ವಿಜಯನಗರ: ಬಾಲಕಿಯೊಬ್ಬಳು ಮಕ್ಕಳ ಸಹಾಯವಾಣಿಗೆ ಕರೆ ಮಾಡಿ ತನ್ನ ಬಾಲ್ಯ ವಿವಾಹವನ್ನು ತಾನೇ ತಡೆದ ಘಟನೆ ಜಿಲ್ಲೆಯ ಹಗರಿಬೊಮ್ಮನ ತಾಲೂಕಿನಲ್ಲಿ ನಡೆದಿದೆ. ಆ ಒಂದು ಪೋನ್ ಕರೆ ಮೂಲಕ ಇಡೀ ತಾಲೂಕಿನ ಆಡಳಿತವನ್ನು ಆ ಬಾಲಕಿ ಮನೆಗೆ ಬರುವಂತೆ ಮಾಡಿದೆ. ಧೈರ್ಯ ಮಾಡಿ ಮಕ್ಕಳ ಸಹಾಯವಾಣಿಗೆ ಕರೆ ಮಾಡಿದ ಹಿನ್ನೆಲೆ ಮದುವೆ ನಿಂತಿದ್ದಲ್ಲದೇ, ಉನ್ನತ ವ್ಯಾಸಂಗಕ್ಕೆ ಅಧಿಕಾರಿಗಳು ಸಹಾಯ ಮಾಡಿದ್ದಾರೆ. ಸಿನಿಮೀಯ ರೀತಿಯಲ್ಲಿ ನಡೆದ ಬಾಲ್ಯ ವಿವಾಹದ ಕತೆ ಇಲ್ಲಿದೆ ನೋಡಿ. …
Read More »ಬೈಕ್ – ಹಾಲಿನ ವಾಹನ ನಡುವೆ ಡಿಕ್ಕಿ; ಇಬ್ಬರು ವೈದ್ಯಕೀಯ ವಿದ್ಯಾರ್ಥಿಗಳು ಸಾವು
ಶಿವಮೊಗ್ಗ: ಹಾಲಿನ ವಾಹನ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ವೈದ್ಯಕೀಯ ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ. ಶಿವಮೊಗ್ಗದ ಸಾಗರ ರಸ್ತೆಯ ಪ್ರವಾಸಿ ಮಂದಿರದ ವೃತ್ತದ ಬಳಿ ಬುಧವಾರ (ಇಂದು) ಬೆಳಗಿನ ಜಾವ ಘಟನೆ ಸಂಭವಿಸಿದೆ. ಅಪಘಾತದ ರಭಸಕ್ಕೆ ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ (ಸಿಮ್ಸ್) ವಿದ್ಯಾರ್ಥಿಗಳಾದ ಆದಿತ್ಯ (21) ಮತ್ತು ಸಂದೀಪ್ (21) ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಮೃತರು ದಾವಣಗೆರೆ ಜಿಲ್ಲೆ ಸುರಹೊನ್ನೆ ಹಾಗೂ ಉಡುಪಿ ಜಿಲ್ಲೆಯ ಮೂಲದವರಾಗಿದ್ದರು. ಸಿಮ್ಸ್ ಮೆಡಿಕಲ್ …
Read More »ಡಿಸಿ ಮುಂದೆ ಅಳಲು ತೋಡಿಕೊಂಡ ನಿರಾಶ್ರಿತರು
ಬೆಳಗಾವಿ: ಮಹಾರಾಷ್ಟ್ರದ ಘಟ್ಟ ಪ್ರದೇಶದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಘಟಪ್ರಭಾ ನದಿ ಉಕ್ಕಿ ಹರಿಯುತ್ತಿದೆ. ಇದರ ಪರಿಣಾಮ ಗೋಕಾಕ್ ಪಟ್ಟಣದಲ್ಲಿ ಪ್ರವಾಹ ಪರಿಸ್ಥಿತಿ ಉದ್ಭವಿಸಿದ್ದು, 200 ಕುಟುಂಬಗಳು ಕಾಳಜಿ ಕೇಂದ್ರದಲ್ಲಿ ಆಶ್ರಯ ಪಡೆದಿವೆ. ಈ ಕೇಂದ್ರಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿ ಕಾಲಿಗೆ ಬಿದ್ದು ಓರ್ವ ಮಹಿಳೆ ಅಳಲು ತೋಡಿಕೊಂಡರು. ಉಕ್ಕಿ ಹರಿಯುತ್ತಿರುವ ನದಿಗಳು: ಸತತ ಮಳೆಯಿಂದಾಗಿ ಬೆಳಗಾವಿ ಜಿಲ್ಲೆಯ ಸಪ್ತನದಿಗಳು ತುಂಬಿ ಹರಿಯುತ್ತಿವೆ. ಆ ಕಡೆ ಕೃಷ್ಣೆ ಆರ್ಭಟಿಸುತ್ತಿದ್ದರೆ, ಇತ್ತ ಘಟಪ್ರಭೆ …
Read More »ಸರ್ಕಾರಿ ವೈದ್ಯರು, ನರ್ಸ್ಗಳಿಗೆ ಗ್ರಾಮೀಣ ಸೇವೆ ಕಡ್ಡಾಯ
ಬೆಂಗಳೂರು: ನಗರ ಪ್ರದೇಶಗಳಲ್ಲಿ ಹಲವು ವರ್ಷಗಳ ಕಾಲ ಸೇವೆ ಸಲ್ಲಿಸುತ್ತಿರುವ ವೈದ್ಯರು, ನರ್ಸ್ಗಳು ಸೇರಿದಂತೆ ಇತರ ಸಿಬ್ಬಂದಿ ಇನ್ನು ಮುಂದೆ ಕಡ್ಡಾಯವಾಗಿ ಗ್ರಾಮೀಣ ಭಾಗದಲ್ಲಿ ಕರ್ತವ್ಯ ನಿರ್ವಹಿಸುವ ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳ (ವೈದ್ಯಾಧಿಕಾರಿಗಳು ಮತ್ತು ಇತರ ಸಿಬ್ಬಂದಿ ವರ್ಗಾವಣೆ ನಿಯಂತ್ರಣ) ತಿದ್ದುಪಡಿ ಕಾಯ್ದೆ ವಿಧಾನಪರಿಷತ್ನಲ್ಲಿ ಅಂಗೀಕಾರಗೊಂಡಿತು. ತಿದ್ದುಪಡಿ ವಿಧೇಯಕ ಮಂಡಿಸಿ ಮಾತನಾಡಿದ ಆರೋಗ್ಯ ಇಲಾಖೆ ಸಚಿವ ದಿನೇಶ್ ಗುಂಡೂರಾವ್, ನಗರ ಪ್ರದೇಶಗಳ ಸರ್ಕಾರಿ ಆಸ್ಪತ್ರೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ವೈದ್ಯರು, ನರ್ಸ್ಗಳು, ಡಿ …
Read More »ನಿರಂತರ ಮಳೆಗೆ ಧಾರವಾಡದಲ್ಲಿ ಮೊಳಕೆಯೊಡೆಯುತ್ತಿವೆ ಹೆಸರು ಬೆಳೆ.. ಕೈಗೆ ಬಂದ ತುತ್ತು ಬಾಯಿಗೆ ಬರದಂತೆ ಮಾಡಿದ ವರುಣರಾಯ.
ನಿರಂತರ ಮಳೆಗೆ ಧಾರವಾಡದಲ್ಲಿ ಮೊಳಕೆಯೊಡೆಯುತ್ತಿವೆ ಹೆಸರು ಬೆಳೆ.. ಕೈಗೆ ಬಂದ ತುತ್ತು ಬಾಯಿಗೆ ಬರದಂತೆ ಮಾಡಿದ ವರುಣರಾಯ. : ಧಾರವಾಡ ಜಿಲ್ಲೆಯಲ್ಲಿ ಸದ್ಯ ಭಾಗಶಃ ಹೆಸರು ಬೆಳೆ ಈಗ ಕಟಾವಿಗೆ ಬಂದಿದೆ. ಆದರೆ, ಬಿಟ್ಟೂ ಬಿಡದೇ ಸುರಿಯುತ್ತಿರುವ ಮಳೆಯಿಂದಾಗಿ ಅನ್ನದಾತನಿಗೆ ಕೈಗೆ ಬಂದ ತುತ್ತು ಬಾಯಿಗೆ ಬರದಂತಾದ ಪರಿಸ್ಥಿತಿ ನಿರ್ಮಾಣವಾಗಿದೆ. ಹೌದು! ಧಾರವಾಡ ಜಿಲ್ಲೆಯಾದ್ಯಂತ ಕಳೆದ ಮೂರ್ನಾಲ್ಕು ದಿನಗಳಿಂದ ಬಿಟ್ಟೂ ಬಿಡದೇ ಸುರಿಯುತ್ತಿರುವ ಮಳೆಯಿಂದಾಗಿ ಕಟಾವಿಗೆ ಬಂದ ಹೆಸರು ಬೆಳೆ …
Read More »ಧರ್ಮಸ್ಥಳದಲ್ಲಿ ಬಹು ಕೊಲೆ ಆರೋಪ ಆಧಾರರಹಿತ: ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ
ಬೆಂಗಳೂರು: “ಧರ್ಮಸ್ಥಳದಲ್ಲಿ ನಡೆದಿದೆ ಎಂದು ಆರೋಪಿಸಲಾಗುತ್ತಿರುವ ನೂರಾರು ಕೊಲೆಗಳು, ಅತ್ಯಾಚಾರಗಳು ಆಧಾರರಹಿತ ಮತ್ತು ಸುಳ್ಳು” ಎಂದು ಧರ್ಮಸ್ಥಳ ಮಂಜುನಾಥ ಸ್ವಾಮಿ ದೇವಾಲಯದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರು ಮಂಗಳವಾರ ಸ್ಪಷ್ಟಪಡಿಸಿದರು. ಕಳೆದ ಎರಡು ದಶಕಗಳಲ್ಲಿ ಧರ್ಮಸ್ಥಳದಾದ್ಯಂತ ನಡೆದಿವೆ ಎನ್ನಲಾದ ಬಹು ಕೊಲೆಗಳು, ಅತ್ಯಾಚಾರ ಆರೋಪಗಳನ್ನು ತಳ್ಳಿ ಹಾಕಿರುವ ಅವರು, ಸತ್ಯ ಬೆಳಕಿಗೆ ಬರಲು ಎಸ್‌ಐಟಿ ತನಿಖೆಯನ್ನು ಸ್ವಾಗತಿಸಿದರು. ಧರ್ಮಸ್ಥಳ ಗ್ರಾಮದಲ್ಲಿ ನಡೆದಿದೆ ಎನ್ನಲಾದ ಕೊಲೆ, ಅತ್ಯಾಚಾರ ಆರೋಪಗಳ ಕುರಿತು ಎಸ್‌ಐಟಿ ತನಿಖೆ …
Read More »ಬುಧವಾರವೂ ಜಿಲ್ಲೆಯಎಲ್ಲ ತಾಲ್ಲೂಕುಗಳ ಶಾಲೆಗಳಿಗೆರಜೆ ಘೋಷಣೆ: ಜಿಲ್ಲಾಧಿಕಾರಿ
ಬುಧವಾರವೂ ಜಿಲ್ಲೆಯಎಲ್ಲ ತಾಲ್ಲೂಕುಗಳ ಶಾಲೆಗಳಿಗೆರಜೆ ಘೋಷಣೆ ಬೆಳಗಾವಿ- ಬೆಳಗಾವಿ ಜಿಲ್ಲೆಯಾದ್ಯಂತ ಧಾರಾಕಾರವಾಗಿಮಳೆ ಸುರಿಯುತ್ತಿದ್ದು ಜಿಲ್ಲೆಯ ಜನಜೀವನ ಅಸ್ತವ್ಯಸ್ತವಾಗಿದೆ. ನಾಳೆ ಬುಧವಾರ ಬೆಳಗಾವಿ ಜಿಲ್ಲೆಯಎಲ್ಲ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ಬೆಳಗಾವಿ ಜಿಲ್ಲಾಧಿಕಾರಿ ಮಹ್ಮದ್ ರೋಷನ್ ಅವರು ಆದೇಶಹೊರಡಿಸಿದ್ದಾರೆ. ಸೋಮಾವಾರ ಮತ್ತು ಮಂಗಳವಾರ ಕೆಲವುತಾಲ್ಲೂಕುಗಳ ಶಾಲೆಗಳಿಗೆ ಮಾತ್ರ ರಜೆಘೋಷಿಸಲಾಗಿತ್ತು ಇಂದುಮಂಗಳವಾರವೂಅನಾಹುತ ಮಳೆ ಸುರಿಯುತ್ತಿರುವ ಕಾರಣ ಬೆಳಗಾವಿ ಜಿಲ್ಲೆ ಎಲ್ಲ ತಾಲ್ಲೂಕುಗಳ ಶಾಲೆಗಳಿಗೆ ಕಾಲೇಜು ಹಾಗೂ ಅಂಗನವಾಡಿ ಕೇಂದ್ರಗಳಿಗೆ ರಜೆ ಘೋಷಿಸಲಾಗಿದೆ.
Read More »ಬೆಳಗಾವಿ ಜಿಲ್ಲೆಗೆ ರೆಡ್ ಅಲರ್ಟ್ ಘೋಷಿಸಿದೆ. ನಿರಂತರ ಮಳೆಯಿಂದ ಘಟಪ್ರಭಾ, ಕೃಷ್ಣಾ, ದೂಧಗಂಗಾ, ಹಿರಣ್ಯಕೇಶಿ, ಮಾರ್ಕಂಡೇಯ ಹಾಗೂ ಮಲಪ್ರಭಾ ನದಿಗಳು ಅಪಾಯ ಮಟ್ಟದಲ್ಲಿ ಹರಿಯುತ್ತಿವೆ.
ಭಾರತ ಹವಾಮಾನ ಇಲಾಖೆ ಆಗಸ್ಟ್ 19 ಮತ್ತು 20 ರಂದು ಬೆಳಗಾವಿ ಜಿಲ್ಲೆಗೆ ರೆಡ್ ಅಲರ್ಟ್ ಘೋಷಿಸಿದೆ. ನಿರಂತರ ಮಳೆಯಿಂದ ಘಟಪ್ರಭಾ, ಕೃಷ್ಣಾ, ದೂಧಗಂಗಾ, ಹಿರಣ್ಯಕೇಶಿ, ಮಾರ್ಕಂಡೇಯ ಹಾಗೂ ಮಲಪ್ರಭಾ ನದಿಗಳು ಅಪಾಯ ಮಟ್ಟದಲ್ಲಿ ಹರಿಯುತ್ತಿವೆ. ಹಿಡಕಲ್ ಜಲಾಶಯ ಸಂಪೂರ್ಣ ತುಂಬಿಕೊಂಡಿರುವುದರಿಂದ ಪ್ರತಿದಿನ ಸಾವಿರಾರು ಕ್ಯೂಸೆಕ್ ನೀರು ಒಳಹರಿಯುತ್ತಿದ್ದು, 18-08-2025 ರಂದು ಸಂಜೆ 4 ಗಂಟೆಯಿಂದ 25,000 ಕ್ಕಿಂತ ಹೆಚ್ಚು ಕ್ಯೂಸೆಕ್ ನೀರನ್ನು ಹೊರಬಿಡಲಾಗಿದೆ. #ಹಿಡಕಲ್_ಡ್ಯಾಂ #ಹಿರಣ್ಯಕೇಶಿ, #ಮಾರ್ಕಂಡೇಯ ಹಾಗೂ …
Read More »ನದಿ ತೀರದ ಜನರು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸಚಿವ ಸತೀಶ್ ಜಾರಕಿಹೊಳಿ ಮನವಿ
ಬೆಳಗಾವಿ: ಭಾರತ ಹವಾಮಾನ ಇಲಾಖೆ ಆಗಸ್ಟ್ 19 ಮತ್ತು 20 ರಂದು ಬೆಳಗಾವಿ ಜಿಲ್ಲೆಗೆ ರೆಡ್ ಅಲರ್ಟ್ ಘೋಷಿಸಿದೆ. ನಿರಂತರ ಮಳೆಯಿಂದ ಘಟಪ್ರಭಾ, ಕೃಷ್ಣಾ, ದೂಧಗಂಗಾ, ಹಿರಣ್ಯಕೇಶಿ, ಮಾರ್ಕಂಡೇಯ ಹಾಗೂ ಮಲಪ್ರಭಾ ನದಿಗಳು ಅಪಾಯ ಮಟ್ಟದಲ್ಲಿ ಹರಿಯುತ್ತಿವೆ. ಆದ್ದರಿಂದ ನದಿ ತೀರದ ಜನರು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಮನವಿ ಮಾಡಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟನೆಯಲ್ಲಿ ವಿಷಯ ತಿಳಿಸಿದ ಅವರು, ಹಿಡಕಲ್ ಜಲಾಶಯ ಸಂಪೂರ್ಣ …
Read More »ಕರ್ನಾಟಕದಲ್ಲಿ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣ ಭಾರಿ ಹೆಚ್ಚಳ: ಎರಡೇ ವರ್ಷದಲ್ಲಿ ಶೇ 26 ರಷ್ಟು ಹೆಚ್ಚಾದ ಪೋಕ್ಸೊ ಕೇಸ್
ಕರ್ನಾಟಕದಲ್ಲಿ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣ ಭಾರಿ ಹೆಚ್ಚಳ: ಎರಡೇ ವರ್ಷದಲ್ಲಿ ಶೇ 26 ರಷ್ಟು ಹೆಚ್ಚಾದ ಪೋಕ್ಸೊ ಕೇಸ್ ಬೆಂಗಳೂರು, ಆಗಸ್ಟ್ 19: ಕರ್ನಾಟಕದಲ್ಲಿ (Karnataka) ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದ ನಂತರ ಕಾನೂನು ಸುವ್ಯವಸ್ಥೆ ಕುಸಿದಿದೆ ಎಂಬ ಪ್ರತಿಪಕ್ಷಗಳ ಆರೋಪ ಒಂದೆಡೆಯಾದರೆ, ಮಕ್ಕಳ ಮೇಲಿನ ಲೈಂಗಿಕ ಕಿರುಕುಳ, ದೌರ್ಜನ್ಯ ಪ್ರಕರಣಗಳ ಸಂಖ್ಯೆಯಲ್ಲೂ ಗಣನೀಯ ಏರಿಕೆಯಾಗಿರುವುದು ಗೊತ್ತಾಗಿದೆ. ಕೇವಲ ಎರಡು ವರ್ಷಗಳಲ್ಲಿ ರಾಜ್ಯದಲ್ಲಿ ಪೋಕ್ಸೊ (Pocso) (ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆ) …
Read More »
Laxmi News 24×7