Breaking News

ರಾಜಕೀಯ

ಎಸ್ಟಿ ಸಮಾಜಕ್ಕೆ ಘೋರ ಅನ್ಯಾಯ; ನಿಜವಾದ ಸಮಾಜಗಳಿಗೆ ನಷ್ಟ: ಶ್ರೀ

ಅಡಹಳ್ಳಿ: ರಾಜ್ಯ ಸರ್ಕಾರ ಮತ ಬ್ಯಾಂಕ್‌ಗಾಗಿ ಇನ್ನೂ ಅನೇಕ ಸಮಾಜಗಳಿಗೆ ಎಸ್ಟಿ ಮೀಸಲಾತಿ ಪ್ರಮಾಣ ಪತ್ರ ನೀಡುತ್ತಿರುವುದು ನಿಜವಾದ ಎಸ್ಟಿ ಸಮಾಜಕ್ಕೆ ಮಾಡುವ ಘೋರ ಅನ್ಯಾಯ ಎಂದು ರಾಜನಹಳ್ಳಿ ವಾಲ್ಮೀಕಿ ಜಗದ್ಗುರು ಪ್ರಸನ್ನಾನಂದ ಸ್ವಾಮೀಜಿ ಹೇಳಿದರು.   ಸಮೀಪದ ರಡ್ಡೇರಹಟ್ಟಿ ಗ್ರಾಮದಲ್ಲಿ ಮಂಗಳವಾರ ರಾಜನಹಳ್ಳಿ ವಾಲ್ಮೀಕಿ ಜಾತ್ರಾ ಮಹೋತ್ಸವದ ಪೂರ್ವಭಾವಿ ಸಭೆ ಹಾಗೂ ಅಥಣಿ ತಾಲೂಕಾ ಮಟ್ಟದ ವಾಲ್ಮೀಕಿ ಸಮುದಾಯ ಜನಜಾಗೃತಿ ಸಭೆಯ ಸಾನಿಧ್ಯ ವಹಿಸಿ ಮಾತನಾಡಿ ತಳವಾರ, ಪರಿವಾರ ಮತ್ತು …

Read More »

ಪಕ್ಷ ನೋಡಿ ಮತ ಹಾಕುವ ಕಾಲ‌ ಮುಗೀತು. ನಮ್ಮ ಸಮಾಜದ ವ್ಯಕ್ತಿ ನೋಡಿ ಮತ ಹಾಕುತ್ತೇ:ಮೃತ್ಯುಂಜಯ ಸ್ವಾಮೀ

ಬೈಲಹೊಂಗಲ : ‘ಪಕ್ಷ ನೋಡಿ ಮತ ಹಾಕುವ ಕಾಲ‌ ಮುಗೀತು. ಇನ್ನು ನಮ್ಮ ಸಮಾಜದ ವ್ಯಕ್ತಿ ನೋಡಿ ಮತ ಹಾಕುತ್ತೇವೆ’ ಎಂದು ಕೂಡಲ ಸಂಗಮ ಲಿಂಗಾಯತ ಪಂಚಮಸಾಲಿ ಸಮಾಜದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಗುರುವಾರ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ನಮ್ಮದು ಯಾವುದೇ ವ್ಯಕ್ತಿ, ಪಕ್ಷದ ವಿರುದ್ಧ ಹೋರಾಟ ಅಲ್ಲ. ರಾಜಕೀಯವೂ ಅಲ್ಲ. ನಮ್ಮ ಹೋರಾಟದ ಉದ್ದೇಶ ಮೀಸಲಾತಿ ಮಾತ್ರ’ ಎಂದರು. ‘ಪಂಚಮಸಾಲಿ ಸಮಾಜ ಹುಟ್ಟುಹಾಕಿದ್ದೆ ಮೀಸಲಾತಿ ಪಡೆಯಲು. ಹೋರಾಟದಿಂದಾಗಿ …

Read More »

ಹಿಂದೂ ಎಂಬುದು ಧರ್ಮವಲ್ಲ: ಸಿದ್ಧರಾಮಶ್ರೀ

ಬೆಳಗಾವಿ: ‘ಹಿಂದೂ ಎಂಬುದು ಧರ್ಮವಲ್ಲ, ಅದು ಜೀವನಕ್ರಮವೆಂದು ಡಾ.ಸರ್ವ‍ಪಲ್ಲಿ ರಾಧಾಕೃಷ್ಣನ್ ಅವರೇ ಹೇಳಿದ್ದಾರೆ. ಆದರೆ, ಇಂದು ವೈದಿಕ ಧರ್ಮಕ್ಕೆ ಹಿಂದೂ ಧರ್ಮ ಎನ್ನಲಾಗುತ್ತಿದೆ. ಹೀಗೆ ಉಚ್ಚರಿಸಿದರೆ ಲಿಂಗಾಯತರೇನು ಹಿಂದೂಗಳಾಗು ವುದಿಲ್ಲ’ ಎಂದು ಗದುಗಿನ ತೋಂಟದಾರ್ಯ ಮಠದ ಪೀಠಾಧಿಪತಿ ಡಾ.ತೋಂಟದ ಸಿದ್ಧರಾಮ ಸ್ವಾಮೀಜಿ ಹೇಳಿದರು.   ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ವೇದ, ಆಗಮ, ಪುರಾಣವನ್ನು ವಿರೋಧಿಸಿದ ಲಿಂಗಾಯತ ಅವೈದಿಕ ಧರ್ಮವಾಗಿದೆ. ಲಿಂಗಾಯತರು ಮತ್ತು ಹಿಂದೂಗಳ ಆಚರಣೆಯಲ್ಲಿ ಸಾಕಷ್ಟು ಭಿನ್ನಾಭಿಪ್ರಾಯ ಇವೆ’ ಎಂದರು. ‘ಹಿಂದೂಗಳು …

Read More »

ಡಿಸೆಂಬರ್ 19ರಿಂದ 29ರವರೆಗೆ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ

ಬೆಂಗಳೂರು: ವಿಧಾನ ಮಂಡಲದ ಚಳಿಗಾಲದ ಅಧಿವೇಶನವನ್ನು ಡಿ.19 ರಿಂದ 29 ರವರೆಗೆ ಬೆಳಗಾವಿಯಲ್ಲಿ ನಡೆಸಲು ಸಚಿವ ಸಂಪುಟ ಸಭೆ ತೀರ್ಮಾನಿಸಿದೆ.     ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆರೋಗ್ಯ ಸಚಿವ ಡಾ.ಕೆ.ಸುಧಾಕರ್‌ ಈ ವಿಷಯ ತಿಳಿಸಿದರು.       ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆರೋಗ್ಯ ಸಚಿವ ಡಾ.ಕೆ.ಸುಧಾಕರ್‌ ಈ ವಿಷಯ ತಿಳಿಸಿದರು. ‘ರೈತರು ಖಾಸಗಿ ಜಮೀನಿನಲ್ಲಿ ಶ್ರೀಗಂಧವನ್ನು ಬೆಳೆಸಿ ಮುಕ್ತ ಮಾರುಕಟ್ಟೆಯಲ್ಲಿ ಮಾರಾಟ ಮಾಡಲು …

Read More »

ಮತದಾರರ ಮಾಹಿತಿ ಕಳವಿಗೆ ಮುಖ್ಯಮಂತ್ರಿ ಬೊಮ್ಮಾಯಿ ಕಾರಣ: ಕಾಂಗ್ರೆಸ್‌

ಬೆಂಗಳೂರು: ‘ಖಾಸಗಿ ಸಂಸ್ಥೆಯೊಂದಕ್ಕೆ ಮತದಾರರ ಪಟ್ಟಿ ಪರಿಷ್ಕರಣೆಯ ಅನುಮತಿ ನೀಡಿ, ಮತದಾರರ ಮಾಹಿತಿ ಕಳವಿಗೆ ಬೆಂಗಳೂರು ಉಸ್ತುವಾರಿ ಹೊಂದಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕಾರಣರಾಗಿದ್ದಾರೆ’ ಎಂದು ಆರೋಪಿಸಿರುವ ಪ್ರತಿಪಕ್ಷ ಕಾಂಗ್ರೆಸ್, ‘ಮುಖ್ಯಮಂತ್ರಿ ಸ್ಥಾನಕ್ಕೆ ಅವರು ತಕ್ಷಣ ರಾಜೀನಾಮೆ ನೀಡಬೇಕು’ ಎಂದು ಆಗ್ರಹಿಸಿದೆ.   ‘ಮುಖ್ಯಮಂತ್ರಿ ವಿರುದ್ಧ ಎಫ್‌ಐಆರ್ ದಾಖಲಿಸಿ, ಬಂಧಿಸಬೇಕು. ಇಡೀ ಪ್ರಕರಣದ ಬಗ್ಗೆ ರಾಜ್ಯ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ನೇತೃತ್ವದಲ್ಲಿ ತನಿಖೆ ನಡೆಸಬೇಕು’ ಎಂದೂ ಒತ್ತಾಯಿಸಿರುವ ಕಾಂಗ್ರೆಸ್‌ …

Read More »

ಜೆಡಿಎಸ್‌: ಅಭ್ಯರ್ಥಿ ಪಟ್ಟಿ ಬಿಡುಗಡೆ ಇಂದು?

ಕೋಲಾರ: ಮುಂಬರುವ ವಿಧಾನಸಭಾ ಚುನಾವಣೆಗೆ ಸಜ್ಜಾಗಲು ಜೆಡಿಎಸ್‌ ಪಕ್ಷದ ಮಹತ್ವಾಕಾಂಕ್ಷಿ ‘ಪಂಚರತ್ನ’ ರಥಯಾತ್ರೆಯು ಜಿಲ್ಲೆಯ ಮುಳಬಾಗಿಲು ನಗರದಲ್ಲಿ ಶುಕ್ರವಾರ ಪುನರಾರಂಭವಾಗಲಿದ್ದು, ಬೃಹತ್‌ ಸಮಾವೇಶ ಆಯೋಜಿಸಲಾಗಿದೆ. ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಲಿರುವ 100 ಅಭ್ಯರ್ಥಿಗಳ ಪಟ್ಟಿಯನ್ನು ಈ ಸಮಾವೇಶದಲ್ಲಿ ಬಿಡುಗಡೆ ಬಿಡುಗಡೆ ಮಾಡುವ ಸಾಧ್ಯತೆ ಇದೆ.   ಸಂಭಾವ್ಯ ಅಭ್ಯರ್ಥಿಗಳೂ ವೇದಿಕೆಯಲ್ಲೇ ಇರುತ್ತಾರೆ ಎಂದು ಮೂಲಗಳು ತಿಳಿಸಿವೆ.

Read More »

ಪಿಎಸ್‌ಐ ನೇಮಕಾತಿ ಅಕ್ರಮ: ಮತ್ತೆ ಸಿಐಡಿ ವಶಕ್ಕೆ ಅಮ್ರಿತ್ ಪೌಲ್

ಬೆಂಗಳೂರು: ಪಿಎಸ್‌ಐ ನೇಮಕಾತಿ ಅಕ್ರಮ ಪ್ರಕರಣದ ಆರೋಪಿ, ಐಪಿಎಸ್‌ ಅಧಿಕಾರಿ ಅಮ್ರಿತ್ ಪೌಲ್ ಅವರನ್ನು ಹೆಚ್ಚಿನ ವಿಚಾರಣೆಗಾಗಿ ಬುಧವಾರ ಸಿಐಡಿ ತಂಡವು ಮತ್ತೆ ವಶಕ್ಕೆ ಪಡೆದುಕೊಂಡಿದೆ.   ಕೋರಮಂಗಲ ಪೊಲೀಸ್‌ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣ ಸಂಬಂಧ ಹೆಚ್ಚಿನ ವಿಚಾರಣೆಗೆ ನ್ಯಾಯಾಲಯದ ಅನುಮತಿ ಪಡೆದು ವಶಕ್ಕೆ ಪಡೆಯಲಾಗಿದೆ ಎಂದು ಮೂಲಗಳು ಹೇಳಿವೆ.

Read More »

36 ತಿಂಗಳು ಬಾಕಿ ವೇತನ ನೀಡಲು ಒತ್ತಾಯ

ಬೆಂಗಳೂರು: ಎಂ.ಆರ್.ಎನ್. ಶುಗರ್ಸ್‌ ಆಯಂಡ್‌ ಬಯೋಫೈನರ್ಸ್‌ ಮುಧೋಳ (ಮುರುಗೇಶ ನಿರಾಣಿ) ಅವರ ಸಂಸ್ಥೆಯಿಂದ 36 ತಿಂಗಳ ಶೇ 50ರಷ್ಟು ಬಾಕಿ ವೇತನ ಪಾವತಿಯಾಗಿಲ್ಲ ಎಂದು ಪಿ.ಎಸ್.ಎಸ್.ಕೆ ಎಂಪ್ಲಾಯೀಸ್‌ ಅಸೋಸಿಯೇಷನ್‌ ಆರೋಪಿಸಿದೆ. ‘ಸರ್ಕಾರ ಪಾಂಡವಪುರ ಸಹಕಾರ ಸಕ್ಕರೆ ಕಾರ್ಖಾನೆಯನ್ನು ಸಚಿವ ಮುರುಗೇಶ ನಿರಾಣಿ ಅವರ ಸಂಸ್ಥೆಗೆ 41 ವರ್ಷಗಳ ಗುತ್ತಿಗೆ ನೀಡಿದೆ. 2020ರಲ್ಲಿ ಸಚಿವರ ನೇತೃತ್ವದಲ್ಲಿ ನಡೆದ ಕಾರ್ಮಿಕ ಮುಖಂಡರ ಸಭೆಯಲ್ಲಿ 3 ವರ್ಷಗಳಿಂದ ಕಾರ್ಖಾನೆ ನಡೆಯದ ಕಾರಣ ನಿಮ್ಮ ವೇತನ ನೀಡಿಲ್ಲ. …

Read More »

ಅರಮನೆಯಲ್ಲಿರುವ ಗುಂಬಜ್ ಮಾದರಿ ಗೋಪುರ ಕೆಡವಲು ತಾಕತ್ ಇದೆಯೇ?: ಸಿ.ಎಂ.ಇಬ್ರಾಹಿಂ ಪ್ರಶ್ನೆ

ಮೈಸೂರು: ಟಿಪ್ಪುಸುಲ್ತಾನ್ ಬಗ್ಗೆ ಬ್ರಿಟಿಷರು ಹಾಡಿ ಹೊಗಳಿದ್ದಾರೆ. ರಾಜಮನೆತನದವರು ಟಿಪ್ಪು ಹುತಾತ್ಮರಾದ ಮೇಲೆ ಹೇಳಿರುವ ಮಾತುಗಳು ಇತಿಹಾಸದಲ್ಲಿ ದಾಖಲಾಗಿದ್ದರೂ ಸಂಸದ ಪ್ರತಾಪ್ ಸಿಂಹ ಬಾಯಿಗೆ ಬಂದಂತೆ ಮಾತನಾಡುವುದನ್ನು ಬಿಡಬೇಕು. ಟಿಪ್ಪು ಬಗ್ಗೆ ಏನು ಅರಿಯದೆ ಸುಳ್ಳು ಹೇಳುತ್ತಿದ್ದಾರೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ವಾಗ್ದಾಳಿ ನಡೆಸಿದರು.   ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಟಿಪ್ಪುಸುಲ್ತಾನ್ ಬ್ರಿಟಿಷರ ವಿರುದ್ಧ ಹೋರಾಡಿದ ಮಹಾನ್ ನಾಯಕ. ಅವರ ಕಾಲದಲ್ಲಿ ನಡೆದಿರುವ ಕ್ರಾಂತಿಕಾರಕ ಯೋಜನೆಗಳು, ಅಭಿವೃದ್ಧಿ, ಹೋರಾಡಿದನ್ನು …

Read More »

ಹೊನ್ನಾಳಿ ಶಾಸಕ ಎಂ.ಪಿ. ರೇಣುಕಾಚಾರ್ಯ ವಿರುದ್ಧ ಗ್ರಾಮ ಲೆಕ್ಕಿಗ ದೂರು

ದಾವಣಗೆರೆ: ಸಿಎಂ ರಾಜಕೀಯ ಕಾರ್ಯದರ್ಶಿ, ಹೊನ್ನಾಳಿ ಶಾಸಕ ಎಂ.ಪಿ. ರೇಣುಕಾಚಾರ್ಯ ವಿರುದ್ಧ ಸರ್ಕಾರಿ ಕೆಲಸಕ್ಕೆ ಅಡ್ಡಿಪಡಿಸಿದ ಆರೋಪದಡಿ ನ್ಯಾಮತಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನ್ಯಾಮತಿ ತಾಲೂಕಿನ ಕುಂಕುವ ವೃತ್ತದ ಗ್ರಾಮಲೆಕ್ಕಿಗ ಎಸ್‌.ಪ್ರಶಾಂತ್‌ಕುಮಾರ್‌ ಎಂಬುವವರು, ಶಾಸಕ ರೇಣುಕಾಚಾರ್ಯ ಸರ್ಕಾರಿ ಕೆಲಸಕ್ಕೆ ಅಡ್ಡಿಪಡಿಸುವ ಜತೆಗೆ ತಮ್ಮನ್ನು ಸಾರ್ವಜನಿಕವಾಗಿ ನಿಂದಿಸಿದ್ದಾರೆ, ಅವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಬೇಕೆಂದು ಕೋರಿ ದೂರು ಸಲ್ಲಿಸಿದ್ದಾರೆ.   ರೇಣುಕಾಚಾರ್ಯ ವಿರುದ್ಧ ಐಪಿಸಿ ಕಲಂ 186 ಅಡಿಯಲ್ಲಿ ದೂರು ದಾಖಲಾಗಿದೆ. ಈಚೆಗೆ …

Read More »