ಮೈಸೂರು: ಎಫ್ ಡಿ ಎ ಕೆಲಸ ಕೊಡಿಸುವುದಾಗಿ ಹೇಳಿ ಹಣ ಪಡೆದು ವಂಚಿಸಿದ್ದ ಲೇಡಿ ಪಿ ಎಸ್ ಐ ಅಶ್ವಿನಿಯನ್ನು ಅಮಾನತುಗೊಳಿಸಿ ಮೈಸೂರು ನಗರ ಪೊಲೀಸ್ ಆಯುಕ್ತ ಡಾ.ಚಂದ್ರಗುಪ್ತ ಆದೇಶ ಹೊರಡಿಸಿದ್ದಾರೆ. ಮೈಸೂರಿನ ನರಸಿಂಹರಾಜ ಸಂಚಾರಿ ಪೊಲೀಸ್ ಠಾಣೆ ಪಿಎಸ್‌ಐ ಆಗಿರುವ ಅಶ್ವಿನಿ ಅನಂತಪುರ 2020ರಲ್ಲಿ ನಡೆದ ಎಫ್ ಡಿ ಎ ಪರೀಕ್ಷೆಯಲ್ಲಿ ಆಯ್ಕೆ ಮಾಡಿಸುವುದಾಗಿ ಹೇಳಿ ಬಾಗಲಕೋಟೆ ಜಿಲ್ಲೆಯ ಚಿಕ್ಕಲಗಿ ಗ್ರಾಮದ ಬಸವರಾಜ್ ಝಳಕಿ ಎಂಬುವರಿಂದ ಹಣ ಪಡೆದು ವಂಚಿಸಿದ್ದರು. …
Read More »ರೆ ಒತ್ತುವರಿ ಬಗ್ಗೆ ಸದನದಲ್ಲಿ ಕಾವೇರಿದ ಚರ್ಚೆ; ಯಾರ್ಯಾರು ಎಷ್ಟು ಕೆರೆ ನುಂಗಿದ್ದಾರೆ ಎಂದು ಹೇಳಿ; ಕಂದಾಯ ಸಚಿವರಿಗೆ ಯತ್ನಾಳ್ ತಾಕೀತು;
ಬೆಂಗಳೂರು: ಬೆಂಗಳೂರಿನಲ್ಲಿ ಪ್ರವಾಹ ಪರಿಸ್ಥಿತಿ, ಅತಿವೃಷ್ಟಿ ಪರಿಹಾರ ಕುರಿತು ವಿವರಿಸುವಂತೆ ಸ್ಪೀಕರ್ ಕಾಗೇರಿ ಕಂದಾಯ ಸಚಿವ ಆರ್. ಅಶೋಕ್ ಅವರಿಗೆ ಸೂಚಿಸುತ್ತಿದ್ದಂತೆ ವಿಧಾನಸಭೆಯಲ್ಲಿ ಕೆರೆ ಒತ್ತುವರಿ ಕುರಿತು ಕಾವೇರಿದ ಚರ್ಚೆ ನಡೆಯಿತು. ಬೆಂಗಳೂರಿನಲ್ಲಿ ಪ್ರವಾಹ ಪರಿಸ್ಥಿತಿಗೆ ಬಿಜೆಪಿ ಸರ್ಕಾರವೇ ನೇರ ಹೊಣೆ. ಒತ್ತುವರಿ ತೆರವು ಸಮರ್ಪಕವಾಗಿ ಮಾಡಿಲ್ಲ ಎಂದು ಕಾಂಗ್ರೆಸ್ ಸದಸ್ಯ ಕೆ.ಜೆ. ಜಾರ್ಜ್ ಕಿಡಿಕಾರಿದರು. ಕಾಂಗ್ರೆಸ್ ನಾಯಕರ ಅವಧಿಯಲ್ಲಿಯೇ ಕೆರೆಗಳು ಒತ್ತುವರಿಯಾಗಿವೆ ಎಂದು ಬಿಜೆಪಿ ಸದಸ್ಯರು ಆರೋಪಿಸುತ್ತಿದ್ದಂತೆ ಮತ್ತೆ …
Read More »ದೇವೇಗೌಡರನ್ನು ನೋಡ್ತಿದ್ದಂತೆ ಕೈಮುಗಿದು ಹೇಗೀದ್ದೀರಿ ಸರ್ ಎಂದ್ರು ಸಿದ್ಧರಾಮಯ್ಯ: 6 ವರ್ಷಗಳ ನಂತ್ರ ಗುರು -ಶಿಷ್ಯರ ಭೇಟಿ
ಬೆಂಗಳೂರು: ಜೆಡಿಎಸ್ ವರಿಷ್ಠರಾದ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರನ್ನು ಭೇಟಿಯಾದ ವಿಧಾನಸಭೆ ವಿಪಕ್ಷ ನಾಯಕ ಸಿದ್ಧರಾಮಯ್ಯ ಆರೋಗ್ಯ ವಿಚಾರಿಸಿದ್ದಾರೆ. ಬೆಂಗಳೂರಿನ ಪದ್ಮನಾಭನಗರದ ದೇವೇಗೌಡರ ನಿವಾಸಕ್ಕೆ ತೆರಳಿದ ಸಿದ್ದರಾಮಯ್ಯ, ದೇವೇಗೌಡರನ್ನು ನೋಡುತ್ತಿದ್ದಂತೆ ಕೈಮುಗಿದು ಹೇಗಿದ್ದೀರಿ ಸರ್ ಎಂದು ಆರೋಗ್ಯ ವಿಚಾರಿಸಿದ್ದಾರೆ. ವಿಧಾನಮಂಡಲ ಕಲಾಪ ಮುಗಿದ ನಂತರ ಸಿದ್ದರಾಮಯ್ಯ ಅವರು ಶಾಸಕರಾದ ಜಮೀರ್ ಅಹಮದ್, ಭೈರತಿ ಸುರೇಶ್ ಮೊದಲಾದವರ ಜೊತೆಗೆ ದೇವೇಗೌಡರ ನಿವಾಸಕ್ಕೆ ತೆರಳಿ ಆರೋಗ್ಯ ವಿಚಾರಿಸಿದ್ದಾರೆ. ಆರು ವರ್ಷಗಳ ನಂತರ ಸಿದ್ದರಾಮಯ್ಯ, …
Read More »ಫಾರೆಸ್ಟ್ ರೇಂಜರ್ ಆಫೀಸರ್’ ಗೆ ಹಿಗ್ಗಾಮುಗ್ಗಾ ಹೊಡೆದ ಜನ ಯಾಕೆ ಗೊತ್ತಾ..?
ಬಳ್ಳಾರಿ : ನಕಲಿ ಪೊಲೀಸ್ ಎಂದು ಡೆಪ್ಯೂಟಿ ಫಾರೆಸ್ಟ್ ರೇಂಜರ್ ಆಫೀಸರ್ ಮೇಲೆ ಸಾರ್ವಜನಿಕರು ಹಲ್ಲೆ ನಡೆಸಿದ ಘಟನೆ ನಗರದ ವಿಮ್ಸ್ ಆಸ್ಪತ್ರೆ ಸಮೀಪದ ರೇಣುಕಾ ಹೋಟೆಲ್ ಬಳಿ ನಡೆದಿದೆ. ಡೆಪ್ಯೂಟಿ ಫಾರೆಸ್ಟ್ ರೇಂಜರ್ ಕೆಂಚಪ್ಪ ಅವರ ಮೇಲೆ ಸಾರ್ವಜನಿಕರು ಹಲ್ಲೆ ನಡೆಸಿದ್ದು, ಪೊಲೀಸರ ಸೋಗಿನಲ್ಲಿ ಹಣ ವಸೂಲಿ ಮಾಡುತ್ತಿದ್ದಾರೆ ಎಂದು ಆರೋಪಿಸಿ ಹಲ್ಲೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ. ಹೋಟೆಲ್ ಹಾಗೂ ಅಂಗಡಿಗಳಲ್ಲಿ ಕೆಂಚಪ್ಪ ಹಣ ವಸೂಲಿ …
Read More »ಡಿಕೆಶಿಗೆ ಶಾಕ್ ಮೇಲೆ ಶಾಕ್! ಇ.ಡಿ ಕಚೇರಿಗೆ ಕಾಲಿಡುತ್ತಲೇ ಸುಪ್ರೀಂನಿಂದ ಮತ್ತೊಂದು ಆದೇಶ
ನವದೆಹಲಿ: ಅಕ್ರಮ ಆಸ್ತಿ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ಎದುರಿಸಲು ದೆಹಲಿಯಲ್ಲಿರುವ ಜಾರಿ ನಿರ್ದೇಶನಾಲಯದ (ಇಡಿ) ಕಚೇರಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಜರಾಗುತ್ತಿದ್ದಂತೆಯೇ ಅತ್ತ ಕಡೆ ಸುಪ್ರೀಂಕೋರ್ಟ್ ಮತ್ತೊಂದು ಶಾಕ್ ನೀಡಿದೆ. ಹಣದ ಅಕ್ರಮ ವಹಿವಾಟಿಗೆ ಸಂಬಂಧಿಸಿದಂತೆ ಆದಾಯ ತೆರಿಗೆ ಇಲಾಖೆ (ಐಟಿ) ಡಿಕೆಶಿ ವಿರುದ್ಧ ದಾಖಲಿಸಿದ್ದ ಪ್ರಕರಣವನ್ನು ರದ್ದು ಮಾಡಿದ್ದ ಕರ್ನಾಟಕ ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ ನೀಡಿದೆ. 2017ರಲ್ಲಿ ಬಿಡದಿಯ ಈಗಲ್ಟನ್ ರೆಸಾರ್ಟ್ ಮೇಲೆ ದಾಳಿ ನಡೆಸಿದ್ದ ಆದಾಯ …
Read More »ಪೋಕ್ಸೋ ಪ್ರಕರಣ : ‘ಮುರುಘಾಶ್ರೀ’ ಜಾಮೀನು ಅರ್ಜಿ ವಿಚಾರಣೆ ಸೆ.23 ಕ್ಕೆ ಮುಂದೂಡಿಕೆ
ಚಿತ್ರದುರ್ಗ: ಪೋಕ್ಸೊ ಪ್ರಕರಣದಡಿ (POCSO) ಬಂಧನಕ್ಕೊಳಗಾಗಿರುವ ಮುರುಘಾ ಶ್ರೀಗಳ (murugha shri) ಜಾಮೀನು ಅರ್ಜಿ ವಿಚಾರಣೆಯನ್ನು ಸೆ.23 ಕ್ಕೆ ಮುಂದೂಡಿ ನ್ಯಾಯಾಲಯ ಆದೇಶ ಹೊರಡಿಸಿದೆ. ಅಪ್ರಾಪ್ತರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪದ ಮೇಲೆ ಜೈಲು ಪಾಲಾಗಿರುವ ಚಿತ್ರದುರ್ಗ ಮುರುಘಾ ಮಠದ ಶಿವಮೂರ್ತಿ ಶರಣರು ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಈ ಕುರಿತು ಚಿತ್ರದುರ್ಗ 2 ನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯವು ಜಾಮೀನು ಅರ್ಜಿ ವಿಚಾರಣೆ ನಡೆಸಿದ್ದು, ಇದೀಗ ಅರ್ಜಿ ವಿಚಾರಣೆಯನ್ನು ಸೆ.23 ಕ್ಕೆ ಮುಂದೂಡಿ ಆದೇಶ ಹೊರಡಿಸಿದೆ. ಅಪ್ರಾಪ್ತ …
Read More »ಸಂವಿಧಾನ ಬದಲಿಸುವುದೇ ಆರ್‌ಎಸ್‌ಎಸ್ ಉದ್ದೇಶ: ಪ್ರಕಾಶ್ ಅಂಬೇಡ್ಕರ್
ಧಾರವಾಡ: ಬಿಜೆಪಿಗೆ (BJP) ಸಹಾಯ ಮಾಡುವ ರಾಜಕಾರಣವನ್ನು ಕಾಂಗ್ರೆಸ್ (Congress) ಮಾಡುತ್ತಿದೆ ಎಂದು ಬಿ.ಆರ್. ಅಂಬೇಡ್ಕರ್ (BR Ambedkar) ಮೊಮ್ಮಗ ಪ್ರಕಾಶ್ ಅಂಬೇಡ್ಕರ್ (Prakash Ambedkar) ಆರೋಪಿಸಿದರು. ಧಾರವಾಡದಲ್ಲಿ ಮಾತನಾಡಿದ ಅವರು, ವಿಚಾರ ಮಾಡುವ ರಾಜಕಾರಣ ಕಾಂಗ್ರೆಸ್‌ನಲ್ಲಿ ಇಲ್ಲವೇ ಇಲ್ಲ. ಕಾಂಗ್ರೆಸ್ ದಾರಿ ತಪ್ಪಿಸುವ ರಾಜಕೀಯ ಮಾಡುತ್ತಿದೆ. ಇದರ ಜೊತೆಗೆ ಬಿಜೆಪಿಗೆ ಸಹಾಯ ಮಾಡುವ ರಾಜಕಾರಣವನ್ನು ಕಾಂಗ್ರೆಸ್ ಮಾಡುತ್ತಿದೆ. ಅದಕ್ಕಾಗಿ ಬಿಜೆಪಿಯ ಧೈರ್ಯ ಬೆಳೆಯುತ್ತಿದೆ, ಅದರಿಂದ ಸಂವಿಧಾನ ಬದಲಾವಣೆ ಬಗ್ಗೆ ಅವರು …
Read More »ಚಿರತೆಗಳ ಪುನರ್ವಸತಿ ರಾಜಕೀಯ! 8 ಚಿರತೆಗಳ ಹೆಸರು ಹೇಳಿದ ಮಲ್ಲಿಕಾರ್ಜುನ್ ಖರ್ಗೆ
ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಜನ್ಮದಿನದಂದು (ಸೆಪ್ಟೆಂಬರ್ 17) ನಮೀಬಿಯಾದಿಂದ ತಂದ 8 ಚಿರತೆಗಳನ್ನು ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ಬಿಡುಗಡೆಗೊಳಿಸಿದ್ದಾರೆ. ಈ ಚಿರತೆಗಳ ಆಗಮನದಿಂದ ದೇಶದಲ್ಲಿ ಒಂದೆಡೆ ಸಂತಸದ ವಾತಾವರಣ ಇದ್ದರೆ, ಮತ್ತೊಂದೆಡೆ ರಾಜಕೀಯವೂ ಶುರುವಾಗಿದೆ. ಮೊದಲಿಗೆ ಈ ಚಿರತೆಗಳನ್ನು ಭಾರತಕ್ಕೆ ತರಲು ಕಾಂಗ್ರೆಸ್ ತನ್ನ ಹಕ್ಕು ಮಂಡಿಸಿತ್ತು ಮತ್ತು ಇದೀಗ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ 8 ಚಿರತೆಗಳ ನೆಪ ಮಾಡಿಕೊಂಡು ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. …
Read More »ಅಕ್ರಮ ಹಣ ವರ್ಗಾವಣೆ ಕೇಸ್; ಇ.ಡಿ ಕಚೇರಿಗೆ ಹಾಜರಾದ ಡಿಕೆ
ಬೆಂಗಳೂರು: ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಸಮನ್ಸ್ ನೀಡಿರುವ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ದೆಹಲಿಯಲ್ಲಿದ್ದಾರೆ. ಇಂದು 12 ಗಂಟೆ ಸುಮಾರಿಗೆ ಇ.ಡಿ.ಕಚೇರಿಗೆ ಹಾಜರಾಗಿದ್ದಾರೆ. ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಡಿ.ಕೆ.ಶಿವಕುಮಾರ್ಗೆ ಇ.ಡಿ ಅಧಿಕಾರಿಗಳು ಬುಲಾವ್ ನೀಡಿದ್ದಾರೆ. ಅಕ್ರಮ ಆಸ್ತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿದ್ದ ಇ.ಡಿ, ಈಗಾಗಲೇ ವಿಚಾರಣೆ ನಡೆಸಿ ನ್ಯಾಯಾಲಯಕ್ಕೆ ಚಾರ್ಜ್ಶೀಟ್ ಸಲ್ಲಿಕೆ ಮಾಡಿದೆ. ನ್ಯಾಯಾಲಯದಲ್ಲಿ ಇದರ ವಿಚಾರಣೆ ಕೂಡ ಪ್ರಗತಿಯಲ್ಲಿದೆ. ಈ ನಡುವೆ ಜಾರಿ ನಿರ್ದೇಶನಾಲಯ ಹೆಚ್ಚುವರಿಯಾಗಿ …
Read More »ಮಹಿಳಾ ಪೇದೆ ಹತ್ಯೆ ಕೇಸ್; ಒಬ್ಬನಿಗಾಗಿ ಇಬ್ಬರ ಫೈಟ್-ಲೇಡಿ ಕಾನ್ಸ್‌ಟೇಬಲ್ ಸ್ಫೋಟಕ ಲವ್ ಕಹಾನಿ..
ತುಮಕೂರು: ಕರ್ತವ್ಯಕ್ಕೆ ತೆರಳಿದ್ದ ಮಹಿಳಾ ಪೊಲೀಸ್ ಪೇದೆ ನಾಪತ್ತೆ ಪ್ರಕರಣ ದಿನಕ್ಕೊಂದು ಟ್ವಿಸ್ಟ್ ಪಡೆದುಕೊಳ್ಳುತ್ತಿದೆ. ಪ್ರಕಣರದ ವಿಚಾರಣೆ ಮುಂದುವರೆಸಿರುವ ಪೊಲೀಸರು, ಮತ್ತೊಬ್ಬ ಮಹಿಳಾ ಕಾನ್ಸ್‌ಟೇಬಲ್ ಸೇರಿದಂತೆ ಇಬ್ಬರನ್ನು ಬಂಧಿಸಿದ್ದಾರೆ. ಏನಿದು ಪ್ರಕರಣ..? ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಹುಳಿಯಾರ್ ಪೊಲೀಸ್ ಠಾಣೆಯ ಪೊಲೀಸ್ ಕಾನ್ಸ್‌ಟೇಬಲ್ ಆಗಿ ಕರ್ತವ್ಯನಿರ್ವಹಿಸುತ್ತಿದ್ದ ಸುಧಾ (39) ಕೆಲವು ದಿನಗಳ ಹಿಂದೆ ನಾಪತ್ತೆಯಾಗಿದ್ದರು. ನಾಪತ್ತೆ ದೂರು ದಾಖಲಿಸಿಕೊಂಡು ತನಿಖೆ ಕೈಗೆತ್ತಿಕೊಂಡ ಪೊಲೀಸರಿಗೆ ನಾಪತ್ತೆಯಾಗಿದ್ದ ಸುಧಾ ಅವರ ಮೃತದೇಹ …
Read More »
Laxmi News 24×7