ಮೈಸೂರು : ಜನಸಾಮಾನ್ಯರಿಗೆ ಮತ್ತೊಂದು ಶಾಕ್ ಎದುರಾಗಿದ್ದು, ಸಹಕಾರ ಸಚಿವ K. N ರಾಜಣ್ಣ ಹಾಲಿನ ದರ ಏರಿಕೆಯ ಸುಳಿವು ನೀಡಿದ್ದಾರೆ. ಸುದ್ದಿಗಾರರ ಜೊತೆ ಮಾತನಾಡಿದ ಸಚಿವರು ಹಾಲು ಉತ್ಪಾದಕರಿಗೆ ಸಹಾಯಧನ ಹೆಚ್ಚಿಸಲು ಚಿಂತನೆ ನಡೆಸಲಾಗುತ್ತಿದೆ. ಹಾಲಿನ ದರ ಎಂದ ಕೂಡಲೇ ಎಲ್ಲರೂ ಗಾಬರಿಯಾಗುತ್ತಾರೆ ಎಂದರು. ಹಾಲು ಉತ್ಪಾದಕರಿಗೆ ಸಹಾಯಧನ ಹೆಚ್ಚಿಸುವ ಅನಿವಾರ್ಯತೆ ಇದೆ. ಈ ಬಗ್ಗೆ ಸದ್ಯದಲ್ಲೇ ಅಧಿಕೃತವಾಗಿ ಮಾಹಿತಿ ನೀಡಲಿದ್ದೇವೆ ಎಂದರು. ಇನ್ನೂ,. ನಂದಿನಿ ಹಾಲಿನ ದರವನ್ನು …
Read More »ಹಲ್ಲಿಬಿದ್ದ ಬಿಸಿಯೂಟ ಸೇವಿಸಿ 27 ಕ್ಕೂ ಹೆಚ್ಚು ಬಾಲಕಿಯರು ಅಸ್ವಸ್ಥ
ಯಾದಗಿರಿ : ಹಲ್ಲಿಬಿದ್ದ ಬಿಸಿಯೂಟ ಸೇವಿಸಿ 27 ಕ್ಕೂ ಹೆಚ್ಚು ಬಾಲಕಿಯರು ಅಸ್ವಸ್ಥಗೊಂಡ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಕೆಂಭಾವಿ ಸರ್ಕಾರಿ ಬಾಲಕಿಯರ ಪ್ರೌಢಶಾಲೆಯಲ್ಲಿ ನಡೆದಿದೆ. ಶಾಲೆಯಲ್ಲಿ ಬೆಳಗ್ಗೆ ಮಾಡಿದ್ದ ಉಪ್ಪಿಟ್ಟು ತಿಂದ ಮಕ್ಕಳಿಗೆ ಹೊಟ್ಟೆನೋವು ವಾಂತಿಭೇದಿ ಕಾಣಿಸಿಕೊಂಡಿದೆ. ನಂತರ ಕೆಂಭಾವಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ವಿದ್ಯಾರ್ಥಿಗಳಿಗೆ ಚಿಕಿತ್ಸೆ ನೀಡಲಾಗಿದೆ. ಘಟನೆ ಹಿನ್ನೆಲೆ ಪೋಷಕರು ಶಾಲೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
Read More »ರಾಜ್ಯಾದ್ಯಂತ ಮಳೆ 21 ಜನರು ಸಾವನ್ನಪ್ಪಿದ್ದಾರೆ ಎಂದ ಕೃಷ್ಣಬೈರೇಗೌಡ
ಕುಮಟಾ: ರಾಜ್ಯಾದ್ಯಂತ ಮಳೆಯ ಅವಾಂತರದಲ್ಲಿ ಈವರೆಗೆ 21 ಜನರು ಸಾವನ್ನಪ್ಪಿದ್ದಾರೆ ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ತಿಳಿಸಿದ್ದಾರೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆ ಹಾನಿ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಸಚಿವರು, ಮಳೆ ಅವಾಂತರದಲ್ಲಿ ಮೃತಪಟ್ಟವರ ಕುಟುಂಬ ಸದಸ್ಯರನ್ನು ಭೇಟಿಯಾಗಿ ಸಾಂತ್ವನ ಹೇಳಿದರು. ಈ ವೇಳೆ ಕುಮಟಾ ತಾಲೂಕಿನ ಬೆಟ್ಕುಳಿ ಗ್ರಾಮದಲ್ಲಿ ಮಾತನಾಡಿದ ಸಚಿವರು, ಮಳೆಯಿಂದಾಗಿ ರಾಜ್ಯದಲ್ಲಿ ಈವರೆಗೆ 21 ಜನ ಮೃತಪಟ್ಟಿದ್ದು, 40 ಜಾನುವಾರುಗಳು ಮೃತಪಟ್ಟಿವೆ ಎಂದರು.
Read More »ಸಿಎಂ ಸಿದ್ದರಾಮಯ್ಯ ಬಜೆಟ್ ಕೊಂಡಾಡಿದ ಲಕ್ಷ್ಮಿ ಹೆಬ್ಬಾಳಕರ್, ಈಶ್ವರ ಖಂಡ್ರೆ !
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಮಂಡಿಸಿರುವ ಬಜೆಟ್ ಬಗ್ಗೆ ಅವರ ಸಂಪುಟ ಸಚಿವರು ಅಪಾರ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಸಚಿವರಾದ ಎಂ ಬಿ ಪಾಟೀಲ್, ಲಕ್ಷ್ಮಿ ಹೆಬ್ಬಾಳ್ಕರ್, ಈಶ್ವರ್ ಖಂಡ್ರೆ, ಶಿವರಾಜ್ ತಂಗಡಗಿ ಸೇರಿದಂತೆ ಹಲವು ಸಚಿವರು ತಮ್ಮ ಮೆಚ್ಚುಗೆಯನ್ನು ಮಾಧ್ಯಮ ಪ್ರಕಟಣೆ ಮೂಲಕ ವ್ಯಕ್ತಪಡಿಸಿದ್ದಾರೆ. ಸಂಪೂರ್ಣ ಜನಪರ ಬಜೆಟ್ – ಎಂ ಬಿ ಪಾಟೀಲ್: ಮುಖ್ಯಮಂತ್ರಿ ಸಿದ್ದರಾಮಯ್ಯನವರು ದಾಖಲೆಯ 14ನೇ ಬಾರಿಗೆ ಮಂಡಿಸಿರುವ ಬಜೆಟ್ ಮಹಿಳೆಯರು, ದಲಿತರು, ರೈತರು ಅಲ್ಪಸಂಖ್ಯಾತರು, ಬಹುಸಂಖ್ಯಾತರು ಮತ್ತು …
Read More »ವಿಧಾನಸಭೆ ಚುನಾವಣೆಯಲ್ಲಿ ಸೋತ ಅಭ್ಯರ್ಥಿಗಳ ಜೊತೆ ಕಾಂಗ್ರೆಸ್ ಸಭೆ
ಬೆಂಗಳೂರು: ಕಳೆದ ವಿಧಾನಸಭೆ ಚುನಾವಣೆಯಲ್ಲಿ ಪರಾಜಿತ ಅಭ್ಯರ್ಥಿಗಳ ಜೊತೆ ಶುಕ್ರವಾರ ಕಾಂಗ್ರೆಸ್ ಮಹತ್ವದ ಸಭೆ ನಡೆಸಿತು. ಕೆಪಿಸಿಸಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಹಾಗೂ ಡಿಸಿಎಂ ಡಿ ಕೆ ಶಿವಕುಮಾರ್ ಸೇರಿದಂತೆ ಸಂಪುಟ ಸದಸ್ಯರು ಹಾಗೂ ಶಾಸಕರು ಭಾಗಿಯಾಗಿದ್ದರು. ಸಭೆಯ ಬಳಿಕ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್, ಪರಾಜಿತ ಅಭ್ಯರ್ಥಿಗಳನ್ನು ಕರೆಸಿ ಅವರಿಗೆ ಆದ ಸಮಸ್ಯೆಯನ್ನ ಕೇಳಿದ್ದೇವೆ. ಮುಂಬರುವ ದಿನಗಳಲ್ಲಿ ಇವರಿಗೆ ಶಕ್ತಿ ತುಂಬುವ …
Read More »ವಿಶೇಷ ವ್ಯಕ್ತಿ ವಿಪಕ್ಷ ನಾಯಕ ಆಗ್ತಾರೆ: ನಿರಾಣಿ
ಬೆಳಗಾವಿ : ವಿರೋಧ ಪಕ್ಷದ ನಾಯಕನನ್ನಾಗಿ ವಿಶೇಷ ವ್ಯಕ್ತಿಯನ್ನು ಆಯ್ಕೆ ಮಾಡುವ ಹಿನ್ನೆಲೆಯಲ್ಲಿ ವಿಳಂಬವಾಗಿದೆ. ಹೀಗಾಗಿ ಕಾದು ನೋಡಿ ಎಂದು ಮಾಜಿ ಸಚಿವ ಮುರುಗೇಶ್ ನಿರಾಣಿ ಹೇಳಿದ್ದಾರೆ. ನಗರದ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ವಿಪಕ್ಷ ನಾಯಕನ ಆಯ್ಕೆ ಕುರಿತು ಮಾತನಾಡಿ, ವಿರೋಧ ಪಕ್ಷ ನಾಯಕನ ಸ್ಥಾನ ಯಾರಿಗೆ ಕೊಟ್ಟರೂ ಅವರು ನಮ್ಮ ಪಕ್ಷದವರೇ. ನಮ್ಮ ಪಕ್ಷದ ಹಿರಿಯರು, ರಾಜ್ಯ, ರಾಷ್ಟ್ರ ನಾಯಕರು ಸೇರಿ ಯಾರನ್ನು ವಿಪಕ್ಷ ನಾಯಕನಾಗಿ …
Read More »ಜುಲೈ 16 ರಿಂದ ಗೃಹ ಲಕ್ಮಿ ಕಾರ್ಯಕ್ರಮಕ್ಕೆ ಅರ್ಜಿ ನೋಂದಣಿ ಶುರು
ಬೆಂಗಳೂರು: ಜುಲೈ 16 ರಿಂದ ಗೃಹ ಲಕ್ಮಿ ಕಾರ್ಯಕ್ರಮಕ್ಕೆ ಅರ್ಜಿ ನೋಂದಣಿ ಶುರುವಾಗಲಿದ್ದು, ಆಗಸ್ಟ್ 15 ಇಲ್ಲವೇ 16ರಂದು ನಿಮ್ಮ ಖಾತೆಗೆ ಹಣ ಬರಲಿದೆ ಅಂತ ಸಿಎಂಸಿದ್ದರಾಮಯ್ಯ ಅವರು ಹೇಳಿದ್ದಾರೆ. ಅವರು ಶುಕ್ರವಾರ ಬಜೆಟ್ ಮಂಡನೆ ಮುಗಿಸಿದ ಬೆನ್ನಲೇ ಪತ್ರಿಕಾ ಗೋಷ್ಠಿ ಉದ್ದೇಶಿಸಿ ಮಾತನಾಡಿದರು. ಇದೇ ವೇಳೆ ಅವರು ಮಾತನಾಡಿ, ಈ ಬಜೆಟ್ ಐದು ಗ್ಯಾರಂಟಿಗಳು ಮತ್ತು ನಮ್ಮ ಚುನಾವಣಾ ಪ್ರಣಾಳಿಕೆಗಳಲ್ಲಿ ತಿಳಿಸಿದ್ದ ಭರವಸೆಗಳನ್ನು ಒಳಗೊಂಡಿದೆ. ಇದು ಗ್ಯಾರಂಟಿ ಬಜೆಟ್ …
Read More »ಸಿದ್ದು ಲೆಕ್ಕ: ಪಂಚ ಗ್ಯಾರಂಟಿ ಯೋಜನೆ ವ್ಯಾಪ್ತಿಗೆ ಬರುವ ಇಲಾಖೆಗಳಿಗೆ ಅನುದಾನ ಹೆಚ್ಚಿಸಲಾಗಿದ್ದು, ಇತರ ಕೆಲ ಇಲಾಖೆಗಳಿಗೆ ಅನುದಾನ ಕಡಿತ
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು 3,27,747 ಕೋಟಿ ರೂ.ಗಾತ್ರದ ಪೂರ್ಣ ಪ್ರಮಾಣದ ಬಜೆಟ್ ಮಂಡನೆ ಮಾಡಿದ್ದಾರೆ. ಗ್ಯಾರಂಟಿಗಳಿಗೆ ಹಣ ಹೊಂದಿಸುವ ಗ್ಯಾರಂಟಿ ಬಜೆಟ್ ಇದಾಗಿದೆ. ಸಿಎಂ ಸಿದ್ದರಾಮಯ್ಯ ಪಂಚ ಗ್ಯಾರಂಟಿಗಳ ವ್ಯಾಪ್ತಿಗೆ ಬರುವ ಇಲಾಖೆಗಳಿಗೆ ಹೆಚ್ಚು ಅನುದಾನ ನೀಡಿದ್ದು, ಇನ್ನು ಕೆಲ ಇಲಾಖೆಗಳಿಗೆ ಅನುದಾನ ಕಡಿತ ಮಾಡಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರು ಶುಕ್ರವಾರ ತಮ್ಮ 14ನೇ ಬಜೆಟ್ ಮಂಡನೆ ಮಾಡಿದ್ದಾರೆ. ಗ್ಯಾರಂಟಿ ಸವಾಲಿನೊಂದಿಗೆ ಆದಾಯ ಕೊರತೆಯ ಬಜೆಟ್ ಮಂಡಿಸಿದ್ದಾರೆ. ಪಂಚ …
Read More »ಇದ್ದಕ್ಕಿದ್ದಂತೆ ಬಸದಿಯಿಂದ ಜೈನ ಮುನಿಯೊಬ್ಬರು ರಾತ್ರೋರಾತ್ರಿ ನಾಪತ್ತೆ
ಗಡಿ ಜಿಲ್ಲೆಯ ಜೈನ ಮುನಿಯೊಬ್ಬರು ರಾತ್ರೋರಾತ್ರಿ ನಾಪತ್ತೆಯಾಗಿದ್ದಾರೆ. ಇದ್ದಕ್ಕಿದ್ದಂತೆ ಬಸದಿಯಿಂದ ಆಚಾರ್ಯ ಶ್ರೀ 108 ಕಾಮಕುಮಾರ ನಂದಿ ಮಹಾರಾಜರು ಕಾಣೆ ಆಗಿರೋದು ಭಕ್ತರಲ್ಲಿ ಆತಂಕ ಸೃಷ್ಟಿಸಿದೆ. ಮಹಾರಾಜರನ್ನ ಹುಡುಕಿಕೊಡುವಂತೆ ಭಕ್ತರು ಈಗ ಬೆಳಗಾವಿ ಜಿಲ್ಲಾ ಪೊಲೀಸರ ಮೊರೆ ಹೋಗಿದ್ದಾರೆ.15 ವರ್ಷದಿಂದ ಬಸದಿಯಲ್ಲಿದ್ದ ಸಂತನ ಮಿಸ್ಸಿಂಗ್ ಕೇಸ್ ಬೆಳಗಾವಿ ಜಿಲ್ಲೆ ಜನರನ್ನ ಬೆಚ್ಚಿಬೀಳಿಸಿದೆ. .ಹದಿಹರೆಯದ ಯುವಕ, ಯುವತಿಯರು ಮಿಸ್ಸಿಂಗ್ ಕೇಸ್ ಇತ್ತಿಚೆಗೆ ಸಾಮಾನ್ಯವಾಗಿದೆ. ಆದರೆ ಈಗ ಇಡೀ ಸಮಾಜವೇ ಆತಂಕ …
Read More »ಸರ್ಕಾರದ ವಿರುದ್ಧ ಮಳೆ ನಡುವೆಯೇ ರಾಜ್ಯ ಕಾಂಗ್ರೆಸ್ ನಾಯಕರು ಪ್ರತಿಭಟನೆ
ಬೆಂಗಳೂರು: ಎಐಸಿಸಿ ವರಿಷ್ಠ ರಾಹುಲ್ ಗಾಂಧಿ ಅವರ ಸಂಸತ್ ಸದಸ್ಯತ್ವ ರದ್ದುಗೊಳಿಸಿರುವ ಹಿಂದಿನ ಬಿಜೆಪಿ ಪಿತೂರಿ ಖಂಡಿಸಿ ರಾಜ್ಯ ಕಾಂಗ್ರೆಸ್ ನಾಯಕರು ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಶುಕ್ರವಾರ ಪ್ರತಿಭಟನೆ ನಡೆಸಿದರು. ಕಾಂಗ್ರೆಸ್ ಪಕ್ಷದ ಸಚಿವರು, ಶಾಸಕರು, ಮುಖಂಡರು ಗಾಂಧಿ ಪ್ರತಿಮೆ ಮುಂಭಾಗ ಜಮಾವಣೆಗೊಂಡು ಕೇಂದ್ರ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನೆಯಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಸಹ ಭಾಗಿಯಾಗಿದ್ದರು. ಸಚಿವ ಪ್ರಿಯಾಂಕಾ ಖರ್ಗೆ, ದಿನೇಶ್ ಗುಂಡೂರಾವ್, …
Read More »
Laxmi News 24×7