ಮೌಂಟ್ ಮೌಂಗನುಯಿ: ಭಾರತ ಮತ್ತು ಆತಿಥೇಯ ನ್ಯೂಜಿಲೆಂಡ್ ನಡುವಿನ ಟಿ-20 ಸರಣಿಯ ಎರಡನೇ ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ ಪಡೆ 65 ರನ್ಗಳ ಭರ್ಜರಿ ಗೆಲುವು ಸಾಧಿಸಿದೆ. ಮೊದಲ ಟ್ವೆಂಟಿ-20 ಅಂತಾರಾಷ್ಟ್ರಿಯ ಕ್ರಿಕೆಟ್ ಪಂದ್ಯವು ಮಳೆಯಿಂದಾಗಿ ಒಂದೂ ಎಸೆತ ಕಾಣದೆ ರದ್ದಾಗಿತ್ತು. ಬೇ ಓವಲ್ ಕ್ರೀಡಾಂಗಣದಲ್ಲಿ ಭಾನುವಾರ ನಡೆದ 2ನೇ ಪಂದ್ಯದಲ್ಲಿ ಟಾಸ್ ಗೆದ್ದ ನ್ಯೂಜಿಲೆಂಡ್ ತಂಡ, ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತ್ತು. ಆರಂಭದಲ್ಲಿ ರನ್ ಪೇರಿಸಲು ಹೆಣಗಾಡಿದ ಭಾರತ ತಂಡ, ನಂತರ ಉತ್ತಮ …
Read More »ಮಂಗಳೂರು ಸ್ಫೋಟಕ್ಕೂ ಪ್ರೇಮರಾಜ್‌ಗೂ ಸಂಬಂಧವಿಲ್ಲ: ಡಿಜಿಪಿ
ಮಂಗಳೂರು: ನಗರದ ಗರೋಡಿಯಲ್ಲಿ ಆಟೊರಿಕ್ಷಾದಲ್ಲಿ ಶನಿವಾರ ಸಂಜೆ ಸಂಭವಿಸಿದ ಸ್ಪೋಟ ಪ್ರಕರಣಕ್ಕೂ ಪ್ರೇಮರಾಜ್‌ಗೂ ಸಂಬಂಧವಿಲ್ಲ ಎಂದು ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್ ಸ್ಪಷ್ಟಪಡಿಸಿದ್ದಾರೆ. ಈ ಕುರಿತು ಭಾನುವಾರ ಟ್ವೀಟ್ ಮಾಡಿರುವ ಅವರು, ‘ಪ್ರೇಮರಾಜ್ ದಾಖಲೆಗಳು ಕಳವಾಗಿದ್ದವು. ಅವರಿಗೂ ಈ ಸ್ಫೋಟ ಪ್ರಕರಣಕ್ಕೂ ಸಂಬಂಧ ಇಲ್ಲ’ ಎಂದು ಸ್ಪಷ್ಟಪಡಿಸಿದ್ದಾರೆ. ಕೃತ್ಯದ ಸ್ಥಳದಲ್ಲಿ ಪ್ರೇಮರಾಜ್ ಹುಟಗಿ ಅವರ ಆಧಾರ್ ಕಾರ್ಡ್ ಪತ್ತೆಯಾಗಿದೆ ಎಂದು ಕೆಲವು ಮಾಧ್ಯಮಗಳು ವರದಿ ಬಿತ್ತಿರಿಸಿದ್ದವು. ಸ್ಫೋಟ ಸಂಭವಿಸುವಾಗ …
Read More »53ನೇ ಅಂತಾರಾಷ್ಟ್ರೀಯ ಚಿತ್ರೋತ್ಸವಕ್ಕೆ ಪಣಜಿ ಸಜ್ಜು
ಪಣಜಿ : ಪ್ರವಾಸೋದ್ಯಮಕ್ಕೆ ಹೆಸರಾದ ಗೋವಾದ ರಾಜಧಾನಿ ಪಣಜಿಯಲ್ಲಿ 53 ನೇ ಭಾರತೀಯ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ (ಐಊಊಐ) ದ ಕ್ಷಣಗಣನೆ ಆರಂಭವಾಗಿದೆ. ಹಿಂದಿನ ಕೆಲವು ವರ್ಷಗಳಿಗಿಂತ ಈ ವರ್ಷ ಕೊಂಚ ವಿಭಿನ್ನವಾಗಿ ಸಿದ್ಧಗೊಳ್ಳುತ್ತಿರುವ ಎಂಟರ್‌ಟೈನ್ ಮೆಂಟ್ ಸೊಸೈಟಿ ಆಫ್ ಗೋವಾದ ಆವರಣ ಹಾಗೂ ಪಣಜಿಯ ಮುಖ್ಯ ರಸ್ತೆಗಳು ವಿದ್ಯುತ್ ದೀಪಾಲಂಕಾರದಿಂದ ಕಂಗೊಳಿಸುತ್ತಿವೆ. ಕೃತಕ ನಿರ್ಮಿತ ವರ್ಣರಂಜಿತ ನವಿಲುಗಳ ಸಂಭ್ರಮ ಉತ್ಸವಕ್ಕೆ ಹೊಸ ಹುಮ್ಮಸ್ಸು ತುಂಬತೊಡಗಿವೆ. ನ್ಯಾಷನಲ್ ಫಿಲ್ಮ್ ಡೆವಲಪ್‌ಮೆಂಟ್ ಕಾರ್ಪೋರೇಷನ್ (ಎನ್‌ಎಫ್ಡಿಸಿ) …
Read More »ರೈತರ ಮೇಲೆ ಕ್ರಿಮಿನಲ್ ಪ್ರಕರಣ ಬೇಡ: ಅಶೋಕ್
ಮೈಸೂರು: ಸರಕಾರಿ ಜಮೀನು, ಅರಣ್ಯ ಪ್ರದೇಶ ವ್ಯಾಪ್ತಿಯಲ್ಲಿ ಉಳುಮೆ ಮಾಡಿಕೊಂಡು ಬರುತ್ತಿರುವ ರೈತರ ಮೇಲೆ ಯಾವುದೇ ಕಾರಣಕ್ಕೂ ಕ್ರಿಮಿನಲ್ ಪ್ರಕರಣ ದಾಖಲಿಸಬಾರದು ಎಂದು ಕಂದಾಯ ಸಚಿವ ಆರ್. ಅಶೋಕ್ ಸೂಚಿಸಿದ್ದಾರೆ. ಎಚ್.ಡಿ. ಕೋಟೆ ಭೀಮ ನಕೊಲ್ಲಿಯಲ್ಲಿ ನಡೆದ “ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಈ ಹಿಂದೆ ಸರಕಾರಿ ಜಮೀನು ಅಥವಾ ಅರಣ್ಯ ಭೂಮಿಯಲ್ಲಿ ಉಳುಮೆ ಮಾಡುವ ರೈತರನ್ನು ಭೂ ಕಬಳಿಕೆದಾರರು ಎಂಬಂತೆ ನೋಡಲಾಗುತ್ತಿತ್ತು. ಅವರ ಮೇಲೆ ಪ್ರಕರಣ …
Read More »ಕಾಂಗ್ರೆಸ್ ಆರೋಪ ಅವರಿಗೇ ತಿರುಗುಬಾಣ: ಸಿಎಂ ಬೊಮ್ಮಾಯಿ
ಬೆಂಗಳೂರು: ಚುನಾವಣಾ ಆಯೋಗದ ನಿಯಮಾವಳಿಯನ್ನು ಗಾಳಿಗೆ ತೂರಿ ಕಾಂಗ್ರೆಸ್ ಸರ್ಕಾರ ಚಿಲುಮೆ ಸಂಸ್ಥೆಗೆ ಆದೇಶವನ್ನು ನೀಡಿದ್ದು, ತನಿಖೆಯ ಮೂಲಕ ಎಲ್ಲ ಸತ್ಯಗಳು ಹೊರಬರಲಿದೆ. ಕಾಂಗ್ರೆಸ್ ಅವರ ಆರೋಪ ನಿರಾಧಾರ. ಈ ಪ್ರಕರಣ ಅವರಿಗೇ ತಿರುಗುಬಾಣವಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು ಸಿದ್ದರಾಮಯ್ಯ ಅವರ ಸರ್ಕಾರ 2013 ರಿಂದಲೂ ತನಿಖೆಯಾಗಬೇಕು ಎಂದು ಸೂಚನೆ ನೀಡಲಾಗಿದೆ. 2013 ರಿಂದ ಯಾವ ಆದೇಶಗಳನ್ನು ನೀಡಿದ್ದಾರೆ ಎಂಬ ಎಲ್ಲ ಸ್ಪಷ್ಟವಾದ ಸತ್ಯಗಳು ಹೊರಗೆ ಬರಲಿ …
Read More »ಮಂಗಳೂರಿನ ಆಟೋರಿಕ್ಷಾದಲ್ಲಿ ಕುಕ್ಕರ್ ಬಾಂಬ್
ಹುಬ್ಬಳ್ಳಿ: ಮಂಗಳೂರಿನ ಆಟೋರಿಕ್ಷಾದಲ್ಲಿ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದಲ್ಲಿ ನಕಲಿ ವಿಳಾಸ ಪತ್ತೆಯಾಗಿದ್ದು, ಅದು ಹುಬ್ಬಳ್ಳಿಯ ಪ್ರೇಮ್ ರಾಜ್ ಅವರಿಗೆ ಸೇರಿದೆ. ಆಟೋರಿಕ್ಷಾದಲ್ಲಿ ಪತ್ತೆಯಾದ ಆಧಾರ ಕಾರ್ಡ್ ಹುಬ್ಬಳ್ಳಿಯ ಕೇಶ್ವಾಪುರ ಮಧುರಾ ಕಾಲೋನಿ ನಿವಾಸಿ ಪ್ರೇಮರಾಜ್ ಹೆಸರಿನಲ್ಲಿದೆ. ಆದರೆ ಈ ಆಧಾರ್ ಕಾರ್ಡ್ ಕಳೆದು ಹೋಗಿತ್ತು. ಇವರದೇ ವಿಳಾಸವನ್ನು ಬ್ಲಾಸ್ಟ್ ನಲ್ಲಿ ಬಳಕೆ ಮಾಡಲಾಗಿದೆ. ಪ್ರೇಮ್ ರಾಜ್‌ಗೂ ಈ ಪ್ರಕರಣಕ್ಕೆ ಸಂಬಂಧ ಇಲ್ಲ ಎನ್ನುತ್ತಿದ್ದಾರೆ ಕುಟುಂಬದವರು. “ನನ್ನ ಮಗ ಅಂಥವನಲ್ಲ. …
Read More »ಕಳಸಾ-ಬಂಡೂರಿ ಪ್ರದೇಶಕ್ಕೆ ಗೋವಾ ತಂಡ ಭೇಟಿ
ಮಹತ್ವಾಕಾಂಕ್ಷೆಯ ಕಳಸಾ-ಬಂಡೂರಿ ಅಣೆಕಟ್ಟು ಯೋಜನೆ ಪೂರ್ಣಗೊಳಿಸುವ ಮೂಲಕ ಗೋವಾದ ಮಹಾದಾಯಿ ನೀರನ್ನು ತಿರುಗಿಸಲು ಕರ್ನಾಟಕ ಮುಂದಾಗಿದೆ. ಈ ಅಣೆಕಟ್ಟು ನಿರ್ಮಿಸಲು ಹಳತಾರ ಮತ್ತು ಕಳಸಾ ಪ್ರದೇಶಗಳಲ್ಲಿ ಮಣ್ಣು ಪರೀಕ್ಷೆ ಜತೆಗೆ ಉದ್ದೇಶಿತ ಕಾಲುವೆ ಅಗೆಯಲು ಗುರುತು ಹಾಕುವುದು ಬಹುತೇಕ ಪೂರ್ಣಗೊಂಡಿದೆ ಎಂದು ಗೋವಾ ಫಾರ್ವರ್ಡ್ ಶಾಸಕ ವಿಜಯ್ ಸರ್ದೇಸಾಯಿ ಹಾಗೂ ಪರಿಸರ ಹೋರಾಟಗಾರ ರಾಜೇಂದ್ರ ಕೇರ್ಕರ್ ಹೇಳಿದ್ದಾರೆ. ಅವರು ಶುಕ್ರವಾರ ಕಳಸಾ-ಬಂಡೂರಿ ನಾಲಾ ವ್ಯಾಪ್ತಿಯ ಚೋರ್ಲಾ ಮಹಾದಾಯಿ ಜಲಾನಯನ …
Read More »ವಿದ್ಯಾರ್ಥಿಗಳಿಗೆ ಸಂವಹನ ಕಲೆ ಮುಖ್ಯ: ಕತ್ತಿ
ಹುಕ್ಕೇರಿ: ಉತ್ತರ ಕರ್ನಾಟಕದ ವಿದ್ಯಾರ್ಥಿಗಳು ಜಾಣರಿದ್ದರೂ, ಆ ಜಾಣತನವನ್ನು ಬಿಂಬಿಸುವ ಸಂವಹನ ಕಲೆಯ ಕೊರತೆಯಿಂದ ಉದ್ಯೋಗಾವಕಾಶ ಕಳೆದುಕೊಳ್ಳುತ್ತಿದ್ದಾರೆಂದು ಮಾಜಿ ಸಂಸದರು ಹಾಗೂ ಬಿಡಿಸಿಸಿ ಬ್ಯಾಂಕ್ ಅಧ್ಯಕ್ಷ ರಮೇಶ ಕತ್ತಿ ಅಸಮಾಧಾನ ವ್ಯಕ್ತಪಡಿಸಿದರು. ಅವರು ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ 2022-23 ನೇ ಶೈಕ್ಷಣಿಕ ಸಾಲಿನ ವಿವಿಧ ಸಂಘಗಳ ಕಾರ್ಯ ಚಟುವಟಿಕೆ ಉದ್ಘಾಟಿಸಿ ಮಾತನಾಡಿದರು. ವಿದ್ಯಾರ್ಥಿಗಳು ಕನ್ನಡದ ಜತೆ ಇಂಗ್ಲಿಷ್ ಕಲಿಯಬೇಕು. ಶಿಕ್ಷಣ ಪಡೆದು ಇನ್ನೊಬ್ಬರ ಕೈಯಲ್ಲಿ ನೌಕರಿ ಮಾಡುವ …
Read More »ನವಿಲುತೀರ್ಥ ಜಲಾಶಯ: ಇಬ್ಬರು ಮಕ್ಕಳನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡ ತಾಯಿ
ಬೆಳಗಾವಿ: ಜಿಲ್ಲೆಯ ಸವದತ್ತಿ ತಾಲ್ಲೂಕಿನ ಪಟ್ನಾಳ ಗ್ರಾಮದಲ್ಲಿ ಗೃಹಿಣಿಯೊಬ್ಬರು ತಮ್ಮ ಇಬ್ಬರು ಮಕ್ಕಳನ್ನು ನವಿಲುತೀರ್ಥ ಜಲಾಶಯದ ಹಿನ್ನೀರಿನಲ್ಲಿ ಮುಳುಗಿಸಿ ಕೊಂದು, ತಾವೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರಾಮದುರ್ಗ ತಾಲ್ಲೂಕಿನ ಚುಂಚನೂರು ಗ್ರಾಮದ ಶಶಿಕಲಾ ಉರೂಫ್ ತನುಜಾ ಪರಸಪ್ಪ ಗೋಡಿ (32) ಮಕ್ಕಳಾದ ಸುದೀಪ (4) ರಾಧಿಕಾ (3) ಸಾವಿಗೀಡಾದವರು. ಗೃಹಿಣಿ ಗುರುವಾರ ರಾತ್ರಿ ತಮ್ಮ ಇಬ್ಬರು ಮಕ್ಕಳನ್ನು ನೀರಿನಲ್ಲಿ ಮುಳಗಿಸಿ ಕೊಲೆ ಮಾಡಿದರು. ಬಳಿಕ ತಾವೂ ನೀರಿಗೆ ಹಾರಿದರು. ಕುಟುಂಬದವರು ರಾತ್ರಿಯಿಡೀ …
Read More »ಜಾರಕಿಹೊಳಿ ಕುಟುಂಬಕ್ಕೆ ಜನರೇ ಬ್ರ್ಯಾಂಡ್… ಸರ್ವೋತ್ತಮ ಜಾರಕಿಹೊಳಿ
ಗೋಕಾಕ: ಜನರ ಆಶೀರ್ವಾದವೇ ನಮ್ಮ ಕುಟುಂಬಕ್ಕೆ ಶ್ರೀರಕ್ಷೆಯಾಗಿದೆ. ಕಳೆದ ನಾಲ್ಕು ದಶಕಗಳಿಂದ ಸಾರ್ವಜನಿಕ ಕ್ಷೇತ್ರದಲ್ಲಿರುವ ನಮ್ಮ ಕುಟುಂಬಕ್ಕೆ ಎಲ್ಲ ರೀತಿಯ ಸಹಕಾರ ಹಾಗೂ ಬೆಂಬಲ ನೀಡುತ್ತಿರುವ ಜನರೇ ನಮ್ಮ ಕುಟುಂಬಕ್ಕೆ ಬ್ರ್ಯಾಂಡ್ ಆಗಿದ್ದಾರೆಂದು ಯುವ ಮುಖಂಡ ಸರ್ವೋತ್ತಮ ಭೀಮಶಿ ಜಾರಕಿಹೊಳಿ ತಿಳಿಸಿದರು. ಶನಿವಾರದಂದು ನಗರದ ಮಹಾಲಕ್ಷ್ಮೀ ದೇವಸ್ಥಾನದ ಸಭಾ ಭವನದಲ್ಲಿ ನಡೆದ ತಮ್ಮ 23ನೇ ಹುಟ್ಟು ಹಬ್ಬದ ಸಮಾರಂಭದಲ್ಲಿ ಅಭಿಮಾನಿಗಳಿಂದ ಸತ್ಕಾರ ಸ್ವೀಕರಿಸಿ ಮಾತನಾಡಿದ ಅವರು, ಜನರ ಪ್ರೀತಿ ವಿಶ್ವಾಸಕ್ಕೆ …
Read More »
Laxmi News 24×7