Breaking News
Home / ರಾಜಕೀಯ (page 1780)

ರಾಜಕೀಯ

ಎಂಎಸ್ಐಎಲ್ ಸೇರಿದಂತೆ ಬೆಳಗಾವಿ ಜಿಲ್ಲೆಯಲ್ಲಿ ಯಾವುದೇ ಕಾಣಕ್ಕೂ ಮದ್ಯ ಮಾರಾಟಕ್ಕೆ ಅವಕಾಶ ನೀಡಬಾರದು,:ರಮೇಶ ಜಾರಕಿಹೊಳಿ

ಬೆಳಗಾವಿ:  ಎಂಎಸ್ಐಎಲ್ ಸೇರಿದಂತೆ ಬೆಳಗಾವಿ ಜಿಲ್ಲೆಯಲ್ಲಿ ಯಾವುದೇ ಕಾಣಕ್ಕೂ ಮದ್ಯ ಮಾರಾಟಕ್ಕೆ ಅವಕಾಶ ನೀಡಬಾರದು, ಈ ಬಗ್ಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರೊಂದಿಗೆ ಚರ್ಚಿಸಲಾಗುವುದು  ಎಂದು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ತಿಳಿಸಿದರು. ಕೋವಿಡ್-19 ನಿಯಂತ್ರಣ ಕುರಿತು ನಗರದ ಪ್ರವಾಸಿಮಂದಿರದಲ್ಲಿ ಸೋಮವಾರ  ನಡೆದ ಜನಪ್ರತಿನಿಧಿಗಳು ಮತ್ತು ಹಿರಿಯ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು.   ದೆಹಲಿಯ ತಬ್ಲಿಘಿ ಧಾರ್ಮಿಕ ಸಭೆಗೆ ಹೋಗಿಬಂದಿರುವವರು ತಮ್ಮ ಸಂಬಂಧಿಕರನ್ನು ಭೇಟಿ ಮಾಡಲು ಹೋಗುವುದು ರೂಢಿ. …

Read More »

ಜಿಲ್ಲೆಯಲ್ಲಿ  ಮತ್ತೇ ಮೂರು ಕೊರೊನಾ ಪ್ರಕರಣಗಳು,ಬಿಗಿ ಕ್ರಮ ತೆಗೆದುಕೊಂಡು ಸಂಪೂರ್ಣ ಬಂದ್ ಮಾಡಬೇಕು.

ಬೆಳಗಾವಿ: ಜಿಲ್ಲೆಯಲ್ಲಿ  ಮತ್ತೇ ಮೂರು ಕೊರೊನಾ ಪ್ರಕರಣಗಳು ದೃಢಪಟ್ಟಿರುವುದರಿಂದ ರಾಯಬಾಗ ತಾಲೂಕಿನ ಕುಡಚಿ ಸೇರಿದಂತೆ ಎಲ್ಲ ಕಂಟೈನ್ಮೆಂಟ್ ಪ್ರದೇಶಗಳಲ್ಲಿ ಇನ್ನಷ್ಟು ಬಿಗಿ ಕ್ರಮ ತೆಗೆದುಕೊಂಡು ಸಂಪೂರ್ಣ ಬಂದ್ ಮಾಡಬೇಕು. ಕುಡಚಿಯ ಪ್ರತಿಯೊಬ್ಬರನ್ನು ವೈಯಕ್ತಿಕವಾಗಿ ವೈದ್ಯಕೀಯ ತಪಾಸಣೆ ನಡೆಸಬೇಕು. ತಬ್ಲಿಘಿ ಜತೆ ಸಂಪರ್ಕ ಹೊಂದಿರುವವರನ್ನು ತಕ್ಷಣವೇ ಗುರುತಿಸುವ ಕೆಲಸವಾಗಬೇಕು. ಒಂದು ವೇಳೆ ಸ್ವಯಂಪ್ರೇರಣೆಯಿಂದ ಅವರು ಮುಂದೆ ಬರದಿದ್ದರೆ ಕಾನೂನು ಪ್ರಕಾರ ಬಲಪ್ರಯೋಗಿಸಿ ಅವರನ್ನು ತಕ್ಷಣವೇ ಕ್ವಾರಂಟೈನ್ ನಲ್ಲಿ ಇರಿಸುವ ಕೆಲಸವಾಗಬೇಕು ಎಂದು …

Read More »

ಕಾಂಗ್ರೆಸ್‍ನ ಹಿರಿಯ ಮುಖಂಡ ಎಂ.ವಿ.ರಾಜಶೇಖರನ್ ನಿಧನ

ಬೆಂಗಳೂರು: ಮಾಜಿ ಕೇಂದ್ರ ಸಚಿವ, ಕಾಂಗ್ರೆಸ್‍ನ ಹಿರಿಯ ಮುಖಂಡ ಎಂ.ವಿ.ರಾಜಶೇಖರನ್ (93) ಅವರು ನಿಧನರಾಗಿದ್ದಾರೆ. ಎಂ.ವಿ.ರಾಜಶೇಖರನ್ ಅವರು ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದರು. ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ ಎಂದು ಕುಟುಂಬ ಮೂಲಗಳು ತಿಳಿಸಿವೆ. ಎಂ.ವಿ.ರಾಜಶೇಖರನ್ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಇದೀಗ ಅವರು ಪತ್ನಿ ಗಿರಿಜಾ ರಾಜಶೇಖರನ್, ಇಬ್ಬರು ಗಂಡು ಮತ್ತು ಇಬ್ಬರು ಪುತ್ರಿಯರನ್ನು ಬಿಟ್ಟು ಅಗಲಿದ್ದಾರೆ. ಕೃಷಿಕ ಮತ್ತು …

Read More »

ಕ್ವಾರಂಟೈನ್ ಸೇವೆ ನೀಡಿದ ಪ್ರಪ್ರಥಮ NIMA ವೈದ್ಯ

ಹುಬ್ಬಳ್ಳಿ: ನ್ಯಾಷನಲ್ ಇಂಟಿಗ್ರೇಟೆಡ್ ಮೆಡಿಕಲ್ ಅಸೋಸಿಯೇಶನ್ (NIMA) ಸಂಸ್ಥೆಯ ಹಿರಿಯ ಸದಸ್ಯರಾದ ಡಾ.ಗುರುನಾಥ ಕಂಠಿಯವರು ಏಪ್ರಿಲ್ 4ರಂದು ಹುಬ್ಬಳ್ಳಿಯ ಕ್ವಾರಂಟೈನ್ ಸೆಂಟರ್ ನಲ್ಲಿ ಕಾರ್ಯನಿರ್ವಹಿಸಿದ್ದಾರೆ. ಈ ಮೂಲಕ ಕ್ವಾರಂಟೈನ್ ಸೇವೆ ಸಲ್ಲಿಸಿದ ಧಾರವಾಡ ಜಿಲ್ಲೆಯ ಪ್ರಪ್ರಥಮ NIMA ವೈದ್ಯಕೀಯ ಸಂಸ್ಥೆಯ ಸದಸ್ಯ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಆಯುರ್ವೇದ ವೈದ್ಯರುಗಳಾದ ಡಾ.ಗುರುನಾಥ ಕಂಠಿ, ಡಾ.ಎನ್.ಎನ್.ಭರದ್ವಾಡ ಮತ್ತು ಡಾ.ಎಂ.ಸಿ.ಪಾಟೀಲ್ ಇವರು ಮಾರ್ಚ್ 9 ರಂದು ಕೊವಿಡ್-19 ಸೇವೆಗಾಗಿ ಹುಬ್ಬಳ್ಳಿಯ ಖಾಸಗಿ ಹೋಟೆಲ್‍ವೊಂದರ ಕ್ವಾರಂಟೈನ್ …

Read More »

ಸರಳವಾಗಿ ಅಂಬೇಡ್ಕರ್ ಜಯಂತಿ ಆಚರಿಸಲು ಡಿಸಿಎಂ ಕಾರಜೋಳ‌ ಮನವಿ

ಬೆಂಗಳೂರು. : ಕೊರೊನಾ ವೈರಸ್ ನಿಯಂತ್ರಣಕ್ಕಾಗಿ ರಾಷ್ಟದಾದ್ಯಂತ ಲಾಕ್ ಡೌನ್ ಜಾರಿಯಲ್ಲಿರುವ ಹಿನ್ನೆಲೆಯಲ್ಲಿ ಏಪ್ರಿಲ್ 14 ರಂದು ಸಂವಿಧಾನ ಶಿಲ್ಪಿ , ಭಾರತ ರತ್ನ, ಮಹಾ ಮಾನವತಾವಾದಿ ಡಾ. ಬಿ. ಆರ್ . ಅಂಬೇಡ್ಕರ್ ರವರ 129 ನೇ ಜನ್ಮ ದಿನಾಚರಣೆ ಪ್ರಯುಕ್ತ ಅಂದು ಬೆಳಿಗ್ಗೆ 10.00 ಗಂಟೆಗೆ ವಿಧಾನಸೌಧದ ಮುಂಭಾಗ ದಲ್ಲಿರುವ ಅವರ ಪ್ರತಿಮೆಗೆ ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪ, ಉಪಮುಖ್ಯಮಂತ್ರಿಗಳಾದ ಶ್ರೀ‌ ಗೋವಿಂದ ಎಂ‌ ಕಾರಜೋಳ ಮತ್ತು ಇತರೇ …

Read More »

ಅನುಪಮಾ ಪರಮೇಶ್ವರನ್ ಎಫ್‍ಬಿ ಹ್ಯಾಕ್, ಫೋಟೋ ಮಾರ್ಫ್- ಗರಂ ಆದ ನಟಸಾರ್ವಭೌಮ ಬೆಡಗಿ

ಬೆಂಗಳೂರು: ಸಿನಿಮಾ ತಾರೆಯ ಫೋಟೋಗಳನ್ನು ಎಡಿಟ್ ಮಾಡಿ ವಿಕೃತಗೊಳಿಸುವುದನ್ನು ಕಿಡಿಗೇಡಿಗಳು ಮಾಡುತ್ತಲೇ ಇರುತ್ತಾರೆ. ಇದಕ್ಕಾಗಿ ಹಲವು ನಟಿಯರು ಮುಜುಗರಕ್ಕೆ ಈಡಾಗಿರುವುದೂ ಉಂಟು. ಇದೀಗ ನಟ ಸಾರ್ವಭೌಮ ಬೆಡಗಿ ಸಹ ಇಂತಹದ್ದೇ ಕಷ್ಟಕ್ಕೆ ಸಿಲುಕಿಕೊಂಡಿದ್ದು, ಬೇರೆ ಯುವತಿಯ ದೇಹಕ್ಕೆ ಅನುಪಮಾ ಪರಮೇಶ್ವರನ್ ಮುಖವನ್ನು ಜೋಡಿಸಲಾಗಿದೆ ಇದನ್ನು ಕಂಡ ಅವರು ಆಶ್ಚರ್ಯಕ್ಕೊಳಗಾಗಿದ್ದಾರೆ. ಇಂಟರ್ನೆಟ್ ಜಾಲಾಡಿದರೆ ನೈಜ ಫೋಟೋಗಳಿಗಿಂತ ಫೇಕ್, ಎಡಿಟೆಡ್, ಮಾರ್ಫ್ ಮಾಡಿದ ಫೋಟೋಗಳು ಕಾಣುವುದೇ ಹೆಚ್ಚು. ಅದರಲ್ಲೂ ನಟ, ನಟಿಯರ ಫೋಟೋಗಳನ್ನು …

Read More »

ಚಿಕ್ಕಮಗಳೂರು:ಮಲೆನಾಡಲ್ಲಿ ಮಳೆ ಅಬ್ಬರ- ಬೃಹತ್ ಗಾತ್ರದ ಆಲಿಕಲ್ಲು ಪತ್ತೆ

ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರಿನ ಮಲೆನಾಡು ಭಾಗದಲ್ಲಿ ಮಳೆ ಅಬ್ಬರ ಮುಂದುವರಿದಿದೆ. ಭಾನುವಾರ ಜಿಲ್ಲೆಯ ಮೂಡಿಗೆರೆ ಹಾಗೂ ಶೃಂಗೇರಿ ಭಾಗದಲ್ಲಿ ಧಾರಾಕಾರ ಮಳೆಯಾಗಿದರೆ ಕೊಪ್ಪ ಹಾಗೂ ಎನ್.ಆರ್.ಪುರದಲ್ಲಿ ಸಾಧಾರಣ ಮಳೆಯಾಗಿದೆ. ಮೂಡಿಗೆರೆ ತಾಲೂಕಿನ ಕಳಸ ಭಾಗದಲ್ಲಿ ಧಾರಾಕಾರ ಮಳೆಯಾಗಿದ್ದು, ಆಲಿಕಲ್ಲು ಸಮೇತ ವರುಣ ಅಬ್ಬರಿಸಿದ್ದಾನೆ. ಬೃಹತ್ ಗಾತ್ರದ ಆಲಿಕಲ್ಲನ್ನು ಹಿಡಿದು ಯುವಕರು ಫೋಟೋ ಕ್ಲಿಕ್ಕಿಸಿಕೊಂಡು ಖುಷಿ ಪಟ್ಟಿದ್ದಾರೆ. ಇತ್ತ ಶೃಂಗೇರಿಯ ಸುತ್ತಮುತ್ತಲೂ ಭಾರೀ ಮಳೆಯಾಗಿದೆ. ಮಳೆ ದೇವರೆಂದೇ ಖ್ಯಾತಿಯಾಗಿರುವ ಕಿಗ್ಗಾದ ಋಷ್ಯಶೃಂಗ …

Read More »

ವಿಜಯಪುರದಲ್ಲಿ ಕೊರೊನಾ ಸೋಂಕಿತ ವೃದ್ಧೆಯ ಪತಿ ಸಾವು

ವಿಜಯಪುರ: ಕೊರೊನಾ ಸೋಂಕಿತ ವೃದ್ಧೆಯ ಪತಿ ಭಾನುವಾರ ರಾತ್ರಿ ಮೃತಪಟ್ಟಿದ್ದು, ಸೋಂಕಿಗೆ ಬಲಿಯಾಗಿರಬಹುದೇ ಎನ್ನುವ ಪ್ರಶ್ನೆ ಎದ್ದಿದೆ. ಇಂದು ಮಧ್ಯಾಹ್ನ ವೃದ್ಧೆಗೆ ಪಾಸಿಟಿವ್ ಬಂದಿತ್ತು. ಈ ಬೆನ್ನಲ್ಲೇ ವೃದ್ಧೆಯ ಸಂಪರ್ಕದಲ್ಲಿದ್ದ ವ್ಯಕ್ತಿಗಳನ್ನು ಕ್ವಾರಂಟೈನ್ ಮಾಡಲಾಗಿತ್ತು. ಒಟ್ಟು 24 ಮಂದಿಯನ್ನು ಕ್ವಾರಂಟೈನ್ ಮಾಡಲಾಗಿದ್ದು ಇಂದು ರಾತ್ರಿ ವೃದ್ಧೆಯ ಪತಿ(69) ಮೃತಪಟ್ಟಿದ್ದಾರೆ. ಕೊರೊನಾಗೆ ವೃದ್ಧ ಮೃತಪಟ್ಟಿದ್ದಾರೋ ಎನ್ನುವುದು ಅಧಿಕೃತವಾಗಿ ತಿಳಿದು ಬಂದಿಲ್ಲ. ಸಾವಿಗೀಡಾದ ವ್ಯಕ್ತಿಯ ವೈದ್ಯಕೀಯ ಪರೀಕ್ಷೆಯ ವರದಿಗೆ ವಿಜಯಪುರ ಜಿಲ್ಲಾಡಳಿತ ಈಗ …

Read More »

ರಾಯಬಾಗದ ಕ್ಯಾನ್ಸರ್ ಪೀಡಿತ ಮಹಿಳೆ ಸಮಸ್ಯೆಗೆ ತುರ್ತು ಸ್ಪಂದನೆ: ಬಿ.ಎಸ್.ಯಡಿಯೂರಪ್

ಬೆಂಗಳೂರು –  ಕೊರೋನಾ ಹಿನ್ನೆಲೆಯಲ್ಲಿ ಲಾಕ್ ಡೌನ್ ಘೋಷಿಸಿದ್ದರಿಂದ ಕ್ಯಾನ್ಸರ್ ರೋಗಿಯೊಬ್ಬರಿಗೆ ವ್ಯವಸ್ಥೆಯಾಗಿದ್ದ ಆಪರೇಶನ್ ರದ್ದಾಗಿತ್ತು. ಈ ಕುರಿತು ರೋಗಿಯ ಸಂಬಂಧಿಯೊಬ್ಬರಿಂದ ಬಂದ ಮಾಹಿತಿ ಆಧರಿಸಿ ತಕ್ಷಣ ಸ್ಪಂದಿಸಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಸೋಮವಾರವೇ ಆಪರೇಶನ್ ಗೆ ವ್ಯವಸ್ಥೆ ಮಾಡಿದ್ದಾರೆ. ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕು ಶಿರಗೂರ ಗ್ರಾಮದ ಬಾಹುಸಾಬ ಲಕ್ಷ್ಮಣ್ ಕಾಂಬಳೆ ಎನ್ನುವವರು ಮುಖ್ಯಮಂತ್ರಿಗಳಿಗೆ ಸಂದೇಶವೊಂದನ್ನು ಕಳುಹಿಸಿದ್ದರು. “ನಮ್ಮ ಮನೆಯ ಹಿರಿಯ ಮಹಿಳೆ ಕಮಲವ್ವ ಹಿಡಕಲ್ ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದಾಳೆ. …

Read More »

ಖಾನಾಪುರ ಪೊಲೀಸರು ನಡೆಸಿದ ಮಿಂಚಿನ ದಾಳಿಯಲ್ಲಿ ಭಟ್ಟಿ ಮದ್ಯವನ್ನು ಹಾಲಿನ ಟ್ಯಾಂಕರ್ ನಲ್ಲಿ ಸಾಗಿಸುತ್ತಿದ್ದ ಜಾಲಪತ್ತೆ

ಖಾನಾಪುರ: ಗೋವಾ ರಾಜ್ಯದಲ್ಲಿ ತಯಾರಿಸುವ ಭಟ್ಟಿ ಮದ್ಯವನ್ನು ಹಾಲಿನ ಟ್ಯಾಂಕರ್ ನಲ್ಲಿ ಸಾಗಿಸುತ್ತಿದ್ದ ಜಾಲವನ್ನು ಪತ್ತೆ ಹಚ್ಚಿರುವ ಖಾನಾಪುರ ಪೊಲೀಸರು ಇಬ್ಬರನ್ನು ಬಂಧಿಸಿ ಟ್ಯಾಂಕರ್ ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಖಚಿತ ಮಾಹಿತಿ ಮೇರೆಗೆ ಹಾಲು ಸರಬರಾಜು ಮಾಡಲು ಬೆಳಗಾವಿಯಿಂದ ಗೋವಾ ರಾಜ್ಯಕ್ಕೆ ತೆರಳಿದ್ದ ಬೆಳಗಾವಿಯ ಟ್ಯಾಂಕರ್ ಗೋವಾದಿಂದ ಬೆಳಗಾವಿಯತ್ತ ಬರುವಾಗ ಗೋವಾದ ಭಟ್ಟಿ ಮದ್ಯವನ್ನು ಮತ್ತು 8 ಬಾಕ್ಸ್ ಗೋವಾ ಮದ್ಯವನ್ನು ಹೊತ್ತು ತರುತ್ತಿದ್ದುದನ್ನು ಅರಿತ ಪೊಲೀಸರು ತಾಲ್ಲೂಕಿನ ಕಣಕುಂಬಿ …

Read More »