Breaking News

ರಾಜಕೀಯ

ಬಿಜೆಪಿ ಕಾರ್ಯಕರ್ತ ಧರ್ಮಸ್ಥಳದಲ್ಲಿ ನಿಧನ

ಬೆಳ್ತಂಗಡಿ : ಬೆಂಗಳೂರು ಉತ್ತರದ ಬಿಜೆಪಿ ಎಸ್ಟಿ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಹಾಗೂ ಬೆಂಗಳೂರಿನಲ್ಲಿ ಎರಡು ವಿದ್ಯಾಮಂದಿರದ ಮಾಲೀಕರಾಗಿರುವ ಡಾ. ನರೇಂದ್ರ ಕುಮಾರ್(45) ಧರ್ಮಸ್ಥಳದಲ್ಲಿ ನಿಧನರಾಗಿದ್ದಾರೆ. ಬೆಂಗಳೂರಿನ ಯಲಹಂಕ ಮತ್ತು ಬಂಡಿಕೊಡಿಗೆಹಳ್ಳಿಯಲ್ಲಿರುವ ಶ್ರೀ ಜ್ಞಾನಕ್ಷಿ ವಿದ್ಯಾ ಮಂದಿರದ‌ ಮಾಲೀಕ ಹಾಗೂ ಬೆಂಗಳೂರು ಉತ್ತರ ವಲಯದ ಬಿಜೆಪಿ ಎಸ್ಟಿ ಮೋರ್ಚಾದ ಪ್ರಧಾನ ಕಾರ್ಯದರ್ಶಿಯಾಗಿರುವ ಡಾ. ನರೇಂದ್ರ ಕುಮಾರ್(45) ನಿನ್ನೆ ಬೆಂಗಳೂರಿನಿಂದ ತಮ್ಮ ಶಾಲೆಯ ಶಿಕ್ಷಕಿಯರನ್ನು ಪುತ್ತೂರು ವಿವೇಕಾನಂದ ಕಾಲೇಜಿಗೆ ತರಬೇತಿಗಾಗಿ ತಮ್ಮ ಪತ್ನಿ …

Read More »

ಹಣ ಜಮಾ, ವಿತ್ ಡ್ರಾ ಗೆ ಆಧಾರ್, ಪಾನ್ ಕಡ್ಡಾಯ;

ನವದೆಹಲಿ: ಕೇಂದ್ರೀಯ ನೇರ ತೆರಿಗೆಗಳ ಮಂಡಳಿ ಹೊಸ ಅಧಿಸೂಚನೆ ಹೊರಡಿಸಿದ್ದು, 20 ಲಕ್ಷ ರೂಪಾಯಿ ಮತ್ತು ಅದಕ್ಕಿಂತ ಮೇಲ್ಪಟ್ಟು ಹೆಚ್ಚಿನ ಮೊತ್ತವನ್ನು ವಿತ್ ಡ್ರಾ ಮಾಡಲು ಅಥವಾ ಜಮಾ ಮಾಡಲು ಆಧಾರ್ ಕಾರ್ಡ್ ಇಲ್ಲವೇ ಪಾನ್ ಕಾರ್ಡ್ ಕಡ್ಡಾಯ ಮಾಡಲಾಗಿದೆ.   ಬ್ಯಾಂಕ್, ಸಹಕಾರಿ ಬ್ಯಾಂಕ್ ಅಥವಾ ಪೋಸ್ಟ್ ಆಫೀಸ್ ಗಳ ಮೂಲಕ ಆರ್ಥಿಕ ವರ್ಷದಲ್ಲಿ 20 ಲಕ್ಷ ರೂಪಾಯಿ ಅಥವಾ ಅದಕ್ಕಿಂತ ಹೆಚ್ಚಿನ ಮೊತ್ತದ ವಹಿವಾಟು ನಡೆಸುವ ವ್ಯಕ್ತಿ ಅಥವಾ …

Read More »

ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದ್ದು, ಅಕ್ರಮದ ಬಗ್ಗೆ ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥ ಆರೋಪಿಗಳಿಗೆ ಶಿಕ್ಷೆ ಕೊಡಿಸಬೇಕು

ಬೆಂಗಳೂರು: ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದ್ದು, ಅಕ್ರಮದ ಬಗ್ಗೆ ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥ ಆರೋಪಿಗಳಿಗೆ ಶಿಕ್ಷೆ ಕೊಡಿಸಬೇಕು ಎಂದು ಎಐಡಿಎಸ್‌ಒ ಸಂಘಟನೆ ಆಗ್ರಹಿಸಿದೆ. ಸ್ವಾತಂತ್ರ್ಯ ಉದ್ಯಾನವನದಲ್ಲಿ ಪ್ರತಿಭಟನೆ ನಡೆಸಿದ ಸಂಘಟನೆಯ ಕಾರ್ಯಕರ್ತರು, ಆರೋಪಿಗಳನ್ನು ಪತ್ತೆ ಹಚ್ಚಿ ಕೂಡಲೇ ಬಂಧಿಸಬೇಕೆಂದು ಒತ್ತಾಯಿಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಎಐಡಿಎಸ್‌ಒ ಮುಖಂಡ ಕಲ್ಯಾಣಕುಮಾರ್, ಇತ್ತೀಚಿಗೆ ಭೂಗೋಳಶಾಸ್ತ್ರ ವಿಷಯದ 18 ಪ್ರಶ್ನೆಗಳು ಸೋರಿಕೆಯಾಗಿದ್ದವು. ಅದರ ಬೆನ್ನಲ್ಲೇ ಇದೀಗ ಇಂಗ್ಲೀಷ್ ಮತ್ತು …

Read More »

ರೈತರ ಸಾಲ ಮನ್ನಾ ಮಾಡದೇ ಇದ್ದಿದ್ದರೆ ಎಂಟು ಸಾವಿರ ಕೋಟಿ ರೂ. ಕಮಿಷನ್ ಸಿಗುತ್ತಿತ್ತು. ಬಿಜೆಪಿ, ಕಾಂಗ್ರೆಸ್​ಗಿಂತ ಚೆನ್ನಾಗಿ ಚುನಾವಣೆ ಮಾಡಬಹುದಿತ್ತು: H.D.K.

ಬೆಂಗಳೂರು : ನಾನು 25 ಸಾವಿರ ಕೋಟಿ ರೂ. ರೈತರ ಸಾಲ ಮನ್ನಾ ಮಾಡದೇ ಇದ್ದಿದ್ದರೆ ಎಂಟು ಸಾವಿರ ಕೋಟಿ ರೂ. ಕಮಿಷನ್ ಸಿಗುತ್ತಿತ್ತು. ಬಿಜೆಪಿ, ಕಾಂಗ್ರೆಸ್​ಗಿಂತ ಚೆನ್ನಾಗಿ ಚುನಾವಣೆ ಮಾಡಬಹುದಿತ್ತು ಎಂದು 40% ಕಮಿಷನ್‌ ಕುರಿತು ಮಾಜಿ ಮುಖ್ಯಮಂತ್ರಿ ಹೆಚ್‌.ಡಿ. ಕುಮಾರಸ್ವಾಮಿ ಹೇಳಿದರು. ನಗರದ ಮಹಾಲಕ್ಷ್ಮೀ ಲೇಔಟ್​ನಲ್ಲಿ ಜನತಾ ಜಲಧಾರೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ರೈತರ ಸಾಲ ಮನ್ನಾ ಮಾಡದೇ ಇದ್ದಿದ್ದರೆ ಎಂಟು ಸಾವಿರ ಕೋಟಿ ರೂ. …

Read More »

ತಡರಾತ್ರಿ ಬೈಕ್​ನಲ್ಲಿ ಮಹಿಳೆ ಶವ ಸಾಗಿಸುವಾಗ ರಾಮನಗರ ಡಿಸಿ ಕಚೇರಿ ಎದುರೇ ಅಪಘಾತ!

ರಾಮನಗರ: ಅವರವರ ಕರ್ಮಕ್ಕೆ ತಕ್ಕ ಪ್ರತಿಫಲವನ್ನ ಅವರೇ ಅನುಭವಿಸಬೇಕು. ಕೆಲವರಿಗೆ ಕರ್ಮಫಲ ತಡವಾಗಿ ಸಿಗಬಹುದು, ಇನ್ನು ಕೆಲವರಿಗೆ ತಕ್ಷಣವೇ ಕರ್ಮಫಲ ದೊರೆಯುತ್ತದೆ ಎಂಬ ಮಾತು ಅಕ್ಷರಶಃ ಈ ಪ್ರಕರಣಕ್ಕೆ ಸಾಕ್ಷಿ. ಮಹಿಳೆಯೊಬ್ಬರನ್ನ ಕೊಲೆ ಮಾಡಿ ಶವವನ್ನು ತಡರಾತ್ರಿ ಬೈಕ್​ನಲ್ಲಿ ಶವ ಸಾಗಿಸುತ್ತಿದ್ದ ವೇಳೆ ಜಿಲ್ಲಾಧಿಕಾರಿ ಕಚೇರಿ ಎದುರೇ ಆ ಬೈಕ್​ ಅಪಘಾತಕ್ಕೀಡಾಗಿದ್ದು, ಕೊಲೆ ರಹಸ್ಯ ಬಯಲಾಗಿದೆ!   ಇಂತಹ ಭಯಾನಕ ಘಟನೆ ರಾಮನಗರದಲ್ಲಿ ಮಂಗಳವಾರ ತಡರಾತ್ರಿ ಸಂಭವಿಸಿದೆ. ಶ್ವೇತಾ ಕೊಲೆಯಾದಾಕೆ. ಬೆಂಗಳೂರಿನ …

Read More »

ವಿಜಯ್​ಗೂ ಚಮಕ್​ ಕೊಟ್ರಾ ಚರಿಷ್ಮಾ ಸುಂದರಿ?

ಹೈದರಾಬಾದ್​: ಟಾಲಿವುಡ್​ ಸೂಪರ್​ ಸ್ಟಾರ್​ ವಿಜಯ್​ ದೇವರಕೊಂಡ ನಿನ್ನೆಯಷ್ಟೇ ತಮ್ಮ ಹುಟ್ಟುಹಬ್ಬವನ್ನು ಅದ್ಧೂರಿಯಾಗಿ ಆಚರಣೆ ಮಾಡಿಕೊಂಡಿದ್ದಾರೆ. ಆದರೆ, ಸಾಮಾಜಿಕ ಜಾಲತಾಣದಲ್ಲಿ ನಟಿ ರಶ್ಮಿಕಾ ಮಂದಣ್ಣ ಭಾರೀ ಸುದ್ದಿಯಾಗಿದ್ದಾರೆ. ವಿಜಯ್​ ದೇವರಕೊಂಡ ಹುಟ್ಟುಹಬ್ಬ ಆಚರಣೆಗೂ ರಶ್ಮಿಕಾ ಸುದ್ದಿಯಾಗುವುದಕ್ಕೂ ಏನು ಸಂಬಂಧ ಅನ್ನೋ ನಿಮ್ಮ ಪ್ರಶ್ನೆಗೆ ಉತ್ತರ ಇಲ್ಲಿದೆ. ವಿಜಯ್​ ಮತ್ತು ರಶ್ಮಿಕಾ ತುಂಬಾ ಆತ್ಮೀಯರು. ಅಲ್ಲದೆ, ವಿಜಯ್ ಜತೆ ಆಗಾಗ ಹೋಟೆಲ್​ ಹಾಗೂ ಪ್ರವಾಸಿ ತಾಣಗಳಲ್ಲಿ ರಶ್ಮಿಕಾ ಕಾಣಿಸಿಕೊಳ್ಳುವ ಮೂಲಕ ಸುದ್ದಿಯಾಗುತ್ತಿದ್ದರು. ಇಬ್ಬರ …

Read More »

ಮಾಜಿ ಸಚಿವ ರಮೇಶ್ ಜರಕಿಹೊಳಿಗೆ, ಸಚಿವ ಸ್ಥಾನ ಸಿಗಲಿದೆ ಎಂದು ಬಿಜೆಪಿ ವಲಯದಲ್ಲಿ ಕೇಳಿ ಬರುತ್ತಿದೆ.

ನವದೆಹಲಿ, ಮೇ. 11: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಈ ಬಾರಿಯ ದೆಹಲಿ ಭೇಟಿ ಫಲಪ್ರದ ಕೊಡುವ ಮುನ್ಸೂಚನೆ ನೀಡಿದೆ. ಸಂಪುಟ ಪುನಾರಚನೆಗೆ ಕೇಂದ್ರ ವರಿಷ್ಠರು ಗ್ರೀನ್ ಸಿಗ್ನಲ್ ಸಿಗಲಿದ್ದು, ಹಾಲಿ ಸಚಿವರಲ್ಲಿ ನಡುಕ ಹುಟ್ಟಿಸಿದೆ. ಸಚಿವ ಸ್ಥಾನ ಅಕಾಂಕ್ಷಿಗಳಲ್ಲಿ ಸಂತಸ ಮನೆ ಮಾಡಿದೆ. ಸಂಪುಟ ಪುನಾರಚನೆಯಾದರೆ ಐವರು ಸಚಿವರು ಸಚಿವಗಿರಿ ಕಳೆದುಕೊಳ್ಳಲಿದ್ದು, ಹತ್ತು ಮಂದಿ ನೂತನ ಸಚಿವರು ಬೊಮ್ಮಾಯಿ ಕ್ಯಾಬಿನೆಟ್ ಸೇರಲಿದ್ದಾರೆ.   ಸಚಿವ ಸ್ಥಾನ ಅಲಂಕರಿಸುವವರ ಸಂಭಾವ್ಯ …

Read More »

ಮೂಡಲಗಿ ತಾಲೂಕಿನ ಸತ್ತಿಗೇರಿ ಮಡ್ಡಿಯಲ್ಲಿ ಮಸೀದಿ (Masjid) ಮೈಕ್ ಹತ್ತಿರ ಕೇಸರಿ ಧ್ವಜ

ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಸತ್ತಿಗೇರಿ ಮಡ್ಡಿಯಲ್ಲಿ ಮಸೀದಿ (Masjid) ಮೈಕ್ ಹತ್ತಿರ ಕೇಸರಿ ಧ್ವಜ ಕಟ್ಟಿದ್ದಾರೆ. ಮಂಗಳವಾರ ತಡರಾತ್ರಿ ನಡೆದ ಘಟನೆ ಇಂದು ಬೆಳಗ್ಗೆ ಬೆಳಕಿಗೆ ಬಂದಿದೆ. ರಾತ್ರಿ ಹೊತ್ತಿಗೆ ಮಸೀದಿ ಮೇಲೆ ಕೇಸರಿ ಧ್ವಜ ಕಟ್ಟಿದ್ದಾರೆ. ಹಿಂದೂ-ಮುಸ್ಲಿಂ ಮುಖಂಡರ ಸಮ್ಮುಖದಲ್ಲಿ ಗ್ರಾಮಸ್ಥರು ಧ್ವಜವನ್ನು ಇಳಿಸಿದ್ದಾರೆ. ಗ್ರಾಮದಲ್ಲಿ ಸದ್ಯ ವಾತಾವರಣ ಶಾಂತವಿದ್ದು, ಪೊಲೀಸರು ತೀವ್ರ ನಿಗಾ ವಹಿಸಿದ್ದಾರೆ. ಈ ಗ್ರಾಮದಲ್ಲಿ ಎಲ್ಲ ಸಮುದಾಯವರು ಸೇರಿ ಒಟ್ಟು 645 ಜನರು …

Read More »

ಅಂಚೆ ಇಲಾಖೆಯಿಂದ 38926 ಹುದ್ದೆಗಳಿಗೆ ಅರ್ಜಿ ಆಹ್ವಾನ

ನವದೆಹಲಿ: ಭಾರತೀಯ ಅಂಚೆ ವೃತ್ತವು ಗ್ರಾಮೀಣ ಡಾಕ್ ಸೇವಕ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆಯನ್ನು ಪ್ರಕಟಿಸಿದೆ. ಖಾಲಿ ವಿವರಗಳು ಆಸಕ್ತಿ ಹೊಂದಿರುವ ಆ ಅಭ್ಯರ್ಥಿಗಳು & ಎಲ್ಲಾ ಅರ್ಹತಾ ಮಾನದಂಡಗಳನ್ನು ಪೂರ್ಣಗೊಳಿಸಿ ಅಧಿಸೂಚನೆಯನ್ನು ಓದಬಹುದು & ಆನ್ಲೈನ್ ಅನ್ವಯಿಸಬಹುದಾಗಿದೆ.   ಅರ್ಜಿ ಶುಲ್ಕ : ಯುಆರ್ / ಒಬಿಸಿ / ಇಡಬ್ಲ್ಯೂಎಸ್ ಪುರುಷರಿಗೆ: 100 ರೂ. ಮಹಿಳಾ, ಎಸ್ಸಿ / ಎಸ್ಟಿ ಅಭ್ಯರ್ಥಿಗಳು ಮತ್ತು ವಿಕಲಚೇತನ ಅಭ್ಯರ್ಥಿಗಳು: ಶೂನ್ಯ ಪಾವತಿ ವಿಧಾನ: ಕ್ರೆಡಿಟ್ / …

Read More »

ಕಾಂಗ್ರೆಸ್ಸ ಹೊಸ ತಂತ್ರಗಾರಿಕೆ: ರಾಜ್ಯದಿಂದ ಪ್ರಿಯಾಂಕಾ ಗಾಂಧಿ ಕಣಕ್ಕೆ?

ಹೈಕಮಾಂಡ್ ಮಟ್ಟದಲ್ಲಿ ಪ್ರಬಲ ನಾಯಕರಾಗಿ ಗುರುತಿಸಿಕೊಳ್ಳಬೇಕಾದರೆ ಕಾಂಗ್ರೆಸ್ಸಿನಲ್ಲಿ ಗಾಂಧಿ/ ನೆಹರೂ ಕುಟುಂಬದ ಜೊತೆಗೆ ಉತ್ತಮ ನಂಟಿರಬೇಕು. ಇದು ಶತಮಾನಗಳ ಇತಿಹಾಸವಿರುವ ಕಾಂಗ್ರೆಸ್‌ನಲ್ಲಿರುವ ಅಲಿಖಿತ ಕಾನೂನು. ಇದೇ ವಾರಾಂತ್ಯದಲ್ಲಿ ರಾಜಸ್ಥಾನದ ಉದಯಪುರದಲ್ಲಿ ಕಾಂಗ್ರೆಸ್ ಚಿಂತನಾ ಸಭೆ ಆಯೋಜಿಸಲಾಗಿದೆ. ಮುಂಬರುವ ಚುನಾವಣೆಗಳು, ರಾಷ್ಟ್ರಾಧ್ಯಕ್ಷರ ನೇಮಕ ಮತ್ತು ಪಕ್ಷದ ಮುಂದಿನ ಕಾರ್ಯಯೋಜನೆಗಳನ್ನು ರೂಪಿಸುವ ನಿಟ್ಟಿನಲ್ಲಿ ಈ ಸಭೆ ಮಹತ್ವವನ್ನು ಪಡೆದುಕೊಂಡಿದೆ. ರಾಜ್ಯದಿಂದಲೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ …

Read More »