Breaking News

ರಾಜಕೀಯ

ಇಂದಿರಾ ಕ್ಯಾಂಟೀನ್‌ಗಳಿಗೆ ಅನುದಾನ ಕಡಿತ: ಸರ್ಕಾರಕ್ಕೆ ಸಿದ್ದರಾಮಯ್ಯ ತರಾಟೆ

ಬೆಂಗಳೂರು: ಇಂದಿರಾ ಕ್ಯಾಂಟೀನ್‌ಗಳಿಗೆ ಅನುದಾನ ಕಡಿತಗೊಳಿಸಿರುವ ವಿಚಾರಕ್ಕೆ ಸಂಬಂಂಧಿಸಿ ರಾಜ್ಯ ಸರ್ಕಾರದ ವಿರುದ್ಧ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.   ಇಂದಿರಾ ಕ್ಯಾಂಟೀನ್‌ ವಿಚಾರಕ್ಕೆ ಸಂಬಂಧಿಸಿ ಸರಣಿ ಟ್ವೀಟ್ ಮಾಡಿರುವ ಅವರು, ‘ನಮ್ಮ ಸರ್ಕಾರ ಪ್ರಾರಂಭಿಸಿದ್ದ ಇಂದಿರಾ ಕ್ಯಾಂಟೀನ್‌ಗಳಿಗೆ ಅನುದಾನ ನೀಡದೆ ಬಿಜೆಪಿ ಸರ್ಕಾರ ಬಡವರ ಹೊಟ್ಟೆಗೆ ಹೊಡೆಯಲು ಹೊರಟಿದೆ’ ಎಂದು ಕಿಡಿಕಾರಿದ್ದಾರೆ. ಇಂದಿರಾ ಕ್ಯಾಂಟೀನ್‌ಗಳಿಗೆ 2017-2018, 2018-19ರಲ್ಲಿ ಕ್ರಮವಾಗಿ ₹100 ಮತ್ತು ₹145 ಕೋಟಿ ಅನುದಾನ …

Read More »

2013-17ರಲ್ಲೂ ಪಿಎಸ್‌ಐ ನೇಮಕಾತಿ ಅಕ್ರಮ: ಬಿಜೆಪಿ

ಬೆಂಗಳೂರು: 2013ರಲ್ಲಿ ನಡೆದ ಪಿಎಸ್‌ಐ ಮತ್ತು ಶಿಕ್ಷಕರ ನೇಮಕಾತಿಯಲ್ಲಿ ಅಕ್ರಮ ನಡೆದಿದ್ದು, ಇದರ ಬಗ್ಗೆ ಮಾಹಿತಿ ಕಲೆಹಾಕಿದ್ದು, ಅವುಗಳ ತನಿಖೆ ನಡೆಸಲಾಗುವುದು ಎಂದು ಬಿಜೆಪಿ ರಾಜ್ಯ ವಕ್ತಾರ ಹಾಗೂ ಶಾಸಕ ಪಿ.ರಾಜೀವ್‌ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘2013 ರಲ್ಲಿ ಶಿಕ್ಷಕರ ನೇಮಕಾತಿ ಅಧಿಸೂಚನೆ ಹೊರಡಿಸಲಾಗಿತ್ತು. ಆದರೆ ಪರೀಕ್ಷೆಯನ್ನೇ ಬರೆಯದ ಹಲವರಿಗೆ ನೇಮಕಾತಿ ಆದೇಶ ನೀಡಲಾಗಿದೆ. ಅಂಥವರು ಕರ್ತವ್ಯಕ್ಕೂ ಹಾಜರಾಗಿದ್ದಾರೆ. ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು ಇದರ ಸುಳಿವು ಪಡೆದು ವರದಿ …

Read More »

ಮಾತೇ ಇಲ್ಲ , ಕಥೆ ಇನ್ನೆಲ್ಲಿ? ಜತೆಯಾಗಿ ನಿಂತರೂ ಮಾತನಾಡದ ಮೋದಿ, ಕ್ಸಿ ಜಿನ್‌ಪಿಂಗ್‌

ಹೊಸದಿಲ್ಲಿ/ಸಮರಖಂಡ್‌: ಲಡಾಖ್‌ ಮತ್ತು ಗಾಲ್ವಾನ್‌ ಘರ್ಷಣೆ ಬಳಿಕ ಭಾರತ ಮತ್ತು ಚೀನ ನಡುವಿನ ಸಂಬಂಧ ತೀರಾ ಎನ್ನುವಷ್ಟರ ಮಟ್ಟಿಗೆ ಹಳಸಿದ್ದು, ಇದು ಉಜ್ಬೇಕಿಸ್ಥಾನದ ಸಮರಖಂಡ್‌ನ‌ಲ್ಲೂ ವ್ಯಕ್ತವಾಯಿತು. ವಿಶೇಷವೆಂದರೆ, 2 ದಿನಗಳ ಶಾಂಘೈ ಸಹಕಾರ ಸಭೆಯ ನೆನಪಿನ ಗ್ರೂಪ್‌ ಫೋಟೋಗಾಗಿ ಪ್ರಧಾನಿ ನರೇಂದ್ರ ಮೋದಿ ಮತ್ತು ಚೀನ ಅಧ್ಯಕ್ಷ ಕ್ಸಿ ಜಿನ್‌ಪಿಂಗ್‌ ಜತೆಯಲ್ಲೇ ನಿಂತರೂ ಒಂದೂ ಮಾತನಾಡಲಿಲ್ಲ.   ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ, ರಷ್ಯಾ ಅಧ್ಯಕ್ಷ ವ್ಲಾದಿಮಿರ್‌ ಪುತಿನ್‌, ಚೀನ …

Read More »

ಕಲ್ಯಾಣ ಕರ್ನಾಟಕ’ ವಿಮೋಚನೆಗಿಂದು 75 ವರ್ಷ : ಅಮೃತಮಹೋತ್ಸವ ಕಾರ್ಯಕ್ರಮಗಳಿಗೆ ಸಿಎಂ ಬೊಮ್ಮಾಯಿ ಚಾಲನೆ

ಕಲಬುರಗಿ : ನಿಜಾಮರ ಆಡಳಿತದಿಂದ ಕಲ್ಯಾಣ ಕರ್ನಾಟಕದ ಜಿಲ್ಲೆಗಳು ವಿಮೋಚನೆ ಆಗಿ ಇಂದಿಗೆ 74 ವರ್ಷಗಳು ಪೂರ್ಣಗೊಳ್ಳಲಿದೆ. ಈ ಹಿನ್ನೆಲೆಯಲ್ಲಿ ಒಂದು ವರ್ಷ ನಡೆಯಲಿರುವ ಅಮೃತಮಹೋತ್ಸವದ ಕಾರ್ಯಕ್ರಮಗಳಿಗೆ ಸಿಎಂ ಬಸವರಾಜ ಬೊಮ್ಮಾಯಿ ಅವರು ಕಲಬುರಗಿಯಲ್ಲಿ ಚಾಲನೆ ನೀಡಲಿದ್ದಾರೆ.   ರಾಜ್ಯಸಭೆಯ ವಿರೋಧ ಪಕ್ಷದ ನಾಯಕರು ಹಾಗೂ ರಾಜ್ಯಸಭಾ ಸದಸ್ಯ ಡಾ. ಮಲ್ಲಿಕಾರ್ಜುನ ಖರ್ಗೆ, ನವೀಕರಿಸಬಹುದಾದ ಇಂಧನ ಮೂಲ, ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಕೇಂದ್ರ ಸರ್ಕಾರದ ರಾಜ್ಯ ಸಚಿವರು ಹಾಗೂ …

Read More »

ಸತೀಶ್​ ಜಾರಕಿಹೊಳಿ ಹೆಸರಿನಲ್ಲಿ ವಿವಾದಾತ್ಮಕ ಪೋಸ್ಟ್​ವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಈ ಕುರಿತು ಕರ್ನಾಟಕ ವಾಲ್ಮೀಕಿ ಯುವ ವೇದಿಕೆ ರಾಜ್ಯಾಧ್ಯಕ್ಷ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಬೆಳಗಾವಿ: ಕೆಪಿಸಿಸಿ ಕಾರ್ಯಾಧ್ಯಕ್ಷ, ಯಮಕನಮರಡಿ ಕ್ಷೇತ್ರದ ಶಾಸಕ ಸತೀಶ ಜಾರಕಿಹೊಳಿ ಅವರ ಹೆಸರಿನಲ್ಲಿ ಸಾಮಾಜಿಕ ಜಾಲತಾಣದಲ್ಲಿ ವಿವಾದಾತ್ಮಕ ಪೋಸ್ಟ್ ಹಾಕಿದ್ದವರ ವಿರುದ್ಧ ಬೆಳಗಾವಿ ಸೈಬರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ. ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೆಸರಿನಲ್ಲಿ ಸಾಮಾಜಿಕ ಜಾಲತಾಣದಲ್ಲಿ ‘ಬ್ರಾಹ್ಮಣವಾದ’ ರಾಮ ಮಂದಿರ ಹೋರಾಟದಲ್ಲಿ ಸತ್ತ ಹೆಚ್ಚಿನವರು ಒಬಿಸಿಗಳು, ಒಬ್ಬನೇ ಒಬ್ಬ ಬ್ರಾಹ್ಮಣ ಸಾಯಲಿಲ್ಲ. ಆದರೆ, ಈಗ ಮಂದಿರದ ಟ್ರಸ್ಟ್‌ನ ಪದಾಧಿಕಾರಿಗಳೆಲ್ಲ ಬ್ರಾಹ್ಮಣರು, ಒಬ್ಬನು ಒಬಿಸಿ ಇಲ್ಲ ಎಂದು ಸಾಮಾಜಿಕ …

Read More »

ಪ್ರಧಾನಿ ಮೋದಿʼ ಹುಟ್ಟುಹಬ್ಬ:‌ ನಾಳೆ ಜನಿಸಿದ ಪ್ರತಿ ಮಗುವಿಗೆ ʻಚಿನ್ನದ ಉಂಗುರ & 720 ಕೆಜಿ ಮೀನುʼ ಗಿಫ್ಟ್!. ಎಲ್ಲಿ ಗೊತ್ತಾ?

ತಮಿಳುನಾಡು : ತಮಿಳುನಾಡಿನ ಭಾರತೀಯ ಜನತಾ ಪಕ್ಷ(ಬಿಜೆಪಿ)ದ ಘಟಕವು ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನವಾದ ಸೆಪ್ಟೆಂಬರ್ 17 (ನಾಳೆ)ರಂದು ಜನಿಸಿದ ಪ್ರತಿ ಮಗುವಿಗೆ ಚಿನ್ನದ ಉಂಗುರವನ್ನು ನೀಡುವುದಾಗಿ ಘೋಷಿಸಿದೆ. ಅಷ್ಟೇ ಅಲ್ಲದೇ, 720 ಕೆಜಿ ಮೀನುಗಳನ್ನು ಸಹ ವಿತರಿಸಲಾಗುತ್ತದೆ.   ಈ ಯೋಜನೆಗಾಗಿ ಪಕ್ಷವು ಆರ್‌ಎಸ್‌ಆರ್‌ಎಂ ಆಸ್ಪತ್ರೆಯನ್ನು ಆಯ್ಕೆ ಮಾಡಿದೆ ಎಂದು ರಾಜ್ಯದ ಸಚಿವ ಎಲ್ ಮುರುಗನ್ ಮಾಹಿತಿ ನೀಡಿದ್ದಾರೆ. ಅವರ ಪ್ರಕಾರ, ಪ್ರತಿ ಉಂಗುರವು 2 ಗ್ರಾಂ …

Read More »

ವಾಹನ ಸವಾರರೇ ಎಚ್ಚರ.! ಮತ್ತೆ ಶುರುವಾಗಲಿದೆ ʼಟೋಯಿಂಗ್ʼ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಎಲ್ಲೆಂದರಲ್ಲಿ ವಾಹನ ನಿಲ್ಲಿಸುವ ಸವಾರರು ಸ್ವಲ್ಪ ಎಚ್ಚರದಿಂದ ಇರಬೇಕಾದ ಅಗತ್ಯವಿದೆ. ಸಿಲಿಕಾನ್ ಸಿಟಿಯಲ್ಲಿ ಮತ್ತೆ ಟೋಯಿಂಗ್ ಆರಂಭವಾಗುವ ಬಗ್ಗೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಸುಳಿವು ನೀಡಿದ್ದಾರೆ.   ಬೆಂಗಳೂರಿನಲ್ಲಿ ವೆಹಿಕಲ್ ಟೋಯಿಂಗ್ ಅಗತ್ಯವಿದೆ. ಯಾವ ರೀತಿಯಲ್ಲಿ ಟೋಯಿಂಗ್ ಮಾಡಬೇಕು ಎಂಬ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ. ಈ ಬಗ್ಗೆ ಶೀಘ್ರದಲ್ಲಿ ನಿರ್ಧಾರ ಕೈಗೊಳ್ಳಲಾಗುತ್ತದೆ. ಹೈಕೋರ್ಟ್ ಕೂಡ ಕಾಲಾವಕಾಶ ನೀಡಿತ್ತು ಎಂದು ತಿಳಿಸಿದ್ದಾರೆ. ಟೋಯಿಂಗ್ …

Read More »

ಸಿದ್ದರಾಮೋತ್ಸವದಲ್ಲಿ ಮಿಸ್ಸಿಂಗ್​ ಆಗಿದ್ದ ಜಮಖಂಡಿ ವ್ಯಕ್ತಿ ಹುಬ್ಬಳ್ಳಿಯಲ್ಲಿ ಕೊನೆಗೂ ಪತ್ತೆ! ನಿಜವಾಯ್ತು ಸಿದ್ದು ‘ಭವಿಷ್ಯ’

ಬಾಗಲಕೋಟೆ: ಸಿದ್ದರಾಮೋತ್ಸವಕ್ಕೆ ತೆರಳಿ ನಾಪತ್ತೆಯಾಗಿದ್ದ ಬಾಗಲಕೋಟೆಯ ಗಿರಿಮಲ್ಲ ಖಂಡೇಕರ್ ಎಂಬುವವರು ಕೊನೆಗೂ ಒಂದೂವರೆ ತಿಂಗಳ ಬಳಿಕ ಕೊನೆಗೂ ಪತ್ತೆಯಾಗಿದ್ದಾರೆ. ಜಮಖಂಡಿ ತಾಲೂಕಿನ ಅಡಿಹುಡಿ ಗ್ರಾಮದ ನಿವಾಸಿ ಗಿರಿಮಲ್ಲ ಖಂಡೇಕರ್ ಹುಬ್ಬಳ್ಳಿಯಲ್ಲಿ ಪತ್ತೆಯಾಗಿದ್ದಾರೆ. ಕಳೆದ ಅಗಸ್ಟ್​ 2 ರಂದು ಗ್ರಾಮಸ್ಥರ ಜತೆಗೆ ಇವರು ದಾವಣಗೆರೆಯಲ್ಲಿ ನಡೆದ ಸಿದ್ದರಾಮೋತ್ಸವ ಕಾರ್ಯಕ್ರಮಕ್ಕೆ ತೆರಳಿದ್ದರು. ಆದರೆ ಮನೆಗೆ ವಾಪಸಾಗಿರಲಿಲ್ಲ. ಅಡಿಹುಡಿ ಗ್ರಾಮದಿಂದ ಬಸ್ ಮೂಲಕ 50 ಜನ ತೆರಳಿದ್ದ ಇವರು ವಾಪಸಾಗದೇ ಮನೆಯವರೆಲ್ಲರೂ ಚಿಂತೆಗೀಡಾಗಿದ್ದರು. ‘ದುಡ್ಡಿನ ಆಮಿಷ …

Read More »

ಹೊಸ ಮೊಬೈಲ್ ಬ್ಯಾಂಕಿಂಗ್ ವೈರಸ್ ನಿಮ್ಮ ಖಾತೆಯಲ್ಲಿರುವ ಹಣವನ್ನು ಖಾಲಿ ಮಾಡಲಿದೆ

ನವದೆಹಲಿ: ಹೊಸ ಸೋವಾ ಆಂಡ್ರಾಯ್ಡ್ ಟ್ರೋಜನ್ ಮೂಲಕ ಬ್ಯಾಂಕ್ ಗ್ರಾಹಕರನ್ನು ಗುರಿಯಾಗಿಸಲಾಗುತ್ತಿದೆ ಅಂತ ಸಿಇಆರ್ಟಿ-ಇನ್ ಇಂಡಿಯನ್ ಕಂಪ್ಯೂಟರ್ ಎಮರ್ಜೆನ್ಸಿ ರೆಸ್ಪಾನ್ಸ್ ಟೀಮ್) ಅಂತ ಹೇಳಿದೆ. ಗ್ರಾಹಕರನ್ನು ಗುರಿಯಾಗಿಸಿಕೊಂಡಿರುವ ಈ ಮೊಬೈಲ್ ಬ್ಯಾಂಕಿಂಗ್ ಟ್ರೋಜನ್ ವೈರಸ್ ಸೋವಾ ಒಂದು ರಾನ್ಸಮ್ವೇರ್ ಆಗಿದೆ ಎನ್ನಲಾಗಿದೆ. ಇದು ಆಂಡ್ರಾಯ್ಡ್ ಫೋನ್ ಫೈಲ್ಗಳನ್ನು ಹಾನಿಗೊಳಿಸುತ್ತದೆ ಮತ್ತು ಅಂತಿಮವಾಗಿ ಸಂಬಂಧಿಸಿದ ವ್ಯಕ್ತಿಯು ಆರ್ಥಿಕ ವಂಚನೆಗೆ ಬಲಿಯಾಗಬಹುದು ಎನ್ನಲಾಗಿದೆ ಈ ವೈರಸ್‌ ಒಮ್ಮೆ ಮೊಬೈಲ್ ಗೆ ಬಂದಾಗ, ಅದನ್ನು …

Read More »

ರಾಜ್ಯದಲ್ಲಿ ‘ಬುಲ್ಡೋಜರ್’ ಕಾರ್ಯಾಚರಣೆ ಇಲ್ಲ: ಅರಗ ಜ್ಞಾನೇಂದ್ರ

ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ಕೇಳಿ ಬರುತ್ತಿದ್ದ ಬುಲ್ಡೋಜರ್ ಕಾರ್ಯಾಚರಣೆ ಕುರಿತು ಗೃಹ ಸಚಿವ ಅರಗ ಜ್ಞಾನೇಂದ್ರ ಸ್ಪಷ್ಟನೆ ನೀಡಿದ್ದಾರೆ. ಕೋಮು ಗಲಭೆಗಳಲ್ಲಿ ಪಾಲ್ಗೊಂಡವರ ಅಕ್ರಮ ಆಸ್ತಿ ನೆಲಸಮಗೊಳಿಸುವ ಯಾವುದೇ ಪ್ರಸ್ತಾವನೆ ಇಲ್ಲ ಎಂದಿದ್ದಾರೆ. ವಿಧಾನ ಪರಿಷತ್ ನಲ್ಲಿ ಈ ಕುರಿತು ಮಾಹಿತಿ ನೀಡಿದ ಅವರು, ರಾಜ್ಯದಲ್ಲಿ ಕೋಮು ಗಲಭೆಗಳ ತಡೆಗೆ ಸರ್ಕಾರ ಹಲವು ಕ್ರಮಗಳನ್ನು ಕೈಗೊಂಡಿದೆ. ಸೂಕ್ಷ್ಮ ಪ್ರದೇಶಗಳಲ್ಲಿ ಸಿಸಿ ಟಿವಿ ಅಳವಡಿಕೆ, ಗಲಭೆಕೋರರ ಗಡಿಪಾರು ಜೊತೆಗೆ ವಿವಿಧ …

Read More »