Breaking News
Home / ರಾಜಕೀಯ (page 191)

ರಾಜಕೀಯ

ಕೇಂದ್ರದ ಗೃಹ ಸಚಿವ ಹಾಗೂ ಪ್ರಧಾನಿ ಮೋದಿ ಪಾರ್ಲಿಮೆಂಟ್​ನಲ್ಲಿ ಆಗಿರುವ ಭದ್ರತಾ ಲೋಪದ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡದೇ ಇರುವುದು ಆಶ್ಚರ್ಯ

ಬೆಳಗಾವಿ: ಸಂಸತ್ತಿನ ಇತಿಹಾಸದಲ್ಲಿ ಆಗದೇ ಇರುವ ಭದ್ರತಾ ಲೋಪವನ್ನು ಇಡೀ ವಿಶ್ವವೇ ನೋಡಿದೆ. ಈ ಬಗ್ಗೆ ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಷಾ ಹೇಳಿಕೆ ನೀಡದೇ ಇರುವುದು ಆಶ್ಚರ್ಯವಾಗಿದೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್​ ಕಿಡಿಕಾರಿದ್ದಾರೆ. ಇಂದು ಬೆಳಗಾವಿಯಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, “ಹೊಸದಾಗಿ ಸಂಸತ್ ನಿರ್ಮಿಸಿದ್ದೇವೆ. ವ್ಯವಸ್ಥಿತ ಹಾಗೂ ವೈಜ್ಞಾನಿಕವಾಗಿ ಮಾಡಿದ್ದೇವೆ ಎಂದು ಹೇಳುವಾಗ ಇಬ್ಬರು ಯುವಕರು ಗ್ಯಾಲರಿಗೆ ಬಂದು, ಅಲ್ಲಿಂದ ಜಿಗಿದು ನೇರವಾಗಿ ಸದನದ …

Read More »

ನಾನು ಸಿಎಲ್‌ಪಿ ಸಭೆಗೆ ಹೋಗಿಲ್ಲ, ನಾನು ಡಿಸಿಎಂ ಕರೆದ ಭೋಜನಕೂಟಕ್ಕೆ ಹೋಗಿದ್ದೆ

ಬೆಳಗಾವಿ : ನಾನು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಗೆ ಹೋಗಿಲ್ಲ. ನಾನು ಡಿಸಿಎಂ ಡಿಕೆ ಶಿವಕುಮಾರ್​ ಕರೆದ ಭೋಜನಕೂಟಕ್ಕೆ ಮಾತ್ರ ಹೋಗಿದ್ದು ಎಂದು ಬಿಜೆಪಿ ಶಾಸಕ ಎಸ್.ಟಿ. ಸೋಮಶೇಖರ್ ತಿಳಿಸಿದರು. ಸುವರ್ಣಸೌಧದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಗೆ ಹಾಜರಾದ ವಿಚಾರವಾಗಿ ಪ್ರತಿಕ್ರಿಯಿಸುತ್ತಾ, ನಾನು ನಿನ್ನೆ 8 ಗಂಟೆಯಿಂದ 10 ಗಂಟೆ ತನಕ ವಿಜಯೇಂದ್ರ ಜೊತೆಗೆ ಇದ್ದೆ. ನಮ್ಮ ಪಕ್ಷದ ಅಧ್ಯಕ್ಷ ವಿಜಯೇಂದ್ರ ಅವರು ಭೋಜನ ಕೂಟ ಇಟ್ಟುಕೊಂಡಿದ್ದರು. ಅವರ …

Read More »

ಗೋಕಾಕ ಜಿಲ್ಲೆಯಾದರೆ ಶಾಂತಿ ಇಲ್ಲವಾದರೆ ಕ್ರಾಂತಿ ,ಗೋಕಾಕ ಜಿಲ್ಲೆಗಾಗಿ ಬೃಹತ್ ಹೋರಾಟ

ಗೋಕಾಕ ಜಿಲ್ಲೆಯಾದರೆ ಶಾಂತಿ ಇಲ್ಲವಾದರೆ ಕ್ರಾಂತಿ ,ಗೋಕಾಕ ಜಿಲ್ಲೆಗಾಗಿ ಬೃಹತ್ ಹೋರಾಟ.     ಗೋಕಾಕ: ಆಡಳಿತ ಹಾಗೂ ಅಭಿವೃದ್ದಿ ದೃಷ್ಠಿಯಿಂದ ಬೆಳಗಾವಿ ಜಿಲ್ಲೆಯನ್ನು ವಿಭಜಿಸಿ ಗೋಕಾಕನ್ನು ಜಿಲ್ಲಾ ಕೇಂದ್ರವನ್ನಾಗಿ ಪರಿವತರ್ಿಸುವಂತೆ ಆಗ್ರಹಿಸಿ ನಗರದಲ್ಲಿಂದು ನಿಯೋಜಿತ ಗೋಕಾಕ ಜಿಲ್ಲಾ ರಚನಾ ಹೋರಾಟ ಚಾಲನಾ ಸಮಿತಿಯ ಅಧ್ಯಕ್ಷ ಮುರುಘರಾಜೇಂದ್ರ ಮಹಾಸ್ವಾಮಿಗಳ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆಯು ಜರುಗಿತು. ಬುಧವಾರದಂದು ನಗರದ ಸಂಗೋಳ್ಳಿ ರಾಯಣ್ಣ ವೃತ್ತದಿಂದ ಆರಂಭಗೊಂಡ ಪ್ರತಿಭಟನೆಯು ಅಪ್ಸರಾ ಕೂಟ, ತಂಬಾಕು ಕೂಟ, …

Read More »

ಆಸ್ತಿ ವಿವಾದದ ಕಲಹಕ್ಕೆ ವಿಕಲಚೇತನನ ಮನೆ ಬಲಿ

ಬೆಳಗಾವಿ: ಜಿಲ್ಲೆಯಲ್ಲಿ ಮತ್ತೊಂದು ಅಮಾನವೀಯ ಘಟನೆ ನಡೆದಿದೆ. 30 ವರ್ಷಗಳಿಂದ ಕುಟುಂಬದೊಂದಿಗೆ ಶೆಡ್​ನಲ್ಲಿ ವಾಸವಿದ್ದ ವಿಕಲಚೇತನನ ಮನೆಯನ್ನು ದುಷ್ಕರ್ಮಿಗಳು ಧ್ವಂಸಗೊಳಿಸಿ ಅಟ್ಟಹಾಸ ಮೆರೆದಿರುವ ಆರೋಪ ಗೋಕಾಕ ತಾಲೂಕಿನ ಉದಗಟ್ಟಿ ಗ್ರಾಮದಿಂದ ತಡವಾಗಿ ಬೆಳಕಿಗೆ ಬಂದಿದೆ.   ಹಾಡಹಗಲೇ ಬಡಿಗೆ ಕೋಲುಗಳಿಂದ ಮನೆ ಒಡೆದು ಧ್ವಂಸಗೊಳಿಸಲಾಗಿದೆ. ಉದಗಟ್ಟಿ ಗ್ರಾಮದ ಸಿದ್ದಪ್ಪ ಅಪ್ಪಯ್ಯ ತುರಬಿ (44) ವಾಸವಿದ್ದ ಪತ್ರಾಸ್ ಶೆಡ್ ಇದಾಗಿದೆ. ಆಸ್ತಿ ವಿವಾದದ ಕಲಹಕ್ಕೆ ವಿಕಲಚೇತನನ ಮನೆ ಬಲಿಯಾಗಿದೆ ಎಂದು ಸಂತ್ರಸ್ತ ಸಿದ್ದಪ್ಪ …

Read More »

ಏಕವಚನದಲ್ಲಿ ಬೈದಾಡಿಕೊಂಡ ಜನಾರ್ದನ್​ ರೆಡ್ಡಿ, ಭರತ್‌ ರೆಡ್ಡಿ

ಬೆಳಗಾವಿ: ವಿಧಾನಸಭೆಯಲ್ಲಿ ಮಂಗಳವಾರ ಬಳ್ಳಾರಿ ರಾಜಕೀಯ ಗುದ್ದಾಟ ಜೋರಾಗಿತ್ತು. ಸದನ ಜನಾರ್ದನ ರೆಡ್ಡಿ ಹಾಗೂ ಬಳ್ಳಾರಿ ಜಿಲ್ಲೆಯ ಕಾಂಗ್ರೆಸ್‌ ಶಾಸಕರ ವಾಕ್ಸಮರಕ್ಕೆ ಸಾಕ್ಷಿಯಾಯಿತು. ಉತ್ತರ ಕರ್ನಾಟಕ ಚರ್ಚೆಯ ವೇಳೆ ಮಾತನಾಡುವಾಗ ಕಾಂಗ್ರೆಸ್​ ಶಾಸಕ ನಾ ರಾ ಭರತ್‌ರೆಡ್ಡಿ, ಬ್ರಾಹ್ಮಿಣಿ ಸ್ಟೀಲ್ಸ್​ ಸಂಸ್ಥೆ, ಬಳ್ಳಾರಿ ಜಿಲ್ಲೆಯಲ್ಲಿ 10 ಸಾವಿರ ಎಕರೆ ಜಮೀನನ್ನು ಬಲವಂತವಾಗಿ ರೈತರಿಂದ ವಶಪಡಿಸಿಕೊಂಡಿತ್ತು. ರೈತರ ಮೇಲೆ ಗೂಂಡಾಗಿರಿ ಮಾಡಿ ಭೂಮಿಯನ್ನ ಕಿತ್ತುಕೊಂಡಿದ್ದ ವ್ಯಕ್ತಿಗಳು ಈಗ ನಮ್ಮಿಂದಲೇ ಬಳ್ಳಾರಿ ಅಭಿವೃದ್ಧಿಯಾಗಿದೆ ಎನ್ನುತ್ತಿದ್ದಾರೆ. …

Read More »

34,115 ಕೋಟಿ ರೂ ಮೊತ್ತದ ಬಂಡವಾಳ ಹೂಡಿಕೆ 14 ಉದ್ಯಮಗಳ ಸ್ಥಾಪನೆಗೆ ಅನುಮೋದನೆ :ಎಂ.ಬಿ.ಪಾಟೀಲ

ಬೆಳಗಾವಿ:ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ನೀಡುವ ಸಮಿತಿಯ ಸಭೆಯಲ್ಲಿ, ಒಟ್ಟು 34,115 ಕೋಟಿ ರೂ ಮೊತ್ತದ ಬಂಡವಾಳ ಹೂಡಿಕೆ 14 ಉದ್ಯಮಗಳ ಸ್ಥಾಪನೆಗೆ ಅನುಮೋದನೆ ನೀಡಲಾಯಿತು.   ಸಿಎಂ ಅಧ್ಯಕ್ಷತೆಯಲ್ಲಿ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಮಂಗಳವಾರ ನಡೆದ ಉನ್ನತ ಮಟ್ಟದ ಒಪ್ಪಿಗೆ ನೀಡುವ ಸಮಿತಿಯ ಸಭೆಯಲ್ಲಿ, ಹೆಚ್ಚುವರಿ ರೂ 13,911 ಕೋಟಿ ಮೊತ್ತದ ಬಂಡವಾಳ ಹೂಡಿಕೆ ಮಾಡುವ ಫಾಕ್ಸ್‌ಕಾನ್‌ ಕಂಪನಿ ಪ್ರಸ್ತಾವನೆಗೆ ಅನುಮೋದನೆ ನೀಡಲಾಗಿದೆ …

Read More »

ಬೆಳಗಾವಿ ಸುವರ್ಣಸೌಧದಲ್ಲಿ ಕ್ಯಾಬಿನೆಟ್ ಸಭೆ ನಡೆಸುವ ಬೇಡಿಕೆಯ ಬಗ್ಗೆ ಪರಿಶೀಲಿಸಲಾಗುವುದು ಎಂದ ಸಿಎಂ

ಬೆಳಗಾವಿ : ಸುವರ್ಣಸೌಧದಲ್ಲಿ ಕ್ಯಾಬಿನೆಟ್ ಸಭೆ ನಡೆಸುವ ಬೇಡಿಕೆಯ ಬಗ್ಗೆ ಪರಿಶೀಲನೆ ನಡೆಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. ಇಲ್ಲಿ ಕ್ಯಾಬಿನೆಟ್ ಸಭೆಗಳನ್ನು ನಡೆಸಬೇಕು ಎನ್ನುವುದೂ ಸೇರಿ ಬಿ.ಎಲ್.ಶಂಕರ್ ಅವರು ನೀಡಿದ ಸಲಹೆಗಳನ್ನು ಗಂಭೀರವಾಗಿ ಪರಿಗಣಿಸಿದ್ದು, ಆ ಬಗ್ಗೆ ಪರಿಶೀಲಿಸಲಾಗುವುದು ಎಂದು ಭರವಸೆ ನೀಡಿದರು. ಸುವರ್ಣ ಸೌಧದ ವೈಭವದ ಹೊರ ಆವರಣದಲ್ಲಿ ನಡೆದ “ಕರ್ನಾಟಕ” ನಾಮಕರಣ ಸುವರ್ಣ ಮಹೋತ್ಸವದಲ್ಲಿ ಮಾತನಾಡಿದ ಸಿಎಂ, ತ್ಯಾಗ ಮತ್ತು ಬಲಿದಾನದ ಮೂಲಕ ನಾಡು ಏಕೀಕರಣಗೊಂಡು ಕನ್ನಡ …

Read More »

ಬರ, ಉತ್ತರ ಕರ್ನಾಟಕ ಅಭಿವೃದ್ಧಿ ಕುರಿತು ಚರ್ಚಿಸಬೇಕು, ಧರಣಿ ಕೈಬಿಡಿ: ಪ್ರತಿಪಕ್ಷಗಳಿಗೆ ಪರಮೇಶ್ವರ್ ಮನವಿ

ಬೆಂಗಳೂರು / ಬೆಳಗಾವಿ:ಸಚಿವ ಜಮೀರ್ ಅಹ್ಮದ್ ಖಾನ್ ಅವರ ಹೇಳಿಕೆಯನ್ನು ವಿರೋಧಿಸಿ ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ ಸದಸ್ಯರು ನಿನ್ನೆಯಿಂದ ನಡೆಸುತ್ತಿದ್ದ ಧರಣಿ ಹಿಂಪಡೆದರು.   ವಿಧಾನಸಭೆಯ ಕಲಾಪದ ಆರಂಭದಲ್ಲೇ ಪ್ರತಿಪಕ್ಷಗಳ ಶಾಸಕರು ಧರಣಿಯನ್ನು ಮುಂದುವರೆಸಿದರು. ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ಮಾತನಾಡಿ, ಇಡೀ ದೇಶವೇ ನಮ್ಮನ್ನು ನೋಡುತ್ತಿದೆ. ಇಲ್ಲಿ ಗಂಭೀರ ಚರ್ಚೆಗಳು ನಡೆಯಬೇಕು. ನಿನ್ನೆಯಿಂದಲೂ ಧರಣಿ ನಡೆಸುತ್ತಿದ್ದೀರಿ. ಇದರಿಂದಾಗಿ ಪ್ರಶ್ನೋತ್ತರ ಕಲಾಪ, ಶೂನ್ಯವೇಳೆ ಗಮನ ಸೆಳೆಯುವ …

Read More »

ಬೆಂಗಳೂರಲ್ಲಿ ಹುಕ್ಕಾ ಬಾರ್‌ ಹಾವಳಿ : ಕ್ರಮಕ್ಕೆ ಬಿಜೆಪಿಗರ ಆಗ್ರಹ

    ಬೆಳಗಾವಿ : ಬೆಂಗಳೂರಿನಲ್ಲಿ ತಲೆಯೆತ್ತುತ್ತಿರುವ ಹುಕ್ಕಾಬಾರ್‌ (Hukka bar) ಗಳ ಬಗ್ಗೆ ಮಂಗಳವಾರ ವಿಧಾನಸಭೆಯಲ್ಲಿ (Belagavi winter session) ಚರ್ಚೆಯಾಯಿತು. ಬಿಜೆಪಿ (BJP) ಶಾಸಕರಾದ ಸಿ.ಕೆ.ರಾಮಮೂರ್ತಿ (C K Ramamurthy) ಮತ್ತು ಎಸ್‌. ಸುರೇಶ್‌ ಕುಮಾರ್‌ (S Sureshkumar) ಈ ಕುರಿತು ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಗೃಹಸಚಿವ ಪರಮೇಶ್ವರ್‌ (G Parameshwar) ಅವರನ್ನು ಆಗ್ರಹಿಸಿದರು.   ಈ ಕುರಿತು ಮಾತನಾಡಿದ ಸಿ.ಕೆ. ರಾಮಮೂರ್ತಿ ದೆಹಲಿ ಹೊರತುಪಡಿಸಿದರೆ …

Read More »

ಅಧಿವೇಶನದಲ್ಲಿ ಸ್ವಪಕ್ಷವನ್ನೇ ಇಕ್ಕಟ್ಟಿಗೆ ಸಿಲುಕಿಸಿದ ಶಾಸಕ ಯತ್ನಾಳ್

    ಬೆಳಗಾವಿ : ಬಿಜೆಪಿ ರಾಜ್ಯಾಧ್ಯಕ್ಷ, ವಿಪಕ್ಷ ನಾಯ್ಕರ ಆಯ್ಕೆ ವಿಚಾರ ಆರಂಭವಾದಾಗಿನಿಂದ ಈ ವರೆಗೆ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ (Basanagowda patil yatnal)ಸ್ವಪಕ್ಷದವರನ್ನು ಟೀಕಿಸುವ ಒಂದು ಅವಕಾಶವನ್ನೂ ಬಿಡುತ್ತಿಲ್ಲ. ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಅಧಿವೇಶನದಲ್ಲೂ ಉತ್ತರ ಕರ್ನಾಟಕದ ವಿಚಾರ ಇಟ್ಟುಕೊಂಡು ಬಿಜೆಪಿ ನಾಯಕರಿಗೆ ಚಾಟಿ ಬೀಸಿದ್ದಾರೆ. ಕುಮಾರಸ್ವಾಮಿ ಸರ್ಕಾರ ಇದ್ದಾಗ 105 ಕೋಟಿ ರೂಪಾಯಿ ನೀಡಿದ್ದರು ಆದರೆ ಆ ಅನುದಾನವನ್ನು ಬಿಜೆಪಿ …

Read More »