ಉದ್ಘಾಟನೆಯಾದರೂ ಕಾರ್ಯಾರಂಭವಿಲ್ಲ: ಮಾಲಿನ್ಯ ನಿಯಂತ್ರಣ ಮಂಡಳಿ ಕಚೇರಿ ಮುಂದೆ ‘ಪೂಜೆ’ ಪ್ರತಿಭಟನೆ ದೊಡ್ಡಬಳ್ಳಾಪುರ: ಅರ್ಕಾವತಿ ನದಿ ಹೋರಾಟ ಸಮಿತಿ ಹೋರಾಟದ ಫಲವಾಗಿ ಬೆಂಗಳೂರಿನಲ್ಲಿದ್ದ ಮಾಲಿನ್ಯ ನಿಯಂತ್ರಣ ಮಂಡಳಿ ಕಚೇರಿ ದೊಡ್ಡಬಳ್ಳಾಪುರಕ್ಕೆ ಸ್ಥಳಾಂತರಗೊಂಡಿದೆ. ಕಚೇರಿ ಉದ್ಘಾಟಿಸಿ 12 ದಿನವಾಗಿದೆ. ಅಂದು ಕಚೇರಿಗೆ ಹಾಕಿದ ಬೀಗ ಇನ್ನೂ ತೆಗೆದಿಲ್ಲ. ಇದು ಅಧಿಕಾರಿಗಳ ನಿರ್ಲಕ್ಷ್ಯವೆಂದು ಆರೋಪಿಸಿ ಅರ್ಕಾವತಿ ನದಿ ಹೋರಾಟ ಸಮಿತಿ ಹೋರಾಟಗಾರರು ಕಚೇರಿಯ ಬಾಗಿಲಿಗೆ ಪೂಜೆ ಸಲ್ಲಿಸಿ ಅರ್ಚನೆ ಮಾಡಿ ಪ್ರತಿಭಟಿಸಿದರು. ನಗರದ ಪ್ರವಾಸಿ …
Read More »ಅಕ್ರಮ ಚಿನ್ನ ಕಳ್ಳಸಾಗಣೆ ಕೇಸ್: ರನ್ಯಾ ರಾವ್ಗೆ ₹102 ಕೋಟಿ ದಂಡ ಪಾವತಿಸುವಂತೆ ಡಿಆರ್‌ಐ ನೋಟಿಸ್
ಬೆಂಗಳೂರು: ಚಿನ್ನ ಕಳ್ಳಸಾಗಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನ ಎದುರಿಸುತ್ತಿರುವ ನಟಿ ರನ್ಯಾ ರಾವ್ಗೆ 102.55 ಕೋಟಿ ರೂಪಾಯಿ ದಂಡ ಪಾವತಿಸುವಂತೆ ಕಂದಾಯ ಗುಪ್ತಚರ ನಿರ್ದೇಶನಾಲಯದ (DRI) ಅಧಿಕಾರಿಗಳು ನೋಟಿಸ್ ರವಾನಿಸಿದ್ದಾರೆ. ಹಾಗೂ ಇನ್ನುಳಿದ ಆರೋಪಿಗಳಾದ ತರುಣ್ ಕೊಂಡೂರು ರಾಜುಗೆ 62 ಕೋಟಿ ರೂ, ಸಾಹಿಲ್ ಜೈನ್ ಮತ್ತು ಭರತ್ ಜೈನ್ ಅವರಿಗೆ ತಲಾ 53 ಕೋಟಿ ರೂಪಾಯಿ ದಂಡ ಪಾವತಿಸುವಂತೆ ನೋಟಿಸ್‌ನಲ್ಲಿ ಸೂಚಿಸಲಾಗಿದೆ ಎಂದು ಡಿಆರ್‌ಐ ಮೂಲಗಳು ಮಾಹಿತಿ ನೀಡಿವೆ. …
Read More »ಸೆಪ್ಟೆಂಬರ್ ಕ್ರಾಂತಿ, ನಮ್ಮ ವಿರುದ್ದ ಮಾತನಾಡಿದವರೇ ಬಿಜೆಪಿಗೆ ಹೋಗಬಹುದು: ಎಂಎಲ್ಸಿ ಆರ್.ರಾಜೇಂದ್ರ
ಬೆಂಗಳೂರು: ರಾಜಣ್ಣ ಅವರ ಮೇಲೆ ಆರೋಪ ಮಾಡುತ್ತಿದ್ದವರೇ ನಾಳೆ ಬೆಳಗ್ಗೆಯೆಂದರೆ ಬಿಜೆಪಿಗೆ ಹೋದರೂ ಆಶ್ಚರ್ಯ ಇಲ್ಲ ಎಂದು ವಿಧಾನಪರಿಷತ್ ಸದಸ್ಯ ಆರ್.ರಾಜೇಂದ್ರ ಅವರು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಬಗ್ಗೆ ಸೂಚ್ಯವಾಗಿ ಹೇಳಿದ್ದಾರೆ. ಕೆ.ಎನ್.ರಾಜಣ್ಣ ಬಿಜೆಪಿಗೆ ಅರ್ಜಿ ಹಾಕಿದ್ದಾರೆ ಎಂಬ ಶಾಸಕ ಮಾಗಡಿ ಬಾಲಕೃಷ್ಣ ಹೇಳಿಕೆಗೆ ಶಾಸಕರ ಭವನದಲ್ಲಿ ಪ್ರತಿಕ್ರಿಯಿಸಿದ ಆರ್.ರಾಜೇಂದ್ರ, ಬಾಲಕೃಷ್ಣ ಬಿಜೆಪಿಯನ್ನೂ ಮುಗಿಸಿ ಬಂದಿದ್ದಾರೆ. ಜೆಡಿಎಸ್ ಪಕ್ಷವನ್ನೂ ಮುಗಿಸಿ ಬಂದಿದ್ದಾರೆ. ಕೆಲವರಿಗೆ ಮಾತನಾಡುವ ಹುಚ್ಚು. ಅದನ್ನು ತೀರಿಸಿಕೊಳ್ಳಲು ಹೀಗೆಲ್ಲ ಮಾತನಾಡುತ್ತಾರೆ. …
Read More »ಟೊಮೊಟೊ ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದನ್ನು ಕಂಡ ಕಾಡಾನೆ ಓಡೋಡಿ ಬಂದು ತಿಂದಿದೆ.
ಚಾಮರಾಜನಗರ: ಕಾಡಾನೆಗೆ ಊಟ, ರೈತನಿಗೆ ಪ್ರಾಣ ಸಂಕಟ ಎಂಬಂತೆ ನಡುರಸ್ತೆಯಲ್ಲಿ ಪಲ್ಟಿಯಾದ ಈಚರ್ ವಾಹನ ಕಂಡು ಕಾಡಾನೆಯೊಂದು ಓಡೋಡಿ ಬಂದು ಟೊಮೊಟೊ ತಿಂದ ಘಟನೆ ಚಾಮರಾಜನಗರ ತಾಲೂಕಿನ ಪುಣಜನೂರು ಸಮೀಪ ತಡರಾತ್ರಿ ನಡೆದಿದೆ. ಚಿಕ್ಕಮಗಳೂರಿನಿಂದ ಕೇರಳಕ್ಕೆ ಈಚರ್ ನಲ್ಲಿ ಟೊಮೊಟೊ ಸಾಗಿಸುವಾಗ ನಿಯಂತ್ರಣ ತಪ್ಪಿ ನಡುರಸ್ತೆಯಲ್ಲಿ ಪಲ್ಟಿಯಾಗಿದೆ. ಸುಮಾರು 210 ಬಾಕ್ಸ್ ಟೊಮೊಟೊ ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದನ್ನು ಕಂಡ ಕಾಡಾನೆ ಓಡೋಡಿ ಬಂದು ತಿಂದಿದೆ. ರಸ್ತೆಯಲ್ಲಿ ಟೊಮೊಟೊ ತಿನ್ನುತ್ತಾ ನಿಂತ ಕಾಡಾನೆಯನ್ನು …
Read More »ಸೋಮೇಶ್ವರ ದೇವಸ್ಥಾನ ಅಭಿವೃದ್ಧಿಗಾಗಿ ಪ್ರವಾಸೋದ್ಯಮ ಇಲಾಖೆಯಿಂದ ಸುಮಾರು 1.ಕೋಟಿ75 ಲಕ್ಷ ರೂಪಾಯಿಗಳ ಅನುದಾನ
ಬೈಲಹೊಂಗಲ ಭಾಗದ ಆರಾಧ್ಯ ದೈವ ಶ್ರೀ ಕ್ಷೇತ್ರ ಸೊಗಲ ಸೋಮೇಶ್ವರ ದೇವಸ್ಥಾನ ಅಭಿವೃದ್ಧಿಗಾಗಿ ಪ್ರವಾಸೋದ್ಯಮ ಇಲಾಖೆಯಿಂದ ಸುಮಾರು 1.ಕೋಟಿ75 ಲಕ್ಷ ರೂಪಾಯಿಗಳ ಅನುದಾನ ಬಿಡುಗಡೆಗೊಂಡಿದ್ದು ದೇವಸ್ಥಾನದ ಸಮಗ್ರ ಅಭಿವೃದ್ಧಿಗಾಗಿ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಇಂದು ಶ್ರೀ ಕ್ಷೇತ್ರದಲ್ಲಿ ಸಭೆಯನ್ನು ಮಾಡಲಾಯಿತು ಈ ಸಂದರ್ಭದಲ್ಲಿ ದೇವಸ್ಥಾನ ಕಮಿಟಿಯ ಸರ್ವ ಸದಸ್ಯರು , ಪ್ರವಾಸೋದ್ಯಮ ಇಲಾಖೆಯ ಉಪನಿರ್ದೇಶಕರಾದ ಸದಾಶಿವ ಬಡಿಗೆರ, ಸವದತ್ತಿ ತಹಸೀಲ್ದಾರಾದ ಮಲ್ಲಿಕಾರ್ಜುನ ಹೆಗ್ಗಣ್ಣವರ,ಅರಣ್ಯ ಇಲಾಖೆಯ ಅಧಿಕಾರಿಗಳು, ಸವದತ್ತಿಯ ಎಡಿಎಲ್ಆರ್, ಉಪಸ್ಥಿತರಿದ್ದರು.
Read More »ಅಯ್ಯೋ ವಿಧಿಯೇ! ಒಂದೇ ದಿನ ಹೃದಯಾಘಾತದಿಂದ ಅಣ್ಣ- ತಮ್ಮ ಸಾವು!
ಯಾದಗಿರಿ, (ಸೆಪ್ಟೆಂಬರ್ 02): ಒಂದೇ ಕುಟುಂಬದ ಇಬ್ಬರು ಸಹೋದರರು (Br0thers) ಹೃದಯಾಘಾತಕ್ಕೆ (heart attack) ಬಲಿಯಾಗಿದ್ದು, ಅಣ್ಣ ತಮ್ಮಸಾವಿನಲ್ಲೂ ಒಂದಾಗಿದ್ದಾರೆ. ಈ ಘಟನೆ ಯಾದಗಿರಿ (Yadgir) ಜಿಲ್ಲೆಯ ಸುರಪುರ ತಾಲೂಕಿಮ ಕೆಂಭಾವಿಯಲ್ಲಿ (kembhavi) ನಡೆದಿದೆ. ಮೃತರನ್ನು ಶಂಶೋದ್ದೀನ್ (42) ಮತ್ತು ಇರ್ಫಾನ್ (38) ಮೃತ ದುರ್ವೈವಿಗಳು. ಮೊದಲಿಗೆ ಅಣ್ಣ ಸಂಶುದ್ದೀನ್ ಹೃದಯಾಘಾತದಿಂದ ಮೃತಪಟ್ಟಿರುವ ಸುದ್ದಿ ಕೇಳಿ ತಮ್ಮ ಇರ್ಫಾನ್ ಗೂ ಸಹ ಹೃದಯಾಘಾತವಾಗಿದೆ. ಒಂದೇ ದಿನ ಇಬ್ಬರನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಎದೆ ನೋವು ಕಾಣಿಸಿಕೊಳ್ಳುತ್ತಿದ್ದಂತೆ ಇಬ್ಬರನ್ನೂ ಆಸ್ಪತ್ರೆಗೆ ದಾಖಲಿಸಲಾಗಿತ್ತು. …
Read More »ಮೃತದೇಹ ಸ್ವೀಕರಿಸಲೊಪ್ಪದ ಸಹೋದರ; ಅಂತ್ಯಕ್ರಿಯೆ ನೆರವೇರಿಸಿ ಮಾನವೀಯತೆ ಮೆರೆದ ಸಮಾಜಸೇವಕ
ಉಡುಪಿ : ಜಿಲ್ಲೆಯ ಕಾಪು ಠಾಣಾ ವ್ಯಾಪ್ತಿಯಲ್ಲಿ ಮೃತಪಟ್ಟ ವ್ಯಕ್ತಿಯ ಸಹೋದರ ಅಂತ್ಯಕ್ರಿಯೆಗೆ ಮೃತದೇಹ ಸ್ವೀಕರಿಸಲು ಒಪ್ಪದ ಕಾರಣ ಸಮಾಜ ಸೇವಕ ವಿಶು ಶೆಟ್ಟಿ ಅವರೇ ಮುಂದೆ ನಿಂತು ಮೃತನ ಅಂತ್ಯಸಂಸ್ಕಾರವನ್ನು ಬೀಡಿನಗುಡ್ಡೆಯ ರುದ್ರ ಭೂಮಿಯಲ್ಲಿ ನೆರವೇರಿಸಿ ಮಾನವೀಯತೆ ಮೆರೆದಿದ್ದಾರೆ. ಮೃತ ವ್ಯಕ್ತಿಯ ಬಗ್ಗೆ ಕಾಪು ಠಾಣೆಯಲ್ಲಿ ದೂರು ದಾಖಲಾಗಿತ್ತು. ಪೊಲೀಸರು ಮೃತನ ಸಹೋದರನನ್ನು ಕರೆಯಿಸಿ ಕಾನೂನು ಪ್ರಕ್ರಿಯೆ ನಡೆಸಿದರು. ಕೊನೆಗೆ ಅಂತ್ಯಸಂಸ್ಕಾರ ನಡೆಸಲು ಮೃತ ದೇಹವನ್ನು ಪಡೆಯಲು ಸಹೋದರ ನಿರಾಕರಿಸಿದರು. …
Read More »ಬಿಜೆಪಿಯವರದ್ದು ಧರ್ಮ ಯಾತ್ರೆಯಲ್ಲ ರಾಜಕೀಯ ಯಾತ್ರೆ: ಸಿಎಂ
ಮೈಸೂರು: “ಧರ್ಮಸ್ಥಳಕ್ಕೆ ಬಿಜೆಪಿ ಕೈಗೊಂಡಿರುವುದು ಧರ್ಮ ಯಾತ್ರೆಯಲ್ಲ ರಾಜಕೀಯ ಯಾತ್ರೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಇಂದು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ SIT ತನಿಖೆ ನಡೆಯುತ್ತಿದೆ. ಬಿಜೆಪಿ ಈಗ ಎನ್.ಐ.ಎ ತನಿಖೆಗೆ ಒತ್ತಾಯಿಸುತ್ತಿದ್ದಾರೆ. ಹಾಗಾದರೆ ನಮ್ಮ ಪೊಲೀಸರ ಮೇಲೆ ಬಿಜೆಪಿಯವರಿಗೆ ನಂಬಿಕೆ ಇಲ್ಲವೇ?” ಎಂದು ಮುಖ್ಯಮಂತ್ರಿಗಳು ಪ್ರಶ್ನಿಸಿದರು. “SIT ರಚನೆಯಾದ ಪ್ರಾರಂಭದಲ್ಲಿ ಎನ್ಐಎ ತನಿಖೆ ಮಾಡಿ ಎನ್ನಲಿಲ್ಲ. ನಂತರ ದೇಹಗಳು ಸಿಗದೇ ಹೋದಾಗ ಒತ್ತಾಯಿಸುತ್ತಿದ್ದಾರೆ. ಧರ್ಮಸ್ಥಳದ …
Read More »ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಪವಿತ್ರಾ ಗೌಡ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಬೆಂಗಳೂರಿನ 57ನೇ ಸೆಷನ್ಸ್ ನ್ಯಾಯಾಲಯ ವಜಾಗೊಳಿಸಿದೆ.
ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಪವಿತ್ರಾ ಗೌಡ ಸಲ್ಲಿಸಿದ್ದ ಜಾಮೀನು ಅರ್ಜಿ ವಜಾಗೊಂಡಿದೆ. ಅರ್ಜಿ ವಿಚಾರಣೆ ನಡೆಸಿದ 57ನೇ ಸೆಷನ್ಸ್ ನ್ಯಾಯಾಲಯ ಪವಿತ್ರಾ ಗೌಡ ಅರ್ಜಿಯನ್ನು ವಜಾಗೊಳಿಸಿದೆ. ಮಹಿಳೆ ಹಾಗೂ ಸಿಂಗಲ್ ಪೇರೆಂಟ್ ಆಗಿರುವುದರಿಂದ ಮಗಳ ಆರೈಕೆ ಮಾಡಬೇಕಿದೆ ಎಂಬ ಕಾರಣ ನೀಡಿ ಪವಿತ್ರಾ ಗೌಡ ಸೆಷನ್ಸ್ ನ್ಯಾಯಾಲಯಕ್ಕೆ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಆದರೆ, ಪವಿತ್ರಾ ಗೌಡ ಅವರ ಮನವಿಯನ್ನ ಪರಿಗಣಿಸದ ನ್ಯಾಯಾಲಯ ಜಾಮೀನು ಅರ್ಜಿಯನ್ನು ವಜಾ …
Read More »ಗಣೇಶೋತ್ಸವಕ್ಕೆ ‘ಆಪರೇಷನ್ ಸಿಂಧೂರ’ ಟಚ್: ಗಣೇಶನೊಂದಿಗೆ ಭಾರತೀಯ ಸೈನಿಕರಿಗೂ ಪೂಜೆ
ಬೆಳಗಾವಿ: ಗಡಿ ಜಿಲ್ಲೆ ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಿರುವ ಸಾರ್ವಜನಿಕ ಗಣೇಶ ಮೂರ್ತಿಗಳು ಒಂದಕ್ಕಿಂತ ಒಂದು ವಿಶಿಷ್ಟವಾಗಿವೆ. ಆಕರ್ಷಕ ಅಲಂಕಾರ, ಮಂಟಪಗಳು ಗಮನ ಸೆಳೆಯುತ್ತಿವೆ. ಇಲ್ಲೊಂದು ಮಂಡಳಿ ‘ಆಪರೇಷನ್ ಸಿಂಧೂರ’ ಟಚ್ ನೀಡಿದ್ದು, ಗಣೇಶನ ಜೊತೆಗೆ ಭಾರತೀಯ ಸೈನಿಕರಿಗೂ ಪೂಜೆ ಸಲ್ಲಿಸುವ ಮೂಲಕ ದೇಶಭಕ್ತಿ ಮೆರೆಯುತ್ತಿದೆ. ಒಂದೆಡೆ ಮಂಟಪದ ಹೊರಗೆ ಆಪರೇಷನ್ ಸಿಂಧೂರ ಕಾರ್ಯಾಚರಣೆ ಮೂಲಕ ಮನೆ ಮಾತಾಗಿದ್ದ ಕರ್ನಲ್ ಸೋಫಿಯಾ ಖುರೇಷಿ, ವಿಂಗ್ ಕಮಾಂಡರ್ ವ್ಯೋಮಿಕಾ ಸಿಂಗ್ ಭಾವಚಿತ್ರಗಳು. ಮತ್ತೊಂದೆಡೆ, ಮಂಟಪದೊಳಗೆ ಕಾಲಿಡುತ್ತಿದ್ದಂತೆ …
Read More »
Laxmi News 24×7