Breaking News

ರಾಜಕೀಯ

ಆಷಾಢ ಶುಕ್ರವಾರದ ಮೊದಲನೆ ಶುಕ್ರವಾರ ವರುಣನಿಗಾಗಿ ಹೋಳೆಯಮ್ಮ ದೇವಿಯನ್ನ ಪ್ರಾರ್ಥಿಸಿದ ಹುಕ್ಕೇರಿ ಶ್ರೀ ಗಳು

ವರುಣನಿಗಾಗಿ ಹೋಳೆಯಮ್ಮ ದೇವಿಯನ್ನ ಪ್ರಾರ್ಥಿಸಿದ ಹುಕ್ಕೇರಿ ಶ್ರೀ ಗಳು ಆಷಾಢ ಶುಕ್ರವಾರದ ಮೊದಲನೆ ಶುಕ್ರವಾರದಂದು ಹುಕ್ಕೇರಿ ತಾಲೂಕಿನ ಬಡಕುಂದ್ರಿ ಶ್ರೀ ಹೊಳೆಮ್ಮದೇವಿಯ ಸನ್ನಿಧಾನದಲ್ಲಿ ಬೆಳಗಾವಿ ಹುಕ್ಕೇರಿ ಹಿರೇಮಠದ ಶ್ರೀ ಷ ಬ್ರ ಚಂದ್ರಶೇಖರ ಶಿವಾಚಾರ್ಯ ಮಹಾಸ್ವಾಮಿಗಳವರು ಹೋಳೆಯಮ್ಮ ದೇವಿಗೆ ವಿಶೇಷ ಪೂಜೆ ಸಲ್ಲಿಸಿ ಮಹಾಮಂಗಳಾರತಿ ನೆರವೆರಿಸಿ ಹಿರಣ್ಯಕೇಶಿ ನದಿಗೆ ಬಾಗಿನ ಅರ್ಪಿಸಿ ವರುಣನಿಗಾಗಿ ವಿಶೇಷ ಪ್ರಾರ್ಥನೆ ಸಲ್ಲಿಸಿ ಮಾತನಾಡುತ್ತಾ ಇವತ್ತು ಮಳೆಇಲ್ಲದೆ ಬೆಳೆಗಳು ಒಣಗಿ ರೈತರು ತುಂಬಾ ಬೇಸರದಲ್ಲಿದ್ದಾರೆ ಹೋಳೆಯಮ್ಮ …

Read More »

ಬೆಳೆದು ನಿಂತ ಮಗನ ಜೀವ ತೆಗೆದುತಾಯಿ

ಬೆಳಗಾವಿ ಜಿಲ್ಲೆಯ ರಾಯಭಾಗ ಪಟ್ಟಣದಲ್ಲಿ ನಡೆದಿದ್ದು, ಪ್ರಕರಣ ಸಂಬಂಧ ತಾಯಿ ಮತ್ತು ಬಾಲಾಪರಾಧಿ ಸೇರಿದಂತೆ ಒಟ್ಟು ನಾಲ್ವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಚಿಕ್ಕೋಡಿ: ತಾಯಿಗಿಂತ ಮಿಗಿಲಾದ ದೇವರಿಲ್ಲ ಅಂತಾರೆ. ಆದರೆ, ಇಲ್ಲಿ ತಾಯಿಯೇ ಬೆಳೆದು ನಿಂತ ಮಗನ ಜೀವ ತೆಗೆದು ಇದೀಗ ಜೈಲುಪಾಲಾಗಿರುವ ವಿಲಕ್ಷಣ ಘಟನೆ ನಡೆದಿದೆ. ಬೆಳಗಾವಿ ಜಿಲ್ಲೆಯ ರಾಯಭಾಗ ಪಟ್ಟಣದ ನಿವಾಸಿ ಹರಿಪ್ರಸಾದ್ ಬೋಸ್ಲೆ (21) ಕೊಲೆಯಾದ ಯುವಕ. ಸುಧಾ ಬೋಸ್ಲೆ ಜೈಲುಪಾಲಾದ ತಾಯಿ. ಕೊಲೆಗೆ ಸಹಕರಿಸಿದ …

Read More »

ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಪ್ರತಿಭಟನೆ

ರೈತರ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಶುಕ್ರವಾರ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು. ಮುಂಗಾರು ಮಳೆಯ ಅಭಾವ ಹಾಗೂ ಬರಗಾಲದಿಂದ ರೈತರ ಬದುಕು ತತ್ತರಿಸಿ ಹೋಗಿದೆ. ಬರ ಪರಿಹಾರದ ಮೊತ್ತ ಒಂದು ಎಕರೆಗೆ 50 ಸಾವಿರ ರೂ. ದಂತೆ ಪರಿಹಾರ ಧನ ಕೊಡಬೇಕು ಎಂದು ಒತ್ತಾಯಿಸಿದರು. ಜಿಲ್ಲೆಯಲ್ಲಿರುವ ಪ್ರತಿಯೊಂದು ಗ್ರಾಮಕ್ಕೆ ಕುಡಿಯಲು ಸಾರ್ವಜನಿಕರಿಗೆ ಹಾಗೂ ಜಾನುವಾರುಗಳಿಗೆ ನೀರಿನ ವ್ಯವಸ್ಥೆಯನ್ನು …

Read More »

ಅನೈತಿಕ ಸಂಬಂಧ ಹೊಂದಿದ್ದ ಪತ್ನಿ ಗೆಳೆಯನೊಂದಿಗೆ ಸೇರಿಕೊಂಡು ಪತಿಯನ್ನು ಕೊಲೆ

ಮದುವೆಯಾಗಿದ್ದರೂ ಅನೈತಿಕ ಸಂಬಂಧ ಹೊಂದಿದ್ದ ಪತ್ನಿ ಗೆಳೆಯನೊಂದಿಗೆ ಸೇರಿಕೊಂಡು ಪತಿಯನ್ನು ಕೊಲೆ ಮಾಡಿ ಕಳೆದ ಮೂರು ತಿಂಗಳ ಹಿಂದೆ ನನ್ನ ಪತಿ ಕಾಣೆಯಾಗಿದ್ದಾರೆ ಎಂದು ಪೊಲೀಸರಿಗೆ ದೂರು ನೀಡಿ ಈಗ ಖಾಕಿಗೆ ಲಾಕ್ ಆದ ಘಟನೆ ನಡೆದಿದೆ. ಅನೈತಿಕ ಸಂಬಂಧ ಪ್ರಶ್ನೆ ಮಾಡಿದ ಪತಿಯನ್ನೇ ಗೆಳೆಯನೊಂದಿಗೆ ಸೇರಿಕೊಂಡು ಕೊಲೆ ಮಾಡಿ ಕಳೆದ ಮೂರು ತಿಂಗಳು ಹಿಂದೆ ನನ್ನ ಪತಿ ರಮೇಶ ಕಾಂಬಳೆ ಕಾಣೆಯಾಗಿದ್ದಾನೆ ಎಂದು ಬೆಳಗಾವಿ ಎಪಿಎಂಸಿ ಪೊಲೀಸ್ ಠಾಣೆಯಲ್ಲಿ …

Read More »

‘ಕಾಂಗ್ರೆಸ್ ಸರ್ಕಾರದ್ದು ಗೃಹಜ್ಯೋತಿಯೋ, ಸುಡುಜ್ಯೋತಿಯೋ?’: ವಿದ್ಯುತ್ ತೆರಿಗೆ ಶೇ.3ರಿಂದ 4ರಷ್ಟು ಕಡಿತಗೊಳಿಸಲು ಹೆಚ್.ಡಿ.ಕುಮಾರಸ್ವಾಮಿ ಆಗ್ರಹ

ಬೆಂಗಳೂರು : ಈಗಾಗಲೇ ರಾಜ್ಯದಲ್ಲಿ ವಿದ್ಯುತ್​ ದರ ಹೆಚ್ಚಳವಾಗಿರುವ ಬಗ್ಗೆ ಪ್ರತಿಭಟನೆಗಳು ನಡೆಯುತ್ತಿವೆ. ಈ ನಡುವೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು, ವಿದ್ಯುತ್ ಮೇಲೆ ವಿಧಿಸಿರುವ ಶೇ.9ರಷ್ಟು ತೆರಿಗೆಯಲ್ಲಿ ಶೇ.3ರಿಂದ 4ರಷ್ಟು ಕಡಿತ ಮಾಡಬೇಕು ಎಂದು ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಈ ವೇಳೆ ಅಪರಿಮಿತವಾಗಿ ಹೆಚ್ಚಳವಾಗಿರುವ ವಿದ್ಯುತ್ ದರದ ಬಗ್ಗೆ, ಬಿಕ್ಕಟ್ಟಿಗೆ ಸಿಲುಕಿರುವ ಐಟಿ ಮತ್ತು ಇಎಸ್‌ಡಿಎಂ ವಲಯಗಳ ಸಣ್ಣ ಪ್ರಮಾಣದ ಕೈಗಾರಿಕಾ ಘಟಕಗಳ ಮುಖ್ಯಸ್ಥರ ಜೊತೆ ಮಾತುಕತೆ ನಡೆಸಿದ …

Read More »

ಮಂತ್ರಾಲಯದಿಂದ ವಾಪಸಾಗುತ್ತಿದ್ದ ಖಾಸಗಿ ಬಸ್​ ಅಪಘಾತ: 25ಕ್ಕೂ ಹೆಚ್ಚು ಮಂದಿಗೆ ಗಾಯ

ರಾಯಚೂರು : ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್ ಬೈಕ್​ಗೆ ಡಿಕ್ಕಿ ಹೊಡೆದು ರಸ್ತೆ ಬದಿಯ ಹೊಲಕ್ಕೆ ನುಗ್ಗಿರುವ ಘಟನೆ ಜಿಲ್ಲೆಯ ಮಾನವಿ ಪಟ್ಟಣ ಹೊರವಲಯದ ಸಿಂಧನೂರು ರಸ್ತೆಯ ನಂದಿಹಾಳ ಗ್ರಾಮದಲ್ಲಿ ಇಂದು ನಡೆದಿದೆ. ಅಪಘಾತದಲ್ಲಿ ಸುಮಾರು 25ಕ್ಕೂ ಅಧಿಕ ಜನರು ಗಾಯಗೊಂಡಿದ್ದಾರೆ. ಬೆಂಗಳೂರಿನಿಂದ ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿಗಳ ದರ್ಶನಕ್ಕಾಗಿ ಕುರುಬರಹಳ್ಳಿಯ ಚಾಲಕರ ಸಂಘದವರು ಖಾಸಗಿ ಬಸ್‌ನಲ್ಲಿ ಆಗಮಿಸಿದ್ದರು. ಇಂದು ಗುರುರಾಯರ ದರ್ಶನ ಪಡೆದು ಬೆಂಗಳೂರಿಗೆ ಮರಳುತ್ತಿದ್ದರು. ನಂದಿಹಾಳ ಗ್ರಾಮದಲ್ಲಿ …

Read More »

ಭತ್ತ ಬಿತ್ತಿದ ಗಂಡ ಹೆಂಡತಿ: ಮಳೆಗಾಗಿ ರೈತರ ಪ್ರಾರ್ಥನೆ!

ಬೆಳಗಾವಿ: ಜಿಲ್ಲೆಯ ವಿವಿಧೆಡೆ ಮಳೆಗಾಗಿ ನಾನಾ ರೀತಿಯ ಪೂಜೆ ಮಾಡಿದರೂ‌ ಜನರ ಪ್ರಾರ್ಥನೆಗೆ ಮಳೆರಾಯ ಮಾತ್ರ ಜಪ್ಪಯ್ಯ ಎನ್ನುತ್ತಿಲ್ಲ. ಆದರೂ ನಂಬಿಕೆ ಕಳೆದುಕೊಳ್ಳದ ರೈತರು ತಮ್ಮ ಕೃಷಿ ಚಟುವಟಿಕೆ ಮುಂದುವರಿಸಿದ್ದಾರೆ. ಒಣ ಹೊಲದಲ್ಲಿ ಕೈಯಿಂದಲೇ ಸಾಲು ಬಿಡುತ್ತಾ ಭತ್ತದ ಬಿತ್ತನೆ ಮಾಡುತ್ತಿದ್ದಾರೆ. ಖಾನಾಪುರ ತಾಲೂಕಿನ ಅರಣ್ಯ ಪ್ರದೇಶದ ಮಾಣಿಕವಾಡಿ ಗ್ರಾಮದ ಕೃಷ್ಣಾ ಗಾವಡಾ ಎಂಬುವವರ ಅರ್ಧ ಎಕರೆ ಜಮೀನು ಹೊಂದಿದ್ದು, ತಮ್ಮ ಪತ್ನಿ‌ ಅನುರಾಧಾ ಜೊತೆಗೆ ಭತ್ತದ ಬಿತ್ತನೆಯಲ್ಲಿ ತೊಡಗಿದ್ದಾರೆ. ಈ …

Read More »

ಬೆಳಗಾವಿಯಲ್ಲಿ ಕೈಗಾರಿಕೆಗಳು ಬಂದ್,

ಬೆಳಗಾವಿ: ರಾಜ್ಯದಲ್ಲಿ ವಿದ್ಯುತ್ ದರ ಏರಿಕೆ ಖಂಡಿಸಿ ಹುಬ್ಬಳ್ಳಿಯ ಕರ್ನಾಟಕ ಚೇಂಬರ್ ಆಫ್ ಕಾಮರ್ಸ್ ನೀಡಿರುವ ಬಂದ್​ಗೆ ಬೆಳಗಾವಿಯಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಕೈಗಾರಿಕೆಗಳನ್ನು ಬಂದ್ ಮಾಡಿ ಪ್ರತಿಭಟನಾ ಮೆರವಣಿಗೆ ನಡೆಸಿದ ಕೈಗಾರಿಕೋದ್ಯಮಿಗಳು ಎಲೆಕ್ಟ್ರಿಕಲ್ ಬೈಕ್ ಹೊತ್ತುಕೊಂಡು ಅಣಕು ಶವಯಾತ್ರೆ ಮಾಡುವ ಮೂಲಕ ಸರ್ಕಾರದ ಗಮನ ಸೆಳೆದಿದ್ದಾರೆ. ಇಂದು ಬೆಳಗ್ಗೆ ಇಲ್ಲಿನ ಧರ್ಮವೀರ ಸಂಭಾಜಿ ವೃತ್ತ ಬಳಿ ಚೇಂಬರ್ ಆಫ್ ಕಾಮರ್ಸ್ ಮತ್ತು ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಸೇರಿದ ಜಿಲ್ಲೆಯ ಕೈಗಾರಿಕೋದ್ಯಮಿಗಳು …

Read More »

ಆಯಪ್​ ಮೂಲಕ ನಕಲಿ ಷೇರು ಮಾರುಕಟ್ಟೆ ನಡೆಸುತ್ತಿದ್ದು, ಇದರ ಮೂಲಕ ಸರ್ಕಾರಕ್ಕೆ ಕೋಟ್ಯಂತರ ರೂಪಾಯಿ ವಂಚಿಸುತ್ತಿದ್ದ ಆರೋಪಿಯನ್ನು ಮುಂಬೈ ಕ್ರೈಂ ಬ್ರಾಂಚ್​ ಬಂಧಿಸಿದೆ.

  ಮುಂಬೈ, ಮಹಾರಾಷ್ಟ್ರ: ಆರೋಪಿಯೊಬ್ಬನನ್ನು ಅಪರಾಧ ವಿಭಾಗದ 11ನೇ ಘಟಕ ಬಂಧಿಸಿದೆ. ಆರೋಪಿಯನ್ನು ಜತಿನ್ ಸುರೇಶ್ ಭಾಯಿ ಮೆಹ್ತಾ (45) ಎಂದು ಗುರುತಿಸಲಾಗಿದೆ. ಸಂಕಡೆ ಬಿಲ್ಡಿಂಗ್ ಮಹಾವೀರ ನಗರದ ಕಾಂದಿವಲಿ ಪಶ್ಚಿಮದಲ್ಲಿ ವಾಸಿಸುತ್ತಿದ್ದ ಆರೋಪಿ ಜತಿನ್​ನಿಂದ 5 ಮೊಬೈಲ್ ಫೋನ್, 2 ಟ್ಯಾಬ್ಲೆಟ್, 1 ಲ್ಯಾಪ್ ಟಾಪ್, 1 ಪೇಪರ್ ಶ್ರೆಡರ್, 50 ಸಾವಿರ ನಗದು, 1 ರೂಟರ್, 1 ಪೆನ್ ಡ್ರೈವ್ ಸೇರಿದಂತೆ ಇತರ ವಸ್ತಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಮಾರ್ಚ್ …

Read More »

670 ಸಹಾಯಕ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ

ಸರ್ಕಾರಿ ಹುದ್ದೆಗಳ ನಿರೀಕ್ಷೆಯಲ್ಲಿದ್ದವರಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸಿಹಿ ಸುದ್ದಿ ನೀಡಿದೆ. ಸರ್ಕಾರದ ವಿವಿಧ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆ ಭರ್ತಿಗೆ ಅಧಿಸೂಚನೆ ಪ್ರಕಟಿಸಲಾಗಿದೆ. ಕರ್ನಾಟಕ ಸರ್ಕಾರದ ಹುದ್ದೆಗಳಿಗೆ ತಯಾರಿ ನಡೆಸುತ್ತಾ ಎದುರು ನೋಡುತ್ತಿದ್ದ ಅಭ್ಯರ್ಥಿಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಶುಭ ಸುದ್ದಿ ನೀಡಿದೆ. ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಒಟ್ಟು 607 ಜ್ಯೂನಿಯರ್​ ಅಸಿಸ್ಟಂಟ್​, ಎಸ್​ಡಿಎ ಮತ್ತು ಅಸಿಸ್ಟೆಂಟ್​ ಹುದ್ದೆ ಭರ್ತಿಗೆ ಕೆಇಎ ಹೊಸ ಅಧಿಸೂಚನೆ ಪ್ರಕಟಿಸಿದೆ. …

Read More »