ಬೆಳಗಾವಿ, ಆಗಸ್ಟ್ 19: ಮಹಾರಾಷ್ಟ್ರದ (Maharashtra) ಪಶ್ಚಿಮ ಭಾಗದಲ್ಲಿ ಭಾರಿ ಮಳೆಯಾಗುತ್ತಿದೆ. ಇದರಿಂದ ಬೆಳಗಾವಿಯ (Belagavi) ಜಿಲ್ಲೆಯಲ್ಲಿ ಹರಿಯುವ ಪಂಚನದಿಗಳಾದ ಕೃಷ್ಣಾ (Krishna River), ಘಟಪ್ರಭಾ, ಮಲಪ್ರಭಾ, ವೇದಗಂಗಾ, ಮತ್ತು ದೂಧಗಂಗಾ ನದಿಗಳಿಗೆ ಅಪಾರ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ. ಇದರಿಂದ ಚಿಕ್ಕೋಡಿ ತಾಲೂಕಿನಲ್ಲಿನ 8 ಕೆಳ ಹಂತದ ಸೇತುವೆಗಳು ಒಂದೇ ರಾತ್ರಿ ಜಲಾವೃತಗೊಂಡಿವೆ. ಇದರಿಂದ ತಾಲೂಕಿನಲ್ಲಿ 18 ಗ್ರಾಮಗಳಿಗೆ ರಸ್ತೆ ಸಂಪರ್ಕ ಕಡಿತಗೊಂಡಿದೆ. ಜನರು ಪರ್ಯಾಯ ಮಾರ್ಗದಲ್ಲಿ ಸಂಚಾರ ಮಾಡುತ್ತಿದ್ದಾರೆ. …
Read More »ಕರ್ನಾಟಕದಲ್ಲಿ ಹುಲಿ ಸಂತತಿ ಅಪಾಯದಲ್ಲಿ
ಬೆಂಗಳೂರು, ಆಗಸ್ಟ್ 19: ಕರ್ನಾಟಕದಲ್ಲಿ (Karanataka) ಐದು ಹುಲಿ ಸಂರಕ್ಷಣಾ ಮೀಸಲು ಪ್ರದೇಶಗಳಿವೆ (Tiger Reserve Forest). ಬಂಡೀಪುರ, ಭದ್ರಾ, ನಾಗರಹೊಳೆ, ದಾಂಡೇಲಿ-ಅಂಶಿ ಮತ್ತು ಬಿ.ಆರ್.ಟಿ. ಹುಲಿ (Tiger) ಸಂರಕ್ಷಿತ ಪ್ರದೇಶಗಳು. ಇವುಗಳಲ್ಲಿ ಬಂಡೀಪುರ ಅತಿದೊಡ್ಡ ಮತ್ತು ಅತ್ಯಂತ ಹಳೆಯ ಹುಲಿ ಸಂರಕ್ಷಿತ ಪ್ರದೇಶವಾಗಿದೆ. ರಾಜ್ಯದಲ್ಲಿ ಕಳೆದ ಐದು ವರ್ಷಗಳಲ್ಲಿ (2020 ರಿಂದ 2025) ರ ನಡುವೆ 75 ಹುಲಿಗಳು ಮೃತಪಟ್ಟಿವೆ ಎಂದು ವರದಿಯಾಗಿದೆ. ರ್ನಾಟಕದ ಎರಡು ಪ್ರಸಿದ್ಧ ಹುಲಿ ಸಂರಕ್ಷಿತ …
Read More »ಕರ್ನಾಟಕದಲ್ಲಿ ಮಳೆ ಅಬ್ಬರ ಮುಂದುವರಿಕೆ, ಈ ಜಿಲ್ಲೆಗಳ ಶಾಲಾ ಕಾಲೇಜುಗಳಿಗೆ ರಜೆ!
ಬೆಂಗಳೂರು (ಆಗಸ್ಟ್.19): ಕಳೆದೊಂದು ವಾರದಿಂದ ಕರ್ನಾಟಕ ಮಳೆ (Karnataka Rains) ಅಬ್ಬರ ಜೋರಾಗಿದೆ. ಇದರಿಂದ ಕರೆ-ಕಟ್ಟೆಗಳು, ನದಿ, ಹಳ್ಳ-ಕೊಳ್ಳಗಳು ತುಂಬಿಹರಿಯುತ್ತಿದ್ದು, ಹಲವೆಡೆ ದೊಡ್ಡ ಅವಾಂತರಗಳೇ ಆಗಿವೆ. ಜಿಟಿ-ಜಿಟಿ ಮಳೆಯಿಂದಾಗಿ ಹೈರಾಣಾಗಿರುವ ಜನರಿಗೆ ಇನ್ನಷ್ಟು ದಿನ ಮಳೆ ಕಾಟ ಇರಲಿದೆ. ಹೌದು…ರಾಜ್ಯದ ಕರಾವಳಿ, ಮಲೆನಾಡು ಜಿಲ್ಲೆಗಳು ಸೇರಿದಂತೆ ಹಲವು ಭಾಗಗಳಲ್ಲಿ ಇನ್ನು ಐದು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಬೆಳಗಾವಿ, ಧಾರವಾಡ, ಹಾವೇರಿ, ಯಾದಗಿರಿ …
Read More »ಡ್ರೈವಿಂಗ್ ಅಂದ್ರೆ ಈಕೆಗೆ ಇಷ್ಟ, ಈ ಆಸಕ್ತಿಯನ್ನೇ ವೃತ್ತಿಯಾಗಿಸಿಕೊಂಡ ಬೆಂಗಳೂರಿನ ಯುವತಿ
ಬೆಂಗಳೂರು, ಆಗಸ್ಟ್ 19: ಕೆಲವರು ಎಷ್ಟೇ ಓದಿಕೊಂಡಿರಲಿ, ತಮ್ಮ ಆಸಕ್ತಿಯನ್ನೇ ವೃತ್ತಿಯಾಗಿ ಬದಲಾಯಿಸಿಕೊಳ್ಳುತ್ತಾರೆ. ಹೀಗಾಗಿ ತಮಗೆ ಏನು ಇಷ್ಟವೋ ಆ ಕಾಯಕದಲ್ಲೇ ತೊಡಗಿ ಬದುಕು ಕಟ್ಟಿಕೊಂಡವರನ್ನು ನೀವು ನೋಡಿರಬಹುದು. ಆದರೆ ಈ ಯುವತಿಗೆ ವಾಹನ ಓಡಿಸುವುದೆಂದರೆ ಅದೇನೋ ಕ್ರೇಜ್. ಈ ಆಸಕ್ತಿಯನ್ನೇ ವೃತ್ತಿಯಾಗಿಸಿಕೊಂಡು ಬೆಂಗಳೂರಿನಲ್ಲಿ (Bengaluru) ಆಟೋ ಓಡಿಸುತ್ತಿದ್ದಾಳೆ ಈ ಯುವತಿ. ಈಕೆಯ ಹೆಸರು ಸಫುರಾ. ತಮನ್ನಾ ತನ್ವೀರ್ (Tamanna Tanveer) ಎನ್ನುವವರು ಇನ್ಸ್ಟಾಗ್ರಾಮ್‌ನಲ್ಲಿ ಈ ಯುವತಿಯ ಬಗೆಗಿನ ಸ್ಟೋರಿ …
Read More »ಹೊಸದಾಗಿ ಬಸ್ ಆರಂಭ ಕಾಟಗಾಳಿ ಗ್ರಾಮಸ್ಥರಿಂದ ಪೂಜೆ ಸಲ್ಲಿಸಿ ಪಟಾಕಿ ಸಿಡಿಸಿ ಸಂಭ್ರಮ!! ಖಾನಾಪೂರ ತಾಲೂಕಿನ ಕಾಟಗಾಳಿಗೆ ಹೊಸ ಬಸ್
ಹೊಸದಾಗಿ ಬಸ್ ಆರಂಭ ಕಾಟಗಾಳಿ ಗ್ರಾಮಸ್ಥರಿಂದ ಪೂಜೆ ಸಲ್ಲಿಸಿ ಪಟಾಕಿ ಸಿಡಿಸಿ ಸಂಭ್ರಮ!! ಖಾನಾಪೂರ ತಾಲೂಕಿನ ಕಾಟಗಾಳಿಗೆ ಹೊಸ ಬಸ್ ಗ್ರಾಮಸ್ಥರಿದಂದ ಬಸಗೆ ಪೂಜೆ ಸಲ್ಲಿಸಿ ಪಟಾಕಿ ಸಿಡಿಸಿ ಸಂಭ್ರಮ ಬೆಳಗಾವಿಯಿಂದ ದೇಸೂರ ಮಾರ್ಗವಾಗಿ ಕಾಟಗಾಳಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರವಾದ ಖಾನಾಪೂರ ತಾಲೂಕಿನ ಕಾಟಗಾಳಿ ಗ್ರಾಮಕ್ಕೆ ಹೊಸದಾಗಿ ಬಸ್ ಆರಂಭವಾಗಿದೆ. ಹೊಸದಾಗಿ ಬಸ್ ಆರಂಭದ ಖುಷಿಯಿಂದ ಗ್ರಾಮಸ್ಥರು ಬಸಗೆ ಪೂಜೆ ಸಲ್ಲಿಸಿ ಪಟಾಕಿ ಸಿಡಿಸಿ ಸಂಭ್ರಮ ಆಚರಣೆ …
Read More »ರೈತರ ಜೊತೆಗೆ ಬಿಜೆಪಿ ಇದ್ದು, ರೈತರ ಸಲುವಾಗಿ ಹೋರಾಟ ನಡೆಸಲಿದೆ: ಮಾಜಿ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ*
ರಾಜ್ಯದಲ್ಲಿ ಸುರಿದ ಬಾರಿ ಮಳೆಯಿಂದ ಆಗಿರುವ ಬೆಳೆಹಾನಿಯ ಕುರಿತು ತಂಡ ರಚನೆ ಮಾಡಿ ಸರ್ವೇ ಆಗಬೇಕಿದೆ. ರಾಜ್ಯ ಸರ್ಕಾರ ತಕ್ಷಣ ಸರ್ವೇ ಮಾಡಿ ಪರಿಹಾರ ಕೊಡುವ ಕೆಲಸ ಮಾಡಬೇಕಿದೆ. ಮೊದಲ ಹಂತದಲ್ಲಿ ರಾಜ್ಯ ಸರ್ಕಾರ ತನ್ನ ಜವಾಬ್ದಾರಿ ನಿರ್ವಹಿಸಬೇಕು. ಕಳೆದೊಂದು ವಾರದಿಂದ ಮಳೆಯಾಗುತ್ತಿದ್ದರೂ ಸರ್ಕಾರ ಸಿಎಂ, ಸಚಿವರು ಹಾನಿ ಪ್ರದೇಶಕ್ಕೆ ಭೇಟಿ ನೀಡಿಲ್ಲಾ ಎಂದು ಬಿಜೆಪಿ ರಾಜ್ಯ ರೈತ ಮೊರ್ಚಾ ಅಧ್ಯಕ್ಷ ಹಾಗೂ ಮಾಜಿ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ ತಿಳಿಸಿದರು. …
Read More »ರಿಜಿಸ್ಟರ್ ಮದುವೆಯಾಗುವುದಾಗಿ ನಂಬಿಸಿ ಮಹಿಳೆ ಮೇಲೆ ಅತ್ಯಾಚಾರ ಮಾಡಿದ ಆರೋಪದಡಿ ಉತ್ತರ ಪ್ರದೇಶದ ವ್ಯಕ್ತಿಯೊಬ್ಬರ ವಿರುದ್ಧ ಏರ್ಪೋರ್ಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಬೆಂಗಳೂರು : ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಮತ್ತು ಜೀವ ಬೆದರಿಕೆಯೊಡ್ಡಿದ ಆರೋಪದಡಿ ಉತ್ತರ ಪ್ರದೇಶದ ವ್ಯಕ್ತಿಯೊಬ್ಬರ ವಿರುದ್ಧ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮದುವೆಯಾಗುವುದಾಗಿ ನಂಬಿಸಿ ಶ್ರೀಭಗವಾನ್ ಶರ್ಮಾ ಅಲಿಯಾಸ್ ಗುಡ್ಡು ಪಂಡಿತ್ ಎಂಬುವರು ತನ್ನನ್ನು ಬೆಂಗಳೂರಿಗೆ ಕರೆದುಕೊಂಡು ಬಂದಿದ್ದು, ಖಾಸಗಿ ಹೋಟಲ್ನಲ್ಲಿ ಅತ್ಯಾಚಾರ ಎಸಗಿ, ಕೊಲೆ ಬೆದರಿಕೆ ಹಾಕಿದ್ದಾರೆಂದು ಆರೋಪಿಸಿ ಮಹಿಳೆಯೊಬ್ಬರು ದೂರು ನೀಡಿದ್ದಾರೆ. ಆಗಸ್ಟ್ 17 …
Read More »ಡಾ.ಪುನೀತ್ ರಾಜ್ ಕುಮಾರ್ ಹೃದಯ ಜ್ಯೋತಿ ಯೋಜನೆ ಈ ವರ್ಷ ರಾಜ್ಯಾದ್ಯಂತ ವಿಸ್ತರಣೆ: ಸಚಿವ ದಿನೇಶ್ ಗುಂಡೂರಾವ್
ಬೆಂಗಳೂರು: ಹೃದಯಾಘಾತದಿಂದ ಮರಣವಾಗುವವರ ಸಂಖ್ಯೆ ಅಧಿಕವಾಗುತ್ತಿದ್ದು, ಇದನ್ನ ನಿಯಂತ್ರಿಸಲು ಈ ವರ್ಷದಿಂದಲೇ ಡಾ.ಪುನೀತ್ ರಾಜ್ ಕುಮಾರ್ ಹೃದಯ ಜ್ಯೋತಿ ಯೋಜನೆಯನ್ನ ರಾಜ್ಯಾದ್ಯಂತ ವಿಸ್ತರಿಸಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲಾಣ್ಯ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಹೃದಯಾಘಾತ ತಡೆಯಲು 2023ರಲ್ಲಿ ಹೃದಯ ಜ್ಯೋತಿ ಯೋಜನೆ ಆರಂಭಿಸಲಾಗಿದೆ. ಪ್ರಸ್ತಕ ಆರ್ಥಿಕ ಸಾಲಿನಲ್ಲಿ ರಾಜ್ಯದ 86 ಕೇಂದ್ರಗಳಲ್ಲಿ ಈ ಯೋಜನೆ ಚಾಲ್ತಿಯಲ್ಲಿದೆ. ಈ ಯೋಜನಯನ್ನ ರಾಜ್ಯದ ಜಿಲ್ಲಾ, ತಾಲೂಕು ಹಾಗೂ ಸಮುದಾಯ ಆರೋಗ್ಯ …
Read More »ರಾಜ್ಯದ ಹಲವು ಭಾಗಗಳಲ್ಲಿ ಇನ್ನು ಐದು ದಿನ ಭಾರೀ ಮಳೆ ಮುನ್ಸೂಚನೆ
ಬೆಂಗಳೂರು: ರಾಜ್ಯದ ಕರಾವಳಿ, ಮಲೆನಾಡು ಜಿಲ್ಲೆಗಳು ಸೇರಿದಂತೆ ಹಲವು ಭಾಗಗಳಲ್ಲಿ ಇನ್ನು ಐದು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಐದು ಜಿಲ್ಲೆಗಳಲ್ಲಿ ರೆಡ್ ಅಲರ್ಟ್: ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಹಾಸನ, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಗಾಳಿಯ ವೇಗ ಗಂಟೆಗೆ 40-50ಕಿ.ಮೀ ಬೀಸಲಿದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. 11 ಜಿಲ್ಲೆಗಳಿಗೆ ಹವಾಮಾನ ಇಲಾಖೆಯಿಂದ ಆರೆಂಜ್ ಅಲರ್ಟ್ …
Read More »ಕಂಪ್ಲಿ ಸೇತುವೆ ಮುಳುಗಡೆ; ಬಳ್ಳಾರಿ – ಗಂಗಾವತಿ ಸಂಪರ್ಕ ಸ್ಥಗಿತ –
ಬಳ್ಳಾರಿ: ಮಲೆನಾಡು ಭಾಗದಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ತುಂಗಭದ್ರಾ ಜಲಾಶಯದಿಂದ 1 ಲಕ್ಷ ಕ್ಯೂಸೆಕ್ ನೀರನ್ನು ಬಿಡುಗಡೆ ಮಾಡಲಾಗಿದೆ. ಪರಿಣಾಮ ಕಂಪ್ಲಿ ಸೇತುವೆ ಮುಳುಗಡೆಯಾಗಿದ್ದು, ಬಳ್ಳಾರಿ – ಗಂಗಾವತಿ ಸಂಪರ್ಕ ಸ್ಥಗಿತಗೊಂಡಿದೆ. ಮಲೆನಾಡು ಪ್ರದೇಶ ಸೇರಿದಂತೆ ತುಂಗಭದ್ರಾ ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆಯಾಗುತ್ತಿದೆ. ಮಳೆ ಪ್ರಮಾಣ ಹೆಚ್ಚಾದ ಹಿನ್ನೆಲೆಯಲ್ಲಿ ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಕೂಡ ಗಣನೀಯವಾಗಿ ಹೆಚ್ಚಾಗಿದೆ. ಸದ್ಯ 1,07,500 ಕ್ಯೂಸೆಕ್ ನೀರಿನ ಒಳ ಹರಿವು ಇದೆ. ಜಲಾಶಯದ ಸುರಕ್ಷತಾ ದೃಷ್ಟಿಯಿಂದ …
Read More »
Laxmi News 24×7