Breaking News

ರಾಜಕೀಯ

ಮತ್ತೊಮ್ಮೆ ಮುಂದೂಡಲ್ಪಟ್ಟ ಪ್ರಜಾಧ್ವನಿ ಕಾರ್ಯಕ್ರಮ

ಬೆಳಗಾವಿ: ಬೆಳಗಾವಿ ಜಿಲ್ಲೆಯ ವಿವಿಧೆಡೆ ಹಮ್ಮಿಕೊಳ್ಳಲಾಗಿದ್ದ ಕಾಂಗ್ರೆಸ್ ಪ್ರಜಾಧ್ವನಿ ಕಾರ್ಯಕ್ರಮ ಮತ್ತೊಮ್ಮೆ ಮುಂದೂಡಲ್ಪಟ್ಟಿದೆ. ಇದೇ 20ರಂದು ರಾಹುಲ್ ಗಾಂಧಿ ಬೆಳಗಾವಿಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಪ್ರಜಾಧ್ವನಿ ಕಾರ್ಯಕ್ರಮವನ್ನು ಮುಂದೂಡಲಾಗಿದೆ ಎಂದು ಜಿಲ್ಲಾ ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷ ವಿನಯ ನಾವಲಗಟ್ಟಿ ತಿಳಿಸಿದ್ದಾರೆ. ಸಿದ್ದರಾಮಯ್ಯ ನೇತೃತ್ವದಲ್ಲಿ ಇದೇ 17ರಿಂದ ಗೋಕಾಕ, ಹಾರೂಗೇರಿ, ಅಥಣಿ, ಕಾಗವಾಡ (ಮದಬಾವಿ), ಕಂಕನವಾಡಿ, ಕಾಕತಿ ಮೊದಲಾದ ಕಡೆಗಳಲ್ಲಿ ಪ್ರಜಾ ಧ್ವನಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಆದರೆ ರಾಹುಲ ಗಾಂಧಿ ಭೇಟಿ ನಿಗದಿಯಾಗಿದ್ದರಿಂದ ಎಲ್ಲವನ್ನೂ …

Read More »

ಬಸನಗೌಡ ಪಾಟೀಲ ಯತ್ನಾಳ ಮತ್ತು ನಾವು ಆತ್ಮೀಯ ಸ್ನೇಹಿತರು:B.S.Y.

ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಮತ್ತು ನಾವು ಆತ್ಮೀಯ ಸ್ನೇಹಿತರು ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾವುದೋ ಒಂದೆರಡು ಸಂದರ್ಭದಲ್ಲಿ ಹೇಳಿಕೆ ನೀಡಿರುವುದನ್ನು ನಾವು ಅಪರಾಧ ಎಂದು ಪರಿಗಣಿಸುವುದಿಲ್ಲ. ನಮ್ಮ ಮಧ್ಯದಲ್ಲಿ ಯಾವುದೇ ಗೊಂದಲವಿಲ್ಲ. ಎಲ್ಲರೂ ಒಟ್ಟಾಗಿ ಹೋಗುತ್ತೇವೆ ಸ್ಪಷ್ಟಪಡಿಸಿದರು. ವಿಜಯೇಂದ್ರ ಹಾಗೂ ರಾಜ್ಯದ ಯಾವುದೇ ಬಿಜೆಪಿ ಶಾಸಕರ ಟಿಕೆಟ್‌ ನಿರ್ಧಾರವನ್ನು ಚುನಾವಣಾ ಸಮಿತಿ ಮಾಡುತ್ತದೆ. ನಾವು ಕೇವಲ ಸಲಹೆ ಕೊಡಬಹುದು. ಅಂತಿಮ …

Read More »

ರೈತರ ಹೆಸರಿನಲ್ಲಿ ಬಿ.ಸಿ.ಪಾಟೀಲರಿಂದ ಲೂಟಿ: ಸಿದ್ದರಾಮಯ್ಯ

ಹಾವೇರಿ: ‘ಶಾಸಕ ಮಾಡಾಳ್‌ ವಿರೂಪಾಕ್ಷಪ್ಪನ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆಸಿದಾಗ ₹8 ಕೋಟಿ ಸಿಕ್ಕಿದೆ. ಕೃಷಿ ಸಚಿವ ಬಿ.ಸಿ.ಪಾಟೀಲ್‌ ಮನೆ ಮೇಲೆ ದಾಳಿ ಮಾಡಿದರೆ ಕನಿಷ್ಠ ₹1 ಸಾವಿರ ಕೋಟಿ ಸಿಗುತ್ತದೆ. ರೈತರ ಹೆಸರು ಹೇಳುವುದು ಲೂಟಿ ಹೊಡೆಯುವುದು ಇದೇ ಪಾಟೀಲರ ಕಸುಬಾಗಿದೆ’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.   ಹಿರೇಕೆರೂರು ಪಟ್ಟಣದ ತಾಲ್ಲೂಕು ಕ್ರೀಡಾಂಗಣದಲ್ಲಿ ಮಂಗಳವಾರ ಆಯೋಜಿಸಿದ್ದ ‘ಕಾಂಗ್ರೆಸ್‌ ಪ್ರಜಾಧ್ವನಿ ಯಾತ್ರೆ’ ಸಮಾವೇಶದಲ್ಲಿ …

Read More »

ತೇರದಾಳ ಮತಕ್ಷೇತ್ರಕ್ಕೆ ಸಿದ್ದು ಸವದಿ ಅಭ್ಯರ್ಥಿ – B.S.Y.

ರಬಕವಿ-ಬನಹಟ್ಟಿ: ತೇರದಾಳ ಮತಕ್ಷೇತ್ರದ ಶಾಸಕ ಸಿದ್ದು ಸವದಿ ಮತಕ್ಷೇತ್ರದ ಅಭಿವೃದ್ಧಿಗಾಗಿ ಹಗಲಿರುಳು ಶ್ರಮಿಸುತ್ತಿದ್ದಾರೆ. ಅನೇಕ ಉತ್ತಮ ಕಾರ್ಯಗಳನ್ನು ಮಾಡಿದ್ದು, ಅವರೇ ತೇರದಾಳ ಮತಕ್ಷೇತ್ರದ ಅಭ್ಯರ್ಥಿಯಾಗಿ ಮುಂದುವರೆಯಲಿದ್ದಾರೆ ಮತ್ತು ಈ ಬಾರಿಯೂ ಕೂಡಾ ಭಾರಿ ಅಂತರದಿಂದ ಜಯ ಸಾಧಿಸಲಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು.   ಮಂಗಳವಾರ ಬಾಗಲಕೋಟೆ ಜಿಲ್ಲೆಯ ರಬಕವಿ-ಬನಟಹಟಿ ತಾಲೂಕಿನ ಬನಹಟ್ಟಿಯ ನಿರೀಕ್ಷಣಾ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತ, ಕಾಂಗ್ರೆಸ್ ಪಕ್ಷದಲ್ಲಿ ನಾಯಕತ್ವವೇ ಇಲ್ಲ. ಕಾಂಗ್ರೆಸ್ ಪಕ್ಷದ ನಾಯಕ ರಾಹುಲ್ …

Read More »

ರಾಜ್ಯದಲ್ಲಿ ಕಾಂಗ್ರೆಸ್ ಗೆಲ್ಲುವ ಕ್ಷೇತ್ರಗಳ ಸಂಖ್ಯೆ ತಿಳಿಸಿದ ಡಿ.ಕೆ.ಶಿ

ಬೆಂಗಳೂರು: ನಂಬಿಕೆಗೆ ಮತ್ತೊಂದು ಸಮಾಜ ಎಂದರೆ ತಿಗಳರ ಸಮಾಜ, ಸೂರ್ಯ ಹಾಗೂ ಅಗ್ನಿಯಿಂದ ಉದ್ಭವಿಸಿದ ಸಮಾಜ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ತಿಗಳರ ಸಮಾಜದ ಸಮಾವೇಶದಲ್ಲಿ ಮಾತನಾಡಿದ ಡಿ.ಕೆ.ಶಿವಕುಮಾರ್, ಈ ಸಮಾಜದ ಕಾರ್ಯಕ್ರಮದಲ್ಲಿ ತಪ್ಪದೇ ಭಾಗವಹಿಸಬೇಕು ಎಂದು ಪ್ರಜಾಧ್ವನಿ ಯಾತ್ರೆಯನ್ನು ಮುಂದೂಡಿ ಇಲ್ಲಿಗೆ ಈ ಕಾರ್ಯಕ್ರಮಕ್ಕೆ ಬಂದಿದ್ದೇನೆ. ಮರಕ್ಕೆ ಬೇರು ಎಷ್ಟು ಮುಖ್ಯವೋ, ಮನುಷ್ಯನಿಗೆ ನಂಬಿಕೆ ಕೂಡ ಅಷ್ಟೇ ಮುಖ್ಯ. ಈ ದೇಶದಲ್ಲಿ ಹಿಂದೂ, ಮುಸಲ್ಮಾನರು, ಕ್ರೈಸ್ತರು, ಸಿಖ್ಖರು ಸೇರಿದಂತೆ …

Read More »

ರಾಜ್ಯದಲ್ಲಿ ಇಂದಿನಿಂದ 5 ದಿನ ಮಳೆ?

ಬೆಂಗಳೂರು: ರಾಜ್ಯ ಸೇರಿ ದೇಶಾದ್ಯಂತ ತಾಪಮಾನ ಏರಿಕೆಯಾಗುತ್ತಲೇ ಇದೆ. ಬಿಸಿಲ ಧಗೆ ರಾಜ್ಯದಲ್ಲಿ ನಿಧಾನವಾಗಿಯೇ ಹೆಚ್ಚುತ್ತಿರುವ ಸಂದರ್ಭದಲ್ಲಿಯೇ ಹವಾಮಾನ ಇಲಾಖೆ ಮಳೆಯ ಮುನ್ಸೂಚನೆ ನೀಡಿದೆ. ಸಮುದ್ರಗಳಲ್ಲಿ ಮೆಲ್ಮೈ ಸುಳಿ ಕಾಣಿಸಿಕೊಂಡಿರೋ ಕಾರಣ ರಾಜ್ಯದ ನಾನಾ ಕಡೆ ಇಂದಿನಿಂದ 5 ದಿನ ಮಳೆಯಾಗುವ ಸಾಧ್ಯತೆ ಎಂದು ಮಾಹಿತಿ ನೀಡಿದೆ. ಮಾರ್ಚ್‌ 14 ರಿಂದ 18 ರವರೆಗೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಕೆಲವೆಡೆ ಹಾಗೂ ಮಾರ್ಚ್‌ 16 ರಿಂದ 18 ರವರೆಗೆ …

Read More »

ಟೋಲ್‌ ಸಂಗ್ರಹ: ಮೊದಲ ದಿನವೇ ಸೆನ್ಸಾರ್‌ ವೈಫಲ್ಯ, ಕಾರುಗಳಿಗೆ ಡ್ಯಾಮೇಜ್‌, ಆಕ್ರೋಶ

ಮೈಸೂರು, ಮಾರ್ಚ್‌, 14: ಬೆಂಗಳೂರು- ಮೈಸೂರು ಎಕ್ಸ್‌ಪ್ರೆಸ್‌ ವೇ ಅನ್ನು ಭಾನುವಾರ ನರೇಂದ್ರ ಮೋದಿಯವರು ಉದ್ಘಾಟನೆ ಮಾಡಿದ್ದರು. ಇದರ ಬೆನ್ನಲ್ಲೇ ರಾಷ್ಟ್ರೀಯ ಹೆದ್ದಾರಿ ಪ್ರಧಿಕಾರವು ಮಂಗಳವಾರ ಬೆಳಗ್ಗೆ 8 ಗಂಟೆಯಿಂದಲೇ ‌ಟೋಲ್ ಸಂಗ್ರಹ ಮಾಡಲು ಮುಂದಾಗಿದೆ. ಆದರೆ ಶುಲ್ಕ ಸಂಗ್ರಹಕ್ಕೆ ಮುಂದಾಗಿದ್ದ ಮೊದಲ ದಿನವೇ ಟೋಲ್‌ನ ಸೆನ್ಸಾರ್‌ಗಳಲ್ಲಿ ವೈಫಲ್ಯ ಕಾಣಿಸಿಕೊಂಡಿದೆ. ಟೋಲ್‌ ಸೆನ್ಸಾರ್‌ಗಳು ಕಾರ್ಯನಿರ್ವಹಿಸದ ಹಿನ್ನೆಲೆ, ಮೂರ್ನಾಲ್ಕು ಕಾರುಗಳು ಡ್ಯಾಮೇಜ್‌ ಆಗಿವೆ. ಇದರಿಂದ ರೊಚ್ಚಿಗೆದ್ದ ವಾಹನ ಸವಾರರು ರಾಷ್ಟ್ರೀಯ ಹೆದ್ದಾರಿ …

Read More »

ಸಿಎಂ ಇಬ್ರಾಹಿಂ ಮೇಲೆ ಕುಮಾರಸ್ವಾಮಿ ಗರಂ!

ಹಾಸನ,ಮಾರ್ಚ್‌14: ಚುನಾವಣೆ ಹತ್ತಿರವಾಗುತ್ತಿದ್ದಂತೆ ರಾಜಕೀಯ ಪಕ್ಷಗಳ ಪ್ರಚಾರದ ಅಬ್ಬರ ಜೋರಾಗಿದೆ. ಇತ್ತ ತಮ್ಮ ತಮ್ಮ ರಾಜಕೀಯ ಭವಿಷ್ಯಕ್ಕಾಗಿ ರಾಜಕೀಯ ನಾಯಕರು ಪಕ್ಷಾಂತರ ಪರ್ವ ಶುರು ಮಾಡಿದ್ದು, ಈಗಾಗಲೇ ಕಾಂಗ್ರೆಸ್‌ ನತ್ತ ಮುಖ ಮಾಡಿರುವ ಗುಬ್ಬಿ ಶ್ರಿನಿವಾಸರನ್ನ ಮತ್ತೆ ಜೆಡಿಎಸ್‌ ಗೆ ಕರೆತರುವ ಪ್ರಯತ್ನ ನಡೆದಿದೆ ಎಂದು ಹೇಳಲಾಗಿದೆ.   ಗುಬ್ಬಿ ಕ್ಷೇತ್ರದ ಶ್ರೀನಿವಾಸ ಗೌಡ ಅವರು ಜೆಡಿಎಸ್‌ಗೆ ಬಂದ್ರೆ ಸ್ವಾಗತ ಎಂದು ಜೆಡಿಎಸ್‌ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಹೇಳಿಕೆ ನೀಡಿದ್ದು, …

Read More »

ಟೋಲ್‌ ಕಟ್ಟುವುದಿಲ್ಲವೆಂದು ಕೆ ಎಸ್‌ ಆರ್‌ ಟಿ ಸಿ ಚಾಲಕ ಆಕ್ರೋಶ

ಮೈಸೂರು : ಬೆಂಗಳೂರು-ಮೈಸೂರು ನೂತನ ಹೆದ್ದಾರಿಯ ಬಿಡದಿ ಟೋಲ್ ಪ್ಲಾಜಾ ಯುದ್ಧಭೂಮಿಯಾಗಿ ಮಾರ್ಪಟ್ಟಿದೆ. ಪ್ರತಿಯೊಬ್ಬ ವಾಹನ ಚಾಲಕ ಟೋಲ್ ಪ್ಲಾಜಾ ಸಿಬ್ಬಂದಿ ವಿಧಿಸುತ್ತಿರುವ ದುಬಾರಿ ಶುಲ್ಕದಿಂದ ಸಿಟ್ಟಿಗೇಳುತ್ತಿದ್ದಾರೆ. ಬೆಂಗಳೂರು-ಮೈಸೂರು ನಡುವೆ ಓಡುವ ಕೆಎಸ್ ಆರ್ ಟಿಸಿ ಬಸ್ಸಿನ ಚಾಲಕರೊಬ್ಬರು ಸುತಾರಾಂ ಟೋಲ್ ಶುಲ್ಕ ನೀಡುವುದಿಲ್ಲ ಎಂದು ಜಗಳಕ್ಕೆ ಬಿದ್ದಿದ್ದಾರೆ. ಟೋಲ್ ಸಿಬ್ಬಂದಿ ಸಾರ್ ‘ನೀವು ಶುಲ್ಕ ಪಾವತಿಸದಿದ್ದರೆ ನಮ್ಮ ಸಂಬಳದಿಂದ ಕಿತ್ತುಕೊಳ್ಳುತ್ತಾರೆ’ ಎಂದು ಹೇಳಿದರೂ ಬಸ್ ಚಾಲಕನ ಮೇಲೆ ಯಾವುದೇ ಪರಿಣಾಮ …

Read More »

ಬೆಂಗಳೂರು- ಮೈಸೂರು ಹೈವೇಮೋದಿ ಅಪ್ಪನ ಮನೆಯಿಂದ ಹಣ ತಂದು ನಿರ್ಮಾಣ ಮಾಡಿಲ್ಲ‌: ಎಚ್ ವಿಶ್ವನಾಥ್ ಕಿಡಿ

ಮೈಸೂರು: ಬೆಂಗಳೂರು- ಮೈಸೂರು ಹೈವೇಯನ್ನು ಮೋದಿ ಅಪ್ಪನ ಮನೆಯಿಂದ ಹಣ ತಂದು ನಿರ್ಮಾಣ ಮಾಡಿಲ್ಲ‌. ಪ್ರತಾಪ್ ಸಿಂಹ ಅಪ್ಪನ ಮನೆಯಿಂದ ಹಣ ತಂದು ಮಾಡಿಲ್ಲ. ಜನರ ತೆರಿಗೆ ಹಣದಿಂದ ನಿರ್ಮಾಣ ಮಾಡಲಾಗಿದೆ. ಆದರೂ ಹೈವೇಗೆ ದುಬಾರಿ ಟೋಲ್ ನಿಗದಿ ಮಾಡಿರೋದು ಸರಿಯಲ್ಲ ಎಂದು ಪರಿಷತ್ ಸದಸ್ಯ ಎಚ್ ವಿಶ್ವನಾಥ್ ಕಿಡಿಕಾರಿದರು.   ಬೆಂಗಳೂರು ಮೈಸೂರು ಹೈವೇ ಕಾಮಗಾರಿ ಅವೈಜ್ಞಾನಿಕವಾಗಿದೆ. ಹೈವೇ ನಿರ್ಮಾಣದಿಂದ ಮಂಡ್ಯ ಜಿಲ್ಲೆಯ ಜನರಿಗೆ ತೀವ್ರ ತೊಂದರೆಯಾಗಿದೆ. ಹೈವೇ ಕಾಮಗಾರಿ …

Read More »