ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ತಾಲೂಕಿನ ಬೆಳ್ಳಾರೆಯ ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆಯಾಗಿರುವ ಈ ಸಂದರ್ಭದಲ್ಲಿ ಸಾಧನಾ ಸಮಾವೇಶ ಮಾಡಲು ನನ್ನ ಮನಸಾಕ್ಷಿ ಒಪ್ಪಲಿಲ್ಲ. ಹಾಗಾಗಿ, ‘ಜನೋತ್ಸವ ಕಾರ್ಯಕ್ರಮ’ವನ್ನು ರದ್ದು ಮಾಡಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಆರ್.ಟಿ.ನಗರ ನಿವಾಸದಲ್ಲಿ ಸರಿರಾತ್ರಿ 12.25ಕ್ಕೆ ತುರ್ತು ಸುದ್ದಿಗೋಷ್ಠಿ ನಡೆಸಿ ಅವರು ಮಾತನಾಡಿದರು. ಒಂದೆಡೆ ನಮ್ಮ ಯುವ ಕಾರ್ಯಕರ್ತನ ಕೊಲೆಯಾಗಿದೆ. ಇದೇ ವೇಳೆ ನಮ್ಮ ಸರ್ಕಾರಕ್ಕೆ …
Read More »1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ: ರಾಜ್ಯ ಸರ್ಕಾರ ಆದೇಶ
ಬೆಂಗಳೂರು: ಶಾಲಾ ಪ್ರವೇಶಾತಿ ನಿಯಮದಲ್ಲಿ ಪ್ರಮುಖ ಬದಲಾವಣೆ ಮಾಡಿರುವ ರಾಜ್ಯ ಶಿಕ್ಷಣ ಇಲಾಖೆಯು ಮಗುವನ್ನು ಒಂದನೇ ತರಗತಿಗೆ ದಾಖಲಿಸಲು ಜೂ. 1ಕ್ಕೆ ಅನ್ವಯವಾಗುವಂತೆ ಕಡ್ಡಾಯವಾಗಿ 6 ವರ್ಷ ತುಂಬಿರಬೇಕು ಎಂಬ ಆದೇಶ ಹೊರಡಿಸಿದೆ. ಆರ್‌ಟಿಇ ಕಾಯ್ದೆ 2009 ಮತ್ತು ಕಡ್ಡಾಯ ಶಿಕ್ಷಣ ನಿಯಮಗಳು-2012ರಂತೆ ಶೈಕ್ಷಣಿಕ ವರ್ಷದಲ್ಲಿ ಮಗುವನ್ನು ಒಂದನೇ ತರಗತಿಗೆ ದಾಖಲಿಸಲು ವಯೋಮಿತಿ ನಿಗದಿಪಡಿಸಲಾಗಿದೆ ಎಂದು ಶಾಲಾ ಶಿಕ್ಷಣ ಇಲಾಖೆ ಅಧೀನ ಕಾರ್ಯದರ್ಶಿ ಆದೇಶದಲ್ಲಿ ತಿಳಿಸಿದ್ದಾರೆ. 2016-17ನೇ ಶೈಕ್ಷಣಿಕ …
Read More »ಶಬರಿಮಲೆ ಅಯ್ಯಪ್ಪ ದೇಗುಲದ ಚಿನ್ನ ಲೇಪಿತ ಮಾಳಿಗೆ ಸೋರಿಕೆ
ತಿರುವನಂತಪುರ: ಶಬರಿಮಲೆಯ ಅಯ್ಯಪ್ಪನ ದೇಗುಲದ ಗರ್ಭಗುಡಿಯ ಚಿನ್ನ ಲೇಪಿತ ಮಾಳಿಗೆಯಲ್ಲಿ ನೀರು ಸೋರಿಕೆಯಾಗುತ್ತಿರುವುದು ದೃಢಪಟ್ಟಿದೆ. ಜು.16ರಂದು ಮಾಸಿಕ ಪೂಜೆಗೆಂದು ದೇಗುಲದ ಗರ್ಭಗುಡಿ ತೆರೆದಾಗ ಸೋರಿಕೆಯಾಗುತ್ತಿರುವುದು ಗಮನಕ್ಕೆ ಬಂದಿದೆ. ಗರ್ಭಗುಡಿಯ ಎಡಭಾಗದ ಮಾಳಿಗೆಯಲ್ಲಿ ಸೋರಿಕೆ ಉಂಟಾಗಿದ್ದು, ಶೀಘ್ರವೇ ಅದನ್ನು ದುರಸ್ಥಿಗೊಳಿಸಲಾಗುವುದು. ಆ.3ರಂದು ದೇಗುಲ ವಾಸ್ತುಶಿಲ್ಪಿಗಳ ತಂಡವು ಪರಿಶೀಲನೆ ನಡೆಸಲಿದೆ. ನಂತರ ದುರಸ್ತಿ ನಡೆಸಲಾಗುವುದು ಎಂದು ತಿರುವಾಂಕೂರು ದೇವಸ್ವಂ ಮಂಡಳಿ ಅಧ್ಯಕ್ಷ ಅಧ್ಯಕ್ಷ ಕೆ.ಅನಂತಗೋಪನ್ ತಿಳಿಸಿದ್ದಾರೆ. ಅಯ್ಯಪ್ಪ ದೇಗುಲದ ಗರ್ಭಗುಡಿಯ ಮಾಳಿಗೆಗೆ ಚಿನ್ನದ ಹೊದಿಕೆಯನ್ನು …
Read More »ಚಂದ್ರು, ಹರ್ಷ, ಪ್ರವೀಣ, ನಾಳೆ ಇನ್ಯಾರೋ ? ಸಿ.ಟಿ.ರವಿ, ರೇಣುಕಾಚಾರ್ಯ ಬೇಸರ
ಬೆಂಗಳೂರು :ಚಂದ್ರ, ಹರ್ಷ, ಪ್ರವೀಣ ನಾಳೆ ಇನ್ಯಾರೋ ? ಎಂದು ಬಿಜೆಪಿ ಸರಕಾರದ ಕಾರ್ಯ ನಿರ್ವಹಣೆ ಬಗ್ಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಬೇಸರ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಬಿಜೆಪಿ ಸರ್ಕಾರದ ವಿರುದ್ಧವೇ ಸಿ.ಟಿ. ರವಿ ಅಸಮಧಾನ ವ್ಯಕ್ತಪಡಿಸಿದ್ದಾರೆ. ಜತೆಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರನ್ನೂ ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ. ಇಂಥ ಘಟನೆಗಳಿಂದ ಕಾರ್ಯಕರ್ತರು ಅಸಹಾಯಕತೆ ತೋಡಿಕೊಳ್ಳುತ್ತಿದ್ದಾರೆ. ಚಂದ್ರು, ಹರ್ಷ, ಪ್ರವೀಣ್ ನಾಳೆ …
Read More »ಪ್ರವೀಣ್ ಹತ್ಯೆ: ಬೆಳ್ಳಾರೆಯಲ್ಲಿ ಮಸೀದಿ ಮೇಲೆ ಕಲ್ಲು ತೂರಾಟ
ಪುತ್ತೂರು: ಬಿಜೆಪಿ ಜಿಲ್ಲಾ ಯುವ ಮೋರ್ಚಾ ಕಾರ್ಯಕಾರಿಣಿ ಸಮಿತಿ ಸದಸ್ಯ ಪ್ರವೀಣ್ ನೆಟ್ಟಾರು ಅವರ ಹತ್ಯೆ ಮಂಗಳವಾರ ನಡೆದಿದ್ದು, ಬುಧವಾರ ಪಾರ್ಥೀವ ಶರೀರ ಮೆರವಣಿಗೆ ವೇಳೆ ಬೆಳ್ಳಾರೆ ಬಸ್ ನಿಲ್ದಾಣ ಬಳಿ ಇರುವ ಮಸೀದಿ ಮೇಲೆ ಕಲ್ಲು ತೂರಾಟ ನಡೆದಿದೆ. ಪ್ರವೀಣ್ ಅವರ ಪಾರ್ಥೀವ ಶರೀರ ಮೆರವಣೆಗೆ ವೇಳೆ ಸಾವಿರಾರು ಜನ ಜಮಾಯಿಸಿದ್ದು, ಈ ವೇಳೆ ಕೆಲವರು ಮಸೀದಿ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಈ ವೇಳೆ ಪೊಲೀಸರು ಪರಿಸ್ಥಿತಿ …
Read More »ಕೊಲೆಗಡುಕ ಶಕ್ತಿಗಳ ಮುಂದೆ ಸರ್ಕಾರ ಮಂಡಿಯೂರಿದೆ: ಎಚ್‌ಡಿಕೆ
ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿರುವ ಬಜರಂಗದಳದ ನಾಯಕ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣವನ್ನು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಖಂಡಿಸಿದ್ದಾರೆ. ರಾಜ್ಯದಲ್ಲಿ ಇತ್ತೀಚೆಗೆ ನಡೆದ ಹತ್ಯೆ ಪ್ರಕರಣಗಳನ್ನು ಪ್ರಸ್ತಾಪಿಸಿ ಸರಣಿ ಟ್ವೀಟ್ ಮಾಡಿರುವ ಅವರು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ‘ರಾಜ್ಯದಲ್ಲಿ ಯುವಕರ ಕೊಲೆಗಳ ಸರಣಿಯೇ ಮುಂದುವರಿದಿದ್ದು, ಇನ್ನೊಂದು ಜೀವ ಹೋಗಿದೆ. ಈ ಹತ್ಯಾಕಾಂಡಕ್ಕೆ ಕೊನೆಯೇ ಇಲ್ಲವೇ? ಕೊಲೆ ಅದ ಮೇಲೆ ನಡೆಯುವ ಹೇಳಿಕೆಗಳ ಭರಾಟೆ, …
Read More »ಸ್ಕೂಟಿಗೆ ಲಾರಿ ಡಿಕ್ಕಿ ಸ್ಥಳದಲ್ಲಿಯೇ ಸಾವನ್ನಪ್ಪಿದ ಬೈಕ್ ಸವಾರ
ಸ್ಕೂಟಿಗೆ ಲಾರಿ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಹುಬ್ಬಳ್ಳಿಯ ಹೊಸೂರ್ ವೃತ್ತದ ಬಳಿ ನಡೆದಿದೆ. ಮೃತ ದುರ್ದೈವಿಯನ್ನು ಹಳೆ ಹುಬ್ಬಳ್ಳಿಯ ಬೀರಬಂದ್ ಗಲ್ಲಿ ನಿವಾಸಿ ಪೈಜಾಲ್ ಧಾರವಾಡ ಎಂದು ಗುರುತಿಸಲಾಗಿದೆ. ಘಟನೆ ನಡೆಯುತ್ತಿದ್ದಂತೆಯೇ ಚಾಲಕ ಲಾರಿ ಬಿಟ್ಟು ಎಸ್ಕೇಪ್ ಆಗಿದ್ದಾನೆ. ಡಿಕ್ಕಿ ಹೊಡೆದ ರಭಸಕ್ಕೆ ತಲೆಗೆ ಗಂಭೀರ ಗಾಯಗಳಾಗಿ, ತೀವ್ರ ರಕ್ತಸ್ರಾವದಿಂದ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ. ಈ ಸಂಬಂಧ ಉತ್ತರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು.
Read More »ಬಿಜೆಪಿ ಯುವ ಮುಖಂಡನಿಗೆ ಮಾರಣಾಂತಿಕ ಹಲ್ಲೆ.. ಆಸ್ಪತ್ರೆಗೆ ಸಾಗಿಸುವ ಮಧ್ಯೆ ಸಾವು
ಸುಳ್ಯ: ತಾಲೂಕಿನ ಬೆಳ್ಳಾರೆ ಸಮೀಪದ ನೆಟ್ಟಾರಿನಲ್ಲಿ ಬಿಜೆಪಿಯ ಯುವ ಮುಖಂಡ ಪ್ರವೀಣ್(32) ಎಂಬವರ ಮೇಲೆ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಪರಿಣಾಮ ಗಂಭೀರ ಗಾಯಗೊಂಡಿದ್ದ ಪ್ರವೀಣ್ ಆಸ್ಪತ್ರೆಗೆ ಸಾಗಿಸುವ ಮುನ್ನವೇ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಬಿಜೆಪಿ ಯುವ ನಾಯಕ ಆಗಿರುವ ಪ್ರವೀಣ್ ನೆಟ್ಟಾರು ಚಿಕನ್ ಅಂಗಡಿಯ ಮಾಲೀಕರಾಗಿದ್ದು, ಇಬ್ಬರು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ದಾಳಿ ನಡೆಸಿದ್ದಾರೆ. ನಂತರ ಪ್ರವೀಣ್ ಗಂಭೀರ ಗಾಯಗೊಂಡಿದ್ದರಿಂದ ಅವರು ಸ್ಥಳದಲ್ಲೇ ಕುಸಿದು ಬಿದ್ದಿದ್ದರು ಎನ್ನಲಾಗಿದೆ. …
Read More »ಸಾರ್ವಜನಿಕರ ಟೀಕೆ, ಮಹಾನಗರ ಪಾಲಿಕೆ ಅಧಿಕಾರಿಗಳು ಆರ್‍ಪಿಡಿ ಕ್ರಾಸ್ ಬಳಿ ಲೀಕ್ ಆಗಿದ್ದ ಡ್ರೈನೇಜ್ ಪೈಪ್ ಕಾಮಗಾರಿಯನ್ನು ಕೈಗೆತ್ತಿಕೊಂಡಿದ್ದಾರೆ.
ಸಾರ್ವಜನಿಕರ ಟೀಕೆ, ಆಗ್ರಹದಿಂದ ಎಚ್ಚೆತ್ತುಕೊಂಡಿರುವ ಬೆಳಗಾವಿಯ ಮಹಾನಗರ ಪಾಲಿಕೆ ಅಧಿಕಾರಿಗಳು ಆರ್‍ಪಿಡಿ ಕ್ರಾಸ್ ಬಳಿ ಲೀಕ್ ಆಗಿದ್ದ ಡ್ರೈನೇಜ್ ಪೈಪ್ ಕಾಮಗಾರಿಯನ್ನು ಕೈಗೆತ್ತಿಕೊಂಡಿದ್ದಾರೆ. ಹೌದು ಕಳೆದ 15 ದಿನಗಳ ಹಿಂದೆ ಆರ್‍ಪಿಡಿ ಕ್ರಾಸ್ ಬಳಿಯ ಡ್ರೈನೇಜ್ ಪೈಪ್ ಲೀಕ್ ಆಗಿ ರಸ್ತೆಯ ಮೇಲೆ ಕಲುಷಿತ ನೀರು ಹರಿಯುತ್ತಿತ್ತು. ಈ ಸಂದರ್ಭದಲ್ಲಿ ಮೊದಲೇ ದೊಡ್ಡ ಪ್ರಮಾಣದಲ್ಲಿ ಮಳೆಯಾಗುತ್ತಿತ್ತು. ಇದರಿಂದ ಮಳೆ ನೀರಿನ ಜೊತೆಗೆ ಡ್ರೈನೇಜ್ ನೀರು ಕೂಡ ರಸ್ತೆಯ ಮೇಲೆ ಹರಿಯುತ್ತಿತ್ತು. …
Read More »ಬೆಳಗಾವಿಯ ಯುವಕ ಸಿದ್ದರಾಮೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗಲು ಪಾದಯಾತ್ರೆ
ದಾವಣಗೆರೆಯಲ್ಲಿ ನಡೆಯುತ್ತಿರುವ ಸಿದ್ದರಾಮೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗಲು ಅವರು ಪಾದಯಾತ್ರೆ ಹೊರಟಿದ್ದಾರೆ. ಪಾದಯಾತ್ರೆಯ ಮೂರನೇ ದಿನವಾದ ಇಂದು ಬೆಳಗಾವಿಗೆ ಬಂದು ತಲುಪಿದ್ದಾರೆ. ಬೆಳಗಾವಿಯ ಸಿದ್ದರಾಮಯ್ಯ ಅಭಿಮಾನಿಗಳು ಅವರನ್ನು ನಗರದ ಕನಕದಾಸ ಸರ್ಕಲ್‍ನಲ್ಲಿ ಸ್ವಾಗತ ಮಾಡಿದರು. ಆಗಸ್ಟ್ 3 ರಂದು ದಾವಣಗೆರೆಯಲ್ಲಿ ನಡೆಯಲಿರುವ ಸಿದ್ದರಾಮಯ್ಯನವರ 75ನೇ ವರ್ಷದ ಹುಟ್ಟುಹಬ್ಬದಲ್ಲಿ ಪಾಲ್ಗೊಳ್ಳಲು ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಮೊಳೆ ಗ್ರಾಮದ ವ್ಯಕ್ತಿಯೋರ್ವ ಪಾದಯಾತ್ರೆಯನ್ನು ಕೈಗೊಂಡಿದ್ದಾನೆ. ಮೂರನೇ ದಿನವಾದ ಇಂದು ಆತ ಬೆಳಗಾವಿಗೆ ಬಂದು ತಲುಪಿದ್ದು …
Read More »
Laxmi News 24×7