ಮಂಗಳೂರು: ರಾಜ್ಯದ ಎಲ್ಲ ಗ್ರಾಮ ಪಂಚಾಯತ್ಗಳ ಅಭಿವೃದ್ಧಿ ಅಧಿಕಾರಿ (ಪಿಡಿಒ)ಗಳು ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹಕ್ಕೆ ಸಿದ್ಧತೆ ಮಾಡುತ್ತಿರುವ ಹಿನ್ನೆಲೆಯಲ್ಲಿ ಕುಡಿಯುವ ನೀರು, ಬೀದಿ ದೀಪ ಸೇವೆ ಹೊರತುಪಡಿಸಿ ಉಳಿದ ಗ್ರಾಮೀಣ ಸೇವೆಗಳು ಬಹುತೇಕ ಸ್ಥಗಿತಗೊಳ್ಳುವ ಸಾಧ್ಯತೆಯಿದೆ. ನ. 2ರಿಂದ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಹಮ್ಮಿಕೊಳ್ಳಲಾಗಿರುವ ಧರಣಿ ಸತ್ಯಾಗ್ರಹದಲ್ಲಿ ದ.ಕ., ಉಡುಪಿಯಯ 311 ಪಿಡಿಒಗಳ ಸಹಿತ ರಾಜ್ಯದ 6,026 ಗ್ರಾ.ಪಂ.ಗಳ ಸುಮಾರು 5,600 ಪಿಡಿಒಗಳು ಪಾಲ್ಗೊಳ್ಳುವ ನಿರೀಕ್ಷೆಯಿದೆ. ಧರಣಿ ಕೈಗೊಳ್ಳುವ ದಿನದಿಂದ …
Read More »ಭಗತ್ ಸಿಂಗ್ ಪಾತ್ರದ ಅಭ್ಯಾಸ ಮಾಡಲು ಹೋಗಿ ಜೀವ ಕಳೆದುಕೊಂಡ 7ನೇ ತರಗತಿ ಬಾಲಕ
ಚಿತ್ರದುರ್ಗ : ಕರ್ನಾಟಕ ರಾಜ್ಯೋತ್ಸವದ ದಿನದಂದು ಭಗತ್ ಸಿಂಗ್ ಪಾತ್ರ ನಿರ್ವಹಿಸಲು ಅಭ್ಯಾಸ ನಡೆಸುತ್ತಿದ್ದ ವೇಳೆ ಅವಘಡ ಸಂಭವಿಸಿ ಏಳನೇ ತರಗತಿಯ ಬಾಲಕ ಸಾವನ್ನಪ್ಪಿದ ಘಟನೆ ನಡೆದಿದೆ. ಚಿತ್ರದುರ್ಗದ ಕೆಳಗೋಟೆ ಬಡಾವಣೆಯ ಸಂಜಯ್ ಗೌಡ(12) ಮೃತ ದುರ್ದೈವಿ. ಸಂಜಯ್ ನವೆಂಬರ್ 1 ರಂದು ಕರ್ನಾಟಕ ರಾಜ್ಯೋತ್ಸವ ದಿನದಂದು ಭಗತ್ ಸಿಂಗ್ ಪಾತ್ರ ನಿರ್ವಹಿಸಲು ನಿರ್ಧರಿಸಿದ್ದಾನೆ ಅದರಂತೆ ಶನಿವಾರ ಮನೆಯಲ್ಲಿ ಅಭ್ಯಾಸ ನಡೆಸುತ್ತಿದ್ದ ಎನ್ನಲಾಗಿದೆ. ಈ ವೇಳೆ ಮನೆಯಲ್ಲಿ ಯಾರೂ ಇರಲಿಲ್ಲ, ಮನೆಯೊಳಗೇ …
Read More »ಕನ್ನಡ ರಾಜ್ಯೋತ್ಸವ ನಿಮಿತ್ತ Team AK Creations ವತಿಯಿಂದ ಅದ್ಭುತ ವಾದ ಗೀತೆ
ಬೆಳಗಾವಿ: ಕನ್ನಡ ರಾಜ್ಯೋತ್ಸವ ಎಂದ್ರೆ ಬೆಳಗಾವಿ ಯುವಕರಿಗೆ ಹಬ್ಬದ ಕಿಂತ ಹೆಚ್ಚು ಅನೇಕ ಜನ ಅನೇಕ ರೀತಿಯಲ್ಲಿ ಆಚರಣೆ ಮಾಡುತ್ತಾರೆ. ಇಂದು ಬೆಳಗಾವಿಯ ಯುವ ತಂಡ ಒಂದು ಅದ್ಭುತವಾದ ಗೀತೆಯನ್ನು ಇದೆ ನವೆಂಬರ ಒಂದನೇ ತಾರೀಖು Team AK Creations ಎಂಬ ಯೂಟ್ಯೂಬ್ ಚಾನಲ್ ನಲ್ಲಿ ಬಿಡುಗಡೆ ಮಾಡಲಿದ್ದಾರೆ. ಕನ್ನಡದ ಬಗ್ಗೆ ಅದ್ಭುತ ವಾಗೀ ಚಿತ್ರೀಕರಣ ಹೊಂದಿದೆ ಈ ಒಂದು ಹಾಡು ಬೆಳಗಾವಿಯ ಹಾಗೂ ಬೆಂಗಳೂರಿನ ಯುವಕರು ಚಿತ್ರೀಕರಣ …
Read More »ಹಾವೇರಿ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕೊನೆಗೂ ಚಾಲನೆ : ಸಿದ್ಧತಾ ಸಭೆ ನಡೆಸಿದ ಸರ್ಕಾರ
ಬೆಂಗಳೂರು: ಹಾವೇರಿ ಜಿಲ್ಲೆಯಲ್ಲಿ ಜನವರಿ ತಿಂಗಳಲ್ಲಿ ನಡೆಯಲಿರುವ 86 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸರ್ಕಾರ ಈಗ ಅಧಿಕೃತ ಚಾಲನೆ ಲಭಿಸಿದ್ದು ಹಾವೇರಿ ಜಿಲ್ಲೆ ಉಸ್ತುವಾರಿ ಸಚಿವ ಶಿವರಾಂ ಹೆಬ್ಬಾರ್, ಕನ್ನಡ ಮತ್ತು ಸಂಸ್ಕ್ರತಿ ಸಚಿವ ವಿ.ಸುನಿಲ್ ಕುಮಾರ್ ಶನಿವಾರ ಪ್ರಗತಿ ಪರಿಶೀಲನಾ ಸಭೆ ನಡೆಸಿದರು. ಸಮ್ಮೇಳನ ನಡೆಯುವ ಸ್ಥಳ ಪರಿಶೀಲನರ ಹಾಗೂ ಪೂರ್ವಭಾವಿ ಸಭೆ ನಡೆಸಿದ ಉಭಯ ಸಚಿವರು, ಹಿಂದಿನ ಎಲ್ಲ ಸಮ್ಮೇಳನಕ್ಕಿಂತಲೂ ಯಶಸ್ವಿಯಾಗಿ …
Read More »ಎನ್ಇಪಿಯಿಂದ ಕಲಿಕಾ ಸಾಮರ್ಥ್ಯ ಹೆಚ್ಚಳ: ಸಿಎಂ ಬೊಮ್ಮಾಯಿ
ಬೆಂಗಳೂರು: ನೂತನ ಶಿಕ್ಷಣ ನೀತಿ ಮಕ್ಕಳ ಕಲಿಕಾ ಸಾಮರ್ಥ್ಯವನ್ನು ಹೆಚ್ಚಿಸುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಭಿಪ್ರಾಯಪಟ್ಟಿದ್ದಾರೆ. ನಗರದಲ್ಲಿ ಶನಿವಾರ ಆಯೋಜಿಸಲಾಗಿದ್ದ “ಶಿಕ್ಷಣದಲ್ಲಿ ನಾಯಕತ್ವಕ್ಕಾಗಿ ಅಂತಾರಾಷ್ಟ್ರೀಯ ಶೃಂಗಸಭೆ’ ಉದ್ಘಾಟಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ಉನ್ನತ ಶಿಕ್ಷಣದಿಂದ ನೂತನ ಶಿಕ್ಷಣ ನೀತಿ ಜಾರಿಗೆ ತರಲಾಗಿದ್ದು, ಈ ವರ್ಷ ಮಾಂಟೆಸರಿಯಿಂದ ಪ್ರಾರಂಭಿಸಲಾಗುತ್ತಿದೆ. ನೂತನ ಶಿಕ್ಷಣ ನೀತಿಯನ್ನು ಅನುಷ್ಠಾನಕ್ಕೆ ತಂದ ಮೊದಲ ರಾಜ್ಯ ಕರ್ನಾಟಕ. ರಾಜ್ಯದ ಮಕ್ಕಳು ಎಲ್ಲಾ ಪರಿಸ್ಥಿತಿಗಳನ್ನು ನಿಭಾಯಿಸುವ ಸಾಮರ್ಥ್ಯವನ್ನು ಬೆಳೆಸಿಕೊಂಡು ಜ್ಞಾನವಂತರಾಗಬೇಕು …
Read More »ಶಾಲಾ ಮಕ್ಕಳಿಗೆ ಡಿಜಿಟಲ್ ಆರೋಗ್ಯ ಕಾರ್ಡ್: ಡಾ| ದೊರೆಸ್ವಾಮಿ ಸಲಹೆ
ಬೆಂಗಳೂರು: ರಾಜ್ಯದ ಸರಕಾರಿ ಶಾಲಾ ಮಕ್ಕಳಿಗೆ ಡಿಜಿಟಲ್ ಆರೋಗ್ಯ ಕಾರ್ಡ್ ವಿತರಣೆ, ಮೌಲ್ಯಯುತ ಶಿಕ್ಷಣ, ವಿಶ್ವವಿದ್ಯಾನಿಲಯಗಳ ಕುಲಪತಿಗಳ ನೇಮಕಾತಿಯಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳುವಂತೆ ಶಿಕ್ಷಣ ಇಲಾಖೆಗೆ ಸಲಹೆ ನೀಡಿರುವುದಾಗಿ ಶಿಕ್ಷಣ ಸುಧಾರಣೆಗಳ ಸಲಹೆಗಾರ ಡಾ| ಎಂ.ಆರ್. ದೊರೆಸ್ವಾಮಿ ತಿಳಿಸಿದರು. ಈ ಕುರಿತು ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೊದಲ ಬಾರಿ ಶಿಕ್ಷಣ ಸುಧಾರಣೆಗಳ ಸಲಹೆಗಾರನಾಗಿದ್ದ ವೇಳೆ 18 ಶಿಫಾರಸುಗಳನ್ನು ನೀಡಿದ್ದೆ. ಈ ಪೈಕಿ ಕೆಲವು ಅನುಷ್ಠಾನವಾಗಿವೆ. 2ನೇ ಬಾರಿಗೆ ಸಲಹೆಗಾರನಾಗಿ ಆಯ್ಕೆಯಾದ …
Read More »ಕನ್ನಡದ ಅಸ್ಮಿತೆಯನ್ನು ಮತ್ತಷ್ಟು ಗಟ್ಟಿಗೊಳಿಸುವ ಕಾನೂನು ಜಾರಿಯಾಗಲಿ
ಕನ್ನಡ, ಕನ್ನಡಿಗ ಮತ್ತು ಕರ್ನಾಟಕ ವಿಷಯದಲ್ಲಿ ಕನ್ನಡ ಭಾಷೆ ಸಮಗ್ರ ಅಭಿವೃದ್ದಿ ಮಸೂದೆ 2022 ಸಿದ್ಧ ವಾಗಿದ್ದು, ಈ ಬಗ್ಗೆ ಸಾರ್ವಜನಿಕ ಚರ್ಚೆ ಆರಂಭವಾಗಿದೆ. ಕನ್ನಡ ಅಭಿವೃದ್ದಿ ಪ್ರಾಧಿ ಕಾರ 2021ರಲ್ಲಿ ರೂಪಿಸಿದ ಮಸೂದೆಯನ್ನು ಕರ್ನಾಟಕ ಕಾನೂನು ಆಯೋಗಕ್ಕೆ ಕಳಿಸಿ ಸೂಕ್ತ ಸಲಹೆ ಪಡೆದು ಈಗ ಕರಡು ರೀತಿಯಲ್ಲಿ ಅಣಿಯಾಗಿದೆ. ಈಗಾಗಲೇ ಸದನಲ್ಲಿ ಮಂಡನೆಯಾಗಿರುವ “ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಮಸೂದೆ-2022’ರಲ್ಲಿದ್ದ ದಂಡ ವಿಚಾರ, ಜಾರಿ ನಿರ್ದೇಶನ ವ್ಯವಸ್ಥೆ ಅಂಶಗಳಲ್ಲಿ …
Read More »ಈ ವರ್ಷವೂ ಕನ್ನಡಮ್ಮನ ಜಾತ್ರೆಗೆ ಬರುವ ಕನ್ನಡಮ್ಮನ ಕಂದಮ್ಮಗಳಿಗೆ ಭರ್ಜರಿ ಹೋಳಿಗೆ ಊಟ ಸಿದ್ಧ: ಚಂದ್ರಶೇಖರ ಶಿವಾಚಾರ್ಯ ಮಹಾಸ್ವಾಮಿಗಳು
ಕರ್ನಾಟಕ ರಾಜ್ಯೋತ್ಸವಕ್ಕೆ ಕುಂದಾನಗರಿ ಬೆಳಗಾವಿಯಲ್ಲಿ ಭರದ ಸಿದ್ಧತೆ ನಡೆದಿದೆ. ಬೆಳಗಾವಿಯಲ್ಲಿ ರಾಜ್ಯೋತ್ಸವ ಜೊತೆಗೆ ನೆನಪಾಗೋದು ಹಿರೇಮಠದ ಹೋಳಿಗೆ ಊಟ. ಈ ವರ್ಷವೂ ಕನ್ನಡಮ್ಮನ ಜಾತ್ರೆಗೆ ಬರುವ ಕನ್ನಡಮ್ಮನ ಕಂದಮ್ಮಗಳಿಗೆ ಭರ್ಜರಿ ಹೋಳಿಗೆ ಊಟ ಸಿದ್ಧಗೊಳ್ಳುತ್ತಿದೆ. ಹೌದು ಹೌದು ಕರ್ನಾಟಕ ರಾಜ್ಯೋತ್ಸವದ ದಿನ ತಾಯಿ ಭುವನೇಶ್ವರಿಯ ತೇರು ಎಳೆಯಲು ಲಕ್ಷಾಂತರ ಕನ್ನಡಿಗರ ಸಮಾಗಮ ಬೆಳಗಾವಿಯಲ್ಲಿ ಆಗುತ್ತದೆ. ನಾಡಿನ ಮೂಲೆ ಮೂಲೆಯಿಂದ ಕನ್ನಡಿಗರು ಬೆಳಗಾವಿಗೆ ಬರುತ್ತಾರೆ. ಹೀಗೆ ಬರುವ ಕನ್ನಡಿಗರಿಗೆ ಹುಕ್ಕೇರಿಯ ಹಿರೇಮಠದ …
Read More »499 ಭಾಗ್ಯಲಕ್ಷ್ಮೀ ಫಲಾನುಭವಿಗಳಿಗೆ ಸುಕನ್ಯಾ ಸಮೃದ್ಧಿ ಪಾಸಬುಕ್ ಶಾಸಕ ಶ್ರೀಮಂತ ಪಾಟೀಲರು ವಿತರಿಸಿದರು.
ಕಾಗವಾಡ ತಾಲ್ಲೂಕಿನ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ತಾಲೂಕಾಡಳಿತ ಶಿಶು ಅಭಿವೃದ್ಧಿ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ 499 ಭಾಗ್ಯಲಕ್ಷ್ಮೀ ಫಲಾನುಭವಿಗಳಿಗೆ ಸುಕನ್ಯಾ ಸಮೃದ್ಧಿ ಪಾಸಬುಕ್ ಶಾಸಕ ಶ್ರೀಮಂತ ಪಾಟೀಲರು ವಿತರಿಸಿದರು. ಭಾನುವಾರದಂದು ಫರೀದಖಾನವಾಡಿ ಗ್ರಾಮದ ಕಟಿಗೇರಿ ಸಭಾ ಭವನದಲ್ಲಿ ಸುಕನ್ಯಾ ಸಮೃದ್ಧಿ ಪಾಸಬುಕ್ ವಿತರಣಾ ಕಾರ್ಯಕ್ರಮ ನೆರವೇರಿತು. ಕಾಗವಾಡ ತಾಲ್ಲೂಕಿನ ಎಲ್ಲ ಅಂಗನವಾಡಿ ಕಾರ್ಯಕರ್ತರು ಹಾಗೂ ಭಾಗ್ಯಲಕ್ಷ್ಮೀ ಫಲಾನುಭವಿಗಳು ಪಾಲ್ಗೊಂಡಿದ್ದರು. ಸುಕನ್ಯಾ ಯೋಜನೆಯ ಪಾಸಬುಕ್ ವಿತರಿಸಿ ಶಾಸಕ …
Read More »ಆಪರೇಷನ್ ಕಮಲದ ವಿರುದ್ಧ ಸುಪ್ರೀಂ ಕೋರ್ಟ್ ಕ್ರಮ ಕೈಗೊಳ್ಳಬೇಕು: ಡಿಕೆ ಶಿವಕುಮಾರ್
ಶಿವಮೊಗ್ಗ: ಆಪರೇಷನ್ ಕಮಲದ ವಿರುದ್ಧ ಸುಪ್ರೀಂ ಕೋರ್ಟ್ ನ ನ್ಯಾಯಾಧೀಶರು ಕ್ರಮ ತೆಗೆದುಕೊಳ್ಳಬೇಕು. ಪ್ರಜಾಪ್ರಭುತ್ವದಲ್ಲಿ ಇದಕ್ಕೊಂದು ಕೊನೆ ಕಾಣಿಸಬೇಕು. ಸುಪ್ರೀಂ ಕೋರ್ಟ್ ನ ಮುಖ್ಯ ನ್ಯಾಯಮೂರ್ತಿಗಳೇ ಸೋಮೋಟೊ ಪ್ರಕರಣ ದಾಖಲಿಸಿಕೊಳ್ಳಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ವಾಗ್ದಾಳಿ ನಡೆಸಿದರು. ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಸರ್ಕಾರ ಹುಟ್ಟಿರುವುದೇ ಭ್ರಷ್ಟಾಚಾರದಿಂದ, ಆಪರೇಷನ್ ಲೋಟಸ್ ನಿಂದ. ತೆಲಂಗಾಣದಲ್ಲಿ ಆಪರೇಷನ್ ಕಮಲ ನಡೆದಿದೆ, ರೆಡ್ ಹ್ಯಾಂಡ್ ಆಗಿ ಕೋಟಿ ಕೋಟಿ …
Read More »
Laxmi News 24×7