Breaking News
Home / ರಾಜಕೀಯ (page 1844)

ರಾಜಕೀಯ

ಆಡಳಿತ ಪಕ್ಷದ ಶಾಸಕರಿಗೆ ಸದನ ನಡೆಸಲು ಆಸಕ್ತಿ ಇಲ್ಲ

ಬೆಂಗಳೂರು,- ಆಡಳಿತ ಪಕ್ಷದ ಶಾಸಕರಿಗೆ ಸದನ ನಡೆಸಲು ಆಸಕ್ತಿ ಇಲ್ಲ. ಹಾಗಾಗಿ ಗದ್ದಲ ಮಾಡಿ ಚರ್ಚೆಗೆ ಅಡ್ಡಿಪಡಿಸುತ್ತಿದ್ದಾರೆ ಎಂದು ಪ್ರತಿಪಕ್ಷದ ಕಾಂಗ್ರೆಸ್ ಶಾಸಕರು ಬಿಜೆಪಿ ಶಾಸಕರ ವಿರುದ್ಧ ಹರಿಹಾಯ್ದ ಪ್ರಸಂಗ ನಡೆಯಿತು. ವಿಧಾನಸಭೆ ಪ್ರಶ್ನೋತ್ತರ ಅವಧಿಯ ಬಳಿಕ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಹಕ್ಕುಚ್ಯುತಿಯಿಂದ ಸಲ್ಲಿಕೆಯಾಗಿರುವ ಎರಡು ಸೂಚನೆಗಳ ಚರ್ಚೆಗೆ ಅವಕಾಶ ಮಾಡಿ ಕೊಡುವುದಾಗಿ ಹೇಳಿದ್ದಂತೆ ಸಿದ್ದರಾಮಯ್ಯ ಅವರಿಗೆ ಮಾತನಾಡಲು ಆಹ್ವಾನಿಸಿದ್ದರು. ಈ ವೇಳೆ ಬಿಜೆಪಿಯ ಕೆ.ಜಿ.ಬೋಪಯ್ಯ ಮಾತನಾಡಿ, …

Read More »

ಬೆಳಗಾವಿ ಜಿಲ್ಲಾ ಕಾಂಗ್ರೆಸ್’ಗೆ ಮರುಜೀವ ನೀಡುವ ಮಹತ್ತರ ಜವಾಬ್ದಾರಿ ಸತೀಶ ಜಾರಕಿಹೊಳಿ ಹೆಗಲಿಗೆ

ಬೆಳಗಾವಿ: ರಾಜ್ಯದಲ್ಲಿ ಎರಡನೇ ಅತಿ ದೊಡ್ಡ ಜಿಲ್ಲೆಯಾಗಿರುವ ಬೆಳಗಾವಿಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಪುನಶ್ಚೇತನ ನೀಡಲು ಕಾಂಗ್ರೆಸ್ ಹೈಕಮಾಂಡ್ ಮಹತ್ವದ ನಿರ್ಧಾರ ತೆಗೆದುಕೊಂಡಿದ್ದು ಅಹಿಂದ ನಾಯಕರೆಂದು ಗುರುತಿಸಿಕೊಂಡಿರುವ ಸತೀಶ ಜಾರಕಿಹೊಳಿ ಅವರಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷರನ್ನಾಗಿ ನೇಮಕ ಮಾಡಿದೆ. 2019 ರ ಲೋಕಸಭೆ ಮತ್ತು ವಿಧಾನಸಭೆ ಉಪಚುನಾವಣೆಯಲ್ಲಿ ಏಕಾಂಗಿ ಹೋರಾಟ ನಡೆಸಿ ಜಿಲ್ಲೆಯ ಪಕ್ಷದ ಕಾರ್ಯಕರ್ತರನ್ನು ಒಗ್ಗೂಡಿಸುವುದಕ್ಕೆ ಕಾಲಿಗೆ ಚಕ್ರ ಕಟ್ಟಿಕೊಂಡು ಶ್ರಮವಹಿಸಿದ್ದ ಸತೀಶ ಜಾರಕಿಹೊಳಿ ಅವರಿಗೆ ಕೊನೆಗೂ ಕೆಪಿಸಿಸಿಯಲ್ಲಿ ಕಾಂಗ್ರೆಸ್ ಹೈಕಮಾಂಡ್ …

Read More »

ಹಿರಿಯ ಶಾಸಕರ ರಮೇಶ್‍ಕುಮಾರ್ ಹಾಗೂ ಸಚಿವ ಸುಧಾಕರ್ ನಡುವಿನ ಜಟಾಪಟಿ ಗದ್ದಲ

ಬೆಂಗಳೂರು,ಮಾ.11- ಹಿರಿಯ ಶಾಸಕರ ರಮೇಶ್‍ಕುಮಾರ್ ಹಾಗೂ ಸಚಿವ ಸುಧಾಕರ್ ನಡುವಿನ ಜಟಾಪಟಿ ಹಿನ್ನೆಲೆಯಲ್ಲಿ ನಡೆಯುತ್ತಿರುವ ಗದ್ದಲ ವಿಧಾನಸಭೆಯಲ್ಲಿ ಮುಂದುವರೆದಿದ್ದು, ಕೋಲಾಹಲದ ವಾತಾವರಣ ನಿರ್ಮಿಸಿತು.  ಒಂದು ಹಂತದಲ್ಲಿ ವಿರೋಧ ಪಕ್ಷದವರು ಸಮಾಧಾನಗೊಂಡು ಕಲಾಪಕ್ಕೆ ಸಹಕರಿಸಲು ಮುಂದಾದರೂ ಆಡಳಿತ ಪಕ್ಷದ ಶಾಸಕರು ರೊಚ್ಚಿಗೆದ್ದಿದ್ದರಿಂದ 15 ನಿಮಿಷ ಸದನ ಮುಂದೂಡಬೇಕಾದ ಅನಿವಾರ್ಯತೆ ಎದುರಾಯಿತು. ಇಂದು ವಿಧಾನಸಭೆಯ ಕಲಾಪ ಆರಂಭಗೊಳ್ಳುತ್ತಿದ್ದಂತೆ ವಿಪಕ್ಷದ ನಾಯಕ ಸಿದ್ದರಾಮಯ್ಯ, ಸಚಿವ ಕೆ.ಎಸ್.ಈಶ್ವರಪ್ಪ ಇಬ್ಬರೂ ಏಕಕಾಲಕ್ಕೆ ಎದ್ದು ನಿಂತು ನಿನ್ನೆಯ ಘಟನೆಯ …

Read More »

ಇಂದಿನ ಪರಿಸ್ಥಿತಿಯಲ್ಲಿ ರಾಷ್ಟ್ರಪಿತ ಮಹಾತ್ಮಗಾಂಧೀಜಿ, ಬಾಬಾ ಸಾಹೇಬ್ ಅಂಬೇಡ್ಕರ್ ಅಂತಹವರೇ ಚುನಾವಣೆಗೆ ನಿಂತರೂ ಗೆಲ್ಲಲಾಗದ ಪರಿಸ್ಥಿತಿ ದೇಶದಲ್ಲಿ ನಿರ್ಮಾಣವಾಗಿದೆ. : ಸಿ.ಟಿ.ರವಿ

ಬೆಂಗಳೂರು, ಮಾ.11- ಇಂದಿನ ಪರಿಸ್ಥಿತಿಯಲ್ಲಿ ರಾಷ್ಟ್ರಪಿತ ಮಹಾತ್ಮಗಾಂಧೀಜಿ, ಬಾಬಾ ಸಾಹೇಬ್ ಅಂಬೇಡ್ಕರ್ ಅಂತಹವರೇ ಚುನಾವಣೆಗೆ ನಿಂತರೂ ಗೆಲ್ಲಲಾಗದ ಪರಿಸ್ಥಿತಿ ದೇಶದಲ್ಲಿ ನಿರ್ಮಾಣವಾಗಿದೆ. ಎಲ್ಲಾ ರಾಜಕೀಯ ಪಕ್ಷಗಳು ವ್ಯವಸ್ಥೆಯನ್ನು ಬೆತ್ತಲು ಮಾಡಿವೆ ಎಂದು ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಚಿವ ಸಿ.ಟಿ.ರವಿ ಪರಿಷತ್‍ನಲ್ಲಿ ಹೇಳಿದರು. ಸಂವಿಧಾನದ ಚರ್ಚೆ ಕುರಿತಂತೆ ಜೆಡಿಎಸ್‍ನ ಶ್ರೀಕಂಠೇಗೌಡ ಅವರು ಮಾತನಾಡುತ್ತಿದ್ದ ವೇಳೆ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ ತಾಲ್ಲೂಕಿನಲ್ಲಿ ನಡೆದ ಉಪಚುನಾವಣೆಯಲ್ಲಿ ಹಣ, ಹೆಂಡ, ಒಂದೊಂದು ಮತಕ್ಕೆ 500, …

Read More »

ಕಲಬುರ್ಗಿಯಲ್ಲಿ ನಿಧನರಾದ ಶ್ರೀ ಮಹಮದ್ ಹುಸೇನ್ ಸಿದ್ದಿಕಿ, ಕೊರೊನಾ ಶಂಕಿತರೇ ಹೊರತು, ಅವರಿಗೆ ಆ ಸೋಂಕು ತಗುಲಿರುವುದು ದೃಢಪಟ್ಟಿಲ್ಲ

ಬೆಂಗಳೂರು:  ಕಲಬುರ್ಗಿಯಲ್ಲಿ ನಿಧನರಾದ ಶ್ರೀ ಮಹಮದ್ ಹುಸೇನ್ ಸಿದ್ದಿಕಿ, ಕೊರೊನಾ ಶಂಕಿತರೇ ಹೊರತು, ಅವರಿಗೆ ಆ ಸೋಂಕು ತಗುಲಿರುವುದು ದೃಢಪಟ್ಟಿಲ್ಲ ಎಂದು ಆರೋಗ್ಯ ಸಚಿವ ಶ್ರೀರಾಮುಲು ಸ್ಪಷ್ಟಪಡಿಸಿದ್ದಾರೆ. ಈ ಬಗ್ಗೆ ಟ್ವೀಟ್​ ಮಾಡಿರೋ ಅವರು, ನಾಗರಿಕರ ಹಿತದೃಷ್ಟಿಯಿಂದ, ಮೃತರ ಅಂತ್ಯಸಂಸ್ಕಾರಕ್ಕಾಗಿ ಕೆಲವೊಂದು ಮುಂಜಾಗ್ರತಾ ಕ್ರಮಗಳನ್ನು ಜಿಲ್ಲಾ ಆರೋಗ್ಯ ಇಲಾಖೆಯು ಕೈಗೊಂಡಿದೆ. ಇದರಲ್ಲಿ ಯಾವುದೇ ಅನಗತ್ಯ ಗೊಂದಲ, ಭಯ ಸೃಷ್ಟಿಸುವುದು ಬೇಡ ಎಂದು ಕೂಡ ಮನವಿ ಮಾಡಿಕೊಂಡಿದ್ದಾರೆ.   

Read More »

ಕೆಪಿಸಿಸಿ ಅಧ್ಯಕ್ಷರಾಗಿ ಮಾಜಿ ಸಚಿವ ಡಿ.ಕೆ. ಶಿವಕುಮಾರ ಈಶ್ವರ ಖಂಡ್ರೆ, ಸತೀಶ ಜಾರಕಿಹೊಳಿ ಮತ್ತು ಸಲೀಂ ಅಹ್ಮದ್ ಅವರನ್ನು ಕಾರ್ಯಾಧ್ಯಕ್ಷರನ್ನಾಗಿ ನೇಮಕ

ಬೆಂಗಳೂರು: ಅವರನ್ನು ಕಾಂಗ್ರೆಸ್ ನೇಮಕ ಮಾಡಿದೆ ಮತ್ತು ವಿರೋಧ ಪಕ್ಷದ ನಾಯಕ ಮತ್ತು ಶಾಸಕಾಂಗ ನಾಯಕನ ಹುದ್ದೆಯಲ್ಲಿ ಮಾಜಿ ಸಿಎಂ ಸಿದ್ಧರಾಮಯ್ಯ ಮುಂದುವರೆಯಲಿದ್ದಾರೆ. ಈಶ್ವರ ಖಂಡ್ರೆ, ಸತೀಶ ಜಾರಕಿಹೊಳಿ ಮತ್ತು ಸಲೀಂ ಅಹ್ಮದ್ ಅವರನ್ನು ಕಾರ್ಯಾಧ್ಯಕ್ಷರನ್ನಾಗಿ ಮಾಡಿ ನೇಮಕ ಮಾಡುವುದರ ಮೂಲಕ ಪಕ್ಷ ಬಲವರ್ಧನೆಯ ಮಹತ್ವದ ಜವಾಬ್ದಾರಿ ಎಐಸಿಸಿ ಎಲ್ಲರ ಮೇಲೂ ಹಾಕಿದೆ, ಈ ಕುರಿತು ಇಂದು ಅಧಿಕೃತ ಪ್ರಕಟಣೆ ಬಿಡುಗಡೆಗೊಳಿಸಿರುವ ಕಾಂಗ್ರೆಸ್ ಅಧ್ಯಕ್ಷ ಸೋನಿಯಾ ಗಾಂಧಿ ಕೊನೆಗೂ ಕೆಪಿಸಿಸಿಗೆ …

Read More »

ಸಿಂಧ್ಯಾ ಬಿಜೆಪಿಗೆ ಸೇರ್ಪಡೆಯಾಗ್ತಾರೆ ಅನ್ನೋ ಮಾತುಗಳು ಜೋರಾಗಿರುವ ಹೊತ್ತಲ್ಲೇ ರಾಜೀನಾಮೆ ನೀಡಿರುವುದು ತೀವ್ರ ಕುತೂಹಲ ಕೆರಳಿಸಿದೆ.

ಕಾಂಗ್ರೆಸ್​​ ಮುಖಂಡ, ರಾಹುಲ್ ಗಾಂಧಿ ಅತ್ಯಾಪ್ತ ಜ್ಯೋತಿರಾದಿತ್ಯ ಸಿಂಧ್ಯಾ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ಇಂದು ಬೆಳಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರನ್ನ ಭೇಟಿಯಾದ ಬೆನ್ನಲ್ಲೇ ಸಿಂಧ್ಯಾ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ರಾಜ್ಯ ಹಾಗೂ ದೇಶದ ಜನರ ಸೇವೆ ಮಾಡಬೇಕೆಂಬ ನನ್ನ ಧ್ಯೇಯ ಇನ್ಮುಂದೆಯೂ ಹಾಗೇ ಮುಂದುವರೆಯಲಿದೆ. ಆದ್ರೆ ಈ ಪಕ್ಷದಲ್ಲಿ ಇದ್ದುಕೊಂಡು ಅದನ್ನು ಮಾಡಲು ಸಾಧ್ಯವಿಲ್ಲ ಅಂತ ನನಗೆ ಅನ್ನಿಸುತ್ತಿದೆ. ಸದ್ಯ ನನಗೆ ಹೊಸ ಆರಂಭಕ್ಕೆ ಇದು …

Read More »

ದೇವರನ್ನೂ ಬಿಡದ ಕೊರೊನಾ ಕಂಟಕ; ದೇವರಿಗೆ ಮಾಸ್ಕ್ ಹಾಕಿದ ಪೂಜಾರಿ

ವಾರಣಾಸಿ : ಕೊರೊನಾ ವೈರಸ್ ಭಾರತದಲ್ಲಿ ಹರಡುತ್ತಿರುವ ಬೆನ್ನಲ್ಲೇ ಎಲ್ಲೆಡೆ ಆತಂಕ ಸೃಷ್ಟಿಯಾಗಿದೆ. ಸೋಂಕಿನಿಂದ ತಡೆಗಟ್ಟಲು ಮಾಸ್ಕ್ ಧರಿಸಿದ್ರೆ, ಇತ್ತ ದೇವರಿಗೆ ಮಾಸ್ಕ್ ಹಾಕಿರುವ ಘಟನೆ ವಾರಣಾಸಿಯಲ್ಲಿ ನಡೆದಿದೆ. ಇಲ್ಲಿನ ವಿಶ್ವನಾಥ ದೇವಾಲಯದ ಅರ್ಚಕರು ದೇವರ ಮೂರ್ತಿಗೆ ಮಾಸ್ಕ್ ಹಾಕಿ ಪೂಜೆ ಮಾಡುತ್ತಿದ್ದಾರೆ, ಜೊತೆಗೆ ದೇವರ ವಿಗ್ರಹ ಮುಟ್ಟದಂತೆ ಭಕ್ತರಿಗೆ ಮನವಿ ಮಾಡಿದ್ದಾರೆ. ಜನರು ವಿಗ್ರಹಗಳನ್ನು ಮುಟ್ಟಿದರೆ, ಕೊರೋನಾ ಹರಡುವ ಸಾಧ್ಯತೆ ಇರುತ್ತದೆ” ಎಂದು ಹೇಳಿದ್ದಾರೆ. ದೇವಾಲಯದ ಅರ್ಚಕರು ಹಾಗೂ …

Read More »

ಬೆಂಗ್ಳೂರು ಹಜ್ ಭವನ ಕಾಮಗಾರಿಗೆ 5 ಕೋಟಿ ರೂ. ಘೋಷಿಸಿದ ಸಿಎಂ

ಬೆಂಗ್ಳೂರು ಹಜ್ ಭವನ ಕಾಮಗಾರಿಗೆ 5 ಕೋಟಿ ರೂ. ಘೋಷಿಸಿದ ಸಿಎಂ ಬೆಂಗಳೂರು: ಸದ್ಯ ನಮ್ಮ ರಾಜ್ಯವೂ ಸೇರಿದಂತೆ ದೇಶದೆಲ್ಲೆಡೆ ಪೌರತ್ವ ಕಾಯ್ದೆ(ಸಿಎಎ) ಪರ – ವಿರೋಧ ಸಂಘರ್ಷ ನಡೆಯುತ್ತಿದೆ. ಇಂತಹ ಸಂದರ್ಭದಲ್ಲಿ ರಾಜ್ಯದ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಬೆಂಗಳೂರಿನ ಹಜ್ ಭವನಕ್ಕೆ 5 ಕೋಟಿ ರೂ ಅನುದಾನ ಘೋಷಿಸುವ ಮೂಲಕ ರಾಜ್ಯದ ಮುಸ್ಲಿಮರಲ್ಲಿ ಭರವಸೆಯ ಬೆಳಕು ಮೂಡಿಸಿದ್ದಾರೆ. ಬೆಂಗಳೂರಿನ ಹೆಗ್ಡೆನಗರದಲ್ಲಿರುವ ಹಜ್ ಭವನದಲ್ಲಿ ಇಂದು ಹಜ್ ಯಾತ್ರೆ-2020ಕ್ಕೆ ಆನ್ …

Read More »

ಭಾರೀ ಪ್ರಮಾಣದಲ್ಲಿ ಕುಸಿಯಿತು ತರಕಾರಿ ಬೆಲೆ

ಭಾರೀ ಪ್ರಮಾಣದಲ್ಲಿ ಕುಸಿಯಿತು ತರಕಾರಿ ಬೆಲೆ – ವ್ಯಾಪಾರಕ್ಕೆ ಬರ್ತಿಲ್ಲ ಕೇರಳಿಗರು ಮೈಸೂರು: ಕೊರೊನಾ ವೈರಸ್ ಎಫೆಕ್ಟ್ ಅರಮನೆ ನಗರಿಯಲ್ಲಿ ತರಕಾರಿ ಮೇಲೆ ಬಿದ್ದಿದೆ. ತರಕಾರಿ ಮಾರುಕಟ್ಟೆಯಲ್ಲಿ ತರಕಾರಿ ಮಾರಾಟವಾಗದೆ ಎಲ್ಲಾ ತರಕಾರಿ ಬೆಲೆ ಸಂಪೂರ್ಣವಾಗಿ ಕುಸಿದಿದೆ. ಕೇರಳದಲ್ಲಿ ಕೊರೊನಾದಿಂದ ಮೈಸೂರಿನ ತರಕಾರಿ ವ್ಯಾಪಾರದ ಮೇಲೆ ಭಾರಿ ಹೊಡೆತ ಬಿದ್ದಿದೆ. ಮೈಸೂರು ಎಪಿಎಂಸಿಯಿಂದ ನೇರವಾಗಿ ಕೇರಳಕ್ಕೆ ತರಕಾರಿ ಮಾರಾಟವಾಗುತ್ತಿತ್ತು. ಶೇಕಡಾ ಶೇ. 80 ತರಕಾರಿಗಳನ್ನ ಕೇರಳದ ವ್ಯಾಪಾರಿಗಳೇ ತೆಗೆದುಕೊಳ್ಳುತ್ತಿದ್ದರು. ಇದನ್ನೂ …

Read More »