Breaking News

ರಾಜಕೀಯ

ನ್ಯಾಯಾಧೀಶರ ಮುಂದೆ ಬಾಲಕಿಯರ ಹೇಳಿಕೆ

ಚಿತ್ರದುರ್ಗ: ಮುರುಘಾ ಮಠದ ಪೀಠಾಧ್ಯಕ್ಷ ಡಾ| ಶಿವಮೂರ್ತಿ ಮುರುಘಾ ಶರಣರ ವಿರುದ್ಧ ಪೋಕ್ಸೋ ಕಾಯ್ದೆಯಡಿ ದಾಖಲಾಗಿರುವ ದೂರಿನ ವಿಚಾರಣೆ ಮುಂದುವರಿದಿದ್ದು, ಸಂತ್ರಸ್ತ ಬಾಲಕಿಯರನ್ನು ಮಂಗಳವಾರ ನಗರದ ನ್ಯಾಯಾಧೀಶರ ಎದುರು ಹಾಜರುಪಡಿಸಿ ಹೇಳಿಕೆ ಪಡೆಯಲಾಯಿತು.   ಬಾಲಕಿಯರ ಸರಕಾರಿ ಬಾಲ ಮಂದಿರದಿಂದ ಮಧ್ಯಾಹ್ನ2 ಗಂಟೆ ಸುಮಾರಿಗೆ ಪೊಲೀಸ್‌ ಭದ್ರತೆಯಲ್ಲಿ ಬಾಲಕಿಯರಿಬ್ಬರನ್ನೂ ಜಿಲ್ಲಾ ನ್ಯಾಯಾಲಯದ ಆವರಣಕ್ಕೆ ಕರೆತರಲಾ ಯಿತು. ಸಿಆರ್‌ಪಿಸಿ 164ರ ಅಡಿ ನ್ಯಾಯಾಧೀಶರ ಎದುರು ಬಾಲಕಿಯರ ಹೇಳಿಕೆಗಳನ್ನು ದಾಖಲಿಸಿಕೊಳ್ಳಲಾಯಿತು. ಜಮಾಯಿಸಿದ ಜನ, ಪ್ರತಿಭಟನೆ …

Read More »

ಮುರುಘಾ ಶರಣರನ್ನು ಶೀಘ್ರದಲ್ಲೇ ಬಂಧಿಸಬೇಕು: H.. ವಿಶ್ವನಾಥ್‌

ಚಿತ್ರದುರ್ಗ : ಮುರುಘಾ ಮಠದ ಡಾ.ಶಿವಮೂರ್ತಿ ಮುರುಘಾ ಶರಣರ ( Murugha Matt Swamiji ) ವಿರುದ್ಧ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ಬಗ್ಗೆ ವಿಧಾನ ಪರಿಷತ್‌ ಸದಸ್ಯ ಎಚ್‌ ವಿಶ್ವನಾಥ್‌ ಮಾತನಾಡಿ ಮುರುಘಾ ಶ್ರೀಗಳನ್ನು ಶೀಘ್ರವಾಗಿ ಬಂಧಿಸಬೇಕು’ ಎಂದು ಆಗ್ರಹಿಸಿದ್ದಾರೆ   ತಾತ್ಕಾಲಿಕವಾಗಿ ಶ್ರೀಗಳ ಪೀಠ ತ್ಯಾಗ ಮಾಡಬೇಕು. 144 ಸೆಕ್ಷನ್‌ ಅಡಿಯಲ್ಲಿ ಹೇಳಿಕೆಯನ್ನು ಪಡೆಯಬೇಕು. ʻ ಮುರುಘಾ ಶ್ರೀಗಳನ್ನು ಶೀಘ್ರವಾಗಿ ಬಂಧಿಸಬೇಕು. ಇಂದೇ ನಾನು ಕೇಂದ್ರಕ್ಕೆ …

Read More »

ಅರವಿಂದ್‌ ಕೇಜ್ರಿವಾಲ್‌ಗೆ ಅಧಿಕಾರದ ಅಮಲು ಹತ್ತಿದೆ ಎಂದ ಅಣ್ಣ ಹಜಾರೆ

ನವದೆಹಲಿ, ಆಗಸ್ಟ್‌ 30: ಹಿರಿಯ ಗಾಂಧಿವಾದಿ ಮತ್ತು ಭ್ರಷ್ಟಾಚಾರ ವಿರೋಧಿ ಹೋರಾಟಗಾರ ಅಣ್ಣಾ ಹಜಾರೆ ಅವರು ಮಂಗಳವಾರ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಪತ್ರ ಬರೆದು ದೆಹಲಿಯ ಮದ್ಯ ನೀತಿಯನ್ನು ಟೀಕಿಸಿ ನಿಮಗೆ ಅಧಿಕಾರದ ಅಮಲು ಹತ್ತಿದೆ ಎಂದು ತೀವ್ರ ತರಾಟೆ ತೆಗೆದುಕೊಂಡಿದ್ದಾರೆ.   ಹಜಾರೆ ತಮ್ಮ ಪತ್ರದಲ್ಲಿ ಹಳ್ಳಿಗಳಲ್ಲಿನ ಮದ್ಯದ ವ್ಯಸನದ ಸಮಸ್ಯೆ ಮತ್ತು ಅದರ ಪರಿಹಾರಗಳ ಬಗ್ಗೆ ವ್ಯವಹರಿಸುವ ಕೇಜ್ರಿವಾಲ್ ಅವರದೇ ಸ್ವರಾಜ್‌ ಪುಸ್ತಕದ ಸಾಲುಗಳನ್ನು …

Read More »

ನಾಲೆಗೆ ಕಾರು ಉರುಳಿ ಬಿದ್ದು ಇಬ್ಬರು ಸಾವು

ಮಸ್ಕಿ: ಕಾರೊಂದು ನಾಲೆಗೆ ಉರುಳಿ ಬಿದ್ದು ಇಬ್ಬರು ಮೃತಪಟ್ಟು,ಒಬ್ಬ ಪಾರಾದ ಘಟನೆ ಸಮೀಪದ ತುಂಗಭದ್ರಾ ಎಡದಂಡೆಯಲ್ಲಿ ಮಂಗಳವಾರ ನಡೆದಿದೆ. ಕಾರಿನಲ್ಲಿದ್ದವರು ಅಮರೇಶ್ವರ ಹತ್ತಿರದ‌ ಗೋನವಾಟ್ಲ ಗ್ರಾಮದಿಂದ ಸಿಂಧನೂರು ಕಡೆ ತೆರಳುತ್ತಿದ್ದರು. ಘಟನೆಯಲ್ಲಿ ಚಾಲಕ ಪ್ರಾಣಾಪಯದಿಂದ‌ ಪಾರಾಗಿದ್ದು ಪರಾರಿಯಾಗಿದ್ದಾನೆ ಎಂದು ತಿಳಿದು ಬಂದಿದೆ. ಮೃತರು ಆಂಧ್ರ ಮೂಲದವರಾಗಿದ್ದು, ವಿವರ‌ ತಿಳಿದು ಬಂದಿಲ್ಲ. ಆದರೆ, ಕಾರಿನ ದಾಖಲೆಯಲ್ಲಿ ಹೈದರಬಾದ್ ನ ನೆಕ್ಕಂಟಿ ಶ್ರೀನಿವಾಸ ಎಂದು ತೋರಿಸುತ್ತಿದೆ. ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಕಾರು ಹಾಗೂ …

Read More »

ಜಿ.ಪಂ. ಉಪ ಕಾರ್ಯದರ್ಶಿ ಹೃದಯಾಘಾತದಿಂದ ನಿಧನ

ದಾವಣಗೆರೆ: ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಡಾ. ಮೇ.‌ಬಿ.ಆರ್. ಹರ್ಷ ತೀವ್ರ ಹೃದಯಾಘಾತದಿಂದ ಮಂಗಳವಾರ ನಿಧನರಾದರು. ದಾವಣಗೆರೆ ತಾಲೂಕಿನ ಕಂದಗಲ್ ಗ್ರಾಮದ ಡಾ.‌ ಬಿ.ಆರ್. ಹರ್ಷ ಸೇನೆಯಲ್ಲೂ ಕಾರ್ಯ ನಿರ್ವಹಿಸಿದವರು. ದಾವಣಗೆರೆ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿಯಾಗಿ ಎರಡು ತಿಂಗಳನಿಂದ ಕಾರ್ಯ ನಿರ್ವಹಿಸುತ್ತಿದ್ದರು. ದಾವಣಗೆರೆ ತಾಲೂಕು ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕಾಧಿಕಾರಿಯಾಗಿಯೂ ಕೆಲಸ ಮಾಡಿದ್ದರು. ಮೃತರ ಪತ್ನಿ ಡಾ. ಮಧುಮಾಲ ಸಹ ಸೇನೆಯಲ್ಲಿ ಕೆಲಸ ನಿರ್ವಹಿಸಿದ್ದರು. ಇಬ್ಬರು ಹೆಣ್ಣುಮಕ್ಕಳು ಅಪಾರ ಬಂಧು ಬಳಗ …

Read More »

ಹೆಸರಿನಲ್ಲಿ ʼರಾಮʼ.! ಉಂಡ ಮನೆಗೆ ಪಂಗನಾಮ.! : ಸಿದ್ದು ವಿರುದ್ಧ ಶ್ರೀರಾಮುಲು ಕಿಡಿ

ಬೆಂಗಳೂರು : ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಸಾರಿಗೆ ಸಚಿವ ಬಿ. ಶ್ರೀರಾಮುಲು ವಾಗ್ಧಳಿ ನಡೆಸಿದ್ದಾರೆ. ಸಿದ್ದು ವಿರುದ್ಧ ಸರಣಿ ಟ್ವೀಟ್ ಮಾಡಿದ ಸಾರಿಗೆ ಸಚಿವರು ಹೆಸರಿನಲ್ಲಿ ರಾಮ ಇರಿಸಿಕೊಂಡು ಉಂಡ ಮನೆಗೆ ಪಂಗನಾಮ ಹಾಕುವವರು ನೀವು ಎಂದು ಗುಡುಗಿದ್ದಾರೆ.   ಈ ಕುರಿತು ಸರಣಿ ಟ್ವೀಟ್ ಮಾಡಿರುವ ಶ್ರೀರಾಮುಲು… ಆಚಾರವಿಲ್ಲದ ನಾಲಿಗೆ ನಿನ್ನ ನೀಚ ಬುದ್ಧಿಯ ಬಿಡು. ದಾಸಶ್ರೇಷ್ಠ ಶ್ರೀ ಪುರಂದರದಾಸರು ಮಾಜಿ ಸಿ.ಎಂ. ಸಿದ್ದರಾಮಯ್ಯನಂತವರನ್ನು ನೋಡಿಯೇ ಈ …

Read More »

ಮುರುಘಾ ಶ್ರೀಗೆ ಮತ್ತೊಂದು ‘ಬಿಗ್‌ ಶಾಕ್‌’: ‘ಅಟ್ರಾಸಿಟಿ’ ಪ್ರಕರಣ ದಾಖಲು

ಚಿತ್ರದುರ್ಗ: ಮುರುಘಾ ಶ್ರೀಗೆ ಮತ್ತೊಂದು ತೊಂದರೆ ಎದುರಾಗಿದೆ. ಹೌದು, ಲೈಂಗಿಕ ಕಿರುಕುಳದ ಬಗ್ಗೆ ಆರೋಪ ಮಾಡಿರುವ ಒಬ್ಬರಲ್ಲಿ ದಲಿತ ಸಮುದಾಯಕ್ಕೆ ಸೇರಿದವರಾಗಿದ್ದು, ಈ ಹಿನ್ನಲೆಯಲ್ಲಿ ಶ್ರೀಗಳ ವಿರುದ್ದ , ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿ ಮುರುಘಾ ಶ್ರೀಗಳ ವಿರುದ್ಧ ಪ್ರಕರಣ ದಾಖಲಾಗಿದೆ ಎನ್ನಲಾಗಿದೆ.   ಆಗಸ್ಟ್‌ 28ರ (ಭಾನುವಾರ)ದಂದು ಪ್ರಕರಣದ ವಿಚಾರಣೆ ವೇಳೆಯಲ್ಲಿ ಬಾಲಕಿಯ ಹೇಳಿಕೆ ಮೇರೆಗೆಶ್ರೀಗಳ ವಿರುದ್ದ ಅಟ್ರಾಸಿಟಿ ಪ್ರಕರಣ ದಾಖಲಾಗಿದೆ ಎನ್ನಲಾಗಿದೆ. …

Read More »

ರಾಜ್ಯದಲ್ಲಿ ಸೆ.2ರ ವರೆಗೂ ಭಾರೀ ಮಳೆ ಸಾಧ್ಯತೆ

ಗೌರಿ-ಗಣೇಶ ಹಬ್ಬದ ಸಂಭ್ರಮವನ್ನು ಎದುರು ನೋಡು ತ್ತಿರುವಾಗಲೇ ರಾಜ್ಯದ ಹಲವೆಡೆ ಮಳೆ ಭೋರ್ಗರೆದು ಅನಾಹುತ ಸೃಷ್ಟಿಸಿದೆ. ರಾಮನಗರ, ಮಂಡ್ಯ, ಕೊಡಗು, ದಕ್ಷಿಣ ಕನ್ನಡ, ರಾಯಚೂರು ಜಿಲ್ಲೆಗಳಲ್ಲಿ ಮಳೆಯಿಂದಾಗಿ ಭಾರೀ ಪ್ರಮಾಣದಲ್ಲಿ ಹಾನಿ ಉಂಟಾಗಿದೆ.   ಬಂಗಾಲ ಕೊಲ್ಲಿಯಲ್ಲಿ ಎದ್ದಿರುವ ಮೇಲ್ಮೈ ಸುಳಿಗಾಳಿ ಪರಿಣಾಮ, ರಾಜ್ಯದಲ್ಲಿ ಮುಂದಿನ 3ರಿಂದ 4 ದಿನ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ. ರಾಮನಗರ ಜಿಲ್ಲೆಯ ಮೂಲಕ ಹಾದು ಹೋಗುವ ಬೆಂಗಳೂರು-ಮೈಸೂರು ದಶಪಥ ಹೆದ್ದಾರಿ …

Read More »

ಗಣೇಶೋತ್ಸವ ವೇಳೆ ಕಾನೂನು ಮೀರಿ ವರ್ತಿಸಿದರೆ ಕಠಿಣ ಕ್ರಮ- ಅಲೋಕ್ ಕುಮಾರ್

ಬೆಳಗಾವಿಯಲ್ಲಿ ಗಣೇಶೋತ್ಸವ ಆಚರಣೆ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆ ಈಗಾಗಲೇ ಸಾಕಷ್ಟು ಪೂರ್ವ ತಯಾರಿಗಳನ್ನು ಮಾಡಿಕೊಳ್ಳಲಾಗಿದೆ. ಇನ್ನು ಗಣೇಶೋತ್ಸವದ ವೇಳೆ ಕಾನೂನು ಮೀರಿ ವರ್ತಿಸುವವರ ಮೇಲೆ ಕಾನೂನು ರೀತಿಯಲ್ಲಿ ಮಠಿಣ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ಎಡಿಜಿಪಿ ಅಲೋಕ್ ಕುಮಾರ್ ಹೇಳಿದ್ದಾರೆ. ನಗರದಲ್ಲಿ ಗಣೇಶೋತ್ಸವ ಆಚರಣೆ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆಯಿಂದ ಮಾಡಿಕೊಳ್ಳಲಾದ ಪೂರ್ವಸಿದ್ಧತೆಗಳನ್ನು ವೀಕ್ಷಿಸಲು ಇಂದು ಮಂಗಳವಾರ ಬೆಳಗಾವಿ ನಗರಕ್ಕೆ ಆಗಮಿಸಿದ ಎಡಿಜಿಪಿ ಅಲೋಕ್ ಕುಮಾರ್ ರವರು ಬೆಳಗಾವಿಯಲ್ಲಿ ಎಸ್‍ಪಿ ಕಚೇರಿಗೆ ಆಗಮಿಸಿ …

Read More »

ನಿರೀಕ್ಷಣಾ ಜಾಮೀನು ಕೋರಿ ನ್ಯಾಯಾಲಯಕ್ಕೆ ಶ್ರೀಗಳಿಂದ ಅರ್ಜಿ ಸಲ್ಲಿಕೆ

ಚಿತ್ರದುರ್ಗ: ಡಾ| ಶಿವಮೂರ್ತಿ ಮುರುಘಾ ಶರಣರ ವಿರುದ್ಧ ಪೋಕ್ಸೋ ಕಾಯ್ದೆಯಡಿ ದಾಖಲಾಗಿರುವ ದೂರಿನ ವಿಚಾರಣೆ ಚುರುಕುಗೊಂಡಿದ್ದು, ಮತ್ತೊಂದೆಡೆ ನಿರೀಕ್ಷಣಾ ಜಾಮೀನು ಕೋರಿ ಶ್ರೀಗಳು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಮುರುಘಾ ಮಠ ಹಾಗೂ ಶ್ರೀಗಳ ಪರ ವಕೀಲರು ಚಿತ್ರದುರ್ಗದ 2ನೇ ಸೆಷನ್ಸ್‌ ಕೋರ್ಟ್‌ಗೆ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದು, ಅರ್ಜಿ ಸ್ವೀಕರಿಸಿದ ನ್ಯಾಯಾಲಯ ವಿಚಾರಣೆಯನ್ನು ಸೆ. 1ಕ್ಕೆ ಮುಂದೂಡಿದೆ. ಈ ನಡುವೆ ಶ್ರೀಗಳ ವಿರುದ್ಧ ದೂರು ನೀಡಿದ್ದ ಬಾಲಕಿಯರನ್ನು ಮಠಕ್ಕೆ …

Read More »