Breaking News

ರಾಜಕೀಯ

ಬೆಳಗಾವಿ: ಬಾನಂಗಳದಲ್ಲಿ ಗಾಳಿಪಟ ಚಿತ್ತಾರ

ಬೆಳಗಾವಿ: ಇಲ್ಲಿನ ಬಿ.ಎಸ್‌. ಯಡಿಯೂರಪ್ಪ ಮಾರ್ಗದ ಮಾಲಿನಿ ಸಿಟಿಯಲ್ಲಿ ಶನಿವಾರ ಆರಂಭಗೊಂಡ ಅಂತರರಾಷ್ಟ್ರೀಯ ಗಾಳಿಪಟ ಉತ್ಸವದಲ್ಲಿ ಹಾರಾಡಿದ ಬಗೆಬಗೆಯ ವಿನ್ಯಾಸಗಳ ಗಾಳಿಪಟಗಳು ಬಾನಂಗಳದಲ್ಲಿ ಚಿತ್ತಾರ ಮೂಡಿಸಿದವು. ಕಾಂತಾರ, ಇಂಡಿಯನ್‌ ಲಿಫ್ಟರ್‌, ಕವ್‌, ಮಾಂತಾ ರೇ, ರಿಂಗ್‌ ಮಾದರಿಯ ಪತಂಗ ಕಣ್ಮನಸೆಳೆದವು. ಗಾಳಿಪಟಗಳ ಹಾರಾಟ ನೋಡಿ ಬಾನಲ್ಲಿ ಜನರ ಮನ ತೇಲಿತು. ಪ್ರತಿವರ್ಷ ಶಾಸಕ ಅಭಯ ಪಾಟೀಲ ನೇತೃತ್ವದಲ್ಲಿ ಅಂತರರಾಷ್ಟ್ರೀಯ ಗಾಳಿಪಟ ಉತ್ಸವ ಆಯೋಜಿಸಲಾಗುತ್ತಿತ್ತು. ಕೊರೊನಾ ಆತಂಕದಿಂದಾಗಿ ಕಳೆದ ಎರಡು ವರ್ಷ ರದ್ದಾಗಿತ್ತು. …

Read More »

ಬೆಳಗಾವಿ: ”ಸಾಹಿತ್ಯದಿಂದ ಸೈನಿಕರ ಸ್ಥೈರ್ಯ ಹೆಚ್ಚಳ’: ದಯಾಲನ್

ಬೆಳಗಾವಿ: ‘ದೇಶದ ಗಡಿ ಕಾಯುವ ಸೈನಿಕರಿಗೆ ಸಾಹಿತಿ ನೀಲಗಂಗಾ ಚರಂತಿಮಠ ಅವರಿ ತಮ್ಮ ಕೃತಿಗಳಲ್ಲಿ ದೊಡ್ಡ ಗೌರವ ನೀಡಿದ್ದಾರೆ. ಇಂಥ ಪುಸ್ತಕಗಳಿಂದ ಸೈನಿಕರ ನೈತಿಕ ಸ್ಥೈರ್ಯ ಹೆಚ್ಚುತ್ತದೆ’ ಎಂದು ಕಮಾಂಡೆಂಟ್‌ ಪಿ.ಸಿ. ವಿಂಗ್‌ನ ಬ್ರಿಗೇಡಿಯರ್ ದಯಾಲನ್ ಹೇಳಿದರು.   ಸಾಹಿತಿ ನೀಲಗಂಗಾ ಚರಂತಿಮಠ ಅವರ ‘ಧಾರಿಣಿ’, ‘ಜನನಿ ಜನ್ಮಭೂಮಿ’, ‘ಒಂದೇ ಮಾತರಂ’ ಮತ್ತು ‘ಪ್ರಣಾಮ್’ ಎಂಬ ನಾಲ್ಕು ಪುಸ್ತಕಗಳನ್ನು ಗುರುವಾರ ಲೋಕಾರ್ಪಣೆಗೊಳಿಸಿ ಅವರು ಮಾತನಾಡಿದರು. ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಎಸ್.ಎಂ. …

Read More »

ಆಸ್ಪತ್ರೆ ನಿರ್ಮಾಣಕ್ಕೆ ₹27 ಕೋಟಿ ಬಿಡುಗಡೆ:ಶಾಸಕ ಅನಿಲ ಬೆನಕೆ

ಬೆಳಗಾವಿ: ನಗರದಲ್ಲಿ ಕ್ರಿಟಿಕಲ್ ಕೇರ್ ಆಸ್ಪತ್ರೆ ನಿರ್ಮಾಣಕ್ಕೆ ಪ್ರಧಾನ ಮಂತ್ರಿ ಆಯುಷ್ಮಾನ್ ಭಾರತ್ ಹೆಲ್ತ್ ಇನ್ಫ್ರಾಸ್ಟ್ರಕ್ಚರ್ ಮಿಷನ್ ಅಡಿಯಲ್ಲಿ ₹27 ಕೋಟಿ ಅನುದಾನ ನೀಡಲಾಗಿದೆ. ಶಾಸಕ ಅನಿಲ ಬೆನಕೆ ಪ್ರಯತ್ನ ಮಾಡಿ ಈ ಅನುದಾನ ಮಂಜೂರು ಮಾಡಿಸಿದ್ದಾರೆ ಎಂದು ಬಿಜೆಪಿ ಪ್ರಕಟಣೆಯಲ್ಲಿ ತಿಳಿಸಲಾಗಿದೆ.   ಜಿಲ್ಲಾಸ್ಪತ್ರೆ ಅಭಿವೃದ್ಧಿ, ಮಲ್ಟಿ ಸೂಪರ್ ಸ್ಪೆಷಾಲಟಿ ಆಸ್ಪತ್ರೆ ನಿರ್ಮಾಣ ಸೇರಿದಂತೆ ಆರೋಗ್ಯ ಕ್ಷೇತ್ರದಲ್ಲಿ ವಿಶೇಷ ಒತ್ತು ನೀಡಿರುವ ಶಾಸಕ ಅನಿಲ ಬೆನಕೆ, ಬೆಳಗಾವಿಯಲ್ಲಿ ನಡೆದ ಅಧಿವೇಶನ …

Read More »

ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧೆಗೆ ಪಿಎಸ್‌ಐ ಹಗರಣದ ಆರೋಪಿ ಒಲವು

ಕಲಬುರಗಿ: ಪಿಎಸ್‌ಐ ಅಕ್ರಮ ನೇಮಕಾತಿ ಹಗರಣದ ಪ್ರಮುಖ ಆರೋಪಿ, ಆರ್.ಡಿ.ಪಾಟೀಲ ಶುಕ್ರವಾರ ಮಧ್ಯರಾತ್ರಿ ಅಜ್ಞಾತ ಸ್ಥಳದಿಂದ ವಿಡಿಯೊ ಮಾಡಿ, ಜಾಲತಾಣದಲ್ಲಿ ಹರಿಬಿಟ್ಟಿದ್ದಾನೆ. 7 ನಿಮಿಷ 14 ಸೆಕೆಂಡ್‌ಗಳ ವಿಡಿಯೊದಲ್ಲಿ ಪಾಟೀಲ, ‘8-9 ತಿಂಗಳು ಕೆಲ ರಾಜಕೀಯ ಮುಖಂಡರು ಕುತಂತ್ರದಿಂದ ನನ್ನನ್ನು ಹಾಗೂ ನನ್ನ ಸಹೋದರ ಮಹಾಂತೇಶ ಪಾಟೀಲ ಅವರನ್ನು ಪಿಎಸ್‌ಐ ಪ್ರಕರಣದಲ್ಲಿ ಉದ್ದೇಶ ಪೂರ್ವಕವಾಗಿ ಸಿಲುಕಿಸಿದ್ದಾರೆ. ಸಮಾಜ ಸೇವೆ, ಚುನಾವಣಾ ಸ್ಪರ್ಧೆಗೆ ಬರಬಹುದು ಎಂಬ ಭಯದಿಂದ ನಮ್ಮನ್ನು ಈ ಪ್ರಕರಣದಲ್ಲಿ ಸಿಲುಕಿಸಿದ್ದಾರೆ’ …

Read More »

ವಿವೇಕಾನಂದರು ನಮಗೆಲ್ಲ ಪ್ರೇರಣೆ; ಮಲ್ಲಿಕಾರ್ಜುನ ಬಾಳಿಕಾಯಿ

ಬೈಲಹೊಂಗಲ: ಭಾರತ ದೇಶದ ಸನಾತನ ಹಿಂದೂ ಸಂಸ್ಕೃತಿಯನ್ನು ದೇಶ ವಿದೇಶಗಳಲ್ಲಿ ಎತ್ತಿ ಹಿಡಿದ ವೀರ ಸನ್ಯಾಸಿ ಸ್ವಾಮಿ ವಿವೇಕಾನಂದರು ನಮಗೆಲ್ಲರಿಗೂ ಪ್ರೇರಣೆ. ಮಹಾನ್‌ ದೇಶ ಭಕ್ತರನ್ನು, ಸಾಧು-ಸಂತರನ್ನು ಸ್ಮರಿಸುವುದು ಕೇವಲ ಬಿಜೆಪಿ ಸಂಸ್ಕೃತಿಯಲ್ಲಿ ಮಾತ್ರ ಎಂದು ರಾಜ್ಯ ಬಿ.ಜೆ.ಪಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಬಾಳಿಕಾಯಿ ಹೇಳಿದರು.   ತಾಲೂಕಿನ ಸಂಪಗಾಂವ ಗ್ರಾಮದ ಬೆ„ಲಬಸವೇಶ್ವರ ದೇವಸಾನದಲ್ಲಿ ಬಿಜೆಪಿ ಯುವ ಮೋರ್ಚಾ ಕಿತ್ತೂರ ಮಂಡಳ ವತಿಯಿಂದ ಸ್ವಾಮಿ ವಿವೇಕಾನಂದ ಜಯಂತಿ ಪ್ರಯುಕ್ತ …

Read More »

ಮೋದಿಗೆ ಸಮನಾದ ನಾಯಕ ಕಾಂಗ್ರೆಸ್​ನಲ್ಲಿ ಯಾರಿದ್ದಾರೆ ಹೇಳಿ?B.S.Y.

ವಿಜಯಪುರ: ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಮನಾದ ನಾಯಕ ಕಾಂಗ್ರೆಸ್​ನಲ್ಲಿ ಯಾರಿದ್ದಾರೆ ಹೇಳಿ ಎಂದು ಮಾಜಿ ಸಿಎಂ ಬಿ.ಎಸ್​.ಯಡಿಯೂರಪ್ಪ ಪ್ರಶ್ನಿಸಿದ್ದಾರೆ. ಸಿಂದಗಿಯಲ್ಲಿ ಶನಿವಾರ ನಡೆದ ವಿಜಯಸಂಕಲ್ಪ ಯಾತ್ರೆಯಲ್ಲಿ ಮಾತನಾಡಿದ ಬಿಎಸ್​ವೈ, ಆ ಇಬ್ಬರು ನಾಯಕರು ಮತ್ತೊಮ್ಮೆ ಮೋದಿ ಬಗ್ಗೆ ಸುಳ್ಳು ಹೇಳುತ್ತಿದ್ದಾರೆ. ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್​ ಆ ಕೆಲಸ ಮಾಡ್ತಿದ್ದಾರೆ. ಮುಂದಿನ ಚುನಾವಣೆ ವೇಳೆಗೆ ಕಾಂಗ್ರೆಸ್ ಇರೋದಿಲ್ಲ. ಎಲ್ಲಿದೆಯಪ್ಪಾ ಕಾಂಗ್ರೆಸ್​? ನಿಮ್ಮ ನಾಯಕ ಯಾರು? ಎಂದು ಕಾಂಗ್ರೆಸ್ ಪಡೆಯನ್ನು ಅಣಕಿಸಿದರು. ವಿಜಯಸಂಕಲ್ಪ ಅಭಿಯಾನ …

Read More »

ಕಾಂಗ್ರೆಸ್ಸಿನದು ಫ್ಯಾಮಿಲಿ ಪಾಲಿಟಿಕ್ಸ್ ಜತೆಗೆ ಜಾತಿ ರಾಜಕಾರಣ; ನಡ್ಡಾ ಟೀಕೆ

ವಿಜಯಪುರ: ಮುಂಬರುವ ವಿಧಾನ ಸಭೆ ಚುನಾವಣೆ ಹಿನ್ನೆಲೆ ಹಮ್ಮಿಕೊಂಡಿರುವ ವಿಜಯಸಂಕಲ್ಪ ಅಭಿಯಾನಕ್ಕೆ ಸಿಂದಗಿಯಲ್ಲಿ ಶನಿವಾರ ಆಯೋಜಿಸಿದ್ದ ಬೃಹತ್ ಸಮಾವೇಶದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ‌ ನಡ್ಡಾ ಜ್ಯೋತಿ ಬೆಳಗಿಸುವ ಮೂಲಕ ಅದ್ದೂರಿ ಚಾಲನೆ ನೀಡಿದರು.   ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ನಡ್ಡಾ, ಕರ್ನಾಟಕದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ತರುವ ಸಂಕಲ್ಪ‌ ಎಲ್ಲರದ್ದಾಗಿದೆ. ಸಬ್ ಕಾ ಸಾಥ್, ಸಬ್ ಕಾ ವಿಕಾಸ್, ಸಬ್ ಕಾ ವಿಶ್ವಾಸ, ಎಂಬ ಧ್ಯೇಯದೊಂದಿಗೆ ಬಿಜೆಪಿ ಕಾರ್ಯನಿರ್ವಹಿಸುತ್ತಿದೆ. ಕರ್ನಾಟಕದ …

Read More »

ಅನ್ನಭಾಗ್ಯಕ್ಕೆ ಮತ್ತೆ ವಕ್ಕರಿಸಿದ ಸರ್ವರ್ ಭೂತ: ಪಡಿತರ ಪಡೆಯಲು ಕಾರ್ಡ್‌ದಾರರ ಪರದಾಟ

ಬೆಂಗಳೂರು: ಅನ್ನಭಾಗ್ಯ ಯೋಜನೆಗೆ ಮತ್ತೆ ಸರ್ವರ್ ಭೂತ ವಕ್ಕರಿಸಿದೆ. ನಾಲ್ಕೈದು ದಿನಗಳಿಂದ ಸರ್ವರ್ ಸಮಸ್ಯೆಯಿಂದ ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರ ಪಡೆಯಲು ರಾಜ್ಯಾದ್ಯಂತ ಕಾರ್ಡ್‌ದಾರರು ಪರದಾಡುವಂತಾಗಿದೆ. ಯೋಜನೆಗೆ ‘ಸರ್ವರ್ ಡೌನ್’ಸಮಸ್ಯೆ ನಿರಂತರವಾಗಿ ಕಾಡುತ್ತಿದ್ದರೂ ಶಾಶ್ವತ ಪರಿಹಾರ ಕಂಡುಕೊಳ್ಳಲು ಆಹಾರ ಇಲಾಖೆ ಹೆಣಗಾಡುವಂತಾಗಿದೆ. ಇದರಿಂದಾಗಿ ಪ್ರತಿ ನಿತ್ಯ ನ್ಯಾಯಬೆಲೆ ಅಂಗಡಿಗಳಿಗೆ ಕಾರ್ಡ್‌ದಾರರು ಹೋಗಿ ಬರುವಂತಾಗಿದೆ. 2022ರ ಸೆ.15ರಿಂದ 10 ದಿನವರೆಗೆ ಸರ್ವರ್ ಡೌನ್ ಗುಮ್ಮ ಕಾಡಿತ್ತು. ಈಗ ಮತ್ತೆ ಜನಪ್ರಿಯ ಯೋಜನೆಗೆ ನೂರೆಂಟು ತೊಂದರೆಯಾಗುತ್ತಿದೆ. …

Read More »

2023ರಲ್ಲಿ ಜೆಡಿಎಸ್‌ ಪಕ್ಷ ಬಹುಮತದೊಂದಿಗೆ ಸರ್ಕಾರ ರಚಿಸಲಿದೆ..!

ಹೊಳೆನರಸೀಪುರ : ಕರ್ನಾಟಕ ರಾಜ್ಯದಾದ್ಯಂತ ಹೆಚ್.ಡಿ.ಕುಮಾರಸ್ವಾಮಿ ನೇತ್ರತ್ವದಲ್ಲಿ ನಡೆಯುತ್ತಿರುವ ಪಂಚರತ್ನ ಯಾತ್ರೆಗೆ ಸಾರ್ವಜನಿಕರಿಂದ ಅಭೂತಪೂರ್ವ ಬೆಂಬಲ ವ್ಯಕವಾಗಿದ್ದು 2023 ರ ವಿಧಾನಸಭಾ ಚುನಾವಣೆಯಲ್ಲಿ ಜೆ.ಡಿ.ಎಸ್. ಪಕ್ಷವು ಸಂಪೂರ್ಣ ಬಹುಮತದೊಂದಿಗೆ ಜನಪರ ಸರ್ಕಾರವನ್ನು ರಚಿಸಲಿದೆ ಎಂದು ಶಾಸಕ ಹೆಚ್.ಡಿ.ರೇವಣ್ಣನವರು ತಿಳಿಸಿದರು.   ಅವರು ಇಂದು ಪಟ್ಟಣದ ಚೆನ್ನಾಂಬಿಕ ಕನ್ವೆನ್ಷನ್ ಹಾಲ್ ನಲ್ಲಿ ತಾಲೂಕು ಜೆ.ಡಿ.ಎಸ್. ಪಕ್ಷದ ಕಾರ್ಯಕರ್ತರ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಮಾತನಾಡುತ್ತಿದ್ದರು. ತಮ್ಮ ಜೆ.ಡಿ.ಎಸ್. ಸರ್ಕಾರ ಅಧಿಕಾರಕ್ಕೆ ಬಂದ ನಂತರ ಸ್ತ್ರೀ …

Read More »

ಡಬಲ್ ಇಂಜಿನ್ ಸರ್ಕಾರದಲ್ಲಿ ರಾಜ್ಯಕ್ಕೆ ಬರಬೇಕಾದ ತೆರಿಗೆ ಹಣವೇ ಬರುತ್ತಿಲ್ಲ

ಬೆಂಗಳೂರು: ಇನ್ನೂ ಕೆಲವೇ ದಿನಗಳಲ್ಲಿ ರಾಜ್ಯದ ಚುನಾವಣೆ ಬರಲಿದೆ. ಪ್ರತಿಪಕ್ಷಗಳ ಮೇಲೆ ಜವಾಬ್ದಾರಿ ಇದೆ. ರಾಜ್ಯದ ಜನರಿಗೆ ಬಿಜೆಪಿ ಸರ್ಕಾರ ಮಾಡಿರುವ ಅನ್ಯಾಯಗಳನ್ನ ತೆರದಿಡುವ ಪ್ರಯತ್ನ ಮಾಡುತ್ತಿದ್ದೇವೆ. ಡಬಲ್ ಇಂಜಿನ್ ಸರ್ಕಾರ ಬಂದ್ರೆ ಅಭಿವೃದ್ಧಿ ರಾಜ್ಯವಾಗುತ್ತೆ , ಅನುದಾನ ಹೆಚ್ಚು ಸಿಗುತ್ತೆ ಎಂದು ಬಿಜೆಪಿ ಭರವಸೆ ನೀಡಿ ಓಟು ಹಾಕಿಸಿಕೊಂಡಿದೆ. ಆದ್ರೆ ಬಿಜೆಪಿ ಡಬಲ್ ಇಂಜಿನ್ ಸರ್ಕಾರದಲ್ಲಿ ರಾಜ್ಯಕ್ಕೆ ಬರಬೇಕಾದ ತೆರಿಗೆ ಹಣವೇ ಬರುತ್ತಿಲ್ಲ ಎಂದು ವಿಧಾನಪರಿಷತ್ ವಿಪಕ್ಷದ ನಾಯಕ ಬಿ.ಕೆ.ಹರಿಪ್ರಸಾದ್ …

Read More »