Breaking News
Home / ರಾಜಕೀಯ (page 1828)

ರಾಜಕೀಯ

: ರಾಜ್ಯದಲ್ಲಿನ ಕೊರೊನಾ ಭೀತಿ ಹಿನ್ನೆಲೆಯಲ್ಲಿ ರಾಯಚೂರಿನಲ್ಲಿ ಕೊರೋನಾ ರೋಗಿಗಳಿಗಾಗಿ ಪ್ರತ್ಯೇಕ ವಾರ್ಡ್

ರಾಯಚೂರು: ರಾಜ್ಯದಲ್ಲಿನ ಕೊರೊನಾ ಭೀತಿ ಹಿನ್ನೆಲೆಯಲ್ಲಿ ರಾಯಚೂರಿನಲ್ಲಿ ಕೊರೋನಾ ರೋಗಿಗಳಿಗಾಗಿ ಪ್ರತ್ಯೇಕ ವಾರ್ಡ್ ತೆರೆಯಲಾಗಿದೆ. ನಗರದ ರಿಮ್ಸ್ ಆಸ್ಪತ್ರೆಯಲ್ಲಿ ಐದು ಬೆಡ್‍ಗಳ ಪ್ರತ್ಯೇಕ ವಾರ್ಡ ಆರಂಭಿಸಲಾಗಿದೆ. ಐಸಿಯು ಮಾದರಿಯಲ್ಲಿ ಕೊರೊನಾ ವಾರ್ಡ್ ಸಿದ್ಧವಾಗಿದ್ದು, ಮುನ್ನೆಚ್ಚರಿಕೆಯಾಗಿ ಅಗತ್ಯ ವೈದ್ಯರು ಹಾಗು ಸಿಬ್ಬಂದಿ ನಿಯೋಜನೆ ಮಾಡಲಾಗಿ ಚಿಕಿತ್ಸೆಗೆ ಅಗತ್ಯ ಔಷಧಿ, ಆಕ್ಸಿಜನ್, ಮಾಸ್ಕ್, ಗೌನ್ ಸೇರಿದಂತೆ ಎಲ್ಲಾ ವ್ಯವಸ್ಥೆ ಮಾಡಲಾಗಿದೆ. ರೋಗಿಗಳು ದಾಖಲಾದರೆ ಅವರಿಗೆ ವೆಂಟಿಲೇಟರ್ ನೀಡಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ರಾಯಚೂರಿನಲ್ಲಿ ಇಲ್ಲಿಯವರೆಗೂ ಯಾವ …

Read More »

ನೂತನ 10 ಸಚಿವರೂ ಕೂಡ ಸಿದ್ದರಾಮಯ್ಯ ಬೆಂಬಲಿಗರು. ಹೀಗಾಗಿ ಅವರನ್ನು ಒಳ್ಳೆಯ ಕೆಲಸ ಮಾಡಿ ಎಂದು ಬೆನ್ನು ತಟ್ಟಿ

ಚಾಮರಾಜನಗರ: ಮಾಜಿ ಸಿಎಂ ಸಿದ್ದರಾಮಯ್ಯ ಪ್ರಬುದ್ಧರು. ಅನರ್ಹರು ಜನತಾ ನ್ಯಾಯಾಲಯದಲ್ಲಿ ಗೆದ್ದು ಅರ್ಹರಾಗಿದ್ದಾರೆ. ನೂತನ 10 ಸಚಿವರೂ ಕೂಡ ಸಿದ್ದರಾಮಯ್ಯ ಬೆಂಬಲಿಗರು. ಹೀಗಾಗಿ ಅವರನ್ನು ಒಳ್ಳೆಯ ಕೆಲಸ ಮಾಡಿ ಎಂದು ಬೆನ್ನು ತಟ್ಟಿ ಪ್ರೋತ್ಸಾಹಿಸಬೇಕು ಎಂದು ಬಿಎಸ್‍ಪಿ ಉಚ್ಛಾಟಿತ ಶಾಸಕ ಎನ್ ಮಹೇಶ್ ಸಲಹೆ ನೀಡಿದ್ದಾರೆ. ಚಾಮರಾಜನಗರದ ಯಳಂದೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅನರ್ಹರು ಯಾವುದೇ ಪಕ್ಷಕ್ಕೆ ಹೋಗಿ ಮಂತ್ರಿಯಾದರೂ ಆವರು ಅನರ್ಹರೇ ಎಂಬ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯಿಸಿದ ಮಹೇಶ್, …

Read More »

ಮೋದಿ ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸುವಂತೆ ಕೋರಿದ್ದಾರೆ. ಚುನಾವಣೆ ಪ್ರಜಾಪ್ರಭುತ್ವದ ಉತ್ಸವ

ನವದೆಹಲಿ, ಫೆ.8-ದೆಹಲಿ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಷ್ಟ್ರದ ರಾಜಧಾನಿ ದೆಹಲಿ ಜನತೆಗೆ ಮನವಿ ಮಾಡಿರುವ ಪ್ರಧಾನಿ ನರೇಂದ್ರ ಮೋದಿ ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸುವಂತೆ ಕೋರಿದ್ದಾರೆ. ಚುನಾವಣೆ ಪ್ರಜಾಪ್ರಭುತ್ವದ ಉತ್ಸವ. ಈ ಜನತಂತ್ರ ಹಬ್ಬದಲ್ಲಿ ಎಲ್ಲರೂ ಉತ್ಸಾಹದಿಂದ ಮತ ಚಲಾಯಿಸುವಂತೆ ಅವರು ಟ್ವೀಟರ್‍ನಲ್ಲಿ ಮನವಿ ಮಾಡಿದ್ದಾರೆ. ದೇಶದ ಯಾವುದೇ ರಾಜ್ಯಗಳ ವಿಧಾನಸಭೆ ಮತ್ತು ಲೋಕಸಭಾ ಚುನಾವಣೆ ಸಂದರ್ಭಗಳಲ್ಲಿ ಮೋದಿ ಮತದಾರರಿಗೆ ಈ ರೀತಿಯ ಮನವಿ ಮಾಡುವುದು ಪರಿಪಾಠ. ಅಂತೆಯೇ ದೆಹಲಿ …

Read More »

ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಾರ್ಟಿ 3ನೇ ಬಾರಿ ಗೆಲುವಿನೊಂದಿಗೆ ಹ್ಯಾಟ್ರಿಕ್ ವಿಜಯ ಸಾಧಿಸಲಿದೆ ಎಂದು ದೆಹಲಿ ಮುಖ್ಯಮಂತ್ರಿ ಮತ್ತು ಪಕ್ಷದ ಮುಖ್ಯಸ್ಥ ಅರವಿಂದ ಕೇಜ್ರಿವಾಲ್ ವಿಶ್ವಾಸ

ನವದೆಹಲಿ, ಫೆ.8-ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಾರ್ಟಿ 3ನೇ ಬಾರಿ ಗೆಲುವಿನೊಂದಿಗೆ ಹ್ಯಾಟ್ರಿಕ್ ವಿಜಯ ಸಾಧಿಸಲಿದೆ ಎಂದು ದೆಹಲಿ ಮುಖ್ಯಮಂತ್ರಿ ಮತ್ತು ಪಕ್ಷದ ಮುಖ್ಯಸ್ಥ ಅರವಿಂದ ಕೇಜ್ರಿವಾಲ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಸಿ.ಆರ್.ಲೈನ್‍ನಲ್ಲಿ ಇಂದು ತಮ್ಮ ಪತ್ನಿ ಸುನೀತಾ ಮತ್ತು ಪ್ರಥಮ ಬಾರಿ ಮತ ಚಲಾಯಿಸಲು ಅರ್ಹತೆ ಪಡೆದಿರುವ ಪುತ್ರ ಪುಳಕಿತ್ ಅವರೊಂದಿಗೆ ಹಕ್ಕು ಚಲಾಯಿಸಿದ ನಂತರ ಕೇಜ್ರಿವಾಲ್ ಸುದ್ದಿಗಾರರೊಂದಿಗೆ ಮಾತನಾಡಿದರು. ನಮ್ಮ ಉತ್ತಮ ಆಡಳಿತವನ್ನು ಮೆಚ್ಚಿ ದೆಹಲಿ ಜನತೆ …

Read More »

-ಮಾಜಿ ಮುಖ್ಯಮಂತ್ರಿಗಳಾದ ಕುಮಾರಸ್ವಾಮಿ ಮತ್ತು ಸಿದ್ದರಾಮಯ್ಯನವರ ಒಳಜಗಳದಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಫುಟ್‍ಪಾತ್ ಸ್ಥಿತಿಗೆ ಬಂದಿವೆ

ಬೆಂಗಳೂರು.ಫೆ.8-ಮಾಜಿ ಮುಖ್ಯಮಂತ್ರಿಗಳಾದ ಕುಮಾರಸ್ವಾಮಿ ಮತ್ತು ಸಿದ್ದರಾಮಯ್ಯನವರ ಒಳಜಗಳದಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಫುಟ್‍ಪಾತ್ ಸ್ಥಿತಿಗೆ ಬಂದಿವೆ ಎಂದು ಕಂದಾಯ ಸಚಿವ ಆರ್.ಅಶೋಕ್ ಲೇವಡಿ ಮಾಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಮುಖ್ಯಮಂತ್ರಿಯಾಗುವುದಿಲ್ಲ ಎಂದು ಕುಮಾರಸ್ವಾಮಿ ಹೇಳುತ್ತಾರೆ. ಕುಮಾರಸ್ವಾಮಿ ಮತ್ತೆ ಸಿಎಂ ಆಗುವುದೇ ಇಲ್ಲ ಎಂದು ಸಿದ್ದರಾಮಯ್ಯ ಹೇಳುತ್ತಾರೆ. ಇಬ್ಬರ ಜಗಳದಲ್ಲಿ ಎರಡೂ ಪಕ್ಷಗಳು ಬೀದಿಗೆ ಬಿದ್ದಿವೆ ಎಂದು ವ್ಯಂಗ್ಯವಾಡಿದರು. ಸಿದ್ದರಾಮಯ್ಯ ಮತ್ತು ಕುಮಾರಸ್ವಾಮಿ ಹೇಳುತ್ತಿರುವುದು ನೂರಕ್ಕೆ ನೂರರಷ್ಟು ಸತ್ಯ. ಏಕೆಂದರೆ …

Read More »

ಸೋಮವಾರ ಖಾತೆಗಳನ್ನು ಹಂಚಿಕೆ ಇಂದಿಲ್ಲಿ :BSY

ಬೆಂಗಳೂರು,ಫೆ.8- ಸಚಿವ ಸಂಪುಟಕ್ಕೆ ಸೇರ್ಪಡೆಯಾಗಿರುವ ನೂತನ 10 ಮಂದಿ ಶಾಸಕರಿಗೆ ಸೋಮವಾರ ಖಾತೆಗಳನ್ನು ಹಂಚಿಕೆ ಮಾಡುವುದಾಗಿ ಮುಖ್ಯಮಂತ್ರಿ ಯಡಿಯೂರಪ್ಪ ಇಂದಿಲ್ಲಿ ಘೋಷಿಸಿದರು. ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾವ ಸಚಿವರಿಗೆ ಯಾವ ಖಾತೆಗಳನ್ನು ನೀಡಬೇಕೆಂಬ ಪಟ್ಟಿ ಸಿದ್ದವಾಗಿದೆ. ಸೋಮವಾರ ಸಚಿವರಿಗೆ ಖಾತೆಗಳನ್ನು ಹಂಚಿಕೆ ಮಾಡುವುದಾಗಿ ಹೇಳಿದರು. ಇಂದು ಶನಿವಾರ ರಜಾದಿನವಾಗಿದ್ದರಿಂದ ಪಟ್ಟಿಯನ್ನು ಪ್ರಕಟಿಸಲು ಸಾಧ್ಯವಾಗಿಲ್ಲ. ಸೋಮವಾರ ಖಾತೆಗಳ ಹಂಚಿಕೆಯಾಗಲಿದೆ. ಈ ಬಗ್ಗೆ ಯಾವುದೇ ರೀತಿಯ ಗೊಂದಲವಿಲ್ಲ ಎಂದು ಸ್ಪಷ್ಟಪಡಿಸಿದರು. ಇಂದೇ …

Read More »

ರವಿವಾರದಂದು ಮುಂಜಾನೆ 10.30ಕ್ಕೆ ಹೆಲಿಕಾಪ್ಟರ್ ಮುಖಾಂತರ ಬೆಂಗಳೂರಿನಿಂದ ಗೋಕಾಕ ನಗಕ್ಕೆ ಆಗಮಿಸುವ ಸಚಿವ ರಮೇಶ ಜಾರಕಿಹೊಳಿ

ಗೋಕಾಕ: ಕರ್ನಾಟಕ ಸರಕಾರದ ನೂತನ ಸಚಿವ ಸಂಪುಟದಲ್ಲಿ ಸಂಪುಟ ದರ್ಜೆಯ ಸಚಿವರಾಗಿ ಗುರುವಾರದಂದು ಪ್ರಮಾಣ ವಚನ ಸ್ವೀಕರಿಸಿದ ನೂತನ ಸಚಿವ ರಮೇಶ ಜಾರಕಿಹೊಳಿ ಅವರು ರವಿವಾರದಂದು ಗೋಕಾಕ ನಗರಕ್ಕೆ ಆಗಮಿಸಲಿದ್ದಾರೆ. ರವಿವಾರದಂದು ಮುಂಜಾನೆ 10.30ಕ್ಕೆ ಹೆಲಿಕಾಪ್ಟರ್ ಮುಖಾಂತರ ಬೆಂಗಳೂರಿನಿಂದ ಗೋಕಾಕ ನಗಕ್ಕೆ ಆಗಮಿಸುವ ಸಚಿವ ರಮೇಶ ಜಾರಕಿಹೊಳಿ ಅವರು, ಹ್ಯಾಲಲಿಪ್ಯಾಡ್‍ನಿಂದ ನಗರದ ಶ್ರೀ ಲಕ್ಷ್ಮೀ ದೇವಸ್ಥಾನಕ್ಕೆ ಪೂಜೆ ಸಲ್ಲಿಸಿ, ಕ್ಷೇತ್ರದ ಮತದಾರರು, ಅಭಿಮಾನಿಗಳು ಹಾಗೂ ಕಾರ್ಯಕರ್ತರು ಹಮ್ಮಿಕೊಂಡಿರುವ ಸತ್ಕಾರ ಸಮಾರಂಭಕ್ಕೆ …

Read More »

ಸ್ಯಾಂಡಲ್‍ವುಡ್ ನಟಿ ಹರಿಪ್ರಿಯಾ ಕನ್ನಡಿಗರಿಗೆ ಅವಮಾನ ಆಗಿದ್ದಕ್ಕೆ ಟ್ವೀಟ್ ಮಾಡುವ ಮೂಲಕ ರೊಚ್ಚಿಗೆದ್ದಿದ್ದಾರೆ

ಬೆಂಗಳೂರು: ಸ್ಯಾಂಡಲ್‍ವುಡ್ ನಟಿ ಹರಿಪ್ರಿಯಾ ಕನ್ನಡಿಗರಿಗೆ ಅವಮಾನ ಆಗಿದ್ದಕ್ಕೆ ಟ್ವೀಟ್ ಮಾಡುವ ಮೂಲಕ ರೊಚ್ಚಿಗೆದ್ದಿದ್ದಾರೆ. ಬಹುಭಾಷಾ ನಟಿ ಕಾಜಲ್ ಅಗರ್ ವಾಲ್ ಅವರ ಮೇಣದ ಪ್ರತಿಮೆಯನ್ನು ಸಿಂಗಾಪುರದಲ್ಲಿನ ಪ್ರತಿಷ್ಠಿತ ಮೇಡಮ್ ಟುಸ್ಸಾಡ್ಸ್ ಮ್ಯೂಸಿಯಮ್‍ನಲ್ಲಿ ನಿರ್ಮಿಸಲಾಗಿದೆ. ಇದನ್ನು ಫೆ.5ರಂದು ಅವರು ಅನಾವರಣಗೊಳಿಸಿದ್ದಾರೆ. ಈ ವಿಷಯ ಹೊರಬರುತ್ತಿದ್ದಂತೆಯೇ ನಟಿ ಹರಿಪ್ರಿಯಾ ಕೊಂಚ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಕಾಜಲ್ ಹೆಸರನ್ನು ಎಲ್ಲಿಯೂ ಪ್ರಸ್ತಾಪಿಸದೆ ಟ್ವಿಟ್ಟರಿನಲ್ಲಿ ತಮ್ಮ ಕನ್ನಡದ ಕಲಾವಿದರಿಗೆ ಯಾಕೆ ಈ ರೀತಿಯ ಗೌರವ ಸಿಕ್ಕಿಲ್ಲ …

Read More »

10 ಮಂದಿ ಸಚಿವರಿಗೆ ಸಿಎಂ ಯಡಿಯೂರಪ್ಪ ಸಲಹೆ ಖಾತೆಗಳ ಬಗ್ಗೆ ಮಾಧ್ಯಮಗಳ ಮುಂದೆ ಬೇಡಿಕೆ ಇಡಬೇಡಿ. ಹೈಕಮಾಂಡ್ ಜೊತೆ ಚರ್ಚಿಸಿ ಖಾತೆಗಳನ್ನು ಅಂತಿಮ

ಬೆಂಗಳೂರು: ಪ್ರಮಾಣ ವಚನ ಸ್ವೀಕರಿಸಿದ ನೂತನ 10 ಮಂದಿ ಸಚಿವರಿಗೆ ಸಿಎಂ ಯಡಿಯೂರಪ್ಪ ಸಲಹೆಗಳನ್ನು ನೀಡಿದ್ದಾರೆ. ನೂತನ ಸಚಿವರ ಜೊತೆ ಸಂಪುಟ ಕೊಠಡಿಯಲ್ಲಿ ಸಭೆ ನಡೆಸಿದ ಯಡಿಯೂರಪ್ಪ ಆರಂಭದಲ್ಲಿ ಅಭಿನಂದನೆ ತಿಳಿಸಿ ಸರ್ಕಾರ ಮತ್ತು ಪಕ್ಷದಲ್ಲಿ ಯಾವ ರೀತಿ ಇರಬೇಕೆಂಬ ಬಗ್ಗೆ ಸಿಎಂ ಪಾಠ ಮಾಡಿದ್ದಾರೆ. ನಿಮ್ಮನ್ನು ಮಂತ್ರಿ ಮಾಡುತ್ತೇನೆ ಎಂದು ಹೇಳಿದ ಭರವಸೆಯನ್ನು ಈಡೇರಿಸಿದ್ದೇನೆ. ಆದರೆ ಖಾತೆಗಾಗಿ ನೀವು ಸ್ವಲ್ಪ ಕಾಯಬೇಕು. ಖಾತೆಗಳ ಬಗ್ಗೆ ಮಾಧ್ಯಮಗಳ ಮುಂದೆ ಬೇಡಿಕೆ ಇಡಬೇಡಿ. …

Read More »

47 ಕೊರೋನಾ ಶಂಕಿತರ ರಕ್ತ ಮಾದರಿಯನ್ನು ಪ್ರಯೋಗಾಲಕ್ಕೆ ಕಳುಹಿಸಿಕೊಡಲಾಗಿದ್ದು, ಅವೆಲ್ಲವೂ ನೆಗೆಟಿವ್:ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಶ್ರೀರಾಮುಲು

ತುಮಕೂರು, ಫೆ.6- ರಾಜ್ಯದಲ್ಲಿ ಒಟ್ಟು 47 ಕೊರೋನಾ ಶಂಕಿತರ ರಕ್ತ ಮಾದರಿಯನ್ನು ಪ್ರಯೋಗಾಲಕ್ಕೆ ಕಳುಹಿಸಿಕೊಡಲಾಗಿದ್ದು, ಅವೆಲ್ಲವೂ ನೆಗೆಟಿವ್ ಆಗಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಶ್ರೀರಾಮುಲು ಸ್ಪಷ್ಟಪಡಿಸಿದ್ದಾರೆ. ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ ಶ್ರೀ ಶಿವಕುಮಾರಸ್ವಾಮಿಯವರ ಗದ್ದುಗೆ ದರ್ಶನ ಪಡೆದ ನಂತರ ಶ್ರೀ ಸಿದ್ದಲಿಂಗ ಸ್ವಾಮೀಜಿಯವರ ಆಶೀರ್ವಾದ ಪಡೆದ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ನಗರದಲ್ಲಿ ವ್ಯಕ್ತಿಯೊಬ್ಬರಿಗೆ ಕೊರೋನಾ ವೈರಸ್ ಇದೆ ಎನ್ನಲಾಗಿದ್ದು, ಅವರ ರಕ್ತ ಮಾದರಿಯನ್ನು …

Read More »