Breaking News

ರಾಜಕೀಯ

ಇದೇ ಜೂನ್ 30 ರಂದು ನಿವೃತ್ತಿಯಾಗಬೇಕಿದ್ದ ಲೋಕೋಪಯೋಗಿ ಅಧೀಕ್ಷಕರ ಮನೆ ಹಾಗೂ ಕಚೇರಿಯ ಮೇಲೆ ಎಸಿಬಿ ಅಧಿಕಾರಿಗಳ ದಾಳಿ

ಇದೇ ಜೂನ್ 30 ರಂದು ನಿವೃತ್ತಿಯಾಗಬೇಕಿದ್ದ ಲೋಕೋಪಯೋಗಿ ಅಧೀಕ್ಷಕರ ಮನೆ ಹಾಗೂ ಕಚೇರಿಯ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ಮಾಡಿದ ಘಟನೆ ಬೆಳಗಾವಿಯಲ್ಲಿ ಇಂದು ಬೆಳ್ಳಂಬೆಳಿಗ್ಗೆ ನಡೆದಿದೆ. ಇಂದು ಬೆಳ್ಳಂಬೆಳಿಗ್ಗೆ ಬೆಳಗಾವಿಯ ಲೋಕೋಪಯೋಗಿ ಅಧೀಕ್ಷಕರಾದ ಬಿ.ವೈ ಪವಾರ್ ರವರ ಮನೆ ಹಾಗೂ ಕಚೇರಿಯ ಮೇಲೆ ಎಸಿಬಿ ಅಧಿಕಾರಿಳು ದಾಳಿ ನಡೆಸಿದ್ದಾರೆ. ಬೆಳ್ಳಂ ಬೆಳಿಗ್ಗೆ 25ಕ್ಕೂ ಹೆಚ್ಚು ಸಿಬ್ಬಂದಿಯುಳ್ಳ ಎಸಿಬಿ ಅಧಿಕಾರಿಗಳ ತಂಡ ದಾಳಿ ನಡೆಸಿದೆ. ವೃತ್ತಿ ಅಂಚಿನಲ್ಲಿದ್ದ ಹಿರಿಯ ಅಧಿಕಾರಿ …

Read More »

ಬೆಳಗಾವಿ ವಕೀಲರ ಹೋರಾಟಕ್ಕೆ ಮಣಿದ ಸರ್ಕಾರ: ರಾಜ್ಯ ಗ್ರಾಹಕರ ಆಯೋಗ ಪೀಠ ಸ್ಥಾಪನೆಗೆ ಆದೇಶ

ಕರ್ನಾಟಕ ರಾಜ್ಯ ಗ್ರಾಹಕರ ಆಯೋಗದ ಪೀಠವನ್ನು ಬೆಳಗಾವಿಯಲ್ಲಿ ಶೀಘ್ರವೇ ಪ್ರಾರಂಭಿಸುವಂತೆ ಆಗ್ರಹಿಸಿ ಬೆಳಗಾವಿಯ ನ್ಯಾಯವಾದಿಗಳು ನಡೆಸಿದ ಉಪವಾಸ ಸತ್ಯಾಗ್ರಹಕ್ಕೆ ಕೊನೆಗೂ ರಾಜ್ಯ ಸರ್ಕಾರ ಮಣಿದಿದೆ. ಬೆಳಗಾವಿಯಲ್ಲಿ ಪೀಠ ಆರಂಭಿಸಲು ಆದೇಶ ಹೊರಡಿಸಿದೆ. ಹೌದು ಬೆಳಗಾವಿಯಲ್ಲಿ ರಾಜ್ಯ ಗ್ರಾಹಕರ ಆಯೋಗದ ಪೀಠವನ್ನು ಆರಂಭಿಸುವಂತೆ ಆಗ್ರಹಿಸಿ ಬೆಳಗಾವಿಯ ನ್ಯಾಯವಾದಿಗಳು ಉಪವಾಸ ಸತ್ಯಾಗ್ರಹ ಹಮ್ಮಿಕೊಂಡಿದ್ದರು. ನಮ್ಮ ಬೇಡಿಕೆ ಈಡೇರುವವರೆಗೂ ಯಾವುದೇ ಕಾರಣಕ್ಕೂ ಪ್ರತಿಭಟನೆ ವಾಪಸ್ಸು ಪಡೆಯೋದಿಲ್ಲ ಎಂದು ಪಟ್ಟು ಹಿಡಿದಿದ್ದರು. ಇದರಿಂದ ಎಚ್ಚೆತ್ತುಕೊಂಡ ರಾಜ್ಯ …

Read More »

ದಂತ ವೈದ್ಯರ ಎಡವಟ್ಟು – ಚಿಕಿತ್ಸೆ ಪಡೆದ ನಟಿಯ ಮುಖ ಸಂಪೂರ್ಣ ಚೇಂಚ್

ಬೆಂಗಳೂರು: ಜೆಪಿ ನಗರದ ಡೆಂಟಲ್ ಆಸ್ಪತ್ರೆಯೊಂದರಲ್ಲಿ ಹಲ್ಲು ನೋವಿಗೆ ಚಿಕಿತ್ಸೆ ತೆಗೆದುಕೊಂಡ ನಟಿಯ ಮುಖ ರಾತ್ರಿ ಕಳೆದು ಬೆಳಗಾಗುವಷ್ಟರಲ್ಲಿ ಸಂಪೂರ್ಣ ಚೇಂಚ್ ಆಗಿರುವ ಘಟನೆ ಬೆಳಗಿಗೆ ಬಂದಿದೆ. ಹಲ್ಲು ನೋವಿನಿಂದ ಬಳಲುತ್ತಿದ್ದ ನಟಿ ಬೆಂಗಳೂರಿನ ಜೆಪಿ ನಗರದ ಡೆಂಟಲ್ ಆಸ್ಪತ್ರೆಯೊಂದರಲ್ಲಿ ಕಳೆದ 28 ದಿನಗಳ ಹಿಂದೆ ಚಿಕಿತ್ಸೆ ತೆಗೆದುಕೊಂಡಿದ್ದರು. ಆ ಬಳಿಕ ರಾತ್ರಿ ಕಳೆದು ಬೆಳಗಾಗುವಷ್ಟರಲ್ಲಿ ನಟಿಯ ಮುಖ ಸಂಪೂರ್ಣ ಊದಿಕೊಂಡು ರೂಪವೇ ಬದಲಾಗಿದೆ. ಇದೀಗ ಕಳೆದ ಇಪ್ಪತ್ತು ದಿನದಿಂದ ಮನೆಯಿಂದ …

Read More »

ಎಸಿಬಿ ದಾಳಿ: ಉಡುಪಿಯ ಸಣ್ಣ ನೀರಾವರಿ ಅಧಿಕಾರಿ ಹರೀಶ್ ಮನೆಯಲ್ಲಿ ಚಿನ್ನದ ಖಜಾನೆ

ಉಡುಪಿ: ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಉಪವಿಭಾಗ ಇಲಾಖೆಯ ಸಹಾಯಕ ಅಭಿಯಂತರ ಹರೀಶ್ ಅವರ ಕೊರಂಗ್ರಪಾಡಿಯ ಬೈಲೂರು ನಿವಾಸಕ್ಕೆ ಶುಕ್ರವಾರ ಮುಂಜಾನೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದು, ಅಪಾರ ಪ್ರಮಾಣದ ಚಿನ್ನಾಭರಣ ಪತ್ತೆಯಾಗಿದೆ.   1.5 ಕೆಜಿ ಚಿನ್ನ, ಮುಕ್ಕಾಲು ಕೆಜಿ ಬೆಳ್ಳಿ, ಇನ್ನೋವಾ ಕಾರು, ಮಾರುತಿ ಆಲ್ಟೋ 800, 2 ದ್ವಿಚಕ್ರವಾಹನಗಳು ಪತ್ತೆಯಾಗಿವೆ. 4.30 ಲ.ರೂ.ನಗದು ಹಾಗೂ ಅಪಾರ ಪ್ರಮಾಣದ ದಾಖಲೆ ಪತ್ರಗಳು ಮನೆಯಲ್ಲಿ ದೊರೆತಿವೆ. ಇವಿಷ್ಟೇ ಅಲ್ಲದೆ …

Read More »

ಸೋನಿಯಾ-ರಾಹುಲ್‌ಗೆ ಸಮನ್ಸ್‌; ಬೆಳಗಾವಿಯಲ್ಲಿ ಕಾಂಗ್ರೆಸ್‌ ಬೃಹತ್‌ ಪ್ರತಿಭಟನೆ

ಬೆಳಗಾವಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಸಾಂವಿಧಾನಿಕ ಸಂಸ್ಥೆಯಾದ ಇಡಿಯನ್ನು ದುರ್ಬಳಕೆ ಮಾಡಿಕೊಂಡು ಕೃತಕವಾಗಿ ಸೃಷ್ಟಿಸಿದ ಕೇಸ್‌ ನಲ್ಲಿ ತನಿಖೆ ಕೈಗೆತ್ತಿಕೊಂಡು ಕಾಂಗ್ರೆಸ್‌ ಪಕ್ಷದ ಗೌರವಾನ್ವಿತ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ಭೂತಪೂರ್ವ ಅಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ಸಮನ್ಸ್ ನೀಡಿ ವಿನಾಕಾರಣ ಕಿರುಕುಳ ನೀಡುತ್ತಿರುವ ಕ್ರಮ ಸರಿಯಲ್ಲ ಎಂದು ಮಾಜಿ ಸಚಿವ ಆರ್.‌ ಬಿ. ತಿಮ್ಮಾಪುರ ಆಕ್ರೋಶ ವ್ಯಕ್ತಪಡಿಸಿದರು. ಬೆಳಗಾವಿ ಗ್ರಾಮೀಣ ಹಾಗೂ ಬೆಳಗಾವಿ ನಗರ …

Read More »

ಶಾಮನೂರು ಮೊಮ್ಮಗಳ ವರಿಸಿದ ಸಿಎಂ ಬೊಮ್ಮಾಯಿ ಆಪ್ತನ ಪುತ್ರ

ಶಾಮನೂರು ಶಿವಶಂಕರಪ್ಪನವರ ಮೊಮ್ಮಗಳಾದ ಅಕ್ಷತ ಹಾಗು ಸಿಎಂ ಬಸವರಾಜ ಬೊಮ್ಮಾಯಿಯರ ಆಪ್ತನ ಮಗನಾದ ಅಭಿಷೇಕ್‌ ಪಾಟೀಲ್ ಕಲ್ಯಾಣ ಅದ್ಧೂರಿಯಾಗಿ ಜರುಗಿತು. ದಾವಣಗೆರೆಯ ಬಾಪೂಜಿ ಕಲ್ಯಾಣ ಮಂಟಪದಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗಿಯಾಗಲು ಸಿಎಂ ಬೊಮ್ಮಾಯಿ ಬೆಳಿಗ್ಗೆಯೇ ಆಗಮಿಸಿದ್ದರು.

Read More »

ಪೋಲೀಸ್ ಅಧಿಕಾರಿ ಉದಯ ರವಿ ಮನೆಗಳ ಮೇಲೆ ಎಸಿಬಿ ದಾಳಿ

ಗಂಗಾವತಿ : ಗಂಗಾವತಿ ಗ್ರಾಮೀಣ ವೃತ್ತದ ಪೊಲೀಸ್ ಅಧಿಕಾರಿಯಾಗಿದ್ದ ಪ್ರಸ್ತುತ ಪೊಲೀಸ್ ಗುಪ್ತಚರ ಇಲಾಖೆ ಅಧಿಕಾರಿ ಉದಯರವಿ ಅವರ ಗಂಗಾವತಿ ಮನೆ ಸೇರಿದಂತೆ ವಿವಿಧೆಡೆ ಇರುವ 4 ಮನೆಗಳ ಮೇಲೆ ಎಸಿಬಿ ಡಿವೈಎಸ್ಪಿ ಶಿವಕುಮಾರ್ ಹಾಗೂ ಸಬ್ ಇನ್ಸ್ ಪೆಕ್ಟರ್ ಆಂಜನೇಯ ನೇತೃತ್ವದ ಅಧಿಕಾರಿಗಳು ದಾಳಿ ಮಾಡಿ ಶೋಧ ನಡೆಸಿದ್ದಾರೆ .   ಉದಯರವಿ ಅವರು ಗಂಗಾವತಿ ನಗರ ಠಾಣೆ ಗ್ರಾಮೀಣ ಠಾಣೆಗಳಲ್ಲಿ ಪಿ ಐ ಆಗಿ ಕಾರ್ಯ ನಿರ್ವಹಿಸಿದ್ದರು.ಇತ್ತೀಚೆಗಷ್ಟೇ ಬೆಂಗಳೂರಿಗೆ …

Read More »

ಪಂಚಾಯತ್‌ಗಳಲ್ಲಿ ಪತ್ನಿ ಬದಲು ಪತಿ ಅಧಿಕಾರಕ್ಕೆ ಬ್ರೇಕ್‌ !

ಬೆಂಗಳೂರು: ಗ್ರಾಮ ಪಂಚಾಯತ್‌ಗೆ ಚುನಾಯಿತರಾಗಿರುವ ಮಹಿಳೆಯು ತನ್ನ ಅಧಿಕಾರದಲ್ಲಿ ಗಂಡ ಅಥವಾ ಮನೆಯ ಬೇರೆ ಯಾರಾದರೂ ಹಸ್ತಕ್ಷೇಪ ನಡೆಸಲು ಅವಕಾಶ ನೀಡಿದರೆ ಆಕೆಯ ಸದಸ್ಯತ್ವವೇ ರದ್ದಾಗಲಿದೆ. ಇಂಥದ್ದೊಂದು ಕಟ್ಟುನಿಟ್ಟಿನ ಆದೇಶವನ್ನು ರಾಜ್ಯ ಸರಕಾರ ಹೊರಡಿಸಿದೆ.   ಸಿಎಂಗೆ ಮನವಿ : ಗ್ರಾಮ ಪಂಚಾಯತ್‌ಗಳಲ್ಲಿ ಮಹಿಳಾ ಸದಸ್ಯರುಗಳ ಅಧಿಕಾರದಲ್ಲಿ ಹಸ್ತಕ್ಷೇಪ ಮಾಡಿ, ಬಧಿಸಿದಂತೆ, ಗ್ರಾಮ ಪಂಚಾಯತಿಗಳಲ್ಲಿ ಚುನಾಯಿತರಾಗಿರುವ ಮಹಿಳಾ ಸದಸ್ಯರುಗಳ ಪರವಾಗಿ ಮಹಿಳಾ ಸದಸ್ಯರ ಪತಿ ಮತ್ತು ಮತ್ತು ಕುಟುಂಬದವರು ಪಂಚಾಯತಿಗಳ ಕಾರ್ಯಕಲಾಪಗಳಲ್ಲಿ …

Read More »

ಗೊಬ್ಬರ ಕೇಳಿದ್ದಕ್ಕೆ ಕೇಂದ್ರ ಸಚಿವ ಖೂಬಾ ತರಾಟೆ

ಔರಾದ್/ ಬೀದರ್‌: ಗೊಬ್ಬರ ಕಳುಹಿಸುವಂತೆ ದೂರವಾಣಿ ಕರೆ ಮಾಡಿದ ಔರಾದ್ ತಾಲ್ಲೂಕಿನ ಹೆಡಗಾಪುರ ಗ್ರಾಮದ ವ್ಯಕ್ತಿಯೊಬ್ಬರನ್ನು ಕೇಂದ್ರ ರಸಗೊಬ್ಬರ ಖಾತೆ ರಾಜ್ಯ ಸಚಿವ ಭಗವಂತ ಖೂಬಾ ಅವರು ತರಾಟೆಗೆ ತೆಗೆದುಕೊಂಡಿರುವ ಮೊಬೈಲ್‌ ಸಂಭಾಷಣೆಯ ರೆಕಾರ್ಡಿಂಗ್ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದೆ.   ಸಚಿವ ಖೂಬಾ ಅವರಿಗೆ, ಕುಶಾಲ ಪಾಟೀಲ ಎಂಬುವರು ಕರೆ ಮಾಡಿ, ‘ನಮ್ಮ ಊರಲ್ಲಿ ಗೊಬ್ಬರ ಸಿಗುತ್ತಿಲ್ಲ. ಜನ ಕೆಟ್ಟದಾಗಿ ಮಾತನಾಡುತ್ತಿದ್ದಾರೆ. ಹೀಗಾದರೆ ನಿಮಗೆ ಮುಂದೆ ಚುನಾವಣೆಯಲ್ಲಿ ತೊಂದರೆಯಾಗುತ್ತದೆ’ ಎಂದು ಹೇಳಿದ್ದಾರೆ. …

Read More »

ಜ್ಞಾನಭಾಸ್ಕರ ಸ್ವಾಮೀಜಿ ಶಂಕಾಸ್ಪದ ಸಾವು

ಹಿರಿಯೂರು: ನಗರದ ಚಿಟುಗು ಮಲ್ಲೇಶ್ವರ ಮಹಾಸಂಸ್ಥಾನದ ಗುರುಗಳಾದ ಜ್ಞಾನಭಾಸ್ಕರ ಸ್ವಾಮೀಜಿ (75) ಗುರುವಾರ ಬೆಳಿಗ್ಗೆ ಚಿಟುಗು ಮಲ್ಲೇಶ್ವರ ದೇವಸ್ಥಾನದ ಆವರಣದಲ್ಲಿನ ನಿವಾಸದಲ್ಲಿ ಅಸಹಜ ರೀತಿಯಲ್ಲಿ ಮೃತಪಟ್ಟಿದ್ದಾರೆ.   ಬೆಳಿಗ್ಗೆ ಸ್ನಾನಗೃಹದಲ್ಲಿ ಅವರ ಮೃತದೇಹ ಕಂಡುಬಂದಿದೆ. ಸ್ನಾನಕ್ಕೆ ನೀರು ಕಾಯಿಸಿಕೊಳ್ಳುವಾಗ ವಿದ್ಯುತ್ ಸ್ಪರ್ಶದಿಂದ ಮೃತಪಟ್ಟಿರಬಹುದೇ ಅಥವಾ ಸಾವಿಗೆ ಬೇರೆ ಕಾರಣ ಇರಬಹುದೇಎಂಬ ಶಂಕೆ ಭಕ್ತರಲ್ಲಿದೆ. ನಗರಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಿಶ್ವಕರ್ಮ ಸಮಾಜದ ಒಕ್ಕೂಟದಲ್ಲಿನ 63 ಗುರುಗಳ ಪೈಕಿ ಈ ಇವರು ಒಬ್ಬರು. …

Read More »