Breaking News

ರಾಜಕೀಯ

ಸೋಮಣ್ಣ ನಮ್ಮ ಜೊತೆಯೇ ಇರುತ್ತಾರೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಹುಬ್ಬಳ್ಳಿ: ‘ಸಚಿವ ವಿ. ಸೋಮಣ್ಣ ನಮ್ಮ ಜೊತೆನೆ ಇದ್ದಾರೆ. ಮುಂದೆಯೂ ಜೊತೆಗೇ ಇರುತ್ತಾರೆ. ಯಾವುದೇ ಊಹಾಪೋಹ ಬೇಡ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದರು. ಸೋಮವಾರ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘ವಿ. ಸೋಮಣ್ಣ ಅವರ ಜೊತೆ ನಿನ್ನೆ ಹುಬ್ಬಳ್ಳಿಯಲ್ಲಿ ಯಾವುದೇ ಮಾತುಕತೆ ನಡೆದಿಲ್ಲ. ನಮ್ಮ ಭೇಟಿ ಕೇವಲ ಔಪಚಾರಿಕ’ ಎಂದರು. ‘ಒಂದಿಷ್ಟು ಯೋಜನೆಗಳ ಕ್ರೆಡಿಟ್ ಪಡೆಯಲು ಕೆಲವರು ಮುಂದಾಗಿದ್ದಾರೆ. ಕ್ರೆಡಿಟ್ ವಾರ್ ಸಹಜ. ಪಕ್ಕದ ಮನೆಯವರು ಗಂಡು ಹಡೆದರೆ, ಇವರು …

Read More »

ಫೈಟರ್ ರವಿಗೆ ಕೈಮುಗಿದು ನಿಂತ ಮೋದಿ: ಪ್ರಧಾನಿ ಹುದ್ದೆಗೆ ಕಳಂಕ ಎಂದ ಕಾಂಗ್ರೆಸ್

ಬೆಂಗಳೂರು: ಮಲ್ಲಿಕಾರ್ಜುನ್‌ (ಫೈಟರ್‌ ರವಿ) ಎಂಬುವವರ ಎದುರು ಕೈಮುಗಿದು ನಿಂತ ನರೇಂದ್ರ ಮೋದಿ ಅವರಿಂದ ಪ್ರಧಾನಿ ಹುದ್ದೆಗೆ ಕಳಂಕ ಅಂಟಿದೆ ಎಂದು ಕಾಂಗ್ರೆಸ್‌ ಆರೋಪಿಸಿದೆ. ಫೈಟರ್‌ ರವಿ ಅವರನ್ನು ರೌಡಿ ಶೀಟರ್‌ ಎಂದು ಕಾಂಗ್ರೆಸ್‌ ಆರೋಪಿಸಿದೆ.       ಕಾಂಗ್ರೆಸ್‌ ಮಾಡಿರುವ ಟ್ವೀಟ್‌ ಮಂಡ್ಯ ಮತ್ತು ಧಾರವಾಡದ ಕಾರ್ಯಕ್ರಮಗಳಿಗಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಕರ್ನಾಟಕಕ್ಕೆ ಆಗಮಿಸಿದ್ದರು. ಮಂಡ್ಯದಲ್ಲಿ ಆಯೋಜಿಸಿದ್ದ ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ ಉದ್ಘಾಟನೆಗೆಂದು ಮೈಸೂರಿಗೆ ಬಂದಿಳಿದಿದ್ದ …

Read More »

ಬಿಜೆಪಿ ಭಿನ್ನಮತ ಶಮನಕ್ಕೆ ಯತ್ನ, ಸಭೆ ನಡೆಸಿದ ಧರ್ಮೇಂದ್ರ ಪ್ರಧಾನ

ಬೆಳಗಾವಿ: ಜಿಲ್ಲೆಯಲ್ಲಿ ಉಂಟಾಗಿರುವ ಭಿನ್ನಮತ ಶಮನಗೊಳಿಸಲು ಬಿಜೆಪಿ ನಾಯಕರು ಮುಂದಾಗಿದ್ದಾರೆ. ನಗರಕ್ಕೆ ಆಗಮಿಸಿದ್ದ ಪಕ್ಷದ ರಾಜ್ಯ ಚುನಾವಣೆ ಉಸ್ತುವಾರಿಯೂ ಆಗಿರುವ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ ಭಾನುವಾರ ಬಾಗಲಕೋಟೆ, ಬೆಳಗಾವಿ, ಹಾಗೂ ವಿಜಯಪುರ ಜಿಲ್ಲೆಗಳ ಆಯ್ದ ಸಂಸದರು, ಶಾಸಕರೊಂದಿಗೆ ಪ್ರತ್ಯೇಕವಾಗಿ ಸಭೆ ನಡೆಸಿದರು.   ‘ಪಕ್ಷದ ಕೆಲವು ನಾಯಕರ ಮಧ್ಯೆ ಭಿನ್ನಾಭಿಪ್ರಾಯ ಉಂಟಾಗಿದೆ. ಹಾಗಾಗಿ ಪ್ರಧಾನ ಪ್ರತ್ಯೇಕವಾಗಿ ನಾಯಕರ ಸಭೆ ನಡೆಸಿ, ಭಿನ್ನಮತ ಶಮನಗೊಳಿಸಲು ಪ್ರಯತ್ನಿಸಿದರು. ಎಲ್ಲರೂ ಒಂದಾಗಿ ಹೋಗುವಂತೆ ಸೂಚಿಸಿದರು’ …

Read More »

ಮತ್ತೊಂದು ಚುನಾವಣಾ ಪೂರ್ವ ಸಮೀಕ್ಷೆಯ ಫಲಿತಾಂಶ ಪ್ರಕಟ, ಬಿಜೆಪಿಗೆ ಆಘಾತ

ಬೆಂಗಳೂರು, ಮಾರ್ಚ್ 11: ವಿಧಾನಸಭಾ ಚುನಾವಣೆಗೆ ಮಿಷನ್ 150 ಹೊತ್ತಿರುವ ಬಿಜೆಪಿ, ತನ್ನ ಟಾರ್ಗೆಟ್ ರೀಚ್‌ಗಾಗಿ ಸಮರಾಭ್ಯಾಸ ನಡೆಸುತ್ತಿದೆ. ಇತ್ತ ಕಾಂಗ್ರೆಸ್ ಹಾಗೂ ಜೆಡಿಎಸ್ ಹಲವು ಯಾತ್ರೆಗಳ ಮೂಲಕ ರಾಜ್ಯಾದ್ಯಂತ ಪ್ರಚಾರ ಕಾರ್ಯವನ್ನು ಆರಂಭಿಸಿದೆ. ಈ ಬಾರಿಯ 2023ರ ವಿಧಾನಸಭಾ ಚುನಾವಣೆ ರಾಜಕೀಯ ಪಕ್ಷಗಳಿಗೆ ಪ್ರತಿಷ್ಠೆಯ ಕಣವಾಗಿದ್ದು, ಇನ್ನೊಂದು ಚುನಾವಣಾ ಸಮೀಕ್ಷೆಯಲ್ಲಿ ಬಿಜೆಪಿಗೆ ಆಘಾತವಾಗಿದ್ದು, ಇನ್ನೂ ಕೆಲ ರಾಜಕೀಯ ಪಕ್ಷಗಳು ಚುನಾವಣಾ ತಯಾರಿಯನ್ನು ಚುರುಕುಗೊಳಿಸಿದೆ.   ಹೌದು, ಈಗಾಗಲೇ ಗೆಲ್ಲುವ …

Read More »

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ಹೈವೇ ಉದ್ಘಾಟಿಸಿದ ಪ್ರಧಾನಿ ಮೋದಿ

ಮಂಡ್ಯ: ಮಂಡ್ಯ ತಾಲೂಕಿನ ಹನಕೆರೆ ಗ್ರಾಮದ ಬಳಿ 118 ಕಿ.ಮೀ. ಉದ್ದದ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ಹೈವೇಯನ್ನು ಪ್ರಧಾನಿ ಮೋದಿ ಅಧಿಕೃತವಾಗಿ ಉದ್ಘಾಟನೆ ಮಾಡಿದ್ದಾರೆ. 8,479 ಕೋಟಿ ರೂ. ವೆಚ್ಚದಲ್ಲಿ ಎಕ್ಸ್‌ಪ್ರೆಸ್‌ ಹೈವೇ ನಿರ್ಮಾಣವಾಗಿದೆ. ಹೈವೇ ಉದ್ಘಾಟನೆ ವೇಳೆ ಪ್ರಧಾನಿ ಮೋದಿಗೆ ಕಲಾತಂಡಗಳಿಂದ ಸ್ವಾಗತ ಕೋರಲಾಯಿತು. ಕಾರ್ಯಕ್ರಮದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಪ್ರಧಾನಿ ಮೋದಿಯವನ್ನು ಸನ್ಮಾನಿಸಿದ್ದಾರೆ. ಇನ್ನು ಪ್ರಧಾನಮಂತ್ರಿಯವರು ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇಯನ್ನು ದೇಶಕ್ಕೆ ಸಮರ್ಪಿಸುವರು. ಈ ಯೋಜನೆಯು ರಾಷ್ಟ್ರೀಯ …

Read More »

ಐಐಟಿ ಸುಂದರ ಕನಸು ನನಸು

ಧಾರವಾಡ: ರಾಜ್ಯದ ಶಿಕ್ಷಣ ಕಾಶಿ, ವಿದ್ಯಾನಗರಿ ಮತ್ತು ಸಾಹಿತ್ಯ-ಸಾಂಸ್ಕೃತಿಕ ರಾಜಧಾನಿ ಧಾರ ವಾಡಕ್ಕೆ ಕಿರೀಟಪ್ರಾಯವಾಗಿ ಐಐಟಿ ಎಂಬ ಮಣಿ ಮುಕುಟ ಸೇರ್ಪಡೆಯಾಗಿದೆ. ಧಾರಾನಗರಿಯಲ್ಲಿ ಐಐಟಿ ಸ್ಥಾಪನೆಯ 1990ರ ದಶಕದ ಕೂಗು 2016ರಲ್ಲಿ ಸಾಕಾರಗೊಂಡಿತ್ತು. ಈಗ ಇಲ್ಲಿಯ ಬೇಲೂರು ಕೈಗಾರಿಕಾ ಪ್ರದೇಶಕ್ಕೆ ಹೊಂದಿಕೊಂಡಿರುವ 470 ಎಕರೆ ಜಮೀನಿನಲ್ಲಿ ನಿರ್ಮಾಣಗೊಂಡ ಭವ್ಯ ಮತ್ತು ದೈತ್ಯ ಕ್ಯಾಂಪಸ್‌ ಉದ್ಘಾಟನೆಗೆ ಸಜ್ಜಾಗಿದೆ. ಪ್ರಧಾನಿ ಮೋದಿ ರವಿ ವಾರ ದೇಶಕ್ಕೆ ಸಮರ್ಪಿಸಲಿದ್ದಾರೆ. ಈ ವರ್ಷದ ಏಪ್ರಿಲ್‌-ಮೇ ತಿಂಗಳಲ್ಲಿ ಐಐಟಿ ಸಂಪೂರ್ಣ …

Read More »

ಮತ್ತೂಬ್ಬ ಸಚಿವರು, ಬಿಜೆಪಿ ಶಾಸಕರಿಬ್ಬರು ಕಾಂಗ್ರೆಸ್‌ಗೆ ಪಕ್ಕಾ

ಬೆಂಗಳೂರು: ರೇಷ್ಮೆ ಮತ್ತು ಯುವ ಜನ ಸೇವೆ ಸಚಿವ ನಾರಾಯಣ ಗೌಡರು ಬಿಜೆಪಿ ತೊರೆದು ಕಾಂಗ್ರೆಸ್‌ ಸೇರ್ಪಡೆಗೊಳ್ಳುವುದು ಬಹುತೇಕ ಖಚಿತವಾದಂತೆಯೇ ರಾಜಧಾನಿಯ ಪ್ರಭಾವಿ ಸಚಿವರೊಬ್ಬರು, ಚಿತ್ರದುರ್ಗ ಹಾಗೂ ವಿಜಯ ನಗರ ಜಿಲ್ಲೆಯ ಶಾಸಕರಿಬ್ಬರು ಬಿಜೆಪಿ ತೊರೆ ಯಲು ಮುಂದಾಗಿರುವುದು ಆಡಳಿತ ಪಕ್ಷಕ್ಕೆ ಮತ್ತೂಂದು ಆಘಾತವಾಗಿದೆ.   ಎಐಸಿಸಿ ಪ್ರಧಾನ ಕಾರ್ಯ ದರ್ಶಿ ರಣದೀಪ್‌ ಸಿಂಗ್‌ ಸುಜೇìವಾಲ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರೊಂದಿಗೆ ಮಾತುಕತೆ …

Read More »

ಪ್ರಧಾನಿ ನರೇಂದ್ರ ಮೋದಿ ಇಂದು ಧಾರವಾಡದಲ್ಲಿ ಜಲ ಜೀವನ್ ಮಿಷನ್ ಮತ್ತು ಜಯದೇವ ಆಸ್ಪತ್ರೆಯನ್ನು ಉದ್ಘಾಟಿಸಲಿದ್ದಾರೆ

ಧಾರವಾಡ: ಪ್ರಧಾನಿ ನರೇಂದ್ರ ಮೋದಿ ಇಂದು ಧಾರವಾಡದಲ್ಲಿ ಜಲ ಜೀವನ್ ಮಿಷನ್ ಮತ್ತು ಜಯದೇವ ಆಸ್ಪತ್ರೆಯನ್ನು ಉದ್ಘಾಟಿಸಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. “ಪ್ರಧಾನಿ ಅವರು ರಾಜ್ಯಕ್ಕೆ ಭೇಟಿ ನೀಡಿದಾಗಲೆಲ್ಲ ಅವರು ಹೆಚ್ಚು ಅಗತ್ಯವಿರುವ ಮೂಲಭೂತ ಮೂಲಸೌಕರ್ಯ ಯೋಜನೆಗಳಿಗೆ ಅನುದಾನವನ್ನು ಬಿಡುಗಡೆ ಮಾಡುತ್ತಿದ್ದಾರೆ. ಇದರ ಫಲವಾಗಿ ಹಲವು ಯೋಜನೆಗಳು ಜನರಿಗೆ ಸಮರ್ಪಣೆಗೆ ಸಿದ್ಧವಾಗಿವೆ’ ಎಂದು ಬೊಮ್ಮಾಯಿ ಹೇಳಿದರು. “ಪ್ರಧಾನಿ ಮೋದಿ ಅವರು ರಾಜ್ಯ ಮತ್ತು ಅಂತರ-ರಾಜ್ಯ ಮೂಲಸೌಕರ್ಯ ಸೌಲಭ್ಯಗಳಿಗೆ ದೊಡ್ಡ …

Read More »

ಮೋದಿಯೇ ದಶಪಥ ಹೆದ್ದಾರಿಯ ರೂವಾರಿ: ಬೊಮ್ಮಾಯಿ

ಬೆಂಗಳೂರು: ಬೆಂಗಳೂರು- ಮೈಸೂರು ದಶಪಥ ಹೆದ್ದಾರಿ ಯೋಜನೆಯ ಸಂಪೂರ್ಣ ರೂವಾರಿ ಪ್ರಧಾನಿ ನರೇಂದ್ರ ಮೋದಿ. ಆದರೆ, ವಿರೋಧ ಪಕ್ಷಗಳು ಅನಗತ್ಯವಾಗಿ ಯೋಜನೆಯ ಹೆಸರಿನಲ್ಲಿ ಪ್ರಚಾರ ಪಡೆಯಲು ಯತ್ನಿಸುತ್ತಿವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.   ಸುದ್ದಿಗಾರರ ಜತೆ ಶನಿವಾರ ಮಾತನಾಡಿದ ಅವರು, ‘2008ರಲ್ಲಿ ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮದ ಮೂಲಕ ಈ ಮಾರ್ಗದಲ್ಲಿ ಹೆದ್ದಾರಿ ನಿರ್ಮಾಣ ಯೋಜನೆಯನ್ನು ಕೈಗೆತ್ತಿಕೊಳ್ಳಲಾಗಿತ್ತು. ಆದರೆ, ಯಾವ ಪ್ರಗತಿಯೂ ಆಗಿರಲಿಲ್ಲ. 2014ರಲ್ಲಿ ಕೇಂದ್ರ ಸರ್ಕಾರವು …

Read More »

ಬಿಜೆಪಿ ತೊರೆದು ಎಚ್‌.ಡಿ. ದೇವೇಗೌಡರ ಸಮ್ಮುಖದಲ್ಲಿ ಜೆಡಿಎಸ್ ಸೇರ್ಪಡೆಯಾದ ಎ. ಮಂಜು

ಬಿಡದಿ (ರಾಮನಗರ): ಮಾಜಿ ಸಚಿವ ಎ. ಮಂಜು ಶನಿವಾರ ತಮ್ಮ ಬೆಂಬಲಿಗರೊಂದಿಗೆ ಬಿಜೆಪಿ ತೊರೆದು ಎಚ್‌.ಡಿ. ದೇವೇಗೌಡರ ಸಮ್ಮುಖದಲ್ಲಿ ಜೆಡಿಎಸ್ ಸೇರ್ಪಡೆಯಾದರು. ಬಿಡದಿಯಲ್ಲಿರುವ ಎಚ್‌.ಡಿ. ಕುಮಾರಸ್ವಾಮಿ ಅವರ ತೋಟದ ಮನೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಸಿ.ಎಂ. ಇಬ್ರಾಹಿಂ ಅವರು ಮಂಜು ಅವರಿಗೆ ಪಕ್ಷದ ಶಾಲು ಹಾಕಿ ಬರಮಾಡಿಕೊಂಡರು. ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ. ಕುಮಾರಸ್ವಾಮಿ, ಯುವ ಘಟಕದ ಅಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಮತ್ತಿತರರು ಈ ಸಂದರ್ಭ …

Read More »