Breaking News

ರಾಜಕೀಯ

ಎಣ್ಣೆಯಲ್ಲೂ ಬಡವರಿಗೆ ಬರೆ, ಶ್ರೀಮಂತರ ಮದ್ಯದ ದರ ಇಳಿಕೆ, ಬಡವರ ಮದ್ಯ ದುಬಾರಿ!

ಬೆಂಗಳೂರು: ಕರ್ನಾಟಕದಲ್ಲಿ ಒಂದೇ ಬಾರಿ ಮದ್ಯದ ದರ ಏರಿಕೆ ಮತ್ತು ಇಳಿಕೆ ಎರಡೂ ಆಗುತ್ತಿದೆ! ಹೌದು, ರಾಜ್ಯದಲ್ಲಿ ಜುಲೈ 1ರಿಂದ ಏಕಕಾಲಕ್ಕೆ ಮದ್ಯದ ದರದಲ್ಲಿ ಏರಿಳಿತ ಆಗುತ್ತಿದೆ. ದುಬಾರಿ ಬೆಲೆಯ ಮದ್ಯಗಳ ದರ (Liquor Price) ಕಡಿಮೆ ಆಗುತ್ತಿದ್ದು, ಈವರೆಗೆ ಕಡಿಮೆ ಹಣಕ್ಕೆ ಮಾರಾಟ ಆಗುತ್ತಿದ್ದ ಮದ್ಯಗಳು ದುಬಾರಿ ಆಗುತ್ತಿವೆ.   ಈ ಮದ್ಯಗಳ ಬೆಲೆ ಇಳಿಕೆ ಇದೇ ಜುಲೈ 1ರಿಂದ ರಾಜ್ಯದಲ್ಲಿ ಬಿಯರ್ ಸೇರಿ ಪ್ರೀಮಿಯಂ ಮದ್ಯದ ಬ್ರಾಂಡ್‌ಗಳ …

Read More »

ಪುಣೆ ಪೋರ್ಷೆ ಕಾರು ಅಪಘಾತ ಕೇಸ್​ನಲ್ಲಿ ಅಪ್ರಾಪ್ತನ ರಿಲೀಸ್; ಅಬ್ಸರ್ವೇಶನ್ ಹೋಮ್​ನಿಂದ ಬಿಡುಗಡೆ

ಪುಣೆ (ಮಹಾರಾಷ್ಟ್ರ): ರಾಷ್ಟ್ರವ್ಯಾಪಿ ಸುದ್ದಿಯಾಗಿದ್ದ ಪುಣೆ ಪೋರ್ಷೆ ಕಾರು ಅಪಘಾತ ಪ್ರಕರಣದಲ್ಲಿ ಬಾಲಾರೋಪಿಯನ್ನು (17 ವರ್ಷ) ರಿಲೀಸ್​ ಮಾಡಲಾಗಿದೆ. ಅಬ್ಸರ್ವೇಶನ್ ಹೋಮ್‌ನಿಂದ ಬಿಡುಗಡೆ ಮಾಡುವಂತೆ ಬಾಂಬೆ ಹೈಕೋರ್ಟ್ ಆದೇಶಿಸಿದೆ. ಮೇ 19 ರಂದು ಮುಂಜಾನೆ ಕಲ್ಯಾಣಿ ನಗರದಲ್ಲಿ ಶ್ರೀಮಂತ ಬಿಲ್ಡರ್‌ನ ಪುತ್ರನಾದ ಅಪ್ರಾಪ್ತ ಚಲಾಯಿಸುತ್ತಿದ್ದ ಪೋರ್ಷೆ ಕಾರು ಬೈಕಿಗೆ ಡಿಕ್ಕಿ ಹೊಡೆದಿತ್ತು. ಘಟನೆಯಲ್ಲಿ ಐಟಿ ವೃತ್ತಿಪರರಾದ ಅನೀಶ್ ಅವಧಿಯಾ ಮತ್ತು ಅಶ್ವಿನಿ ಕೋಷ್ಟ ಎಂಬುವರು ಮೃತಪಟ್ಟಿದ್ದರು. ಪೊಲೀಸರ ಪ್ರಕಾರ ಅಪ್ರಾಪ್ತ …

Read More »

ಇಂದು ರಾತ್ರಿ ಖರ್ಗೆ ನಿವಾಸದಲ್ಲಿ ‘ಇಂಡಿಯಾ’ ನಾಯಕರ ಸಭೆ

ನವದೆಹಲಿ: ಲೋಕಸಭೆ ಉಪಸಭಾಧ್ಯಕ್ಷರ ಆಯ್ಕೆ ಸಂಬಂಧ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸದಲ್ಲಿ ‘ಇಂಡಿಯಾ’ ಮೈತ್ರಿಕೂಟದ ನಾಯಕರು ಇಂದು ರಾತ್ರಿ 8 ಗಂಟೆಗೆ ಸಭೆ ನಡೆಸಲಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಲೋಕಸಭೆ ಸ್ಪೀಕರ್‌ ಸ್ಥಾನಕ್ಕೆ ಎನ್‌ಡಿಎ ತನ್ನ ಅಭ್ಯರ್ಥಿಯಾಗಿ ಬಿಜೆಪಿಯ ಓಂ ಬಿರ್ಲಾ ಅವರನ್ನು ಕಣಕ್ಕಿಳಿಸಿದೆ.   ಇಂಡಿಯಾ ಮೈತ್ರಿಕೂಟವು ಕಾಂಗ್ರೆಸ್‌ ಸಂಸದ ಕೊಡಿಕುನ್ನಿಲ್ ಸುರೇಶ್ ಅವರನ್ನು ಕಣಕ್ಕಿಳಿಸಲಾಗಿದೆ. ಲೋಕಸಭೆ ಉಪಸಭಾಧ್ಯಕ್ಷರ ಆಯ್ಕೆ ವಿಚಾರದಲ್ಲಿ ಆಡಳಿತ ಮತ್ತು ವಿರೋಧ …

Read More »

ಹಣ ದುರುಪಯೋಗ ಆರೋಪ : ಸೂರಜ್ ರೇವಣ್ಣ ಆಪ್ತ ಶಿವಕುಮಾರ್ ವಿರುದ್ಧ ‘FIR’ ದಾಖಲು

ಹಾಸನ : ಹಣ ದುರುಪಯೋಗ ಆರೋಪದ ಅಡಿ ಇದೀಗ ಸೂರಜ್ ರೇವಣ್ಣ ಆಪ್ತ ಎನ್ನಲಾದ ಶಿವಕುಮಾರ್ ವಿರುದ್ಧ ಅರಕಲಗೂಡು ತಾಲೂಕಿನ ಕೊಣನೂರು ಪೊಲೀಸ್ ಠಾಣೆಯಲ್ಲಿ ​FIR ದಾಖಲಾಗಿದೆ. ಹೌದು ಸೂರಜ್ ವಿರುದ್ದ ಅಸಹಜ ಲೈಂಗಿಕ ದೌರ್ಜನ್ಯ ಆರೋಪ ಹಿನ್ನಲೆ ಜೆಡಿಎಸ್​ ಕಾರ್ಯಕರ್ತ ಠಾಣೆಗೆ ದೂರ ನೀಡಿದ್ದ. ಆದರೆ, ಆತ ಹಣಕ್ಕಾಗಿ ಅರೋಪಿಸಿ ಪೀಡಿಸಿದ್ದಾರೆ ಎಂದು ಸೂರಜ್ ರೇವಣ್ಣ ಆಪ್ತ ಶಿವಕುಮಾರ್, ಹೊಳೆನರಸೀಪುರ ನಗರ ಠಾಣೆಗೆ ದೂರು ನೀಡಿದ್ದರು. ಇದೀಗ ಹಣ …

Read More »

ರಾಜ್ಯದ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಶೇ.100 ರಷ್ಟು ಸಿಗಲಿವೆ ಔಷಧಿಗಳು : ಗುಂಡೂರಾವ್

ಸರ್ಕಾರಿ ಆಸ್ಪತ್ರೆಯಲ್ಲಿಯೇ ಎಲ್ಲಾ ರೀತಿಯ ಆರೋಗ್ಯ ಸೌಲಭ್ಯ ಒದಗಿಸಬೇಕು. ಆ ನಿಟ್ಟಿನಲ್ಲಿ ಔಷಧಿಗಳು ಸೇರಿದಂತೆ ಶೇ.100 ರಷ್ಟು ಔಷಧಿಗಳು ದೊರೆಯುವಂತಾಗಲು ಪ್ರಯತ್ನಿಸಲಾಗಿದೆ. ಇನ್ನು ಮೂರು ನಾಲ್ಕು ತಿಂಗಳಲ್ಲಿ ಶೇ.100 ರಷ್ಟು ಗುರಿ ತಲುಪಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡುರಾವ್ ಅವರು ಹೇಳಿದರು.     ರಾಜ್ಯದಲ್ಲಿ 219 ಡಯಾಲಿಸಿಸ್ ಕೇಂದ್ರಗಳನ್ನು ಆರಂಭಿಸಿ ಸುಮಾರು 800 ಯಂತ್ರಗಳನ್ನು ಅಳವಡಿಸಲಾಗಿದೆ. ಹೊಸ ತಾಲ್ಲೂಕು ಕೇಂದ್ರಗಳಲ್ಲಿಯೂ ಸಹ ಆರೋಗ್ಯಕ್ಕೆ …

Read More »

ಐವರನ್ನು ಡಿಸಿಎಂ ಮಾಡಿ: ಡಿಕೆ ವ್ಯಂಗ್ಯ

ಬೆಂಗಳೂರು: “ಮೂರು ಡಿಸಿಎಂ ಹುದ್ದೆ ಸೃಷ್ಟಿ ಮಾಡಬೇಕು ಎಂಬ ಬಗ್ಗೆ ನನಗೆ ಮಾಹಿತಿ ಇಲ್ಲ. ಪಕ್ಷ ತೀರ್ಮಾನ ಮಾಡಿ, ಇನ್ನೂ ಐದು ಜನರನ್ನು ಮಾಡಿದರೆ ಒಳ್ಳೆಯದು’ ಎಂದು ಮಾಜಿ ಸಂಸದ ಡಿ.ಕೆ. ಸುರೇಶ್‌ ವ್ಯಂಗ್ಯವಾಡಿದ್ದಾರೆ. ಸದಾಶಿವನಗರದ ತಮ್ಮ ನಿವಾಸದ ಬಳಿ ಡಿಸಿಎಂ ಹುದ್ದೆ ಸೃಷ್ಟಿ ಬಗ್ಗೆ ಪ್ರತಿಕ್ರಿಯೆ ನೀಡಿ, ಐದು ಡಿಸಿಎಂ ಹುದ್ದೆ ಸೃಷ್ಟಿ ಬಗ್ಗೆ ಪ್ರಸ್ತಾವ ಮಾಡಿದ್ದಾರೆ. ಹೆಚ್ಚುವರಿ ಡಿಸಿಎಂ ಮಾಡಿದರೆ ಡಿ.ಕೆ. ಶಿವಕುಮಾರ್‌ ಅವರ ಬಲ ಕುಗ್ಗಿದಂತೆ …

Read More »

ಅಂಗನವಾಡಿ ಕೇಂದ್ರಗಳಲ್ಲೇ ಎಲ್‌ಕೆಜಿ, ಯುಕೆಜಿ: -ಲಕ್ಷ್ಮೀ ಹೆಬ್ಬಾಳ್ಕರ್‌,

ಬೆಂಗಳೂರು: ರಾಜ್ಯದ ಎಲ್ಲ ಅಂಗನವಾಡಿ ಕೇಂದ್ರಗಳನ್ನು ಉನ್ನತ ಸ್ತರಕ್ಕೇರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸಮ್ಮತಿ ಸೂಚಿಸಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಹೇಳಿದ್ದಾರೆ. ವಿಧಾನಸೌಧದಲ್ಲಿ ಸೋಮವಾರ ಮುಖ್ಯ ಮಂತ್ರಿ ಸಿದ್ದರಾಮಯ್ಯ ಜತೆಗೆ ಸಭೆ ನಡೆಸಿದ ಬಳಿಕ ಮಾತನಾಡಿ, ಕಲ್ಯಾಣ ಕರ್ನಾಟಕ ಭಾಗ ಹೊರತುಪಡಿಸಿ ಹೊಸದಾಗಿ ಅಂಗನವಾಡಿ ಕೇಂದ್ರಗಳಲ್ಲೇ ಪೂರ್ವ ಪ್ರಾಥಮಿಕ (ಎಲ್‌ಕೆಜಿ, ಯುಕೆಜಿ) ಶಿಕ್ಷಣ ನೀಡುವ ಬಗ್ಗೆ ತಜ್ಞರ ಸಮಿತಿ ರಚಿಸಲು ಸಿಎಂ ಸೂಚಿಸಿದ್ದಾರೆ …

Read More »

ತಾ.ಪಂ.-ಜಿ.ಪಂ. ಮೀಸಲಾತಿ ನಿಗದಿ ವಿಳಂಬ: ಸರಕಾರಕ್ಕೆ ನ್ಯಾಯಾಂಗ ನಿಂದನೆ ತೂಗುಗತ್ತಿ

ಬೆಂಗಳೂರು: ನ್ಯಾಯಾಲಯಕ್ಕೆ ಕೊಟ್ಟ ಭರವಸೆಯಂತೆ ನಿಗದಿತ ಅವಧಿಯಲ್ಲಿ ಜಿ.ಪಂ. ಹಾಗೂ ತಾ.ಪಂ. ಕ್ಷೇತ್ರಗಳಿಗೆ ಮೀಸಲಾತಿ ಅಂತಿಮಗೊಳಿಸದ ರಾಜ್ಯ ಸರಕಾರದ ವಿರುದ್ಧ ರಾಜ್ಯ ಚುನಾವಣ ಆಯೋಗ ಹೈಕೋರ್ಟ್‌ಗೆ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದೆ. ಆಯೋಗ ಸಲ್ಲಿಸಿರುವ ಈ ಸಿವಿಲ್‌ ನ್ಯಾಯಾಂಗ ನಿಂದನೆ ಅರ್ಜಿಯು ಮುಖ್ಯ ನ್ಯಾಯಮೂರ್ತಿ ಎನ್‌.ವಿ. ಅಂಜಾರಿಯಾ ಹಾಗೂ ನ್ಯಾ| ಕೆ.ವಿ. ಅರವಿಂದ್‌ ಅವರಿದ್ದ ವಿಭಾಗೀಯ ನ್ಯಾಯಪೀಠದ ಮುಂದೆ ಸೋಮವಾರ ವಿಚಾರಣೆಗೆ ಬಂದಿತ್ತು.   ಈ ವೇಳೆ ರಾಜ್ಯ ಚುನಾವಣ …

Read More »

ಮಂಚೂರಿ, ಬಾಂಬೇ ಮಿಠಾಯಿ ಬಳಿಕ ಕಬಾಬ್‌ಗೂ ನಿಷೇಧ

ಬೆಂಗಳೂರು: ರಾಜ್ಯಾ ದ್ಯಂತ ವೆಜ್‌ ಕಬಾಬ್‌, ಕೋಳಿ ಹಾಗೂ ಮೀನಿನ ಕಬಾಬ್‌ ತಯಾರಿಗೆ ಕೃತಕ ಬಣ್ಣ ಉಪಯೋಗಿಸುವುದನ್ನು ನಿಷೇ ಧಿಸಿ ರಾಜ್ಯ ಆಹಾರ ಸುರಕ್ಷೆ ಮತ್ತು ಗುಣಮಟ್ಟ ಇಲಾಖೆ ಸೋಮವಾರ ಮಹತ್ವದ ಆದೇಶ ಹೊರಡಿಸಿದೆ. ನಿಯಮ ಉಲ್ಲಂಘಿಸಿದರೆ ಜೀವಾವಧಿವರೆಗೆ ಜೈಲು ಶಿಕ್ಷೆಯ ಎಚ್ಚರಿಕೆಯನ್ನೂ ನೀಡಲಾಗಿದೆ.   ಕೋಳಿ ಕಬಾಬ್‌ಗಳಲ್ಲಿ ಕೃತಕ ಬಣ್ಣಗಳ ಬೆರೆಸುವಿಕೆಯಿಂದಾಗುವ ದುಷ್ಪರಿ ಣಾಮಗಳ ಬಗ್ಗೆ ಪರೀಕ್ಷೆಗೊಳಪಡಿಸಿ, ಕ್ರಮ ಕೈಗೊಳ್ಳುವಂತೆ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಸೂಚನೆ ನೀಡಿದ್ದರು. ಈ ಹಿನ್ನೆಲೆಯಲ್ಲಿ …

Read More »

3 ದಿನದಲ್ಲಿ ಮಸಾಲ-ಪಾನಿಪೂರಿಯ ಕೆಮಿಕಲ್‌ ಸಾಸ್‌ ನಿಷೇಧ?

ಬೆಂಗಳೂರು: ಮುಂದಿನ 3 ದಿನಗಳಲ್ಲಿ ಅಸುರಕ್ಷಿತ ಮಸಾಲಪೂರಿ ಹಾಗೂ ಪಾನಿಪೂರಿ ಮಾರಾಟ ವನ್ನು ರಾಜ್ಯಾದ್ಯಂತ ನಿಷೇಧ ಮಾಡಲಾಗುತ್ತದೆಯೇ? ಅಂಥದ್ದೊಂದು ತೂಗುಕತ್ತಿ ಈ ಮಸಾಲಾ ತಿಂಡಿಗಳ ಮೇಲಿದೆ. ಇದಕ್ಕೆ ಬಳಸುವ ಕೆಮಿಕಲ್‌ ಸಾಸ್‌ ಮಕ್ಕಳ ಜೀರ್ಣಾಂಗದ ಮೇಲೂ ಪರಿಣಾಮ ಬೀರಿ, ಹೈಪರ್‌ ಆಕ್ವಿವ್‌ನೆಸ್‌ ಗೆ ಕಾರಣವಾಗುತ್ತಿದೆ ಎಂಬ ಅಂಶ ಗೊತ್ತಾಗಿದೆ. ರಾಜ್ಯದಲ್ಲಿ ಗೋಬಿ ಮಂಚೂರಿ, ಕಾಟನ್‌ ಕ್ಯಾಂಡಿಗಳಲ್ಲಿ ಆರೋಗ್ಯಕ್ಕೆ ಹಾನಿಕಾರಕ ಅಂಶ ಪತ್ತೆಯಾದ ಹಿನ್ನೆಲೆಯಲ್ಲಿ ಅಸುರಕ್ಷಿತ ಗೋಬಿ ಹಾಗೂ ಕಾಟನ್‌ ಕ್ಯಾಂಡಿಗಳ …

Read More »