Breaking News

ರಾಜಕೀಯ

ದೇವಲತ್ತಿ ಲೋಕೋಳಿ- ಲಕ್ಕೇಬೈಲ್ ಮಾರ್ಗದಿಂದ ವಿದ್ಯುತ್ ಸರಬರಾಜು:ಡಾ. ಸೋನಾಲಿ

ಬೆಳಗಾವಿ: ಖಾನಾಪುರ ತಾಲ್ಲೂಕಿನ ದೇವಲತ್ತಿ ಗ್ರಾಮದ ಜನರ ಬಹುದಿನಗಳ ಬೇಡಿಕೆಯನ್ನು ಕೊನೆಗೂ ಈಡೇರಿಸಿ ಕೊಡುವಲ್ಲಿ ಬಿಜೆಪಿ ಗ್ರಾಮೀಣ ಉಪಾಧ್ಯಕ್ಷೆ ಡಾ. ಸೋನಾಲಿ ಸರ್ನೋಬತ್ ಯಶಸ್ವಿಯಾಗಿದ್ದಾರೆ. ಖಾನಾಪುರ ತಾಲ್ಲೂಕಿನ ದೇವಲತ್ತಿ ಗ್ರಾಮಕ್ಕೆ ವಿದ್ಯುತ್ ಸರಬರಾಜು ಆಗುತ್ತಿದ್ದರೂ ಈ ಮಾರ್ಗ ಪದೇ ಪದೇ ದುರಸ್ತಿಗೆ ಈಡಾಗುತ್ತಿರುವುದರಿಂದ ದೇವಲತ್ತಿ ಗ್ರಾಮದವರು ತೀವ್ರ ಸಮಸ್ಯೆ ಅನುಭವಿಸುವಂತಾಗಿತ್ತು. ಈ ಭಾಗದ ವಿದ್ಯಾರ್ಥಿಗಳು ವ್ಯಾಸಂಗಕ್ಕೆ ಪಡಿಪಾಟಲು ಪಡುವಂತಾಗಿತ್ತು. ಹಾಗಾಗಿ ಈ ಜನರ ಸಮಸ್ಯೆ ಬಗ್ಗೆ ತಿಳಿದು ಜನರ ನೋವಿಗೆ ಸ್ಪಂದಿಸಿದ …

Read More »

ಸಂಜಯ್ ಗೂಡಾವತ್ ಗ್ರೂಪ್ ವತಿಯಿಂದ ಉಚಿತ ಅಡಿಗೆ ಎಣ್ಣೆ ಪೂರೈಕೆ

ಸಂಜಯ ಗೂಡಾವಥ ಗ್ರೂಪ್ 2013 ರಿಂದ ಪ್ರಾರಂಭವಾಗಿದ್ದು ತನ್ನ ಗ್ರಾಹಕ ಕೇಂದ್ರ ವ್ಯಾಪಾರ ನೀತಿಗಳ ಮೂಲಕ ಸಂಸ್ಥೆ ಲಕ್ಷಾಂತರ ಜನರಿಗೆ ಪ್ರೀಯವಾಗಿದೆ. ಈ ಸಂಸ್ಥೆಯಿಂದ ಕರ್ನಾಟಕ ದಲ್ಲಿ ಕಿರಾಣಿ ಅಂಗಡಿಗಳ ಸಮಕಾಲೀನ ವ್ಯಾಪಾರಿಗಳು ಹಾಗೂ ಲೇಔಟ್ ಮೂಲಕ ತನ್ನ ಉತ್ಪನ್ನಗಳ ಲಾಭ ಆಗುವಂತೆ ಮಾಡುವ ಜಿಸಿಎಲ್ ತನ್ನ ಗ್ರಾಹಕರ ಮಾರುಕಟ್ಟೆ ವ್ಯಾಪ್ತಿಯನ್ನು ಹೆಚ್ಚಿಸಲು ಉದ್ದೇಶಿಸಿದೆ, ಜಿ ಸಿ ಎಲ್ ನಿರಂತರ ಉತ್ಪನ್ನ ನಾಮಿನೇತೇ ಸ್ಪರ್ಧಾತಕ ಬೆಲೆ ಮತ್ತು ಗುಣಮಟ್ಟವನ್ನು ಸೃಷ್ಟಿಸುವ …

Read More »

ಕುಮಟಳ್ಳಿಗೆB,J,P. ಟಿಕೆಟ್ ಸಿಗದಿದ್ದರೆ ನಾನು ಗೋಕಾಕ ನಲ್ಲಿ ಸ್ಪರ್ಧಿಸಲ್ಲ: ರಮೇಶ್ ಜಾರಕಿಹೊಳಿ

ವಿಜಯಪುರ: ಬೆಳಗಾವಿ ಜಿಲ್ಲೆಯ ಅಥಣಿ ಕ್ಷೇತ್ರದಿಂದ ಸ್ಪರ್ಧಿಸಲು ಮಹೇಶ ಕುಮಟಳ್ಳಿ ಅವರಿಗೆ ಬಿಜೆಪಿ ಟಿಕೆಟ್ ಸಿಗದಿದ್ದರೆ ನಾನು ಗೋಕಾಕ ಕ್ಷೇತ್ರದಿಂದ ಸ್ಪರ್ಧೆ ಮಾಡುವುದಿಲ್ಲ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹೊಸ ಬಾಂಬ್ ಸಿಡಿಸಿದ್ದಾರೆ.   ವಿಜಯಪುರ ಜಿಲ್ಲೆಯಲ್ಲಿ ನಡೆಯುತ್ತಿರುವ ಬಿಜೆಪಿ ವಿಜಯ ಸಂಕಲ್ಪ ಯಾತ್ರೆಯಲ್ಲಿ ಪಾಲ್ಗೊಳ್ಳಲು ಶುಕ್ರವಾರ ವಿಜಯಪುರ ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಅಥಣಿ ಕ್ಷೇತ್ರದಿಂದ ಮಹೇಶ ಕುಮಟಳ್ಳಿ ಟಿಕೆಟ್ ನೀಡಲೇಬೇಕು ಎಂದು ಪರೋಕ್ಷವಾಗಿ ಕೇಸರಿ ವರಿಷ್ಠರಿಗೆ ಸಂದೇಶ …

Read More »

ಬಿಜೆಪಿ ಚುನಾವಣಾ ಪ್ರಚಾರ ಸಮಿತಿ ರಚನೆ: ಬೊಮ್ಮಾಯಿ ಅಧ್ಯಕ್ಷ, ಬಿಎಸ್‌ವೈ ಸದಸ್ಯ

ಬೆಂಗಳೂರು: ಬಿಜೆಪಿ ವಿಧಾನಸಭಾ ಚುನಾವಣಾ ಪ್ರಚಾರ ಸಮಿತಿಯನ್ನು ರಚಿಸಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಅಧ್ಯಕ್ಷರನ್ನಾಗಿ ಮತ್ತು ಚುನಾವಣಾ ನಿರ್ವಹಣಾ ಸಮಿತಿಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆಯವರನ್ನು ಸಂಚಾಲಕರನ್ನಾಗಿ ನೇಮಿಸಲಾಗಿದೆ.   ಚುನಾವಣಾ ಪ್ರಚಾರ ಸಮಿತಿಯ ಸದಸ್ಯರು: ಬಿ.ಎಸ್‌.ಯಡಿಯೂರಪ್ಪ, ನಳಿನ್‌ಕುಮಾರ್ ಕಟೀಲ್, ಡಿ.ವಿ.ಸದಾನಂದಗೌಡ, ಜಗದೀಶಶೆಟ್ಟರ್‌, ಪ್ರಲ್ಹಾದ ಜೋಶಿ, ಶೋಭಾ ಕರಂದ್ಲಾಜೆ, ಎ.ನಾರಾಯಣಸ್ವಾಮಿ, ಕೆ.ಎಸ್‌.ಈಶ್ವರಪ್ಪ, ಗೋವಿಂದ ಕಾರಜೋಳ,ಬಿ.ಶ್ರೀರಾಮುಲು, ಆರ್‌.ಅಶೋಕ, ಶಶಿಕಲಾ ಜೊಲ್ಲೆ, ಸಿ.ಸಿ.ಪಾಟೀಲ, ಎಸ್.ಟಿ.ಸೋಮಶೇಖರ್, ಡಾ.ಕೆ.ಸುಧಾಕರ್, ಪ್ರಭು ಚವ್ಹಾಣ, ಡಾ.ಸಿ.ಎನ್‌.ಅಶ್ವತ್ಥನಾರಾಯಣ, ಸಿ.ಟಿ.ರವಿ, ವಿ.ಶ್ರೀನಿವಾಸಪ್ರಸಾದ್, …

Read More »

ಮಾಡಾಳು ಬಂಧನಕ್ಕೆ ರಚಿಸಿದ್ದ 7 ತಂಡ ಸಿಎಂ ಮನೆಯಲ್ಲಿ ಠಿಕಾಣಿ ಹೂಡಿದ್ದವೇ: ಕಿಮ್ಮನೆ

ಶಿವಮೊಗ್ಗ: ಶಾಸಕ ಮಾಡಾಳು ವಿರೂಪಾಕ್ಷಪ್ಪ ಬಂಧನಕ್ಕೆ ನಿಯೋಜಿಸಿದ್ದ ಲೋಕಾಯುಕ್ತ ಪೊಲೀಸರ ಏಳು ತಂಡಗಳು ಸಿಎಂ ಬಸವರಾಜ ಬೊಮ್ಮಾಯಿ, ಗೃಹ ಸಚಿವ ಆರಗ ಜ್ಞಾನೇಂದ್ರ ಮನೆಯಲ್ಲಿ ಠಿಕಾಣಿ ಹೂಡಿದ್ದವೇ ಎಂದು ಮಾಜಿ ಸಚಿವ ಕಿಮ್ಮನೆ ರತ್ನಾಕರ ಪ್ರಶ್ನಿಸಿದರು.   ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ವಿತರಣಾ ಕಾರ್ಯಕ್ರಮದಲ್ಲಿ ಶುಕ್ರವಾರ ಇಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಜಾಮೀನು ಸಿಕ್ಕ ಅರ್ಧ ಗಂಟೆಯಲ್ಲಿ ಮಾಡಾಳು ವಿರೂಪಾಕ್ಷಪ್ಪ ಮೆರವಣಿಗೆಯಲ್ಲಿ ಬರುತ್ತಾರೆ. ಪ್ರಕರಣದಲ್ಲಿ ಎ1 ಆರೋಪಿ ಅವರು. ಆದರೂ ಜಾಮೀನು …

Read More »

ಕಿಡ್ನಿ ಆರೋಗ್ಯಕ್ಕೆ ಕಾಳಜಿ ವಹಿಸಿ: ಡಾ.ನಿತಿನ್‌ ಗಂಗಾನೆ

ಬೆಳಗಾವಿ: ‘ಇಡೀ ದೇಹದ ಅಂಗಾಗಂಗಳಲ್ಲಿ ಕಿಡ್ನಿ ಅತ್ಯಂತ ಹೆಚ್ಚು ಕೆಲಸಗಳನ್ನು ಮಾಡುತ್ತದೆ. ಕಿಡ್ನಿ ಆರೋಗ್ಯವಾಗಿ ಇಟ್ಟುಕೊಳ್ಳಬೇಕು. ಇಲ್ಲದಿದ್ದರೆ ಜೀವನಪೂರ್ತಿ ಅನಾರೋಗ್ಯ ಕಾಡುತ್ತದೆ’ ಎಂದು ಕಾಹೆರ್‌ನ ಕುಲಪತಿ ಡಾ.ನಿತಿನ್‌ ಗಂಗಾನೆ ಹೇಳಿದರು.   ಕೆಎಲ್‌ಇ ಸಂಸ್ಥೆಯ ಡಾ.ಪ್ರಭಾಕರ ಕೋರೆ ಆಸ್ಪತ್ರೆ ಹಾಗೂ ವೈದ್ಯಕೀಯ ಸಂಶೋಧನಾ ಕೇಂದ್ರದ ನೆಪ್ರೊಲಾಜಿ ವಿಭಾಗವು ಗುರುವಾರ ಏರ್ಪಡಿಸಿದ್ದ ವಿಶ್ವ ಮೂತ್ರಪಿಂಡ ದಿನಾಚರಣೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ‘ಕಿಡ್ನಿ ಆರೋಗ್ಯದ ಕುರಿತು ಸಾಮಾನ್ಯರಿಗೂ ತಿಳಿಯುವ ರೀತಿಯಲ್ಲಿ ಜಾಗೃತಿ ಮೂಡಿಸಬೇಕು. …

Read More »

ಮಿಶ್ರ ಬೇಸಾಯದತ್ತ ಒಲವು ಬೆಳೆಸಿಕೊಂಡ ನೇಸರಗಿ ರೈತ ಈಶಪ್ರಭು ಬಾಬಾಗೌಡ ಪಾಟೀಲ, ‘ಬೆವರು ಹರಿಸಿದರೆ, ಒಕ್ಕಲುತನ ಕೈಹಿಡಿಯುತ್ತದೆ’ ಎಂದ

ನೇಸರಗಿ: ಮಿಶ್ರ ಬೇಸಾಯದತ್ತ ಒಲವು ಬೆಳೆಸಿಕೊಂಡ ನೇಸರಗಿ ಹೋಬಳಿ ವ್ಯಾಪ್ತಿಯ ಚಿಕ್ಕಬಾಗೇವಾಡಿ ಗ್ರಾಮದ ರೈತ ಈಶಪ್ರಭು ಬಾಬಾಗೌಡ ಪಾಟೀಲ, ತಮ್ಮ ಜಮೀನಿನಲ್ಲಿ ವಿವಿಧ ಬೆಳೆ ಬೆಳೆದು ಉತ್ತಮ ಆದಾಯ ಗಳಿಸುತ್ತಿದ್ದಾರೆ. ‘ಬೆವರು ಹರಿಸಿದರೆ, ಒಕ್ಕಲುತನ ಕೈಹಿಡಿಯುತ್ತದೆ’ ಎಂದು ಸಾರುತ್ತಿದ್ದಾರೆ.   14 ಎಕರೆ ಜಮೀನಿನ ಪೈಕಿ 3 ಎಕರೆಯಲ್ಲಿ ಗೋವಿನಜೋಳ, ಕಡಲೆ, 8 ಎಕರೆ ತೋಟದಲ್ಲಿ ಅಲ್ಫಾನ್ಸೋ ಮಾವು ಬೆಳೆದಿದ್ದಾರೆ. 3 ಎಕರೆಯಲ್ಲಿ ಕಾಜು(ಗೇರು), ಪೇರಲ, ನೆಲ್ಲಿಕಾಯಿ, ಅಂಜೂರ, ದಾಳಿಂಬೆ, …

Read More »

ಹಿಂಡಲಗಾ: ಸ್ಮಾರ್ಟ್‌ಕ್ಲಾಸ್ ಉದ್ಘಾಟನೆ

ಬೆಳಗಾವಿ: ‘ಜಗತ್ತು ಅಭಿವೃದ್ಧಿ ಪಥದಲ್ಲಿ ಸಾಗುತ್ತಿದ್ದಂತೆ ಅದಕ್ಕೆ ಪೂರಕವಾಗಿ ನಾವೂ ನಮ್ಮನ್ನು ಹೊಂದಿಸಿಕೊಳ್ಳಬೇಕು. ಈ ನಿಟ್ಟಿನಲ್ಲಿ ಗ್ರಾಮೀಣ ವಿದ್ಯಾರ್ಥಿಗಳಿಗೂ ಸ್ಮಾರ್ಟ್ ಕ್ಲಾಸ್‌ ವ್ಯವಸ್ಥೆ ಮೂಲಕ ಶಿಕ್ಷಣ ಒದಗಿಸಲು ಎಲ್ಲ ಸೌಲಭ್ಯಗಳನ್ನು ನೀಡಲಾಗುತ್ತಿದೆ’ ಎಂದು ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಹೇಳಿದರು.   ಹಿಂಡಲಗಾ ಗ್ರಾಮದ ಸರ್ಕಾರಿ ಹಿರಿಯ ಮರಾಠಿ ಪ್ರಾಥಮಿಕ ಶಾಲೆಗೆ ಕರ್ನಾಟಕ ಸ್ಟೇಟ್ ಮಿನರಲ್ಸ್ ಕಾರ್ಪೊರೇಷನ್ ಲಿಮಿಟೆಡ್ ವತಿಯಿಂದ ಹಣ ಮಂಜೂರು ಮಾಡಿಸಿದ ಅನುದಾನದಲ್ಲಿ ನಿರ್ಮಿಸಲಾದ ನೂತನ ಸ್ಮಾರ್ಟ್ ಕ್ಲಾಸ್ …

Read More »

ಬೆಳಗಾವಿ: ಎಟಿಎಂ ಕಾರ್ಡ್ ಬದಲಿಸಿ ಹಣ ಲೂಟಿ- ಇಬ್ಬರ ಬಂಧನ

ಬೆಳಗಾವಿ: ಬೇರೆಯವರ ಎಟಿಎಂ ಕಾರ್ಡ್ ಬದಲಾಯಿಸಿ, ಹಣ ತೆಗೆದುಕೊಂಡ ಮಹಾರಾಷ್ಟ್ರದ ಇಬ್ಬರು ಆರೋಪಿಗಳನ್ನು ಎಪಿಎಂಸಿ ಠಾಣೆ ಪೊಲೀಸರು ಗುರುವಾರ ಬಂಧಿಸಿದ್ದಾರೆ. ಕೊಲ್ಹಾಪುರ ಜಿಲ್ಲೆಯ ಗಡಹಿಂಗ್ಲಜ್‌ ತಾಲ್ಲೂಕಿನ ನೇಸರಿಯ ಅಮೋಲ್ ಶೆಂಡೆ, ಸೊಲ್ಲಾಪುರ ಜಿಲ್ಲೆಯ ಕೇದಾರನಾಥ ನಗರದ ಶ್ರವಣ ಮಿನಜಗಿ ಬಂಧಿತರು.   ಇವರಿಬ್ಬರೂ ಬೆಳಗಾವಿಯ ನಿವಾಸಿ ಸೋಮಲಿಂಗ ಅಮ್ಮಣಗಿ ಅವರ ಎಟಿಎಂ ಕಾರ್ಡ್‌ ಬದಲಿಸಿ, ₹4.03 ಲಕ್ಷ ಹಣ ತೆಗೆದುಕೊಂಡಿದ್ದರು. ಈ ಬಗ್ಗೆ ‌2022ರ ನ.29ರಂದು ಎಪಿಎಂಸಿ ಠಾಣೆಯಲ್ಲಿ ಪ್ರಕರಣ …

Read More »

ರೈತ ಯುವಕರ ಮದುವೆ ಆದ್ರೆ 2 ಲಕ್ಷ ರೂ. ಪ್ರೋತ್ಸಾಹಧನ: ಎಚ್‌.ಡಿ.ಕುಮಾರಸ್ವಾಮಿ

ಹಾಸನ: ಜೆಡಿಎಸ್‌ ಅಧಿಕಾರಕ್ಕೆ ಬಂದರೆ ರೈತರ ಮಕ್ಕಳನ್ನು ವಿವಾಹವಾಗುವ ಯುವತಿಯರಿಗೆ 2 ಲಕ್ಷ ರೂ. ಪ್ರೋತ್ಸಾಹ ಧನ ನೀಡುವುದಾಗಿ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಘೋಷಿಸಿದರು. ಹಾಸನ ಜಿಲ್ಲೆಗೆ ಪಂಚರತ್ನ ಯಾತ್ರೆ ಪ್ರವೇಶ ಮಾಡಿದ ಅರಸೀಕೆರೆ ತಾಲೂಕು ಕರಗುಂದ ಗ್ರಾಮದ ದೇವಾಲಯದಲ್ಲಿ ಪೂಜೆ ಸಲ್ಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೈತರ ಮಕ್ಕಳಿಗೆ ಹೆಣ್ಣು ಕೊಡುತ್ತಿಲ್ಲ. ಕಂಕಣಭಾಗ್ಯ ಕೂಡಿ ಬರಲಿ ಎಂದು ಅವಿವಾಹಿತ ರೈತ ಸಮುದಾಯದ ಯುವಕರು ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ …

Read More »