Breaking News

ರಾಜಕೀಯ

ಅರಮನೆಯಲ್ಲಿರುವ ಗುಂಬಜ್ ಮಾದರಿ ಗೋಪುರ ಕೆಡವಲು ತಾಕತ್ ಇದೆಯೇ?: ಸಿ.ಎಂ.ಇಬ್ರಾಹಿಂ ಪ್ರಶ್ನೆ

ಮೈಸೂರು: ಟಿಪ್ಪುಸುಲ್ತಾನ್ ಬಗ್ಗೆ ಬ್ರಿಟಿಷರು ಹಾಡಿ ಹೊಗಳಿದ್ದಾರೆ. ರಾಜಮನೆತನದವರು ಟಿಪ್ಪು ಹುತಾತ್ಮರಾದ ಮೇಲೆ ಹೇಳಿರುವ ಮಾತುಗಳು ಇತಿಹಾಸದಲ್ಲಿ ದಾಖಲಾಗಿದ್ದರೂ ಸಂಸದ ಪ್ರತಾಪ್ ಸಿಂಹ ಬಾಯಿಗೆ ಬಂದಂತೆ ಮಾತನಾಡುವುದನ್ನು ಬಿಡಬೇಕು. ಟಿಪ್ಪು ಬಗ್ಗೆ ಏನು ಅರಿಯದೆ ಸುಳ್ಳು ಹೇಳುತ್ತಿದ್ದಾರೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ವಾಗ್ದಾಳಿ ನಡೆಸಿದರು.   ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಟಿಪ್ಪುಸುಲ್ತಾನ್ ಬ್ರಿಟಿಷರ ವಿರುದ್ಧ ಹೋರಾಡಿದ ಮಹಾನ್ ನಾಯಕ. ಅವರ ಕಾಲದಲ್ಲಿ ನಡೆದಿರುವ ಕ್ರಾಂತಿಕಾರಕ ಯೋಜನೆಗಳು, ಅಭಿವೃದ್ಧಿ, ಹೋರಾಡಿದನ್ನು …

Read More »

ಹೊನ್ನಾಳಿ ಶಾಸಕ ಎಂ.ಪಿ. ರೇಣುಕಾಚಾರ್ಯ ವಿರುದ್ಧ ಗ್ರಾಮ ಲೆಕ್ಕಿಗ ದೂರು

ದಾವಣಗೆರೆ: ಸಿಎಂ ರಾಜಕೀಯ ಕಾರ್ಯದರ್ಶಿ, ಹೊನ್ನಾಳಿ ಶಾಸಕ ಎಂ.ಪಿ. ರೇಣುಕಾಚಾರ್ಯ ವಿರುದ್ಧ ಸರ್ಕಾರಿ ಕೆಲಸಕ್ಕೆ ಅಡ್ಡಿಪಡಿಸಿದ ಆರೋಪದಡಿ ನ್ಯಾಮತಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನ್ಯಾಮತಿ ತಾಲೂಕಿನ ಕುಂಕುವ ವೃತ್ತದ ಗ್ರಾಮಲೆಕ್ಕಿಗ ಎಸ್‌.ಪ್ರಶಾಂತ್‌ಕುಮಾರ್‌ ಎಂಬುವವರು, ಶಾಸಕ ರೇಣುಕಾಚಾರ್ಯ ಸರ್ಕಾರಿ ಕೆಲಸಕ್ಕೆ ಅಡ್ಡಿಪಡಿಸುವ ಜತೆಗೆ ತಮ್ಮನ್ನು ಸಾರ್ವಜನಿಕವಾಗಿ ನಿಂದಿಸಿದ್ದಾರೆ, ಅವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಬೇಕೆಂದು ಕೋರಿ ದೂರು ಸಲ್ಲಿಸಿದ್ದಾರೆ.   ರೇಣುಕಾಚಾರ್ಯ ವಿರುದ್ಧ ಐಪಿಸಿ ಕಲಂ 186 ಅಡಿಯಲ್ಲಿ ದೂರು ದಾಖಲಾಗಿದೆ. ಈಚೆಗೆ …

Read More »

ಲಂಚಕ್ಕೆ ಬೇಡಿಕೆಯಿಟ್ಟಿದ್ದ ವಿಶೇಷ ತಹಶೀಲ್ದಾರ್‌ ಸೆರೆ

ಬೆಂಗಳೂರು: ಜಮೀನಿನ ಖಾತಾ ಬದಲಾವಣೆಗೆ 10 ಲಕ್ಷ ರೂ.ಲಂಚಕ್ಕೆ ಬೇಡಿಕೆಯಿಟ್ಟಿದ್ದ ವಿಶೇಷ ತಹಶೀಲ್ದಾರ್‌ ಹಾಗೂ ಅವರಿಗೆ ಸಹಕರಿಸಿದ್ದ ಮಧ್ಯವರ್ತಿ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಉತ್ತರ ವಿಭಾಗದ ವಿಶೇಷ ತಹಶೀಲ್ದಾರ್‌ ವರ್ಷಾ ಒಡೆಯರ್‌ ಹಾಗೂ ಮಧ್ಯವರ್ತಿ ರಮೇಶ್‌ ಬಂಧಿತರು.   ದಾಸನಪುರದ ನಿವಾಸಿ ಕಾಂತರಾಜು ಎಂಬುವವರು ತಮ್ಮ ಜಮೀನಿನ ಖಾತಾ ಬದಲಾವಣೆಗೆ ಅರ್ಜಿ ಸಲ್ಲಿಸಿದ್ದರು. ಖಾತಾ ಬದಲಾವಣೆ ಮಾಡಿಕೊಡಲು ಆರೋಪಿ ವರ್ಷಾ 10 ಲಕ್ಷ ರೂ.ಲಂಚಕ್ಕೆ ಬೇಡಿಕೆಯಿಟ್ಟಿದ್ದರು. ಲಂಚ ಕೊಡಲು ಇಚ್ಛಿಸದ …

Read More »

ಬೆಂಗಳೂರು ಟೆಕ್‌ ಶೃಂಗಕ್ಕೆ ಇಂದು ಚಾಲನೆ

ಬೆಂಗಳೂರು: ಐಟಿ-ಬಿಟಿ ಮತ್ತು ಸಂಬಂಧಿತ ಉದ್ಯಮಗಳಿಗೆ ಉತ್ತೇಜನ ನೀಡುವ ಬೆಂಗಳೂರು ಟೆಕ್‌ ಶೃಂಗಸಭೆ (ಬಿಟಿಎಸ್‌)ಯ 25ನೇ ಆವೃತ್ತಿ ಬುಧವಾರ ಆರಂಭವಾಗಲಿದೆ. ಸಾಫ್ಟ್‌ವೇರ್‌ ಟೆಕ್ನಾಲಜಿ ಪಾರ್ಕ್ಸ್ ಆಫ್‌ ಇಂಡಿಯಾ (ಎಸ್‌ಟಿಪಿಐ) ಸಹಯೋಗ ದೊಂದಿಗೆ ಬೆಂಗಳೂರು ಅರಮನೆಯಲ್ಲಿ ಶೃಂಗ ಸಭೆ ನಡೆಸಲಾಗುತ್ತಿದೆ. ಶೃಂಗಸಭೆ ನ. 18ರ ವರೆಗೆ ನಡೆಯಲಿದೆ. ಬುಧವಾರ ಬೆಳಗ್ಗೆ 10 ಗಂಟೆಗೆ ಪ್ರಧಾನಿ ಮೋದಿ ಅವರ ಧ್ವನಿಮುದ್ರಿತ ಸಂದೇಶದೊಂದಿಗೆ ಶೃಂಗಸಭೆಗೆ ಚಾಲನೆ ದೊರೆಯಲಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಫಿನ್‌ಲ್ಯಾಂಡ್ ನ‌ ವಿಜ್ಞಾನ …

Read More »

ಮುರುಘಾ ಮಠಕ್ಕೆ ಆಡಳಿತಾಧಿಕಾರಿ ನೇಮಕ ಸರಕಾರದ ಹಂತಕ್ಕೆ

ಬೆಂಗಳೂರು: ಲೈಂಗಿಕ ಹಗರಣದಲ್ಲಿ ಸಿಲುಕಿರುವ ಮುರುಘಾ ಮಠದ ಪೀಠಾಧಿಪತಿ ಡಾ.ಶಿವಮೂರ್ತಿ ಶರಣರು ಜೈಲು ಸೇರಿರುವ ಹಿನ್ನೆಲೆಯಲ್ಲಿ ಮಠಕ್ಕೆ ಆಡಳಿತಾಧಿಕಾರಿ ನೇಮಕ ವಿಚಾರ ಈಗ ಸರ್ಕಾರದ ಹಂತಕ್ಕೆ ತಲುಪಿದೆ. ಮಠದ ಆಡಳಿತಾಧಿಕಾರಿ ನೇಮಕ ಪ್ರಕ್ರಿಯೆಗೆ ಸಂಬಂಧಪಟ್ಟಂತೆ ಚಿತ್ರದುರ್ಗ ಜಿಲ್ಲಾಧಿಕಾರಿ ಕಡತವನ್ನು ಸರ್ಕಾರ ಕಳುಹಿಸಿದ್ದಾರೆ ಎಂದು ತಿಳಿದು ಬಂದಿದ್ದು, ಸರ್ಕಾರ ಶೀಘ್ರದಲ್ಲಿ ಅಂತಿಮ ತೀರ್ಮಾನ ತೆಗೆದುಕೊಳ್ಳಬಹುದು ಎಂದು ಉನ್ನತ ಮೂಲಗಳು ತಿಳಿಸಿವೆ.   ಈ‌ ಕಡತ ಈಗ ಕಂದಾಯ ಇಲಾಖೆ ಕಾರ್ಯದರ್ಶಿ ಕಚೇರಿಯನ್ನು ತಲುಪಿದ್ದು, …

Read More »

300ರಲ್ಲಿ 43 ಹುದ್ದೆ ಭರ್ತಿಗೆ ಪ್ರಸ್ತಾವ; ಉದ್ಯೋಗ ಆಕಾಂಕ್ಷಿಗಳ ಆಕ್ರೋಶ

ಬೆಂಗಳೂರು: ಕೆಎಎಸ್‌ (ಕಿರಿಯ ಶ್ರೇಣಿ) 40 ಹುದ್ದೆಗಳು ಸೇರಿದಂತೆ ಗೆಜೆಟೆಡ್‌ ಪ್ರೊಬೇಷನರಿ ಗ್ರೂಪ್‌ ‘ಎ’ ಮತ್ತು ‘ಬಿ’ ವೃಂದದ 300ಕ್ಕೂ ಹೆಚ್ಚು ಹುದ್ದೆಗಳು ಖಾಲಿ ಇದ್ದರೂ, ಕೇವಲ 43 ಹುದ್ದೆಗಳ ಭರ್ತಿಗೆ ರಾಜ್ಯ ಸರ್ಕಾರ ಕರ್ನಾಟಕ ಲೋಕಸೇವಾ ಆಯೋಗಕ್ಕೆ (ಕೆಪಿಎಸ್‌ಸಿ) ಪ್ರಸ್ತಾವ ಕಳುಹಿಸಿರುವುದು ಉದ್ಯೋಗ ಆಕಾಂಕ್ಷಿಗಳ ಆಕ್ರೋಶಕ್ಕೆ ಕಾರಣವಾಗಿದೆ.   ಆದರೆ, ಪ್ರಸ್ತಾವದ ಕುರಿತು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ (ಡಿಪಿಎಆರ್‌) ಸ್ಪಷ್ಟನೆ ಕೇಳಿರುವ ಕೆಪಿಎಸ್‌ಸಿ, ನ. 1ರಿಂದ …

Read More »

ಸುರಕೋಡ: ಪ್ರೀತಿಸಿ ಮದುವೆಯಾದ ಜೋಡಿಗೆ ಸ್ವಜಾತಿಯವರಿಂದಲೇ ಬಹಿಷ್ಕಾರ

ನರಗುಂದ (ಗದಗ ಜಿಲ್ಲೆ): ಪ್ರೀತಿಸಿ ಮದುವೆಯಾದ ಒಂದೇ ಜಾತಿಯ ಯುವಕ, ಯುವತಿ 14 ವರ್ಷಗಳ ನಂತರ ಗ್ರಾಮಕ್ಕೆ ಬಂದಿದ್ದು, ಅವರ ಕುಟುಂಬವನ್ನು ಅದೇ ಜಾತಿಯವರು ಬಹಿಷ್ಕರಿಸಿದ ಪ್ರಕರಣ ತಾಲ್ಲೂಕಿನ ಸುರಕೋಡದಲ್ಲಿ ನಡೆದಿದೆ. ಶೋಭಾ ಮತ್ತು ಶಿವಾನಂದ ಅವರ ಕುಟುಂಬ ಬಹಿಷ್ಕಾರಕ್ಕೊಳಗಾಗಿದೆ.   ಶೋಭಾ ಮತ್ತು ಶಿವಾನಂದ ಅವರ ಕುಟುಂಬ ಬಹಿಷ್ಕಾರಕ್ಕೊಳಗಾಗಿದೆ. ‘ಶೋಭಾ ಮನೆಯವರು ಕೆಲವರೊಂದಿಗೆ ಬಂದು ಶಿವಾನಂದ ಸುರಕೋಡ (ಮಾದರ) ಅವರ ತಂದೆ ಸಾಬಣ್ಣನವರ ಮನೆಗೆ ಕೀಲಿ ಹಾಕಿ ಕುಟುಂಬವನ್ನು ಹೊರಹಾಕಿದ್ದಾರೆ. …

Read More »

ಕಾಂಗ್ರೆಸ್‌ನ ಪ್ರಿಯಾಂಕ್ ಖರ್ಗೆಗೆ ಜೀವ ಬೆದರಿಕೆ: ಬಿಜೆಪಿ ಮುಖಂಡ ಬಂಧನ, ಬಿಡುಗಡೆ

ಕಲಬುರಗಿ: ಚಿತ್ತಾಪುರ ಶಾಸಕ ಪ್ರಿಯಾಂಕ್ ಖರ್ಗೆ ಅವರಿಗೆ ಜೀವ ಬೆದರಿಕೆ ಹಾಕಿದ ಆರೋಪದಡಿ ಬಿಜೆಪಿ ಮುಖಂಡ ಮಣಿಕಂಠ ರಾಠೋಡ‌ ಅವರನ್ನು ನಗರದ ಬ್ರಹ್ಮಪುರ ಠಾಣೆಯ ಪೊಲೀಸರು ಹೈದರಾಬಾದ್‌ನಲ್ಲಿ ಭಾನುವಾರ ರಾತ್ರಿ ಬಂಧಿಸಿದರು. ಬಳಿಕ ಠಾಣೆ ಜಾಮೀನಿನ ಮೇಲೆ ಬಿಡುಗಡೆ ಮಾಡಿದರು.   ‘ಸಾಯಲು ಸಿದ್ಧ, ಶೂಟ್‌ ಮಾಡಲು ಸಿದ್ಧ’ ಎಂಬ ಹೇಳಿಕೆ ನೀಡಿ ಪ್ರಿಯಾಂಕ್ ಖರ್ಗೆ ಅವರಿಗೆ ಜೀವಬೆದರಿಕೆ ಒಡ್ಡಲಾಗಿದೆ’ ಎಂದು ಕಾಂಗ್ರೆಸ್ ಮುಖಂಡ ತಿಪ್ಪಣ್ಣಪ್ಪ ದೂರು ನೀಡಿದ್ದರು. 9 …

Read More »

ಸಿದ್ದರಾಮಯ್ಯ ಸೋಲಿಸಲು ಬಿಜೆಪಿ ಜತೆ ಮೈತ್ರಿಯಿಲ್ಲ: ಎಚ್‌.ಡಿ. ಕುಮಾರಸ್ವಾಮಿ

ಬೆಂಗಳೂರು: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೋಲಾರ ಕ್ಷೇತ್ರದಲ್ಲಿ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನು ಸೋಲಿಸಲು ಬಿಜೆಪಿ ಜತೆ ಮೈತ್ರಿ ಮಾಡಿಕೊಳ್ಳುವ ಪ್ರಶ್ನೆಯೇ ಇಲ್ಲ ಎಂದು ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ. ಕುಮಾರಸ್ವಾಮಿ ಹೇಳಿದರು. ಜೆಡಿಎಸ್‌ ರಾಜ್ಯ ಘಟಕದ ಅಧ್ಯಕ್ಷ ಸಿ.ಎಂ. ಇಬ್ರಾಹಿಂ ಮನೆಗೆ ಸೋಮವಾರ ಭೇಟಿ ನೀಡಿದ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಸಿದ್ದರಾಮಯ್ಯ ಅವರನ್ನು ಸೋಲಿಸಲು ಬಿಜೆಪಿಯು ಜೆಡಿಎಸ್‌ಗೆ ಬೆಂಬಲ ನೀಡಲಿದೆ ಎಂದು …

Read More »

ಬಸವಲಿಂಗ ಶ್ರೀ ಆತ್ಮಹತ್ಯೆ: ಆರೋಪಿಗಳ‌ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮನಗರ: ಕಂಚುಗಲ್ ಬಂಡೆ ಮಠದ ಬಸವಲಿಂಗ ಸ್ವಾಮೀಜಿ ಆತ್ಮಹತ್ಯೆ ಪ್ರಕರಣದ ಮೂವರು ಆರೋಪಿಗಳ ನ್ಯಾಯಾಂಗ ಬಂಧನದ ಅವಧಿಯನ್ನು ಇದೇ 29ರವರೆಗೆ ವಿಸ್ತರಿಸಿ ನ್ಯಾಯಾಲಯವು ಮಂಗಳವಾರ ಆದೇಶಿಸಿತು. ಪ್ರಕರಣದ ಆರೋಪಿಗಳಾದ ಮೃತ್ಯುಂಜಯ ಸ್ವಾಮೀಜಿ, ನೀಲಾಂಬಿಕೆ ಹಾಗೂ ವಕೀಲ ಮಹದೇವಯ್ಯ ಅವರನ್ನು ಪೊಲೀಸರು ಮಂಗಳವಾರ ಮಾಗಡಿ ಜೆಎಂಎಫ್ ಸಿ ನ್ಯಾಯಾಧೀಶೆ ಎಂ. ಧನಲಕ್ಷ್ಮಿ ಅವರ ಎದುರು ಹಾಜರುಪಡಿಸಿದರು.   ಪ್ರಕರಣದ ಆರೋಪಿಗಳಾದ ಮೃತ್ಯುಂಜಯ ಸ್ವಾಮೀಜಿ, ನೀಲಾಂಬಿಕೆ ಹಾಗೂ ವಕೀಲ ಮಹದೇವಯ್ಯ ಅವರನ್ನು ಪೊಲೀಸರು ಮಂಗಳವಾರ …

Read More »