Breaking News

ರಾಜಕೀಯ

ಅಕ್ಟೋಬರ್‌ 28 ರಂದು ವಿನೂತನ ಕೋಟಿ ಕಂಠ ಗಾಯನ: ಸಚಿವ ಸುನಿಲ್‌ ಕುಮಾರ್

ಬೆಂಗಳೂರು: ರಾಜ್ಯದ ಸಾಂಸ್ಕೃತಿಕ ಲೋಕದಲ್ಲೇ ವಿನೂತನವಾದ ಕೋಟಿ ಕಂಠ ಗಾಯನ ಎಂಬ ಕಾರ್ಯಕ್ರಮವನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದು ಅಕ್ಟೋಬರ್‌ 28ರಂದು ನಾಡಿನಾದ್ಯಂತ ಏಕಕಾಲದಲ್ಲಿ ಕನ್ನಡದ ಕವಿಗಳ ಜನಪ್ರಿಯ ಗೀತೆಗಳನ್ನು ಕೋಟಿ ಕಂಠಗಳಲ್ಲಿ ಪ್ರಸ್ತುತಪಡಿಸಲಾಗುತ್ತದೆ ಎಂದು ಕನ್ನಡ ಮತ್ತು ಸಂಸ್ಕ್ರತಿ ಹಾಗೂ ಇಂಧನ ಸಚಿವ ವಿ.ಸುನಿಲ್ ಕುಮಾರ್ ತಿಳಿಸಿದ್ದಾರೆ.   ಕಳೆದ ವರ್ಷ ‘ಮಾತಾಡ್‌ ಮಾತಾಡ್‌ ಕನ್ನಡ’ ಎಂಬ ಘೋಷವಾಕ್ಯದೊಂದಿಗೆ ಆಯೋಜಿಸಿದ್ದ ‘ಲಕ್ಷಕಂಠ ಗಾಯನ’ಕ್ಕೆ ಈಗಾಗಲೇ ನಾಡಿನಾದ್ಯಂತ …

Read More »

ಲೋಕಾರ್ಪಣೆಗೊಂಡು ವಾರದ ಒಳಗೆ ವಂದೇ ಭಾರತ್ ಎಕ್ಸ್‌ಪ್ರೆಸ್‌ ರೈಲಿಗೆ ಹಾನಿ

ಗಾಂಧಿನಗರ : ಸೆಪ್ಟೆಂಬರ್ 30 ರಂದು ಲೋಕಾರ್ಪಣೆ ಗೊಳಿಸಲಾಗಿದ್ದ ಮುಂಬಯಿ ಸೆಂಟ್ರಲ್-ಗಾಂಧಿನಗರ ವಂದೇ ಭಾರತ್ ಎಕ್ಸ್‌ಪ್ರೆಸ್‌ ರೈಲಿಗೆ ಸಣ್ಣ ಪ್ರಮಾಣದ ಹಾನಿಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ರೈಲ್ರೋಡ್ ವಕ್ತಾರರ ಪ್ರಕಾರ, ಗೈರತ್‌ಪುರ ಮತ್ತು ವತ್ವಾ ನಿಲ್ದಾಣಗಳ ನಡುವೆ ಗುರುವಾರ ಬೆಳಗ್ಗೆ 11.20ರ ಸುಮಾರಿಗೆ ಈ ಘಟನೆ ನಡೆದಿದೆ. ಎಮ್ಮೆಗಳ ಹಿಂಡು ಢಿಕ್ಕಿಯಾದ ನಂತರ, ಇಂಜಿನ್ ನ ಮುಂಭಾಗಕ್ಕೆ ಹಾನಿಯಾಗಿದೆ. “ಮೂರರಿಂದ ನಾಲ್ಕು ಎಮ್ಮೆಗಳು ಮುಂಬಯಿ -ಗಾಂಧಿನಗರದ ವಂದೇ ಭಾರತ್ ದಾರಿಯಲ್ಲಿ ಇದ್ದಕ್ಕಿದ್ದಂತೆ …

Read More »

ಹುಬ್ಬಳ್ಳಿಯನ್ನು ಮಿನಿ ಪಾಕಿಸ್ತಾನ ಮಾಡಲು ಹೊರಟಿದ್ರು: ಚೈತ್ರ ಕುಂದಾಪುರ

ಧಾರವಾಡ : ಹುಬ್ಬಳ್ಳಿಯಲ್ಲಿ ಮಿನಿ ಪಾಕಿಸ್ತಾನ ಮಾಡಲು ಹೊರಟಿದ್ದರು. ರಾಜ್ಯದಲ್ಲಿ ಕೆಲವು ಕಡೆ ಮಿನಿ ಪಾಕಿಸ್ತಾನ ಮಾಡುವುದನ್ನು ತಡೆಯಲು ಆಗಲಿಲ್ಲ. ಆದರೆ ಹುಬ್ಬಳ್ಳಿಯಲ್ಲಿನ ಮೈದಾನವನ್ನು ರಾಣಿ ಚನ್ನಮ್ಮ ಮೈದಾನ ಎಂದು ಪರಿವರ್ತನೆ ಮಾಡಬಹುದಾದರೆ, ಅದಕ್ಕೆ ಗಂಡು ಮೆಟ್ಟಿದ ನಾಡಿನ ಗುಂಡಿಗೆ ಬೇಕಾಗುತ್ತದೆ ಎಂದು ಹಿಂದೂಪರ ಹೋರಾಟಗಾರ್ತಿ ಚೈತ್ರಾ ಕುಂದಾಪುರ ಹೇಳಿದ್ದಾರೆ. ದಸರಾ ಹಬ್ಬದ ಹಿನ್ನೆಲೆ ನಂದಗೋಕುಲ ಸೇವಾ ಸಂಸ್ಥೆಯಿಂದ ಆಯೋಜಸಿದ ರಾವಣ ದಹನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ರಾಮ ನಮ್ಮ …

Read More »

ನದಿಗೆ ಹಾರಿ ಆತ್ಮಹತ್ಯೆಗೆ ವೃದ್ಧೆ ಯತ್ನ; ಪ್ರಾಣದ ಹಂಗು ತೊರೆದು ಅಜ್ಜಿ ರಕ್ಷಿಸಿದ ಯುವಕ

ಬೆಳಗಾವಿ: ಮಲಪ್ರಭ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದ ವೃದ್ಧೆಯನ್ನು ರಕ್ಷಿಸುವ ಮೂಲಕ ಯುವಕ ಸಾಹಸ ಮೆರೆದಿರುವ ಘಟನೆ ಬೆಳಗಾವಿ ಜಿಲ್ಲೆಯ ಖಾನಾಪುರ ‌ತಾಲೂಕಿನ ಪಾರಿಶ್ವಾಡ ಗ್ರಾಮದಲ್ಲಿ ನಡೆದಿದೆ. ಖಾನಾಪುರ ‌ತಾಲೂಕಿನ ಬಸಾಪುರ ಗ್ರಾಮದ ಬಾಳಮ್ಮ‌ ನಾವಳಗಿ (90) ಆತ್ಮಹತ್ಯೆಗೆ ಯತ್ನಿಸಿದ್ದರು. ವೃದ್ಧೆ ನದಿಗೆ ಹಾರಿದ್ದನ್ನು ಯುವಕ ಗಮನಿಸಿದ್ದಾನೆ. ತಕ್ಷಣವೇ ಪ್ರಾಣದ ಹಂಗು ತೊರೆದು ನದಿಗೆ ಹಾರಿ ರಕ್ಷಣೆ ಮಾಡಿದ್ದಾನೆ. ಪಾರಿಶ್ವಾಡ ಗ್ರಾಮದ ಐಜಾಜ್ ಮಾರಿಹಾಳ ವೃದ್ಧೆ ರಕ್ಷಿಸಿದ ಯುವಕ ಎಂಬುದು ತಿಳಿದು …

Read More »

ಗಂಗಾವತಿಯಲ್ಲಿ ಜೋಡಿ ಚಿರತೆ ಪತ್ತೆ..

ಗಂಗಾವತಿ: ಬುಧವಾರವಷ್ಟೇ ಬಸವನದುರ್ಗಾ ಕಡೆಬಾಗಿಲು ಬಳಿ ಕಂಡು ಬಂದಿದ್ದ ಜೋಡಿ ಚಿರತೆಗಳು ಗುರುವಾರ ಮತ್ತೆ ತಾಲೂಕಿನ ಬಸವನದುರ್ಗಾ ಗೂಗಿಬಂಡೆ ಪ್ರದೇಶದಲ್ಲಿ ಪ್ರತ್ಯಕ್ಷವಾಗಿದ್ದು, ಜನರಲ್ಲಿ ತೀವ್ರ ಆತಂಕಕ್ಕೆ ಕಾರಣವಾಗಿದೆ. ಇವು ನಿನ್ನೆ(ಬುಧವಾರ) ಕಂಡಿದ್ದ ಚಿರತೆಗಳಾ ಅಥವಾ ಬೇರೆ ಚಿರತೆಗಳೆ? ಎಂಬ ಪ್ರಶ್ನೆ ಜನರಲ್ಲಿ ಮೂಡಿದೆ. ಕಳೆದ ಒಂದು ವಾರದಿಂದ ನಿರಂತರ ಈ ಭಾಗದಲ್ಲಿ ಚಿರತೆಗಳು ಸಾರ್ವಜನಿಕರಿಗೆ ಕಾಣಿಸಿಕೊಳ್ಳುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಸಾರ್ವಜನಿಕರಲ್ಲಿ ಅಸಮಾಧಾನ: ಕಳೆದ ಹಲವು ದಿನಗಳಿಂದ ಚಿರತೆಗಳು ಜನವಸತಿ ಸನಿಹದಲ್ಲಿ ಕಾಣಿಸಿಕೊಳ್ಳುತ್ತಿದ್ದು, ಈ …

Read More »

ಅದ್ದೂರಿಯಾಗಿ ನೆನವೆರಿತು ಬೀಷ್ಠಾದೇವಿ ಜಾತ್ರಾ ಮಹೋತ್ಸವ..!!

ಬೆಳಗಾವಿ :   ವಿಜಯದಶಮಿ ದಿನ ಬೆಳಗಾವಿಯ ಬುರುಡ ಗಲ್ಲಿಯಲ್ಲಿ ಆಯೋಸಿದ್ದ ಭಿಷ್ಠಾದೇವಿ ಜಾತ್ರಾ ಮಹೋತ್ಸವ ವಿಜೃಂಭಣೆಯಿಂದ ನೆರವೆರಿತು.ಸಾವಿರಾರು ಭಕ್ತರು ಜಾತ್ರಾ ಮಹೋತ್ಸವದಲ್ಲಿ ಭಾಗವಹಿಸಿ ದೇವಿಯ ಕೃಪೆಗೆ ಪಾತ್ರರಾದರು.    ಬೆಳಗಾವಿ ನಗರದಲ್ಲೇ ಅತಿ ವಿಜೃಂಭಣೆಯಿಂದ ಆಚರಿಸುವ ಶ್ರೀ ಭಿಷ್ಠಾದೇವಿ ದಸರಾ ಜಾತ್ರಾ ಮಹೋತ್ಸವ ವಿಜೃಂಭಣೆಯಿಂದ ನೆರವೇರಿತು.ಕೋರೊನಾ ಕಾಲದಲ್ಲಿ ಸರಳವಾಗಿ ಆಚರಿಸಲ್ಪಟ್ಟಿದ್ದರಿಂದ ಈ ವರ್ಷ ಅದ್ದೂರಿಯಾಗಿ ಜಾತ್ರಾ ಮಹೋತ್ಸವ ಕೈಗೊಳ್ಳಲಾಗಿತ್ತು.ನವರಾತ್ರಿ ದಿನ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನೆರವೆರಿಸಿ ವಿಜಯದಶಮಿ ದಿನ ಮಹಾಪೂಜೆ …

Read More »

ಡಿವೋರ್ಸ್‌ ವಾಪಸ್:‌ ದಾಂಪತ್ಯ ಜೀವನ ಮುಂದುವರೆಸಲು ನಟ ಧನುಷ್ & ಐಶ್ವರ್ಯಾ ರಜನಿಕಾಂತ್ ನಿರ್ಧಾರ!

ಚೆನ್ನೈ: ಸುಮಾರು ಒಂಬತ್ತು ತಿಂಗಳ ಹಿಂದೆ ಬೇರ್ಪಟ್ಟ ಖ್ಯಾತ ತಮಿಳು ನಟ ಧನುಷ್(Dhanush) ಮತ್ತು ಐಶ್ವರ್ಯಾ ರಜನಿಕಾಂತ್(Aishwaryaa Rajinikanth) ತಮ್ಮ ವಿಚ್ಛೇದನವನ್ನು ರದ್ದುಗೊಳಿಸಲು ನಿರ್ಧರಿಸಿದ್ದಾರೆ ಎಂದು ವರದಿಯಾಗಿದೆ. ಧನುಷ್ ಹಾಗೂ ಐಶ್ವರ್ಯಾ ಒಟ್ಟಿಗೆ ಇರಲು ಅವರನ್ನು ಮನವೊಲಿಸಲು ಅವರ ಕುಟುಂಬಗಳು ಪ್ರಯತ್ನಿಸುತ್ತಿದ್ದಾರೆ ಎನ್ನಲಾಗಿದೆ. ಆದ್ರೆ, ಈ ಬಗ್ಗೆ ಧನುಷ್ ಅಥವಾ ಐಶ್ವರ್ಯ ಕಡೆಯಿಂದ ಯಾವುದೇ ಅಧಿಕೃತ ಮಾಹಿತಿ ಬಹಿರಂಗವಾಗಿಲ್ಲ. ಸೂಪರ್‌ಸ್ಟಾರ್ ರಜನಿಕಾಂತ್ ಅವರ ಮಗಳು ಐಶ್ವರ್ಯ ಅವರು 2004 ರಲ್ಲಿ …

Read More »

B.S.Y.ಇಲ್ಲ ಅಂದ್ರೆ ಬಿಜೆಪಿ ಇಲ್ಲ: ಚೆಲುವರಾಯಸ್ವಾಮಿ

ಮಂಡ್ಯ: ಬಿಜೆಪಿಯಲ್ಲಿ ನೂರು ಬಾಗಿಲು, ನಮ್ಮಲ್ಲಿ ಒಂದೇ ಬಾಗಿಲು. ಯಡಿಯೂರಪ್ಪ ಇಲ್ಲ ಅಂದ್ರೆ ಬಿಜೆಪಿ ಇಲ್ಲ. ಅಧಿಕಾರದ ದರ್ಪದಲ್ಲಿ ಬಿಜೆಪಿಯವ್ರು ಮಾತಾಡುತ್ತಿದ್ದಾರೆ ಅಷ್ಟೇ ಎಂದು ಮಾಜಿ ಸಂಸದ ಚೆಲುವರಾಯಸ್ವಾಮಿ ತಿರುಗೇಟು ನೀಡಿದ್ದಾರೆ.     ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭಾರತ್ ಜೋಡೋ ಯಾತ್ರೆ ಉತ್ಸಾಹದಿಂದ ಸಾಗುತ್ತಿದೆ. ಸೋನಿಯಾ ಗಾಂಧಿ ಯವರು ಭಾಗವಹಿಸ್ತಿರೋದು ನಮಗೆಲ್ಲ ಹೆಮ್ಮೆ. ಅಧಿಕಾರಕ್ಕಿಂತ ಹೆಚ್ಚಾಗಿ ಪ್ರಜಾಪ್ರಭುತ್ವ ಗಟ್ಟಿ ಮಾಡಲು ರಾಹುಲ್ ಗಾಂಧಿ ಈ ಯಾತ್ರೆ ಮಾಡುತ್ತಿದ್ದಾರೆ ಎಂದರು.

Read More »

ಸರ್ಕಾರ, ಪೊಲೀಸರು, ಸೈನಿಕರಿಂದ ಮಾತ್ರ ಹಿಂದೂ ಧರ್ಮದ ರಕ್ಷಣೆ ಸಾಧ್ಯವಿಲ್ಲ.:ಗೋಪಾಲ್ ನಾಗರಕಟ್ಟೆ

ಬೆಳಗಾವಿ: ಸರ್ಕಾರ, ಪೊಲೀಸರು, ಸೈನಿಕರಿಂದ ಮಾತ್ರ ಹಿಂದೂ ಧರ್ಮದ ರಕ್ಷಣೆ ಸಾಧ್ಯವಿಲ್ಲ. ಹಿಂದೂ ಸಮಾಜದಲ್ಲಿ ಪರಾಕ್ರಮ ಜಾಗೃತಗೊಳಿಸಬೇಕಿದೆ ಎಂದು ವಿಹೆಚ್‌ಪಿ ಮುಖಂಡ, ಅಯೋಧ್ಯೆ ರಾಮಮಂದಿರ ನಿರ್ಮಾಣದ ಉಸ್ತುವಾರಿ ಗೋಪಾಲ್ ನಾಗರಕಟ್ಟೆ ಹೇಳಿದರು. ನಗರದಲ್ಲಿ ಆಯುಧ ಪೂಜೆ ಕಾರ್ಯಕ್ರಮದಲ್ಲಿ ಭಾಗಿಯಾಗಿ ಬಳಿಕ ಮಾತನಾಡಿದ ಅವರು, ನಮ್ಮ ದೇಶದಲ್ಲಿ ಪರಾಕ್ರಮ ಮುಖ್ಯವಾಗಿದೆ. ನಾವು ಪರಾಕ್ರಮ ಆರಾಧನೆ ಮಾಡಿದ್ದೇವೆ. ಕೆಲವು ವರ್ಷಗಳ ಕಾಲ ಕೆಲವರು ಶಾಂತಿ – ಶಾಂತಿ ಎಂದು ಹೇಳಿದರು. ಸದ್ಯ ದೇಶದಲ್ಲಿ …

Read More »

ಶುಕ್ರವಾರ ರಾಜ್ಯ ಬಿಜೆಪಿ ಕಾರ್ಯಕಾರಿಣಿ: ಸಿಎಂ ರಾಜ್ಯ ಪ್ರವಾಸಕ್ಕೆ ನಿಗದಿಯಾಗುವುದೇ ಮುಹೂರ್ತ?

ಬೆಂಗಳೂರು : ದಸರಾ ಮುಕ್ತಾಯದ ಬೆನ್ನಲ್ಲೇ ಸಾಲು ಸಾಲು ರಾಜಕೀಯ ಚಟುವಟಿಕೆಗಳು ಗರಿಗೆದರುವುದಕ್ಕೆ ರಾಜ್ಯ ಬಿಜೆಪಿಯಲ್ಲಿ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಶುಕ್ರವಾರ ಬೆಂಗಳೂರಿನಲ್ಲಿ ನಡೆಯುವ ಕಾರ್ಯಕಾರಿಣಿಯಲ್ಲಿ ದಿನಾಂಕ ನಿಗದಿಯಾಗಲಿದೆ.   ಕಾರ್ಯಕಾರಿಣಿ ಸಭೆಯಲ್ಲಿ ಭಾಗವಹಿಸುವುದಕ್ಕಾಗಿ ಗುರುವಾರ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಆಗಮಿಸಲಿದ್ದು, ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಷಿ, ಶೋಭಾ ಕರಂದ್ಲಾಜೆ, ಸಿಎಂ ಬಸವರಾಜ್ ಬೊಮ್ಮಾಯಿ, ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಮುಂಚೂಣಿ ನಾಯಕರು ಭಾಗಿಯಾಗಲಿದ್ದಾರೆ. ಈ ಸಭೆಯಲ್ಲಿ …

Read More »