ಮಂಗಳೂರು: ‘ಮಳೆಯಿಂದ ಪೂರ್ತಿ ಮನೆ ಕಳೆದುಕೊಂಡ ಸಂತ್ರಸ್ತರಿಗೆ ₹ 5 ಲಕ್ಷ ಪರಿಹಾರ ನೀಡಲಾಗುವುದು. ಈ ಸಂಬಂಧ ಗುರುವಾರ ಮುಖ್ಯಮಂತ್ರಿ ಜತೆ ಚರ್ಚಿಸಲಾಗಿದೆ’ ಎಂದು ಕಂದಾಯ ಸಚಿವ ಆರ್. ಅಶೋಕ ಹೇಳಿದರು. ಉಳ್ಳಾಲ ತಾಲ್ಲೂಕಿನ ಬಟ್ಟಪ್ಪಾಡಿ ಕಡಲ್ಕೊರೆತ ಪ್ರದೇಶಕ್ಕೆ ಭೇಟಿ ನೀಡಿದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಬೆಂಗಳೂರಿಗೆ ಹೋದ ಕೂಡಲೇ ಶೇ 50ರಷ್ಟು ಪರಿಹಾರ ಮೊತ್ತ ಬಿಡುಗಡೆಗೆ ಆದೇಶ ನೀಡುತ್ತೇನೆ. ಕಡಿಮೆ ಪ್ರಮಾಣದ ಹಾನಿ ಆಗಿರುವವರಿಗೆ ಹಾನಿಯ ಪ್ರಮಾಣದ ಆಧಾರದಲ್ಲಿ …
Read More »ಮಳೆಯ ಆರ್ಭಟ, ಚಿಕ್ಕೋಡಿ ತಾಲೂಕಿನ 4 ಸೇತುವೆಗಳು ಜಲಾವೃತ
ಮಹಾರಾಷ್ಟ್ರದ ಕೊಂಕಣ ಪ್ರದೇಶಗಳಲ್ಲಿ ವರುಣರಾಯನ ಆರ್ಭಟ ಮುಂದುವರದಿದೆ…ಇದರಿಂದಾಗಿ ಚಿಕ್ಕೋಡಿ ತಾಲೂಕಿನ 4 ಸೇತುವೆಗಳು ಮುಳಗಡೆಯಾಗಿವೆ.. ಮಹಾರಾಷ್ಟ್ರದ ಕೊಂಕಣ ಪ್ರದೇಶಗಳಲ್ಲಿ ಮಳೆಯ ಆರ್ಭಟ ಜೋರಾಗಿದೆ..ಪರಿಣಾಮವಾಗಿ ಇತ್ತ ಚಿಕ್ಕೋಡಿ ತಾಲೂಕಿನ ಕೃಷ್ಣಾ ಹಾಗೂ ಉಪನದಿಗಳಾದ ವೇದಗಂಗಾ, ದೂಧಗಂಗಾ ನದಿಗಳಿಗೆ ಕ್ಷಣಕ್ಷಣಕ್ಕೂ ನೀರಿನ ಮಟ್ಟ ಏರಿಕೆಯಾಗುತ್ತಿದೆ..ಅದಲ್ಲದೇ ಯಡೂರ-ಕಲ್ಲೋಳ,ಮಾಂಜರಿ-ಸೌಂದತ್ತಿ,ಮಲಿಕವಾಡ-ದತ್ತವಾಡ,ಯಕ್ಸಂಬಾ-ದಾನವಾಡ ಹೀಗೆ 4 ಕೆಳಹಂತದ ಸೇತುವೆಗಳು ಮುಳಗಡೆಯಾಗಿವೆ. ಕೃಷ್ಣಾ,ವೇದಗಂಗಾ, ದೂಧಗಂಗಾ ನದಿಗಳಿಗೆ ಒಂದೇ ದಿನದಲ್ಲಿ 1 ಅಡಿಯಷ್ಟು ನೀರು ಏರಿಕೆಯಾಗಿದೆ.. ಪ್ರತಿ ವರ್ಷವೂ ಕೂಡಾ ಪ್ರವಾಹದಿಂದಾಗಿ ತತ್ತರಿಸಿಹೋಗಿರುವ …
Read More »ಹೆಚ್ಚಿದ ನೀರಿನ ಪ್ರಮಾಣ: ಮೀನು ಹಿಡಿಯಲು ದೌಡಾಯಿಸಿದ ಯುವಕರ ದಂಡು
ಕೃಷ್ಣಾ ನದಿಯಲ್ಲಿ ನೀರಿನ ಪ್ರಮಾಣ ಹೆಚ್ಚಾಗುತ್ತಿದ್ದಂತೆಯೇ ನದಿತೀರದಲ್ಲಿ ಯುವಕರು ಮೀನು ಹಿಡಿಯಲು ದೌಡಾಯಿಸುತ್ತಿದ್ದಾರೆ.ಹೌದು ಯುವಕರು ಕೈಯಲ್ಲಿ ಗಾಳಗಳನ್ನು ಹಿಡಿದು ನದಿಯತ್ತ ಹೊರಡುವ ದೃಶ್ಯ ಸಾಮಾನ್ಯವಾಗಿದೆ. ಚಿಕ್ಕೋಡಿ, ರಾಯಬಾಗ ತಾಲೂಕಿನ ನದಿತೀರದ ಗ್ರಾಮಗಳಾದ ಯಡ್ರಾವ ನಸಲಾಪುರ, ದಿಗ್ಗೇವಾಡಿ ಮೊದಲಾದ ಗ್ರಾಮಗಳ ಯುವಕರು ಸಹ ಗ್ರಾಮಕ್ಕೆ ಬಂದು ಮೀನು ಹಿಡಿಯುತ್ತಿದ್ದಾರೆ. ಅರ್ಧ, ಒಂದು, ಎರಡು, ಮೂರು ಕಿಲೋವರೆಗಿನ ಮೀನುಗಳು ದೊರೆಯುತ್ತಿವೆ. ಈ ಕಾಯಕ ಕೆಲವರಿಗೆ ಹವ್ಯಾಸವಾದರೆ, ಕೆಲವರ ವೃತ್ತಿಯಾಗಿದೆ. ಇನ್ನೂ ಕೆಲವರು ಹೊಟ್ಟೆ …
Read More »ಎರಡು KSRTC ಬಸ್‍ಗಳ ಮಧ್ಯೆ ಮುಖಾಮುಖಿ ಡಿಕ್ಕಿ
ಎರಡು ಸರ್ಕಾರಿ ಬಸ್‍ಗಳ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿ ಹತ್ತಕ್ಕೂ ಹೆಚ್ಚು ಜನರಿಗೆ ಗಾಯವಾಗಿರುವ ಘಟನೆ ಬೆಳಗಾವಿ-ಬಾಗಲಕೋಟ ರಸ್ತೆಯ ಹಲಕಿ ಕ್ರಾಸ್ ಬಳಿ ನಡೆದಿದೆ. ಬೆಳಗಾವಿ ಜಿಲ್ಲೆ ಸವದತ್ತಿ ತಾಲೂಕಿನ ಹಲಕಿ ಕ್ರಾಸ್ ಬಳಿ ಈ ದುರ್ಘಟನೆ ಸಂಭವಿಸಿದೆ. ಬೆಳಗಾವಿಯಿಂದ ಬಾಗಲಕೋಟೆಯತ್ತ ಹಾಗೂ ಯರಗಟ್ಟಿಯಿಂದ ಬೆಳಗಾವಿಯತ್ತ ಬರುತ್ತಿದ್ದ ಕೆಎಸ್‍ಆರ್‍ಟಿಸಿ ಬಸ್‍ಗಳ ಮಧ್ಯೆ ಅಪಘಾತ ಅಪಘತವಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಆಗಿಲ್ಲ.ಹತ್ತಕ್ಕೂ ಹೆಚ್ಚು ಜನರಿಗೆ ಸಣ್ಣಪುಟ್ಟ ಗಾಯವಾಗಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ …
Read More »ಎಸಿಬಿಗೆ ಮತ್ತೆ ಬೆಂಡೆತ್ತಿದ ನ್ಯಾ.ಸಂದೇಶ್: ಪೂರ್ಣ ಮಾಹಿತಿ ಒದಗಿಸದ್ದಕ್ಕೆ ಅತೃಪ್ತಿ
ಬೆಂಗಳೂರು, ಜು.7. ಬೆಂಗಳೂರು ನಗರ ಜಿಲ್ಲಾಧಿಕಾರಿಯಿಂದ ಲಂಚಕ್ಕೆ ಬೇಡಿಕೆ ಪ್ರಕರಣದಲ್ಲಿ ನ್ಯಾ. ಎಚ್.ಪಿ. ಸಂದೇಶ್ ಅವರಿದ್ದ ಹೈಕೋರ್ಟ್ ಏಕಸದಸ್ಯಪೀಠ ಮತ್ತೆ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಕಾರ್ಯನಿರ್ವಹಣೆ ಬಗ್ಗೆ ಮತ್ತೆ ಕಿಡಿಕಾರಿದೆ. ಅಲ್ಲದೆ, ನ್ಯಾಯಾಲಯದ ಹಿಂದಿನ ಆದೇಶದಂತೆ ಸರ್ಚ್ ವಾರೆಂಟ್ ಜಾರಿ ಮತ್ತು ಸಲ್ಲಿಕೆಯಾಗಿರುವ ಬಿ ರಿಪೋರ್ಟ್ ಗಳ ಬಗ್ಗೆ ಸಂಪೂರ್ಣ ಮಾಹಿತಿ ನೀಡದ್ದಕ್ಕೆ ಅತೃಪ್ತಿ ವ್ಯಕ್ತಪಡಿಸಿದೆ. ಎಸಿಬಿ ಪ್ರಕರಣದ ಮಾಹಿತಿಯನ್ನು ಮುಚ್ಚಿಡುತ್ತಿದೆ ಎಂದು ಅಭಿಪ್ರಾಯಪಟ್ಟ ನ್ಯಾಯಾಲಯ, ಎಷ್ಟು …
Read More »‘ನಿಮ್ಮ ಸರ್ಕಾರಕ್ಕೆ ಮಕ್ಕಳಿಗೆ ಕೊಡಬೇಕಾದ್ದನ್ನು ಕೊಡುವ ಯೋಗ್ಯತೆ ಇಲ್ಲ: ಸಿದ್ಧರಾಮಯ್ಯ
ಬೆಂಗಳೂರು: ನಿಮ್ಮ ಸರ್ಕಾರಕ್ಕೆ ಮಕ್ಕಳಿಗೆ ಕೊಡಬೇಕಾದ್ದನ್ನು ಕೊಡುವ ಯೋಗ್ಯತೆ ಇಲ್ಲದಿದ್ದರೆ ಅವರನ್ನು ಹಂಗಿಸುವ ಸಾಹಸ ಮಾಡಬೇಡಿ ಎಂದು ಪ್ರತಿಪಕ್ಷದ ನಾಯಕ ಸಿದ್ಧರಾಮಯ್ಯ ಅವರು ಶಿಕ್ಷಣ ಸಚಿವ ಬಿ.ಸಿ,ನಾಗೇಶ್ ವಿರುದ್ಧ ಟೀಕಾಪ್ರಹಾರ ನಡೆಸಿದ್ದಾರೆ. ಶಾಲಾ ಮಕ್ಕಳಿಗೆ ಶೂ ಮತ್ತು ಸಾಕ್ಸ್ ನೀಡುವ ವಿಚಾರದಲ್ಲಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರು ನೀಡಿರುವ ಹೇಳಿಕೆ ಅಮಾನವೀಯ. ಅವರ ಮಾತುಗಳು ಬೇಜವಾಬ್ದಾರಿತನ ಹಾಗೂ ಕ್ರೂರತನದಿಂದ ಕೂಡಿದೆ. ಚುನಾವಣೆಗಳು ಹತ್ತಿರ ಬಂದಂತೆಲ್ಲ ಬಿಜೆಪಿಗೆ ಸುಳ್ಳು ಹೇಳುವ …
Read More »ಒಂದು ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ PSI ಬೇಬಿ : ACB ಬಲೆಗೆ ಬಿದ್ದು ವಿಲ ವಿಲ!
ಬೆಂಗಳೂರು : ಬಿಎಂಟಿಎಫ್ ಅಂದ್ರೆ ಬೆಂಗಳೂರು ಮೆಟ್ರೋ ಟಾಸ್ಕ್ ಫೋರ್ಸ್, ಇದರ ಕೆಲಸ ಬಿಬಿಎಂಪಿ ವ್ಯಾಪ್ತಿಯಲ್ಲಿರುವಂತ ಸರ್ಕಾರ ಸ್ವತ್ತುಗಳನ್ನ ಸಂರಕ್ಷಣೆ ಮಾಡುವ ಜವಾಬ್ದಾರಿ. ಆದ್ರೆ ಇಲ್ಲಿನ ಅಧಿಕಾರಿಗಳು ಅದನ್ನಮಾಡೋದನ್ನ ಬಿಟ್ಟು ಭೂ ಒತ್ತುವರಿ ದಾರರು ಸೇರಿದಂತೆ ಪಾಲಿಕೆ ಕಾರ್ಪೊರೇಟರ್ ಗಳ ಬಳಿಯೇ ಸುಲಿಗೆ ಮಾಡುವ ಹಂತಕ್ಕೆ ಇಳಿದಿದ್ದು BMTF ನ ಅಧಿಕಾರಿಯೊಬ್ಬರು ಗುರುವಾರ ಮಧ್ಯಾಹ್ನ ACB ಬಲೆಗೆ ಬಿದ್ದಿದ್ದಾರೆ. ಬೇಲಿಯೇ ಎದ್ದು ಹೊಲ ಮೇಯ್ದಂತಾಯ್ತ BMTF ಕಥೆ ಹೌದು BMTF …
Read More »ಜುಲೈ 9ರಿಂದ ಮದ್ಯ ಮಾರಾಟ ಬಂದ್
ಬೆಂಗಳೂರು: ಮದ್ಯ ಪೂರೈಕೆ ವ್ಯವಸ್ಥೆಯಲ್ಲಿನ ಲೋಪಗಳನ್ನು ರಾಜ್ಯ ಸರ್ಕಾರ ಸರಿಪಡಿಸದಿದ್ದರೆ ಜುಲೈ 9ರಿಂದ ಮದ್ಯ ಮಾರಾಟ ಬಂದ್ ಮಾಡಲಾಗುವುದು ಎಂದು ಮದ್ಯ ಮಾರಾಟಗಾರರ ಒಕ್ಕೂಟದ ರಾಜ್ಯ ಘಟಕದ ಅಧ್ಯಕ್ಷ ಎಸ್.ಗುರುಸ್ವಾಮಿ ಎಚ್ಚರಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮದ್ಯ ಖರೀದಿಗೆ ಅನುಸರಿಸಬೇಕಾದ ಪ್ರಕ್ರಿಯೆಯಲ್ಲಿ ಹತ್ತಾರು ಗೊಂದಲಗಳಿವೆ. ಸಕಾಲದಲ್ಲಿ ಮದ್ಯ ಪೂರೈಕೆಯಾಗದೇ ಬಾರ್ ಮಾಲೀಕರು ಸಂಕಷ್ಟ ಅನುಭವಿಸುವಂತಾಗಿದೆ. ನಮ್ಮನ್ನು ಹೀಗೇಕೆ ಗೋಳು ಹೊಯ್ದುಕೊಳ್ತಿದ್ದೀರಿ? ಎಂದು ಪ್ರಶ್ನಿಸಿದ್ದಾರೆ. ಕೆ ಎಸ್ ಬಿ ಸಿ ಎಲ್ …
Read More »ಪಿಎಸ್‍ಐ ಪರೀಕ್ಷೆ ಹಗರಣವನ್ನು ಇಡಿಗೆ ವರ್ಗಾವಣೆ ಮಾಡುವ ಅವಶ್ಯಕತೆಯಿಲ್ಲ: ಗೃಹ ಸಚಿವ
ಅಕ್ರಮ ಪಿಎಸ್‍ಐ ಪರೀಕ್ಷೆ ಹಗರಣವನ್ನು ಇಡಿಗೆ ವರ್ಗಾವಣೆ ಮಾಡುವ ಅವಶ್ಯಕತೆಯಿಲ್ಲ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಮಹತ್ವದ ಹೇಳಿಕೆ ನೀಡಿದ್ದಾರೆ. ಗೃಹ ಸಚಿವ ಅರಗ ಜ್ಞಾನೇಂದ್ರರವರು ನಿಪ್ಪಾಣಿ ನಗರ ಮತ್ತು ಗ್ರಾಮೀಣ ಪೆÇಲೀಸ್ ಠಾಣೆಗಳ ನೂತನ ಕಟ್ಟಡಗಳ ಉದ್ಘಾಟನೆ ಸಮಾರಂಭ ನೆರವೇರಿಸಿದ ಬಳಿಕ ಮಾಧ್ಯಮಗಳ ಜೊತೆಗೆ ಮಾತನಾಡಿದ ಗೃಹ ಸಚಿವರ ಆರಗ ಜ್ಞಾನೇಂದ್ರ ಅಕ್ರಮ ಪಿಎಸ್‍ಐ ಪರೀಕ್ಷೆ ಹಗರಣವನ್ನು ಇಡಿಗೆ ವರ್ಗಾವಣೆ ಮಾಡುವ ಅವಶ್ಯಕತೆಯಿಲ್ಲ. ಈಗಾಗಲೇ ನಮ್ಮ ಸಿಐಡಿ …
Read More »ಬೆಳಗಾವಿ ಗಡಿತಾಲೂಕಿನಲ್ಲಿ ಪ್ರವಾಹದ ಭೀತಿ
ನೆರೆಯ ಮಹಾರಾಷ್ಟ್ರದಲ್ಲಿ ಮಳೆಯ ಪ್ರಮಾಣ ಹೆಚ್ಚಾಗುತ್ತಿದ್ದು, ಕ್ಷಣಕ್ಷಣಕ್ಕೂ ಬೆಳಗಾವಿಯ ಗಡಿಭಾಗದ ನದಿಗಳಲ್ಲಿ ನೀರಿನ ಮಟ್ಟ ಹೆಚ್ಚಾಗುತ್ತಿದೆ.ಇದರಿಂದ ನದಿ ಪಾತ್ರದಜನರಲ್ಲಿ ಮತ್ತೆ ಪ್ರವಾಹದ ಭೀತಿಎದುರಾಗಿದೆ. ಮಹಾರಾಷ್ಟ್ರದಲ್ಲಿ ಮಳೆಯ ಅಬ್ಬರದಿಂದಾಗಿರಾಜ್ಯಕ್ಕೆಅಪಾರ ಪ್ರಮಾಣದ ನೀರುಹರಿದು ಬರುತ್ತಿದೆ.ಮಹಾರಾಷ್ಟ್ರದಘಟ್ಟ ಪ್ರದೇಶಗಳಲ್ಲಿ ಸುರಿಯುತ್ತಿರುವ ಭಾರಿ ಪ್ರಮಾಣದದಲ್ಲಿಮಳೆ ಸುರಿಯುತ್ತಿದೆ.ಇದರಿಂದಾಗಿಬೆಳಗಾವಿ ಜಿಲ್ಲೆಯಕೃ.ದೂದಗಂಗಾ ವೇದಗಂಗಾ ನದಿಗಳಿಗೆ ಅಪಾರ ಪ್ರಮಾಣದ ನೀರು ಹರಿದು ಬರುತ್ತಿದೆ. ಈಗಾಗಲೇ ಚಿಕ್ಕೋಡಿ, ರಾಯಬಾಗ, ಅಥಣಿತಾಲೂಕಿನ ನದಿ ಪಾತ್ರದ ಗ್ರಾಮಗಳಲ್ಲಿ ಅಲರ್ಟಘೋಷಣೆ ಮಾಡಲಾಗಿದೆ. ಈಗಾಗಲೆ ನದಿ ಪಾತ್ರದಲ್ಲಿಜನರಲ್ಲಿಎಚ್ಚರ ವಹಿಸುವಂತೆ ಜಿಲ್ಲಾಡಳಿದ …
Read More »
Laxmi News 24×7