Breaking News

ರಾಜಕೀಯ

ಮುಸ್ಲಿಂ ಯುವತಿ ಜೊತೆ ಪ್ರೀತಿ.. ಈಗ ಮತ್ತೊಬ್ಬ ಯುವಕನನ್ನು ಹತ್ಯೆ ಮಾಡಿದ ಯುವತಿ ಸಂಬಂಧಿಕರು

ಮುಸ್ಲಿಂ ಯುವತಿಯನ್ನು ಪ್ರೀತಿಸಿ ಮದುವೆಯಾಗಿದ್ದ ಹಿಂದೂ ಯುವಕನ್ನ ಬರ್ಬರವಾಗಿ ಕೊಚ್ಚಿಕೊಂದ ಘಟನೆ ಇತ್ತೀಚೆಗೆ ಹೈದ್ರಾಬಾದ್​​ನಲ್ಲಿ ನಡೆದಿತ್ತು. ಈ ಕ್ರೂರ ಕೃತ್ಯಕ್ಕೆ ಇಡೀ ದೇಶವೇ ಬೆಚ್ಚಿ ಬಿದ್ದಿತ್ತು. ಇದೀಗ ಅಂತಹುದೇ ಮತ್ತೊಂದು ಪ್ರಕರಣ ಗುಜರಾತ್​ನ ರಾಜ್​ಕೋಟ್​​ನಲ್ಲಿ ನಡೆದಿದೆ. ಏನಿದು ಪ್ರಕರಣ..?  ಮುಸ್ಲಿಂ ಯುವತಿಯನ್ನ ಪ್ರೀತಿ ಮಾಡಿದ್ದಕ್ಕೆ ಆಕ್ರೋಶಗೊಂಡ ಹುಡುಗಿಯ ಸಂಬಂಧಿಕರು 22 ವರ್ಷದ ಮಿಥುನ್ ಎಂಬ ಯುವಕನನ್ನ ಹೊಡೆದು ಸಾಯಿಸಿದ್ದಾರೆ. ಯುವಕ ಮಿಥುನ್,  ಸುಮೈಯಾ (Sumaiya) ಎಂಬ ಮುಸ್ಲಿಂ ಯುವತಿಯನ್ನ ಪ್ರೀತಿಸುತ್ತಿದ್ದ. …

Read More »

ಈ ಸಂಖ್ಯೆಗೆ ಕರೆ ಮಾಡಿದ್ರೆ 72 ಗಂಟೆಯೊಳಗೆ ಮನೆ ಬಾಗಿಲಿಗೆ ಬರಲಿದೆ ಪಿಂಚಣಿ!

ಬೆಂಗಳೂರು : ಪಿಂಚಣಿದಾರರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿಯೊಂದನ್ನು ನೀಡಿದ್ದು, ಪಿಂಚಣಿ ಮಂಜೂರಾತಿಗೆ ‘ಹಲೋ ಕಂದಾಯ ಸಚಿವರೇ’ ಎಂಬ ಸಹಾಯವಾಣಿ ಆರಂಭಿಸಿದ್ದು, ಅರ್ಜಿ ಸಲ್ಲಿಸಿದ 72 ಗಂಟೆ ಒಳಗಾಗಿ ಅರ್ಹ ಫಲಾನುಭವಿಗಳಿಗೆ ಪಿಂಚಣಿ ತಲುಪಿಸುವ ಯೋಜನೆಗೆ ಕಂದಾಯ ಇಲಾಖೆ ಆದೇಶ ಹೊರಡಿಸಿದೆ.   ಇಂದು ಕಂದಾಯ ಇಲಾಖೆಯ ಮಹತ್ವಾಕಾಂಕ್ಷಿ ಯೋಜನೆ ಹಲೋ ಕಂದಾಯ ಸಚಿವರೇ ಹೆಸರಿನ ಸಹಾಯವಾಣಿ ಸೇವೆಗೆ ಸಿಎಂ ಬಸವರಾಜ ಬೊಮ್ಮಾಯಿ ಚಾಲನೆ ನೀಡಲಿದ್ದಾರೆ. ಈ ಸಂಬಂಧ ಮಧ್ಯಾಹ್ನ ವಿಧಾನಸೌಧದ …

Read More »

ಬೆಂಗಳೂರಿನಲ್ಲಿ ಋಷಿಕುಮಾರ ಸ್ವಾಮಿ ಮುಖಕ್ಕೆ ಮಸಿ ಬಳಿದು ಪರಾರಿ

ಬೆಂಗಳೂರು : ಋಷಿಕುಮಾರ ಸ್ವಾಮಿ ಮುಖಕ್ಕೆ ಕಿಡಿಗೇಡಿಗಳು ಮಸಿ ಬಳಿದು ಪರಾರಿಯಾಗಿರುವ ಘಟನೆ ಬೆಂಗಳೂರಿನ ಮಲ್ಲೇಶ್ವರದಲ್ಲಿ ಗುರುವಾರ ಸಂಜೆ 6.30 ರ ಸುಮಾರಿಗೆ ನಡೆದಿದೆ. ಬೆಂಗಳೂರಿನ ಮಲ್ಲೇಶ್ವರದ ಗಂಗಮ್ಮನ ದೇವಾಲಯಕ್ಕೆ ಬಂದಿದ್ದ ಋಷಿಕುಮಾರಸ್ವಾಮೀಜಿಗೆ ಕಿಡಿಗೇಡಿಗಲು ಬಸಿ ಬಳಿದು ಪರಾರಿಯಾಗಿದ್ದಾರೆ. ನಾಡಪ್ರಭು ಕೆಂಪೇಗೌಡ, ಕುವೆಂಪು ವಿರುದ್ಧ ಹೇಳಿಕೆ ನೀಡಿದ್ದೀರಿ ಎಂದು ಆರೋಪಿಸಿ ಸ್ವಾಮೀಜಿ ಮುಖಕ್ಕೆ ಮಸಿ ಬಳಿದಿದ್ದಾರೆ. ಘಟನೆ ಸಂಬಂಧ ಋಷಿಕುಮಾರ ಸ್ವಾಮೀಜಿ ಇಂದು ಮಲ್ಲೇಶ್ವರ ಠಾಣೆಗೆ ದೂರು ನೀಡಲಿದ್ದಾರೆ.

Read More »

ಬೆಳಗಾವಿ: ಜಿಲ್ಲೆಯಾದ್ಯಂತ ಮಾದರಿ ನೀತಿಸಂಹಿತೆ ಜಾರಿ: ನಿತೇಶ್ ಪಾಟೀಲ

ಬೆಳಗಾವಿ: ‘ವಿಧಾನಪರಿಷತ್ತಿನ ವಾಯವ್ಯ ಪದವೀಧರ ಮತ್ತು ಶಿಕ್ಷಕರ ಮತಕ್ಷೇತ್ರಗಳ ಚುನಾವಣೆ ಘೋಷಣೆಯಾಗಿದ್ದು, ಗುರುವಾರದಿಂದಲೇ ಮಾದರಿ ನೀತಿಸಂಹಿತೆ ಜಾರಿಗೆ ಬಂದಿದೆ. ಎಲ್ಲ ರಾಜಕೀಯ ಪಕ್ಷಗಳೂ ಕಡ್ಡಾಯವಾಗಿ ಪಾಲಿಸಬೇಕು’ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದರು.   ಇಲ್ಲಿ ಗುರುವಾರ ನಡೆದ ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ‘ಸರ್ಕಾರದ ಹೊಸ ಯೋಜನೆ, ಕಾರ್ಯಕ್ರಮಗಳನ್ನು ಘೋಷಿಸುವಂತಿಲ್ಲ. ಪ್ರಚಾರ ಕೂಡ ಕೋವಿಡ್ ಮಾರ್ಗಸೂಚಿ ಪ್ರಕಾರ ನಡೆಸಬೇಕಾಗುತ್ತದೆ. ಈ ಬಗ್ಗೆ ಚುನಾವಣಾ ಆಯೋಗ …

Read More »

ವಾಯವ್ಯ ಶಿಕ್ಷಕರ ಕ್ಷೇತ್ರಕ್ಕೆ ಜೂನ್‌ 13ಕ್ಕೆ ಚುನಾವಣೆ: ಘಟಾನುಘಟಿಗಳ ಸ್ಪರ್ಧೆ

ಬೆಳಗಾವಿ: ಬೆಳಗಾವಿ, ಬಾಗಲಕೋಟೆ ಮತ್ತು ವಿಜಯಪುರ ಜಿಲ್ಲೆಗಳನ್ನು ಒಳಗೊಂಡ ವಾಯವ್ಯ ಶಿಕ್ಷಕರ ಮತ್ತು ಪದವೀಧರರ ಕ್ಷೇತ್ರದಿಂದ ವಿಧಾನಪರಿಷತ್‌ಗೆ ನಡೆಯಲಿರುವ (ಜೂನ್‌ 13) ಚುನಾವಣಾ ಕಣ ಘಟಾನುಘಟಿಗಳ ಸ್ಪರ್ಧೆಯಿಂದಾಗಿ ರಂಗೇರಿದೆ. ಪ್ರತಿಷ್ಠೆ-ಪೈಪೋಟಿಗೆ ವೇದಿಕೆಯೂ ಆಗಿದೆ.    ಅರುಣ ಶಹಾಪುರ ಶಿಕ್ಷಕರ ಕ್ಷೇತ್ರದಿಂದ ಹಾಲಿ ಸದಸ್ಯ ಅರುಣ ಶಹಾಪುರ ಅವರಿಗೆ ಬಿಜೆಪಿ ಮತ್ತೊಮ್ಮೆ ಟಿಕೆಟ್ ನೀಡಿದೆ. ಪ್ರತಿ ಸ್ಪರ್ಧಿಯಾಗಿ ಕಾಂಗ್ರೆಸ್‌ನ ಪ್ರಕಾಶ ಹುಕ್ಕೇರಿ ಕಣದಲ್ಲಿದ್ದಾರೆ. ಪದವೀಧರರ ಕ್ಷೇತ್ರದಲ್ಲಿ ಹಾಲಿ ಸದಸ್ಯ ಹಣಮಂತ ನಿರಾಣಿ ಅವರಿಗೆ …

Read More »

‘ನೀನೇ ಸಾಕಿದ ಗಿಣಿ, ನಿನ್ನ ಮುದ್ದಿನ ಗಿಣಿ, ಹದ್ದಾಗಿ ಕುಕ್ಕಿತ್ತಲ್ಲೋ”: ಡಿಕೆಶಿ ವಿರುದ್ಧ ರಾಜ್ಯ ಬಿಜೆಪಿ ಅಪಹಾಸ್ಯ

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿಕೆಶಿ ವಿರುದ್ಧ ಮಾಜಿ ಸಂಸದೆ ರಮ್ಯಾ ತಿರುಗಿಬಿದ್ದಿರುವ ಸಂಬಂಧ ರಾಜ್ಯ ಬಿಜೆಪಿ ಟೀಕಿಸಿದೆ. ಈ ಕುರಿತು ಬೆಂಗಳೂರಿನಲ್ಲಿ ಟ್ವೀಟ್ ಮಾಡಿರುವ ಬಿಜೆಪಿ, ಭ್ರಷ್ಟಾಧ್ಯಕ್ಷ ಡಿಕೆಶಿ ಅವರೇ, ನೀವು ನಿಜಕ್ಕೂ ಕೆಪಿಸಿಸಿ ಅಧ್ಯಕ್ಷರೇ? ಸಾರ್ವಜನಿಕ ಬದುಕಿನಿಂದ ಕಳೆದು ಹೋದವರೆಲ್ಲ ಈಗ ಬಂದು ಕೆಪಿಸಿಸಿ ಅಧ್ಯಕ್ಷರಿಗೆ ಪಾಠ ಹೇಳುತ್ತಿರುವುದನ್ನು ನೋಡಿದರೆ, ಕನಕಪುರದ ಬಂಡೆ ಎಷ್ಟು ಗಟ್ಟಿ ಎಂದು ಯೋಚಿಸಬೇಕಲ್ಲವೇ? ಡಿಕೆಶಿ ಅವರನ್ನು ಅಧೀರರನ್ನಾಗಿಸುವ ಹಿಂದೆ ಮೀರ್‌ ಸಾದಿಕ್‌ ತಂತ್ರವಿದೆಯೇ? ಎಂದು …

Read More »

ಪಿಎಸ್‌ಐ ನೇಮಕಾತಿ ಅಕ್ರಮ’ದ ‘ಮೊದಲನೇ ಕಿಂಗ್ ಪಿನ್ ಡಿವೈಎಸ್ಪಿ ಶಾಂತಕುಮಾರ್’ ಅರೆಸ್ಟ್

ಬೆಂಗಳೂರು: 545 ಪಿಎಸ್‌ಐ ನೇಮಕಾತಿ ಅಕ್ರಮ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈಗಾಗಲೇ ಪೊಲೀಸ್ ನೇಮಕಾತಿ ವಿಭಾಗಕ್ಕೂ ಲಗ್ಗೆ ಇಟ್ಟಿದ್ದಂತ ಸಿಐಡಿ ಅಧಿಕಾರಿಗಳು, ನಾಲ್ವರು ಅಧಿಕಾರಿಗಳ ಸಹಿತ ಇಬ್ಬರು ಬ್ರೋಕರ್ ಸೇರಿ ಆರು ಮಂದಿಯನ್ನು ಬಂಧಿಸಿದ್ದರು. ಈಗ ಮುಂದುವರೆದು ನೇಮಕಾತಿ ವಿಭಾಗದಲ್ಲಿನ ಡಿವೈಎಸ್ಪಿಯನ್ನು ಬಂಧಿಸಿದ್ದಾರೆ.   ಪಿಎಸ್‌ಐ ನೇಮಕಾತಿ ಅಕ್ರಮ ಪ್ರಕರಣದಲ್ಲಿ ತನಿಖೆ ನಡೆಸುತ್ತಿರುವಂತ ಸಿಐಡಿ ಅಧಿಕಾರಿಗಳು ಪೊಲೀಸ್ ಅಧಿಕಾರಿಗಳು, ಅಭ್ಯರ್ಥಿಗಳು ಸಹಿತ ಹಲವು ಕಿಂಗ್ ಪಿನ್ ಗಳನ್ನು ಬಂಧಿಸಿದ್ದಾರೆ. ಇಂದು …

Read More »

P.S.I. ಹಗರಣ: ಧಾರವಾಡದ ಪ್ರಮುಖ ಕೋಚಿಂಗ್ ಸೆಂಟರ್ ನ ಶಿಕ್ಷಕನನ್ನು ವಶಕ್ಕೆ ಪಡೆದ ಸಿಐಡಿ

ಹುಬ್ಬಳ್ಳಿ: ಪಿಎಸ್‌ಐ ನೇಮಕಾತಿ ಹಗರಣದ ತನಿಖೆಯನ್ನು ಮತ್ತಷ್ಟು ಚುರುಕುಗೊಳಿಸಿರುವ ಸಿಐಡಿ ಪೊಲೀಸರು, ಧಾರವಾಡದ ಖ್ಯಾತ ಕೋಚಿಂಗ್ ಸೆಂಟರ್‌ ನ ಶಿಕ್ಷಕರೊಬ್ಬರನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ. ಸಪ್ತಾಪುರಭಾವಿ ಪ್ರದೇಶದಲ್ಲಿರುವ ಕೋಚಿಂಗ್ ಸೆಂಟರ್‌ನಲ್ಲಿ ಮಂಗಳವಾರ ಶಿಕ್ಷಕನನ್ನು ವಶಕ್ಕೆ ಪಡೆಯಲಾಗಿದ್ದು, ಬುಧವಾರವೂ ವಿಚಾರಣೆ ಮುಂದುವರೆದಿದೆ.   ಹಗರಣದಲ್ಲಿ ಭಾಗಿಯಾಗಿರುವ ಅಭ್ಯರ್ಥಿಗಳಲ್ಲಿ ಒಬ್ಬರು ನೀಡಿದ ಮಾಹಿತಿಯ ಆಧಾರದ ಮೇಲೆ ಈ ಶಿಕ್ಷಕನನ್ನು ವಶಕ್ಕೆ ಪಡೆಯಲಾಗಿದೆ ಮತ್ತು ವಿಚಾರಣೆ ನಡೆಯುತ್ತಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. …

Read More »

ಕರ್ನಾಟಕದ ನಾಲ್ಕು ‘ರಾಜ್ಯಸಭಾ ಸ್ಥಾನ’ಗಳಿಗೆ ಚುನಾವಣೆ ಘೋಷಣೆ: ಜೂ.10ರಂದು ಮತದಾನ, ಅಂದೇ ಫಲಿತಾಂಶ |

ನವದೆಹಲಿ: ದಿನಾಂಕ 30-06-2022ರಂದು ನಿವೃತ್ತಿಯಾಗಲಿರುವಂತ ಕರ್ನಾಟಕದಿಂದ ರಾಜ್ಯಸಭೆಗೆ ( Rajya Sabha ) ಆಯ್ಕೆಯಾಗಿದ್ದಂತ ನಾಲ್ಕು ಸ್ಥಾನಗಳು ಸೇರಿದಂತೆ ದೇಶದ 15 ರಾಜ್ಯಗಳ 57 ರಾಜ್ಯ ಸಭಾ ಸ್ಥಾನಗಳಿಗೆ ಚುನಾವಣಾ ಆಯೋಗದಿಂದ ಚುನಾವಣೆ ಘೋಷಣೆ ಮಾಡಲಾಗಿದೆ. ಈ ಸಂಬಂಧ ಚುನಾವಣಾ ಆಯೋಗ ( Election Commission of India – ECI) ಆದೇಶ ಹೊರಡಿಸಿದ್ದು, ದಿನಾಂಕ 30-06-2022ರಂದು ಕರ್ನಾಟಕದಿಂದ ರಾಜ್ಯಸಭೆಗೆ ಆಯ್ಕೆಯಾಗಿದ್ದಂತ ಕೆಸಿ ರಾಮಮೂರ್ತಿ, ಜೈರಾಂ ರಮೇಶ್, ಆಸ್ಕರ್ ಫರ್ನಾಂಡಿಸ್, …

Read More »

ಸಿಎಂ ಜೊತೆಗಿನ ಚರ್ಚೆ ಮುಗಿಯುತ್ತಿದ್ದಂತೇ ಊಟಕ್ಕಾಗಿ ಮುಗಿಬಿದ್ದ ಶಾಲಾ ಶಿಕ್ಷಕರು!. ವಿಡಿಯೋ ವೈರಲ್‌

ಪಂಜಾಬ್‌: ಶಾಲಾ ಶಿಕ್ಷಕರು ಊಟಕ್ಕಾಗಿ ಮುಗಿಬಿದ್ದ ವಿಡಿಯೋ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ. ಶಾಲಾ ಶಿಕ್ಷಣದ ಮಿತಿಯನ್ನು ಹೆಚ್ಚಿಸುವ ಸಂಬಂಧ ಪಂಜಾಬ್‌ ಸಿಎಂ ಭಗವಂತ್ ಮಾನ್ ಅವರು ರೆಸಾರ್ಟ್‌ವೊಂದರಲ್ಲಿ ಶಾಲಾ ಶಿಕ್ಷಕರು ಮತ್ತು ಪ್ರಾಂಶುಪಾಲರನ್ನು ಭೇಟಿ ಮಾಡಿದರು. ಚರ್ಚೆಯ ನಂತರ ಅಲ್ಲಿ ಏರ್ಪಡಿಸಲಾಗಿದ್ದ ಉಚಿತ ಊಟಕ್ಕೆ ಶಿಕ್ಷಕರು ತಟ್ಟೆ ಹಿಡಿದು ಮುಗಿಬಿದ್ದಿದ್ದಾರೆ. ಮಂಗಳವಾರ ನಡೆದ ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಶಾಲಾ ಶಿಕ್ಷಣದ ಮಿತಿಯನ್ನು ಹೆಚ್ಚಿಸಲು …

Read More »