Breaking News
Home / ರಾಜಕೀಯ (page 1833)

ರಾಜಕೀಯ

ಯಡಿಯೂರಪ್ಪ ಹಾಲಿ ಐದು ಸಚಿವರಿಗೆ ಕೋಕ್ ನೀಡುವ ಸಾಧ್ಯತೆ ಹೆಚ್ಚಾಗಿದೆ.

ಬೆಂಗಳೂರು,ಜ.30-ಸಚಿವ ಸಂಪುಟ ವಿಸ್ತರಣೆ ಜೊತೆ ಪುನರ್ ರಚನೆಗೂ ಕೈ ಹಾಕಿರುವ ಮುಖ್ಯಮಂತ್ರಿ ಯಡಿಯೂರಪ್ಪ ಹಾಲಿ ಐದು ಸಚಿವರಿಗೆ ಕೋಕ್ ನೀಡುವ ಸಾಧ್ಯತೆ ಹೆಚ್ಚಾಗಿದೆ. ತಮಗೆ ನೀಡಿರುವ ಖಾತೆಯನ್ನು ಸಮರ್ಪಕವಾಗಿ ನಿರ್ವಹಣೆ ಮಾಡುವಲ್ಲಿ ವಿಫಲರಾಗಿರುವ ಗೃಹ ಸಚಿವ ಬಸವರಾಜ್ ಬೊಮ್ಮಾಯಿ, ಗಣಿ ಮತ್ತು ಭೂ ವಿಜ್ಞಾನ ಸಚಿವ ಸಿ.ಸಿ.ಪಾಟೀಲ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ, ಮುಜರಾಯಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ …

Read More »

ಬಿಜೆಪಿ ಸರ್ಕಾರ ಅವೈಜ್ಞಾನಿಕವಾಗಿ ಜಾರಿಗೆ ತಂದ ಸಿಎಎ,ಎನ್‍ಪಿಆರ್ ಹಾಗೂ ಎನ್‍ಆರ್‍ಸಿ ಕಾಯ್ದೆಯನ್ನು ಕೈ ಬಿಡಬೇಕೆಂದು ದಲಿತ ಸಂಘರ್ಷ ಸಮಿತಿ ಕರ್ನಾಟಕ ಹಾಗೂ ವಿವಿಧ ದಲಿತ ಪರ ಸಂಘಟನೆಗಳು ಪ್ರತಿಭಟನೆ

ಬಿಜೆಪಿ ಸರ್ಕಾರ ಅವೈಜ್ಞಾನಿಕವಾಗಿ ಜಾರಿಗೆ ತಂದ ಸಿಎಎ,ಎನ್‍ಪಿಆರ್ ಹಾಗೂ ಎನ್‍ಆರ್‍ಸಿ ಕಾಯ್ದೆಯನ್ನು ಕೈ ಬಿಡಬೇಕೆಂದು ದಲಿತ ಸಂಘರ್ಷ ಸಮಿತಿ ಕರ್ನಾಟಕ ಹಾಗೂ ವಿವಿಧ ದಲಿತ ಪರ ಸಂಘಟನೆಗಳು ಪ್ರತಿಭಟನೆ ನಡೆಸಿ ತಹಶೀಲ್ದಾರ ಮುಖಾಂತರ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದರು. ಬುಧವಾರದಂದು ನಗರದ ಬಸವೇಶ್ವರ ವೃತ್ತದಲ್ಲಿ ಸೇರಿದ ದಲಿತ ಸಂಘರ್ಷ ಸಮಿತಿ ಕರ್ನಾಟಕ ಹಾಗೂ ವಿವಿಧ ದಲಿತ ಪರ ಸಂಘಟನೆಗಳು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗುತ್ತಾ ಮೆರವಣಿಗೆಯ ಮೂಲಕ ತಹಶೀಲ್ದಾರ ಕಛೇರಿಗೆ …

Read More »

ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ದಲಿತ ಸಂಘರ್ಷ ಸಮಿತಿ ಸೇರಿದಂತೆ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸಿದರು.

ಬೆಳಗಾವಿ: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಬಹುಜನ ಕ್ರಾಂತಿ ಮೋರ್ಚಾ ಸಂಘಟನೆ ಕರೆ ನೀಡಿದ ಭಾರತ್ ಬಂದ್ ಗೆ ಬೆಂಬಲಿಸಿ ಮಾನವ ಬಂಧುತ್ವ ವೇದಿಕೆ ಹಾಗೂ ದಲಿತ ಸಂಘರ್ಷ ಸಮಿತಿ ಸೇರಿದಂತೆ ವಿವಿಧ ಸಂಘಟನೆಗಳು ನಗರದಲ್ಲಿ ಬುಧವಾರ ಬೃಹತ್ ಪ್ರತಿಭಟನೆ ನಡೆಸಿದರು. ಇಲ್ಲಿನ ಅಂಜುಮನ್ ಕಾಲೇಜು ಆವರಣದಿಂದ ಪ್ರತಿಭಟನಾ ಮೆರವಣಿಗೆ ಆರಂಭಿಸಿ ಡಿಸಿ ಕಚೇರಿವರೆಗೆ ತಲುಪಿತು. ಕೇಂದ್ರ ಸರ್ಕಾರ, ಪ್ರಧಾನಿ ಮೋದಿ, ಅಮಿತ್ ಶಾ ಹಾಗೂ ಸಿಎಂ ಯಡಿಯೂರಪ್ಪ ವಿರುದ್ದ …

Read More »

ಬೆಳಗಾವಿಯ ವಿಶ್ವೇಶ್ವರಯ್ಯ ನಗರದಲ್ಲಿ ಸ್ಥಾಪಿಸಲಾಗಿರುವ ಇಂಟಿಗ್ರೇಟೆಡ್ ಕಮಾಂಡ್ ಆಂಡ್ ಕಂಟ್ರೋಲ್ ಸೆಂಟರ್ ೭೬.೮೦ ಕೋಟಿ ರೂಪಾಯಿ ಯೋಜನಾ ಮೊತ್ತದಲ್ಲಿ

ಸ್ಮಾರ್ಟ್ ಸಿಟಿ‌ ಯೋಜನೆಯಡಿ ೭೬.೮೦ ಕೋಟಿ ರೂಪಾಯಿ ಯೋಜನಾ ಮೊತ್ತದಲ್ಲಿ ಬೆಳಗಾವಿಯ ವಿಶ್ವೇಶ್ವರಯ್ಯ ನಗರದಲ್ಲಿ ಸ್ಥಾಪಿಸಲಾಗಿರುವ ಇಂಟಿಗ್ರೇಟೆಡ್ ಕಮಾಂಡ್ ಆಂಡ್ ಕಂಟ್ರೋಲ್ ಸೆಂಟರ್(ಸಮಗ್ರ ಆಜ್ಞಾ ಮತ್ತು ನಿರ್ವಹಣಾ ಕೇಂದ್ರ) ಅನ್ನು ಮುಖ್ಯಮಂತ್ರಿ ಬಿ‌ಎಸ್.ಯಡಿಯೂರಪ್ಪ ಅವರು ಇದೀಗ ಲೋಕಾರ್ಪಣೆಗೊಳಿಸಿದರು. ಸ್ಮಾರ್ಟ್ ಸಿಟಿ ಯೋಜನೆಯಡಿ ಸ್ಥಾಪಿಸಲಾಗಿರುವ ಕಮಾಂಡ್ ಅಂಡ್ ಕಂಟ್ರೋಲ್ ಸೆಂಟರ್ ನ ಕಾರ್ಯವೈಖರಿಯ ಬಗ್ಗೆ ಸ್ಮಾರ್ಟ್ ಸಿಟಿ ಯೋಜನೆಯ ವ್ಯವಸ್ಥಾಪಕ ನಿರ್ದೇಶಕ ಶಶಿಧರ್ ಕುರೇರ್ ಪ್ರಾತ್ಯಕ್ಷಿಕೆ ಮೂಲಕ ಮಾಹಿತಿಯನ್ನು ನೀಡಿದರು. ಇದೇ ಸಂದರ್ಭದಲ್ಲಿ …

Read More »

ಶಾಸಕಿ ಹೆಬ್ಬಾಳಕರ ಅಲ್ಲಲ್ಲಿ ಕೆಲವು ಕನ್ನಡದ ಮಾತುಗಳನ್ನು ಹೇಳಿದ್ದನ್ನು ಬಿಟ್ಟರೆ, ಕಾಯ೯ಕ್ರಮದಲ್ಲಿ ಕನ್ನಡದ ಲವಲೇಶವೂ ಇರಲಿಲ್ಲ. ಕಾಯ೯ಕ್ರಮ ಮಹಾರಾಷ್ಟ್ರದಲ್ಲಿ ನಡೆದಂತೆ ಇತ್ತು

ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಅನಗತ್ಯವಾಗಿ ಮತ್ತೊಂದು ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾರೆ. ಕಾಯ೯ಕ್ರಮವನ್ನು ಸಂಪೂಣ೯ವಾಗಿ ಮರಾಠಿಮಯವಾಗಿಸುವ ಮೂಲಕ ಕನ್ನಡ ಸಂಘಟನೆಗಳ ಆಕ್ರೋಶಕ್ಕೆ ಗುರಿ ಬೆಳಗಾವಿ ಜಿಲ್ಲಾ ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿ ಅಧ್ಯಕ್ಷ ಅಶೋಕ ಚಂದರಗಿ ಅವರು ಇದು ಕನಾ೯ಟಕ ಸಕಾ೯ರಕ್ಕೆ ಮಾಡಿದ ಅವಮಾನ ಎಂದು ಪ್ರತಿಕ್ರಿಯಿಸಿದ್ದಾರೆ. ಬೆಳಗಾವ್’ ಎಂದು ದೊಡ್ಡದಾಗಿ ಬರೆಸುವ ಮೂಲಕ ಕನ್ನಡಕ್ಕೆ ದ್ರೋಹ ಬಗೆಯಲಾಗಿದೆ. ಬೆಳಗಾವಿ: ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಅನಗತ್ಯವಾಗಿ ಮತ್ತೊಂದು ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾರೆ. ಕನಾ೯ಟಕದ …

Read More »

ಉಪಚುನಾವಣೆಯಲ್ಲಿ ಗೆದ್ದಿರುವ 11 ಶಾಸಕರು ಮಂತ್ರಿಯಾಗುವುದು ನಿಶ್ಚಿತ: ಶಾಸಕ ರಮೇಶ್ ಜಾರಕಿಹೊಳಿ

ಉಪಚುನಾವಣೆಯಲ್ಲಿ ಗೆದ್ದಿರುವ 11 ಶಾಸಕರು ಮಂತ್ರಿಯಾಗುವುದು ನಿಶ್ಚಿತವಾಗಿದ್ದು ಎಚ್.ವಿಶ್ವನಾಥ್ ಅವರನ್ನು ಮಂತ್ರಿ ಮಾಡಲು ನಾವೆಲ್ಲ ಪ್ರಯತ್ನಿಸುತ್ತೇವೆ ಎಂದು ಶಾಸಕ ರಮೇಶ್ ಜಾರಕಿಹೊಳಿ ತಿಳಿಸಿದರು.. ಶಾಸಕರಾದ ಮಹೇಶ್ ಕುಮಠಹಳ್ಳಿ, ಶ್ರೀಮಂತ ಪಾಟೀಲ್, ಮಾಜಿ ಸಚಿವ ಆರ್.ಶಂಕರ್ ಜೊತೆ ಶ್ರೀಕಂಠೇಶ್ವರಸ್ವಾಮಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ಸಚಿವ ಎಚ್.ವಿಶ್ವನಾಥ್ ಅವರನ್ನು ಉಪಚುನಾವಣೆಯಲ್ಲಿ ಸ್ಪರ್ಧಿಸದಂತೆ ಸಿಎಂ ಯಡಿಯೂರಪ್ಪ ಹೇಳಿದ್ದು ನಿಜ. ಅವರು ನಮ್ಮ ನಾಯಕರು. ನಮ್ಮ …

Read More »

ಕಷ್ಟಪಟ್ಟು ಬಿಎಂಟಿಸಿ ನೌಕರಿ ಗಿಟ್ಟಿಸಿದ್ದ ಮಗ ಈಗ ಐಎಎಸ್

ಬೆಂಗಳೂರು: ಆತನದ್ದು ತೀರ ಬಡ ಕುಟುಂಬ. ಮನೆಯಲ್ಲಿ ಹೆಚ್ಚು ಕಲಿತವರಿಲ್ಲ. ಸರ್ಕಾರಿ ನೌಕರಿ ಅಂದ್ರೆ ದೊಡ್ಡದು, ಕಷ್ಟಪಟ್ಟು ಬಿಎಂಟಿಸಿ ನೌಕರಿ ಗಿಟ್ಟಿಸಿದ್ದ ಮಗ ಈಗ ಐಎಎಸ್ ಪಾಸ್ ಆಗುವ ಹಂತದಲ್ಲಿ ಇದ್ದಾನೆಂದ್ರೆ ಸಂತಸಕ್ಕೆ ಪಾರವೇ ಇಲ್ಲ. ಹೌದು, ಬಿಎಂಟಿಸಿ ಕಂಡಕ್ಟರ್ ಆಗಿ ಕೆಲಸ ಮಾಡುತ್ತಿರುವ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಮಧು ಐಎಎಸ್ ಮುಖ್ಯ ಪರೀಕ್ಷೆಯಲ್ಲಿ ಪಾಸಾಗಿದ್ದು, ಸಂದರ್ಶನಕ್ಕೆ ಕಾಯುತ್ತಿದ್ದಾರೆ. ದಿನಕ್ಕೆ ಎಂಟು ಗಂಟೆ ಕಂಡಕ್ಟರ್ ಕೆಲಸ ಮಾಡುತ್ತಿದ್ದ ಮಧು …

Read More »

ಮಾಸಾಂತ್ಯದಲ್ಲಿ ಸಂಪುಟ ವಿಸ್ತರಣೆರಮೇಶ ಜಾರಕಿಹೊಳಿ ಮತ್ತು ಟೀಂ ಅರ್ಹ ಶಾಸಕರು ಟೆಂಪಲ್ ರನ್ ನಡೆಸುತ್ತಿದ್ದಾರೆ.

ಮೈಸೂರು: ಮಾಸಾಂತ್ಯದಲ್ಲಿ ಸಂಪುಟ ವಿಸ್ತರಣೆ ಮಾಡುವುದಾಗಿ ಸಿಎಂ ಯಡಿಯೂರಪ್ಪ ಹೇಳಿದ್ದರು.ಈ ಬೆನ್ನಲ್ಲೇ ಸಚಿವ ಸ್ಥಾನ ಆಕಾಂಕ್ಷಿಗಳಾದ ಅರ್ಹ ಶಾಸಕರು ಟೆಂಪಲ್ ರನ್ ನಡೆಸುತ್ತಿದ್ದಾರೆ. ಗೋಕಾಕ ಶಾಸಕ ರಮೇಶ ಜಾರಕಿಹೊಳಿ ಮತ್ತು ಟೀಂ I ಇಂದು ನಂಜನಗೂಡು ಶ್ರೀಕಂಠೇಶ್ವರ್ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಈ ವೇಳೆ ಶಾಸಕ ಮಹೇಶ ಕುಮಟಳ್ಳಿ, ಆರ್ ಶಂಕರ್, ಮಾಜಿ ಶಾಸಕ ನಾಗರಾಜು ಕೂಡ ಶಾಸಕ ರಮೇಶ ಜಾರಕಿಹೊಳಿ ಅವರಿಗೆ ಸಾಥ್ ನೀಡಿದ್ರು. …

Read More »

ನೆಹರು ಓರ್ವ ಅಯೋಗ್ಯ ವ್ಯಕ್ತಿ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೊಸ ವಿವಾದ ಸೃಷ್ಟಿಸಿದ್ದಾರೆ.

  ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೊಸ ವಿವಾದ ರಾಷ್ಟ್ರಪಿತ ಮಹಾತ್ಮ ಗಾಂಧಿಜೀ ಮಾಡಿದತಪ್ಪಿನಿಂದ ನೆಹರು ಓರ್ವ ಅಯೋಗ್ಯ ವ್ಯಕ್ತಿ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್   ಬಾಗಲಕೋಟೆ: ರಾಷ್ಟ್ರಪಿತ ಮಹಾತ್ಮ ಗಾಂಧಿಜೀ ಮಾಡಿದ ತಪ್ಪಿನಿಂದ ವಿಲಾಸಿ ಜೀವನ ನಡೆಸುತ್ತಿದ್ದ ನೆಹರು ಅಂತಹ ಓರ್ವ ಅಯೋಗ್ಯ ವ್ಯಕ್ತಿ ಈ ದೇಶದ ಮೊದಲ ಪ್ರಧಾನಿಯಾದರು ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೊಸ ವಿವಾದ ಸೃಷ್ಟಿಸಿದ್ದಾರೆ. …

Read More »

ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಹೋರಾಟಕ್ಕೆ ಪಿಎಫ್‍ಐ ಸಂಘಟನೆಗೆ ಅಕ್ರಮ ಹಣ ಹರಿದು ಬಂದಿದ್ದಲ್ಲಿ ಸಮಗ್ರ ತನಿಖೆಯಾಗಲಿ;

ಹುಬ್ಬಳ್ಳಿ, ಜ.28- ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಹೋರಾಟಕ್ಕೆ ಪಿಎಫ್‍ಐ ಸಂಘಟನೆಗೆ ಅಕ್ರಮ ಹಣ ಹರಿದು ಬಂದಿದ್ದಲ್ಲಿ ಸಮಗ್ರ ತನಿಖೆಯಾಗಲಿ; ಆರೋಪ ಸಾಬೀತುಪಡಿಸಲಿ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು. ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಎ ವಿರುದ್ಧ ಹೋರಾಟ ನಡೆಸಲು ಪಿಎಫ್‍ಐ ಸಂಘಟನೆಗೆ ಅಕ್ರಮ ಹಣ ಬಂದಿದ್ದಲ್ಲಿ ಅವರ ಮೇಲೆ ಕ್ರಮ ತೆಗೆದುಕೊಳ್ಳಲಿ ಎಂದು ತಿಳಿಸಿದರು.  ಸಿಎಎ ಸಂವಿಧಾನಕ್ಕೆ ವಿರುದ್ಧವಾದಂತಹ ಕಾಯಿದೆ. ಜಾತಿ, ಧರ್ಮ ಆಧಾರದ ಮೇಲೆ ಈ …

Read More »