Breaking News
Home / ರಾಜಕೀಯ (page 189)

ರಾಜಕೀಯ

ಮಧ್ಯಮಾವಧಿ, ದೀರ್ಘಾವಧಿ ಸಾಲದ ಅಸಲು ಕಟ್ಟಿದರೆ ಸಂಪೂರ್ಣ ಬಡ್ಡಿ ಮನ್ನಾ: ಸಿಎಂ

ಬೆಳಗಾವಿ/ಬೆಂಗಳೂರು: ಸಹಕಾರ ಬ್ಯಾಂಕುಗಳಲ್ಲಿರುವ ಮಧ್ಯಮಾವಧಿ ಮತ್ತು ದೀರ್ಘಾವಧಿ ಸಾಲದ ಅಸಲನ್ನು ಕಟ್ಟಿದರೆ ಸಂಪೂರ್ಣ ಬಡ್ಡಿಯನ್ನು ಮನ್ನಾ ಮಾಡುವ ಬಗ್ಗೆ ನಮ್ಮ ಸರ್ಕಾರ ತೀರ್ಮಾನಿಸಿದೆ ಎಂದು ಸಿಎಂ ಸಿದ್ದರಾಮಯ್ಯ ಪ್ರಕಟಿಸಿದ್ದಾರೆ. ಸಾಲಮನ್ನಾ ಮಾಡುವ ಕುರಿತು ನಾವು ನಮ್ಮ ಪ್ರಣಾಳಿಕೆಯಲ್ಲಿ ಹೇಳಿಲ್ಲ. ಬಿಜೆಪಿಯವರು 2018ರ ತಮ್ಮ ಪ್ರಣಾಳಿಕೆಯಲ್ಲಿ “ನಮ್ಮ ಸರ್ಕಾರದ ಮೊದಲ ಸಚಿವ ಸಂಪುಟ ಸಭೆಯಲ್ಲಿಯೇ ರಾಷ್ಟ್ರೀಕೃತ ಬ್ಯಾಂಕು ಮತ್ತು ಸಹಕಾರಿ ಸಂಘಗಳಲ್ಲಿ ಇರುವ 1 ಲಕ್ಷದವರೆಗೆ ರೈತರ ಬೆಳೆ ಸಾಲ ಮನ್ನಾ ಮಾಡಲಾಗುವುದು” …

Read More »

ಮುಂದಿನ ದಿನಗಳಲ್ಲಿ ಬೆಳಗಾವಿ ಜಿಲ್ಲಾ ಹಾಲು ಒಕ್ಕೂಟ ರೈತರಿಂದ ಸುಮಾರು 5 ಲಕ್ಷ ಲೀಟರ್ ಹಾಲು ಸಂಗ್ರಹಿಸುವ ಗುರಿ: ಬಾಲಚಂದ್ರ ಜಾರಕಿಹೊಳಿ

ಯರಗಟ್ಟಿ: ಮುಂದಿನ ದಿನಗಳಲ್ಲಿ ಬೆಳಗಾವಿ ಜಿಲ್ಲಾ ಹಾಲು ಒಕ್ಕೂಟವು ಹೈನುಗಾರ ರೈತರಿಂದ ಸುಮಾರು 5 ಲಕ್ಷ ಲೀಟರ್ ಹಾಲು ಸಂಗ್ರಹಿಸುವ ಗುರಿ ಹೊಂದಲಾಗಿದೆ ಎಂದು ಕೆಎಂಎಫ್ ನಿರ್ದೇಶಕರೂ ಆಗಿರುವ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಯರಗಟ್ಟಿಯ ಹೊರವಲಯದಲ್ಲಿ ಖಾಸಗಿ ಹೊಟೇಲ್ ನಲ್ಲಿ ರಾಜ್ಯ ಸಹಕಾರ ಮಹಾಮಂಡಳ ಮತ್ತು ಜಿಲ್ಲಾ ಸಹಕಾರ ಯೂನಿಯನ್ ಇವುಗಳ ಆಶ್ರಯದಲ್ಲಿ ಶುಕ್ರವಾರದಂದು ಜರುಗಿದ ಬೈಲಹೊಂಗಲ ಉಪವಿಭಾಗದ ಹಾಲು ಉತ್ಪಾದಕರ ಸಹಕಾರ ಸಂಘಗಳ ಸರ್ವತೋಮುಖ ಬೆಳವಣಿಗೆಗೆ …

Read More »

ಕೋಟಿ ಕೋಟಿ ವಿದ್ಯುತ್​ ಬಿಲ್​ ಬಾಕಿ ಇಟ್ಕೊಂಡ ಧಾರವಾಡ ಜಿಲ್ಲೆಯ ಸರ್ಕಾರಿ ಕಚೇರಿಗಳು

ಧಾರವಾಡ, ಡಿ.08: ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ನಿಯಮಿತ(Hescom)ವು ಒಟ್ಟು ಏಳು ಜಿಲ್ಲೆಗಳಲ್ಲಿ ಬರುತ್ತದೆ. ರಾಜ್ಯದ ಪ್ರತಿಷ್ಠಿತ ವಿದ್ಯುತ್ ಸರಬರಾಜು ಕಂಪನಿಗಳ ಪೈಕಿ ಇದು ಕೂಡ ಒಂದು. ಈ ಕಂಪನಿ ಅಡಿಯಲ್ಲಿ ರಾಜ್ಯದ ಎರಡನೇ ದೊಡ್ಡ ನಗರ ಖ್ಯಾತಿಯಹುಬ್ಬಳ್ಳಿ-ಧಾರವಾಡ(Hubballi-Dharwad) ಅವಳಿ ನಗರ ಹಾಗೂ ಬೆಳಗಾವಿ ಬರುತ್ತವೆ. ಇದೀಗ ಈ ಏಳು ಜಿಲ್ಲೆಗಳ ವ್ಯಾಪ್ತಿಯಲ್ಲಿನ ಸರಕಾರಿ ಕಚೇರಿಗಳಿಂದಲೇ ಹೆಸ್ಕಾಂ ಗೆ ನೂರಾರು ಕೋಟಿ ರೂಪಾಯಿ ವಿದ್ಯುತ್ ಬಿಲ್ ಬರಬೇಕಿದೆ. ಇಂತಹ ವೇಳೆ …

Read More »

ಗುಡ್​ನ್ಯೂಸ್: ಸಹಕಾರಿ ಬ್ಯಾಂಕ್‌ಗಳ ಸಾಲದ ಮೇಲಿನ ಬಡ್ಡಿ ಮನ್ನಾ, ಸಿದ್ದರಾಮಯ್ಯ ಘೋಷಣೆ

ಬೆಳಗಾವಿ (ಡಿಸೆಂಬರ್ 15): ಸಹಕಾರಿ ಬ್ಯಾಂಕ್‌ಗಳ (cooperative bank) ಸಾಲ ಮೇಲಿನ ಬಡ್ಡಿ ಮನ್ನಾ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ(Siddaramaiah) ಅವರು ಘೋಷಿಸಿದ್ದಾರೆ. ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲ ಅಧಿವೇಶನದ ಕೊನೆ ದಿನವಾದ ಇಂದು (ಡಿಸೆಂಬರ್ 15) ಈ ಘೋಷಣೆ ಮಾಡಿದ್ದು. ಮಧ್ಯಮಾವಧಿ ಮತ್ತು ದೀರ್ಘಾವಧಿ ಸಾಲಕ್ಕೆ ಸಂಬಂಧಿಸಿದಂತೆ ಅವಧಿಯೊಳಗೆ ಸಾಲ ಮರುಪಾವತಿ ಮಾಡಿದವರ ಬಡ್ಡಿ ಮನ್ನಾ ಆಗಲಿದೆ ಎಂದು ಮಾಹಿತಿ ನೀಡಿದರು. ಉತ್ತರ ಕರ್ನಾಟಕದ ಅಭಿವೃದ್ಧಿ ಕುರಿತ ಚರ್ಚೆಗೆ …

Read More »

ಖರ್ಗೆ ಜೊತೆ ದೇವೆಗೌಡರ ಸುದೀರ್ಘ ಮಾತುಕತೆ

ನವದೆಹಲಿ : ಲೋಕಸಭೆ ಚುನಾವಣೆಯಲ್ಲಿ(lokasabhe election) ಕಾಂಗ್ರೆಸ್ ಮಣಿಸಲು ರಾಜ್ಯದಲ್ಲಿ ಜೆಡಿಎಸ್‌(JDS) ಮತ್ತು ಬಿಜೆಪಿ(BJP) ಜೊತೆಯಾಗಿ ನಿಂತಿವೆ. ಸೀಟು ಹಂಚಿಕೆ ವಿಚಾರ ಇನ್ನೂ ಪಕ್ಕಾ ಆಗದಿದ್ದರೂ ರಾಜ್ಯ ನಾಯಕರು ಎಲ್ಲಾ ವಿಚಾರದಲ್ಲಿ ಸಮನ್ವಯತೆ ಕಾದುಕೊಂಡು ಒಟ್ಟಾಗಿ ಕೆಲಸ ಮಾಡ್ತಿದ್ದಾರೆ. ಆದರೆ ಈ ಮಧ್ಯೆ ಅಚ್ಚರಿ ಬೆಳವಣಿಗೆ ನಡೆದಿದೆ.     ಜೆಡಿಎಸ್‌ ವರಿಷ್ಠ ಮಾಜಿ ಪ್ರಧಾನಿ ದೇವೆಗೌಡ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್‌ ಖರ್ಗೆ ಭೇಟಿಯಾಗಿ ಸುದೀರ್ಘ ರಾಜಕೀಯ ಚರ್ಚೆ …

Read More »

ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ಪ್ರಕರಣ: ಸರ್ಕಾರದ ವಿರುದ್ಧ ಬಿಜೆಪಿ ಧರಣಿ

ಬೆಳಗಾವಿ: ಬೆಳಗಾವಿ (Belagavi) ತಾಲೂಕಿನ ವಂಟಮೂರಿ ಗ್ರಾಮದಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ಮಾಡಿರುವ ಅಮಾನವೀಯ ಘಟನೆಗೆ ಸಂಬಂಧಿಸಿದಂತೆ ಸದನಲ್ಲಿ ಚರ್ಚಿಸುವಂತೆ ಬಿಜೆಪಿ (BJP) ಹೈಕಮಾಂಡ್​ ನಾಯಕರು ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ (BY Vijayendra) ಅವರಿಗೆ ಸೂಚನೆ ನೀಡಿದ್ದಾರೆ. ಇದರ ಬೆನ್ನಲ್ಲೇ ಈ ಬಗ್ಗೆ ಪ್ರತಿಭಟನೆ ನಡೆಸಲು ಬಿಜೆಪಿ ಮುಂದಾಗಿದೆ. ಈ ಬಗ್ಗೆ ಬೆಳಗಾವಿಯಲ್ಲಿ (Belagavi) ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ಕಳೆದ ವಾರ ಬೆಳಗಾವಿ ಗ್ರಾಮಾಂತರದ ವಂಟಮೂರಿಯಲ್ಲಿ ದಲಿತ …

Read More »

ಕಲಾಪದಲ್ಲಿ ಮರಾಠಿ ಭಾಷೆಯಲ್ಲಿ ಮಾತನಾಡಿದ ಖಾನಾಪುರ ಶಾಸಕ ವಿಠಲ ಹಲಗೇಕರ್; ಲಕ್ಷ್ಮಣ್ ಸವದಿ ಆಕ್ಷೇಪ

ವಿಧಾನಸಭೆ, ಡಿ.15:ಬೆಳಗಾವಿ ಅಧಿವೇಶನದ(Belagavi Session) ಕೊನೆಯ ದಿನವಾದ ಇಂದು ಖಾನಾಪುರ ಕ್ಷೇತ್ರದ ಬಿಜೆಪಿ ಶಾಸಕ ವಿಠಲ ಹಲಗೇಕರ್ (Vitthal Halgekar) ಅವರು ಮರಾಠಿ ಭಾಷೆಯಲ್ಲಿ ಮಾತನಾಡಿದರು. ಇದಕ್ಕೆ ಕಾಂಗ್ರೆಸ್ ಶಾಸಕ ಲಕ್ಷ್ಮಣ ಸವದಿ (Laxman Savadi) ಆಕ್ಷೇಪ ವ್ಯಕ್ತಪಡಿಸಿದಾಗ ಇಬ್ಬರ ನಡುವೆ ಮಾತಿಗೆ ಮಾತು ಬೆಳೆಯಿತು. ವಿಧಾನಸಭೆ ಕಲಾಪದಲ್ಲಿ ಉತ್ತರ ಕರ್ನಾಟಕ ಸಮಸ್ಯೆ ಕುರಿತ ಚರ್ಚೆ ವೇಳೆ ಖಾನಾಪುರ ಶಾಸಕ ವಿಠಲ ಹಲಗೇಕರ್ ಅವರು ಮರಾಠಿಯಲ್ಲಿ ಮಾತನಾಡಿದರು. ಖಾನಾಪುರ ಕ್ಷೇತ್ರದ ಅಂಗನವಾಡಿಗೆ ಮರಾಠಿ ಟೀಚರ್ ನೇಮಕ ಮಾಡುವಂತೆ …

Read More »

ಗಾಂಧಿ ಭೇಟಿ ನೀಡಿದ ಸ್ಥಳಗಳ ಅಭಿವೃದ್ಧಿಗಾಗಿ ಶಾಸಕ ಅಭಯ ಪಾಟೀಲ್​ ಮಂಡಿಸಿದ ಖಾಸಗಿ ಬಿಲ್ ಅಂಗೀಕಾರ

ಬೆಳಗಾವಿ/ ಬೆಂಗಳೂರು: ಮಹಾತ್ಮಗಾಂಧೀಜಿಯವರು ಭೇಟಿ ನೀಡಿದ ಸ್ಥಳಗಳನ್ನು ಸ್ಮಾರಕವಾಗಿ ರೂಪಿಸಲು ಕ್ರಮವಹಿಸಬೇಕು ಎಂಬ ಕೈ ಶಾಸಕ ಅಭಯ ಪಾಟೀಲ್ ಮಂಡಿಸಿದ ಖಾಸಗಿ ಮಸೂದೆ ವಿಧಾನಸಭೆಯಲ್ಲಿ ಅಂಗೀಕೃತಗೊಂಡಿದೆ.   ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರು ಬೆಳಗಾವಿಗೆ ಭೇಟಿ ನೀಡಿದ ಸವಿ ನೆನಪಿಗಾಗಿ ರಾಜ್ಯ ಸರ್ಕಾರ ಶತಮಾನೋತ್ಸವ ಸಂಭ್ರಮ ಆಚರಿಸಲು ವಿಶೇಷ ಕಾರ್ಯಕ್ರಮಗಳನ್ನು ರೂಪಿಸಿ ಅನುದಾನ ಬಿಡುಗಡೆ ಮಾಡಬೇಕು ಮತ್ತು ಮಹಾತ್ಮ ಗಾಂಧೀಜಿಯವರು ಭೇಟಿ ನೀಡಿದ ಸ್ಥಳಗಳನ್ನು ಅಭಿವೃದ್ಧಿಪಡಿಸಲು ಮತ್ತು ಭಾಗವಹಿಸಿದ ಸ್ಥಳವನ್ನು ಸ್ಮಾರಕವಾಗಿ ರೂಪಿಸಲು …

Read More »

ಬೆಳಗಾವಿ ಸುವರ್ಣ ವಿಧಾನಸೌಧವನ್ನು ಪ್ರವಾಸಿ ತಾಣವನ್ನಾಗಿ ಮಾಡಲು ಸರ್ಕಾರ ಚಿಂತನೆ

ಬೆಳಗಾವಿ : ಬೆಳಗಾವಿ ಸುವರ್ಣ ವಿಧಾನಸೌಧವನ್ನು ಪ್ರವಾಸಿ ತಾಣವನ್ನಾಗಿ ಮಾಡಲು ಸರ್ಕಾರ ಚಿಂತನೆ ನಡೆಸಿದೆ. ಈ ಬಗ್ಗೆ ಡಿಸಿಎಂ ಡಿ ಕೆ ಶಿವಕುಮಾರ್‌ ಮಾಹಿತಿ ನೀಡಿದ್ದಾರೆ. ರಾಜ್ಯಕ್ಕೆ ಕರ್ನಾಟಕ ಎಂದು ಮರು ನಾಮಕರಣಗೊಂಡು 50 ವರ್ಷ ತುಂಬಿದ ಹಿನ್ನೆಲೆ ಸುವರ್ಣ ಸೌಧ ಆವರಣದಲ್ಲಿ ನಡೆದ ಸುವರ್ಣ ಸಂಭ್ರಮ ಕಾರ್ಯಕ್ರಮದಲ್ಲಿ ಮಾತನಾಡಿದ ಡಿಕೆಶಿ, ವಾರಾಂತ್ಯದಲ್ಲಿ ಸುವರ್ಣ ಸೌಧವನ್ನು ಸಾರ್ವಜನಿಕರಿಗೆ ಮುಕ್ತವಾಗಿ ತೆರೆದು ಪ್ರವಾಸಿ ತಾಣವನ್ನಾಗಿ ಮಾಡಲು ಸರ್ಕಾರ ನಿರ್ಧರಿಸಿದೆ ಎಂದು ಹೇಳಿದ್ದಾರೆ. …

Read More »

ರಾಜ್ಯಸಭೆಯಿಂದ ಟಿಎಂಸಿ ಸಂಸದ ಅಮಾನತು

ನವದೆಹಲಿ: ರಾಜ್ಯಸಭೆಯಲ್ಲಿ ಅಶಿಸ್ತಿನ ನಡುವಳಿಕೆ ತೋರಿದ ಟಿಎಂಸಿ ಸಂಸದ ಡೆರೆಕ್ ಒಬ್ರಿಯಾನ್ ಅವರನ್ನು ಗುರುವಾರ ಅಧಿವೇಶನದ ಇನ್ನುಳಿದ ಅವಧಿ ವರೆಗೆ ಅಮಾನತು ಮಾಡಲಾಯಿತು. ಗುರುವಾರ ಕಲಾಪ ಶುರುವಾಗುತ್ತಿದ್ದಂತೆ ನಿನ್ನೆ ನಡೆದ ಸಂಸತ್‌ ಭದ್ರತಾ ಲೋಪದ ಕುರಿತು ಚರ್ಚಿಸುವಂತೆ ಪಟ್ಟು ಹಿಡಿದ ಡೆರೆಕ್‌ ಒಬ್ರಿಯಾನ್‌ ದುರ್ವರ್ತನೆ ತೋರುವ ಮೂಲಕ ಸದನಕ್ಕೆ ಅಗೌರವ ತೋರಿದರು. ಈ ಹಿನ್ನೆಲೆ ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧನಕರ್‌, ಒಬ್ರಿಯಾನ್‌ಗೆ ಸದನದಿಂದ ಹೊರಗೆ ಹೋಗುವಂತೆ ಸೂಚಿಸಿದರು. ಡೆರೆಕ್ ಒ’ಬ್ರೇನ್ …

Read More »