ಪ್ರಯಾಣ ಮಾಡುವ ಪ್ರಯಾಣಿಕರಿಗೆ ಮತ್ತಷ್ಟು ಆರಾಮದಾಯಕ ಸಾರಿಗೆ ಸೌಲಭ್ಯ ಕಲ್ಪಿಸಲು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಮುಂದಾಗಿದೆ. ಹುಬ್ಬಳ್ಳಿ ಮತ್ತು ಗದಗ ಮಾರ್ಗದಲ್ಲಿ ಸಂಚರಿಸುವ ಪ್ರಯಾಣಿಕರಿಗೆ ಅನುಕೂಲಕ್ಕಾಗಿ ಕಲ್ಪಿಸುವ ನಿಟ್ಟಿನಲ್ಲಿ ವೋಲ್ವೊ ಎಸಿ ಬಸ್​ಗಳನ್ನು ಆರಂಭಿಸಲಾಗಿದೆ ಎಂದು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಪ್ರಕಟಣೆ ತಿಳಿಸಿದೆ. ಹುಬ್ಬಳ್ಳಿ ಹಾಗೂ ಗದಗ ಭಾಗದ ಸಾರ್ವಜನಿಕರ ಬೇಡಿಕೆಯ ಮೇರೆಗೆ ಹುಬ್ಬಳ್ಳಿ- ಗದಗ ನಡುವೆ ತಡೆ …

Read More »