Home / ರಾಜಕೀಯ (page 1875)

ರಾಜಕೀಯ

ಪೌರತ್ವ ಕೇವಲ ಹಕ್ಕು ಮಾತ್ರವಲ್ಲ ಸಮಾಜದ ಕರ್ತವ್ಯ! ನ್ಯಾಯಮೂರ್ತಿ ಶರತ್ ಎ. ಬೊಬ್ಡೆ

ನಾಗ್ಪುರ, ಜ.19-ಪೌರತ್ವ ಕೇವಲ ಹಕ್ಕು ಮಾತ್ರವಲ್ಲ, ಅದು ಪ್ರತಿಯೊಬ್ಬ ನಾಗರಿಕರೂ ಸಮಾಜದಲ್ಲಿ ನಿರ್ವಹಿಸಬೇಕಾದ ಕರ್ತವ್ಯವೂ ಆಗಿದೆ ಎಂದು ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಶರತ್ ಎ. ಬೊಬ್ಡೆ ಹೇಳಿದ್ದಾರೆ. ನಾಗ್ಪುರದ ರಾಷ್ಟ್ರಸಂತ ತುಕಡೋಜಿ ಮಹಾರಾಜ್ ನಾಗಪುರ ಯುನಿವರ್ಸಿಟಿ (ಆರ್‍ಟಿಎಂಎನ್‍ಯು) 107ನೇ ಘಟಿಕೋತ್ಸವದಲ್ಲಿ ಭಾರತದ ಮುಖ್ಯ ನ್ಯಾಯಮೂರ್ತಿಗಳು ಮಾತನಾಡಿದರು. ಪೌರತ್ವವನ್ನು ಯಾರೂ ಕೂಡ ಕೇವಲ ಹಕ್ಕು ಎಂದು ತಿಳಿಯಬಾರದು. ಇದು ಹಕ್ಕಿಗಿಂತಲೂ ನಾವು ಜವಾಬ್ದಾರಿಯುತ ಪ್ರಜೆಗಳಾಗಿ ಸಮಾಜದ ಕಡೆಗೆ ನಿರ್ವಹಿಸಬೇಕಾದ ಕರ್ತವ್ಯವೂ ಆಗಿದೆ …

Read More »

ಸಚಿವಾಕಾಂಕ್ಷಿಗಳ ಋಣ ನನ್ನ ಮೇಲಿದೆ. ಅವರನ್ನು ಸಚಿವರನ್ನಾಗಿ ಮಾಡುವುದು ನಮ್ಮ ಕರ್ತವ್ಯ.

ಮೈಸೂರು, ಜ.19-ಸಚಿವಾಕಾಂಕ್ಷಿಗಳ ಋಣ ನನ್ನ ಮೇಲಿದೆ. ಅದನ್ನು ತೀರಿಸುವುದು ನನ್ನ ಕರ್ತವ್ಯ ಎಂದು ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದರು. ನಗರದ ಸರ್ಕಾರಿ ವಸತಿಗೃಹದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವಾಕಾಂಕ್ಷಿಗಳಿಂದ ಇಂದು ನಮ್ಮ ಸರ್ಕಾರ ಅಧಿಕಾರಕ್ಕೆ ಬಂದಿದೆ. ಅವರನ್ನು ಸಚಿವರನ್ನಾಗಿ ಮಾಡುವುದು ನಮ್ಮ ಕರ್ತವ್ಯ. ಅದನ್ನು ಮುಂದಿನ ದಿನಗಳಲ್ಲಿ ನಿರ್ವಹಿಸುತ್ತೇನೆ ಎಂದರು. ಸಚಿವ ಸ್ಥಾನದ ಆಕಾಂಕ್ಷಿಗಳ ಬಗ್ಗೆ ಬಿಜೆಪಿ ನಾಯಕರ ಟೀಕೆ ವಿಚಾರವಾಗಿ ಕೇಳಿ ಪ್ರಶ್ನೆಗೆ ಟೀಕೆ ಮಾಡುತ್ತಿರುವವರು ಬಾಯಿ ಮುಚ್ಚಿಕೊಂಡಿರಬೇಕು. ಅವರುಗಳ …

Read More »

ಸ್ವಿಡ್ಜರ್‌ಲ್ಯಾಂಡ್‌ನಿಂದ ಬಂದು ಎರಡೇ ದಿನದಲ್ಲಿ ಸಂಪುಟ ವಿಸ್ತರಣೆ ಮಾಡ್ತೀನಿ’ ವಿದೇಶಕ್ಕೆ ಹಾರಿದ ಸಿಎಂ

ಬೆಂಗಳೂರು, ಜ.19-ಸ್ವಿಡ್ಜರ್‌ಲ್ಯಾಂಡ್‌ನ ದಾವೋಸ್‍ನಿಂದ ಹಿಂದಿರುಗಿದ ಎರಡೇ ದಿನಗಳಲ್ಲಿ ಬಹು ನಿರೀಕ್ಷಿತ ಸಚಿವ ಸಂಪುಟ ವಿಸ್ತರಣೆ ಮಾಡಲಾಗುವುದು. ಈ ಬಗ್ಗೆ ಯಾರಿಗೂ ಯಾವುದೇ ರೀತಿಯ ಗೊಂದಲ ಬೇಡ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಮತ್ತೊಮ್ಮೆ ಪುನರುಚ್ಚರಿಸಿದ್ದಾರೆ. ವಿದೇಶಕ್ಕೆ ತೆರಳುವ ಮುನ್ನ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ದಾವೋಸ್‍ನಿಂದ ಹಿಂದುರುಗಿದ ಎರಡೇ ದಿನಗಳಲ್ಲಿ ಸಂಪುಟ ವಿಸ್ತರಣೆ ಮಾಡುತ್ತೇನೆ. ಈ ಸಂಬಂಧ ನಿನ್ನೆ ನಮ್ಮ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಅಮಿತ್ ಶಾ …

Read More »

ರಾಜ್ಯ ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಬಿಜೆಪಿ ಸರ್ಕಾರ ಪತನವಾಗಲಿದೆ!.. ಎಸ್.ಆರ್.ಪಾಟೀಲ್

ಬಾಗಲಕೋಟೆ,ಜ.19- ರಾಜ್ಯ ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಬಿಜೆಪಿ ಸರ್ಕಾರ ಪತನವಾಗಲಿದೆ ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಎಸ್.ಆರ್.ಪಾಟೀಲ್ ಭವಿಷ್ಯ ನುಡಿದಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರ ಪತನವಾದ ಬಳಿಕ ರಾಜ್ಯ ವಿಧಾನಸಭೆಗೆ ಚುನಾವಣೆ ನಡೆದು ಕಾಂಗ್ರೆಸ್ ಪಕ್ಷ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ರಾಜ್ಯದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಪರಿಸ್ಥಿತಿ ಚಿಂತಾಜನಕವಾಗಿದೆ. ಬಿಜೆಪಿಯವರು ವಾಮಮಾರ್ಗದಿಂದ ಅಧಿಕಾರಕ್ಕೆ ಬಂದಿದ್ದಾರೆ. 24 ಗಂಟೆಯಲ್ಲಿ ಸಂಪುಟ ವಿಸ್ತರಣೆ …

Read More »

ರಾಜ್ಯ ಸರ್ಕಾರಕ್ಕೆ ಅಧಿವೇಶನ ನಡೆಸಿ ಜನರ ಸಮಸ್ಯೆ ಚರ್ಚೆಯಾಗುವುದು ಬೇಕಿಲ್ಲ. ಅದಕ್ಕಾಗಿ ವಿಧಾನಮಂಡಲ ಅಧಿವೇಶನ ಕರೆಯಲು ಹಿಂದೆ-ಮುಂದೆ ನೋಡುತ್ತಿದೆ

ಬೆಂಗಳೂರು, ಜ.18- ರಾಜ್ಯ ಸರ್ಕಾರಕ್ಕೆ ಅಧಿವೇಶನ ನಡೆಸಿ ಜನರ ಸಮಸ್ಯೆ ಚರ್ಚೆಯಾಗುವುದು ಬೇಕಿಲ್ಲ. ಅದಕ್ಕಾಗಿ ವಿಧಾನಮಂಡಲ ಅಧಿವೇಶನ ಕರೆಯಲು ಹಿಂದೆ-ಮುಂದೆ ನೋಡುತ್ತಿದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ನಗರದ ಪ್ರೆಸ್‍ಕ್ಲಬ್‍ನಲ್ಲಿ ಪತ್ರಕರ್ತ ಚಂದ್ರಶೇಖರ್ ರಾವ್ ಅವರ ನೆನಪು ಮಾಸುವ ಮುನ್ನ ಪುಸ್ತಕ ಬಿಡುಗಡೆ ಮಾಡಿ ಮಾತನಾಡಿದ ಅವರು, ವರ್ಷಕ್ಕೆ ಕನಿಷ್ಠ 60 ದಿನ ಅಧಿವೇಶನ ನಡೆಸಬೇಕೆಂಬ ಕಾನೂನನ್ನು ನಾವೇ ಮಾಡಿಕೊಂಡಿದ್ದೇವೆ. ಆದರೆ, ಅದು ಸರಿಯಾಗಿ ಪಾಲನೆಯಾಗುತ್ತಿಲ್ಲ. ಈ …

Read More »

ನಟಿ ರಶ್ಮಿಕಾ ಮಂದಣ್ಣ ಅವರಿಗೆ ಇದೇ 21ರಂದು ವಿಚಾರಣೆಗೆ ಹಾಜರಾಗುವಂತೆ ಐಟಿ ನೋಟಿಸ್

ಆದಾಯ ತೆರಿಗೆ ಇಲಾಖೆ ಅಧಿಕಾರಿಗಳ ದಾಳಿಗೆ ಸಿಲುಕಿರುವ ಬಹುಭಾಷಾ ನಟಿ ರಶ್ಮಿಕಾ ತಂದೆ ಮದನ್ ಮಂದಣ್ಣ ಹಾಗೂ ತಾಯಿ ಸುಮನ್ ಅವರಿಗೆ ಪ್ರತ್ಯೇಕವಾಗಿ ನೋಟಿಸ್ ಜಾರಿ ಬೆಂಗಳೂರು,ಜ.18- ಆದಾಯ ತೆರಿಗೆ ಇಲಾಖೆ ಅಧಿಕಾರಿಗಳ ದಾಳಿಗೆ ಸಿಲುಕಿರುವ ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಅವರಿಗೆ ಇದೇ 21ರಂದು(ಮಂಗಳವಾರ) ವಿಚಾರಣೆಗೆ ಹಾಜರಾಗುವಂತೆ ಐಟಿ ನೋಟಿಸ್ ಜಾರಿ ಮಾಡಿದೆ. ಐಟಿ ಅಧಿಕಾರಿಗಳು ರಶ್ಮಿಕಾ ಮಂದಣ್ಣ , ಅವರ ತಂದೆ ಮದನ್ ಮಂದಣ್ಣ ಹಾಗೂ ತಾಯಿ …

Read More »

ಶಿವಸೇನೆ ನಾಯಕ ಸಂಜಯ ರಾವುತ್ ಕರ್ನಾಟಕದ ಪೊಲೀಸರು ಸಾಧ್ಯವಾದರೆ ನನ್ನನ್ನು ತಡೆಯಲಿ ಎಂದು ಸವಾಲು ಹಾಕಿದ್ದಾರೆ.

ಬೆಳಗಾವಿ,ಜ.18- ಗಡಿ ಭಾಗದಲ್ಲಿ ಶಿವಸೇನೆ, ಎಂಇಎಸ್ ನಾಯಕರ ಪುಂಡಾಟಿಕೆ; ಅಟ್ಟಹಾಸ, ಉದ್ಧಟತನ ಮುಂದುವರೆದಿದ್ದು ಶಿವಸೇನೆ ನಾಯಕ ಸಂಜಯ ರಾವುತ್ ಕರ್ನಾಟಕದ ಪೊಲೀಸರಿಗೇ ಸವಾಲೆಸೆದಿದ್ದು ಬೆಳಗಾವಿ ಗಡಿ ಭಾಗದಲ್ಲಿ ಇಂದೂ ಕೂಡ ಉದ್ವಿಗ್ನ ವಾತಾವರಣ ನಿರ್ಮಾಣಗೊಂಡಿದೆ. ಶಿವಸೇನೆಯ ನಾಯಕ, ಸದಾ ವಿವಾದಾತ್ಮಕ ಹೇಳಿಕೆಗಳಿಂದಲೇ ಸುದ್ದಿಯಲ್ಲಿ ಇರುವ ಸಂಜಯ ರಾವುತ್ ಇಂದು ಮುಂಜನೆ ಮುಂಬೈನಲ್ಲಿ ಮಾತನಾಡಿ, ಸಂಜೆ ಬೆಳಗಾವಿಗೆ ಆಗಮಿಸುತ್ತಿದ್ದು, ಕರ್ನಾಟಕದ ಪೊಲೀಸರು ಸಾಧ್ಯವಾದರೆ ನನ್ನನ್ನು ತಡೆಯಲಿ ಎಂದು ಸವಾಲು ಹಾಕಿದ್ದಾರೆ. ಆದರೆ …

Read More »

ಬಿಬಿಎಂಪಿ ಸ್ಥಾಯಿ ಸಮಿತಿ ಚುನಾವಣೆ ಸಂದರ್ಭದಲ್ಲಿ ಅಸಮಾಧಾನ

  ಬಿಬಿಎಂಪಿ ಸ್ಥಾಯಿ ಸಮಿತಿ ಚುನಾವಣೆ ಸಂದರ್ಭದಲ್ಲಿ ಅಸಮಾಧಾನ ಭುಗಿಲೆದ್ದಿದ್ದು, ಆಡಳಿತಾರೂಢ ಬಿಜೆಪಿ ಸದಸ್ಯರೇ ತಮ್ಮ ನಾಯಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಘಟನೆ ನಡೆದಿದೆ. ಬೆಂಗಳೂರು, ಜ.18- ಬಿಬಿಎಂಪಿ ಸ್ಥಾಯಿ ಸಮಿತಿ ಚುನಾವಣೆ ಸಂದರ್ಭದಲ್ಲಿ ಅಸಮಾಧಾನ ಭುಗಿಲೆದ್ದಿದ್ದು, ಆಡಳಿತಾರೂಢ ಬಿಜೆಪಿ ಸದಸ್ಯರೇ ತಮ್ಮ ನಾಯಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಘಟನೆ ನಡೆದಿದೆ. ಮಾಜಿ ಸಚಿವ ಆರ್.ಅಶೋಕ್, ಶಾಸಕ ಸತೀಶ್‍ರೆಡ್ಡಿ ನಡುವೆ ಸ್ಥಾಯಿ ಸಮಿತಿ ಚುನಾವಣೆ ಸದಸ್ಯರ ಆಯ್ಕೆ ಸಂಬಂಧ ಮಾತಿನ …

Read More »

ಉಜಿರೆಯ ಎಸ್.ಡಿ.ಎಂ. ಪ.ಪೂ ಕಾಲೇಜಿನಲ್ಲಿ ಅಣ್ಣಾಮಲೈ ಸಂವಾದ.

ಉಜಿರೆಯ ಎಸ್.ಡಿ.ಎಂ. ಪ.ಪೂ ಕಾಲೇಜಿನಲ್ಲಿ ಅಣ್ಣಾಮಲೈ ಸಂವಾದ ನಮ್ಮ ಗುರಿಯನ್ನು ನಾವೇ ಸೃಷ್ಟಿಮಾಡಿಕೊಳ್ಳಬೇಕು ಅಣ್ಣಾಮಲೈ ವಿದ್ಯಾರ್ಥಿಗಳಿಗೆ ಕರೆ   ಉಜಿರೆಯ ಎಸ್.ಡಿ.ಎಂ. ಪ.ಪೂ ಕಾಲೇಜಿನಲ್ಲಿ ಅಣ್ಣಾಮಲೈ ಸಂವಾದ. ಪ್ರತಿಯೊಬ್ಬರೂ ಸಹ ಬದುಕಿನಲ್ಲಿ ಉದ್ದೇಶ ಹೊಂದಿರಬೇಕು. ಉದ್ದೇಶ ಈಡೇರಿಕೆಗೆ ತೊಡಗಿದಾಗ ಹೊಸ ದೃಷ್ಟಿಕೋನ ಸಿಗುತ್ತದೆ. ಆ ಮೂಲಕ ನಮ್ಮ ಭವಿತವ್ಯ ನಿರ್ಮಾಣ ಮಾಡಿಕೊಳ್ಳಲು ಸಾಧ್ಯವಾಗುತ್ತದೆ. ಇದಕ್ಕೂ ಮೊದಲು ನಮ್ಮ ಗುರಿಯನ್ನು ನಾವೇ ಸೃಷ್ಟಿಮಾಡಿಕೊಳ್ಳಬೇಕು ಎಂದು ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ವಿದ್ಯಾರ್ಥಿಗಳಿಗೆ …

Read More »

ಮಹಾರಾಷ್ಟ್ರದ ಗಡಿಯಲ್ಲಿಎರಡೂ ರಾಜ್ಯಗಳ ನಡುವಿನ ಬಸ್ ಸಂಚಾರವನ್ನು ನಿನ್ನೆ ರಾತ್ರಿಯಿಂದ ನಿಲ್ಲಿಸಲಾಗಿದೆ

ಬೆಳಗಾವಿ: ನಿನ್ನೆ ಮಹಾರಾಷ್ಟ್ರ ಏಕೀಕರಣ ಸಮಿತಿ ಆಯೋಜಿಸಿದ್ದ ‘ಹುತಾತ್ಮಾ ದಿನ’ದ ಕಾಯ೯ಕ್ರಮದಲ್ಲಿ ಭಾಗವಹಿಸಿಲು ಆಗಮಿಸಿದ್ದ ಮಹಾರಾಷ್ಟ್ರ ಸಚಿವ ರಾಜೇಂದ್ರ ಪಾಟೀಲ (ಯಡ್ರಾವಕರ) ಅವರನ್ನು ಪೊಲೀಸರು ವಶಕ್ಕೆ ಪಡೆದು ಬಿಡುಗಡೆ ಮಾಡಿದ ಬಳಿಕ, ಮಹಾರಾಷ್ಟ್ರದ ಗಡಿಯಲ್ಲಿ, ವಿಶೇಷವಾಗಿ ಕೊಲ್ಲಾಪುರ ಜಿಲ್ಲೆಯಲ್ಲಿ ಪರಿಸ್ಥಿತಿ ಹದಗೆಟ್ಟಿದ್ದು, ಈ ಹಿನ್ನೆಲೆಯಲ್ಲಿ ಎರಡೂ ರಾಜ್ಯಗಳ ನಡುವಿನ ಬಸ್ ಸಂಚಾರವನ್ನು ನಿನ್ನೆ ರಾತ್ರಿಯಿಂದ ನಿಲ್ಲಿಸಲಾಗಿದೆ.       ಸಚಿವ ರಾಜೇಂದ್ರ ಪಾಟೀಲ ಪೊಲೀಸರ ಕಣ್ಣು ತಪ್ಪಿಸಲು, ಕಾಗಲನಿಂದ ಸಾಮಾನ್ಯರಂತೆ …

Read More »