ಬೆಂಗಳೂರು: ರಾಜ್ಯದಲ್ಲಿ ಮೀಸಲಾತಿ ಸಂಬಂಧ ವಿವಿಧ ಸಮುದಾಯಗಳ ಹೋರಾಟ ನಡೆಯುತ್ತಿದ್ದು, ಇದೀಗ ಇದೇ ವಿಚಾರವಾಗಿ ಇನ್ನೊಂದು ಸಮುದಾಯ ಹೋರಾಟ ತೀವ್ರಗೊಳಿಸಲು ನಿರ್ಧರಿಸಿದೆ. ಮಾತ್ರವಲ್ಲ, ಪ್ರತಿಭಟನೆ ನಡೆಸಿ ಸರ್ಕಾರಕ್ಕೆ ಎಚ್ಚರಿಕೆಯನ್ನೂ ನೀಡಿದೆ. ಬಲಿಜ ಸಮುದಾಯಕ್ಕೆ ಪೂರ್ಣ ಪ್ರಮಾಣದಲ್ಲಿ ಪ್ರವರ್ಗ ‘2ಎ’ ಮೀಸಲಾತಿ ಕಲ್ಪಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಬಲಿಜ ಸಂಘ ಸೋಮವಾರ ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆ ನಡೆಸಿತ್ತು. ರಾಜ್ಯದ ಮೂಲೆ ಮೂಲೆಗಳಿಂದ ಆಗಮಿಸಿದ್ದ ಪ್ರತಿಭಟನಾಕಾರರು ನಮ್ಮಿಂದ ಕಸಿದುಕೊಂಡಿರುವ 2ಎ ಮೀಸಲಾತಿ ವಾಪಸ್ …
Read More »ಸಚಿವ ‘ಸುನಿಲ್ ಕುಮಾರ್’ ವಿರುದ್ಧ ಅವಹೇಳನಕಾರಿ ಪೋಸ್ಟ್ : ಇಬ್ಬರಿಗೆ 25 ಸಾವಿರ ದಂಡ
ಮಂಗಳೂರು: ಸಚಿವ ವಿ. ಸುನಿಲ್ ಕುಮಾರ್ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್ ಮಾಡಿದ್ದ ಇಬ್ಬರು ಸ್ಥಳೀಯ ಮುಖಂಡರಿಗೆ ಕೋರ್ಟ್ ದಂಢ ವಿಧಿಸಿದೆ. ಸಚಿವ ವಿ. ಸುನಿಲ್ ಕುಮಾರ್ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿಯಾಗಿ ಪೋಸ್ಟ್ ಮಾಡಿದ್ದ ಕಾರ್ಕಳದ ಇಬ್ಬರು ಸ್ಥಳೀಯ ಮುಖಂಡರಿಗೆ ಬೆಂಗಳೂರಿನ 12ನೇ ಸಿಟಿ ಸಿವಿಲ್ ಕೋರ್ಟ್ 25,000 ದಂಡ ವಿಧಿಸಿ ಕ್ಷಮೆಯಾಚನೆಗೆ ಸೂಚನೆ ನೀಡಿದೆ. ಕೆಲವು ತಿಂಗಳ ಹಿಂದೆ ಕಾರ್ಕಳದ ಯೋಗೇಶ್ ನಯನಾ ಇನ್ನಾ …
Read More »ಜ.12 ರಂದು ಪ್ರಧಾನಿ ಮೋದಿ ಹುಬ್ಬಳ್ಳಿಗೆ ಆಗಮನ: ರಾಷ್ಟ್ರೀಯ ಯುವಜನೋತ್ಸವದಲ್ಲಿ ಭಾಗಿ
ಬೆಂಗಳೂರು: ಪ್ರಧಾನಿ ಮೋದಿಯವರು ಜನವರಿ 12 ರ ಮಧ್ಯಾಹ್ನದಂದು ಹುಬ್ಬಳ್ಳಿಗೆ ಆಗಮಿಸುತ್ತಿದ್ದು, ರಾಷ್ಟ್ರೀಯ ಯುವಜನೋತ್ಸವದಲ್ಲಿ ಭಾಗವಹಿಸಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಬೆಂಗಳೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. ಏಳು ದಿನಗಳ ಕಾಲ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ದೇಶದ 28 ರಾಜ್ಯಗಳಿಂದ ಹಾಗೂ 8 ಕೇಂದ್ರೀಯ ಪ್ರಾಂತ್ಯದಿಂದ ಯುವಜನರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಪ್ರಧಾನಿ ಮೋದಿಯವರು ಈ ಕಾರ್ಯಕ್ರಮವನ್ನು ಭಾಗವಹಿಸಿ ಹಿಂದಿರುಗಲಿದ್ದಾರೆ ಎಂದರು. ಜನವರಿ 19 ರಂದು ಪ್ರಧಾನಿ …
Read More »ಡಿ.ಕೆ.ಶಿವಕುಮಾರ್ ಭೇಟಿಯಾದ ಪಕ್ಷೇತರ ಶಾಸಕ ನಾಗೇಶ್ ; ಕ್ಷೇತ್ರ ಫಿಕ್ಸ್ ?
ಬೆಂಗಳೂರು : ವಿಧಾನಸಭಾ ಚುನಾವಣೆಗೆ ಭರದ ಸಿದ್ದತೆ ನಡೆಸುತ್ತಿರುವ ಕಾಂಗ್ರೆಸ್ ಪ್ರಬಲ ಅಭ್ಯರ್ಥಿಗಳಿಗಾಗಿ ಹುಡುಕಾಟ ಮುಂದುವರಿಸಿದೆ. 2018 ರಲ್ಲಿ ಮುಳಬಾಗಿಲು ಎಸ್ ಸಿ ಮೀಸಲು ಕ್ಷೇತ್ರದಿಂದ ಪಕ್ಷೇತರರಾಗಿ ಆಯ್ಕೆಯಾಗಿದ್ದ ಶಾಸಕ ಹೆಚ್.ನಾಗೇಶ್ ಅವರನ್ನು ಬೇರೊಂದು ಮೀಸಲು ಕ್ಷೇತ್ರದಿಂದ ಕಣಕ್ಕಿಳಿಸಲು ಸಿದ್ಧತೆ ನಡೆಸಿದೆ ಎಂದು ಮೂಲಗಳು ತಿಳಿಸಿವೆ. ನಾಗೇಶ್ ಅವರು ಸೋಮವಾರ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ. ನಾಗೇಶ್ ಅವರನ್ನು ಕಾಂಗ್ರೆಸ್ ಅಭ್ಯರ್ಥಿಯಾಗಿ ಮಹದೇವಪುರ ಕ್ಷೇತ್ರದಿಂದ …
Read More »ಕೋಲಾರದಲ್ಲೇ ಸಿದ್ದರಾಮಯ್ಯ ಸಭೆ, ಮಾತುಕತೆ, ಚರ್ಚೆ ಏಕೆ? ಕುತೂಹಲ ಹುಟ್ಟಿಸಿದ ಮಾಜಿ ಸಿಎಂ ನಡೆ
ಕೋಲಾರ, ಡಿಸೆಂಬರ್ 09: ಈ ಬಾರಿಯ ಕರ್ನಾಟಕದ ವಿಧಾನಸಭೆ ಚುನಾವಣೆಗೂ ಮುನ್ನ ಅತಿ ಹೆಚ್ಚು ಚಾಲ್ತಿಯಲ್ಲಿರುವ ಹೆಸರು ಸಿದ್ದರಾಮಯ್ಯ. ಮಾಜಿ ಮುಖ್ಯಮಂತ್ರಿ ವರ್ಚಸ್ಸು ಇನ್ನೂ ರಾಜ್ಯದಲ್ಲಿ ಉಳಿದಿದೆ ಎಂಬುದಕ್ಕೆ ಅವರು ಹೋದ ಕಡೆಗಳಲ್ಲಿ ಸೇರುವ ಜನಸಾಗರವೇ ಸಾಕ್ಷಿ. ಆದರೆ, ಸಿದ್ದರಾಮಯ್ಯ ಈ ಬಾರಿ ಎಲ್ಲಿಂದ ಸ್ಪರ್ಧಿಸ್ತಾರೆ ಎಂಬ ಪ್ರಶ್ನೆ ಹಲವು ತಿಂಗಳಿಂದ ಚಾಲ್ತಿಯಲ್ಲಿದೆ. ಈ ಕುರಿತು ಕೇವಲ ಮಾಧ್ಯಮ ಹಾಗೂ ರಾಜಕೀಯ ವಲಯದಲ್ಲಿ ಅಷ್ಟೇ ಅಲ್ಲ, ಸಾಮಾನ್ಯ ಜನರಲ್ಲೂ ಚರ್ಚೆಗಳು …
Read More »‘ಸಿದ್ದು ನಿಜಕನಸುಗಳು’ ಪುಸ್ತಕ ಬಿಡುಗಡೆಗೆ ಸಿಟಿ ಸಿವಿಲ್ ಕೋರ್ಟ್ನಿಂದ ಮಧ್ಯಂತರ ತಡೆಯಾಜ್ಞೆ
ಬೆಂಗಳೂರು: ಬಿಜೆಪಿ ಇಂದು ‘ಸಿದ್ದು ನಿಜಕನಸುಗಳು’ ಎಂಬ ಪುಸ್ತಕವನ್ನು ಲೋಕಾರ್ಪಣೆ ಮಾಡಲು ಮುಂದಾಗಿತ್ತು. ಇದೀಗ ಈ ಪುಸ್ತಕವನ್ನು ಬಿಡುಗಡೆ ಮಾಡದಂತೆ ಸಿಟಿ ಸಿವಿಲ್ ಕೋರ್ಟ್ ಮಧ್ಯಂತರ ತಡೆಯಾಜ್ಞೆ ಹೊರಡಿಸಿ ಆದೇಶಿಸಿದೆ. ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ದರಾಮಯ್ಯ ‘ಸಿದ್ದು ನಿಜಕನಸುಗಳು’ ಪುಸ್ತಕ ಬಿಡುಗಡೆಯಾಗದಂತೆ ಕೋರ್ಟ್ಗೆ ತಡೆಯಾಜ್ಞೆ ಅರ್ಜಿ ಸಲ್ಲಿಸಿದ್ದರು. ಪರಿಶೀಲಿಸಿದ ನ್ಯಾಯಾಲಯ ಮಧ್ಯಂತರ ತಡೆಯಾಜ್ಞೆ ನೀಡಿದೆ. ಬಿಜೆಪಿ ಹೊರತರಲು ನಿರ್ಧರಿಸಿದ್ದ ಪುಸ್ತಕವನ್ನು ಸಚಿವ ಡಾ.ಸಿ.ಎನ್.ಅಶ್ವತ್ಥ ನಾರಾಯಣ್ ಲೋಕಾರ್ಪಣೆಗೊಳಿಸಬೇಕಿತ್ತು. ‘ಸಿದ್ದು ನಿಜಕನಸುಗಳು’ ಎಂಬ ಪುಸ್ತಕದ …
Read More »ರೈತರಿಗೆ ಮತ್ತೊಂದು ಗುಡ್ ನ್ಯೂಸ್: ವಿದ್ಯುತ್ ಕಡಿತ ಚಿಂತೆ ಬಿಡಿ, ಸೋಲಾರ್ ಪಂಪ್ ಖರೀದಿಗೆ ಸಿಗುತ್ತೆ ಸಬ್ಸಿಡಿ
ಬೆಂಗಳೂರು: ತೋಟಗಾರಿಕೆ ಇಲಾಖೆ ಕೃಷಿಕರಿಗೆ ಸೋಲಾರ್ ಪಂಪ್ ಸೆಟ್ ಗಳನ್ನು ನೀಡಲು ಮುಂದಾಗಿದೆ. ರೈತರು ವಿದ್ಯುತ್ ಕೈ ಕೊಟ್ಟ ಸಂದರ್ಭದಲ್ಲಿ ಪೂರ್ಣ ಬೆಳೆಗೆ ನೀರು ಹಾಯಿಸಲಾಗದೆ ಸಂಕಷ್ಟ ಎದುರಿಸುತ್ತಿದ್ದಾರೆ. ಪದೇ ಪದೇ ವಿದ್ಯುತ್ ಸಮಸ್ಯೆಯಿಂದ ಬೆಳೆಗಳಿಗೆ ನಿರಂತರವಾಗಿ ಮತ್ತು ಅವಶ್ಯಕತೆ ಇರುವಾಗ ನೀರು ಹಾಯಿಸಲು ಸಾಧ್ಯವಾಗುವುದಿಲ್ಲ. ಈ ಹಿನ್ನೆಲೆಯಲ್ಲಿ ಸೌರಶಕ್ತಿಯ ಪಂಪ್ ಗಳನ್ನು ನೀಡಲು ತೋಟಗಾರಿಕೆ ಇಲಾಖೆ ಮುಂದಾಗಿದೆ. ಸೌರಶಕ್ತಿಯ 3 ಹೆಚ್.ಪಿ. ಸೋಲಾರ್ ಪಂಪ್ ಬೆಲೆ 2 ರಿಂದ 2.5 …
Read More »ಬಿಜೆಪಿ ವಿರುದ್ಧ ‘ಕೈ’ ಹೋರಾಟ: ಕಾಂಗ್ರೆಸ್ ನಾಯಕರಿಂದ ರಾಜ್ಯ ಪ್ರವಾಸ
ಬೆಂಗಳೂರು: ಮುಂಬರುವ ವಿಧಾನಸಭೆ ಚುನಾವಣೆಗೆ ಪಕ್ಷವನ್ನು ಸಜ್ಜುಗೊಳಿಸಲು ಇದೇ 11ರಿಂದ ರಾಜ್ಯ ಕಾಂಗ್ರೆಸ್ ನಾಯಕರು ಬಸ್ ಯಾತ್ರೆ ಆರಂಭಿಸಲಿದ್ದು, ಅದಕ್ಕೆ ಸಂಬಂಧಿಸಿ ಕಾಂಗ್ರೆಸ್ ಪ್ರವಾಸ ಸಮಿತಿಯ ಸಭೆ ನಗರದ ಖಾಸಗಿ ಹೋಟೆಲ್ನಲ್ಲಿ ಸೋಮವಾರ ನಡೆಯಿತು. ಉತ್ತರ ಕರ್ನಾಟಕ ಮತ್ತು ದಕ್ಷಿಣ ಕರ್ನಾಟಕವೆಂದು ವಿಭಾಗ ಮಾಡಿಕೊಂಡು ವಿಧಾನಸಭೆ ವಿರೋಧ ಪಕ್ಷದ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಕಾಂಗ್ರೆಸ್ ನಾಯಕರು ಯಾತ್ರೆ ಕೈಗೊಳ್ಳಲಿದ್ದಾರೆ. ರಾಜ್ಯದ ವಿವಿಧ ಕಡೆ …
Read More »ಮೋದಿ ದೇವರಾದರೆ ಪ್ರಜಾಪ್ರಭುತ್ವಕ್ಕೆ ಅಪಾಯ: ಮಲ್ಲಿಕಾರ್ಜುನ ಖರ್ಗೆ
ಚಿತ್ರದುರ್ಗ: ಪ್ರಧಾನಿ ನರೇಂದ್ರ ಮೋದಿ ಅವರನ್ನು ದೇವರು ಎಂಬಂತೆ ಬಿಂಬಿಸಲಾಗುತ್ತಿದೆ. ವ್ಯಕ್ತಿಯೊಬ್ಬ ದೇವರಂತೆ ಬಿಂಬಿತಗೊಂಡರೆ ಪ್ರಜಾಪ್ರಭುತ್ವ ಅಪಾಯಕ್ಕೆ ಸಿಲುಕುತ್ತದೆ. ಪ್ರಭುತ್ವ ನಿರಂಕುಶವಾಗುವ ಸಾಧ್ಯತೆ ಇರುತ್ತದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಳವಳ ವ್ಯಕ್ತಪಡಿಸಿದರು. ಐಕ್ಯತಾ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ‘ವ್ಯಕ್ತಿಯೊಬ್ಬರನ್ನು ದೇವರು ಎಂಬಂತೆ ರೂಪಿಸಿದರೆ ಸರ್ವಾಧಿಕಾರ ಸ್ಥಾಪಿತವಾಗುತ್ತದೆ. ಇಂತಹ ಅಪಾಯದ ವಿರುದ್ಧ ಜನರು ಜಾಗೃತಗೊಳ್ಳಬೇಕು’ ಎಂದರು. ‘ಗುಜರಾತ್ ಪುತ್ರ ಎಂಬುದಾಗಿ ಬಿಂಬಿಸಿಕೊಂಡ ಮೋದಿ ಅವರನ್ನು ಅಲ್ಲಿಯ ಜನರು …
Read More »ಬೆಂಗಳೂರು: ಯಾವುದೇ ವೃಂದದ ಹುದ್ದೆಗಳಿಗೆ 20 ಸಾವಿರಕ್ಕಿಂತಲೂ ಕಡಿಮೆ ಅರ್ಜಿಗಳು ಸಲ್ಲಿಕೆಯಾದರೆ ಅಭ್ಯರ್ಥಿಗಳ ಆಯ್ಕೆಗೆ ಇನ್ನು ಮುಂದೆ ‘ಕಂಪ್ಯೂಟರ್ ಆಧಾರಿತ ಲಿಖಿತ ಪರೀಕ್ಷೆ’ (ಸಿಬಿಆರ್ಟಿ) ನಡೆಸಲು ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್ಸಿ) ನಿರ್ಧರಿಸಿದೆ. ‘ಸಿಬಿಆರ್ಟಿ ಮಾದರಿಯಲ್ಲಿ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ನಡೆಸಬೇಕೆಂಬ ಉದ್ದೇಶದಿಂದ ಜ.7 ರಂದು ಸಿಬಿಆರ್ಟಿ ಅಣಕು ಪರೀಕ್ಷೆ ನಡೆಸಲಾಗಿತ್ತು. ಪ್ರಾಯೋಗಿಕವಾಗಿ ನಡೆಸಿದ ಈ ಪರೀಕ್ಷೆ ಯಶಸ್ವಿಯಾಗಿದೆ. ಹೀಗಾಗಿ, ಈ ಮಾದರಿಯನ್ನು ಅಳವಡಿಸಿಕೊಳ್ಳಲು ತೀರ್ಮಾನಿಸಲಾಗಿದೆ’ ಎಂದು ಕೆಪಿಎಸ್ಸಿ ಕಾರ್ಯದರ್ಶಿ ವಿಕಾಸ್ ಕಿಶೋರ್ ಸುರಳ್ಕರ್ ತಿಳಿಸಿದರು. ಡಿ. 3 ರಂದು ನಡೆದ ಆಯೋಗದ ಸಭೆಯಲ್ಲಿ ನಿರ್ಣಯಿಸಿದಂತೆ, ಸಿಬಿಆರ್ಟಿ ಅಣಕು ಪರೀಕ್ಷೆ ನಡೆಸಲು ಡಿ.22 ರಂದು ಅಧಿಸೂಚನೆ ಹೊರಡಿಸಲಾಗಿತ್ತು.
ಬೆಂಗಳೂರು: ಯಾವುದೇ ವೃಂದದ ಹುದ್ದೆಗಳಿಗೆ 20 ಸಾವಿರಕ್ಕಿಂತಲೂ ಕಡಿಮೆ ಅರ್ಜಿಗಳು ಸಲ್ಲಿಕೆಯಾದರೆ ಅಭ್ಯರ್ಥಿಗಳ ಆಯ್ಕೆಗೆ ಇನ್ನು ಮುಂದೆ ‘ಕಂಪ್ಯೂಟರ್ ಆಧಾರಿತ ಲಿಖಿತ ಪರೀಕ್ಷೆ’ (ಸಿಬಿಆರ್ಟಿ) ನಡೆಸಲು ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್ಸಿ) ನಿರ್ಧರಿಸಿದೆ. ‘ಸಿಬಿಆರ್ಟಿ ಮಾದರಿಯಲ್ಲಿ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ನಡೆಸಬೇಕೆಂಬ ಉದ್ದೇಶದಿಂದ ಜ.7 ರಂದು ಸಿಬಿಆರ್ಟಿ ಅಣಕು ಪರೀಕ್ಷೆ ನಡೆಸಲಾಗಿತ್ತು. ಪ್ರಾಯೋಗಿಕವಾಗಿ ನಡೆಸಿದ ಈ ಪರೀಕ್ಷೆ ಯಶಸ್ವಿಯಾಗಿದೆ. ಹೀಗಾಗಿ, ಈ ಮಾದರಿಯನ್ನು ಅಳವಡಿಸಿಕೊಳ್ಳಲು ತೀರ್ಮಾನಿಸಲಾಗಿದೆ’ ಎಂದು ಕೆಪಿಎಸ್ಸಿ …
Read More »
Laxmi News 24×7