Breaking News

ರಾಜಕೀಯ

ಜನರೇ ಗಮನಿಸಿ, ಕೊರೊನಾ ಸೋಂಕಿತರ ಸಾವಿಗೆ ವಾಯುಮಾಲಿನ್ಯವೂ ಕಾರಣ

ನವದೆಹಲಿ: ಜನರೇ ವಾತಾವರಣವನ್ನು ಸ್ವಚ್ಛವಾಗಿರಿಸಿ. ಯಾಕೆಂದರೆ ಕೊರೋನಾ ಸಾವಿಗೆ ವಾಯುಮಾಲಿನ್ಯವೂ ಈಗ ಕಾರಣವಾಗಿರುವುದು ಅಧ್ಯಯನದಿಂದ ದೃಢಪಟ್ಟಿದೆ. ಮಾಲಿನ್ಯದ ಜೊತೆ ಸೇರಿ ಕೊರೋನಾ ಪ್ರಾಣಕ್ಕೆ ಕುತ್ತು ತರಬಹುದು ಹುಷಾರ್ ಅಂತ ಕೇಂದ್ರ ಆರೋಗ್ಯ ಇಲಾಖೆ ಹಾಗೂ ಐಸಿಎಂಆರ್ ಆತಂಕ ವ್ಯಕ್ತಪಡಿಸಿದೆ. ವಿದೇಶಗಳಲ್ಲಿ ನಡೆಸಿದ ಅಧ್ಯಯನದ ಮೇಲೆ ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್‌) ಮಾಹಿತಿಯನ್ನು ಹಂಚಿಕೊಂಡಿದೆ. ಏನಿದು ಅಧ್ಯಯನ? ಯುರೋಪ್, ಅಮೆರಿಕದ ಅಧ್ಯಯನದ ಪ್ರಕಾರ ಕಲುಷಿತ ಗಾಳಿಯೂ ಕೊರೊನಾ ರೋಗಿಗಳ ಸಾವಿಗೆ …

Read More »

ಭಾರೀ ಸಂಚಲನ ಸೃಷ್ಟಿಸಿದ್ದ ಐಎಂಎ ಬಹುಕೋಟಿ ವಂಚನೆ,ಮನ್ಸೂರ್ ಖಾನ್‍ಗೆ ಹೈಕೋರ್ಟ್ ಜಾಮೀನು ನೀಡಿದೆ.

ಬೆಂಗಳೂರು: ಭಾರೀ ಸಂಚಲನ ಸೃಷ್ಟಿಸಿದ್ದ ಐಎಂಎ ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಮನ್ಸೂರ್ ಖಾನ್‍ಗೆ ಹೈಕೋರ್ಟ್ ಏಕಸದಸ್ಯ ಪೀಠ ಜಾಮೀನು ನೀಡಿದೆ. ಮನ್ಸೂರ್ ಖಾನ್ ವಿರುದ್ಧ ಇಡಿ ದಾಖಲಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾ.ಶ್ರೀನಿವಾಸ್ ಹರೀಶ್ ಕುಮಾರ್ ಅವರಿದ್ದ ಏಕಸದಸ್ಯ ಪೀಠ ಕೆಲ ಷರತ್ತುಗಳನ್ನು ವಿಧಿಸಿ ಜಾಮೀನು ಮಂಜೂರು ಮಾಡಿದೆ. ಅಧೀನ ನ್ಯಾಯಾಲಯ ಸೂಚಿಸಿದಾಗ ವಿಚಾರಣೆಗೆ ಹಾಜರಾಗಬೇಕು, ಯಾವುದೇ ಕಾರಣಕ್ಕೂ ಸಾಕ್ಷ್ಯ ನಾಶ ಹಾಗೂ ಸಾಕ್ಷಿಗಳಿಗೆ ಬೆದರಿಕೆ ಹಾಕಬಾರದು. …

Read More »

ಪಂಚಮಸಾಲಿ ಲಿಂಗಾಯತ ಸಮಾಜಕ್ಕೆ ಪ್ರವರ್ಗ ‘ 2ಎ’ ಮೀಸಲಾತಿ ನೀಡುವಂತೆ ಆಗ್ರಹಿಸಿ ಇಲ್ಲಿನ ಸುವರ್ಣ ವಿಧಾನಸೌಧದ ಎದುರು ಇಂದು ಬೃಹತ್ ಪ್ರತಿಭಟನೆ 

ಬೆಳಗಾವಿ : ಪಂಚಮಸಾಲಿ ಲಿಂಗಾಯತ ಸಮಾಜಕ್ಕೆ ಪ್ರವರ್ಗ ‘ 2ಎ’ ಮೀಸಲಾತಿ ನೀಡುವಂತೆ ಆಗ್ರಹಿಸಿ ಇಲ್ಲಿನ ಸುವರ್ಣ ವಿಧಾನಸೌಧದ ಎದುರು ಇಂದು ಬೃಹತ್ ಪ್ರತಿಭಟನೆ  ಆರಂಭವಾಗಿದೆ. ಕೂಡಲಸಂಗಮ ಲಿಂಗಾಯತ ಪಂಚಮಸಾಲಿ ಪೀಠದ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಬುಧವಾರ ಹಮ್ಮಿಕೊಂಡಿರುವ ಉಪವಾಸ ಸತ್ಯಾಗ್ರಹ ಅಂಗವಾಗಿ ತಾಲ್ಲೂಕಿನ ಹಿರೇಬಾಗೇವಾಡಿಯಿಂದ ದ್ವಿಚಕ್ರ ವಾಹನ ಹಾಗೂ ಕಾರುಗಳಲ್ಲಿ ಸಮಾಜದವರು ಮೆರವಣಿಗೆ ಆರಂಭಿಸಿದ್ದರು. ಆ ಗ್ರಾಮದ ಬಸವೇಶ್ವರ ವೃತ್ತದಲ್ಲಿ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಸ್ವಾಮೀಜಿ, …

Read More »

ಬೆಂಗಳೂರು ಉತ್ತರ ವಿಭಾಗಕ್ಕೆ ಕೇರಳದ ಪೊಲೀಸ್ ಪಡೆ

ಬೆಂಗಳೂರು,ಅ.27- ಚುನಾವಣಾ ಬಂದೋಬಸ್ತ್‍ಗಾಗಿ ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಉತ್ತರ ವಿಭಾಗಕ್ಕೆ ಕೇರಳದ ಪೊಲೀಸ್ ಪಡೆ ಆಗಮಿಸಿದೆ. ನಿನ್ನೆ ನಗರಕ್ಕೆ ಆಗಮಿಸಿರುವ ಕೇರಳ ರಾಜ್ಯದ ಸಶಸ್ತ್ರ ಮೀಸಲು ಪಡೆ(ಕೆಎಸ್‍ಎಪಿ) ಇಂದು ಉತ್ತರ ವಿಭಾಗದ ಜಾಲಹಳ್ಳಿ, ಆರ್‍ಎಂಸಿಯಾರ್ಡ್ ಮುಂತಾದ ಪೊಲೀಸ್ ಠಾಣೆ ವ್ಯಾಪ್ತಿಗಳಲ್ಲಿ ಪಥಸಂಚಲನ ನಡೆಸಲಿದೆ. ಈಗಾಗಲೇ ಈ ವಿಭಾಗಕ್ಕೆ ಸಿಐಎಸ್‍ಎಫ್ ಒಂದು ಕಂಪನಿ ಬಂದಿದ್ದು, ಅದನ್ನು ಚುನಾವಣಾ ಬಂದೋಬಸ್ತ್‍ಗೆ ನಿಯೋಜಿಸಲಾಗಿದೆ. ಉತ್ತರ ವಿಭಾಗದ 8 ಪೊಲೀಸ್ ಠಾಣೆ ವ್ಯಾಪ್ತಿಗಳಲ್ಲಿ ಮತದಾನ …

Read More »

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಪರ ಪ್ರಚಾರ ನಡೆಸಿ ಮತದಾರರಿಂದ ವೋಟು ಯಾಚಿಸಿದರು .

ನವೆಂಬರ್ 3 ರಂದು ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರಕ್ಕೆ ನಡೆಯಲಿರುವ ಉಪಚುನಾವಣೆ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಪರ ಪ್ರಚಾರ ನಡೆಸಿ ಮತದಾರರಿಂದ ವೋಟು ಯಾಚಿಸಿದರು . ಕ್ಷೇತ್ರದ ಮತದಾರರನ್ನು ಉದ್ದೇಶಿಸಿ ಮಾತಾಡಿದ ಸಿದ್ದರಾಮಯ್ಯ , ಬಿಜೆಪಿಯ ಅಭ್ಯರ್ಥ ಮುನಿರತ್ನ ನಾಯ್ಡು ಎಲ್ಲ ಮತದಾರರಿಗೆ ಮೋಸ ಮಾಡಿದ್ದಾರೆ ಅವರಿಗೆ ತಕ್ಕ ಪಾಠ ಕಲಿಸಲು ಇದು ಉತ್ತಮ ಅವಕಾಶ , ಪ್ರಜಾಪ್ರಭುತ್ವ ಉಳಿಯಬೇಕಾದರೆ ಮುನಿರತ್ನರನ್ನು ಸೋಲಿಸಲೇಬೇಕು ಎಂದು …

Read More »

ಶಿರಾ ಮತ್ತು ರಾಜರಾಜೇಶ್ವರಿನಗರ ಉಪಚುನಾವಣೆಗಳಿಗೆ ಪ್ರಚಾರದ ಭರಾಟೆ ಉತ್ತುಂಗವನ್ನು ತಲುಪುತ್ತಿದ್ದಂತೆಯೇ ,

ನವೆಂಬರ್ 3 ರಂದು ನಡೆಯಲಿರುವ ಶಿರಾ ಮತ್ತು ರಾಜರಾಜೇಶ್ವರಿನಗರ ಉಪಚುನಾವಣೆಗಳಿಗೆ ಪ್ರಚಾರದ ಭರಾಟೆ ಉತ್ತುಂಗವನ್ನು ತಲುಪುತ್ತಿದ್ದಂತೆಯೇ , ಹಣದ ಆಮಿಷವೊಡ್ಡುತ್ತಿರುವ ಕುರಿತು ಅರೋಪ- ಪ್ರತ್ಯಾರೋಪಗಳ ಪ್ರಕ್ರಿಯೆಯೂ ಶುರುವಿಟ್ಟುಕೊಂಡಿದೆ . ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ , ಮಾಜಿ ಸಂಸದ ವಿಎಸ್ ಉಗ್ರಪ್ಪ ಅವರನ್ನೊಳಗೊಂಡ ನಿಯೋಗವೊಂದು , ಶಿರಾ ಕ್ಷೇತ್ರದಲ್ಲಿ ಬಿಜೆಪಿ ನಾಯಕರು ಮತದಾರರಿಗೆ ಹಣ ಹಂಚುತ್ತಿದ್ದಾರೆಂದು ಆರೋಪಿಸಿ ಮುಖ್ಯ ಚುನಾವಣೆ ಅಧಿಕಾರಿಗೆ ಇಂದು ದೂರು ನೀಡಿತು …

Read More »

ಇಂದು ಬಿಹಾರ ವಿಧಾನಸಭೆ ಮೊದಲ ಹಂತದ ಚುನಾವಣೆ

ಪಾಟ್ನಾ: ತೀವ್ರ ಕುತೂಹಲ ಮೂಡಿಸಿರುವ ಬಿಹಾರ ವಿಧಾನಸಭೆಯ 243 ಕ್ಷೇತ್ರಗಳಿಗೆ ಇಂದಿನಿಂದ ಮೂರು ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಮೊದಲ ಹಂತದಲ್ಲಿ 71 ಕ್ಷೇತ್ರಗಳಲ್ಲಿ ಮತದಾನ ನಡೆಯಲಿದ್ದು, ಶಾಂತಿಯುತ ಚುನಾವಣೆಗಾಗಿ ವ್ಯವಸ್ಥೆ ಮಾಡಿಕೊಳ್ಳಲಾಗಿದೆ ಇಂದು ಮೊದಲ ಹಂತದ ಚುನಾವಣೆ ನಡೆಯುತ್ತಿದ್ದು, ಬೆಳಗ್ಗೆ 7 ಗಂಟೆಯಿಂದ 71 ಕ್ಷೇತ್ರಗಳಲ್ಲಿ ಮತದಾನ ಆರಂಭವಾಗಿದೆ. 16 ಜಿಲ್ಲೆಗಳ 71 ವಿಧಾನಸಭಾ ಕ್ಷೇತ್ರಗಳಲ್ಲಿ 114 ಮಹಿಳಾ ಅಭ್ಯರ್ಥಿಗಳು ಸೇರಿ ಒಟ್ಟು 1,066 ಅಭ್ಯರ್ಥಿಗಳು ಅದೃಷ್ಟ ಪರೀಕ್ಷೆ ಇಳಿದಿದ್ದಾರೆ. …

Read More »

ಗೋಕಾಕ ಶೈಕ್ಷಣಿಕ ವಲಯಕ್ಕೆ ಪ್ರಥಮ, ದ್ವಿತೀಯ ಹಾಗೂ ತೀಯ ಸ್ಥಾನ ಗಳಿಸಿದ ವಿದ್ಯಾರ್ಥಿಗಳಿಗೆ ಜಲಸಂಪನ್ಮೂಲ ಸಚಿವರಾದ ರಮೇಶ ಲ.ಜಾರಕಿಹೊಳಿ ಅವರು ಉಚಿತ ಲ್ಯಾಪ್ ವಿತರಿಸಿದರು.

ಗೋಕಾಕ: ಕಳೆದ ವರ್ಷ ಎಸ್ಎಸ್ಎಲ್ ಸಿ ಪರೀಕ್ಷೆಯಲ್ಲಿ ಗೋಕಾಕ ಶೈಕ್ಷಣಿಕ ವಲಯಕ್ಕೆ ಪ್ರಥಮ, ದ್ವಿತೀಯ ಹಾಗೂ ತೀಯ ಸ್ಥಾನ ಗಳಿಸಿದ ವಿದ್ಯಾರ್ಥಿಗಳಿಗೆ ಜಲಸಂಪನ್ಮೂಲ ಸಚಿವರಾದ ರಮೇಶ ಲ.ಜಾರಕಿಹೊಳಿ ಅವರು ಉಚಿತ ಲ್ಯಾಪ್ ವಿತರಿಸಿದರು. ಶೇ. 100 ರಷ್ಟು ಫಲಿತಾಂಶ ಸಾಧಿಸಿದ ಸರ್ಕಾರಿ ಅನುದಾನಿತ ಮತ್ತು ಅನುದಾನರಹಿತ ತಲಾ 7 ಶಾಲೆಗಳಿಗೆ ತಲಾ 25 ಸಾವಿರ ರೂಪಾಯಿ ಪ್ರೋತ್ಸಾಹ ಧನ ವಿತರಿಸಿದರು. ಬಳಿಕ ಮಾತನಾಡಿದ ಅವರು, ಗೋಕಾಕ ಮತಕ್ಷೇತ್ರದಲ್ಲಿ ಮೂಲಭೂತ ಸೌಕರ್ಯ …

Read More »

25 ವರ್ಷ ರಾಜ್ಯದಲ್ಲಿ ಬಿಜೆಪಿ ಸರ್ಕಾರವೇ ಆಡಳಿತ

ಬೆಂಗಳೂರು: ಹಾಸನ-ಮಂಡ್ಯ ಎರಡು ಕಣ್ಣುಗಳಿದ್ದಂತೆ ಎಂದು ಹೇಳುತ್ತಿದ್ದವರಿಂದ ಆ ಭಾಗ ಅಭಿವೃದ್ಧಿಯಾಗಲಿಲ್ಲ. ಮಂಡ್ಯ ಹಾಗೂ ಹಾಸನಗಳ ಅಭಿವೃದ್ಧಿಗೆ ಯಡಿಯೂರಪ್ಪ ಅವರೇ ಬರಬೇಕಾಯ್ತು. ಅವರು ಸಿಎಂ ಆದ್ಮೇಲೆ ಎರಡೂ ಜಿಲ್ಲೆಗಳ ಅಭಿವೃದ್ಧಿಗೆ ಸಾವಿರಾರು ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಿದರು ಎಂದು ತೋಟಗಾರಿಕಾ ಸಚಿವ ಡಾ. ನಾರಾಯಣಗೌಡ ಅವರು ಪರೋಕ್ಷವಾಗಿ ಜೆಡಿಎಸ್ ನಾಯಕರ ಮೇಲೆ ವಾಗ್ದಾಳಿ ಮಾಡಿದರು. ಆರ್‌.ಆರ್. ನಗರದಲ್ಲಿ ಕಂದಾಯ ಸಚಿವ ಆರ್. ಅಶೋಕ್ ಅವರೊಂದಿಗೆ ಬಿಜೆಪಿ ಅಭ್ಯರ್ಥಿ ಮುನಿರತ್ನ …

Read More »

Big Breaking ಸತೀಶ್ ಜಾರಕಿಹೊಳಿ ಅವರು ಪ್ರಕಾಶ್ ಹುಕ್ಕೇರಿ ಬಗ್ಗೆ ಹೇಳಿದ್ದೇನು ಗೊತ್ತಾ exclusive Byte

ಮಾಜಿ ಸಚಿವರು ಆಗಿರುವ ಕಾಂಗ್ರೆಸ್ ನಾಯಕ ಪ್ರಕಾಶ ಹುಕ್ಕೇರಿ ವಿರುದ್ಧ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ‌ ತೀವ್ರ ವಾಗ್ದಾಳಿ ನಡೆಸಿದ್ದು, ಅವರಿಗೆ ಇದ್ದಕ್ಕಿದ್ದಂತೆ ಬಿಜೆಪಿ ಮೇಲೆ ಪ್ರೀತಿ ಬಂದಿದೆ, ಕಾಂಗ್ರೆಸ್ ನಿಂದ ಒಂದು ಹೆಜ್ಜೆ ಹೊರಗಿಟ್ಟು ಇಂಥ ಹೇಳಿಕೆ ನೀಡುತ್ತಿದ್ದಾರೆ ಎಂದು ಆರೋಪಗಳ ಸುರಿಮಳೆಗೈಯ್ದಿದ್ದಾರೆ. ಪತ್ರಕರ್ತರೊಂದಿಗೆ ಮಾತನಾಡಿ, ಪ್ರಕಾಶ ಹುಕ್ಕೇರಿ ಈಗಾಗಲೇ ಬಿಜೆಪಿ ಪರ ವಾಲಿ ಮಾತನಾಡುತ್ತಿರುವುದಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಮಾಜಿ ಸಂಸದರೂ ಆಗಿರುವ ಪ್ರಕಾಶ ಹುಕ್ಕೇರಿ ಗಂಭೀರ …

Read More »