Breaking News

ರಾಜಕೀಯ

ಮುರುಘಾ ಶ್ರೀ ಬಗ್ಗೆ ನನಗೆ ಗೌರವ ಕಡಿಮೆ ಆಗಿಲ್ಲ: ಈಶ್ವರಪ್ಪ

ಶಿವಮೊಗ್ಗ: ಮುರುಘಾ ಶ್ರೀ ಬಗ್ಗೆ ನನಗೆ ಗೌರವ ಕಡಿಮೆ ಆಗಿಲ್ಲ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ. ಶಿವಮೊಗ್ಗದಲ್ಲಿ ಮಾಧ್ಯಮದವರೊಂದಿಗೆ ಮುರುಘಾ ಶ್ರೀ ಬಂಧನ ವಿಚಾರವಾಗಿ ಮಾತನಾಡಿದ ಅವರು, ಮಠದ ಸ್ವಾಮಿಗಳು ಅಂದರೆ ನನಗೆ ದೇವರಿದ್ದಂತೆ. ಮುರುಘಾ ಶ್ರೀ ಬಗ್ಗೆ ನನಗೆ ಗೌರವ ಕಡಿಮೆ ಆಗಿಲ್ಲ. ತನಿಖೆ ನಡೆಯುತ್ತಿದೆ ಸತ್ಯವೋ ಸುಳ್ಳೋ ಹೊರಗೆ ಬರಲಿ. ಮಠ, ಮಂದಿರ, ಭಕ್ತಿ, ಜಾಗೃತಿ ಉಂಟು ಮಾಡುತ್ತದೆ ಎಂದಿದ್ದಾರೆ.    

Read More »

ದಲಿತ ಬಾಲಕಿಯರು ಬಡಿಸಿದ ಊಟವನ್ನು ಬಿಸಾಡಿ ಎಂದ ಅಡುಗೆಯವ – ಬಂಧನ

ಜೈಪುರ: ರಾಜಸ್ಥಾನದ ಉದಯಪುರ ಜಿಲ್ಲೆಯ ಸರ್ಕಾರಿ ಶಾಲೆಯೊಂದರಲ್ಲಿ ಇಬ್ಬರು ದಲಿತ ಬಾಲಕಿಯರಿಗೆ ತಾರತಮ್ಯ ಮಾಡಿದ ಆರೋಪದ ಮೇಲೆ ಅಡುಗೆಯವನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ. ಶುಕ್ರವಾರ ಬರೋಡಿ ಪ್ರದೇಶದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಲಾಲ್ ರಾಮ್ ಗುರ್ಜರ್ ಎಂಬಾತ ತಯಾರಿಸಿದ ಮಧ್ಯಾಹ್ನದ ಊಟವನ್ನು ದಲಿತ ಬಾಲಕಿಯರು ಬಡಿಸಿದ್ದರು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಲಾಲ್ ರಾಮ್, ದಲಿತ ಬಾಲಕಿಯರು ಬಡಿಸಿದ ಊಟವನ್ನು ಎಸೆಯುವಂತೆ ಇತರ ವಿದ್ಯಾರ್ಥಿಗಳಿಗೆ ಹೇಳಿರುವುದಾಗಿ ಪೊಲೀಸರು ತಿಳಿಸಿದ್ದಾರೆ. …

Read More »

ದಕ್ಷಿಣ ವಲಯ ಅಂತರರಾಜ್ಯ ಪರಿಷತ್ತಿನ ಸಭೆಯಲ್ಲಿ ಸಿಎಂ ಬೊಮ್ಮಾಯಿ ಭಾಗಿ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಕೇರಳದ ತಿರುವನಂತಪುರದಲ್ಲಿ ನಡೆದ ದಕ್ಷಿಣ ವಲಯ ಅಂತರರಾಜ್ಯ ಪರಿಷತ್ತಿನ ಸಭೆಯಲ್ಲಿ ಭಾಗವಹಿಸಿದರು, ದಕ್ಷಿಣದ ಇತರ ರಾಜ್ಯಗಳ ಮುಖ್ಯಮಂತ್ರಿಗಳು ಹಾಗೂ ಸಚಿವರೊಂದಿಗೆ ಸಿಎಂ ಬಸವರಾಜ್ ಬೊಮ್ಮಾಯಿಯವರು ಸೌಹಾರ್ದಯುತ ಮಾತುಕತೆ ನಡೆಸಿದರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೇರಳ ಮುಖ್ಯಮಂತ್ರಿ ಪಿನರಾಯಿ ವಿಜಯನ್ ಅವರೊಂದಿಗೆ ಔಪಚಾರಿಕ ಮಾತುಕತೆ ನಡೆಸಿದರು. ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಇನ್ನುಳಿದವರು ಈ ವೇಳೆ ಭಾಗಿಯಾಗಿದ್ಧರು.

Read More »

ಮಳೆ ಹಾನಿ ಪ್ರದೇಶದ ವೀಕ್ಷಣೆ ವೇಳೆ ಮಹಿಳೆಗೆ ಗದರಿದ ಶಾಸಕ ಲಿಂಬಾವಳಿ.

ಬೆಂಗಳೂರು: ಬೆಂಗಳೂರಿನ ವಿವಿಧ ಪ್ರದೇಶಗಳ ಮಳೆ ಹಾನಿ ವೀಕ್ಷಣೆಗೆ ತೆರಳಿದ್ದ ಸಂದರ್ಭದಲ್ಲಿ ಶಾಸಕ ಅರವಿಂದ್ ಲಿಂಬಾವಳಿ ಮಹಿಳೆಗೆ ಅವಾಜ್ ಹಾಕಿದ್ದಾರೆಂಬ ಆರೋಪ ಕೇಳಿ ಬಂದಿದೆ. ಅದಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್​ ಆಗಿದೆ. ಮಳೆ ಹಾನಿ ಪ್ರದೇಶದ ವೀಕ್ಷಣೆ ವೇಳೆ ಮಹಿಳೆಗೆ ಗದರಿದ ಶಾಸಕ ಲಿಂಬಾವಳಿ… ವರ್ತೂರಿನಲ್ಲಿ ಈ ಘಟನೆ ನಡೆದಿದೆ ಎನ್ನಲಾಗ್ತಿದೆ. ಸುರಿದ ಭಾರೀ ಮಳೆಯಿಂದಾಗಿ ಮಹದೇವಪುರ ಕ್ಷೇತ್ರದ ಹಲವೆಡೆ ಪ್ರವಾಹ ಉಂಟಾಗಿತ್ತು. ಪ್ರವಾಹ ಪೀಡಿತ ಪ್ರದೇಶ ಪರಿವೀಕ್ಷಣೆಗೆ …

Read More »

ಮುರುಘಾ ಶರಣರ ವಿರುದ್ಧ ಪೋಕ್ಸೋ ಪ್ರಕರಣ: ಪತ್ರಕರ್ತ ಪಿ ಸಾಯಿನಾಥ್ ರಿಂದ ‘ಬಸವ ಶ್ರೀ’ ಪ್ರಶಸ್ತಿ ವಾಪಸ್‌!

ಬೆಂಗಳೂರು: ಆಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದ ಮೇರೆಗೆ ಪೋಕ್ಸೋ ಪ್ರಕರಣದಡಿ ಬಂಧನಕ್ಕೀಡಾಗಿರುವ ಮುರುಘಾ ಶರಣರ ಪ್ರಕರಣದ ಹಿನ್ನಲೆಯಲ್ಲಿ ಖ್ಯಾತ ಹಿರಿಯ ಪತ್ರಕರ್ತ ಪಿ ಸಾಯಿನಾಥ್ ಅವರು ಮುರುಘಾ ಮಠದಿಂದ ಪಡೆದಿದ್ದ ಬಸವ ಶ್ರೀ ಪ್ರಶಸ್ತಿಯನ್ನು ವಾಪಸ್ ಮಾಡಲು ನಿರ್ಧರಿಸಿದ್ದಾರೆ.   ಈ ಕುರಿತು ಸ್ವತಃ ಸಾಯಿನಾಥ್ ಅವರೇ ಮಾಹಿತಿ ನೀಡಿದ್ದು, ಚಿತ್ರದುರ್ಗದ ಮುರುಘಾಮಠವು ನೀಡಿದ್ದ ಬಸವ ಶ್ರೀ ಪ್ರಶಸ್ತಿಯನ್ನು ವಾಪಸ್‌ ನೀಡುವುದಾಗಿ ತಿಳಿಸಿದ್ದಾರೆ. ಈ ಬಗ್ಗೆ …

Read More »

ಪೋಕ್ಸೋ ಕೇಸಿನಡಿ ಜೈಲುಪಾಲಾಗಿರುವ ಮುರುಘಾ ಶರಣರಿಗೆ ಮತ್ತಷ್ಟು ಸಂಕಷ್ಟ: ವಂಚನೆ ಕೇಸಿನಲ್ಲಿ ಜಾಮೀನುರಹಿತ ವಾರಂಟ್

ಬೆಂಗಳೂರು: ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣದಡಿ ಪೋಕ್ಸೋ ಕಾಯ್ದೆಯಡಿ ಕೇಸು ದಾಖಲಾಗಿ ಜೈಲುಪಾಲಾಗಿರುವ ಚಿತ್ರದುರ್ಗದ ಮುರುಘಾ ಶರಣರಿಗೆ ಮತ್ತಷ್ಟು ಸಂಕಷ್ಟು ಎದುರಾಗಿದೆ. 2010ರಲ್ಲಿ ಅವರ ವಿರುದ್ಧ ದಾಖಲಾದ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುರುಘಾ ಶರಣರ ವಿರುದ್ಧ ಬೆಂಗಳೂರು ನಗರ ನ್ಯಾಯಾಲಯ ಜಾಮೀನು ರಹಿತ ವಾರೆಂಟ್ ಜಾರಿ ಮಾಡಿದೆ.   ಮಠದ ಭಕ್ತರಾದ ಪಿಎಸ್ ಪ್ರಕಾಶ್ ಅಲಿಯಾಸ್ ಪಂಚಿ ಎಂಬವರು ನೀಡಿದ ದೂರಿನ ಆಧಾರದ ಮೇಲೆ ಕೆಂಗೇರಿ ಪೊಲೀಸರು ಮುರುಘಾ …

Read More »

ಮುರುಘಾ ಶ್ರೀ ಬಂಧನ: ಇಕ್ಕಟ್ಟಿಗೆ ಸಿಲುಕಿದ ಕಾಂಗ್ರೆಸ್

ಬೆಂಗಳೂರು: ಅಪ್ರಾಪ್ತೆಯರ ಮೇಲೆ ಅತ್ಯಾಚಾರ ನಡೆಸಿದ ಆರೋಪ ಹಿನ್ನೆಲೆಯಲ್ಲಿ ಚಿತ್ರದುರ್ಗದ ಬೃಹನ್ ಮಠದ ಮುರುಘಾ ಶರಣರು ಬಂಧನಕ್ಕೆ ಒಳಗಾಗಿರುವುದು ರಾಜಕೀಯವಾಗಿ ಕಾಂಗ್ರೆಸ್ ಪಕ್ಷವನ್ನು ಇಕ್ಕಟ್ಟಿಗೆ ಸಿಲುಕಿಸಿದೆ.   ರಾಜ್ಯ ರಾಜಕೀಯದ ಮೇಲೆ ತಲತಲಾಂತರದಿಂದ ಮುರುಘಾ ಮಠ ತನ್ನದೇ ಆದ ಪ್ರಭಾವ ಹೊಂದಿದೆ. ಬಹುಸಂಖ್ಯಾತ ವೀರಶೈವ- ಲಿಂಗಾಯತರ ಶ್ರದ್ಧಾಕೇಂದ್ರವಾಗಿರುವುದರಿಂದ ಈ ಪ್ರಕರಣ ಮುಂದಿನ ಚುನಾವಣಾ ದೃಷ್ಟಿಯಿಂದಲೂ ಮಹತ್ವ ಪಡೆದಿದೆ. ಹೀಗಾಗಿ ಕಾಂಗ್ರೆಸ್ ಈ ವಿಚಾರದಲ್ಲಿ ಎಚ್ಚರಿಕೆಯ ಹೆಜ್ಜೆ ಇಡಲು ನಿರ್ಧರಿಸಿದೆ. ವಿಪಕ್ಷ …

Read More »

ನಾನು ರಾಜಕೀಯ ನಿವೃತ್ತಿ ಪಡೆಯುತ್ತೇನೆ..: ಸಿಎಂ ಬೊಮ್ಮಾಯಿಗೆ ಸವಾಲೆಸೆದ ಕುಮಾರಸ್ವಾಮಿ

ನಾನು ರಾಜಕೀಯ ನಿವೃತ್ತಿ ಪಡೆಯುತ್ತೇನೆ..: ಸಿಎಂ ಬೊಮ್ಮಾಯಿಗೆ ಸವಾಲೆಸೆದ ಕುಮಾರಸ್ವಾಮಿ ಬೆಂಗಳೂರು: ಭೂಗಳ್ಳರಿಗೆ ನನ್ನಿಂದ ಸಹಾಯವಾಗಿದೆ ಎಂದು ತೋರಿಸಿದರೆ ನಾನು ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಅವರು ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ನೇರ ಸವಾಲು ಹಾಕಿದ್ದಾರೆ. ಬೆಂಗಳೂರಿನಲ್ಲಿ ಯಾರು ಯಾರು ಕೆರೆ, ರಾಜಕಾಲುವೆ ಒತ್ತುವರಿ ಮಾಡಿಕೊಂಡಿದ್ದಾರೆ ಎಂದು ಶ್ವೇತಪತ್ರ ಹೊರಡಿಸಿ ಎಂದು ಅವರು ಮುಖ್ಯಮಂತ್ರಿಗಳನ್ನು ಆಗ್ರಹಿಸಿದ್ದಾರೆ.   ಇಂದು ಪಕ್ಷದ ಕಚೇರಿ ಜೆಪಿ …

Read More »

ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ’ ಪಟ್ಟಿ ಪ್ರಕಟ : 31ಶಾಲಾ ಶಿಕ್ಷಕರಿಗೆ ಪ್ರಶಸ್ತಿ ಗರಿಮೆ

ಬೆಂಗಳೂರು: ರಾಜ್ಯ ಪ್ರಶಸ್ತಿ ಪುರಸ್ಕೃತರ ಪಟ್ಟಿಯನ್ನು ಶಿಕ್ಷಣ ಇಲಾಖೆಯಿಂದ ( Education Department ) ಪ್ರಕಟಿಸಿದೆ. ಈ ಬಾರಿ 20 ಪ್ರಾಥಮಿಕ ಹಾಗೂ 11 ಪ್ರೌಢ ಶಾಲಾ ಶಿಕ್ಷಕರನ್ನು ( Primary and High School Teacher ) ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆ ಮಾಡಿಕೊಳ್ಳಲಾಗಿದೆ. ಅಲ್ಲದೇ 2021-22ನೇ ಶೈಕ್ಷಣಿಕ ಸಾಲಿನಲ್ಲಿ ಸರ್ಕಾರಿ ಮತ್ತು ಅನುದಾನಿತ ಪದವಿ ಪೂರ್ವ ಕಾಲೇಜುಗಳಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿದಂತ ಇಬ್ಬರು ಪ್ರಾಂಶುಪಾಲರು ಮತ್ತು 8 ಉಪನ್ಯಾಸಕರಿಗೆ …

Read More »

ಅಕ್ರಮವಾಗಿ ಸಾಗವಾನಿ ಸಾಗಿಸುತ್ತಿದ್ದ ವಾಹನ ಮಾಲು ಸಮೇತ ಜಪ್ತಿ

ದಾಂಡೇಲಿ ಅರಣ್ಯ ಇಲಾಖೆ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದು. ಅಕ್ರಮವಾಗಿ ಸಾಗವಾನಿ ಸಾಗಿಸುತ್ತಿದ್ದ ವಾಹನ ಮಾಲು ಸಮೇತ ಜಪ್ತಿ ಮಾಡಿದ್ದಾರೆ. ಆರೋಪಿಗಳು ಪರಾರಿಯಾಗಿರುವ ಘಟನೆ ಜೋಯ್ಡಾ ತಾಲೂಕಿನ ಉಸೋಡ ಬಳಿ ನಡೆದಿದೆ. ಹೌದು GA 07 C 9384 ನಂಬರಿನ ಸಫಾರಿ ವಾಹನದಲ್ಲಿ ಅಕ್ರಮವಾಗಿ ಸಾಗವಾನಿ ಮರದ ತುಂಡುಗಳನ್ನು ಸಾಗಿಸಲಾಗುತ್ತಿತ್ತು. ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿದ ದಾಂಡೇಲಿ ಅರಣ್ಯ ಇಲಾಖೆ ಅಧಿಕಾರಿಗಳು ಮಾಲು ಸಮೇತ ವಾಹನವನ್ನು ವಶಕ್ಕೆ ಪಡೆದುಕೊಂಡಿದ್ದಾರೆ. …

Read More »